Ram Navami 2023: ಶ್ರೀರಾಮನ ಪರಿಪೂರ್ಣತೆ ನಮ್ಮಲ್ಲಿ ತುಂಬಿಕೊಳ್ಳೋದು ಹೇಗೆ? Vistara News
Connect with us

ಧಾರ್ಮಿಕ

Ram Navami 2023: ಶ್ರೀರಾಮನ ಪರಿಪೂರ್ಣತೆ ನಮ್ಮಲ್ಲಿ ತುಂಬಿಕೊಳ್ಳೋದು ಹೇಗೆ? 

Ram Navami 2023: ಭಗವಾನ್‌ ಶ್ರೀರಾಮ ಎಂದರೆ ನಂಬಿಕೆ, ವಿಶ್ವಾಸ, ಭರವಸೆ ಹಾಗೂ ಪರಿಪೂರ್ಣತೆ. ಅಂತಹ ಪರಿಪೂರ್ಣತೆಯನ್ನು ಸಾಧಿಸಲು ಏನೆಲ್ಲ ಮಾಡಬೇಕು? ಇಲ್ಲಿದೆ ಮಾಹಿತಿ.

VISTARANEWS.COM


on

Ram Navami 2023
Koo

ಇದನ್ನೂ ಓದಿ: Ram Navami 2023 : ರಾಮನವಮಿಯಂದು ಶ್ರೀರಾಮನ ಪೂಜೆ ಎಷ್ಟು ಹೊತ್ತಿಗೆ? ಆಚರಣೆ ಹೇಗೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ

ಕರ್ನಾಟಕ

New Parliament Building : ನೂತನ ಸಂಸತ್‌ ಭವನ ಉದ್ಘಾಟನೆಗೆ ಶೃಂಗೇರಿ ಪುರೋಹಿತರು

ನೂತನ ಸಂಸತ್‌ ಭವನ: ಭಾನುವಾರ ನಡೆಯಲಿರುವ ನೂತನ ಸಂಸತ್‌ ಭವನದ ಉದ್ಘಾಟನೆಗೆ ಸಂಬಂಧಿಸಿದ ಪೂಜಾ ಕಾರ್ಯಕ್ರಮಗಳ ಸಾರಥ್ಯವನ್ನು ಶೃಂಗೇರಿಯ ಋತ್ವಿಜರು ವಹಿಸಿದ್ದಾರೆ.

VISTARANEWS.COM


on

Edited by

Foundation laying programme of new parliament building
2020ರಲ್ಲಿ ನೂತನ ಸಂಸತ್‌ ಭವನಕ್ಕೆ ಅಡಿಗಲ್ಲು ಹಾಕುವ ಧಾರ್ಮಿಕ ಕಾರ್ಯಕ್ರಮದಲ್ಲಿ ಶೃಂಗೇರಿಯ ಋತ್ವಿಜರು ಭಾಗವಹಿಸಿದ್ದರು (ಸಂಗ್ರಹ ಚಿತ್ರ)
Koo

ಚಿಕ್ಕಮಗಳೂರು: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ಸಾರಥ್ಯದಲ್ಲಿ ನಿರ್ಮಾಣಗೊಂಡಿರುವ ನೂತನ ಸಂಸತ್‌ ಭವನ (New Parliament Building) ಉದ್ಘಾಟನೆ ಭಾನುವಾರ (ಮೇ 28) ಅದ್ಧೂರಿಯಾಗಿ ಮತ್ತು ಸಕಲ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆಯಲಿದೆ. ವಿಶೇಷವೆಂದರೆ ಸಂಸತ್‌ ಭವನದಲ್ಲಿ ನಡೆಯಲಿರುವ ಉದ್ಘಾಟನೆ ಸಂಬಂಧಿತ ಪೂಜಾ ಕೈಂಕರ್ಯಗಳನ್ನು (Pooja programmes) ನಡೆಸುವ ಜವಾಬ್ದಾರಿ ಹೊತ್ತಿರುವವರು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯ (Shringeri) ಪುರೋಹಿತರು.

ಪೂಜಾ ಕಾರ್ಯಕ್ರಮಗಳನ್ನು ನೆರವೇರಿಸುವುದಕ್ಕಾಗಿ ಶೃಂಗೇರಿಯ ಪುರೋಹಿತರ ತಂಡ ಆಗಲೇ ದಿಲ್ಲಿ ತಲುಪಿಸಿದ್ದು ಶನಿವಾರ ಸಂಜೆಯಿಂದಲೇ ಕಾರ್ಯಕ್ರಮಗಳು ನಡೆಯಲಿವೆ. ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರು ಈ ಭವನವನ್ನು ಉದ್ಘಾಟಿಸಲಿದ್ದು, ಅದಕ್ಕೆ ಸಂಬಂಧಿಸಿದ ಪೂಜೆಗಳನ್ನು ಶೃಂಗೇರಿಯ ವೇದಪಾರಂಗತ ಪುರೋಹಿತರಾದ ಸೀತಾರಾಮ ಶರ್ಮ, ಶ್ರೀರಾಮ ಶರ್ಮ ಹಾಗೂ ಲಕ್ಷ್ಮೀಶ ತಂತ್ರಿ ಅವರು ನೆರವೇರಿಸಲಿದ್ದಾರೆ.

ಶನಿವಾರದಿಂದಲೇ ಪೂಜಾ ಕಾರ್ಯಕ್ರಮಗಳು ಆರಂಭವಾಗಿವೆ. ಶನಿವಾರ ರಾತ್ರಿ ವಾಸ್ತು ಹೋಮ ನಡೆಯಲಿದ್ದು, ಭಾನುವಾರ ಬೆಳಗ್ಗೆ ಗಣಪತಿ ಹೋಮ ನಡೆಯಲಿದೆ.

ಅಡಿಗಲ್ಲು ಕಾರ್ಯಕ್ರಮದಲ್ಲೂ ಶೃಂಗೇರಿಯ ಪುರೋಹಿತರಿಂದಲೇ ಪೂಜೆ

2020ರಲ್ಲಿ ಸಂಸತ್ ಭವನಕ್ಕೆ ಅಡಿಗಲ್ಲು ಇಡುವ ಸಂದರ್ಭದಲ್ಲಿ ನಡೆದ ಪೂಜೆಯನ್ನೂ ಶೃಂಗೇರಿಯ ಪುರೋಹಿತರೇ ನಡೆಸಿದ್ದರು. ಆರು ಜನ ಪುರೋಹಿತರಿಂದ ಭೂಮಿ ಪೂಜೆ ನೆರವೇರಿಸಲಾಗಿತ್ತು.

2020ರ ಡಿಸೆಂಬರ್‌ 10ರಂದು ನಡೆದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಶೃಂಗೇರಿ ಮಠದ ವೈದಿಕ ಪಂಡಿತರಾದ ವೇದಬ್ರಹ್ಮ ಡಾ. ಟಿ. ಶಿವಕುಮಾರ ಶರ್ಮಾ, ವೇದ ಬ್ರಹ್ಮ ಶ್ರೀ ಲಕ್ಷ್ಮೀನಾರಾಯಣ ಸೋಮಯಾಜಿ, ವೇದಬ್ರಹ್ಮ ಶ್ರೀ ಗಣೇಶ ಸೋಮಯಾಜಿ, ನಾಗರಾಜ ಅಡಿಗ, ಋಗ್ವೇದ ಪ್ರಾಧ್ಯಾಪಕರಾಗಿರುವ ರಾಘವೇಂದ್ರ ಭಟ್‌, ಋಷ್ಯಶೃಂಗ ಭಟ್‌ ಅವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಈ ಬಾರಿ ಏನೇನು ಕಾರ್ಯಕ್ರಮವಿರುತ್ತದೆ?

