Sharada Devi Idol: ಶೃಂಗೇರಿಯಿಂದ ತೀತ್ವಾಲ್‌ನತ್ತ ಹೊರಟಿದ್ದಾಳೆ ʻಕಾಶ್ಮೀರ ಪುರವಾಸಿನಿʼ; ಮಾ. 24ರಂದು ಪ್ರತಿಷ್ಠಾಪನೆ - Vistara News

ಕರ್ನಾಟಕ

Sharada Devi Idol: ಶೃಂಗೇರಿಯಿಂದ ತೀತ್ವಾಲ್‌ನತ್ತ ಹೊರಟಿದ್ದಾಳೆ ʻಕಾಶ್ಮೀರ ಪುರವಾಸಿನಿʼ; ಮಾ. 24ರಂದು ಪ್ರತಿಷ್ಠಾಪನೆ

Sharada Devi Idol: ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿರುವ ಮೂಲ ಶ್ರೀ ಶಾರದಾ ಸರ್ವಜ್ಞ ಪೀಠಕ್ಕೆ ಸಮೀಪ ಇರುವ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ಶ್ರೀ ಶಾರದಾಂಬಾ ದೇಗುಲದಲ್ಲಿ ಪ್ರತಿಷ್ಠಾಪನೆಗೊಳ್ಳಲು ತಾಯಿ ಶಾರದೆಯ ವಿಗ್ರಹವು ಶೃಂಗೇರಿಯಿಂದ ಮಂಗಳವಾರ ಹೊರಟಿದೆ.

VISTARANEWS.COM


on

Sharada Devi Idol Kashmira Puravasini is on her way from Sringeri to Titwal Consecration on March 24
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿಕ್ಕಮಗಳೂರು: ಭಾರತ ಮತ್ತು ಪಾಕ್‌ ಆಕ್ರಮಿತ ಕಾಶ್ಮೀರದ ಗಡಿಯಲ್ಲಿರುವ ಕುಪ್ವಾರ ಜಿಲ್ಲೆಗೆ ಸೇರಿದ, ಕಿಶನ್‌ ಗಂಗಾ ನದಿ ತೀರದಲ್ಲಿರುವ ತೀತ್ವಾಲ್‌ ಎಂಬ ಚಿಕ್ಕ ಹಳ್ಳಿಯಲ್ಲಿ ನಿರ್ಮಾಣವಾಗುತ್ತಿರುವ ಶಾರದಾದೇವಿಯ ಭವ್ಯ ದೇಗುಲದಲ್ಲಿ ಪ್ರತಿಷ್ಠಾಪನೆಗೊಳ್ಳಲು ಶೃಂಗೇರಿಯಿಂದ ಕಾಶ್ಮೀರಕ್ಕೆ “ಕಾಶ್ಮೀರ ಪುರವಾಸಿನಿ ಶಾರದಾಂಬೆ”ಯ ನೂತನ ವಿಗ್ರಹವು (Sharada Devi Idol) ಮಂಗಳವಾರ (ಜ.೨೪) ಹೊರಟಿದೆ.

Sharada Devi Idol Kashmira Puravasini is on her way from Sringeri to Titwal Consecration on March 24
ವಾಹನದ ಮೂಲಕ ಶಾರದಾಂಬೆ ದೇವಿಯ ವಿಗ್ರಹವನ್ನು ತೀತ್ವಾಲ್‌ಗೆ ತೆಗೆದುಕೊಂಡು ಹೋಗುತ್ತಿರುವುದು.

ವಿದ್ಯಾಧಿದೇವತೆ ಶ್ರೀ ಶಾರದಾ ದೇವಿಯ ವಾಸಸ್ಥಾನ ಕಾಶ್ಮೀರ. ʼನಮಸ್ತೇ ಶಾರದಾದೇವಿ ಕಾಶ್ಮೀರ ಪುರವಾಸಿನಿ|ʼ ಎಂದೇ ಆಕೆಯನ್ನು ಪೂಜಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ತೀತ್ವಾಲ್‌ (ಶ್ರೀನಗರದಿಂದ 168 ಕಿ.ಮೀ. ದೂರದಲ್ಲಿದೆ) ಈ ದೇಗುಲ ನಿರ್ಮಾಣವಾಗುತ್ತಿದೆ. ಇದು ಸದ್ಯ ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿರುವ ಮೂಲ ಶ್ರೀ ಶಾರದಾ ಸರ್ವಜ್ಞ ಪೀಠಕ್ಕೆ ಹತ್ತಿರದಲ್ಲಿದೆ. ಹಿಂದೆ ಇಲ್ಲಿಂದಲೇ‌ ಶ್ರೀ ಶಾರದಾ ಸರ್ವಜ್ಞ ಪೀಠಕ್ಕೆ ಪ್ರತಿ ವರ್ಷ ʼಚಾರಿ ಮುಬಾರಕ್‌ʼ ಎಂಬ ಯಾತ್ರೆ ಕೈಗೊಳ್ಳಲಾಗುತ್ತಿತ್ತು. ಹೀಗಾಗಿ ಈ ಜಾಗ ಐತಿಹಾಸಿಕವಾಗಿಯೂ ಗುರುತಿಸಲ್ಪಟ್ಟಿದೆ. ಈಗ ಇಲ್ಲಿ ಅಲ್ಲಿನ ಜನತೆಯ ಬೇಡಿಕೆ ಮೇರೆಗೆ ಶಾರದಾ ದೇವಿ ದೇಗುಲ ನಿರ್ಮಾಣವಾಗುತ್ತಿದ್ದು, ಶೃಂಗೇರಿಯಿಂದ ತಾಯಿ ಶಾರದೆಯ ವಿಗ್ರಹ ರವಾನೆಯಾಗಿದೆ. ಸುಮಾರು 4000 ಕಿ.ಮೀ.ವರೆಗೆ ಈ ವಿಗ್ರಹವನ್ನು ಹೊತ್ತೊಯ್ಯಲಾಗುತ್ತಿದೆ.

