Chikkalluru Siddappaji Temple : ಚಿಕ್ಕಲ್ಲೂರಲ್ಲಿ ಪೂಜೆ ವಿಚಾರಕ್ಕೆ ತ್ರಿಶೂಲದಲ್ಲಿ ಹೊಡೆದಾಟ; ಮೂವರು ಅರ್ಚಕರಿಗೆ ಗಾಯ - Vistara News

ಧಾರ್ಮಿಕ

Chikkalluru Siddappaji Temple : ಚಿಕ್ಕಲ್ಲೂರಲ್ಲಿ ಪೂಜೆ ವಿಚಾರಕ್ಕೆ ತ್ರಿಶೂಲದಲ್ಲಿ ಹೊಡೆದಾಟ; ಮೂವರು ಅರ್ಚಕರಿಗೆ ಗಾಯ

Chikkalluru Siddappaji Temple: ಚಿಕ್ಕಲ್ಲೂರಿನಲ್ಲಿ ಸಿದ್ದಪ್ಪಾಜಿ ದೇವರ ಗುಡ್ಡ ದೀಕ್ಷೆ ನೀಡುವ ವಿಚಾರಕ್ಕೆ ಅರ್ಚಕರ ಗುಂಪಿನ ನಡುವೆ ಗಲಾಟೆ ನಡೆದಿದೆ. ಗಲಾಟೆಯಲ್ಲಿ ದೇವರ ತ್ರಿಶೂಲ, ಬೆತ್ತ ಹಿಡಿದು ಹೊಡೆದಾಡಿಕೊಂಡಿದ್ದಾರೆ.

VISTARANEWS.COM


on

Chikkalluru Siddappaji temple
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಪ್ರಸಿದ್ಧ ಯಾತ್ರಸ್ಥಳ ಕೊಳ್ಳೇಗಾಲ ತಾಲೂಕಿನ ಚಿಕ್ಕಲ್ಲೂರು ಸಿದ್ದಪ್ಪಾಜಿ ದೇವಸ್ಥಾನದಲ್ಲಿ (Chikkalluru Siddappaji Temple) ಪೂಜೆ ವಿಚಾರಕ್ಕೆ ತ್ರಿಶೂಲಗಳಲ್ಲಿ ಹೊಡೆದಾಡಿಕೊಂಡಿದ್ದಾರೆ. ಘಟನೆಯಲ್ಲಿ ಮೂವರು ಅರ್ಚಕರಿಗೆ ಗಂಭೀರ ಗಾಯವಾಗಿದೆ. ಚಿಕ್ಕಲೂರು ದೇವಸ್ಥಾನದ ಅರ್ಚಕ ಶಂಕರಪ್ಪ (65), ಶಿವಕುಮಾರಸ್ವಾಮಿ (40) ಹಾಗೂ ನಂಜುಂಡಸ್ವಾಮಿ (32) ಗಂಭೀರ ಗಾಯಗೊಂಡವರು.

ಪೂಜೆ ಹಾಗೂ ದೀಕ್ಷೆ ಕೊಡುವ ವಿಚಾರಕ್ಕೆ ಅರ್ಚಕರ ಗುಂಪಿನಲ್ಲಿ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಗಲಾಟೆ ವಿಕೋಪಕ್ಕೆ ಹೋಗಿ, ಸಿದ್ದಪ್ಪಾಜಿ ದೇವಸ್ಥಾನದ ಬೆತ್ತ ಮತ್ತು ತ್ರಿಶೂಲಗಳನ್ನು ಹಿಡಿದುಕೊಂಡು ಪರಸ್ಪರ ಗಲಾಟೆ ಮಾಡಿಕೊಂಡಿದ್ದಾರೆ.

ಸದ್ಯ ಕೊಳ್ಳೆಗಾಲದ ಸರ್ಕಾರಿ ಆಸ್ಪತ್ರೆಯಲ್ಲಿ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಸಿದ್ದಪ್ಪಾಜಿ ದೇವರ ಗುಡ್ಡ ದೀಕ್ಷೆ ನೀಡುವ ವಿಚಾರಕ್ಕೆ ಅರ್ಚಕರ ಗುಂಪಿನ ನಡುವೆ ಗಲಾಟೆ ನಡೆದಿದೆ. ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Physical Abuse : ವೈದ್ಯಾಧಿಕಾರಿ ಅಶ್ಲೀಲ ವರ್ತನೆ; ರಾತ್ರಿಯಾದರೆ ವಿಡಿಯೊ ಕಾಲ್‌ನಲ್ಲಿ ವೈದ್ಯೆಗೆ ಟಾರ್ಚರ್‌‌

ದೇವಸ್ಥಾನಕ್ಕೆ ನುಗ್ಗಿ ಆಂಜನೇಯ ಮೂರ್ತಿಯನ್ನು ವಿರೂಪಗೊಳಿಸಿದ ದುಷ್ಕರ್ಮಿಗಳು

ವಿಜಯನಗರ: ಆಂಜನೇಯ ಮೂರ್ತಿಯನ್ನು ವಿರೂಪಗೊಳಿಸಿ ಕಿಡಿಗೇಡಿಗಳು ವಿಕೃತಿ ಮೆರೆದಿದ್ದಾರೆ. ದುಷ್ಕರ್ಮಿಗಳ ಕೃತ್ಯಕ್ಕೆ ಆಂಜನೇಯ ಪ್ರತಿಮೆ ತುಂಡಾಗಿದೆ. ವಿಜಯನಗರ (Vijayanagara News) ಜಿಲ್ಲೆಯ ಹೊಸಪೇಟೆ ತಾಲೂಕಿನ ಹೊಸ ಹಂಪಿ ಗ್ರಾಮದಲ್ಲಿ ಘಟನೆ ನಡೆದಿದೆ.

ತಡರಾತ್ರಿ ಕಾರ್ಯಸಿದ್ಧಿ ಶ್ರೀ ಆಂಜನೇಯ ಸ್ವಾಮಿ ದೇಗುಲದ ಬೀಗ ಮುರಿದು, ಒಳ ನುಗ್ಗಿರುವ ದುಷ್ಟರು ಮೂರ್ತಿಯನ್ನು ಒಡೆದು ಹಾಕಿದ್ದಾರೆ. ಮುಂಜಾನೆ ಅರ್ಚಕರು ದೇವಸ್ಥಾನಕ್ಕೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಬೆರಳಚ್ಚು ವಿಭಾಗ ತಜ್ಞರು, ಶ್ವಾನದಳದಿಂದ ಪರಿಶೀಲನೆ ನಡೆಸಲಾಗುತ್ತಿದೆ.

ಹೊಸಪೇಟೆ ಡಿವೈಎಸ್‌ಪಿ ಶರಣಬಸವೇಶ್ವರ, ಹಂಪಿ ಪ್ರವಾಸಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹಲವು ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಪ್ರಕರಣ ಸಂಬಂಧ ಹಂಪಿ ಪ್ರವಾಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ದೇವರ ಹರಕೆ ಕುರಿಯನ್ನೇ ಕದ್ಯೊಯ್ದ ಕಳ್ಳರು

ದಾವಣಗೆರೆ ದೇವರ ಹರಕೆಗಾಗಿ ತಂದಿದ್ದ ಕುರಿಯನ್ನೇ ಕಳ್ಳರು (Theft Case) ಹೊತ್ತೊಯ್ದಿದ್ದಾರೆ. ದಾವಣಗೆರೆ (Davanagere news) ತಾಲೂಕಿನ ಮಾಯಾಕೊಂಡದಲ್ಲಿ ಘಟನೆ ನಡೆದಿದೆ. ಬೈಕ್‌ನಲ್ಲಿ ಬಂದ‌ ಕಿರಾತಕರು ರಾತ್ರೋ ರಾತ್ರಿ ಕುರಿಯನ್ನು ಕದ್ದಿದ್ದಾರೆ.