ನೂತನ ಸಂಸತ್‌ ಭವನದ ಉದ್ಘಾಟನೆ ಭಾನುವಾರ ಎರಡು ಹಂತಗಳಲ್ಲಿ ನಡೆಯಲಿದೆ. ಮೊದಲನೆ ಹಂತದಲ್ಲಿ, ಸಂಸತ್ತಿನ ಮಹಾತ್ಮ ಗಾಂಧಿ ಪ್ರತಿಮೆ ಬಳಿಯ ಮೇಲಾವರಣದೊಳಗೆ ನಡೆಯುವ ಧಾರ್ಮಿಕ ಕ್ರಿಯೆಯೊಂದಿಗೆ ಸಮಾರಂಭವು ಪ್ರಾರಂಭವಾಗುತ್ತದೆ. ಈ ವೇಳೆ, ಪ್ರಧಾನಿ ಮೋದಿ, ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ, ರಾಜ್ಯಸಭಾ ಉಪಾಧ್ಯಕ್ಷ ಹರಿವಂಶ್ ಸೇರಿದಂತೆ ಹಿರಿಯ ಸಚಿವರು ಭಾಗವಹಿಸಲಿದ್ದಾರೆ.

ಬಳಿಕ ಲೋಕಸಭೆ ಮತ್ತು ರಾಜ್ಯಸಭೆ ಆವರಣಗಳನ್ನು ಗಣ್ಯರು ಪರಿಶೀಲಿಸಿದ ಬಳಿಕ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಬಳಿಕ ಲೋಕಸಭೆ ಸ್ಪೀಕರ್ ಪೀಠದ ಮುಂದೆ ಪವಿತ್ರ ರಾಜದಂಡವನ್ನು ಪ್ರತಿಷ್ಠಾಪನೆ ಮಾಡಲಾಗುತ್ತದೆ. ಈ ಪ್ರತಿಷ್ಠಾಪನೆಯನ್ನು ತಮಿಳುನಾಡಿನಿಂದ ಆಗಮಿಸಿದ ಪುರೋಹಿತರೇ ಮಾಡಲಿದ್ದು, ರಾಜದಂಡವನ್ನು ವಿನ್ಯಾಸ ಮಾಡಿದ ಮೂಲ ಅಕ್ಕಸಾಲಿಗ ಕೂಡ ಈ ವೇಳೆ ಹಾಜರು ಇರಲಿದ್ದಾರೆ. ಮೊದಲನೆ ಹಂತದ ಈ ಕಾರ್ಯಕ್ರಮವು ಬೆಳಗ್ಗೆ 9.30ಕ್ಕೆ ಮುಕ್ತಾಯವಾಗಲಿದೆ.

ಮಧ್ಯಾಹ್ನದ ವೇಳೆ ಎರಡನೇ ಹಂತದ ಕಾರ್ಯಕ್ರಮಗಳು ನಡೆಯಲಿವೆ. ಈ ವೇಳೆ ನಾಯಕರು ಮಾತನಾಡಲಿದ್ದಾರೆ. ಮೊದಲಿಗೆ ರಾಜ್ಯಸಭೆಯ ಡೆಪ್ಯುಟಿ ಚೇರ್ಮನ್ ಹರಿವಂಶ್ ಅವರು, ರಾಜ್ಯಸಭಾ ಚೇರ್ಮನ್ ಆಗಿರುವ ಉಪರಾಷ್ಟ್ರಪತಿಗಳ ಲಿಖಿತ ಸಂದೇಶವನ್ನು ಓದಲಿದ್ದಾರೆ. ಇದೇ ವೇಳೆ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕಳುಹಿಸಿರುವ ಲಿಖಿತ ಸಂದೇಶವನ್ನೂ ಓದಲಾಗುತ್ತದೆ.

ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು, ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿ ಅಂಚೆ ಚೀಟಿ ಮತ್ತು ನಾಣ್ಯವನ್ನು ಬಿಡುಗಡೆ ಮಾಡಲಿದ್ದಾರೆ. ಬಳಿಕ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಲೋಕಸಭೆ ಪ್ರಧಾನ ಕಾರ್ಯದರ್ಶಿ ಅವರು ವಂದನಾರ್ಪಣೆ ಮಾಡುವುದರೊಂದಿಗೆ ಉದ್ಘಾಟನಾ ಕಾರ್ಯಕ್ರಮವು ಸಂಪನ್ನಗೊಳ್ಳಲಿದೆ.

ಇದನ್ನೂ ಓದಿ: New Parliament: ಹೊಸ ಸಂಸತ್​ ಭವನದ ವಿಡಿಯೊ ಹಂಚಿಕೊಂಡು, ವಿಶೇಷ ಮನವಿ ಮಾಡಿದ ಪ್ರಧಾನಿ ಮೋದಿ

Continue Reading

ಕರ್ನಾಟಕ

Thaileshwara Ganigara Mutt: ಗಾಣಿಗ ಮಹಾಸಂಸ್ಥಾನವನ್ನು ಉಳಿಸಿ ಬೆಳೆಸಬೇಕಿದೆ: ಜಯೇಂದ್ರ ಪುರಿ ಸ್ವಾಮೀಜಿ

Thaileshwara Ganigara Mutt: ಸಾಮಾಜಿಕ ಕಾರ್ಯಗಳಿಗಾಗಿ ಸಂಪಾದನೆಯ ಶೇ. 10ರಷ್ಟನ್ನು ಮಠಕ್ಕೆ ಮೀಸಲಿಡುವ ಜತೆಗೆ ಜನ ಬೆಂಬಲವನ್ನೂ ನೀಡಬೇಕು ಎಂದು ಕೈಲಾಸಾಶ್ರಮದ ಜಯೇಂದ್ರ ಪುರಿ ಸ್ವಾಮೀಜಿ ಕರೆ ನೀಡಿದ್ದಾರೆ.

VISTARANEWS.COM


on

Edited by

Thaileshwara Ganigara Mutt in Bangalore
Koo

ಬೆಂಗಳೂರು: ತೈಲೇಶ್ವರ ಗಾಣಿಗರ ಮಹಾಸಂಸ್ಥಾನ ಮಠವನ್ನು (Thaileshwara Ganigara Mutt) ಗಾಣಿಗ ಸಮುದಾಯದ ಎಲ್ಲರೂ ಸೇರಿ ಉಳಿಸಿ ಬೆಳೆಸಬೇಕಿದೆ ಎಂದು ಕೈಲಾಸಾಶ್ರಮದ ಜಯೇಂದ್ರ ಪುರಿ ಸ್ವಾಮೀಜಿ ಕರೆ ನೀಡಿದರು.

