Kumbh Mela | ಕೆ.ಆರ್‌.ಪೇಟೆ ತ್ರಿವೇಣಿ ಸಂಗಮದಲ್ಲಿ‌ ಗಂಗಾರತಿ ಸಂಪನ್ನ - Vistara News

ಕರ್ನಾಟಕ

Kumbh Mela | ಕೆ.ಆರ್‌.ಪೇಟೆ ತ್ರಿವೇಣಿ ಸಂಗಮದಲ್ಲಿ‌ ಗಂಗಾರತಿ ಸಂಪನ್ನ

ಕೆ.ಆರ್.ಪೇಟೆ ತಾಲೂಕಿನ ಅಂಬಿಗರ ಹಳ್ಳಿಯಲ್ಲಿ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಅವರ ನೇತೃತ್ವದಲ್ಲಿ ವಾರಾಣಸಿಯಿಂದ ಬಂದಿರುವ ಆಗಮಿಕರು ಗಂಗಾರತಿ ಸಲ್ಲಿಸಿದರು.

VISTARANEWS.COM


on

Kumbh Mela
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಡ್ಯ: ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಅಂಬಿಗರ ಹಳ್ಳಿ ಬಳಿಯ ತ್ರಿವೇಣಿ ಸಂಗಮದಲ್ಲಿ‌ ಹಮ್ಮಿಕೊಂಡಿರುವ ದಕ್ಷಿಣ ಭಾರತದ ಮಹಾ ಕುಂಭಮೇಳದ (Kumbh Mela) ಎರಡನೇ ದಿನ ಶುಕ್ರವಾರ ವಿಶೇಷ ಗಂಗಾರತಿ ನೆರವೇರಿಸಲಾಯಿತು.

ಉತ್ತರ ಪ್ರದೇಶದ ವಾರಾಣಸಿ(ಕಾಶಿ) ಮಾದರಿಯಲ್ಲಿ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಅವರ ನೇತೃತ್ವದಲ್ಲಿ ವಾರಾಣಸಿಯಿಂದ ಬಂದಿರುವ ಆಗಮಿಕರು, ಹೇಮಾವತಿ, ಲಕ್ಷ್ಮಣ ತೀರ್ಥ, ಕಾವೇರಿ ನದಿಯ ಸಂಗಮದಲ್ಲಿ ವಿಶೇಷ ಗಂಗಾರತಿ ಸಲ್ಲಿಸಿದರು. ಈ ಮೂಲಕ ಕುಂಭ ಮೇಳದ ಎರಡನೇ ದಿನದ ಪೂಜಾ ಕಾರ್ಯಗಳು ಸಮಾಪ್ತಗೊಂಡವು. ಇದಕ್ಕೂ ಮುನ್ನ ಬೆಳಗ್ಗೆ ದಕ್ಷಿಣ ಭಾರತದ ಮಹಾ ಕುಂಭಮೇಳವನ್ನು ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಉದ್ಘಾಟಿಸಿದ್ದರು.

ಇದನ್ನೂ ಓದಿ | Kumbhamela | ಜಲಕ್ಕೆ ಕೃತಜ್ಞತೆ ಸಲ್ಲಿಸೋಣ; ನೀರಿನ ಮಹತ್ವ ಬಗ್ಗೆ ಪಾಠ ಮಾಡಿದ ಡಾ. ವೀರೇಂದ್ರ ಹೆಗ್ಗಡೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

CET Exam: ಸಿಇಟಿ ಕೀ ಉತ್ತರಗಳು ಪ್ರಕಟ, ಪಠ್ಯೇತರ ಪ್ರಶ್ನೆಗಳ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ

CET Exam: ಸರ್ಕಾರ ರಚಿಸಿದ್ದ ವಿಷಯವಾರು ಪ್ರತ್ಯೇಕ ತಜ್ಞರ ಸಮಿತಿಯ ಅಭಿಪ್ರಾಯ ಆಧರಿಸಿ ಸಿಇಟಿ ಮರುಪರೀಕ್ಷೆ ನಡೆಸದೇ ಇರಲು ಹಾಗೂ ತಪ್ಪಾದ ಪ್ರಶ್ನೆಗಳಿಗೆ ಗ್ರೇಸ್ ಮಾರ್ಕ್ಸ್ ನೀಡಲು ಉನ್ನತ ಶಿಕ್ಷಣ ಇಲಾಖೆ ನಿರ್ಧರಿಸಿದೆ.

VISTARANEWS.COM


on

CET exam 2024
Koo

ಬೆಂಗಳೂರು: ಸಿಇಟಿ ಪರೀಕ್ಷೆಯಲ್ಲಿ (CET exam 2024) ಪಠ್ಯೇತರ ಪ್ರಶ್ನೆಗಳಿಂದ ಉಂಟಾಗಿದ್ದ ಗೊಂದಲವನ್ನು ಸರ್ಕಾರ ಪರಿಹರಿಸಿದೆ. ಇದರ ಬೆನ್ನಲ್ಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಯುಜಿಸಿಇಟಿ -2024ರ ನಾಲ್ಕು ವಿಷಯದ ಪರೀಕ್ಷೆಗಳಿಗೆ ತಾತ್ಕಾಲಿಕ ಸರಿ ಉತ್ತರಗಳನ್ನು (Key Answers) ಪ್ರಕಟಿಸಿದೆ.

