Maha Shivaratri 2024: ಮಹಾಶಿವರಾತ್ರಿ: ಧ್ಯಾನಪ್ರಿಯ ಶಿವನ ನೆನೆಯಲೊಂದು ದಿನ - Vistara News

ಧಾರ್ಮಿಕ

Maha Shivaratri 2024: ಮಹಾಶಿವರಾತ್ರಿ: ಧ್ಯಾನಪ್ರಿಯ ಶಿವನ ನೆನೆಯಲೊಂದು ದಿನ

Maha Shivaratri: ಶಿವನು ಸರಳತೆ, ಪ್ರಾಮಾಣಿಕತೆ ಮತ್ತು ನಿಷ್ಕಲ್ಮಶ ಮನಸ್ಸುಗಳ ಪ್ರತೀಕ. ಧ್ಯಾನಪ್ರಿಯ ಶಿವ ಭಕ್ತರಿಂದ ಬಯಸುವುದು ಕಲ್ಮಶವಿಲ್ಲದ ಮತ್ತು ಪ್ರಾಮಾಣಿಕ ಭಕ್ತಿ ಮಾತ್ರ.

VISTARANEWS.COM


on

Maha Shivaratri
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

:: ಪ್ರೊ. ವಿದ್ವಾನ್ ನವೀನಶಾಸ್ತ್ರಿ ರಾ.ಪುರಾಣಿಕ
ಲೇಖಕರು ಸಂಸ್ಕೃತ ಉಪನ್ಯಾಸಕರು, ಅಂಕಣಕಾರರು ಹಾಗೂ ಖ್ಯಾತ ಜ್ಯೋತಿಷಿ

Maha Shivaratri: ಭವ್ಯ ಭಾರತದ ಸಾಂಸ್ಕೃತಿಕ ಪರಂಪರೆಯ ಶ್ರೇಷ್ಠತೆಯನ್ನು ಸಾರುವ ಮೂಲಕ ಈ ಹಬ್ಬ ಹರಿದಿನಗಳು ಮನುಷ್ಯರ ಮನಸ್ಸನ್ನೂ ಸದಾ ನೆಮ್ಮದಿ ಮತ್ತು ಸಂತೋಷವಾಗಿ ಇರಲೆಂದು, ಕಾಲಕಾಲಕ್ಕೆ ಬದಲಾಗುವ ಋತು ನಿಯಮಗಳಿಗೆ ಅನುಗುಣವಾಗಿ ನಮ್ಮ ಹಿರಿಯರು ಭಗವಂತನ ಪ್ರತಿರೂಪವನ್ನು ಸೃಷ್ಟಿಯಲ್ಲಿ ದೃಷ್ಟಿಯಿಟ್ಟು ಮಾನವ ಜನಾಂಗದ ಏಳಿಗೆಗೆ ಶ್ರಮಿಸಿದ್ದಾರೆ. ಪಂಚಭೂತಗಳಲ್ಲಿ ದೇವರನ್ನು ಹುಡುಕಿದ್ದಾರೆ. ಹೀಗಾಗಿ ಭಾರತ ಪ್ರತ್ಯಕ್ಷ ಸಂಸ್ಕೃತಿಯ ಜೀವಂತ ಸ್ವರ್ಗದ ಪ್ರತಿ ರೂಪ.

ಭಾರತ ಸಂಪ್ರದಾಯವನ್ನು ಪಾಲಿಸುವ ಮತ್ತು ಧರ್ಮವನ್ನು ಗೌರವಿಸುವ ದೇಶ. ಇದು ಈ ನೆಲದ ಸಂಸ್ಕಾರ. ಇಲ್ಲಿಯ ಪ್ರತಿ ಹಬ್ಬಕ್ಕೂ ಒಂದೊಂದು ಬಗೆಯ ಮಹತ್ವವನ್ನು ಹಿರಿಯರು ಹಾಕಿಕೊಟ್ಟ ನಿಯಮಗಳನ್ನು ಇನ್ನೂ ಪಾಲಿಸುತ್ತಾ ಬರುತ್ತಿದ್ದೇವೆ ಎಂಬುದೇ ಸಂಪ್ರದಾಯ.