Sharada Devi Idol Kashmira Puravasini is on her way from Sringeri to Titwal Consecration on March 24

ಮಾರ್ಚ್‌ ೧೬ಕ್ಕೆ ತಲುಪಲಿರುವ ವಿಗ್ರಹ
ಶೃಂಗೇರಿಯಿಂದ ಮಂಗಳವಾರ (ಜ.೨೪) ಹೊರಟ ವಿಗ್ರಹವು ಮಾರ್ಚ್ 16ರಂದು ಕಾಶ್ಮೀರದ ತೀತ್ವಾಲ್‌ ತಲುಪಲಿದೆ. ಮಾರ್ಚ್ 24ರಂದು ದೇವಸ್ಥಾನದಲ್ಲಿ ಪ್ರತಿಷ್ಠಾಪನೆಯಾಗಲಿದೆ. ಈ ವಿಗ್ರಹಕ್ಕೆ ಶೃಂಗೇರಿಯಲ್ಲಿ ವಿಶೇಷ ಪೂಜೆ, ಕೈಂಕರ್ಯಗಳನ್ನು ನೆರವೇರಿಸಲಾಗಿದ್ದು, ಬಳಿಕ ವಿಗ್ರಹವನ್ನು ರವಾನೆ ಮಾಡಲಾಗಿದೆ.

ದೇಗುಲ ನಿರ್ಮಾಣಕ್ಕೆ ಕರ್ನಾಟಕದ ಕಾರ್ಮಿಕರು

ಈ ದೇಗುಲ ನಿರ್ಮಿಸುತ್ತಿರುವವರು ಕರ್ನಾಟಕದ ಕಾರ್ಮಿಕರು ಎಂಬುದು ಮತ್ತೊಂದು ವಿಶೇಷ. ಕರ್ನಾಟಕದಿಂದ ಸಾಗಿಸಲಾಗಿರುವ ಗ್ರಾನೈಟ್‌ ಕಲ್ಲುಗಳನ್ನು ಬಳಸಿಯೇ ಈ ದೇಗುಲದ ಗರ್ಭಗುಡಿ ನಿರ್ಮಿಸಲಾಗುತ್ತಿದೆ. ಪ್ರತಿಷ್ಠಾಪನೆಗೊಳ್ಳಲಿರುವ ಶ್ರೀ ಶಾರದಾಂಬೆಯ ವಿಗ್ರಹವನ್ನು ಶೃಂಗೇರಿಯ ಶ್ರೀ ಶಾರದಾ ಪೀಠವೇ ಪಂಚಲೋಹದ ಈ ವಿಗ್ರಹವನ್ನು ಸಿದ್ಧಪಡಿಸಿದೆ. ಈ ವಿಗ್ರಹವು ಶೃಂಗೇರಿಯ ಶಾರದಾಂಬೆಯ ವಿಗ್ರಹವನ್ನೇ ಹೋಲಲಿದೆ.

ದೇಗುಲದ ನೀಲಿ ನಕ್ಷೆ ಮತ್ತು ಮಾದರಿಯನ್ನು ಶೃಂಗೇರಿಯ ಶ್ರೀಗಳೇ ಅಂತಿಮಗೊಳಿಸಿದ್ದಾರೆ. ಅವರ ಮಾರ್ಗದರ್ಶನ ಪಡೆದೇ ಈ ದೇಗುಲವನ್ನು ನಿರ್ಮಿಸಲಾಗುತ್ತಿದೆ. ಕಳೆದ ೨೦೨೨ರ ಡಿಸೆಂಬರ್‌ನಲ್ಲಿ ದೇಗುಲ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಗಿದ್ದು, ನಿರ್ಮಾಣ ಕಾರ್ಯ ಬಿರುಸಿನಿಂದ ನಡೆಯುತ್ತಿದೆ. ಇನ್ನು ಕೆಲವೇ ದಿನಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಹೇಳಲಾಗಿದೆ.

kashmira puravasini sharada temple in kashmir

ಮುಸ್ಲಿಮರ ಜಾಗದಲ್ಲಿ ನಿರ್ಮಾಣ

ಈ ದೇಗುಲ ನಿರ್ಮಾಣಕ್ಕೆ ಸ್ಥಳೀಯ ಮುಸ್ಲಿಮರು ಜಾಗ ನೀಡಿದ್ದು, ನಿರ್ಮಾಣ ಕಾರ್ಯದಲ್ಲಿ ಅವರೂ ಭಾಗಿಯಾಗುತ್ತಿದ್ದಾರೆ. ಶಾರದಾ ದೇಗುಲದ ಜತೆಗೆ ಈ ಹಿಂದೆ ಇದ್ದ ಗುರುದ್ವಾರ ಮತ್ತು ಮಸೀದಿಯನ್ನೂ ನಿರ್ಮಿಸಲು ಉದ್ದೇಶಿಸಲಾಗಿದೆ. ಕಾಶ್ಮೀರದಲ್ಲಿದ್ದ ಸೌಹಾರ್ದತೆಯ ಬಗ್ಗೆ ಇಲ್ಲಿಂದಲೇ ನಾವು ಜಗತ್ತಿಗೆ ಸಂದೇಶ ರವಾನಿಸಲಿದ್ದೇವೆ ಎಂದು ಸ್ಥಳೀಯರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

kashmira puravasini sharada temple in kashmir

ಹೇಗಿರಲಿದೆ ದೇಗುಲ?