ಮೇ 7ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ, ರಸಾಯನ ಶಾಸ್ತ್ರ, ಭೌತಶಾಸ್ತ್ರ, ಗಣಿತ ಮತ್ತು ಜೀವಶಾಸ್ತ್ರ ವಿಷಯಗಳ ಪ್ರಶ್ನೆ ಪತ್ರಿಕೆಯಲ್ಲಿ ಪಠ್ಯದಿಂದ ಹೊರತಾದ 50 ಪ್ರಶ್ನೆಗಳನ್ನು ಕೇಳಿದ್ದು, ಇವುಗಳನ್ನು ಕೀ ಉತ್ತರದ ಪಟ್ಟಿಯಿಂದ ಕೈ ಬಿಡಲಾಗಿದೆ. ಉಳಿದ 190 ಪ್ರಶ್ನೆಗಳಿಗೆ ಕೀ ಉತ್ತರಗಳನ್ನು ಪ್ರಾಧಿಕಾರದ kea.kar.nic.in ವೆಬ್ಸೈಟ್‌ನನಲ್ಲಿ ಪ್ರಕಟಿಸಲಾಗಿದೆ. ಇವುಗಳಿಗೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಪ್ರಾಧಿಕಾರದ ಆನ್ಲೈನ್ ಪೋರ್ಟಲ್‌ ಮೂಲಕ ಏಪ್ರಿಲ್ 30ರಂದು ಬೆಳಗ್ಗೆ 11ರಿಂದ ಮೇ 7ರ ಬೆಳಗ್ಗೆ 11ರೊಳಗೆ ವಿದ್ಯಾರ್ಥಿಗಳು ಮತ್ತು ಪೋಷಕರು ಆಕ್ಷೇಪಣೆ ಸಲ್ಲಿಸಬಹುದಾಗಿದೆ ಎಂದು ಪ್ರಾಧಿಕಾರ ತಿಳಿಸಿದೆ.

ಈ ಮೂಲಕ ಸಿಇಟಿ ಪರೀಕ್ಷೆಯಲ್ಲಿ ಪಠ್ಯೇತರ ಪ್ರಶ್ನೆಗಳನ್ನು ಕೇಳಿ ಉಂಟಾಗಿದ್ದ ಗೊಂದಲ, ಮರುಪರೀಕ್ಷೆಗಳ ಆತಂಕ ಬಗೆಹರಿದಿದೆ. ಸರ್ಕಾರ ರಚಿಸಿದ್ದ ವಿಷಯವಾರು ಪ್ರತ್ಯೇಕ ತಜ್ಞರ ಸಮಿತಿಯ ಅಭಿಪ್ರಾಯ ಆಧರಿಸಿ ಸಿಇಟಿ ಮರುಪರೀಕ್ಷೆ ನಡೆಸದೇ ಇರಲು ಹಾಗೂ ತಪ್ಪಾದ ಪ್ರಶ್ನೆಗಳಿಗೆ ಗ್ರೇಸ್ ಮಾರ್ಕ್ಸ್ ನೀಡಲು ಉನ್ನತ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಇದೇ ವೇಳೆ ಇನ್ನು ಮುಂದೆ ಸಿಇಟಿ ಪ್ರಶ್ನೆ ಪತ್ರಿಕೆಯಲ್ಲಿ ಈ ರೀತಿಯ ಲೋಪಗಳಾಗದಂತೆ ಎಚ್ಚರ ವಹಿಸಲು ನಿರ್ದೇಶನ ನೀಡಲಾಗಿದೆ.

ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ) ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಯಿಂದ ಏ.18 ಮತ್ತು 19ರಂದು ನಡೆಸಲಾಗಿತ್ತು. ರಸಾಯನ ಶಾಸ್ತ್ರ ವಿಷಯದಲ್ಲಿ 6, ಭೌತಶಾಸ್ತ್ರ ವಿಷಯದಲ್ಲಿ 5, ಪ್ರಶ್ನೆಗಳು, ಜೀವಶಾಸ್ತ್ರ ಪರೀಕ್ಷೆಯಲ್ಲಿ 11 ಪ್ರಶ್ನೆಗಳು, ಗಣಿತದಲ್ಲಿ 9 ಪ್ರಶ್ನೆಗಳು ಪಠ್ಯಕ್ರಮದಿಂದ ಹೊರತಾಗಿದ್ದವು.