ಸಕಾಲ ಜೀವರಾಶಿಗಳನ್ನು ಪೊರೆಯುವ ಶಿವ ಎಲ್ಲಾ ಆಡಂಬರಗಳಿಂದ ಮುಕ್ತ. ಆತ ಆಭರಣಪ್ರಿಯನಲ್ಲ, ಅಲಂಕಾರ ಪ್ರಿಯನೂ ಅಲ್ಲ. ಭಸ್ಮವನ್ನು ಬಳಿದುಕೊಂಡು, ವ್ಯಾಘ್ರ ಚರ್ಮವನ್ನು ತೊಟ್ಟು, ಸ್ಮಶಾನದಲ್ಲಿರುವ ಸರಳ ಮತ್ತು ಅಮೋಘ ಶಕ್ತಿ. ಶಿವನ ಆರಾಧನೆಗೆ ಅಲಂಕಾರಕ್ಕೆ ಮಲ್ಲಿಗೆ, ಸಂಪಿಗೆಯ ಸಿರಿತನ ಇಲ್ಲ. ಬೇಲಿ ಬದಿಯ ತುಂಬೆ ಹೂ, ಬಿಲ್ವ ಪತ್ರೆಯೋ, ಯಾವುದೂ ಸಿಗದ ಪಕ್ಷದಲ್ಲಿ ತಿಲಾಕ್ಷತೆ ಸಾಕು. ಇಲ್ಲವಾದರೆ ಇಲ್ಲ. ಭಕ್ತರಿಂದ ಯಾವುದೇ ಸಿರಿತನದ ಅಲಂಕಾರವನ್ನು ಬಯಸದವನು ಈ ಶಿವ. ಇಂತಹ ಶಿವನನ್ನು ನೆನೆಯುವ ದಿನ ಇಂದು.

ಈ ದಿನದಂದು ಕೈಲಾಸ ವಾಸ ಪರಶಿವನನ್ನು ಕೋಟಿ ಕೋಟಿ ಜನರು ಭಜಿಸಿ ಪೂಜಿಸುತ್ತಾರೆ. ಶಿಶಿರ ಋತುವಿನ ಮಾಘ ಮಾಸದ ಕೃಷ್ಣ ಪಕ್ಷ ಬಹುಳ ಚತುರ್ದಶಿಯಂದು ಬರುವ ಶಿವರಾತ್ರಿಯ ದಿನ ಭಕ್ತಾದಿಗಳು ಶಂಭೋ ಶಂಕರನನ್ನು ನೆನೆದು, ಪುನೀತರಾಗುತ್ತಾರೆ. ತನ್ನ ನಂಬಿ ಬಂದ ಭಕ್ತರ ಇಷ್ಟಾರ್ಥಗಳಿಗೆ ಎಂದಿಗೂ ನಿರಾಸೆ ಮಾಡದ ದಯಾಮಯಿ ಶಿವನಿಗೆ ಶಿವರಾತ್ರಿಯಂದು ದೇಶಾದ್ಯಂತ ವಿಶೇಷ ಪೂಜೆಗಳು ನೆರವೇರುತ್ತವೆ. ಇಡೀ ಭಾರತದಾದ್ಯಂತ ಬಹುತೇಕ ಎಲ್ಲಾ ಭಾಗಗಳಲ್ಲೂ ಆಚರಿಸುವ ಹಬ್ಬ ಇದು. ಈ ಹಬ್ಬದಂದು ದಿನವಿಡೀ ಪೂಜೆ, ಉಪವಾಸ ಮಾಡಿ, ರಾತ್ರಿಯಿಡೀ ಜಾಗರಣೆ ಮಾಡಿ ಶಿವನನ್ನು ಆರಾಧಿಸುವ ಸಂಪ್ರದಾಯವಿದೆ.