ಈ ಹಿಂದೆ ಇದ್ದ ಶ್ರೀ ಶಾರದಾ ಸರ್ವಜ್ಞ ಪೀಠದ ಮಾದರಿಲ್ಲಿಯೇ ಈ ದೇಗುಲವನ್ನು ನಿರ್ಮಿಸಲಾಗುತ್ತಿದ್ದು, ದೇಗುಲಕ್ಕೆ ನಾಲ್ಕು ದಿಕ್ಕುಗಳಲ್ಲಿಯೂ ಬಾಗಿಲುಗಳಿರಲಿವೆ. ವಾಸ್ತು ಶಿಲ್ಪದ ವೈಭವದೊಂದಿಗೆ ಕಂಗೊಳಿಸುವಂತೆ ದೇಗುಲ ನಿರ್ಮಿಸಲಾಗುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

Food Poisoning : ಮದುವೆ ಮನೆ ಊಟ ತಿಂದ ನೂರಾರು ಮಂದಿ ಅಸ್ವಸ್ಥ; ಆಸ್ಪತ್ರೆಯಲ್ಲಿ ಹಾಹಾಕಾರ

Food Poisoning : ಅಸ್ವಸ್ಥಗೊಂಡವರು ಕೊಡಗಿನ ಕುಶಾಲನಗರ ಆಸ್ಪತ್ರೆಗೆ ದೌಡಾಯಿಸಿದ್ದರು. ಕುಶಾಲನಗರ ಸರಕಾರಿ ಆಸ್ಪತ್ರೆಯಲ್ಲಿ ಸುಮಾರು 150 ಕ್ಕೂ ಹೆಚ್ಚು ಜನರಿಗೆ ಚಿಕಿತ್ಸೆ ನೀಡಲಾಗಿದೆ. ಕುಶಾಲನಗರ ಖಾಸಗಿ ಆಸ್ಪತ್ರೆಯಲ್ಲೂ ಕೆಲವರು ಚಿಕಿತ್ಸೆಪಡೆಯತ್ತಿದ್ದಾರೆ. ಪಿರಿಯಾಪಟ್ಟಣ ಆಸ್ಪತ್ರೆಯಲ್ಲೂ ಹಲವರಿಗೆ ಚಿಕಿತ್ಸೆ ನೀಡಲಾಗಿದೆ.

VISTARANEWS.COM


on

food
Koo

ಪಿರಿಯಾಪಟ್ಟಣ: ಮದುವೆ ಮನೆಯಲ್ಲಿ ಸಿದ್ಧಪಡಿಸಲಾಗಿದ್ದ ಊಟ ಮಾಡಿದ (Food Poisoning) ನೂರಾರು ಮಂದಿ ಏಕಾಏಕಿ ಅಸ್ವಸ್ಥಗೊಂಡ ಘಟನೆ ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಗ್ರಾಮದಲ್ಲಿ ನಡೆದಿದೆ. ಸಂಜೆ ವೇಳೆ ಎಲ್ಲರೂ ವಾಂತಿ ಹಾಗೂ ಇನ್ನಿತರ ಸಮಸ್ಯೆಗಳಿಂದ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದಾರೆ. ಹೀಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಪರದಾಡಿದ ಘಟನೆ ನಡೆದಿದೆ. ಎಲ್ಲ ಆಸ್ಪತ್ರೆಗಳು ಏಕಾಏಕಿ ತುಂಬಿದ್ದ ಕಾರಣ ಹಾಹಾಕಾರ ಉಂಟಾಯಿತು.

ಅಸ್ವಸ್ಥಗೊಂಡವರು ಆರಂಭದಲ್ಲಿ ಕೊಡಗಿನ ಕುಶಾಲನಗರ ಆಸ್ಪತ್ರೆಗೆ ದೌಡಾಯಿಸಿದ್ದರು. ಕುಶಾಲನಗರ ಸರಕಾರಿ ಆಸ್ಪತ್ರೆಯಲ್ಲಿ ಸುಮಾರು 150 ಕ್ಕೂ ಹೆಚ್ಚು ಜನರಿಗೆ ಚಿಕಿತ್ಸೆ ನೀಡಲಾಗಿದೆ. ಆದರೆ ಅಲ್ಲಿ ಚಿಕಿತ್ಸೆ ಕಷ್ಟವಾದಾಗ ಕುಶಾಲನಗರ ಖಾಸಗಿ ಆಸ್ಪತ್ರೆಯಲ್ಲೂ ಕೆಲವರು ಚಿಕಿತ್ಸೆ ಪಡೆಯತ್ತಿದ್ದಾರೆ. ಪಿರಿಯಾಪಟ್ಟಣ ಆಸ್ಪತ್ರೆಯಲ್ಲೂ ಹಲವರಿಗೆ ಚಿಕಿತ್ಸೆ ನೀಡಲಾಗಿದೆ. ಹೀಗಾಗಿ ಸುತ್ತಮುತ್ತಲಿನ ಆಸ್ಪತ್ರೆಗಳಲ್ಲಿ ಮದುವೆ ಮನೆಯಲ್ಲಿ ಊಟ ತಿಂದವರೇ ತುಂಬಿಕೊಂಡಿದ್ದರು.

ಕೊಡಗು ಆರೋಗ್ಯಾಧಿಕಾರಿ ಕುಶಾಲನಗರ ಆಸ್ಪತ್ರೆಗೆ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ. ಏಕಾಏಕಿ ಹಲವರು ಆಸ್ಪತ್ರೆಗೆ ಬಂದ ಕಾರಣ ಕುಶಾಲನಗರದ ಆಸ್ಪತ್ರೆ ಕ್ಲಿನಿಕ್​ಗಳು ತುಂಬಿಕೊಂಡಿದ್ದವು. ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೆ ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೂ ಸಾಕಷ್ಟು ಮಂದಿ ದಾಖಲಾಗಿದ್ದಾರೆ.

ಇದನ್ನೂ ಓದಿ: lok sabha election : ಒಂದು ವರ್ಷದ ಕೂಸಿನೊಂದಿಗೆ ಚುನಾವಣಾ ಕರ್ತವ್ಯಕ್ಕೆ ಬಂದ ಪೊಲೀಸ್​​!

