ಕೊಪ್ಪಳ: ತಾಲೂಕಿನ ಹುಲಗಿ ಗ್ರಾಮದ ಶ್ರೀ ಹುಲಿಗೆಮ್ಮದೇವಿ ಜಾತ್ರಾ ಮಹೋತ್ಸವ ಅಂಗವಾಗಿ ಶುಕ್ರವಾರ ಅಪಾರ ಭಕ್ತಸಾಗರದ ನಡುವೆ ಮಹಾರಥೋತ್ಸವವು ವಿಜೃಂಭಣೆಯಿಂದ (Koppala News) ಜರುಗಿತು.
ಇದನ್ನೂ ಓದಿ: Old Students Association: ಸರ್ಕಾರಿ ಶಾಲೆಗಳಲ್ಲಿ ಹಳೇ ವಿದ್ಯಾರ್ಥಿಗಳ ಸಂಘ, ವಾಟ್ಸ್‌ಆ್ಯಪ್ ಗ್ರೂಪ್ ರಚಿಸಲು ಆದೇಶ
ಉತ್ತರ ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾಗಿರುವ ಹುಲಗಿಯ ಶ್ರೀ ಹುಲಿಗೆಮ್ಮ ದೇವಿಯ ಪ್ರಸಕ್ತ ಸಾಲಿನ ಜಾತ್ರಾ ಮಹೋತ್ಸವದ ಅಂಗವಾಗಿ ಗುರುವಾರದಿಂದ ಜೂನ್ 3 ರ ಸೋಮವಾರದವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿದ್ದು, ಶುಕ್ರವಾರ ಸಂಜೆ ಮಹಾರಥೋತ್ಸವವು ಲಕ್ಷಾಂತರ ಭಕ್ತಾಧಿಗಳ ಸಮೂಹದ ನಡುವೆ ಅದ್ದೂರಿಯಾಗಿ ನಡೆಯಿತು.
ಸುಮಾರು 5 ಲಕ್ಷಕ್ಕೂ ಅಧಿಕ ಭಕ್ತಾದಿಗಳು ಭಾಗಿ
ಶ್ರೀ ಹುಲಿಗೆಮ್ಮ ದೇವಿ ಮಹಾರಥೋತ್ಸವದಲ್ಲಿ ಭಕ್ತರ ಉಧೋ ಉಧೋ ಘೋಷಣೆ ಮುಗಿಲು ಮುಟ್ಟಿತ್ತು. ಭಕ್ತವೃಂದ ರಥಕ್ಕೆ ಬಾಳೆಹಣ್ಣು, ಉತ್ತತ್ತಿ ಸಮರ್ಪಿಸಿ, ಭಕ್ತಿ ಭಾವ ಮೆರೆದರು. ಕರ್ನಾಟಕದ ವಿವಿಧ ಜಿಲ್ಲೆಗಳ ಮತ್ತು ಆಂಧ್ರಪ್ರದೇಶದ, ತೆಲಂಗಾಣ, ತಮಿಳುನಾಡು, ಮಹಾರಾಷ್ಟ್ರ ಹಾಗೂ ಇತರೆ ರಾಜ್ಯಗಳ ಸುಮಾರು ಐದು ಲಕ್ಷಕ್ಕೂ ಅಧಿಕ ಭಕ್ತಾದಿಗಳು ಜಾತ್ರೆಗೆ ಆಗಮಿಸಿ, ಮಹಾರಥೋತ್ಸವವನ್ನು ಕಣ್ತುಂಬಿಕೊಂಡರು.
ರಥೋತ್ಸವ ಸಂದರ್ಭದಲ್ಲಿ ಕೊಪ್ಪಳ ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ, ಹುಲಿಗೆಮ್ಮ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅರವಿಂದ್ ಸುತಗುಂಡಿ ಹಾಗೂ ಕೊಪ್ಪಳ ಮತ್ತು ಗಂಗಾವತಿ ಡಿವೈಎಸ್ಪಿಗಳು ಹಾಗೂ ಇತರರು ಉಪಸ್ಥಿತರಿದ್ದರು