Site icon Vistara News

Horoscope Today : ಅತ್ಯಂತ ಶುಭ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ನೋಡೋಣ

horoscope today

ಇಂದಿನ ಭವಿಷ್ಯ

ಇಂದಿನ ಪಂಚಾಂಗ (23-04-2023)

ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ,
ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷ.

ತಿಥಿ: ತೃತೀಯ 07:46 ವಾರ: ಭಾನುವಾರ
ನಕ್ಷತ್ರ: ರೋಹಿಣಿ 24:25 ಯೋಗ: ಸೌಭಾಗ್ಯ 08:19
ಕರಣ: ಗರಜ 07:46 ಇಂದಿನ ವಿಶೇಷ: ಶ್ರೀ ಬಸವೇಶ್ವರರ ಜಯಂತಿ, ಅಕ್ಷಯ ತೃತೀಯಾ.
ಅಮೃತಕಾಲ: ರಾತ್ರಿ 09 ಗಂಟೆ 07 ನಿಮಿಷದಿಂದ 10 ಗಂಟೆ 47 ನಿಮಿಷದವರೆಗೆ.

ಸೂರ್ಯೋದಯ : 06:03 ಸೂರ್ಯಾಸ್ತ : 06:33

ರಾಹುಕಾಲ : ಸಂಜೆ 4.30 ರಿಂದ 6.00
ಗುಳಿಕಕಾಲ: ಮಧ್ಯಾಹ್ನ 3.00 ರಿಂದ 4.30
ಯಮಗಂಡಕಾಲ: ಮಧ್ಯಾಹ್ನ 1.30 ರಿಂದ 3.00

ದ್ವಾದಶ ರಾಶಿ ಭವಿಷ್ಯ (Horoscope Today)

ಮೇಷ: ಬಹಳ ದಿನಗಳ ಕನಸು ನನಸಾಗುವ ದಿನ. ವ್ಯಾಜ್ಯ ಪ್ರಕರಣಗಳು ಪರಿಹಾರವಾಗುವ ಸಾಧ್ಯತೆ. ಆರ್ಥಿಕ ಪ್ರಗತಿ. ಕುಟುಂಬ ಸದಸ್ಯರ ಸಹಕಾರದಿಂದ ಮನೆಯಲ್ಲಿ ನೆಮ್ಮದಿ.
ಅದೃಷ್ಟ ಸಂಖ್ಯೆ: 4

ವೃಷಭ: ಬಂಧು ಮಿತ್ರರಿಂದ ಸಹಕಾರ. ಆರ್ಥಿಕ ಪ್ರಗತಿ ಸಾಧಾರಣ. ನಿಮ್ಮ ವ್ಯಕ್ತಿತ್ವ ಇತರರನ್ನು ಆಕರ್ಷಿಸಿ ಕಾರ್ಯದಲ್ಲಿ ಯಶಸ್ಸು ತಂದುಕೊಡಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿ, ಕುಟುಂಬದಲ್ಲಿ ನೆಮ್ಮದಿ.
ಅದೃಷ್ಟ ಸಂಖ್ಯೆ: 3

ಮಿಥುನ: ಸಂತಸದ ಕ್ಷಣಗಳನ್ನು ಕಳೆಯುವಿರಿ. ಆರ್ಥಿಕ ಪ್ರಗತಿ. ಬಹಳ ದಿನಗಳ ಬಾಕಿ ಇರುವ ಕಾರ್ಯವು ಪುರ್ಣವಾಗುವುದು. ಮನೆಯಲ್ಲಿ ಪರಸ್ಪರ ಸಹಕಾರ ಸಿಗುವುದು, ಉತ್ಸಾಹದ ದಿನವಿದು.
ಅದೃಷ್ಟ ಸಂಖ್ಯೆ: 1

ಕಟಕ: ಆಕರ್ಷಕ ವ್ಯಕ್ತಿತ್ವ ಹೊಂದಿರುವ ನೀವು ಇಂದು ಇತರರನ್ನು ಆಕರ್ಷಿಸುವಿರಿ. ಆರ್ಥಿಕ ಪ್ರಗತಿ ಸಾಧಾರಣವಿದ್ದರೂ ಸಮರ್ಥವಾಗಿ ನಿರ್ವಹಿಸುವಿರಿ. ಉದ್ಯೋಗದಲ್ಲಿ ಪ್ರಗತಿ. ಮಡದಿಯ ಪ್ರೀತಿಗೆ ಸೋಲುವಿರಿ. ಕುಟುಂಬದಲ್ಲಿ ನೆಮ್ಮದಿ.
ಅದೃಷ್ಟ ಸಂಖ್ಯೆ: 5

ಸಿಂಹ: ಉದ್ಯೋಗ ಅಪೇಕ್ಷಿತರಿಗೆ ಇಂದು ಉದ್ಯೋಗದ ಭರವಸೆ ದೊರೆಯಲಿದೆ. ಆರ್ಥಿಕ ಪ್ರಗತಿ ಉತಮ. ಪರಿಶ್ರಮಕ್ಕೆ ತಕ್ಕ ಫಲ ಸಿಗುವುದು. ಮನೆಯವರ ಪ್ರೀತಿ ಸಹಕಾರ ಸಿಗಲಿದೆ. ಕುಟುಂಬದಲ್ಲಿ ನೆಮ್ಮದಿ.
ಅದೃಷ್ಟ ಸಂಖ್ಯೆ: 3