ಅವರೆಲ್ಲರೂ ಗುರುವಾರ ಮಧ್ಯಾಹ್ನ ಕೊಪ್ಪ ಗ್ರಾಮದಲ್ಲಿ ನಡೆದ ಮದುವೆಯಲ್ಲಿ ಊಟ ಮಾಡಿದ್ದರು. ಸಂಜೆಯ ವೇಳೆಗೆ ಏಕಾಏಕಿ ವಾಂತಿ ಕಾಣಿಸಿಕೊಂಡಿದೆ. ಆಸ್ಪತ್ರೆಗೆ ಮಡಿಕೇರಿ ಕ್ಷೇತ್ರದ ಶಾಸಕ ಮಂತರ್ ಗೌಡ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

ಮುಸ್ಲಿಮ್ ಯುವಕರಿಂದ ಬಸ್​ ಚಾಲಕನ ಮೇಲೆ ಹಲ್ಲೆ

ಬೈಲಹೊಂಗಲ: ಬಸ್ ಚಾಲಕ ಮತ್ತು ನಿರ್ವಾಹಕನ ಮೇಲೆ ಮುಸ್ಲಿಂ ಯುವಕರು ಹಲ್ಲೆ ಮಾಡಿದ ಘಟನೆ (Bus driver Attacked) ನಡೆದಿದೆ. ಆಕ್ರೋಶಗೊಂಡ ಸಾರಿಗೆ ನೌಕರರು ಬೈಲಹೊಂಗಲ ಪೊಲೀಸ್ ಠಾಣೆಯ ಮುಂದೆ ಧರಣಿ ಕುಳಿತರು. ಚಾಲಕ ಬಸ್ ನಿಲ್ಲಿಸಲಿಲ್ಲ ಎಂದು ಹಲ್ಲೆ ಮಾಡಿದ ಆರೋಪ ಕೇಳಿ ಬಂದಿದೆ.

ಧಾರವಾಡದಿಂದ ಬೈಲಹೊಂಗಕ್ಕೆ ಮುಸ್ಲಿಂ ಯುವಕರು ಬಂದಿದ್ದರು. ಬಸ್​​ ಬೈಲಹೊಂಗಲದಿಂದ ಧಾರವಾಡಕ್ಕೆ ಹೊರಟಿತ್ತು. ಬಸ್ ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಗುಂಪುಕಟ್ಟಿ ಹಲ್ಲೆ ನಡೆಸಿದ್ದರು. ಬೇಸತ್ತ ಚಾಲಕರು ವೃತ್ತಿಯ ವೇಳೆ ಸುರಕ್ಷತೆ ನೀಡಿ ಧರಣಿ ಮಾಡಿದ್ದರು. ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿರುವ ಸಾರಿಗೆ ಮೇಲಧಿಕಾರಿಗಳು ಬಂದು ಮಾತು ನಡೆಸಿದ್ದಾರೆ. ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.

Continue Reading

ಉತ್ತರ ಕನ್ನಡ

Lok Sabha Election 2024: ಶಿರಸಿಯಲ್ಲಿ ಏಪ್ರಿಲ್‌ 28ರಂದು ಪ್ರಧಾನಿ ನರೇಂದ್ರ ಮೋದಿ ಸಮಾವೇಶ

Lok Sabha Election 2024: ಪ್ರಧಾನಿಯಾದ ಬಳಿಕ ಇದೇ ಮೊದಲ ಬಾರಿಗೆ ಶಿರಸಿಗೆ ನರೇಂದ್ರ ಮೋದಿ ಅವರು ಏ.28 ರಂದು ಬೆಳಿಗ್ಗೆ 11 ಗಂಟೆಗೆ ಆಗಮಿಸಲಿದ್ದಾರೆ. ಶಿರಸಿ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ಸಮಾವೇಶ ನಡೆಯಲಿದ್ದು, ಭರದ ಸಿದ್ಧತೆ ನಡೆದಿದೆ.

VISTARANEWS.COM


on

PM Narendra Modi will visit Sirsi on April 28
ಶಿರಸಿ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿರುವ ಸಮಾವೇಶಕ್ಕೆ ಭರದ ಸಿದ್ಧತೆ ನಡೆಯುತ್ತಿರುವುದು.
Koo

ಕಾರವಾರ: ಪ್ರಧಾನಿಯಾದ ಬಳಿಕ ಇದೇ ಮೊದಲ ಬಾರಿಗೆ ಶಿರಸಿಗೆ ನರೇಂದ್ರ ಮೋದಿ (PM Narendra Modi) ಅವರು ಏಪ್ರಿಲ್‌ 28 ರಂದು ಬೆಳಿಗ್ಗೆ 11 ಗಂಟೆಗೆ ಚುನಾವಣಾ (Lok Sabha Election 2024) ಪ್ರಚಾರಕ್ಕೆ ಆಗಮಿಸಲಿದ್ದಾರೆ.

ಮೊದಲ ಬಾರಿಗೆ ಶಿರಸಿಗೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ ಮತಯಾಚನೆ ನಡೆಸಲಿದ್ದಾರೆ.

ಇದನ್ನೂ ಓದಿ: Job Alert: ಹಟ್ಟಿ ಚಿನ್ನದ ಗಣಿ ಕಂಪೆನಿಯಲ್ಲಿದೆ ಸುವರ್ಣಾವಕಾಶ; 168 ಹುದ್ದೆಗಳಿಗೆ ಐಟಿಐ, ಡಿಪ್ಲೋಮಾ ಪಾಸಾದವರು ಅಪ್ಲೈ ಮಾಡಿ

ಇನ್ನು ಶಿರಸಿ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ಸಮಾವೇಶ ನಡೆಯಲಿದ್ದು, ಮದುವಣಗಿತ್ತಿಯಂತೆ ಸ್ಟೇಡಿಯಂ ಸಿದ್ಧಗೊಳ್ಳುತ್ತಿದೆ. ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣಕ್ಕೆ ಭೇಟಿ ನೀಡಿ ಪೂರ್ವ ಸಿದ್ಧತೆಯನ್ನು ವೀಕ್ಷಿಸಿದರು.

