ಚಿಕ್ಕಮಗಳೂರು : ವಾರ್ಷಿಕ ಆದಾಯಕ್ಕಿಂತ ವಾರ್ಷಿಕ ವೆಚ್ಚವೇ ಹೆಚ್ಚುವರಿಯಾಗಿದೆ ಎಂದು ದೇವಸ್ಥಾನದ ಅರ್ಚಕರಿಗೆ ನೀಡುತ್ತಿದ್ದ ಸಂಬಳವನ್ನು ರಾಜ್ಯ ಸರ್ಕಾರವು ವಾಪಸ್ ಕೇಳಿದೆ. ಕನ್ನಡದ ಪಂಡಿತ, ಸಾಹಿತಿ ಎಂದೇ ಖ್ಯಾತಿ ಪಡೆದಿರುವ ಹಿರೇಮಗಳೂರು ಕಣ್ಣನ್‌ಗೆ (Hiremagaluru Kannan) ವೇತನ ತಡೆಹಿಡಿದು ಚಿಕ್ಕಮಗಳೂರು ಜಿಲ್ಲಾಡಳಿತವು ನೋಟಿಸ್ ನೀಡಿದೆ. ಕಣ್ಣನ್ ಅವರು ಹಿರೇಮಗಳೂರು ಗ್ರಾಮದಲ್ಲಿರುವ ಕೊಂದಡರಾಮಚಂದ್ರಸ್ವಾಮಿ ದೇವಾಲಯದ ಅರ್ಚಕರಾಗಿದ್ದಾರೆ.
ದೇವಾಲಯದ ಆದಾಯ ಕಡಿಮೆ ಇದ್ದು, ಸಂಬಳ ಹೆಚ್ಚುವರಿಯಾಗಿ ಪಾವತಿ ಆಗಿದೆ. ಹೀಗಾಗಿ 4,500 ರೂಪಾಯಿಯಂತೆ 10 ವರ್ಷದ 4,74,000 ರೂ. ಹಣವನ್ನು ವಾಪಸ್ ನೀಡಲು ಸೂಚನೆ ನೀಡಲಾಗಿದೆ. ಕಣ್ಣನ್ ಅವರ ಖಾತೆಗೆ ಪ್ರತಿ ತಿಂಗಳು 7,500 ರೂ. ಸಂಬಳ ಜಮೆಯಾಗುತ್ತಿತ್ತು. 7,500 ರೂಪಾಯಿ ನೀಡಿದ ಸಂಬಳದಲ್ಲಿ 4,500 ರೂ. ಅಂತೆ 10 ವರ್ಷದ ಹಣವನ್ನು ವಾಪಸ್ ನೀಡಲು ಸೂಚನೆ ನೀಡಲಾಗಿದೆ. ಸದ್ಯ ಪ್ರತಿ ತಿಂಗಳ ಬರುತ್ತಿದ್ದ ಸಂಬಳವನ್ನು ತಡೆ ಹಿಡಿಯಲಾಗಿದೆ. ಸರ್ಕಾರದ ಸೂಚನೆ ಮೇರೆಗೆ ಚಿಕ್ಕಮಗಳೂರು ತಹಸೀಲ್ದಾರ್ ಸುಮಂತ್ ನೋಟಿಸ್ ಜಾರಿ ಮಾಡಿದ್ದಾರೆ.
ಕನ್ನಡದ ಪಂಡಿತ, ಸಾಹಿತಿ ಎಂದೇ ಖ್ಯಾತಿ ಪಡೆದಿರುವ ಹಿರೇಮಗಳೂರು ಕಣ್ಣನ್ ಅವರು 50 ವರ್ಷಗಳಿಂದ ದೇವಾಲಯದ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸದ್ಯ ಈ ನೋಟಿಸ್ ಕಂಡು ಹಿರೇಮಗಳೂರು ಕಣ್ಣನ್ ಆತಂಕ ಗೊಂಡಿದ್ದಾರೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