ಇದನ್ನೂ ಓದಿ: CET Exam: ಸಿಇಟಿ ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಭಾರೀ ಗೊಂದಲ, ದೂರು ನೀಡಲು ಏ.27ರವರೆಗೆ ಕಾಲಾವಕಾಶ

Continue Reading

ಕರ್ನಾಟಕ

Karnataka Weather: ಮನೆಯಿಂದ ಹೊರ ಹೋಗುವ ಮುನ್ನ ಎಚ್ಚರ; ಮೇ 3ರವರೆಗೆ ಹೆಚ್ಚಿರಲಿದೆ ಶಾಖದ ಅಲೆಗಳ ತೀವ್ರತೆ!

Karnataka Weather: ಮೇ 3ರವರೆಗೆ ಬೀದರ್, ಕಲಬುರ್ಗಿ, ವಿಜಯಪುರ ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

VISTARANEWS.COM


on

Karnataka weather
Koo

ಬೆಂಗಳೂರು: ರಾಜ್ಯದಲ್ಲಿ ಏ.30ರಂದು ಮಂಗಳವಾರ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಮಂಡ್ಯ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಖದ ಅಲೆಗಳ ತೀವ್ರತೆ (Heat wave) ಹೆಚ್ಚಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ರಾಜ್ಯದಾದ್ಯಂತ ಏ.30ರಿಂದ ಮೇ 5ರವರೆಗೆ ಒಣ ಹವೆ ಇರಲಿದೆ. ಅದೇ ರೀತಿ ಮೇ 6ರಂದು ಮಂಡ್ಯ ಜಿಲ್ಲೆಯ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕೊಡಗು, ಹಾಸನ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳ ಕೆಲವೆಡೆ ಹಗರು ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ತಿಳಿಸಿದೆ.

ಶಾಖದ ಅಲೆಯ ಎಚ್ಚರಿಕೆ

ಮೇ 3ರವರೆಗೆ ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಮಂಡ್ಯ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ.

ತಾಪಮಾನದ ಮುನ್ಸೂಚನೆ

ಮೇ 3ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳವರೆಗೆ ಬಾಗಲಕೋಟೆ, ಕಲಬುರಗಿ, ಬೆಳಗಾವಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಬೆಚ್ಚನೆಯ ರಾತ್ರಿಯ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳವರೆಗೆ ರಾಜ್ಯದಾದ್ಯಂತ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಇಲ್ಲ.

ಇದನ್ನೂ ಓದಿ | Karnataka Weather: ರಾಜ್ಯದಲ್ಲಿ ಮೇ 2ರವರೆಗೆ ಬಿಸಿಗಾಳಿ ತೀವ್ರತೆ ಹೆಚ್ಚಳ; ಆರೆಂಜ್‌ ಅಲರ್ಟ್‌ ಘೋಷಣೆ

ಮುಂದಿನ 48 ಗಂಟೆಗಳ ಕಾಲ ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 37°C ಮತ್ತು 23°C ಇರುವ ಸಾಧ್ಯತೆ ಇದೆ.

Continue Reading

ಸಂಪಾದಕೀಯ

ವಿಸ್ತಾರ ಸಂಪಾದಕೀಯ: ಸ್ತ್ರೀಯರ ಘನತೆಗೆ ಹಾನಿ ಎಸಗಿದವರಿಗೆ ಕಠಿಣ ಶಿಕ್ಷೆಯಾಗಲಿ

ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಮಾಡಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ನೀಡಿದ ದೂರಿನ ಅನ್ವಯ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಆರೋಪ ಸಾಬೀತಾದರೆ ಏಳು ವರ್ಷದವರೆಗೂ ಜೈಲು ಶಿಕ್ಷೆ ಹಾಗೂ ದಂಡ ಆಗಬಹುದು. ತನ್ನ ಮೇಲೆ ರೇಪ್‌ ನಡೆದಿದೆ ಎಂದು ಆರೋಪ ನೀಡಿದವರು ಬಲವಾಗಿ ಕೋರ್ಟ್‌ನಲ್ಲಿ ವಾದಿಸಿದರೆ ಆರೋಪಿಯನ್ನು ಯಾರೂ ಕಾಪಾಡಲಾರರು. ಆದರೆ ಅಧಿಕಾರದಲ್ಲಿ ಇರುವವರ ಮುಂದೆ ಬಡ ಆರೋಪಿಗಳು ನಿಲ್ಲಲು ಸಾಧ್ಯವೇ ಎಂಬುದೇ ಆತಂಕದ ಪ್ರಶ್ನೆ.