ಸುಮಾರು 8 ಮಂದಿ ಖದೀಮರ ಕೈಚಳಕ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮಾಯಾಕೊಂಡದ ನಿವಾಸಿ ಪ್ರಭು ಎಂಬುವರಿಗೆ ಸೇರಿದ ಕುರಿಯನ್ನು ಬೆಳಗಿನ‌ ಜಾವ 3ಗಂಟೆ ಸುಮಾರಿಗೆ ಬೈಕ್‌ನಲ್ಲಿ ಬಂದು ಎಗರಿಸಿದ್ದಾರೆ. ಸದ್ಯ ಪ್ರಭು ಅವರು ಮಾಯಕೊಂಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಿಸಿಟಿವಿ ಆಧಾರದ ಮೇಲೆ ಖದೀಮರನ್ನು ಹಿಡಿಲು ಮುಂದಾಗಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

IIT Bombay: ಹಿಂದೂ ದೇವರ ಅವಹೇಳನಕಾರಿ ನಾಟಕ; ಐಐಟಿ ವಿದ್ಯಾರ್ಥಿಗಳಿಗೆ ದಂಡ

IIT Bombay: ಧರ್ಮ ಹಾಗೂ ದೇವರುಗಳ ವಿಷಯ ತುಂಬಾ ಸೂಕ್ಷ್ಮವಾದದ್ದು. ಇದನನು ಕೆದಕಿದರೆ ದೇಶದಲ್ಲಿನ ಶಾಂತಿ ಕದಡಿದ ಹಾಗೆ.ಅದರಲ್ಲೂ ದೇಶದ ಪ್ರಜೆಗಳಾದ ವಿದ್ಯಾರ್ಥಿಗಳು ಈ ವಿಷಯದ ಕುರಿತು ಹೆಚ್ಚಿನ ನಿಗಾವಹಿಸಬೇಕು. ಐಐಟಿ ಬಾಂಬೆಯ ಬಯಲು ರಂಗಮಂದಿರದಲ್ಲಿ ನಡೆದ ಇನ್ ಸ್ಟಿಟ್ಯೂಟ್ ನ ಪರ್ಫಾರ್ಮಿಂಗ್ ಆರ್ಟ್ಸ್ ಫೆಸ್ಟಿವಲ್ ನಲ್ಲಿ “ರಾಹೋವನ್” ಶೀರ್ಷಿಕೆಯ ನಾಟಕವಾಡಿದ ವಿದ್ಯಾರ್ಥಿಗಳು ಇದರಲ್ಲಿ ಹಿಂದೂ ಧರ್ಮಕ್ಕೆ ಅಗೌರವ ತೋರಿದಲ್ಲದೇ ರಾಮ ಮತ್ತು ಸೀತೆಯನ್ನು ಅವಹೇಳನ ಮಾಡಿದ್ದರು. ಇದಕ್ಕೆ ತೀವ್ರವಾದ ವಿರೋಧ ವ್ಯಕ್ತಗೊಂಡ ಹಿನ್ನೆಲೆಯಲ್ಲಿ ಐಐಟಿ ವಿದ್ಯಾರ್ಥಿಗಳಿಗೆ ದಂಡ ವಿಧಿಸಿದೆ.

VISTARANEWS.COM


on

IIT Bombay
Koo

ಮುಂಬೈ : ರಾಮ ಮತ್ತು ಸೀತೆ ಹಿಂದೂ(Hindu)ಗಳ ಆರಾಧ್ಯ ದೇವರು. ಹಾಗಾಗಿ ಈ ದೇವರ ಹೆಸರಿಗೆ ಅವಮಾನ ಮಾಡಿದರೆ ಯಾರೂ ಸುಮ್ಮನೆ ಇರುವುದಿಲ್ಲ. ಆದರೆ ಇದೀಗ ಐಐಟಿ ಬಾಂಬೆಯಲ್ಲಿ (IIT Bombay) ಹಿಂದೂ ದೇವರಿಗೆ ಅವಹೇಳನ ಮಾಡುವಂತಹ ನಾಟಕವಾಡಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ (Student) ದಂಡ ವಿಧಿಸಲಾಗಿದೆ.

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಐಐಟಿ) ಬಾಂಬೆಯ ಬಯಲು ರಂಗಮಂದಿರದಲ್ಲಿ ಈ ವರ್ಷ ಮಾರ್ಚ್ 31ರಂದು ನಡೆದ ಇನ್‌ಸ್ಟಿಟ್ಯೂಟ್‌ನ ಪರ್ಫಾರ್ಮಿಂಗ್ ಆರ್ಟ್ಸ್ ಫೆಸ್ಟಿವಲ್‌ನಲ್ಲಿ “ರಾಹೋವನ್” ಶೀರ್ಷಿಕೆಯ ನಾಟಕದಲ್ಲಿ ವಿದ್ಯಾರ್ಥಿಗಳು ರಾಮಾಯಣದ ಕಥಾ ಹಂದರವನ್ನು ಹೊಂದಿರುವ ನಾಟಕವಾಡಿದ್ದರು. ಇದರಲ್ಲಿ ಹಿಂದೂ ಧರ್ಮಕ್ಕೆ ಅಗೌರವ ತೋರಿದಲ್ಲದೇ ರಾಮ ಮತ್ತು ಸೀತೆಯನ್ನು ಅವಹೇಳನ ಮಾಡಿದ್ದರು.

ಈ ನಾಟಕವನ್ನು ವಿರೋಧಿಸಿ ಕಾಲೇಜಿನ ಒಂದು ವಿಭಾಗ ಪ್ರತಿಭಟನೆ ಮಾಡಿತ್ತು. ಸಾಮಾಜಿಕ ಮಾಧ್ಯಮ ಪ್ಲಾಟ್ ಫಾರ್ಮ್ ಎಕ್ಸ್‌ನಲ್ಲಿನ ‘ಐಐಟಿ ಬಿ ಫಾರ್ ಭಾರತ್’ ಹ್ಯಾಂಡಲ್‌ನಲ್ಲಿ ಈ ನಾಟಕವನ್ನು ಖಂಡಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಐಐಟಿ ವಿದ್ಯಾರ್ಥಿಯೊಬ್ಬನಿಗೆ 1.2 ಲಕ್ಷ ರೂ. ದಂಡ ವಿಧಿಸಿದೆ. ಇತರ ಏಳು ವಿದ್ಯಾರ್ಥಿಗಳಿಗೆ ತಲಾ 40,000 ರೂ. ದಂಡ ವಿಧಿಸಲಾಗಿದೆ.