ಈ ವೇಳೆ ಮಾತನಾಡಿದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ಶಿರಸಿ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣಕ್ಕೆ ಯಾವುದೇ ರೀತಿಯ ಧಕ್ಕೆಯಾಗದಂತೆ ಜರ್ಮನ್ ಟೆಂಟ್ ನಿರ್ಮಿಸುತ್ತಿದ್ದೇವೆ. ಶಿರಸಿಯಲ್ಲಿ ಮೊದಲ ಬಾರಿ ಈ ತಂತ್ರಜ್ಞಾನ ಬಳಸಿ ಸಾರ್ವಜನಿಕ ಕಾರ್ಯಕ್ರಮ ಮಾಡುತ್ತಿದ್ದು, ತಿಪ್ಪಾದೇವಿ ಟೆಂಟ್ ಹೌಸ್‌ನ ಕೃಷ್ಣೇಗೌಡ್ರು ಸ್ಥಳದಲ್ಲಿಯೇ ಇದ್ದು ನಿರ್ಮಾಣದ ಜವಾಬ್ದಾರಿ ವಹಿಸಿದ್ದಾರೆ.

ಇದನ್ನೂ ಓದಿ: IPL 2024 : ಆರ್​​ಸಿಬಿಗೆ ಸಿಕ್ಕಿತು ಕೊನೆಗೂ ಒಂದು ವಿಜಯ; ಎಸ್​ಆರ್​ಎಚ್​ ವಿರುದ್ಧ 35 ರನ್ ಗೆಲುವು

ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕಾರ್ಯಕರ್ತರ 25 ತಂಡಗಳನ್ನು ರಚಿಸಿ ಬೇರೆ ಬೇರೆ ಜವಾಬ್ದಾರಿಗಳನ್ನು ಅವರಿಗೆ ವಹಿಸಿದ್ದೇವೆ. ಒಂದು ಲಕ್ಷಕ್ಕೂ ಅಧಿಕ ಜನರು ಆಗಮಿಸಲಿದ್ದಾರೆ ಎಂದು ಅವರು ತಿಳಿಸಿದರು.

Continue Reading

ಕರ್ನಾಟಕ

Bus driver Attacked : ಮುಸ್ಲಿಮ್ ಯುವಕರಿಂದ ಬಸ್​ ಚಾಲಕನ ಮೇಲೆ ಹಲ್ಲೆ, ನೌಕರರಿಂದ ​ ಠಾಣೆ ಮುಂಭಾಗ ಧರಣಿ

Bus Driver Attacked: ಧಾರವಾಡದಿಂದ ಬೈಲಹೊಂಗಕ್ಕೆ ಮುಸ್ಲಿಂ ಯುವಕರು ಬಂದಿದ್ದರು. ಬಸ್​​ ಬೈಲಹೊಂಗಲದಿಂದ ಧಾರವಾಡಕ್ಕೆ ಹೊರಟಿತ್ತು. ಬಸ್ ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಗುಂಪುಕಟ್ಟಿ ಹಲ್ಲೆ ನಡೆಸಿದ್ದರು. ಬೇಸತ್ತ ಚಾಲಕರು ವೃತ್ತಿಯ ವೇಳೆ ಸುರಕ್ಷತೆ ನೀಡಿ ಧರಣಿ ಮಾಡಿದ್ದರು. ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿರುವ ಸಾರಿಗೆ ಮೇಲಧಿಕಾರಿಗಳು ಬಂದು ಮಾತು ನಡೆಸಿದ್ದಾರೆ.

VISTARANEWS.COM


on

Bus Driver attacked
Koo

ಬೈಲಹೊಂಗಲ: ಬಸ್ ಚಾಲಕ ಮತ್ತು ನಿರ್ವಾಹಕನ ಮೇಲೆ ಮುಸ್ಲಿಂ ಯುವಕರು ಹಲ್ಲೆ ಮಾಡಿದ ಘಟನೆ (Bus driver Attacked) ನಡೆದಿದೆ. ಆಕ್ರೋಶಗೊಂಡ ಸಾರಿಗೆ ನೌಕರರು ಬೈಲಹೊಂಗಲ ಪೊಲೀಸ್ ಠಾಣೆಯ ಮುಂದೆ ಧರಣಿ ಕುಳಿತರು. ಚಾಲಕ ಬಸ್ ನಿಲ್ಲಿಸಲಿಲ್ಲ ಎಂದು ಹಲ್ಲೆ ಮಾಡಿದ ಆರೋಪ ಕೇಳಿ ಬಂದಿದೆ.

ಧಾರವಾಡದಿಂದ ಬೈಲಹೊಂಗಕ್ಕೆ ಮುಸ್ಲಿಂ ಯುವಕರು ಬಂದಿದ್ದರು. ಬಸ್​​ ಬೈಲಹೊಂಗಲದಿಂದ ಧಾರವಾಡಕ್ಕೆ ಹೊರಟಿತ್ತು. ಬಸ್ ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಗುಂಪುಕಟ್ಟಿ ಹಲ್ಲೆ ನಡೆಸಿದ್ದರು. ಬೇಸತ್ತ ಚಾಲಕರು ವೃತ್ತಿಯ ವೇಳೆ ಸುರಕ್ಷತೆ ನೀಡಿ ಧರಣಿ ಮಾಡಿದ್ದರು. ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿರುವ ಸಾರಿಗೆ ಮೇಲಧಿಕಾರಿಗಳು ಬಂದು ಮಾತು ನಡೆಸಿದ್ದಾರೆ. ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿ ಜೀಪ್ ಮರಕ್ಕೆ ಡಿಕ್ಕಿ; ಚಾಲಕ ಸ್ಥಳದಲ್ಲೇ ಸಾವು

ರಿಪ್ಪನ್‌ಪೇಟೆ: ಚಾಲಕನ ನಿಯಂತ್ರಣ ತಪ್ಪಿ ಜೀಪ್‌ವೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ (Road Accident) ಸ್ಥಳದಲ್ಲೇ ಚಾಲಕ ಮೃತಪಟ್ಟಿರುವ ಘಟನೆ ಹೊಸನಗರ ತಾಲೂಕಿನ ಅರಸಾಳು ಬಳಿಯ 9ನೇ ಮೈಲಿಕಲ್ಲಿನ ಸಮೀಪ ನಡೆದಿದೆ.