VISTARANEWS.COM


on

Vistara Editorial
Koo

ಹಾಸನದಲ್ಲಿ ಹುಟ್ಟಿಕೊಂಡು ರಾಜ್ಯಾದ್ಯಂತ, ದೇಶಾದ್ಯಂತ ಸುದ್ದಿಯಾಗುತ್ತಿರುವ ಲೈಂಗಿಕ ದೌರ್ಜನ್ಯದ ಅಶ್ಲೀಲ ವಿಡಿಯೋಗಳ ಪೆನ್‌ಡ್ರೈವ್‌ ಪ್ರಕರಣ ಈಗಾಗಲೇ ಸಾಕಷ್ಟು ರಾಜಕೀಯ ಕೋಲಾಹಲ ಎಬ್ಬಿಸಿದೆ. ಈ ಪ್ರಕರಣವನ್ನು ಸಾರ್ವಜನಿಕಗೊಳಿಸಿದ ಸಂದರ್ಭ, ಇದರ ಹಿಂದೆ ಮುಂದೆ ಇರುವ ರಾಜಕೀಯ ಲೆಕ್ಕಾಚಾರಗಳು, ಈಗ ನಡೆಯುತ್ತಿರುವ ಪ್ರತಿಭಟನೆಗಳು, ಎಲ್ಲವೂ ಕುತೂಹಲಕರವಾಗಿವೆ. ಆರೋಪಿ ಎನಿಸಿಕೊಂಡಿರುವ ಹಾಸನದ ಸಂಸದ ಪ್ರಜ್ವಲ್‌ ರೇವಣ್ಣ, ಈಗಾಗಲೇ ದೇಶ ಬಿಟ್ಟು ಜರ್ಮನಿಗೆ ತೆರಳಿದ್ದಾರೆ. “ತನಿಖೆಗೆ ಕರೆದಾಗ ಬರುತ್ತಾರೆ” ಎಂದು ಅವರ ತಂದೆ ಎಚ್‌ಡಿ ರೇವಣ್ಣ ಹೇಳಿದ್ದಾರೆ. ಆದರೆ ಬಹುಶಃ ನಿರೀಕ್ಷಣಾ ಜಾಮೀನು ದೊರೆಯುವವರೆಗೂ ಪ್ರಜ್ವಲ್‌ ಮರಳುವುದು ಅನುಮಾನವೇ ಅನಿಸುತ್ತದೆ. “ತನಿಖೆ ನಡೆಯಲಿ, ತಪ್ಪು ಮಾಡಿದ್ದರೆ ಶಿಕ್ಷೆಯಾಗಲಿ” ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ. ಇದು ಎಲ್ಲರ ಮಾತೂ ಹೌದು.

ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಮಾಡಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ನೀಡಿದ ದೂರಿನ ಅನ್ವಯ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಐಪಿಸಿ ಸೆಕ್ಷನ್ 354A, 354D, 506, 509 ಅಡಿ ಕೇಸ್‌ ದಾಖಲಾಗಿದ್ದು, ಆರೋಪ ಸಾಬೀತಾದರೆ ಏಳು ವರ್ಷದವರೆಗೂ ಜೈಲು ಶಿಕ್ಷೆ ಹಾಗೂ ದಂಡ ಆಗಬಹುದು. ತನ್ನ ಮೇಲೆ ರೇಪ್‌ ನಡೆದಿದೆ ಎಂದು ಆರೋಪ ನೀಡಿದವರು ಬಲವಾಗಿ ಕೋರ್ಟ್‌ನಲ್ಲಿ ವಾದಿಸಿದರೆ ಆರೋಪಿಯನ್ನು ಯಾರೂ ಕಾಪಾಡಲಾರರು. ಆದರೆ ಶ್ರೀಮಂತರು, ಪ್ರಭಾವಿಗಳು ಹಾಗೂ ಅಧಿಕಾರದಲ್ಲಿ ಇರುವವರ ಮುಂದೆ ಬಡ ಆರೋಪಿಗಳು ನಿಲ್ಲಲು ಸಾಧ್ಯವೇ? ಇದು ಕಾನೂನು ಹಾಗೂ ನ್ಯಾಯಾಂಗದ ಪಾರದರ್ಶಕತೆ, ತನಿಖಾ ಸಂಸ್ಥೆಗಳ ಪ್ರಾಮಾಣಿಕತೆ ಹಾಗೂ ಸಾಕ್ಷಿಗಳನ್ನು ಕಲೆಹಾಕುವ ಪರಿಶ್ರಮ ಇವುಗಳನ್ನೆಲ್ಲ ಅವಲಂಬಿಸಿದೆ.