ಇದನ್ನೂ ಓದಿ: Murder Case: ಅಶ್ಲೀಲ ವಿಡಿಯೊ ಚಟ; ಮಗಳನ್ನೇ ಲೈಂಗಿಕಕ್ರಿಯೆಗೆ ಒತ್ತಾಯಿಸಿ ಕೊಂದ ಪಾಪಿ ತಂದೆ

ಅಲ್ಲದೇ ನಾಟಕಕ್ಕೆ ಸಂಬಂಧಿಸಿದ ದೂರುಗಳ ಪರಿಹಾರಕ್ಕೆ ಶಿಸ್ತು ಸಭೆ ಕರೆದ ಐಐಟಿ ಅಲ್ಲಿನ ಚರ್ಚೆಗಳ ಆಧಾರದ ಮೇಲೆ ಶಿಕ್ಷಾರ್ಹ ಕ್ರಮಗಳನ್ನು ಶಿಫಾರಸು ಮಾಡಿದೆ. ಅದರಂತೆ ಜುಲೈ 20, 2024ರಂದು ವಿದ್ಯಾರ್ಥಿ ವ್ಯವಹಾರ ಡೀನ್ ಕಚೇರಿ ಯಲ್ಲಿ ರೂ. 1.2ಲಕ್ಷ ದಂಡವನ್ನು ಪಾವತಿಸಬೇಕಾಗಿ ಹೇಳಿದೆ. ಮತ್ತು ಸಂಸ್ಥೆಯ ಜಿಮ್ಖಾನಾ ಪ್ರಶಸ್ತಿಗಳಿಂದ ಯಾವುದೇ ಮಾನ್ಯತೆ ಪಡೆಯದಂತೆ ನಿರ್ಬಂಧ ಹೇರಿದರೆ ಕಿರಿಯ ಏಳು ವಿದ್ಯಾರ್ಥಿಗಳಿಗೆ 40,000 ದಂಡದ ಜೊತೆಗೆ ಹಾಸ್ಟೆಲ್ ಸೌಲಭ್ಯದಿಂದ ಅಮಾನತುಗೊಳಿಸಲಾಗಿದೆ. ಒಂದು ವೇಳೆ ದಂಡವನ್ನು ತಪ್ಪಿಸಿದರೆ ಮತ್ತಷ್ಟು ನಿರ್ಬಂಧಕ್ಕೆ ಒಳಪಡಿಸುವುದಾಗಿ ತಿಳಿಸಿದೆ.

Continue Reading

ಮೈಸೂರು

Mysore News: ಸೋಸಲೆಯಲ್ಲಿ ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ 8ನೇ ಚಾತುರ್ಮಾಸ್ಯ ವ್ರತ

Mysore News: ನ್ಯಾಯ ಸುಧಾ ಮಂಗಳ ಮಹೋತ್ಸವ ಯಶಗೊಂಡ ಹಿನ್ನೆಲೆಯಲ್ಲಿ ಮೈಸೂರಿನ ಕೃಷ್ಣಮೂರ್ತಿ ಪುರಂನ ಶ್ರೀ ವ್ಯಾಸ ತೀರ್ಥ ವಿದ್ಯಾಪೀಠದಲ್ಲಿ ಹಮ್ಮಿಕೊಂಡಿದ್ದ ಧನ್ಯತಾ ಸಮರ್ಪಣೆ ಸಭೆಯಲ್ಲಿ ಸೋಸಲೆ ವ್ಯಾಸರಾಜರ ಮಠಾಧಿಪತಿ ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿದರು.

VISTARANEWS.COM


on

Sri Vidyashreesha Theertha Swamiji ashirvachan
Koo

ಮೈಸೂರು: ಜಿಲ್ಲೆಯ ತಿ. ನರಸೀಪುರ ತಾಲೂಕಿನ ಸೋಸಲೆ ಗ್ರಾಮದಲ್ಲಿ 8ನೇ ಚಾತುರ್ಮಾಸ್ಯ ವ್ರತ ನಡೆಸಲು ನಿರ್ಧರಿಸಿರುವುದಾಗಿ ಶ್ರೀಮನ್ ಮಧ್ವಾಚಾರ್ಯ ಮೂಲ ಮಹಾ ಸಂಸ್ಥಾನ ಶ್ರೀ ವ್ಯಾಸರಾಜರ ಮಠದ ಪೀಠಾಧಿಪತಿ ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ (Mysore News) ತಿಳಿಸಿದರು.

ನ್ಯಾಯ ಸುಧಾ ಮಂಗಳ ಮಹೋತ್ಸವದ ಯಶಸ್ಸಿಗೆ ಶ್ರಮಿಸಿದ ಕಾರ್ಯಕರ್ತರಿಗೆ ಹಮ್ಮಿಕೊಂಡಿದ್ದ ಧನ್ಯತಾ ಸಮರ್ಪಣೆ ಸಭೆಯ ಸಾನ್ನಿಧ್ಯ ವಹಿಸಿ ಶ್ರೀಗಳು ಆಶೀರ್ವಚನ ನೀಡಿದರು.

ವ್ಯಾಸರಾಜರ ಮಠದ ಪರಂಪರೆಯಲ್ಲಿ ಸೋಸಲೆಗೆ ಮಹತ್ವದ ಸ್ಥಾನವಿದೆ. ಚಾತುರ್ಮಾಸ್ಯದ ಅವಧಿಯಲ್ಲಿ ಎಲ್ಲ ಭಕ್ತರೂ ಕ್ಷೇತ್ರಕ್ಕೆ ಆಗಮಿಸಿ ಸತ್ಕಾರ್ಯಗಳಲ್ಲಿ ಪಾಲ್ಗೊಳ್ಳಬೇಕು ಎಂದು ಹೇಳಿದರು.

ಇದನ್ನೂ ಓದಿ: Narendra Modi: ಪ್ರಧಾನಿ ಮೋದಿ ಜಮ್ಮು & ಕಾಶ್ಮೀರ ಪ್ರವಾಸ ಇಂದಿನಿಂದ; ಬಿಗಿ ಭದ್ರತೆ

ಆಗಸ್ಟ್ 2 ರಿಂದ ಸೆಪ್ಟೆಂಬರ್ 18ರವರೆಗೆ ಚಾತುರ್ಮಾಸ್ಯ ವ್ರತಾಚರಣೆ ನಡೆಯಲಿದೆ. ಈ ಸಂದರ್ಭದಲ್ಲಿ ನಾಗ ಚತುರ್ಥಿ, ಪಂಚಮಿ, ವರಮಹಾಲಕ್ಷ್ಮೀ ವ್ರತ, ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನೋತ್ಸವ, ಕೃಷ್ಣ ಜಯಂತಿ, ಗಣೇಶ ಚೌತಿ, ಅನಂತ ವ್ರತ, ಸೀಮೋಲ್ಲಂಘನ ನೆರವೇರಲಿದೆ. ಮುದ್ರಾಧಾರಣೆ, ಭಕ್ತರಿಗೆ ಫಲ ಮಂತ್ರಾಕ್ಷತೆ ಅನುಗ್ರಹವೂ ಇರಲಿದೆ. ಚಾತುರ್ಮಾಸ ಅವಧಿಯಲ್ಲಿ ಎಲ್ಲಾ ವ್ರತ, ನಿಯಮಗಳನ್ನು ಇದೇ ಕ್ಷೇತ್ರದಲ್ಲಿ ಆಚರಿಸಲು ಸಂಸ್ಥಾನ ನಿರ್ಧರಿಸಿದ್ದು, ಭಕ್ತರು ಸತ್ಕಾರ್ಯ ಸಾಧನೆಗೆ ಸಂಗಮಿಸಬೇಕು ಎಂದು ಶ್ರೀಗಳು ಹೇಳಿದರು.

