ಅಯೋಧ್ಯೆ: ಅಯೋಧ್ಯೆಯ ರಾಮ ಮಂದಿರದ (Ram Mandir) ಗರ್ಭ ಗುಡಿಯಲ್ಲಿ (sanctum sanctorum) ಗುರುವಾರ ಮಧ್ಯಾಹ್ನ ಹೊಸ ರಾಮನ ವಿಗ್ರಹವನ್ನು (Ram Lalla idol) ಇರಿಸಲಾಯಿತು. ಕಪ್ಪು ಕಲ್ಲಿನಲ್ಲಿ ನಿಂತಿರುವ ಭಂಗಿಯ ಐದು ವರ್ಷ ವಯಸ್ಸಿನ ರಾಮಲಲ್ಲಾ ವಿಗ್ರಹದ ಮೊದಲ ಫೋಟೋ (First Phot of Ram Lalla) ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಜನವರಿ 22 ರಂದು ಈ ವಿಗ್ರಹಕ್ಕೆ ಪ್ರಾಣ ಪ್ರತಿಷ್ಠಾಪನೆ ಸಮಾರಂಭ ನಡೆಯಲಿದೆ. ಈ ಧಾರ್ಮಿಕ ವಿಧಿ ವಿಧಾನಗಳಿಗೆ ಪ್ರಧಾನಿ ಮೋದಿ ಅವರು ಮುಖ್ಯ ಯಜಮಾನರಾಗಿದ್ದಾರೆ.
51 ಇಂಚಿನ ಈ ವಿಗ್ರಹವನ್ನು ಕನ್ನಡಿಗ ಮೈಸೂರು ಶಿಲ್ಪಿ ಅರುಣ್ ಯೋಗಿರಾಜ್ ಅವರು ಕೆತ್ತಿದ್ದಾರೆ. ಗುರುವಾರ ಮುಂಜಾನೆ, ರಾಮಲಲ್ಲಾ ಮೂರ್ತಿಯನ್ನು ಗರ್ಭಗುಡಿಯಲ್ಲಿ ಪ್ರಾರ್ಥನೆಯ ಮಂತ್ರಗಳ ನಡುವೆ ಇರಿಸಲಾಯಿತು.
ರಾಮಲಲ್ಲಾನ ಮೂರ್ತಿ ಕೆತ್ತನೆಗಾಗಿ ಸಹಸ್ರ ಸಂಖ್ಯೆಯ ಶಿಲ್ಪಿಗಳ ನಡುವಿನ ತುರುಸಿನ ಸ್ಪರ್ಧೆ ನಡೆದಿತ್ತು. ಇದು ಒಂದು ವರ್ಷದ ಹಿಂದಿನ ಪ್ರಕ್ರಿಯೆ. ಇಲ್ಲಿ ಆಯ್ಕೆಗೊಂಡ ಅಂತಿಮ ಮೂವರಲ್ಲಿ ಒಬ್ಬರಾಗಿದ್ದಾರೆ ಅರುಣ್. ಆ ಮೂವರಲ್ಲಿಯೂ ಅರುಣ್ ಅವರ ಭಾವಕ್ಕೆ ಹಾಗೂ ಕಲ್ಪನೆಗೆ ಮನ್ನಣೆ ದೊರಕಿದೆ ಎಂಬುದೇ ವಿಶೇಷ. ಬೆಂಗಳೂರಿನ ಜಿ.ಎಲ್.ಭಟ್ ಮತ್ತು ರಾಜಸ್ಥಾನದ ಸತ್ಯನಾರಾಯಣ ಪಾಂಡೆ ಆಯ್ಕೆಯಾಗಿದ್ದ ಇನ್ನಿಬ್ಬರು ಮಹಾನ್ ಶಿಲ್ಪಿಗಳು. ಎಲ್ಲರೂ ಒಬ್ಬರಿಗಿಂತ ಒಬ್ಬರು ಮಹಾನ್ ಶಿಲ್ಪಿಗಳು. ಆದರೆ ಉಳಿದಿಬ್ಬರು ರಚಿಸಿದ ಮೂರ್ತಿಗಿಂತಲೂ ಅರುಣ್ ಅವರ ಕೆತ್ತನೆಗೆ ಪ್ರಾಶಸ್ತ್ಯ ಸಿಕ್ಕಿದೆ.
ಅರುಣ್ ಅವರು ರಚನೆ ಆಯ್ಕೆಯಾಗಲು ಮೊದಲ ಕಾರಣವೇ ವಿಗ್ರಹ ಮುಖದಲ್ಲಿನ ತೇಜಸ್ಸು. ಅದರಲ್ಲಿ ಹೆಚ್ಚು ದೈವಿಕ ಭಾವವಿದೆ ಎಂಬುದನ್ನು ತೀರ್ಪುಗಾರರು ಮನಗಂಡಿದ್ದಾರೆ. ಪ್ರಾಣಪ್ರತಿಷ್ಠೆ ಆಗಲಿರುವ ವಿಗ್ರಹವು ಬಾಲ ರಾಮನಾಗಿದೆ ಎಂಬುದು ಇಲ್ಲಿ ಗಮನಾರ್ಹ. ಅಂತೆಯೇ ಅರುಣ್ ಅವರ ಕೆತ್ತನೆಯ ವಿಗ್ರಹದಲ್ಲಿ ಮುಗ್ಧ ಮಗುವಿನ ಸುಂದರ ನೋಟವಿದೆ. ಬಾಲ ರಾಮದೇವರು ಸಾಕ್ಷಾತ್ ಮಂದೆ ನಿಂತಿರುವಂತೆ ಕಾಣುವ ಮೂರ್ತಿಯನ್ನು ಅವರು ಕೆತ್ತಿದ್ದಾರೆ. ಅಲ್ಲದೆ ಹೆಚ್ಚು ನೈಜತೆಯಿಂದ ಕೂಡಿದೆ.