ಪ್ರಕರಣದ ತನಿಖೆಗಾಗಿ ಎಸ್‌ಐಟಿ ರಚನೆಗೆ ಸಿಎಂ ಸಿದ್ದರಾಮಯ್ಯ ಅವರು ಆದೇಶಿಸಿದ್ದು, ಅಧಿಕೃತವಾಗಿ ಎಡಿಜಿಪಿ ಬಿ.ಕೆ. ಸಿಂಗ್ ನೇತೃತ್ವದಲ್ಲಿ ಎಸ್‌ಐಟಿ ರಚಿಸಲಾಗಿದೆ. ಇದರಲ್ಲಿ ಇಬ್ಬರು ಮಹಿಳಾ ಐಪಿಎಸ್‌ ಅಧಿಕಾರಿಗಳು ಇದ್ದಾರೆ. ಎಡಿಜಿಪಿ ಬಿ.ಕೆ. ಸಿಂಗ್ ಎಸ್‌ಐಟಿ ಮುಖ್ಯಸ್ಥರಾಗಿದ್ದು, ಎಸ್‌ಪಿ ಸುಮನ್ ಡಿ ಪನ್ನೇಕರ್, ಎಸ್‌ಪಿ ಸೀಮಾ ಲಾಟ್ಕರ್ ಸದಸ್ಯರಾಗಿದ್ದಾರೆ. ಸಿಐಡಿಯಲ್ಲಿ ಎಡಿಜಿಪಿಯಾಗಿರುವ ಬಿ.ಕೆ ಸಿಂಗ್ ಅವರು, ಈ ಹಿಂದೆ ಗೌರಿ ಲಂಕೇಶ್ ಕೊಲೆ ಕೇಸ್‌ ತನಿಖೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಪ್ರಭಾವಿ ರಾಜಕಾರಣಿಗಳು ಅನೇಕ ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿರುವ ಬಗ್ಗೆ ಚಿತ್ರೀಕರಣ ಮಾಡಿದ ವ್ಯಕ್ತಿಗಳು ಮತ್ತು ಅದನ್ನು ಸಾರ್ವಜನಿಕ ಪಡಿಸಿದ ವ್ಯಕ್ತಿಗಳನ್ನು ತನಿಖೆಗೆ ಒಳಪಡಿಸುವ ಮೂಲಕ ಮಹಿಳೆಯರ ಘನತೆ ಹಾಗೂ ಅಸ್ತಿತ್ವಕ್ಕೆ ಹಾನಿ ಉಂಟು ಮಾಡುತ್ತಿರುವವರನ್ನು ಶೀಘ್ರವಾಗಿ ಪತ್ತೆಹಚ್ಚಿ ಆರೋಪಿಗಳ ವಿರುದ್ಧ ಕಠಿಣ ಕಾನೂನಾತ್ಮಕ ಕ್ರಮ ಕೈಗೊಳ್ಳುವಂತೆ ರಾಜ್ಯ ಮಹಿಳಾ ಆಯೋಗ ಕೋರಿದೆ. ಮಹಿಳಾ ಸಂಘಟನೆಗಳು, ಮಹಿಳಾ ಹಕ್ಕುಗಳ ಆಯೋಗ ಕೂಡ ಈ ಪ್ರಕರಣದ ಆರೋಪಿಗಳ ಹೆಡೆಮುರಿ ಕಟ್ಟಲು ಒತ್ತಾಯಿಸಿ ಪ್ರತಿಭಟನೆಗಳನ್ನು ನಡೆಸಿದೆ.

ಇದೆಲ್ಲವೂ ಒಂದು ಕಡೆಗಾದರೆ, ಪ್ರಕರಣದ ಇನ್ನೊಂದು ಆಯಾಮವನ್ನೂ ನೋಡಬೇಕು. ಲೈಂಗಿಕ ಕಿರುಕುಳದ ವಿಡಿಯೋಗಳನ್ನು ಹಾದಿಬೀದಿಯಲ್ಲಿ ಎಲ್ಲರಿಗೂ ಸಿಗುವಂತೆ ಹಂಚಿದವರು ಯಾರು? ಯಾಕೆ ಅದನ್ನು ಚುನಾವಣೆಯ ಸಂದರ್ಭದಲ್ಲಿಯೇ ಹೊರಬಿಡಲಾಯಿತು? ಜೆಡಿಎಸ್‌ ಹಾಗೂ ಬಿಜೆಪಿ ಪಕ್ಷಗಳು ರಾಜಕೀಯ ಮೈತ್ರಿ ಮಾಡಿಕೊಂಡಿರುವ ಸಮಯವನ್ನೇ ಆಯ್ದುಕೊಂಡು ಈ ವಿಡಿಯೋಗಳನ್ನು ಹರಿದಾಡುವಂತೆ ಮಾಡುವ ಹಿನ್ನೆಲೆಯಲ್ಲಿ ಚುನಾವಣಾ ಅಭ್ಯರ್ಥಿಯೊಬ್ಬರ ಸೋಲಿಗಾಗಿ ನಡೆಸಿದ ಸಂಚು ಕೂಡ ಇಲ್ಲವೇ? ಇದು ಸಮಯಸಾಧಕತನವಲ್ಲ, ಇದರ ಹಿಂದೆ ರಾಜಕೀಯ ಇಲ್ಲ ಎನ್ನುವುದು ತೀರಾ ಮುಗ್ಧತೆಯೂ ಅಲ್ಲ, ಭಂಡತನವಾಗುತ್ತದೆ. ಆರೋಪಿಗಳಿಗೆ ಶಿಕ್ಷೆಯಾಗಬೇಕು ನಿಜ; ಆದರೆ ಸಂತ್ರಸ್ತ ಅಮಾಯಕ ಮಹಿಳೆಯರ ಗುರುತನ್ನು ಸಾರ್ವಜನಿಕಗೊಳಿಸಿದವರೂ ಆರೋಪಿಗಳೇ ಅಲ್ಲವೇ? ಅವರಿಗೂ ಶಿಕ್ಷೆಯಾಗಬೇಕಿದೆ. ಇದು ಮಹಿಳೆಯ ಘನತೆಗೆ ಕುಂದು ತರುವ ಸಂಚು.