ಶ್ರೀಮನ್ ನ್ಯಾಯ ಸುಧಾ ಮಂಗಳ ಯಶ

ದೈವ ಕೃಪೆ ಮತ್ತು ಗುರು ಶ್ರೀ ವ್ಯಾಸತೀರ್ಥರ ಪರಮ ಅನುಗ್ರಹದಿಂದ ಶ್ರೀ ನ್ಯಾಯ ಸುಧಾ ಮಂಗಳ ಮಹೋತ್ಸವ ಯಶಗೊಂಡಿದೆ. 9 ದಿನಗಳ ಮಹೋತ್ಸವದ ಹಿನ್ನೆಲೆಯಲ್ಲಿ 25ಕ್ಕೂ ಹೆಚ್ಚು ವಿವಿಧ ಮಠಾಧಿಪತಿಗಳು, ರಾಜ್ಯ ಮತ್ತು ಹೊರ ರಾಜ್ಯಗಳ ಸಾವಿರಾರು ಭಕ್ತರು ಸಂಗಮಿಸಿದ್ದರು. ನಮ್ಮ ವಿದ್ಯಾಪೀಠದ 4 ಯುವಕರು ವಿದ್ವತ್ ಸಭೆಯಲ್ಲಿ ಶ್ರೀ ಮನ್ ನ್ಯಾಯ ಸುಧಾ ಮತ್ತು ವ್ಯಾಸತ್ರಯ ಗ್ರಂಥಗಳ ಪರೀಕ್ಷೆ ಎದುರಿಸಿ ‘ಸುಧಾ ಪಂಡಿತ’ ರೆಂದು ಮಾನ್ಯರಾಗಿದ್ದಾರೆ. ಈ ಎಲ್ಲಾ ಕಾರ್ಯಕ್ರಮಗಳ ಹಿಂದೆ ನೂರಾರು ಕಾರ್ಯಕರ್ತರ ಶ್ರಮ ಸಮರ್ಪಣೆ ಆಗಿದೆ. ಅವರೆಲ್ಲರಿಗೂ ಮಂಗಳವಾಗಲಿ ಎಂದು ಶ್ರೀಗಳು ಆಶಿಸಿದರು.

ಇದನ್ನೂ ಓದಿ: Team India Coach: ಇಂದು ಟೀಮ್​ ಇಂಡಿಯಾದ ನೂತನ ಕೋಚ್‌ ಹೆಸರು ಘೋಷಣೆ!

ವ್ಯಾಸತೀರ್ಥ ವಿದ್ಯಾಪೀಠದ ಗೌರವ ಕಾರ್ಯದರ್ಶಿ ಡಿ.ಪಿ. ಮಧುಸೂದನ ಆಚಾರ್ಯ, ಪ್ರಾಚಾರ್ಯ ಡಾ. ಶ್ರೀನಿಧಿ ಪ್ಯಾಟಿ, ಬೆಂಗಳೂರಿನ ಪೇಜಾವರ ವಿದ್ಯಾಪೀಠದ ಪ್ರಾಧ್ಯಾಪಕ ವಿದ್ವಾನ್ ಮಾತರಿಶ್ವ ಆಚಾರ್ಯ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಗೋ. ಮಧುಸೂದನ, ಜನ ಸೇವಾ ಕೇಂದ್ರದ ಮುಖ್ಯಸ್ಥ ಮಧುಸೂದನ ಮಾತನಾಡಿದರು.

Continue Reading

ಧಾರ್ಮಿಕ

Vastu Tips: ಮನೆ ಆವರಣದ ತಪ್ಪಾದ ದಿಕ್ಕಿನಲ್ಲಿ ಗಿಡ ಬೆಳೆಸಿದರೆ ಕೆಟ್ಟ ಪರಿಣಾಮ!

ವಾಸ್ತು ಶಾಸ್ತ್ರದಲ್ಲಿ (Vastu Tips) ನಮ್ಮ ಬದುಕಿನೊಂದಿಗೆ ನಂಟು ಹೊಂದಿರುವ ಪ್ರತಿಯೊಂದು ವಸ್ತುವಿನ ಬಗ್ಗೆಯೂ ಹೇಳಲಾಗುತ್ತದೆ. ಮನೆಯ ಸುತ್ತಮುತ್ತ ನಾವು ಇಷ್ಟ ಪಟ್ಟು ಬೆಳೆಸುವ ಗಿಡ, ಮರಗಳು ವಾಸ್ತು ಪ್ರಕಾರ ಇಲ್ಲದೇ ಇದ್ದರೆ ನಮ್ಮ ಬದುಕಿನಲ್ಲಿ ಹಲವಾರು ತೊಂದರೆಗಳನ್ನು ಉಂಟು ಮಾಡಬಹುದು. ಹಾಗಾಗಿ ಎಲ್ಲರಿಗೂ ವಾಸ್ತು ಪ್ರಕಾರ ಯಾವ ಗಿಡ ಎಲ್ಲಿ, ಹೇಗೆ ನೆಡಬೇಕು ಎನ್ನುವ ಮಾಹಿತಿ ತಿಳಿದಿರಲಿ.

VISTARANEWS.COM


on

By

Vastu Tips
Koo

ಮನೆಯ (home) ಒಳಾಂಗಣ, ಹೊರಾಂಗಣದಲ್ಲಿ ನಾವು ನಾವು ನೆಡುವ ಮರಗಳಿಗೂ (tree) ವಾಸ್ತು ಶಾಸ್ತ್ರ (Vastu Tips) ಅನ್ವಯವಾಗುತ್ತದೆ. ಮರ ಮತ್ತು ಸಸ್ಯಗಳನ್ನು ಬೆಳೆಸಲು ನಿರ್ದಿಷ್ಟ ನಿರ್ದೇಶನವನ್ನೂ ನೀಡಲಾಗಿದೆ. ತಪ್ಪಾದ ದಿಕ್ಕಿನಲ್ಲಿ ಬೆಳೆಸುವ ಮರ, ಗಿಡಗಳು ಮನೆಗೆ ಕೆಟ್ಟದನ್ನು ಉಂಟು ಮಾಡಬಹುದು.

ಮರ ಗಿಡಗಳು ಕೂಡ ನಮ್ಮ ಬದುಕಿನ ಮೇಲೆ ಸಕಾರಾತ್ಮಕ, ನಕಾರಾತ್ಮಕ (Positive, negative) ಪರಿಣಾಮವನ್ನು ಉಂಟು ಮಾಡುತ್ತದೆ. ವಾಸ್ತು ಪ್ರಕಾರ ಮನೆಯಲ್ಲಿ ಕೆಲವು ಸಸ್ಯಗಳನ್ನು ನಿರ್ಧಿಷ್ಟ ದಿಕ್ಕಿನಲ್ಲೇ ಇಡಬೇಕು. ಯಾಕೆಂದರೆ ಇದು ಬಹಳಷ್ಟು ತೊಂದರೆಗಳನ್ನು ಉಂಟುಮಾಡುತ್ತದೆ. ಅಂತಹ ಸಸ್ಯಗಳು ಯಾವುದು, ಅವುಗಳನ್ನು ಎಲ್ಲಿ ಇಡಬೇಕು ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ.


