Site icon Vistara News

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ನಿವಾಸಕ್ಕೆ ಭೇಟಿ ನೀಡಿದ ಶೃಂಗೇರಿ ಶ್ರೀಗಳು

pada pooja

ಬೆಂಗಳೂರು: ವಿಜಯಯಾತ್ರೆ ಕೈಗೊಂಡಿರುವ ಶೃಂಗೇರಿಯ ಅನಂತಶ್ರೀವಿಭೂಷಿತ ಜಗದ್ಗುರು ಶ್ರೀ ವಿಧುಶೇಖರಭಾರತೀ ಮಹಾಸ್ವಾಮಿಗಳು ಭಾನುವಾರ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ(ಕೆಪಿಸಿಸಿ) ಅಧ್ಯಕ್ಷ ಡಿ ಕೆ ಶಿವಕುಮಾರ್‌ ನಿವಾಸಕ್ಕೆ ಭೇಟಿ ನೀಡಿದ್ದರು.

ಪರಮಪೂಜ್ಯರಿಗೆ ಪೂರ್ಣಕುಂಭ ಸ್ವಾಗತ ನೀಡಿದ ಡಿ ಕೆ ಶಿವಕುಮಾರ್‌ ಮತ್ತು ಕುಟುಂಬದ ಸದಸ್ಯರು, ಅಪಾರ ಗೌರವಗಳಿಂದ ಅವರನ್ನು ಬರಮಾಡಿಕೊಂಡರು. ಡಿಕೆಶಿಯವರ ಮನೆಯನ್ನು ಹೂವುಗಳಿಂದ ವಿಶೇಷವಾಗಿ ಅಲಂಕರಿಸಲಾಗಿತ್ತು.

ಈ ಸಂದರ್ಭದಲ್ಲಿ ಡಿಕೆಶಿ ದಂಪತಿಗಳು ಪಾದಪೂಜೆ ನೆರವೇರಿಸಿ, ಆಶೀರ್ವಾದ ಪಡೆದುಕೊಂಡರು. ಡಿಕೆಶಿ ಕುಟುಂಬದ ಸದಸ್ಯರು, ಖ್ಯಾತ ಜ್ಯೋತಿಷಿ ರಾಜಗುರು ದ್ವಾರಕನಾಥ್‌, ಕೆಪಿಸಿಸಿ ವಕ್ತಾರರಾಗಿರುವ ಡಾ. ಶಂಕರ ಗುಹಾ ದ್ವಾರಕಾನಾಥ್‌ ಮತ್ತಿತರರು ಉಪಸ್ಥಿತರಿದ್ದರು.

“ಪೂಜ್ಯರು, ಸ್ವಾಮೀಜಿಗಳನ್ನು ಮನೆಗೆ ಆಹ್ವಾನಿಸುವುದು ಸೌಭಾಗ್ಯವೇ ನಿಜ. ಇಂದು ನನ್ನ ನಿವಾಸಕ್ಕೆ ಭೇಟಿ ನೀಡಿದ ಜಗದ್ಗುರು ಶ್ರೀ ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳ ಆಶೀರ್ವಾದ ಪಡೆದು ಧನ್ಯನಾದೆ. ಈ ವೇಳೆ ನನ್ನ ಪತ್ನಿ ಹಾಗೂ ಕುಟುಂಬ ಸಮೇತರಾಗಿ ಪ್ರಾರ್ಥನೆ ಸಲ್ಲಿಸಿದೆವುʼʼ ಎಂದು ಡಿ ಕೆ ಶಿವಕುಮಾರ್‌ ಟ್ವೀಟ್‌ ಮಾಡಿದ್ದಾರೆ.

ಕಳೆದ ಸೋಮವಾರ ಶೃಂಗೇರಿ ಶ್ರೀಗಳು ಮಾಜಿ ಪ್ರಧಾನಿ ದೇವೇಗೌಡರ ನಿವಾಸಕ್ಕೂ ಭೇಟಿ ನೀಡಿದ್ದರು.

ಇದನ್ನೂ ಓದಿ | ಶೃಂಗೇರಿ ಮಠ ಎಂದಿಗೂ ರಾಜಕೀಯ ಮಾಡುವುದಿಲ್ಲ: ಶ್ರೀ ವಿಧುಶೇಖರ ಭಾರತಿ ಸ್ವಾಮೀಜಿ

Exit mobile version