ಬೆಂಗಳೂರು ಉತ್ತರ ತಾಲೂಕಿನ ದಾಸನಪುರ ಹೋಬಳಿಯ ನಗರೂರಿನ ತೈಲೇಶ್ವರ ಗಾಣಿಗರ ಮಹಾಸಂಸ್ಥಾನ ಮಠದಲ್ಲಿ ಆಯೋಜಿಸಿದ್ದ ಪೂರ್ಣಾನಂದಪುರಿ ಸ್ವಾಮೀಜಿ ಅವರ ಪೀಠಾರೋಹಣದ ಮೊದಲ ವಾರ್ಷಿಕೋತ್ಸವದಲ್ಲಿ ಆಶೀರ್ವಚನ ನೀಡಿದರು.

ಗಾಣಿಗ ಜನಾಂಗಕ್ಕೆ ಈವರೆಗೂ ಗುರುಪೀಠ ಇರಲಿಲ್ಲ. ಪೂರ್ಣಾನಂದಪುರಿ ಸ್ವಾಮೀಜಿ ಅವರ ಶ್ರಮದ ಫಲವಾಗಿ ಪೀಠ ಸ್ಥಾಪನೆಯಾಗಿದೆ. ಇದನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಜನಾಂಗದವರ ಮೇಲಿದೆ. ಪೂರ್ಣಾನಂದಪುರಿ ಸ್ವಾಮೀಜಿ ಅವರು ಪೂರ್ವಾಶ್ರಮದ ಎಲ್ಲವನ್ನೂ ತ್ಯಾಗ ಮಾಡಿ, ತಮಗೆ ಬರುವ ಪಿಂಚಣಿ ಹಣವನ್ನೂ ಮಠ ನಡೆಸಲು ಮೀಸಲಿಟ್ಟಿದ್ದಾರೆ. ವೃದ್ಧಾಪ್ಯದಲ್ಲಿ ಬೇರೆಯವರ ಆಸರೆ ಬೇಕಿರುತ್ತದೆ. ಆದರೆ, ಇವರು ಇಳಿ ವಯಸ್ಸಿನಲ್ಲಿಯೂ ಗಾಣಿಗ ಜನಾಂಗಕ್ಕೆ ಆಸರೆಯಾಗಿದ್ದಾರೆ. ಸಾಮಾಜಿಕ ಕಾರ್ಯಗಳಿಗಾಗಿ ಸಂಪಾದನೆಯ ಶೇ 10ರಷ್ಟನ್ನು ಮಠಕ್ಕೆ ಮೀಸಲಿಡುವ ಜತೆಗೆ ಜನ ಬೆಂಬಲವನ್ನೂ ನೀಡಬೇಕು ಎಂದು ಗಾಣಿಗರಿಗೆ ಕಿವಿಮಾತು ಹೇಳಿದರು.

ಇದನ್ನೂ ಓದಿ | Prerane : ಭಾರತದ ಆತ್ಮ; ಅಧ್ಯಾತ್ಮ

ಪೂರ್ಣಾನಂದಪುರಿ ಸ್ವಾಮೀಜಿ ಮಾತನಾಡಿ, ಗಾಣಿಗರಿಗೆ ಗುರುಪೀಠ ಸ್ಥಾಪನೆಯ ನನ್ನ ಗುರಿ ಈಡೇರಿದೆ. ಬಡವರಿಗೆ, ಅನಾಥರಿಗೆ ಉಚಿತ ವಸತಿ ಹಾಗೂ ಶಿಕ್ಷಣ ನೀಡಲು ಶಾಲೆ ತೆರೆಯಲಾಗುತ್ತಿದ್ದು, ಕಟ್ಟಡ ನಿರ್ಮಾಣ ಪ್ರಗತಿಯಲ್ಲಿದೆ. ಕಟ್ಟಡ ಪೂರ್ಣಗೊಳ್ಳಲು ದಾನಿಗಳು ಸಹಕರಿಸಬೇಕು. ಇದು ನನಗಾಗಿ ಅಲ್ಲ, ಸಮಾಜಕ್ಕಾಗಿ ಎಂದರು.

ತೊಗಟವೀರ ಕ್ಷತ್ರಿಯ ನೇಕಾರ ಪುಷ್ಪಾಂಡಜ ಮಹರ್ಷಿ ಆಶ್ರಮದ ದಿವ್ಯಜ್ಞಾನಾನಂದಗಿರಿ ಸ್ವಾಮೀಜಿ ಮಾತನಾಡಿ, ವ್ಯಕ್ತಿ ಏನನ್ನಾದರೂ ಮಾಡುತ್ತಿದ್ದಾನೆ ಎಂದರೆ ಅಸೂಯೆ ಪಡದೆ ಪ್ರೋತ್ಸಾಹಿಸಬೇಕು. ಗುರುಗಳಿಂದ ಸಂಸ್ಕಾರ ಪಡೆದಾಗ ಬೆಳಕು ಮೂಡುತ್ತದೆ ಎಂದರು.

ಇದನ್ನೂ ಓದಿ | Navavidha Bhakti : ಎಲ್ಲ ಕರ್ಮಗಳೂ ಸೇವೆಯೇ ಆಗಬಹುದು!

ಕಾಂಗ್ರೆಸ್ ಮುಖಂಡ ವಿ.ಆರ್‌. ಸುದರ್ಶನ್ ಮಾತನಾಡಿ, ನಿವೃತ್ತಿಯಾದವರು ಮಠದ ಚಟುವಟಿಕೆಯಲ್ಲಿ ಭಾಗವಹಿಸಬೇಕು. ಕೋಲಾರದ ಜ್ಯೋತಿ ಎಜುಕೇಷನಲ್ ಟ್ರಸ್ಟ್ ಮೂಲಕ ಪ್ರತಿವರ್ಷ ಮಠಕ್ಕೆ 1 ಲಕ್ಷ ರೂ. ದೇಣಿಗೆ ನೀಡಲಾಗುವುದು ಎಂದು ಘೋಷಿಸಿದರು.

Continue Reading

ದೇಶ

Tirupati Temple : ತಿರುಪತಿಯಲ್ಲಿ ದರ್ಶನಕ್ಕೆ 40 ಗಂಟೆ ತಗಲುತ್ತಿರುವುದರಿಂದ ಹೊಸ ನಿಯಮ ಜಾರಿ, ಇಲ್ಲಿದೆ ಡಿಟೇಲ್ಸ್

Tirupati Temple ತಿರುಪತಿಯಲ್ಲಿ ಸಾಮಾನ್ಯ ಭಕ್ತರಿಗೆ ದೇವರ ದರ್ಶನಕ್ಕೆ 40 ಗಂಟೆ ತಗಲುತ್ತಿರುವ ಹಿನ್ನೆಲೆಯಲ್ಲಿ ಹೊಸ ನಿಯಮಗಳನ್ನು ಟಿಟಿಡಿ ಜಾರಿಗೆ ತಂದಿದೆ. ಅದರ ವಿವರ ಇಲ್ಲಿದೆ.

VISTARANEWS.COM


on

Edited by

Tirupati Temple Since it takes 40 hours for darshan in Tirupati a new rule has been implemented here are the details
Koo

ತಿರುಪತಿ: ತಿರುಪತಿ ವೆಂಕಟೇಶ್ವರ ದೇವಾಲಯದಲ್ಲಿ ( Tirupati Temple) ದೇವರ ದರ್ಶನಕ್ಕೆ ತಗಲುವ ಸಮಯ 40 ಗಂಟೆಗೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ, ಕಾಯುವಿಕೆಯ ಸಮಯವನ್ನು ತಗ್ಗಿಸಿ ಭಕ್ತಾದಿಗಳಿಗೆ ಅನುಕೂಲ ಮಾಡಿಕೊಡಲು ತಿರುಮಲ ತಿರುಪತಿ ದೇವಸ್ಥಾನಮ್‌ (Tirumala Tirupati Devasthanam-TTD) ಹೊಸ ನಿಯಮಗಳನ್ನು ಘೋಷಿಸಿದೆ. ಅದರ ವಿವರ ನೋಡೋಣ.