ಘಟನೆಯ ಹಿನ್ನೆಲೆಯಲ್ಲಿ ಜೆಡಿಎಸ್‌ ಪಕ್ಷದೊಳಗೆ ಪ್ರಜ್ವಲ್‌ ರೇವಣ್ಣ ಅವರ ವಿರುದ್ಧ ಯಾವ ಕ್ರಮ ತೆಗೆದುಕೊಳ್ಳುತ್ತಾರೋ ತಿಳಿಯದು. ಅದು ಪಕ್ಷದ ಆಂತರಿಕ ವಿಚಾರ. ಪಕ್ಷದಿಂದ ಅವರ ಉಚ್ಚಾಟನೆಗೆ ತೀರ್ಮಾನಿಸಲಾಗಿದೆ ಎಂದು ಎಚ್‌ಡಿಕೆ ಹೇಳಿದ್ದಾರೆ. ಹಾಗೆ ಆದರೆ ಪಕ್ಷ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ ಎನ್ನಬೇಕು. ಬಿಜೆಪಿ ಕೂಡ ಜೆಡಿಎಸ್‌ ಜೊತೆಗೆ ಮೈತ್ರಿ ಮಾಡಿಕೊಂಡಿರುವುದರಿಂದ, ಪ್ರಕರಣದ ಬಗ್ಗೆ ಬಿಜೆಪಿ ನಾಯಕರ ನಿಲುವು ಏನಿದೆ ಎಂದು ಸಾರ್ವಜನಿಕರು ತಿಳಿಯಲು ಬಯಸಿದರೆ ತಪ್ಪಾಗದು. ಹಾಗೆಯೇ ಹಾಸನ ಲೋಕಸಭೆ ಕ್ಷೇತ್ರದ ಮತದಾರರ ಮನಸ್ಸಿನಲ್ಲಿ ಈ ಪ್ರಕರಣ ಯಾವ ರೀತಿ ಕೆಲಸ ಮಾಡಿದೆ, ಫಲಿತಾಂಶ ಹೇಗಿದ್ದೀತು ಎಂದು ತಿಳಿಯುವುದಕ್ಕೆ ಫಲಿತಾಂಶದವರೆಗೂ ಕಾಯಬೇಕಾದೀತು. ಬಿಕೆ ಸಿಂಗ್‌ ನೇತೃತ್ವದ ಎಸ್‌ಐಟಿ ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ಪ್ರಕರಣ ತಾರ್ಕಿಕ ಕೊನೆ ಮುಟ್ಟಬಹುದು. ತನಿಖೆ ನಡೆದು ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ ಎಂದು ಹಾರೈಸೋಣ.

ಇದನ್ನೂ ಓದಿ: DK Shivakumar: ಪ್ರಜ್ವಲ್‌ ರೇವಣ್ಣ ಪ್ರಕರಣದ ಬಗ್ಗೆ ಬಿಜೆಪಿ ನಿಲುವೇನು; ಶಿವಕುಮಾರ್ ಪ್ರಶ್ನೆ

Continue Reading

ಉತ್ತರ ಕನ್ನಡ

Honnavar News: ಮಕ್ಕಳಿಗೆ ಉತ್ತಮ ಶಿಕ್ಷಣದ ಜತೆಗೆ ಸಂಸ್ಕಾರವೂ ಬೇಕು: ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ

Honnavar News: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಶ್ರೀ ಸ್ವರ್ಣವಲ್ಲಿ ರಾಮ ಕ್ಷತ್ರಿಯ ಪರಿಷದ್ ಹಾಗೂ ರಾಮಕ್ಷತ್ರಿಯ ಸಂಘದಿಂದ ಆಯೋಜಿಸಿದ್ದ ಸಾಮೂಹಿಕ ಉಪನಯನ ಕಾರ್ಯಕ್ರಮದಲ್ಲಿ ಸ್ವರ್ಣವಲ್ಲೀ ಮಠದ ಶ್ರೀ ಶ್ರೀಮದ್ ಗಂಗಾಧರೇಂದ್ರ ಸರಸ್ವತಿ ಮಹಾಸ್ವಾಮಿಗಳು ಆಶೀರ್ವಚನ ನೀಡಿದರು.

