ಚಂದ್ರನು ಗುರುವಾರ ಮುಂಜಾನೆ 06.01ಕ್ಕೆ ಮೇಷ ರಾಶಿಯನ್ನು ಪ್ರವೇಶಿಸಲಿದ್ದಾನೆ. ಇದರಿಂದಾಗಿ ಮೇಷ, ವೃಷಭ, ಮಿಥುನ, ಕನ್ಯಾ, ತುಲಾ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಕರ್ಕಾಟಕ ರಾಶಿಯವರು ಕೆಲವು ಆಘಾತಗಳನ್ನು ಎದುರಿಸಬೇಕಾದೀತು. ಹೀಗಾಗಿ ಧೈರ್ಯದಿಂದ ಇರಬೇಕು. ತುಲಾ ರಾಶಿಯವರು ಆತುರದಲ್ಲಿ ಯಾರೊಂದಿಗೂ ಅತಿರೇಕದ ಮಾತುಗಳನ್ನು ಆಡಿ, ಅಪಾಯ ತಂದುಕೊಳ್ಳುವುದು ಬೇಡ. ದಿನದ ಮಟ್ಟಿಗೆ ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.
ಇಂದಿನ ಪಂಚಾಂಗ (kannada panchanga) (26-10-2023)
ಮೇಷ: ಆಪ್ತರ ವರ್ತನೆಯಿಂದ ನಿಮ್ಮ ಮನಸ್ಸಿಗೆ ನೋವು ತರುವ ಸಾಧ್ಯತೆಗಳು ಹೆಚ್ಚು, ತಾಳ್ಮೆಯಿಂದ ಇರಿ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ತಲೆದೋರಬಹುದು ಮಾತಿನಲ್ಲಿ ಹಿಡಿತವಿರಲಿ. ದಿನದ ಮಟ್ಟಿಗೆ ಹಣಕಾಸಿನ ಹೂಡಿಕೆ ವ್ಯವಹಾರ ಮಾಡುವುದು ಬೇಡ. ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ಇರಲಿ. ಉದ್ಯೋಗಿಗಳಿಗೆ ಮಧ್ಯಮ ಫಲ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4
ವೃಷಭ: ದೀರ್ಘ ಕಾಲದ ಹೂಡಿಕೆ ವ್ಯವಹಾರದಲ್ಲಿ ಲಾಭ ಪಡೆಯುವಿರಿ. ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ನಿಮ್ಮ ಶ್ರಮಕ್ಕೆ ಪ್ರತಿಫಲ ಸಿಗಲಿದೆ. ಆಹಾರ ಕ್ರಮದಲ್ಲಿ ವ್ಯತ್ಯಾಸವಾಗಬಹುದು. ಹೀಗಾಗಿ ಸ್ವಲ್ಪ ಆರೋಗ್ಯದ ಕಡೆಗೆ ಗಮನ ಹರಿಸಿ. ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4
ಮಿಥುನ: ಯಾರಾದರೂ ನಿಮ್ಮ ಸಹಾಯ ಬೇಡಿ ಬರುವರು, ವಿಮರ್ಶಿಸಿ ಸಹಾಯ ಮಾಡಿ. ಆರ್ಥಿಕ ಪ್ರಗತಿ ದಿನದ ಮಟ್ಟಿಗೆ ಸಾಧಾರಣವಾಗಿರಲಿದೆ. ಯಾರಾದರೂ ನಿಮ್ಮ ಭಾವನೆಗಳನ್ನು ನಿರಾಸೆ ಮಾಡುವ ಸಾಧ್ಯತೆ ಇದೆ. ಅವರ ಮಾತನ್ನು ಲಕ್ಷಿಸದೆ ಕಾರ್ಯದಲ್ಲಿ ಮುನ್ನುಗ್ಗಿ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಹೊಸ ಭರವಸೆಯ ಆಶಾಭಾವನೆ ಮೂಡಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 2
ಕಟಕ: ಅಪರಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದೀತು. ಆದ್ದರಿಂದ ಈ ಬಗ್ಗೆ ಎಚ್ಚರಿಕೆ ವಹಿಸಿ. ಕೆಲವು ಆಘಾತಗಳನ್ನು ಎದುರಿಸಬೇಕಾದೀತು. ಹೀಗಾಗಿ ಧೈರ್ಯದಿಂದ ಇರಿ. ನಿಮ್ಮ ಆಸೆ-ಆಕಾಂಕ್ಷೆಗಳು ಯಶಸ್ಸನ್ನು ತಂದುಕೊಡಲಿವೆ. ಪ್ರಯಾಣ ಮಾಡುವ ಮತ್ತು ಹಣ ಖರ್ಚು ಮಾಡುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭ ಫಲ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5
ಸಿಂಹ: ದೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಹುಡುಕಲು ಸಾಧ್ಯವಾಗಬಹುದು. ವ್ಯಾಪಾರ – ವ್ಯವಹಾರಗಳಲ್ಲಿ ಆರ್ಥಿಕವಾಗಿ ಲಾಭ ಕಡಿಮೆಯಾಗಲಿದೆ. ಹೊಸ ಆಲೋಚನೆಗಳು ನಿಮಗೆ ಮೂಡಲಿದೆ. ಹೀಗಾಗಿ ನೀವು ಸೃಜನಾತ್ಮಕವಾಗಿ ಏನನ್ನಾದರೂ ಮಾಡಲು ಮುಂದಾಗುವಂತೆ ಪ್ರೇರೇಪಿಸುತ್ತದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3
ಕನ್ಯಾ: ಕುಟುಂಬದ ಆಪ್ತರೊಂದಿಗೆ ಸಂತಸ ಹಂಚಿಕೊಳ್ಳವಿರಿ. ಹಣಕಾಸು ಪರಿಸ್ಥಿತಿ ಸಾಧಾರಣವಾಗಿರಲಿದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ದುಬಾರಿ ವಸ್ತುಗಳನ್ನು ಖರೀದಿಸುವ ಮುನ್ನ ನಿಮ್ಮ ಹಣಕಾಸಿನ ಪರಿಸ್ಥಿತಿ ನೋಡಿಕೊಳ್ಳಿ. ಆರೋಗ್ಯ ಮಧ್ಯಮವಾಗಿರಲಿದೆ, ಉದ್ಯೋಗಿಗಳಿಗೆ ಶುಭ ಫಲ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2
ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here) ಮಾಡಿ
ತುಲಾ: ಪ್ರಭಾವಿ ಜನರ ಬೆಂಬಲ ಸಿಗಲಿದೆ. ಇದರಿಂದ ನೈತಿಕ ಸ್ಥೈರ್ಯ ಹೆಚ್ಚಾಗಲಿದೆ. ಒಡಹುಟ್ಟಿದವರ ಸಹಕಾರ ಸಿಗಲಿದೆ. ಆತುರದಲ್ಲಿ ಯಾರೊಂದಿಗೂ ಅತಿರೇಕದ ಮಾತುಗಳನ್ನು ಆಡಿ, ಅಪಾಯ ತಂದುಕೊಳ್ಳುವುದು ಬೇಡ. ದಿನದ ಮಟ್ಟಿಗೆ ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ ಇರಲಿದೆ.