ಬೇಸಗೆಯ ಅವಧಿಯಾಗಿರುವ ಕಾರಣ ಹಾಗೂ ಕೋವಿಡ್‌ ನಿರ್ಬಂಧಗಳು ಸಡಿಲವಾಗಿ ಮೂರು ವರ್ಷ ಸಮೀಪಿಸಿರುವ ಹಿನ್ನೆಲೆಯಲ್ಲಿ ತಿರುಪತಿಗೆ ಆಗಮಿಸುವ ಭಕ್ತಾದಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ 2023 ಜೂನ್‌ 30 ರ ತನಕ ಹೊಸ ನಿಯಮಗಳನ್ನು ಜಾರಿಗೆ ತರಲಾಗಿದೆ ಎಂದು ಟಿಟಿಡಿ ಚೇರ್ಮನ್‌ ವೈ.ವಿ ಸುಬ್ಬಾ ರೆಡ್ಡಿ ತಿಳಿಸಿದ್ದಾರೆ.

ಟಿಟಿಡಿ ಪ್ರಕಾರ ತಿರುಪತಿಯಲ್ಲಿ ಟೋಕನ್‌ ರಹಿತ ಭಕ್ತಾದಿಗಳಿಗೆ ದೇವರ ದರ್ಶನಕ್ಕೆ 30-40 ಗಂಟೆ ಬೇಕಾಗುತ್ತದೆ. ಹೀಗಾಗಿ ವಿಐಪಿ ಬ್ರೇಕ್‌ ದರ್ಶನ್‌ ಮತ್ತು ಆರ್ಜಿತ ಸೇವೆಗಳಲ್ಲಿ ಕೆಲ ಬದಲಾವಣೆ ತರಲಾಗಿದೆ. ಶುಕ್ರವಾರ, ಶನಿವಾರ ಮತ್ತು ಭಾನುವಾರ ಸುಪ್ರಭಾತ ಸೇವೆಯಲ್ಲಿ ವಿವೇಚನಾ ಕೋಟಾ (discretionary quota) ಅನ್ನು ಹಿಂತೆಗೆದುಕೊಳ್ಳಲಾಗಿದೆ. ಇದರಿಂದ ಸಾಮಾನ್ಯ ಭಕ್ತರಿಗೆ ದೇವರ ದರ್ಶನಕ್ಕೆ ತಗಲುವ ಸಮಯದಲ್ಲಿ 20 ನಿಮಿಷ ಉಳಿತಾಯವಾಗಲಿದೆ.

ಅದೇ ರೀತಿ ತಿರುಪ್ಪವಾಡ ಸೇವೆಯನ್ನು ಗುರುವಾರ ನಡೆಸಲು ಟಿಟಿಡಿ ನಿರ್ಧರಿಸಿದೆ. ಇದರಿಂದ 30 ನಿಮಿಷ ಸಮಯ ಉಳಿತಾಯವಾಗಲಿದೆ. ಶುಕ್ರವಾರ, ಶನಿವಾರ ಮತ್ತು ಭಾನುವಾರ ವಿಐಪಿ ರೆಕಮಂಡೇಶನ್‌ ಲೆಟರ್‌ಗಳನ್ನೂ ಟಿಟಿಡಿ ಸ್ವೀಕರಿಸದಿರಲು ನಿರ್ಧರಿಸಿದೆ. ಆದರೆ ಸೆಲ್ಫ್-ವಿಐಪಿಗಳಿಗೆ ಮಾತ್ರ ಬ್ರೇಕ್‌ ದರ್ಶನ್‌ಗೆ ಅನುಮತಿ ನೀಡಲಾಗಿದೆ. ಎಲ್ಲ ಭಕ್ತರು, ವಿಐಪಿಗಳು ಸಹಕರಿಸಬೇಕು ಎಂದು ಟಿಟಿಡಿ ಕೋರಿದೆ.

ಟಿಟಿಡಿ ಪ್ರಕಾರ ವೆಂಕಟೇಶ್ವರನ ಸನ್ನಿಧಿಯಲ್ಲಿ ನಿತ್ಯ ಬೆಳಗ್ಗೆ, ಮಧ್ಯಾಹ್ನ ಮತ್ತು ರಾತ್ರಿ ಮೂರು ಪ್ರಧಾನ ಪೂಜೆಗಳು ನಡೆಯುತ್ತವೆ. ರಾತ್ರಿಯ ಪೂಜೆಯಲ್ಲಿ ಅರ್ಚಕರು, ಪರಿಚಾರಕರು, ಆಚಾರ್ಯರು ಮಾತ್ರ ಭಾಗವಹಿಸುತ್ತಾರೆ. ಉಳಿದ ಪೂಜೆಗಳನ್ನು ಎಲ್ಲ ಭಕ್ತಾದಿಗಳೂ ವೀಕ್ಷಿಸಬಹುದು.

ಇದನ್ನೂ ಓದಿ: Tirupati Temple: ಮಾರ್ಚ್ 1ರಿಂದ ತಿರುಪತಿ ದೇಗುಲದಲ್ಲಿ ಫೇಸ್‌ ರಿಕಗ್ನೇಷನ್ ವ್ಯವಸ್ಥೆ

Continue Reading

ಧಾರ್ಮಿಕ

Navavidha Bhakti : ಎಲ್ಲ ಕರ್ಮಗಳೂ ಸೇವೆಯೇ ಆಗಬಹುದು!

ಭಕ್ತಿಯ ಸ್ವರೂಪವನ್ನು ಒಂಬತ್ತು ರೀತಿಯಲ್ಲಿ ವಿಂಗಡಿಸಲಾಗಿದೆ. ಈ ಸ್ವರೂಪಗಳನ್ನು ಪರಿಚಯಿಸುವ ʻನವವಿಧ ಭಕ್ತಿʼ (Navavidha Bhakti) ಲೇಖನ ಮಾಲೆಯ ಹನ್ನೊಂದನೇ ಲೇಖನ ಇಲ್ಲಿದೆ. ಇಂದು ದಾಸ್ಯಭಕ್ತಿಯ ಕುರಿತು ವಿವರಿಸಲಾಗಿದೆ.

