Site icon Vistara News

Datta Jayanti : ಶೋಭಾ ಯಾತ್ರೆಯಲ್ಲಿ ಪೊಲೀಸರ ಮೇಲೆ ಹಲ್ಲೆ; ಬಜರಂಗದಳ ಕಾರ್ಯಕರ್ತರ ಮೇಲೆ ಕೇಸ್‌

Police assulted during Shobha Yatra Case filed against Bajrang Dal activists

ಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕಿನ ಆಲ್ದೂರು ಪಟ್ಟಣದಲ್ಲಿ ನಡೆದ ಶೋಭಾಯಾತ್ರೆಯಲ್ಲಿ (Shobha yatra) ಪೊಲೀಸರ ಮೇಲೆ ಬಜರಂಗದಳ (Bhajarangadal) ಕಾರ್ಯಕರ್ತರು ಹಲ್ಲೆಗೆ (Datta Jayanti) ಯತ್ನಿಸಿದ್ದಾರೆ (assault case) ಎಂಬ ಆರೋಪ ಕೇಳಿ ಬಂದಿದೆ. ಈ ಸಂಬಂಧ ಆಲ್ದೂರು ಠಾಣೆಯಲ್ಲಿ 7 ಬಜರಂಗದಳ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಾಗಿದೆ. ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಲ್ಲದೇ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಕ್ಕೆ ದೂರು ದಾಖಲಾಗಿದೆ.

ನಿನ್ನೆ ಶನಿವಾರ ರಾತ್ರಿ ಬೃಹತ್ ಶೋಭಾಯಾತ್ರೆ ಆಲ್ದೂರಿನಲ್ಲಿ ನಡೆದಿತ್ತು. ಯಾತ್ರೆ ವೇಳೆ ಕೆಲ ಕಾರ್ಯಕರ್ತರು ಏಕಾಏಕಿ ಮಸೀದಿ ಮುಂಭಾಗ ಪಟಾಕಿ ಸಿಡಿಸಲು ಮುಂದಾದರು. ಪಟಾಕಿ ಹಚ್ಚುವುದನ್ನು ತಡೆಯಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಪೊಲೀಸರ ವಿರೋಧದ ನಡುವೆಯೂ ಕಾರ್ಯಕರ್ತರು ಪಟಾಕಿ ಸಿಡಿಸಿದ್ದಾರೆ. ಪಟಾಕಿ ಹಚ್ಚುವುದನ್ನು ತಡೆಯಲು ಹೋದ ಪರಿಣಾಮ ಕೆಲ ಪೊಲೀಸರಿಗೆ ಗಾಯವಾಗಿದ್ದು, ಅವರನ್ನೆಲ್ಲ ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗಿತ್ತು. ಇನ್ನು ನಿನ್ನೆಯ ಶೋಭಾಯಾತ್ರೆಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಮಾಜಿ ಶಾಸಕ ಸಿ.ಟಿ ರವಿ ಭಾಗಿಯಾಗಿದ್ದರು.

ಇದನ್ನೂ ಓದಿ:Datta Jayanti : ದರ್ಗಾದಲ್ಲಿ ದತ್ತ ಜಯಂತಿಗೆ ಶ್ರೀರಾಮ ಸೇನೆ ಪ್ಲ್ಯಾನ್‌!: ಚಿಕ್ಕಮಗಳೂರಲ್ಲಿ ಮತ್ತೊಂದು ವಿವಾದ

ಅನುಸೂಯ ಜಯಂತಿ- ಮಹಿಳೆಯರಿಂದ ಸಂಕೀರ್ತನಾ ಯಾತ್ರೆ

ದತ್ತಜಯಂತಿ ಅಂಗವಾಗಿ ಭಾನುವಾರ ಅನುಸೂಯ ಜಯಂತಿ ಆಚರಿಸಲಾಗುತ್ತಿದೆ. ಚಿಕ್ಕಮಗಳೂರು ನಗರದಲ್ಲಿ ಮಹಿಳೆಯರಿಂದ ಸಂಕೀರ್ತನಾ ಯಾತ್ರೆ ನಡೆಯಲಿದ್ದು, ಸಾವಿರಾರು ಮಹಿಳೆಯರು ಭಾಗಿಯಾಗಲಿದ್ದಾರೆ. ಚಿಕ್ಕಮಗಳೂರು ನಗರದ ಬೋಳರಾಮೇಶ್ವರ ದೇವಾಲಯದಿಂದ ಯಾತ್ರೆ ಆರಂಭವಾಗಲಿದ್ದು, ಸಂಕೀರ್ತನಾ ಯಾತ್ರೆ ಬಳಿಕ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ದತ್ತ ಪಾದಕೆ ದರ್ಶನ ಪಡೆಯಲಿದ್ದಾರೆ. ಮಹಿಳೆಯರಿಂದ ದತ್ತ ಪಾದುಕೆ ದರ್ಶನ, ಹೋಮ ಪೂಜೆ ನಡೆಯಲಿದೆ.

10 ದಿನಗಳ ದತ್ತ ಜಯಂತಿ ಸಂಭ್ರಮ

ಡಿ.17 ರಿಂದ ಕಾಫಿನಾಡು ಚಿಕ್ಕಮಗಳೂರಿನಲ್ಲಿ ದತ್ತ ಜಯಂತಿಗೆ ಅಧಿಕೃತ ಚಾಲನೆ ದೊರೆತಿದೆ. ಹತ್ತು ದಿನಗಳ ಕಾಲ ನಡೆಯುವ ಉತ್ಸವದಲ್ಲಿ ಹಲವು ಹಿಂದೂ ಪರ ಮುಖಂಡರು, ಸಾಧು ಸಂತರು ಭಾಗಿಯಾಗುವ ಕಾರಣಕ್ಕೆ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ. ಡಿ. 24ರ ಭಾನುವಾರದಂದು ನಗರದಲ್ಲಿ ಸಾವಿರಾರು ಮಹಿಳೆಯರು ಬೃಹತ್ ಸಂಕೀರ್ತನ ಯಾತ್ರೆ ನಡೆಸಿ ದತ್ತಪೀಠದಲ್ಲಿ ಹೋಮ ಹವನ ನಡೆಸುವ ಮೂಲಕ ಅನುಸೂಯ ಜಯಂತಿ ಆಚರಿಸಲಿದ್ದಾರೆ.

25ರ ಸೋಮವಾರದಂದು ಚಿಕ್ಕಮಗಳೂರು ನಗರದಲ್ಲಿ ದತ್ತ ಭಕ್ತರು ಹಾಗೂ ಸಾರ್ವಜನಿಕರಿಂದ ಬೃಹತ್ ಶೋಭಾಯಾತ್ರೆ ನಡೆಯಲಿದ್ದು, 30 ಸಾವಿರಕ್ಕೂ ಅಧಿಕ ಭಕ್ತರು ಶೋಭಾಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ. 26ರಂದು ರಾಜ್ಯದ ಮೂಲೆ ಮೂಲೆಗಳಿಂದ ಬರುವ ಸಾವಿರಾರು ಭಕ್ತರು ದತ್ತಪೀಠಕ್ಕೆ ತೆರಳಿ ದತ್ತ ಪಾದಕ್ಕೆ ದರ್ಶನ ಪಡೆಯಲಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version