VISTARANEWS.COM


on

Honnavar News
Koo

ಹೊನ್ನಾವರ: ಮಕ್ಕಳಿಗೆ ಚಿಕ್ಕಂದಿನಿಂದಲೇ ಉತ್ತಮ ಶಿಕ್ಷಣದ ಜತೆಗೆ ಉತ್ತಮ ಸಂಸ್ಕಾರ ದೊರೆತಾಗ, ಆ ಮಗು ಸಮಾಜದಲ್ಲಿ ಸತ್ಪ್ರಜೆಯಾಗಿ ರೂಪುಗೊಳ್ಳಲು ಸಾಧ್ಯ. ಹಾಗೆಯೇ ಉಪನಯನವನ್ನು ಕೂಡ ಚಿಕ್ಕ ವಯಸ್ಸಿನಲ್ಲಿ ಮಾಡುವುದರಿಂದ ಹೆಚ್ಚಿನ ಫಲ ಪ್ರಾಪ್ತಿಯಾಗುತ್ತದೆ. ಅದೇ ರೀತಿ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡುವ ಮೂಲಕ, ಸಂಸ್ಕಾರಯುತ ಸಮಾಜ ನಿರ್ಮಾಣದ ಜವಾಬ್ದಾರಿ ಕೂಡ ಪಾಲಕರ ಮೇಲಿದೆ ಎನ್ನುವುದನ್ನು ಅರಿಯಬೇಕಾಗಿದೆ ಎಂದು ಸ್ವರ್ಣವಲ್ಲೀ ಮಠದ ಮಠಾಧೀಶರಾದ ಶ್ರೀ ಶ್ರೀಮದ್ ಗಂಗಾಧರೇಂದ್ರ ಸರಸ್ವತಿ ಮಹಾಸ್ವಾಮಿಗಳು ತಿಳಿಸಿದರು.

ಪಟ್ಟಣದಲ್ಲಿ ಹೊನ್ನಾವರದ ಶ್ರೀ ಸ್ವರ್ಣವಲ್ಲಿ ರಾಮ ಕ್ಷತ್ರಿಯ ಪರಿಷದ್ ಹಾಗೂ ಅಡಕಾರದ ರಾಮಕ್ಷತ್ರಿಯ ಸಂಘದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಸಾಮೂಹಿಕ ಉಪನಯನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಗವದ್ಗೀತೆ, ರಾಮರಕ್ಷಾ ಸ್ತೋತ್ರ ಮತ್ತು ರಾಮ ತಾರಕ ಮಂತ್ರಗಳ ಪಠಣ ಮಾಡುವುದನ್ನು ಚಿಕ್ಕ ವಯಸ್ಸಿನಲ್ಲಿಯೇ ಮಕ್ಕಳಿಗೆ ರೂಢಿಸಿದಾಗ ಮಕ್ಕಳಲ್ಲಿ ಆಧ್ಯಾತ್ಮಿಕ ಒಲವು ಮೂಡಲು ಸಾಧ್ಯ. ಈ ಆಧ್ಯಾತ್ಮಿಕ ಒಲವು ಸಂಸ್ಕಾರಯುತ ಮನುಷ್ಯನನ್ನು ನಿರ್ಮಾಣ ಮಾಡುತ್ತದೆ ಎಂದರು. ಇದೇ ವೇಳೆ ಪ್ರತಿವರ್ಷ ದಂಪತಿಗಳ ಶಿಬಿರ, ಯೋಗ ಶಿಬಿರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಸಲಹೆ ನೀಡಿದರು.

ರಾಮಕ್ಷತ್ರಿಯ ಪರಿಷದ್‌ನ ಅಧ್ಯಕ್ಷರಾದ ಎಸ್.ಕೆ.ನಾಯ್ಕ ಮಾತನಾಡಿ, ಸ್ವರ್ಣವಲ್ಲೀ ಮಠಾಧೀಶರ ಮಾರ್ಗದರ್ಶನದಲ್ಲಿ ರಾಮಕ್ಷತ್ರಿಯ ಪರಿಷದ್ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಉತ್ತಮ ಕೆಲಸಗಳ ಮೂಲಕ ಸಂಘಟಿತರಾಗೋಣ ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ರಾಮಕ್ಷತ್ರಿಯ ಸಮಾಜದ 33 ವಟುಗಳಿಗೆ ಸಾಮೂಹಿಕ ಉಪನಯನ ನಡೆಯಿತು. ಪ್ರಾರಂಭದಲ್ಲಿ ಸೀತಾರಾಮ ನಾಯ್ಕ ಹಳದಿಪೂರ ಪ್ರಾರ್ಥಿಸಿದರು. ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಪ್ರಮೋದ ನಾಯ್ಕ ಸ್ವಾಗತಿಸಿದರು. ಅಡಕಾರ ರಾಮಕ್ಷತ್ರಿಯ ಸಂಘದ ಅಧ್ಯಕ್ಷರಾದ ರಾಮದಾಸ ನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಪರಿಷದ್‌ನ ಪ್ರಧಾನ ಕಾರ್ಯದರ್ಶಿ ರಾಜೇಶ ಸಾಳೇಹಿತ್ತಲ್ ಐದು ವರ್ಷಗಳ ವರದಿ ವಾಚಿಸಿದರು. ರವಿ ನಾಯ್ಕ ನಿರೂಪಿಸಿದರು. ಮಹೇಶ ನಾಯ್ಕ ವಂದಿಸಿದರು.