VISTARANEWS.COM


on

Edited by

navavidha bhakti about dasya bhakti you should know in kannada
Koo
Navavidha Bhakti

ಡಾ. ಸಿ. ಆರ್. ರಾಮಸ್ವಾಮಿ
ದಾಸ್ಯ ಭಕ್ತಿ – 2 ( ದಾಸ್ಯ ಭಕ್ತಿಯ ಮೊದಲ ಭಾಗವನ್ನು ಓದಲು ಇಲ್ಲಿ ಕ್ಲಿಕ್‌ (Click Here) ಮಾಡಿ)
ದಾಸ್ಯ ಭಾವವು ಪೂಜೆಗೆ ಮಾತ್ರ ಸೀಮಿತವಾದದ್ದಲ್ಲ. ಇನ್ನೂ ವಿಸ್ತಾರವಾಗಿದೆ. ಇಂತಹ ಸೇವಾಕಾರ್ಯಕ್ಕೆ ಉತ್ತಮ ಉದಾಹರಣೆ ಹನುಮಂತ. ಪ್ರತಿಯೊಂದು ಹಂತದಲ್ಲೂ ರಾಮನ ಸ್ಮರಣೆಯೇ, ರಾಮನ ಸಂತೋಷವೇ ಅವನ ಉದ್ದೇಶವಾಗಿತ್ತು. ಮಹಾಬಲಶಾಲಿ, ವೀರ್ಯವಂತ; ಜೊತೆಗೆ ಬುದ್ಧಿವಂತ, ವಾಗ್ಮಿ. ರಾವಣನ ಮುಂದೆ ದೂತನಾಗಿಯೂ, ಸುಗ್ರೀವನಲ್ಲಿ ಮಂತ್ರಿಯಾಗಿಯೂ, ಯುದ್ಧದಲ್ಲಿ ವೀರನಾಗಿಯೂ ವರ್ತಿಸುತ್ತಾನೆ. ಜ್ಞಾನದಲ್ಲಿಯೂ ಶ್ರೇಷ್ಠ. ಆತ್ಮಜ್ಞಾನ ಸಂಪನ್ನ. ಪರಮಭಕ್ತ-ಭಾಗವತ. ಅಣಿಮಾದಿ ಅಷ್ಟಸಿದ್ಧಿಗಳೂ ಅವನ ವಶದಲ್ಲಿದ್ದುವು. ಇಷ್ಟೆಲ್ಲಾ ಶಕ್ತಿಗಳನ್ನೂ ರಾಮಕಾರ್ಯಕ್ಕಾಗಿಯೇ ಬಳಸುತ್ತ ರಾಮಸೇವೆಯನ್ನು ಮಾಡುತ್ತಿದ್ದ ಅಪ್ರತಿಮ ದಾಸನು.

ಅಷ್ಟೆಲ್ಲಾ ಶಕ್ತಿಯಿಲ್ಲದವರೂ ಇರುವಷ್ಟರಲ್ಲಿಯೇ ಭಗವಂತನ ಸೇವೆ ಮಾಡಬಹುದು. ಶ್ರೀಮದ್ರಾಮಾಯಣದಲ್ಲಿ ಸಮುದ್ರ-ಸೇತುವೆಯ ನಿರ್ಮಾಣ ಸಮಯದಲ್ಲಿ ಅಳಿಲೂ, ಸೇವೆ ಮಾಡಿದ ಕಥೆ ಪ್ರಸಿದ್ಧವಾಗಿದೆ. ಅಳಿಲು, ನೀರಿನಲ್ಲಿ ಮುಳುಗಿ, ಮರಳಲ್ಲಿ ಹೊರಳಾಡಿ, ತನ್ನ ಮೈಗೆ ಅಂಟಿದ ಮರಳನ್ನು ಸೇತುವೆ ಕಟ್ಟಿದ ಜಾಗದಲ್ಲಿ ಉದುರಿಸಿತು ಅಷ್ಟೆ. ಹೀಗೆ ಉದುರಿಸಿದ ಮರಳಿನಿಂದ ಸೇತುವೆ ಕಟ್ಟಲಾದೀತೇ! ವಿಚಾರಕ್ಕಿಂತ ಇದರ ಹಿಂದಿರುವ ಭಕ್ತಿಭಾವ-ಸೇವಾಭಾವ ಎಂತಹುದ್ದು! “ಅಳಿಲಸೇವೆ”ಯು ನಿಜವಾದ ಘಟನೆಯೋ ಅಥವಾ ಕವಿಕಲ್ಪನೆಯೋ ನಾವರಿಯೆವು. ಆದರೆ ಇದರಿಂದ ನಮ್ಮಲ್ಲಿ ಸಂತೋಷ-ಉತ್ಸಾಹ-ಭಕ್ತಿಭಾವಗಳು ಮೂಡಿಬರುವುದರಲ್ಲಿ ಸಂಶಯವಿಲ್ಲ. ಅಂತಹ ಉತ್ಸಾಹ-ಭರಿತವಾದ ಪೂರ್ಣಶಕ್ತಿಪ್ರಯೋಗದ “ಅಳಿಲುಸೇವೆ”ಯೂ ಶ್ರೀರಾಮನಿಗೆ ಪ್ರಿಯವಾದದ್ದು.

ಕ್ರಿಯೆಗಳೆಲ್ಲವೂ ಸೇವೆಯಾಗುವುದು ಹೇಗೆ?

ಸೇವೆಯ ವಿಸ್ತೃತರೂಪದ ಬಗೆಗೆ ಶ್ರೀರಂಗಮಹಾಗುರುಗಳು ದಯಪಾಲಿಸಿದ ನೋಟವನ್ನು ಗಮನಿಸುವುದಾದರೆ; ವೃಕ್ಷದಿಂದ ಫಲವನ್ನು ಪಡೆದು ಸಂತೋಷಿಸುವುದೇ ವೃಕ್ಷವನ್ನು ಬೆಳಸುವುದರ ಉದ್ದೇಶ. ಗಿಡಕ್ಕೆ ನೀರು-ಗೊಬ್ಬರಗಳನ್ನು ಹಾಕುವುದು, ಅಗತ್ಯವಿದ್ದಲ್ಲಿ ಔಷಧಿ ಹೊಡೆಯುವುದು, ಸೊಂಪಾಗಿ ಬೆಳೆಯಲು ಕಾಲಕಾಲಕ್ಕೆ ಕತ್ತರಿಸುವುದು ಇತ್ಯಾದಿಗಳೆಲ್ಲವೂ ಫಲದ ಕಡೆಗೆ ಗಮನವಿಟ್ಟು ಮಾಡುವ ಕ್ರಿಯೆಗಳೇ.

ಎಲೆಯಲ್ಲಿನ ಸಣ್ಣ-ಸಣ್ಣ ನರಗಳಿಂದ ಹಿಡಿದು ಗಿಡದಲ್ಲಿರುವ ಪ್ರತಿಯೊಂದು ಭಾಗದೊಡನೆಯೂ ಸಂಬಂಧವನ್ನು ಹೊಂದಿರುವ ಬೇರು, ಇಡೀ ವೃಕ್ಷವನ್ನು ರಕ್ಷಿಸುವ-ಪೋಷಿಸುವ ಭಾಗವಾಗಿದೆ. ಆದ್ದರಿಂದಲೇ ನೀರು-ಗೊಬ್ಬರಗಳನ್ನು ಮೇಲೆ ಇರುವ ಕಾಯಿ-ಹೂವಿಗೆ ಹಾಕದೆ, ಕೆಳಗಿರುವ ಬೇರಿಗೇ ಹಾಕುತ್ತೇವೆ. ಆದ್ದರಿಂದ ಬೇರಿಗೆ ಮಾಡುವ ‘ಸೇವಾಕಾರ್ಯ’ ಇಡೀ ವೃಕ್ಷಕ್ಕೇ ಮಾಡುವ ಸೇವೆಯಾಗುತ್ತದೆ. ಬೇರು ತನ್ನಲ್ಲಿಗೆ ಬಂದ ನೀರು-ಗೊಬ್ಬರಗಳನ್ನು ತಾನು ಇಟ್ಟುಕೊಳ್ಳದೆ ಇಡೀ ವೃಕ್ಷಕ್ಕೆ ಒದಗಿಸಿ ಫಲವನ್ನು ನೀಡುತ್ತದೆ. ಮೂಲ ಉದ್ದೇಶಕ್ಕೆ ಪೋಷಕವಾದ ಕೆಲಸಗಳೆಲ್ಲವೂ ಸೇವೆಯೇ. ಅಂತೆಯೇ ಅದಕ್ಕೆ ವಿರೋಧವಾದವುಗಳಾವುವೂ ಸೇವೆಯಾಗುವುದಿಲ್ಲ.