ರಿಪ್ಪನ್‌ಪೇಟೆ ಸಮೀಪದ ತಳಲೆ ನಿವಾಸಿ ಪ್ರಭೀನ್ (45) ಸ್ಥಳದಲ್ಲೇ ಮೃತಪಟ್ಟ ವ್ಯಕ್ತಿ. 9ನೇ ಮೈಲಿಕಲ್ಲು ಹಾಗೂ ಸೂಡೂರು ಗೇಟ್‌ ನ ನಡುವಿನ ಶೆಟ್ಟಿಕೆರೆ ಅಭಯಾರಣ್ಯದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಜೀಪ್ ಮರಕ್ಕೆ ಡಿಕ್ಕಿಯಾಗಿ ಪಲ್ಟಿ ಹೊಡೆದು ಉರುಳಿ ಬಿದ್ದಿದೆ.

ಇದನ್ನೂ ಓದಿ: lok sabha election : ಒಂದು ವರ್ಷದ ಕೂಸಿನೊಂದಿಗೆ ಚುನಾವಣಾ ಕರ್ತವ್ಯಕ್ಕೆ ಬಂದ ಪೊಲೀಸ್​​!

ಅಪಘಾತದಲ್ಲಿ ಜೀಪ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮೃತದೇಹವನ್ನು ಹೊರತೆಗೆಯಲು ಹರಸಾಹಸ ಪಡಲಾಯಿತು. ಮೃತದೇಹವನ್ನು ರಿಪ್ಪನ್‌ಪೇಟೆ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ರಿಪ್ಪನ್‌ಪೇಟೆ ಪಿಎಸ್‌ಐ ನಿಂಗರಾಜ್ ಕೆ.ವೈ. ಹಾಗೂ ಸಿಬ್ಬಂದಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ರಿಪ್ಪನ್‌ಪೇಟೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Continue Reading

ಪ್ರಮುಖ ಸುದ್ದಿ

lok sabha election : ಒಂದು ವರ್ಷದ ಕೂಸಿನೊಂದಿಗೆ ಚುನಾವಣಾ ಕರ್ತವ್ಯಕ್ಕೆ ಬಂದ ಪೊಲೀಸ್​​!

lok sabha election: ಚುನಾವಣಾ ಕಾರ್ಯಕ್ಕಾಗಿ ಮಹಿಳಾ ಪೊಲೀಸ್​ ಚಿತ್ರದುರ್ಗಕ್ಕೆ ಬಂದಿದ್ದರು. ಜತೆಗೆ ಅವರು ಒಂದು ವರ್ಷದ ಮಗುವಿನ ಕರೆತಂದಿದ್ದರು. ಕೋಟೆ ನಾಡಿನ ಬಿಸಿಲಿನ ಬೇಗೆಗೆ ತಾಯಿ, ಮಗು ತತ್ತರಗೊಂಡಿದ್ದರು. ಸುಡು ಬಿಸಿಲು ಹಾಗೂ ಕಾಡುವ ಒಂದು ವರ್ಷದ ಮಗುವಿನಿಂದಾಗಿ ಪರದಾಟ ನಡೆಸಿದ್ದರು.

VISTARANEWS.COM


on

lok sabha Election
Koo

ಚಿತ್ರದುರ್ಗ: ಒಂದು ವರ್ಷದ ಹಸುಗೂಸು ಇರುವ ಮಹಿಳಾ ಪೊಲೀಸ್​ ಪೇದೆಯೊಬ್ಬರನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿದ್ದ ಕಾರಣ, ತಾಯಿ ಮಗು ಬಿಸಿಲಲ್ಲಿ ಪರಿತಪಿಸಿದ ಪ್ರಸಂಗ ನಡೆದಿದೆ. ಚಿತ್ರದುರ್ಗದ ಕಲಾ ಕಾಲೇಜಿನಲ್ಲಿ ನಡೆದ ಮಸ್ಟರಿಂಗ್ ಸಂದರ್ಭದಲ್ಲಿ ಕಂಡು ಬಂದ ದೃಶ್ಯ ಕಂಡು ಬಂದಿದೆ.

ಚುನಾವಣಾ ಕಾರ್ಯಕ್ಕಾಗಿ ಮಹಿಳಾ ಪೊಲೀಸ್​ ಚಿತ್ರದುರ್ಗಕ್ಕೆ ಬಂದಿದ್ದರು. ಜತೆಗೆ ಅವರು ಒಂದು ವರ್ಷದ ಮಗುವಿನ ಕರೆತಂದಿದ್ದರು. ಕೋಟೆ ನಾಡಿನ ಬಿಸಿಲಿನ ಬೇಗೆಗೆ ತಾಯಿ, ಮಗು ತತ್ತರಗೊಂಡಿದ್ದರು. ಸುಡು ಬಿಸಿಲು ಹಾಗೂ ಕಾಡುವ ಒಂದು ವರ್ಷದ ಮಗುವಿನಿಂದಾಗಿ ಪರದಾಟ ನಡೆಸಿದ್ದರು.