ಬಾಳೆ ಗಿಡ

ಜ್ಯೋತಿಷ್ಯ ಶಾಸ್ತ್ರದಲ್ಲಿ ಬಾಳೆ ಗಿಡಕ್ಕೆ ಹೆಚ್ಚಿನ ಮಹತ್ವವಿದೆ. ಈ ಮರಕ್ಕೆ ಗುರುವಾರ ಪೂಜೆ ಸಲ್ಲಿಸುವುದರಿಂದ ವಿಷ್ಣುವಿನ ಆಶೀರ್ವಾದ ದೊರೆಯುತ್ತದೆ ಎನ್ನುವ ನಂಬಿಕೆ ಇದೆ. ಈ ಸಸ್ಯವನ್ನು ದಕ್ಷಿಣಾಭಿಮುಖವಾಗಿ ನೆಡಬಾರದು. ಬಾಳೆ ಮರಗಳನ್ನು ಪಶ್ಚಿಮ ಅಥವಾ ಈಶಾನ್ಯಕ್ಕೆ ಬೆಳೆಸುವುದು ಸೂಕ್ತವಲ್ಲ. ಬಾಳೆ ಗಿಡವನ್ನು ಈ ರೀತಿ ಹಾಕುವುದು ಅತ್ಯಂತ ದುರಾದೃಷ್ಟಕರ. ಬಾಳೆಹಣ್ಣನ್ನು ದಕ್ಷಿಣಾಭಿಮುಖವಾಗಿ ನೆಟ್ಟರೆ ಕೆಟ್ಟದ್ದು ಸಂಭವಿಸುತ್ತದೆ. ಬಾಳೆ ಗಿಡಗಳನ್ನು ನೆಡುವಾಗ ಯಾವಾಗಲೂ ಉತ್ತರ ಅಥವಾ ಪೂರ್ವಕ್ಕೆ ಮುಖ ಮಾಡಬೇಕು.


ತುಳಸಿ ಗಿಡ

ಹಿಂದೂ ಧರ್ಮದಲ್ಲಿ ತುಳಸಿ ಸಸ್ಯಗಳು ಬಹಳ ಮಂಗಳಕರವಾಗಿವೆ. ತುಳಸಿಯನ್ನು ಲಕ್ಷ್ಮಿ ದೇವಿಯ ತವರು ಎಂದು ಹೇಳಲಾಗುತ್ತದೆ. ತುಳಸಿಯ ದೈನಂದಿನ ಪೂಜೆಯು ವಿಶಿಷ್ಟ ಪ್ರಯೋಜನಗಳನ್ನು ಹೊಂದಿದೆ. ತುಳಸಿ ಗಿಡಗಳನ್ನು ದಕ್ಷಿಣಾಭಿಮುಖವಾಗಿ ಇಡುವುದು ಎಂದಿಗೂ ಒಳ್ಳೆಯದಲ್ಲ.

ಈ ರೀತಿ ತುಳಸಿಯನ್ನು ನೆಡುವುದರಿಂದ ಮನೆಯೊಳಗೆ ಹೆಚ್ಚಿನ ವಾದಗಳು ಮತ್ತು ಹಣಕಾಸಿನ ಸಮಸ್ಯೆಗಳು ಉಂಟಾಗುತ್ತದೆ. ತುಳಸಿಯನ್ನು ಈಶಾನ್ಯ ಮೂಲೆಯಲ್ಲಿ ಅಥವಾ ಈಶಾನ್ಯ ದಿಕ್ಕಿನಲ್ಲಿ ನೆಡುವುದು ಅದೃಷ್ಟವೆಂದು ಪರಿಗಣಿಸಲಾಗುತ್ತದೆ. ಉತ್ತರದಲ್ಲಿ ನೆಟ್ಟಾಗ ತುಳಸಿ ಅತ್ಯಂತ ಅದೃಷ್ಟ ಎಂದು ಹೇಳಲಾಗುತ್ತದೆ. ಪೂರ್ವದಲ್ಲಿ ನೆಟ್ಟಾಗ, ಸೂರ್ಯನ ಶಕ್ತಿಯನ್ನು ಮನೆಗೆ ತರಲಾಗುತ್ತದೆ.

ಇದನ್ನೂ ಓದಿ: Vastu Tips: ಗಂಗಾ ಜಲ ಮನೆಯಲ್ಲಿಟ್ಟರೆ ಸಾಲದು; ಅದನ್ನು ಎಲ್ಲಿ ಇಡಬೇಕು, ಹೇಗೆ ಇಡಬೇಕು?


ಮನಿ ಪ್ಲಾಂಟ್

ಮನಿ ಪ್ಲಾಂಟ್ ಅನ್ನು ಅದೃಷ್ಟದ ಗಿಡವೆಂದು ಪರಿಗಣಿಸಲಾಗುತ್ತದೆ. ಹೆಚ್ಚಿನ ಮನೆಗಳಲ್ಲಿ ಮನಿ ಪ್ಲಾಂಟ್‌ಗಳು ಇರುತ್ತವೆ. ಮನಿ ಪ್ಲಾಂಟ್ಸ್ ಹೊಂದಿರುವ ಮನೆಯಲ್ಲಿ ಲಕ್ಷ್ಮಿ ವಾಸ ಮಾಡುತ್ತಾಳೆ ಎಂದೇ ನಂಬಲಾಗುತ್ತದೆ. ಮನಿ ಪ್ಲಾಂಟ್ ಹೊಂದಿರುವ ಮನೆ ಸಂತೋಷದ ಸ್ಥಳವಾಗಿರುತ್ತದೆ.

ಮನಿ ಪ್ಲಾಂಟ್ಸ್ ಯಾವಾಗಲೂ ದಕ್ಷಿಣಕ್ಕೆ ಮುಖ ಮಾಡಿ ನೆಡಬೇಕು ಎಂದು ವಾಸ್ತು ಹೇಳುತ್ತದೆ. ಇಲ್ಲದಿದ್ದರೆ ಸಹಾಯ ಮಾಡುವ ಬದಲು ಹಿನ್ನಡೆಯಾಗಬಹುದು. ಪರಿಣಾಮವಾಗಿ ಕುಟುಂಬದ ಸದಸ್ಯರು ಆರ್ಥಿಕ ತೊಂದರೆಗಳು ಉಂಟಾಗುತ್ತದೆ. ಮನಿ ಪ್ಲಾಂಟ್‌ಗಳನ್ನು ಯಾವಾಗಲೂ ಇಡಬೇಕಾದ ದಿಕ್ಕು ಆಗ್ನೇಯ. ಈ ದಿಕ್ಕಿನಲ್ಲಿ ಮನಿ ಪ್ಲಾಂಟ್‌ಗಳನ್ನು ನೆಟ್ಟಾಗ ಮನೆಯಲ್ಲಿ ಸಮೃದ್ಧಿ ಮತ್ತು ಸಂತೋಷ ಹೆಚ್ಚಾಗುತ್ತದೆ.