ನಮ್ಮ ದೇಹವೂ ಒಂದು ವೃಕ್ಷವೇ. ಇದರಲ್ಲಿ ಇಂದ್ರಿಯ-ಮನಸ್ಸು-ಬುದ್ಧಿಗಳ ಮೂಲಕ ಮಾಡುವ ಕ್ರಿಯೆಗಳೆಲ್ಲವೂ ಮಹಾಫಲವನ್ನು ಹೊಂದಲನುಗುಣವಾಗಿದ್ದರೆ ಇವೆಲ್ಲವೂ ಸೇವೆಯೇ ಆಗುತ್ತವೆ. ಜೀವ-ದೇವರ ಸಂಯೋಗವೇ (ಭಗವಂತನಲ್ಲಿ ಒಂದಾಗಿ ಸೇರಿಕೊಳ್ಳುವುದೇ) ಈ ವೃಕ್ಷದಿಂದ ದೊರೆಯುವ ಮಹಾಫಲ. ಅದಕ್ಕೆ ಪೋಷಕವಾದ ಕ್ರಿಯೆಗಳೆಲ್ಲವೂ ಸೇವಾಕಾರ್ಯಗಳೇ. ಭಗವಂತನ ಪ್ರೀತ್ಯರ್ಥವಾದದ್ದೆಲ್ಲವೂ ಸೇವೆಯೇ. ಆದರೆ ಭಗವಂತನ ಪ್ರೀತಿ-ಅಪ್ರೀತಿಗಳ ತಿಳಿವಳಿಕೆಯನ್ನು ಭಗವಂತನನ್ನು ಚೆನ್ನಾಗಿ ಅರಿತ ಜ್ಞಾನಿಗಳಿಂದ, ಋಷಿಗಳಿಂದ ತಿಳಿಯಬೇಕು.

ಭಗವತ್ಪ್ರೀತಿಕರವಾಗಿ ಮಾಡಿದಾಗ ಧನಸಹಾಯ, ಔಷಧಿಸಹಾಯ ಮುಂತಾದ ಎಲ್ಲಾ ಸಮಾಜಸೇವಾರೂಪವಾದ (social service) ಕ್ರಿಯೆಗಳನ್ನೂ ಸೇವಾಕಾರ್ಯವಾಗಿ ಪರಿವರ್ತಿಸಬಹುದು. ಕೇವಲ ಆರಾಧನೆಯನ್ನಷ್ಟೇ ಸೇವಾಕಾರ್ಯ ಎಂದೆಣಿಸಬಾರದು.

ಆಂಜನೇಯ, ಪ್ರತಿ ಹೆಜ್ಜೆಯಲ್ಲಿಯೂ ರಾಮನನ್ನೇ ಭಾವಿಸುತ್ತ ಸೇವೆ ಸಲ್ಲಿಸಿದನೆಂಬುದನ್ನು ಗಮನಿಸಬಹುದು. ಇಂದ್ರಜಿತ್ತನು ಪ್ರಯೋಗಿಸಿದ ಬ್ರಹ್ಮಾಸ್ತ್ರದಿಂದ ರಾಮಲಕ್ಷ್ಮಣರು ಮೂರ್ಛೆ ಹೋದಾಗ ಹಿಮಾಲಯದಿಂದ ಸಂಜೀವಿನಿಪರ್ವತದಲ್ಲಿರುವ ಮೂಲಿಕೆ ತರಲು ಹೋಗಿ ಆ ಬೆಟ್ಟವನ್ನೇ ಹೊತ್ತುತಂದ ಕಥೆ ಪ್ರಸಿದ್ಧ. ಅಷ್ಟು ಬಲಶಾಲಿಯೂ, ವಾಯುಪುತ್ರನೂ ಆದವನು ವಾಯುವೇಗದಲ್ಲಿ ಬಂದುಸೇರಿದನು. ಅದರಿಂದಲೇ ರಾಮಲಕ್ಷ್ಮಣರ ಜೀವ ಉಳಿಯಿತು. ಇನ್ನು ಸೀತೆಯನ್ನು ರಕ್ಷಿಸಿದ ವಿಷಯ ಪ್ರಸಿದ್ಧವಾದದ್ದು. ಒಂದು ನಿಮಿಷ ತಡವಾಗಿದ್ದರೂ ಅಶೋಕವನದಲ್ಲಿದ್ದ ಸೀತೆಯು ರಾವಣನ ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಳ್ಳುವ ಹಂತದಲ್ಲಿದ್ದಳು. ಅದೇ ಸಮಯದಲ್ಲಿ ಆಂಜನೇಯನು ರಾಮನ ವರ್ಣನೆಯನ್ನು ಮಾಡಿ ಅವಳಿಗೆ ಸಂತೋಷವನ್ನುಂಟುಮಾಡಿ ಸೀತೆಯನ್ನೂ ಬದುಕಿಸಿದನು ಎನ್ನಬಹುದು.

ಹದಿನಾಲ್ಕುವರ್ಷ ಮುಗಿಯುತ್ತಲೇ ಪ್ರಾಯೋಪವೇಶಕ್ಕೆ ಅನುವು ಮಾಡಿಕೊಳ್ಳುತ್ತಿದ್ದ ಭರತನಿಗೆ ರಾಮನ ಆಗಮನದ ಸುದ್ದಿಯನ್ನು ತಿಳಿಸಿ ಆಂಜನೇಯ ಭರತನಿಗೂ ಸೇವೆ ಮಾಡುತ್ತಾನೆ ಎಂಬುದಾಗಿ ವಾಲ್ಮೀಕಿ ಮಹರ್ಷಿಯು ಸಂತೋಷವಾಗಿ ನುಡಿಯುತ್ತಾರೆ. ಇಷ್ಟೆಲ್ಲ ಸೇವೆಯ ಮಧ್ಯದಲ್ಲಿ ವಿರಾಮ ದೊರೆತಾಗ ಕಲ್ಲುಬಂಡೆಯ ಮೇಲೆ ಕುಳಿತು ರಾಮನಾಮವನ್ನು ಜಪಿಸುತ್ತಾ ರಾಮಧ್ಯಾನದಲ್ಲಿ ನಿರತನಾಗಿರುವವನು ಹನುಮಂತ.

navavidha bhakti about dasya bhakti you should know in kannada

ಮಹಾಪರಾಕ್ರಮಿಯೂ ಜಿತೇಂದ್ರಿಯನೂ ಆದ ಲಕ್ಷ್ಮಣನು ಸ್ವಂತ ಸುಖವೆಲ್ಲವನ್ನೂ ತ್ಯಜಿಸಿ ಶ್ರೀರಾಮನ ಸೇವೆಗಾಗಿ ಅರಣ್ಯಕ್ಕೆ ತೆರಳಿದ ವೃತ್ತಾಂತ ಸುಪ್ರಸಿದ್ಧ. ಹಗಲಿರುಳೆನ್ನದೇ ಅರಣ್ಯದಲ್ಲಿ ಅನವರತವೂ ಹದಿನಾಲ್ಕು ವರ್ಷ ನಿದ್ರೆಯನ್ನೇ ವರ್ಜಿಸಿ ಸೀತಾರಾಮರ ಸೇವೆಯಲ್ಲಿಯೇ ನಿರತನಾಗಿದ್ದ ಸೇವಕ, ಅಪೂರ್ವತ್ಯಾಗಿ ಲಕ್ಷ್ಮಣ, ದಾಸ್ಯಕ್ಕೆ ಮಾದರಿಯೆನಿಸಿಕೊಳ್ಳುತ್ತಾನೆ.