ಬೀದರ್ ಜಿಲ್ಲೆಯ ಚಿಟಗುಪ್ಪ ಪೊಲೀಸ್ ಠಾಣೆ ಸಿಬ್ಬಂದಿ ಶರಣಮ್ಮ ರದಾಡಿದ ಪೊಲೀಸ್​ ಪೇದೆ. ತಮ್ಮ ಒಂದು ವರ್ಷದ ಮಗುವಿನ ಜೊತೆ ಚುನವಣಾ ಕಾರ್ಯಕ್ಕೆ ಹಾಜರಾಗಿದ್ದ ಶರಣಮ್ಮ. ಊಟ ಮಾಡಲೂ ಬಿಡದೇ ತಾಯಿಗೆ ಮಗು ತಾಯಿಗೆ ಕಾಡಿಸುತ್ತಿತ್ತು. ತಾಯಿ, ಮಗುವಿನ ಪರದಾಟ ಕಂಡು ಉಳಿದ ಸಿಬ್ಬಂದಿ ಅವರ ನೆರವಿಗೆ ಬಂದಿದ್ದರು.

ಸ್ಕೂಟರ್‌ನಲ್ಲೇ ಆನ್‌ಲೈನ್‌ ಮೀಟಿಂಗ್‌ ನಡೆಸಿದ ಮಹಿಳೆ

ಬೆಂಗಳೂರು: ಸಿಲಿಕಾನ್‌ ಸಿಟಿ, ಗಾರ್ಡನ್‌ ಸಿಟಿ, ಐಟಿ ಸಿಟಿ ಎಂದೆಲ್ಲ ಕರೆಯಿಸಿಕೊಳ್ಳುವ ಬೆಂಗಳೂರು ಬಹುತೇಕ ಎಲ್ಲರಿಗೂ ಪ್ರಿಯ. ಹೀಗೆ ಎಲ್ಲರ ನೆಚ್ಚಿನ ನಮ್ಮ ಬೆಂಗಳೂರು ಬಗ್ಗೆ ಹಲವರ ಆಕ್ಷೇಪ ಇರುವುದು ಟ್ರಾಫಿಕ್‌ ವಿಚಾರದಲ್ಲಿ. ಟ್ರಾಫಿಕ್‌ ಸಮಸ್ಯೆ ಬೆಂಗಳೂರಿಗರನ್ನು ಹೆಚ್ಚಿನ ಸಂದರ್ಭಗಳಲ್ಲಿ ಹೈರಾಣಾಗಿಸುತ್ತದೆ (Bengaluru Traffic). ಬೆಂಗಳೂರಿನ ಈ ಟ್ರಾಫಿಕ್‌ ಸಮಸ್ಯೆಗೆ ಪರಿಹಾರವೇ ಇಲ್ಲ ಎನ್ನುವಂತಾಗಿದೆ. ಬೆಂಗಳೂರು ಟ್ರಾಫಿಕ್‌ ಬಗ್ಗೆ ತಹೇವಾರಿ ಕಥೆ ಹುಟ್ಟಿಕೊಳ್ಳುತ್ತದೆ. ಟ್ರಾಫಿಕ್‌ಗೆ ಸಿಲುಕಿ ಅನೇಕ ವಿಶಿಷ್ಟ ಸಂಗತಿ ಜರಗುತ್ತವೆ. ಅದಕ್ಕೆ ತಕ್ಕ ಉದಾಹರಣೆ ಎನ್ನುವಂತಿದೆ ಈ ವೈರಲ್‌ ವಿಡಿಯೊ (Viral Video). ಅಷ್ಟಕ್ಕೂ ಈ ವಿಡಿಯೊದಲ್ಲಿ ಏನಿದೆ? ಇಲ್ಲಿದೆ ವಿವರ.

ಇದನ್ನೂ ಓದಿ: khalistan Movement : ಲಂಡನ್​ ಭಾರತ ಹೈಕಮಿಷನ್​ ಮೇಲೆ ದಾಳಿ ಮಾಡಿದ್ದ ಖಲಿಸ್ತಾನಿ ಉಗ್ರ ಎನ್​ಐಎ ವಶಕ್ಕೆ

ಟ್ರಾಫಿಕ್‌ನಲ್ಲಿ ಸಿಕ್ಕಿಹಾಕಿಕೊಂಡ ಸ್ಕೂಟರ್‌ ಚಲಾಯಿಸುತ್ತಿದ್ದ ಮಹಿಳೆಯೊಬ್ಬರು ಅಲ್ಲೇ ಆನ್‌ಲೈನ್‌ ಮೀಟಿಂಗ್‌ನಲ್ಲಿ ಭಾಗಿಯಾಗುತ್ತಾರೆ. ʼವರ್ಕ್‌ ಫ್ರಮ್‌ ಟ್ರಾಫಿಕ್‌ʼ ಎನ್ನುವ ಶೀರ್ಷಿಕೆಯಡಿ ವಿಡಿಯೊವನ್ನು ಶೇರ್‌ ಮಾಡಲಾಗಿದೆ. ಬೆಂಗಳೂರಿನಲ್ಲಿ ಇದು ಸಾಮಾನ್ಯ ಎಂದೂ ಬರೆಯಲಾಗಿದೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಂಚಿಕೊಳ್ಳಲಾದ ಈ ವಿಡಿಯೊ ನೆಟ್ಟಿಗರ ಗಮನ ಸೆಳೆದಿದೆ.