ಇದನ್ನೂ ಓದಿ | ರಾಜಮಾರ್ಗ ಅಂಕಣ: ವಾಲ್ಮೀಕಿ ರಾಮಾಯಣ vs ಹನುಮಾನ್ ರಾಮಾಯಣ

ವೇದಿಕೆಯಲ್ಲಿ ಪರಿಷದ್‌ ಅಧ್ಯಕ್ಷರಾದ ಎಸ್.ಕೆ.ನಾಯ್ಕ ಮತ್ತು ಶ್ರೀನಿವಾಸ ನಾಯ್ಕ ಮುಂಬಯಿ ಇವರಿಗೆ ಅಡಕಾರ ಸಂಘದಿಂದ ಸನ್ಮಾನಿಸಲಾಯಿತು. ಮಲ್ಲಿಕಾರ್ಜುನ ಸಿಲ್ಕ್ಸ್ ಇದರ ಮಾಲಿಕರಾದ ರತ್ನಾಕರ ನಾಯ್ಕರವರು 33 ವಟುಗಳಿಗೆ ವಿಶೇಷ ಉಡುಗೊರೆಯೊಂದಿಗೆ ಗೌರವಿಸಿದರು.

Continue Reading
Advertisement
CET exam 2024
ಪ್ರಮುಖ ಸುದ್ದಿ44 seconds ago

CET Exam: ಸಿಇಟಿ ಕೀ ಉತ್ತರಗಳು ಪ್ರಕಟ, ಪಠ್ಯೇತರ ಪ್ರಶ್ನೆಗಳ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ

Covishield Vaccine
ಪ್ರಮುಖ ಸುದ್ದಿ22 mins ago

Covishield Vaccine: ಕೋವಿಶೀಲ್ಡ್‌ನಿಂದ ಅಡ್ಡ ಪರಿಣಾಮವಿದೆ ಎಂದು ಕೊನೆಗೂ ಒಪ್ಪಿಕೊಂಡ ತಯಾರಿಕೆ ಕಂಪನಿ ಅಸ್ಟ್ರಾಜೆನೆಕಾ

ದೇಶ34 mins ago

Viral Video: ಆರಾಮಾಗಿ ಆಟವಾಡ್ತಿದ್ದ ಬಾಲಕಿ ಮೇಲೆ ಜರ್ಮನ್‌ ಶೆಫರ್ಡ್‌ ಡೆಡ್ಲಿ ಅಟ್ಯಾಕ್‌!

Ayushman Bharat Diwas
ಆರೋಗ್ಯ59 mins ago

Ayushman Bharat Diwas: ಇಂದು ಆಯುಷ್ಮಾನ್ ಭಾರತ್ ದಿನ; ಏನಿದರ ಮಹತ್ವ?

Onion Benefits
ಆರೋಗ್ಯ1 hour ago

Onion Benefits: ಬೇಸಿಗೆಯಲ್ಲಿ ಆಗಾಗ ಹಸಿ ಈರುಳ್ಳಿ ತಿನ್ನಲೇಬೇಕು ಯಾಕೆ ಗೊತ್ತೆ?

rajamarga column srikant bolla
ಅಂಕಣ1 hour ago

ರಾಜಮಾರ್ಗ ಅಂಕಣ: ಕಣ್ಣಿಲ್ಲದೆ ಉದ್ಯಮ ಸಾಮ್ರಾಜ್ಯವನ್ನು ಕಟ್ಟಿದ ಶ್ರೀಕಾಂತ್ ಬೊಳ್ಳಾ

Karnataka weather
ಕರ್ನಾಟಕ2 hours ago

Karnataka Weather: ಮನೆಯಿಂದ ಹೊರ ಹೋಗುವ ಮುನ್ನ ಎಚ್ಚರ; ಮೇ 3ರವರೆಗೆ ಹೆಚ್ಚಿರಲಿದೆ ಶಾಖದ ಅಲೆಗಳ ತೀವ್ರತೆ!

Vistara Editorial
ಸಂಪಾದಕೀಯ2 hours ago

ವಿಸ್ತಾರ ಸಂಪಾದಕೀಯ: ಸ್ತ್ರೀಯರ ಘನತೆಗೆ ಹಾನಿ ಎಸಗಿದವರಿಗೆ ಕಠಿಣ ಶಿಕ್ಷೆಯಾಗಲಿ

Labour Day 2024
ದೇಶ2 hours ago

Labour Day 2024: ಕಾರ್ಮಿಕರು ಕೇಂದ್ರ ಸರ್ಕಾರದ ಇ-ಶ್ರಮ ಯೋಜನೆಯ ಪ್ರಯೋಜನ ಪಡೆಯುವುದು ಹೇಗೆ?

Paneer test
ಆರೋಗ್ಯ2 hours ago

Paneer Test: ನಾವು ತಿನ್ನುವ ಪನೀರ್‌ ಶುದ್ಧವಾದದ್ದೋ, ಕಲಬೆರಕೆಯದ್ದೋ ಪರೀಕ್ಷೆ ಮಾಡೋದು ಹೇಗೆ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ3 hours ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 202419 hours ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 202420 hours ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20242 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20242 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20242 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20242 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest2 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