Site icon Vistara News

Ram Mandir: ಕನ್ನಡಿಗ ಕೆತ್ತಿದ ರಾಮಲಲ್ಲಾ ಹೇಗಿದ್ದಾನೆ? ಮೂರ್ತಿಯ ಮೊದಲ ಫೋಟೊ ಇಲ್ಲಿದೆ

Ram Lalla

Ayodhya Ram Mandir: What Is Pran Pratishtha? What is it's Importance?

ಅಯೋಧ್ಯೆ: ಮೈಸೂರಿನ ಹೆಮ್ಮೆಯ ಶಿಲ್ಪಿ ಅರುಣ್‌ ಯೋಗಿರಾಜ್‌ (Arun Yogiraj) ಕೆತ್ತಿದ ರಾಮಲಲ್ಲಾನ ಮೂರ್ತಿಯು (Ram Lalla Idol) ಅಯೋಧ್ಯೆಯ ರಾಮಮಂದಿರದ (Ram Mandir) ಗರ್ಭಗುಡಿ ಪ್ರವೇಶಿಸಿದೆ. ಪ್ರಾಣಪ್ರತಿಷ್ಠಾಪನೆಗೂ ಮುಂಚಿನ ವಿಧಿವಿಧಾನಗಳ ಭಾಗವಾಗಿ ಗರ್ಭಗುಡಿಯಲ್ಲಿ ರಾಮಲಲ್ಲಾನ ಮೂರ್ತಿಯನ್ನು ಇರಿಸಲಾಗಿದೆ. ಈಗ ಇದೇ ಮೊದಲ ಬಾರಿಗೆ ರಾಮಲಲ್ಲಾ ಮೂರ್ತಿಯ ಚಿತ್ರವನ್ನು ಬಿಡುಗಡೆ ಮಾಡಲಾಗಿದೆ. ರಾಮಲಲ್ಲಾನ ಮೂರ್ತಿಯನ್ನು ನೋಡಿದ ಭಕ್ತರು ಪುಳಕಿತರಾಗಿದ್ದಾರೆ.

ರಾಮಮಂದಿರದ ಗರ್ಭಗುಡಿಯಲ್ಲಿ ಶುಕ್ರವಾರ ರಾಮಲಲ್ಲಾ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ಇದಾದ ಬಳಿಕ ಅಗ್ನಿ ಸ್ಥಾಪನೆ, ನವಗ್ರಹ ಸ್ಥಾಪನೆ ನಡೆಯಲಿದೆ. ಹಾಗೆಯೇ, ವಿಶೇಷ ಹವನಕ್ಕೂ ಸಿದ್ಧತೆ ಮಾಡಿಕೊಳ್ಳಲಾಗಿದೆ. ವೈದಿಕ ಮಂತ್ರಗಳನ್ನು ಪಠಿಸುವ ಮೂಲಕ ವಿಶೇಷ ಹವನ ಮಾಡಲಾಗುತ್ತದೆ. ಆ ಮೂಲಕ ರಾಮಮಂದಿರದ ಗರ್ಭಗುಡಿಯಲ್ಲಿ ಧಾರ್ಮಿಕ ವಾತಾವರಣ ಹಾಗೂ ಸಕಾರಾತ್ಮಕ ಅಂಶಗಳು ಒಡಮೂಡಲಿ ಎಂಬುದು ಅರ್ಚಕರ ಉದ್ದೇಶವಾಗಿದೆ ಎಂದು ತಿಳಿದುಬಂದಿದೆ.

ಅಯೋಧ್ಯೆಯಲ್ಲಿ ಹೈ ಸೆಕ್ಯುರಿಟಿ

ರಾಮಮಂದಿರ ಲೋಕಾರ್ಪಣೆಯ ದಿನ ಉತ್ತರ ಪ್ರದೇಶ ಪೊಲೀಸರು ಹಾಗೂ ಪ್ಯಾರಾ ಮಿಲಿಟರಿ ಸಿಬ್ಬಂದಿ ಸೇರಿ ಒಟ್ಟು 11 ಸಾವಿರ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತದೆ. ಇದರ ಜತೆಗೆ ಹೆಚ್ಚಿನ ನಿಗಾ ಇರಿಸಲು, ಪ್ರತಿಯೊಂದು ಚಲನವಲನಗಳನ್ನು ಗಮನಿಸಲು ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಬಳಸಿಕೊಳ್ಳಲಾಗುತ್ತದೆ. ರಾಮಮಂದಿರ ಆವರಣಕ್ಕೆ ಪದೇಪದೆ ಬರುವವರು, ಹಾಗೆ ಬರುವವರ ಚಲನವಲನ, ಯಾವುದೇ ಶಂಕಾಸ್ಪದ ವರ್ತನೆ ಕಂಡುಬಂದರೆ ಕೂಡಲೇ ಕೃತಕ ಬುದ್ಧಿಮತ್ತೆ ತಂತ್ರಜ್ಞಾನವು ಸ್ವಯಂಚಾಲಿತವಾಗಿ ಅಲರ್ಟ್‌ ನೀಡುತ್ತದೆ. ಅದರಂತೆ ಭದ್ರತಾ ಸಿಬ್ಬಂದಿಯು ಕಾರ್ಯಪ್ರವೃತ್ತರಾಗುತ್ತಾರೆ.

ಇದನ್ನೂ ಓದಿ: Ram Mandir: ಮಂದಿರ ಕನಸು ನನಸು; ಪೇಟ ತೊಟ್ಟು 500 ವರ್ಷಗಳ ಶಪಥ ಕೈಬಿಟ್ಟ ಠಾಕೂರರು!

ರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮಕ್ಕೆ 55 ದೇಶಗಳಿಂದ ಸುಮಾರು 100ಕ್ಕೂ ಅಧಿಕ ಗಣ್ಯರು ಅಯೋಧ್ಯೆಗೆ ಆಗಮಿಸಲಿದ್ದಾರೆ. ಜರ್ಮನಿ, ಫಿಜಿ, ಫಿನ್‌ಲ್ಯಾಂಡ್‌, ಅಮೆರಿಕ, ಬ್ರಿಟನ್‌, ಜರ್ಮನಿ, ಇಂಡೋನೇಷ್ಯಾ, ಐರ್ಲೆಂಡ್‌, ಜಪಾನ್‌, ಕೀನ್ಯಾ, ಕೊರಿಯಾ, ಮಾರಿಷಸ್‌, ನಾರ್ವೆ ಸೇರಿ 55 ದೇಶಗಳ ಗಣ್ಯರು ರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಸಿಂಗಾಪುರ, ಸ್ಪೇನ್‌, ಶ್ರೀಲಂಕಾ, ಜಾಂಬಿಯಾ, ವಿಯೇಟ್ನಾಂ, ಉಗಾಂಡ, ವೆಸ್ಟ್‌ ಇಂಡೀಸ್‌ ದೇಶಗಳ ನಾಯಕರು ಕೂಡ ಪಟ್ಟಿಯಲ್ಲಿದ್ದಾರೆ. ವಿದೇಶಗಳಿಂದ ಆಗಮಿಸುವ ಎಲ್ಲ ಗಣ್ಯರು ಜನವರಿ 21ರಂದೇ ಅಯೋಧ್ಯೆಗೆ ತೆರಳಲಿದ್ದಾರೆ. ಅವರಿಗಾಗಿ ಸಕಲ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version