Continue Reading

ಧಾರ್ಮಿಕ

Vastu Tips: ಗಂಗಾ ಜಲ ಮನೆಯಲ್ಲಿಟ್ಟರೆ ಸಾಲದು; ಅದನ್ನು ಎಲ್ಲಿ ಇಡಬೇಕು, ಹೇಗೆ ಇಡಬೇಕು?

ಮನೆಯಲ್ಲಿ ಗಂಗಾಜಲವನ್ನು ಇಡುವುದರಿಂದ ಏನು ಪ್ರಯೋಜನವಿದೆ, ಅದರ ಮಂಗಳಕರ ಮಹತ್ವ ಮತ್ತು ಮನೆಯೊಳಗೆ ಹೇಗೆ ಸಂರಕ್ಷಿಸುವುದು ಮತ್ತು ಬಳಸಿಕೊಳ್ಳುವುದು ಎನ್ನುವ ಕುರಿತು ವಾಸ್ತು ಶಾಸ್ತ್ರ (Vastu Tips) ಏನು ಹೇಳಿದೆ ಗೊತ್ತೇ? ಈ ಕುರಿತ ಉಪಯುಕ್ತ ಮಾಹಿತಿ ಇಲ್ಲಿದೆ.

VISTARANEWS.COM


on

By

Vastu Tips
Koo

ಬಹುತೇಕ ಹಿಂದೂಗಳು (hindu) ತಮ್ಮ ಮನೆಯಲ್ಲಿ ಗಂಗಾ ಜಲವನ್ನು (ganga jal) ಇಟ್ಟುಕೊಂಡಿರುತ್ತಾರೆ. ಗಂಗಾಜಲ 6ಎಂದು ಕರೆಯಲ್ಪಡುವ ಗಂಗಾನದಿಯ (ganga river) ಪವಿತ್ರ ನೀರು (holy water) ಶುದ್ಧ ಗುಣಲಕ್ಷಣಗಳಿಗಾಗಿ ಪೂಜನೀಯವಾಗಿದೆ. ಗಂಗಾ ಜಲವನ್ನು ಸೇವಿಸುವವರು ದೇವರ ಆಶೀರ್ವಾದ ಮತ್ತು ಆಧ್ಯಾತ್ಮಿಕ ರಕ್ಷಣೆಯನ್ನು ಪಡೆಯುತ್ತಾರೆ ಎನ್ನುವ ನಂಬಿಕೆ (Vastu Tips) ಹಿಂದೂಗಳಲ್ಲಿ ಇದೆ.

ವಾಸ್ತು ಶಾಸ್ತ್ರ ಮತ್ತು ಪ್ರಾಚೀನ ಭಾರತೀಯ ವಾಸ್ತುಶಿಲ್ಪ ಹಾಗೂ ವಿನ್ಯಾಸ ವಿಜ್ಞಾನದ ಪ್ರಕಾರ ಗಂಗಾಜಲವನ್ನು ಮನೆಯಲ್ಲಿ ಇಟ್ಟುಕೊಳ್ಳುವುದರಿಂದ ಮನೆಯೊಳಗೆ ಧನಾತ್ಮಕ ಶಕ್ತಿ ಮತ್ತು ದೈವಿಕ ಆಶೀರ್ವಾದ ಪ್ರಾಪ್ತಿಯಾಗುತ್ತದೆ. ಅಲ್ಲದೇ ಮನೆಯಲ್ಲಿ ಗಂಗಾ ಜಲವನ್ನು ಇಟ್ಟುಕೊಳ್ಳುವುದರಿಂದ ಮನೆ ಮಂದಿಯಲ್ಲಿ ಸಾಮರಸ್ಯ, ಸಮೃದ್ಧಿ ಮತ್ತು ಆಧ್ಯಾತ್ಮಿಕ ಯೋಗಕ್ಷೇಮವನ್ನು ನೀಡುತ್ತದೆ.

ಮನೆಯಲ್ಲಿ ಗಂಗಾಜಲವನ್ನು ಇಡುವುದರಿಂದ ಏನು ಪಯೋಜನವಿದೆ, ಅದರ ಮಂಗಳಕರ ಮಹತ್ವ ಮತ್ತು ಮನೆಯೊಳಗೆ ಹೇಗೆ ಸಂರಕ್ಷಿಸುವುದು ಮತ್ತು ಬಳಸಿಕೊಳ್ಳುವುದು ಎನ್ನುವ ಕುರಿತು ವಾಸ್ತು ಶಾಸ್ತ್ರ ಏನು ಹೇಳಿದೆ ಎಂಬುದನ್ನು ನೋಡೋಣ.

ಗಂಗಾಜಲದ ಮಹತ್ವವೇನು?

ಶುದ್ಧೀಕರಣ ಗುಣ

ವಾಸ್ತು ಶಾಸ್ತ್ರದಲ್ಲಿ ನೀರನ್ನು ಶುದ್ಧತೆ ಮತ್ತು ಚೈತನ್ಯದ ಸಂಕೇತವಾಗಿ ಪೂಜಿಸಲಾಗುತ್ತದೆ. ಇದು ಮನೆಯೊಳಗೆ ಜೀವ ಶಕ್ತಿಯ (ಪ್ರಾಣ) ಹರಿವನ್ನು ಪ್ರತಿನಿಧಿಸುತ್ತದೆ. ಗಂಗಾನದಿಯ ಪವಿತ್ರ ನೀರಿನಿಂದ ತೆಗೆದ ಗಂಗಾಜಲ್ ಅಸಾಧಾರಣವಾದ ಶುದ್ಧೀಕರಣದ ಗುಣಗಳನ್ನು ಹೊಂದಿದೆ ಎಂದು ನಂಬಲಾಗಿದೆ.

ಗಂಗಾ ಜಲ ನಕಾರಾತ್ಮಕ ಶಕ್ತಿಗಳನ್ನು ಹೊರಹಾಕಲು ಮತ್ತು ಆಧ್ಯಾತ್ಮಿಕ ಸಾಮರಸ್ಯವನ್ನು ಉತ್ತೇಜಿಸುವ ಸಾಮರ್ಥ್ಯವನ್ನು ಹೊಂದಿದೆ. ಗಂಗಾಜಲವನ್ನು ಮನೆಯಲ್ಲಿ ಇರಿಸುವ ಮೂಲಕ ವಾಸಸ್ಥಳದಲ್ಲಿ ಧನಾತ್ಮಕ ಶಕ್ತಿ ಮತ್ತು ದೈವಿಕ ಆಶೀರ್ವಾದ ಪಡೆಯಬಹುದು. ಆಧ್ಯಾತ್ಮಿಕ ಬೆಳವಣಿಗೆ ಮತ್ತು ಯೋಗಕ್ಷೇಮಕ್ಕೆ ಅನುಕೂಲಕರ ವಾತಾವರಣವನ್ನು ಇದು ಸೃಷ್ಟಿಸುತ್ತದೆ.