ಅರುಣ್ ಅವರು ಕೆತ್ತಿರುವ ಐದು ವರ್ಷದ ಬಾಲ ರಾಮನ ಮೂರ್ತಿಯ ಕೈಯಲ್ಲಿ ಧನಸ್ಸು ಹಾಗೂ ಬಾಣವಿದೆ. ರಾಮನ ಮೂರ್ತಿಯು 51 ಇಂಚು ಎತ್ತರವಿದ್ದರೆ ಪ್ರಭಾವಳಿ ಸೇರಿದಂತೆ ಒಟ್ಟು ವಿಗ್ರಹ 8 ಅಡಿ ಎತ್ತರ ಹಾಗೂ ಮೂರುವರೆ ಅಡಿ ಅಗಲವಿದೆ. ಇದು ತೇಜಸ್ಸಿನಿಂದ ಕಂಗೊಳಿಸುತ್ತಿದೆ. ಒಟ್ಟಾರೆಯಾಗಿ ಕೋಟ್ಯಂತರ ರಾಮಭಕ್ತರ ಪೂಜೆಗೆ ಅರ್ಹವಾಗಿದೆ ಎಂದು ತೀರ್ಪುಗಾರರು ಅದನ್ನೇ ಆಯ್ಕೆ ಮಾಡಿದ್ದಾರೆ.
अयोध्या में जन्म भूमि स्थित राम- मन्दिर में आज दिन में 12:30 बजे के बाद राममूर्ति का प्रवेश हुआ। दोपहर 1:20 बजे यजमान द्वारा प्रधानसंकल्प होने पर वेदमन्त्रों की ध्वनि से वातावरण मंगलमय हुआ। मूर्ति के जलाधिवास तक के कार्य गुरुवार को संपन्न हुए।
— Shri Ram Janmbhoomi Teerth Kshetra (@ShriRamTeerth) January 18, 2024
दिनांक 19 जनवरी शुक्रवार को प्रातः… pic.twitter.com/F6E9IAoyLM
ಕರುನಾಡಿನ ಕಲ್ಲು
ರಾಮಲಲ್ಲಾ ವಿಗ್ರಹಕ್ಕೆ ಚಾಮರಾಜನಗರ ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ಬುಜ್ಜೆಗೌಡನಪುರ ಗ್ರಾಮದ ಕೃಷ್ಣ ಶಿಲೆ ಬಳಕೆ ಮಾಡಲಾಗಿದೆ. ಕೃಷ್ಣ ಶಿಲೆ ಅತ್ಯಂತ ಶಕ್ತಿಶಾಲಿಯಾಗಿದ್ದು ಆಸಿಡ್ ಹಾಕಿದರೂ ಏನೂ ಆಗುವುದಿಲ್ಲ. ಇದಕ್ಕೆ ಬೆಂಕಿ ತಗುಲುವುದಿಲ್ಲ, ತುಕ್ಕು ಹಿಡಿಯುವುದಿಲ್ಲ. ಮಳೆ, ಗಾಳಿ, ಬಿಸಿಲನ್ನೂ ತಡೆದುಕೊಳ್ಳುವ ಶಕ್ತಿಯ ಕಲ್ಲು ಇದು. ಹಿಂದೆ ಶಂಕರಾಚಾರ್ಯರ ಮೂರ್ತಿಯನ್ನು ಮಾಡಿದ ಎಚ್.ಡಿ.ಕೋಟೆಯ ಕೃಷ್ಣ ಶಿಲೆಯಲ್ಲೇ ಇದನ್ನು ರಚಿಸಲಾಗಿದೆ.
ಎಂಬಿಎ ಪದವೀಧರ ಅರುಣ್
ಶಿಲ್ಪಿ ಅರುಣ್ ಯೋಗಿರಾಜ್ ಅವರು ಎಂಬಿಎ ಪದವೀಧರ. ಶಿಲ್ಪಕಲೆಯೇ ಅವರ ಕುಲಕಸುಬು. ಅವರ ಕುಟುಂಬದ ಐದನೇ ತಲೆಮಾರಿನ ಶಿಲ್ಪಿ. ಅವರು 2008ರಿಂದ ಇಲ್ಲಿಯವರೆಗೆ 1000ಕ್ಕೂ ಹೆಚ್ಚು ವಿಗ್ರಹಗಳನ್ನು ಕೆತ್ತನೆ ಮಾಡಿದ್ದಾರೆ
ಈ ಸುದ್ದಿಯನ್ನೂ ಓದಿ: Ram Mandir: ಆಸ್ಟ್ರೇಲಿಯಾದ ಪರ್ತ್‌ನಲ್ಲಿ ನಿರ್ಮಾಣವಾಗಲಿದೆ ಜಗತ್ತಿನ ಅತಿ ಎತ್ತರದ ರಾಮ ಮಂದಿರ!