ಭಗವಂತನಲ್ಲಿ ದಾಸ್ಯಭಾವವಿರುವಂತೆಯೇ ಪರಮಭಾಗವತರಿಗೆ-ಭಗವಂತನ ಭೃತ್ಯರಿಗೆ ಸೇವೆಮಾಡಿದರೂ ಭಗವಂತನಿಗೇ ತಲಪುತ್ತದೆ. ಅದರ ಪರಂಪರೆ ಹೇಗೆಂದರೆ ‘ತ್ವದ್ಭೃತ್ಯ ಭೃತ್ಯ ಪರಿಚಾರಕ ಭೃತ್ಯ-ಭೃತ್ಯ ಭೃತ್ಯಸ್ಯ-ಭೃತ್ಯ ಇತಿ ಮಾಂ ಸ್ಮರ ಲೋಕನಾಥ’ ಎಂದು ಕುಲಶೇಖರ ಆಳ್ವಾರರು ಕೊಂಡಾಡುತ್ತಾರೆ. “ಭಗವಂತ, ನನ್ನನ್ನು ಹೇಗೆ ತಿಳಿಯಬೇಕೆಂದರೆ ನಿನ್ನ ಭೃತ್ಯ(ಸೇವಕ), ನಿನ್ನ ಭೃತ್ಯರಿಗೆ ಭೃತ್ಯರಿಗೆ…. ಹೀಗೆ ಐದು ಆರು ಪರಂಪರೆ ದಾಟಿನಿಂತು ನಿನ್ನ ಸೇವೆ ಮಾಡುವ ದಾಸ ಎಂದು ತಿಳಿಯಬೇಕು” ಎನ್ನುತ್ತಾರೆ. “ದಾಸ-ದಾಸ-ದಾಸರ ದಾಸ್ಯವ ಕೊಡೋ….” ಗೀತವೂ ಇದನ್ನೇ ಪುನರುಕ್ತಿಗೊಳಿಸುತ್ತದೆಯಲ್ಲವೇ?

ಧಾರ್ಮಿಕ ಮತ್ತು ಆಧ್ಯಾತ್ಮಿಕ ಲೇಖನ, ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ.

ಒಂದು ಎಂಜಿನ್ ಹಿಂದೆ ಹದಿನೈದು ಬೋಗಿಗಳಿದ್ದರೂ ಕೊನೆಯ ಬೋಗಿಗೂ ಎಂಜಿನ್ನಿಗೂ ಕೊಂಡಿಯ ಮೂಲಕ ಸಂಬಂಧ ಇದ್ದೇ ಇರುತ್ತದೆ (ಕೊಂಡಿ ಕಳಚಿಕೊಳ್ಳದಿದ್ದರೆ!) ಅಂತೆಯೇ ಆ ಭೃತ್ಯರೆಲ್ಲರೂ ದಾಸ್ಯಭಾವದ ಕೊಂಡಿಯನ್ನು ಭದ್ರವಾಗಿ ಹಿಡಿದಿರುವುದರಿಂದ ಕೊನೆಯ ಭೃತ್ಯರಿಗೂ ಭಗವಂತನ ದಾಸ್ಯಸಂಬಂಧ ಇರುತ್ತದೆ. ಆದ್ದರಿಂದ ಭಗವದ್ಭಕ್ತರಲ್ಲಿ ದಾಸ್ಯಭಾವವಿರುವುದೂ ಆಷ್ಟೇ ಶ್ರೇಷ್ಠವಾದದ್ದು. ದಾಸ್ಯವನ್ನೇ ವೃತ್ತಿಯನ್ನಾಗಿಟ್ಟು ಭಗವಂತನ ಮಹಿಮೆಯನ್ನು ಮನೆಮನೆಗೂ ತಲುಪಿಸಿ ಸ್ಫೂರ್ತಿಯನ್ನು ತುಂಬುತ್ತಿದ್ದ ಪುರಂದರದಾಸರು-ಕನಕದಾಸರು ಮುಂತಾದ ದಾಸಶ್ರೇಷ್ಠರನ್ನು ಸ್ಮರಿಸೋಣ.

– ಲೇಖಕರು ಕಾರ್ಯದರ್ಶಿ,
ಅಷ್ಟಾಂಗಯೋಗ ವಿಜ್ಞಾನಮಂದಿರಂ
, ಬೆಂಗಳೂರು

ಇದನ್ನೂ ಓದಿ: Navavidha Bhakti : ನಮಸ್ಕಾರ ಕೂಡ ಭಕ್ತಿಯ ಒಂದು ಪ್ರಕಾರ!

Continue Reading
Advertisement
Prime minister Modi in 101th Mann ki Baat
ದೇಶ8 mins ago

Mann Ki Baat : 101ನೇ ಮನ್‌ ಕಿ ಬಾತ್‌ನಲ್ಲಿ ಮೋದಿಯವರು ವೀರ ಸಾವರ್ಕರ್‌ ವಿಚಾರಗಳ ಬಗ್ಗೆ ಹೇಳಿದ್ದೇನು?

Vinayak damodar savarkar
ಅಂಕಣ9 mins ago

Savarkar Jayanti: ಭಾರತೀಯರನ್ನು ಸ್ವಸ್ವರೂಪದ ಅರಿವಿನೆಡೆಗೆ ನಡೆಸಿದ ವೀರ ಸಾವರ್ಕರ್‌

kapil dev 1983 world cup captain
ಕ್ರಿಕೆಟ್24 mins ago

IPL 2023: ಗಿಲ್​ ಕ್ರಿಕೆಟ್​ ಭವಿಷ್ಯ ನುಡಿದ ಕಪಿಲ್ ದೇವ್​

daredevil mustafa Running successful
South Cinema25 mins ago

Kannada New Movie: ʻಡೇರ್‌ಡೆವಿಲ್‌ ಮುಸ್ತಾಫಾ‌ʼ ಅಮೋಘ ಪ್ರದರ್ಶನ; ಹೊರದೇಶದಲ್ಲಿ ತೆರೆಕಾಣಲಿದೆ ಸಿನಿಮಾ

somana kunitha
ಕಲೆ/ಸಾಹಿತ್ಯ26 mins ago

ವಿಸ್ತಾರ ಯುಗಾದಿ ಕಥಾ ಸ್ಪರ್ಧೆ: ಪ್ರಥಮ ಬಹುಮಾನ 55,000 ರೂ. ಪಡೆದ ಕಥೆ: ಸೋಮನ ಕುಣಿತ

Ram Charan presents The India House Film
South Cinema26 mins ago

Ram Charan: ವೀರ್ ಸಾವರ್ಕರ್ ಜನುಮದಿನದಂದೇ ʻವಿ ಮೆಗಾ ಪಿಕ್ಚರ್ಸ್ʼ ಹೊಸ ಸಿನಿಮಾ ಅನೌನ್ಸ್‌; ವಿಡಿಯೊ ಹಂಚಿಕೊಂಡ ರಾಮ್‌ಚರಣ್‌!