ಅದೃಷ್ಟ ಸಂಖ್ಯೆ: 4
ವೃಶ್ಚಿಕ: ಸಕಾರಾತ್ಮಕ ಆಲೋಚನೆಗಳಿಂದ ಕೆಲಸ – ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಇಂದು ಹಣಕಾಸಿನ ಹೂಡಿಕೆ ವ್ಯವಹಾರ ಮಾಡುವುದು ಬೇಡ. ವ್ಯಾಪಾರದಲ್ಲಿ ಯಶಸ್ಸು ಸಿಗಲಿದೆ. ಪ್ರಯಾಣದಿಂದ ಲಾಭ ಆಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6
ಕಷ್ಟಗಳು ಬಂದಾಗ ಏನು ಮಾಡಬೇಕು ಗೊತ್ತಾ?
ಧನಸ್ಸು: ಭಾವನಾ ಜೀವಿಗಳಾದ ನೀವು ನಕಾರಾತ್ಮಕ ಆಲೋಚನೆಗಳಿಂದ ದೂರ ಇರಿ. ಅಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ, ಕ್ಷೇತ್ರ ದರ್ಶನ ಪಡೆದು ಮಾನಸಿಕ ನೆಮ್ಮದಿ ತಂದುಕೊಳ್ಳುವುದು ಅವಶ್ಯಕ. ಮಕ್ಕಳ ಆರೋಗ್ಯದ ಕಡೆಗೆ ಗಮನ ಹರಿಸಿ. ಹಣಕಾಸು, ವ್ಯಾಪಾರ ವ್ಯವಹಾರಗಳಲ್ಲಿ ಸಾಧಾರಣ ಪ್ರಗತಿಯನ್ನು ಕಾಣುವಿರಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3
ಮಕರ: ಭರವಸೆಯ ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ. ಸ್ನೇಹಿತರೊಂದಿಗೆ ಸಮಯ ಕಳೆಯುವ ಸಾಧ್ಯತೆ ಇದೆ. ನಿಮ್ಮ ಶಕ್ತಿ ಸಾಮರ್ಥ್ಯವನ್ನು ಕೆಲಸ ಕಾರ್ಯಗಳಲ್ಲಿ ಬಳಸಿಕೊಂಡರೆ ಇನ್ನೂ ಹೆಚ್ಚು ಆಕರ್ಷಕ ವ್ಯಕ್ತಿತ್ವ ವಿಕಸನ ಆಗುತ್ತದೆ. ಆರೋಗ್ಯ ಉತ್ತಮವಾಗಿರಲಿದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3
ಕುಂಭ: ಅತಿಥಿಗಳ ಆಗಮನ ಸಂತಸ ತರಲಿದೆ. ಆತ್ಮವಿಶ್ವಾಸದ ಹೊಸ ಭರವಸೆ ಮೂಡಲಿದೆ. ಹೂಡಿಕೆಯ ಲಾಭ ಇಂದು ಉಪಯೋಗಕ್ಕೆ ಬರುತ್ತದೆ. ದೀರ್ಘಕಾಲದ ಪ್ರಯತ್ನ ಇಂದು ಯಶಸ್ಸನ್ನು ತಂದು ಕೊಡಲಿದೆ. ಆರೋಗ್ಯ, ಉದ್ಯೋಗದಲ್ಲಿ ಉತ್ತಮ ಸ್ಥಿತಿಯನ್ನು ಹೊಂದುವಿರಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1
ಮೀನ: ಅತಿರೇಕದಲ್ಲಿ ಮಾತನಾಡಿ ಅಪಾಯ ತಂದುಕೊಳ್ಳುವುದು ಬೇಡ. ಕೋಪಗೊಳ್ಳುವಂತೆ ಮಾಡುವ ವಿಷಯಗಳಿಂದ ದೂರ ಇರಿ. ತಾಳ್ಮೆಯಿಂದ ವರ್ತಿಸಿ. ಉದ್ಯೋಗಿಗಳಿಗೆ ಬಡ್ತಿ ಸಿಗುವ ಸಾಧ್ಯತೆ ಹೆಚ್ಚಿದೆ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 7
ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com