ದೈವಿಕ ಸಂಪರ್ಕದ ಸಂಕೇತ

ಹಿಂದೂ ಪುರಾಣಗಳಲ್ಲಿ ಗಂಗಾಳನ್ನು ದೇವತೆಯಾಗಿ ಪೂಜಿಸಲಾಗುತ್ತದೆ. ಶುದ್ಧತೆ, ಸಹಾನುಭೂತಿ ಮತ್ತು ದೈವಿಕ ಅನುಗ್ರಹವನ್ನು ಇದು ಒಳಗೊಂಡಿರುತ್ತದೆ. ಗಂಗಾಜಲವನ್ನು ಮನೆಯಲ್ಲಿ ಇಟ್ಟುಕೊಳ್ಳುವುದು ದೈವಿಕತೆಯ ಬಗ್ಗೆ ಗೌರವ ಮತ್ತು ಭಕ್ತಿಯ ಸಂಕೇತವಾಗಿದೆ. ಆಧ್ಯಾತ್ಮಿಕ ಕ್ಷೇತ್ರದೊಂದಿಗೆ ಆಳವಾದ ಸಂಪರ್ಕವನ್ನು ಇದು ಬೆಳೆಸುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ ಮನೆಯೊಳಗೆ ಗಂಗಾಜಲದ ಉಪಸ್ಥಿತಿಯು ದೈವಿಕ ಆಶೀರ್ವಾದ ಮತ್ತು ರಕ್ಷಣೆಗಾಗಿ ಒಂದು ಮಾರ್ಗವಾಗಿ ಕಾರ್ಯನಿರ್ವಹಿಸುತ್ತದೆ. ಮನೆಯಲ್ಲಿರುವವರ ಕಲ್ಯಾಣ ಮತ್ತು ಸಮೃದ್ಧಿಯನ್ನು ಖಾತ್ರಿಗೊಳಿಸುತ್ತದೆ.

ಧನಾತ್ಮಕ ಶಕ್ತಿ

ವಾಸ್ತು ಶಾಸ್ತ್ರದಲ್ಲಿ ನೀರನ್ನು ಶಕ್ತಿಯುತ ಅಂಶವೆಂದು ಪರಿಗಣಿಸಲಾಗಿದೆ. ಇದು ಮನೆಯೊಳಗೆ ಶಕ್ತಿಯ (ಪ್ರಾಣ) ಹರಿವಿನ ಮೇಲೆ ಪ್ರಭಾವ ಬೀರುವ ಸಾಮರ್ಥ್ಯವನ್ನು ಹೊಂದಿದೆ. ಗಂಗಾಜಲ ಉನ್ನತ ಮಟ್ಟದ ಸಕಾರಾತ್ಮಕ ಶಕ್ತಿಯನ್ನು ಹೊಂದಿದೆ. ಇದು ಪರಿಸರದ ಕಂಪನ ಆವರ್ತನವನ್ನು ಹೆಚ್ಚಿಸುತ್ತದೆ ಮತ್ತು ಶಾಂತಿ, ಸಾಮರಸ್ಯ ಮತ್ತು ಸಮೃದ್ಧಿಯ ಪ್ರಜ್ಞೆಯನ್ನು ಉತ್ತೇಜಿಸುತ್ತದೆ. ಗಂಗಾಜಲವನ್ನು ಮನೆಯಲ್ಲಿ ಇರಿಸುವ ಮೂಲಕ ವಾಸಸ್ಥಳದ ಶಕ್ತಿಯುತ ಸಮತೋಲನ ಮತ್ತು ಚೈತನ್ಯವನ್ನು ಹೆಚ್ಚಿಸಬಹುದು. ಮನೆಯಲ್ಲಿ ವಾಸಿಸುವ ಎಲ್ಲರಿಗೂ ಧನಾತ್ಮಕ ಮತ್ತು ಯೋಗಕ್ಷೇಮದ ವಾತಾವರಣವನ್ನು ಇದು ಬೆಳೆಸುತ್ತದೆ.


ಗಂಗಾಜಲ ಮನೆಯಲ್ಲಿ ಹೇಗೆ ಇಡುವುದು?

ಮನೆಯಲ್ಲಿ ಗಂಗಾಜಲವನ್ನು ಸಂಗ್ರಹಿಸುವಾಗ ಅದರ ಶುದ್ಧತೆ ಮತ್ತು ಸಾಮರ್ಥ್ಯವನ್ನು ಸಂರಕ್ಷಿಸಲು ಅನುಕೂಲಕರವಾದ ಶುದ್ಧ ಮತ್ತು ಪವಿತ್ರ ಪಾತ್ರೆಯನ್ನು ಆಯ್ಕೆ ಮಾಡುವುದು ಮುಖ್ಯ. ತಾಮ್ರ ಅಥವಾ ಬೆಳ್ಳಿಯ ಪಾತ್ರೆಯನ್ನು ಆರಿಸಿಕೊಳ್ಳಿ. ಯಾಕೆಂದರೆ ಈ ಲೋಹಗಳು ನೀರಿನ ಧನಾತ್ಮಕ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಮಾಲಿನ್ಯವನ್ನು ತಡೆಯುತ್ತದೆ. ಪ್ಲಾಸ್ಟಿಕ್ ಅಥವಾ ಕಬ್ಬಿಣದ ಪಾತ್ರೆಗಳನ್ನು ಬಳಸುವುದನ್ನು ತಪ್ಪಿಸಿ. ಅವುಗಳ ಹಾನಿಕಾರಕ ವಸ್ತುಗಳನ್ನು ನೀರಿನಲ್ಲಿ ಸೇರಿಕೊಳ್ಳಬಹುದು ಮತ್ತು ಅದರ ಪವಿತ್ರ ಗುಣಗಳನ್ನು ಕುಗ್ಗಿಸಬಹುದು.

ಎಲ್ಲಿ ಇಡುವುದು?

ವಾಸ್ತು ಶಾಸ್ತ್ರದ ಪ್ರಕಾರ ಗಂಗಾಜಲವನ್ನು ಮನೆಯೊಳಗೆ ಇಡುವುದು ಅದರ ಮಂಗಳಕರ ಪರಿಣಾಮಗಳನ್ನು ಹೆಚ್ಚಿಸಲು ಅತ್ಯಂತ ಮಹತ್ವದ್ದಾಗಿದೆ. ತಾತ್ತ್ವಿಕವಾಗಿ, ಗಂಗಾಜಲವನ್ನು ಮನೆಯ ಈಶಾನ್ಯ ಮೂಲೆಯಲ್ಲಿ ಇಡಬೇಕು. ಯಾಕೆಂದರೆ ಈ ದಿಕ್ಕು ನೀರಿನ ಅಂಶದೊಂದಿಗೆ ಸಂಬಂಧಿಸಿದೆ ಮತ್ತು ಆಧ್ಯಾತ್ಮಿಕ ಆಚರಣೆಗಳಿಗೆ ಹೆಚ್ಚು ಮಂಗಳಕರವೆಂದು ಪರಿಗಣಿಸಲಾಗಿದೆ. ಪರ್ಯಾಯವಾಗಿ ಇದನ್ನು ಪೂಜಾ ಕೊಠಡಿ ಅಥವಾ ಪೀಠದಲ್ಲಿ ಇರಿಸಬಹುದು. ಅಲ್ಲಿ ಅದನ್ನು ಪ್ರತಿದಿನ ಪೂಜಿಸಬಹುದು.

ದೈನಂದಿನ ಆಚರಣೆಗಳು ಹೇಗಿರಬೇಕು?