ವಿಡಿಯೊದಲ್ಲಿ ಏನಿದೆ?
ಟ್ರಾಫಿಕ್‌ನಲ್ಲಿ ಸಿಲುಕಿಕೊಂಡ ಮಹಿಳೆ ಸ್ಕೂಟರ್‌ ಅನ್ನು ಒಂದು ಬದಿಗೆ ನಿಲ್ಲಿಸಿ ಆನ್‌ಲೈನ್‌ ಮೀಟಿಂಗ್‌ಗೆ ಹಾಜರಾಗುತ್ತಾರೆ. ಕ್ಯಾಮೆರಾವನ್ನು ಮಹಿಳೆಯ ಮೊಬೈಲ್‌ಗೆ ಝೂಮ್‌ ಮಾಡಿದಾಗ ಅವರು ಮೀಟಿಂಗ್‌ನಲ್ಲಿ ಭಾಗವಹಿಸಿರುವುದು ಸ್ಪಷ್ಟವಾಗುತ್ತದೆ. ಜತೆಗೆ ವಿಡಿಯೊ ಹಲವು ವಾಹನಗಳು ಸಾಲುಗಟ್ಟಿ ನಿಂತು ಟ್ರಾಫಿಕ್‌ ಜಾಮ್‌ ಆಗಿರುವುದನ್ನು ತೋರಿಸುತ್ತದೆ. ಮಹಿಳೆಗೆ ಕರ್ತವ್ಯ ಪ್ರಜ್ಞೆಗೆ ಹಲವರು ಶಬ್ಬಾಶ್‌ಗಿರಿ ತಿಳಿಸಿದ್ದಾರೆ.

ಆಧುನಿಕ ಯುಗದಲ್ಲಿ ವೈಯಕ್ತಿಕ ಬದುಕು ಮತ್ತು ಉದ್ಯೋಗವನ್ನು ಸಮತೋಲನಗೊಳಿಸಲೇಬೇಕಾದ ಅನಿವಾರ್ಯತೆಯನ್ನು ಇದು ಒತ್ತಿ ಹೇಳುತ್ತದೆ. ಜತೆಗೆ ಡಿಜಿಟಲ್‌ ಫ್ಲಾಟ್‌ಫಾರ್ಮ್‌ಗಳ ಮೇಲೆ ಹೆಚ್ಚುತ್ತಿರುವ ಅವಲಂಬನೆಯನ್ನೂ ಇದು ಪ್ರತಿನಿಧಿಸುತ್ತದೆ.

Continue Reading
Advertisement
drinking ors
ಆರೋಗ್ಯ7 mins ago

ORS: ಒಆರ್‌ಎಸ್‌ ಜೀವಜಲ; ಯಾರು, ಎಷ್ಟು ಪ್ರಮಾಣದಲ್ಲಿ ಸೇವಿಸಬಹುದು?

Dina bhavishya
ಭವಿಷ್ಯ1 hour ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Lok sabha Election
ಪ್ರಮುಖ ಸುದ್ದಿ6 hours ago

ವಿಸ್ತಾರ ಸಂಪಾದಕೀಯ: ಈ ದಿನ ನಮ್ಮದು, ನಮ್ಮ ಅಧಿಕಾರ ಚಲಾಯಿಸೋಣ

food
ಕರ್ನಾಟಕ6 hours ago

Food Poisoning : ಮದುವೆ ಮನೆ ಊಟ ತಿಂದ ನೂರಾರು ಮಂದಿ ಅಸ್ವಸ್ಥ; ಆಸ್ಪತ್ರೆಯಲ್ಲಿ ಹಾಹಾಕಾರ

PM Narendra Modi will visit Sirsi on April 28
ಉತ್ತರ ಕನ್ನಡ6 hours ago

Lok Sabha Election 2024: ಶಿರಸಿಯಲ್ಲಿ ಏಪ್ರಿಲ್‌ 28ರಂದು ಪ್ರಧಾನಿ ನರೇಂದ್ರ ಮೋದಿ ಸಮಾವೇಶ

Bus Driver attacked
ಕರ್ನಾಟಕ6 hours ago

Bus driver Attacked : ಮುಸ್ಲಿಮ್ ಯುವಕರಿಂದ ಬಸ್​ ಚಾಲಕನ ಮೇಲೆ ಹಲ್ಲೆ, ನೌಕರರಿಂದ ​ ಠಾಣೆ ಮುಂಭಾಗ ಧರಣಿ

IPL 2024
ಪ್ರಮುಖ ಸುದ್ದಿ7 hours ago

IPL 2024 : ಆರ್​​ಸಿಬಿಗೆ ಸಿಕ್ಕಿತು ಕೊನೆಗೂ ಒಂದು ವಿಜಯ; ಎಸ್​ಆರ್​ಎಚ್​ ವಿರುದ್ಧ 35 ರನ್ ಗೆಲುವು

Viral News
ವೈರಲ್ ನ್ಯೂಸ್7 hours ago

Viral News: ವಾಟರ್‌ ಪ್ಯೂರಿಫೈಯರ್‌ನಿಂದ ನೀರು ಕುಡಿದ ಬುದ್ಧಿವಂತ ಮಂಗ; ವಿಡಿಯೊ ನೀವೂ ನೋಡಿ

lok sabha Election
ಪ್ರಮುಖ ಸುದ್ದಿ7 hours ago

lok sabha election : ಒಂದು ವರ್ಷದ ಕೂಸಿನೊಂದಿಗೆ ಚುನಾವಣಾ ಕರ್ತವ್ಯಕ್ಕೆ ಬಂದ ಪೊಲೀಸ್​​!

Car Accident
ಪ್ರಮುಖ ಸುದ್ದಿ7 hours ago

Car Accident : ಟೈರ್​ ಬ್ಲಾಸ್ಟ್​ ಆಗಿ ಬೈಕ್​ಗೆ ಗುದ್ದಿ ಪಲ್ಟಿಯಾದ ಕಾರು; ಇಬ್ಬರ ದುರ್ಮರಣ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina bhavishya
ಭವಿಷ್ಯ1 hour ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ14 hours ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ14 hours ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ17 hours ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 202419 hours ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ2 days ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು4 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ4 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು4 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

ಟ್ರೆಂಡಿಂಗ್‌