ಶಿವಪುರಾಣದಲ್ಲಿ ಶಿವಾರಾತ್ರಿಯ ಆಚರಣೆ ಬಂದಿರುವ ಬಗ್ಗೆ ಒಂದು ಸಣ್ಣ ಕಥೆ ಹೀಗಿದೆ. ದೇವಲೋಕದಲ್ಲಿ ಒಮ್ಮೆ ಬ್ರಹ್ಮ ಹಾಗೂ ವಿಷ್ಣುವಿನ ನಡುವೆ ಯಾರು ಶ್ರೇಷ್ಠರು ಎಂಬ ವಿಷಯಕ್ಕೆ ವಾಗ್ವಾದಗಳು ನಡೆಯುತ್ತಿದ್ದವು. ಮಹಾ ದೇವತೆಗಳಿಬ್ಬರನ್ನೂ ಸಮಾಧಾನ ಮಾಡುವುದು ದುರ್ಲಭ ಎನಿಸಿದಾಗ, ದೇವತೆಗಳೆಲ್ಲ ಹೋಗಿ ಪರಶಿವನನ್ನು ಬೇಡಿಕೊಳ್ಳುತ್ತಾರೆ. ವಿಷ್ಣು ಹಾಗೂ ಬ್ರಹ್ಮರ ಜಗಳವನ್ನು ಶಮನ ಮಾಡುವಂತೆ ಕೋರಿಕೊಳ್ಳುತ್ತಾರೆ. ಆಗ ವಿಷ್ಣು ಮತ್ತು ಬ್ರಹ್ಮರ ನಡುವೆ ಶಿವ, ಅಗ್ನಿಕಂಭದ ರೂಪದಲ್ಲಿ ಬಂದು ನಿಂತು ತನ್ನ ಮೂಲವನ್ನು ಕಂಡುಹಿಡಿಯಲು ಸೂಚಿಸುತ್ತಾನೆ.

ಆಗ ಹಂಸದ ರೂಪ ತಾಳಿದ ಬ್ರಹ್ಮ ಅಗ್ನಿ ಕಂಭದ ಶಿರವನ್ನು ಹುಡುಕಲು ಮೇಲ್ಮುಖವಾಗಿ ಹೊರಡುತ್ತಾನೆ. ವಿಷ್ಣು ವರಾಹವತಾರ ತಾಳಿ ಕಂಭದ ತಳವನ್ನು ನೋಡುವುದಕ್ಕಾಗಿ ಪಾತಾಳಕ್ಕೆ ಇಳಿಯುತ್ತಾನೆ. ಎಷ್ಟೇ ಮುಂದೆ ಸಾಗಿದರೂ ಬ್ರಹ್ಮ ಹಾಗೂ ವಿಷ್ಣು ಇವರಿಬ್ಬರಿಗೂ ಕಂಭದ ಅಂತ್ಯವೇ ಕಾಣುವುದಿಲ್ಲ. ಅನಂತವಾಗಿರುವ ಶಿವನ ಶಕ್ತಿಯನ್ನು ನೋಡಿದ ವಿಷ್ಣು ಹಾಗೂ ಬ್ರಹ್ಮರಿಗೆ ಸತ್ಯದ ಅರಿವಾಗುತ್ತದೆ. ಆದರೆ ಶಿವನ ಜಡೆಯಿಂದ ಕೆಳಗೆ ಬೀಳುತ್ತಿದ್ದ ಕೇತಕಿ ಪುಷ್ಪದ ಬಳಿ ಬ್ರಹ್ಮ, ನೀನು ಎಲ್ಲಿಂದ ಬೀಳುತ್ತಿದ್ದೀಯ ಎಂದು ಪ್ರಶ್ನಿಸುತ್ತಾನೆ. ಆಗ ಆ ಪುಷ್ಪವು ನಾನು ಅಗ್ನಿ ಕಂಭದ ಶಿರದಿಂದ ಬೀಳುತ್ತಿದ್ದೇನೆ ಎಂಬ ಉತ್ತರ ನೀಡುತ್ತದೆ. ಆಗ ಬ್ರಹ್ಮ ಶಿವನಲ್ಲಿಗೆ ಬಂದು ಕೇತಕಿ ಪುಪ್ಪವನ್ನು ತೋರಿಸಿ, ತಾನು ಅಗ್ನಿ ಕಂಭದ ಶಿರಭಾಗವನ್ನು ನೋಡಿರುವುದಾಗಿಯೂ ಅಲ್ಲಿಂದಲೇ ಕೇತಕಿ ಪುಷ್ಪವನ್ನು ತಂದಿರುವುದಾಗಿಯೂ ಹೇಳುತ್ತಾನೆ. ಇವರಿಬ್ಬರ ಮೋಸವನ್ನು ಅರಿತ ಶಿವ, ಬ್ರಹ್ಮನನ್ನು ಯಾರೂ ಪೂಜಿಸಕೂಡದು ಎಂದು ಶಾಪ ನೀಡಿ ಲಿಂಗರೂಪ ತಾಳುತ್ತಾನೆ. ಅಂದು ಮಾಘ ಮಾಸದ ಬಹುಳ ಚತುರ್ದಶಿಯಾಗಿರುತ್ತದೆ. ಹೀಗಾಗಿ, ಶಿವ ಲಿಂಗರೂಪ ತಾಳಿದ ಮಾಘ ಮಾಸದ ಬಹುಳ ಚತುರ್ದಶಿಯಂದು ಶಿವರಾತ್ರಿಯನ್ನು ಆಚರಿಸಲಾಗುತ್ತದೆ.