ಮನೆಯಲ್ಲಿ ಗಂಗಾಜಲವಿದ್ದರೆ ಅದರ ಪವಿತ್ರ ಶಕ್ತಿಯನ್ನು ಬಳಸಿಕೊಳ್ಳಲು ಗೌರವಾರ್ಥವಾಗಿ ದೈನಂದಿನ ಆಚರಣೆಗಳು ಮತ್ತು ಅರ್ಪಣೆಗಳನ್ನು ಮಾಡುವುದು ಸೂಕ್ತವಾಗಿದೆ. ಭಕ್ತರು ಗಂಗಾಜಲವನ್ನು ಶಿವಲಿಂಗ ಅಥವಾ ಪವಿತ್ರ ದೇವತೆಯ ಮೇಲೆ ಭಕ್ತಿಯಿಂದ ಸುರಿಯುವಾಗ ಪ್ರಾರ್ಥನೆ, ಬೆಳಕಿನ ಧೂಪದ್ರವ್ಯ ಮತ್ತು ಮಂತ್ರಗಳನ್ನು ಪಠಿಸಬಹುದು. ಈ ಆರಾಧನೆಯ ಕ್ರಿಯೆಯು ಸುತ್ತಮುತ್ತಲಿನ ಪರಿಸರವನ್ನು ಶುದ್ಧೀಕರಿಸುವುದು ಮಾತ್ರವಲ್ಲದೆ ದೈವಿಕ ಆಶೀರ್ವಾದ ಮತ್ತು ಮನೆ ಮತ್ತು ಮನೆಯಲ್ಲಿ ಇರುವವರಿಗೆ ರಕ್ಷಣೆ ನೀಡುತ್ತದೆ.

ನಿಯಮಿತವಾಗಿ ಬದಲಿಸಿ

ಗಂಗಾಜಲ ಪ್ರಬಲವಾದ ಶುದ್ಧೀಕರಣ ಗುಣಗಳನ್ನು ಹೊಂದಿದೆ ಎಂದು ನಂಬಲಾಗಿದೆ. ಆದರೆ ಅದರ ಪರಿಣಾಮಕಾರಿತ್ವವನ್ನು ಕಾಪಾಡಿಕೊಳ್ಳಲು ನಿಯಮಿತವಾಗಿ ನೀರನ್ನು ಬದಲಿಸುವುದು ಮತ್ತು ನವೀಕರಿಸುವುದು ಮುಖ್ಯವಾಗಿದೆ. ತಾತ್ತ್ವಿಕವಾಗಿ, ಗಂಗಾಜಲವನ್ನು ಕೆಲವು ದಿನಗಳಿಗೊಮ್ಮೆ, ಗಂಗಾ ದಸರಾ ಅಥವಾ ಇತರ ಪವಿತ್ರ ಹಬ್ಬಗಳಂದು ಮರುಪೂರಣ ಮಾಡಬೇಕು. ಇದನ್ನು ಪಾತ್ರೆಗೆ ಹಾಕುವಾಗ ಅದರ ಪವಿತ್ರತೆಯನ್ನು ಖಚಿತಪಡಿಸಿಕೊಳ್ಳಲು ಪ್ರಾರ್ಥನೆ ಮಾಡಬೇಕು.

Continue Reading
Advertisement
International Yoga Day 2024
ಆರೋಗ್ಯ41 seconds ago

Essay on Yoga: ವಿಶ್ವದ ಎಲ್ಲ ಜನರನ್ನು ಒಗ್ಗೂಡಿಸುತ್ತಿರುವುದು ಭಾರತದ ʼಯೋಗʼ

CM Siddaramaiah
ಪ್ರಮುಖ ಸುದ್ದಿ18 mins ago

CM Siddaramaiah: ಕರ್ನಾಟಕದಲ್ಲಿ ವಾಸಿಸುತ್ತಿರುವ ಪರ ಭಾಷಿಕರು ಕನ್ನಡ ಕಲಿಯಲೇಬೇಕು: ಸಿದ್ದರಾಮಯ್ಯ

Tumkur DC Shubha Kalyan inaugurated the Janaspandana programme in Koratagere
ತುಮಕೂರು29 mins ago

Koratagere News: ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರಕ್ಕೆ ಜನಸ್ಪಂದನ ಕಾರ್ಯಕ್ರಮ; ಡಿಸಿ ಶುಭ‌ ಕಲ್ಯಾಣ್

Power cut There will be power outage in various parts of Bengaluru on June 22
ಕರ್ನಾಟಕ30 mins ago

Power Cut: ಬೆಂಗಳೂರಿನ ವಿವಿಧ ಕಡೆ ಜೂ. 22ರಂದು ವಿದ್ಯುತ್‌ ವ್ಯತ್ಯಯ

Arvind Kejriwal
ದೇಶ31 mins ago

Arvind Kejriwal: ಅರವಿಂದ್‌ ಕೇಜ್ರಿವಾಲ್‌ಗೆ ಬಿಗ್‌ ರಿಲೀಫ್;‌ ಕೊನೆಗೂ ಸಿಕ್ಕಿತು ಜಾಮೀನು

Vijayanagara DC MS Diwakar meeting with officials of various departments
ವಿಜಯನಗರ34 mins ago

Vijayanagara News: ಜೂ. 21ರಂದು ಮುಖ್ಯಮಂತ್ರಿಗಳಿಂದ ಕೆಡಿಪಿ ಸಭೆ; ಡಿಸಿ ಎಂ.ಎಸ್.ದಿವಾಕರ್‌

Action will be taken to ensure that the Anganwadi workers do not suffer in any way says Minister Lakshmi Hebbalkar
ಬೆಂಗಳೂರು38 mins ago

Lakshmi Hebbalkar: ಲಕ್ಷ್ಮೀ ಹೆಬ್ಬಾಳಕರ್ ಭರವಸೆ; ಅಂಗನವಾಡಿ ನೌಕರರ ಮುಷ್ಕರ ವಾಪಸ್‌

Mecca Heatwave Death
ಪ್ರಮುಖ ಸುದ್ದಿ1 hour ago

Mecca Heatwave Death : ಮೆಕ್ಕಾದಲ್ಲಿ ನಿಧನ ಹೊಂದಿದ ಹಜ್​ ಯಾತ್ರಿಗಳಿಗೆ ಅಲ್ಲೇ ಸಂಸ್ಕಾರ; ಹಜ್​ ಕಮಿಟಿ ಮಾಹಿತಿ

CM Siddaramaiah
ಕರ್ನಾಟಕ1 hour ago

CM Siddaramaiah: ಪೆಟ್ರೋಲ್‌ ಬೆಲೆ ಏರಿಸಿದ್ದು ಗ್ಯಾರಂಟಿಗೋ? ಅಭಿವೃದ್ಧಿಗೋ? ಸಿದ್ದರಾಮಯ್ಯ ಹೀಗಂತಾರೆ!

Virat kohli
ಪ್ರಮುಖ ಸುದ್ದಿ2 hours ago

Virat kohli : ಕೊಹ್ಲಿಯನ್ನು ಮತ್ತೆ ಸ್ವಾರ್ಥಿ ಎಂದು ದೂರಿದ ಪಾಕಿಸ್ತಾನದ ಮೊಹಮ್ಮದ್ ಹಫೀಜ್​

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ2 hours ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು3 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು3 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ4 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ4 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ4 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ5 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ6 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು6 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು6 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

ಟ್ರೆಂಡಿಂಗ್‌