PM Modi Tweet After inaugurates new Parliament building
ದೇಶ30 mins ago

ಹೊಸ ಸಂಸತ್​ ಭವನ ಉದ್ಘಾಟನೆ; ಈ ಕಟ್ಟಡ ಸಬಲೀಕರಣಕ್ಕೆ ತೊಟ್ಟಿಲಾಗಲಿ ಎಂದ ಪ್ರಧಾನಿ ಮೋದಿ

Bandipur National Park PM Narendra modi visit
ಕರ್ನಾಟಕ31 mins ago

Bandipur National Park: ಬಂಡೀಪುರವೀಗ ಫುಲ್‌ ರಶ್, ದಿನಕ್ಕೆ 8 ಲಕ್ಷ ರೂ. ಆದಾಯ; ಇದು ಮೋದಿ ಎಫೆಕ್ಟ್‌!

CM Siddaramaiah and B Nagendra and DK Shivakumar
ಕರ್ನಾಟಕ36 mins ago

Karnataka Cabinet: 34 ಸಚಿವರ ಪೈಕಿ 16 ಸಚಿವರ ವಿರುದ್ಧ ಕ್ರಿಮಿನಲ್ ಕೇಸ್, ನಂ.1 ಸ್ಥಾನದಲ್ಲಿ ಯಾರಿದ್ದಾರೆ?

Rain alert
ಉಡುಪಿ51 mins ago

Weather Report: ಭಾನುವಾರ ಈ ಜಿಲ್ಲೆಗಳಲ್ಲಿ ವರುಣನ ಅಬ್ಬರ; ಗಾಳಿ ವೇಗವೂ ಹೆಚ್ಚಲಿದೆ ಎಂದ ಹವಾಮಾನ ಇಲಾಖೆ

7th Pay Commission
ನೌಕರರ ಕಾರ್ನರ್7 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ4 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Govt employees ssociation
ಕರ್ನಾಟಕ4 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ3 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike Order from Govt
ನೌಕರರ ಕಾರ್ನರ್3 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ5 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ7 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Teacher Transfer
ನೌಕರರ ಕಾರ್ನರ್7 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

smartphone
ವಾಣಿಜ್ಯ2 months ago

Mobile export : ಭಾರತದಿಂದ 2022-23ರಲ್ಲಿ 85,000 ಕೋಟಿ ರೂ. ಮೊಬೈಲ್‌ ಫೋನ್‌ ರಫ್ತು

Land Surveyor Recruitment
ಉದ್ಯೋಗ4 months ago

Land Surveyor Recruitment : 2000 ಭೂಮಾಪಕರ ನೇಮಕಕ್ಕೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ

New Parliament building inauguration Live Video Here
ದೇಶ2 hours ago

New Parliament Building: ನೂತನ ಸಂಸತ್​ ಭವನದ ಉದ್ಘಾಟನೆ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ

horoscope today
ಪ್ರಮುಖ ಸುದ್ದಿ8 hours ago

Horoscope Today : ವಾರದ ರಜೆಯ ಈ ದಿನ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ನೋಡೋಣ

Laxmi Hebbalkar oath taking as a minister
ಕರ್ನಾಟಕ19 hours ago

Laxmi Hebbalkar: ಸಚಿವೆಯಾಗುವುದರ ಜತೆಗೆ ಅಜ್ಜಿಯೂ ಆದ ಲಕ್ಷ್ಮಿ ಹೆಬ್ಬಾಳ್ಕರ್‌; ಒಂದೇ ದಿನ 2 ಸಿಹಿ ಸುದ್ದಿ!

HD Kumaraswamy in JDS Meeting
ಕರ್ನಾಟಕ2 days ago

H.D. Kumaraswamy: ಜೆಡಿಎಸ್‌ ವಿಸರ್ಜನೆ ಹೇಳಿಕೆಗೆ ಬದ್ಧ ಎಂದ ಎಚ್‌.ಡಿ. ಕುಮಾರಸ್ವಾಮಿ!

induction stoves
ಕರ್ನಾಟಕ2 days ago

Congress Guarantee: ಬಿಪಿಎಲ್ ಕಾರ್ಡ್‌ಗೆ ಮುಗಿಬಿದ್ದ ಜನ; ಇಂಡಕ್ಷನ್‌ ಸ್ಟವ್‌ಗೆ ಹೆಚ್ಚಿದ ಬೇಡಿಕೆ

Viral Video, Teacher and Principal are quarrel in front of School children
ದೇಶ2 days ago

Viral Video: ಶಾಲಾ ಮಕ್ಕಳ ಎದುರೇ ಹೊಡೆದಾಡಿಕೊಂಡ ಪ್ರಿನ್ಸಿಪಾಲ್, ಟೀಚರ್! ಇಲ್ಲಿದೆ ನೋಡಿ ವಿಡಿಯೋ

Horoscope Today
ಪ್ರಮುಖ ಸುದ್ದಿ2 days ago

Horoscope Today : ಮಕರ ರಾಶಿಯವರಿಗೆ ಕೌಟುಂಬಿಕವಾಗಿ ಶುಭ ಫಲ; ಇಂದಿನ ಭವಿಷ್ಯ ಇಲ್ಲಿದೆ

HD Kumaraswamy said he will take up the issue of congress guarantee
ಕರ್ನಾಟಕ3 days ago

Congress Guarantee: ನಾವು ಕಡುಬು ತಿನ್ನೋಕ ರಾಜಕಾರಣ ಮಾಡ್ತಿರೋದು?: ಎಚ್‌.ಡಿ. ಕುಮಾರಸ್ವಾಮಿ ಆಕ್ರೋಶ

Beware if the Congress Guarantee card is conditioned and Pratap Simha says he will fight from June 1
ಕರ್ನಾಟಕ3 days ago

Congress Guarantee: ಗ್ಯಾರಂಟಿ ಕಾರ್ಡ್‌ಗೆ ಕಂಡೀಷನ್ ಹಾಕಿದ್ರೆ ಹುಷಾರ್‌; ಜೂನ್‌ 1ರಿಂದ ಹೋರಾಟವೆಂದ ಪ್ರತಾಪ್‌ ಸಿಂಹ

Electricity bill man hit bescom staff
ಕರ್ನಾಟಕ4 days ago

Electricity Bill: ಕರೆಂಟ್‌ ಬಿಲ್‌ ಕಿರಿಕ್‌; ಬಾಕಿ ಬಿಲ್‌ ಕಟ್ಟು ಎಂದಿದ್ದಕ್ಕೆ ಚಪ್ಪಲಿಯಿಂದಲೇ ಹೊಡೆದವ ಅರೆಸ್ಟ್‌

ಟ್ರೆಂಡಿಂಗ್‌

error: Content is protected !!