ಕನ್ಯಾ: ಮನೆಯಲ್ಲಿ ಪರಸ್ಪರರ ಮಧ್ಯೆ ಕಲಹದಿಂದ ವಾತಾವರಣ ಹದಗೆಡಬಹುದು. ಕೆಲಸದಲ್ಲಿ ಹಿರಿಯರಿಂದ ಒತ್ತಡ, ಎಚ್ಚರಿಕೆ ವಹಿಸಿ. ಆರ್ಥಿಕ ಪ್ರಗತಿ ಉತ್ತಮ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ತುಲಾ: ತರಾತುರಿಯಲ್ಲಿ ನಿರ್ಧಾರ ಕೈಗೊಂಡು ಯಾವುದೇ ಹೂಡಿಕೆ ಮಾಡುವುದು ಬೇಡ. ಬಂಧು ಮಿತ್ರರಿಂದ ಸಹಕಾರ ಸಿಗಲಿದೆ. ಆರೋಗ್ಯದಲ್ಲಿ ಉತ್ತಮ. ಮನೆಯಲ್ಲಿ ಸಂತೋಷದ ದಿನ.
ಅದೃಷ್ಟ ಸಂಖ್ಯೆ: 4

ವೃಶ್ಚಿಕ: ಮಿತ್ರರಿಂದ ಸಹಕಾರ ಸಿಗಲಿದೆ. ಆರ್ಥಿಕವಾಗಿ ಪ್ರಗತಿ ಹೊಂದಲು ಹಿರಿಯರು ಮಾರ್ಗದರ್ಶನ ಮಾಡುವರು. ಧೈರ್ಯದಿಂದ ಕಾರ್ಯದಲ್ಲಿ ಮುನ್ನುಗ್ಗಿ, ಯಶಸ್ಸು ಸಿಗುವುದು. ಕುಟುಂಬದಲ್ಲಿ ನೆಮ್ಮದಿ.
ಅದೃಷ್ಟ ಸಂಖ್ಯೆ: 5

ಧನಸ್ಸು: ಕುಟುಂಬ ಸದಸ್ಯರ ಆರೋಗ್ಯ ಸಂಬಂಧಿ ವಿಷಯಗಳು ತಮಗೆ ಒತ್ತಡ ಉಂಟು ಮಾಡಬಹುದು. ಉದಾಸೀನತೆ ಮಾಡುವುದು ಬೇಡ. ಆಶಾವಾದಿಗಳಾಗಿರಿ. ಕುಲದೇವರನ್ನು ಸ್ಮರಿಸಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

ಮಕರ: ಉದ್ಯೋಗದಲ್ಲಿ ಅಧಿಕಾರಿಗಳ ಕಿರಿಕಿರಿ, ಒತ್ತಡ ಉಂಟುಮಾಡುವ ಸಾಧ್ಯತೆ. ಆಲಸ್ಯದಿಂದ ದೂರವಿದ್ದು ಕಾರ್ಯ ಪೂರ್ಣ ಮಾಡಿ. ಕೆಲಸದ ಒತ್ತಡದಿಂದ ಮನೆಯ ಸದಸ್ಯರ ಮೇಲೆ ಹಾಕಿ, ವಾತಾವರಣ ಹದಗೆಡಲು ಕಾರಣವಾಗಬೇಡಿ. ಗುರುಗಳ ಆರಾಧನೆ ಮಾಡಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

ಕುಂಭ: ಭೂ ಸಂಬಂಧಿ ವ್ಯವಹಾರದಲ್ಲಿ ಪ್ರಗತಿ. ಬಹಳ ದಿನಗಳ ಕನಸು ನನಸಾಗುವ ಕಾಲ ಕೂಡಿ ಬರುವುದು. ಅನ್ಯರು ಆಡುವ ಕುಹಕದ ಮಾತುಗಳಿಗೆ ಧ್ವನಿಯಾಗಬೇಡಿ. ಕುಟುಂಬದಲ್ಲಿ ನೆಮ್ಮದಿ.
ಅದೃಷ್ಟ ಸಂಖ್ಯೆ: 9

ಮೀನ: ನಿಮ್ಮ ಮಹತ್ವಾಕಾಂಕ್ಷೆಯ ಕೆಲಸ ಕಾರ್ಯಗಳು ಕುಂಠಿತವಾಗುವ ಸಾಧ್ಯತೆ. ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ. ಆರ್ಥಿಕ ನಷ್ಟ ತಪ್ಪಿಸಿಕೊಳ್ಳಿ. ಸಂಗಾತಿಯ ಮಾತುಗಳು ಹಿತವೆನಿಸುವುದು. ಕುಟುಂಬದಲ್ಲಿ ನೆಮ್ಮದಿ.
ಅದೃಷ್ಟ ಸಂಖ್ಯೆ: 7

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಇದನ್ನೂ ಓದಿ : Vastu Tips: ಈ ಅಭ್ಯಾಸಗಳು ದಾರಿದ್ರ್ಯಕ್ಕೆ ದಾರಿ, ಇವುಗಳಿಂದ ದೂರವಿರಿ!

Exit mobile version