Site icon Vistara News

Dharma Dangal‌ : ಕಾವೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನ ಜಾತ್ರಾ ಮಹೋತ್ಸವಕ್ಕೆ ಧರ್ಮ ದಂಗಲ್‌ ಬಿಸಿ

kavooru jatre Dharma Dangal

ಮಂಗಳೂರು: ಬಿಜೆಪಿ ಶಾಸಕ ಡಾ.ಭರತ್ ಶೆಟ್ಟಿ ವಿಧಾನಸಭಾ ಕ್ಷೇತ್ರದಲ್ಲಿ ವ್ಯಾಪಾರಿ ಧರ್ಮ ದಂಗಲ್ (Dharma Dangal‌) ಪ್ರಾರಂಭವಾಗಿದೆ. ದೇವಸ್ಥಾನದಲ್ಲಿ ಅನ್ಯಧರ್ಮೀಯರ ವ್ಯಾಪಾರವನ್ನು ಬಹಿಷ್ಕರಿಸಿ ಬ್ಯಾನರ್ ಅಳವಡಿಕೆ ಮಾಡಲಾಗಿದೆ. ಇದೀಗ ಪರ-ವಿರೋಧ ಚರ್ಚೆಗೆ ಗ್ರಾಸವಾಗಿದೆ.

ಮಂಗಳೂರಿನ ಕಾವೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ಯಾನರ್ ಅಳವಡಿಕೆ ಮಾಡಲಾಗಿದೆ. ದೇವಸ್ಥಾನದ ಆಡಳಿತ ಮಂಡಳಿ ಅನುಮತಿ ಪಡೆದು ವಿಎಚ್‌ಪಿ ಮತ್ತು ಬಜರಂಗದಳ ಕಾರ್ಯಕರ್ತರು ಬ್ಯಾನರ್ ಹಾಕಿದ್ದಾರೆನ್ನಲಾಗಿದೆ.

Dharma Dangal‌

ಸನಾತನ ಧರ್ಮದ ಆಚರಣೆ ಹಾಗೂ ನಂಬಿಕೆಗಳಲ್ಲಿ ವಿಶ್ವಾಸ ಉಳ್ಳ ಹಿಂದು ವ್ಯಾಪಾರಿಗಳಿಗೆ ಮಾತ್ರ ವ್ಯಾಪಾರ ಅವಕಾಶ. ವಿಗ್ರಹಾರಾಧನೆ ಹರಾಂ ಎಂದು ನಂಬಿದ ಯಾರಿಗೂ ವ್ಯಾಪಾರಕ್ಕೆ ಅವಕಾಶವಿಲ್ಲ ಎಂದು ಬ್ಯಾನರ್‌ನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ | Santro Ravi case | ಗುಜರಾತ್‌ನಲ್ಲಿ ಸ್ಯಾಂಟ್ರೋ ರವಿ ಪತ್ತೆಗೆ ನೆರವಾಗಿದ್ದು ಯುವ ಪೊಲೀಸ್‌ ಆಫೀಸರ್‌ಗಳ ಕನೆಕ್ಷನ್

ಶನಿವಾರದಿಂದ (ಜ.೧೪) ಕಾವೂರು ಜಾತ್ರೋತ್ಸವ ಆರಂಭವಾಗಿದ್ದು, ಜ.18ರವರೆಗೆ ನಡೆಯಲಿದೆ. ಈಗಾಗಲೇ ದೇವಸ್ಥಾನದ ಒಳ ಮತ್ತು ಹೊರ ಭಾಗದಲ್ಲಿ ಸ್ಟಾಲ್‌ಗಳನ್ನು ನಿರ್ಮಾಣ ಮಾಡಲಾಗಿದೆ. ಧಾರ್ಮಿಕ ದತ್ತಿ ವ್ಯಾಪ್ತಿಗೆ ಒಳಪಡುವ ಕಾವೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಸುತ್ತ ಸಿಎಆರ್ ತುಕಡಿ ಸೇರಿದಂತೆ ಹೆಚ್ಚುವರಿ ಪೊಲೀಸ್ ಭದ್ರತೆಯನ್ನು ನಿಯೋಜಿಸಲಾಗಿದೆ.

ಈ ಜಾತ್ರಾ ಮಹೋತ್ಸವದಲ್ಲಿ ಹಲವು ವರ್ಷಗಳಿಂದ ಮುಸ್ಲಿಂ ವ್ಯಾಪಾರಿಗಳು ವ್ಯಾಪಾರ ನಡೆಸುತ್ತಾ ಬಂದಿದ್ದರು. ಈ ಬಾರಿ ಬಜರಂಗದಳದ ಕಾರ್ಯಕರ್ತರಿಗೆ ಸ್ಟಾಲ್‌ಗಳ ನಿರ್ವಹಣೆ ಉಸ್ತುವಾರಿಯನ್ನು ಕೊಡಲಾಗಿತ್ತು. ಈ ಹಿನ್ನೆಲೆಯಲ್ಲಿ ನಡೆದಿದ್ದ ದೇವಸ್ಥಾನದ ಆಡಳಿತ ಮಂಡಳಿ ಸಭೆಯಲ್ಲೇ ವ್ಯಾಪಾರ ಬಹಿಷ್ಕಾರದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿಸಲಾಗಿದೆ.

ಇದನ್ನೂ ಓದಿ | Hombale Films | ಹೊಂಬಾಳೆ ಮೊದಲ ಮಲಯಾಳಂ ಫಿಲ್ಮ್‌ ʻಧೂಮಂʼ ಸಿನಿಮಾ ಚಿತ್ರೀಕರಣ ಮುಕ್ತಾಯ

Exit mobile version