ಬೇಡನ ಶಿವಭಕ್ತಿ

ಶಿವರಾತ್ರಿ ಆಚರಣೆಯ ಕುರಿತಾಗಿ ಪ್ರಚಲಿತದಲ್ಲಿರುವ ಕಥೆಯಿದು. ಹಿಂದೆ ಬೇಡನೊಬ್ಬ ಕಾಡಿನಲ್ಲಿ ಬೇಟೆಗಾಗಿ ತೆರಳಿದ್ದ. ದಿನವಿಡಿ ಅಲೆದರೂ ಆತನಿಗೆ ಯಾವುದೇ ಬೇಟೆ ಸಿಗಲಿಲ್ಲ. ಬೇಟೆ ಅರಸಿ ಹೊರಟ ಬೇಡ ದಾರಿ ತಪ್ಪಿ ಅರಣ್ಯದಲ್ಲೇ ಅಲೆಯತೊಡಗಿದ. ಅದಾಗಲೇ ಸಂಜೆಯಾಗಿತ್ತು. ಕ್ರೂರ ಪ್ರಾಣಿಗಳು ಆತನನ್ನು ಸುತ್ತುವರಿಯತೊಡಗಿದವು. ಭಯಗ್ರಸ್ತನಾದ ಬೇಡ ಮರವೇರಿದ. ಮನದಲ್ಲೇ ಶಿವನನ್ನು ಧ್ಯಾನಿಸುತ್ತಾ ಮರದ ಎಲೆಗಳನ್ನು ಕಿತ್ತು ಕೆಳಗಡೆ ಹಾಕತೊಡಗಿದ. ಆ ಎಲೆಗಳು ಅವನಿಗರಿವಿಲ್ಲದಂತೆಯೇ ಕೆಳಗಡೆಯಿದ್ದ ಶಿವಲಿಂಗದ ಮೇಲೆ ಬೀಳತೊಡಗಿದವು. ಕಾಕತಾಳೀಯವೆಂದರೆ ಆತ ಏರಿದ್ದ ಮರ ಬಿಲ್ವಮರವಾಗಿತ್ತು. ಶಿವರಾತ್ರಿಯಂದು ಪೂರ್ತಿ ಜಾಗರಣೆಯಿದ್ದು, ಬಿಲ್ವಪತ್ರೆಯನ್ನು ಶಿವನಿಗೆ ಅರ್ಪಿಸಿದ ಬೇಡನಿಗೆ ಶಿವ ಅಭಯ ನೀಡಿದ. ಶಿವನೇ ಆತನನ್ನು ರಕ್ಷಿಸಿದ ಎಂಬ ಸುದ್ದಿ ಹರಡಿ ಭಕ್ತರು ಶಿವರಾತ್ರಿಯಂದು ಶಿವನನ್ನು ಪೂಜಿಸಲು ಆರಂಭಿಸಿದರು. ಪುಣ್ಯದ ಫಲವಾಗಿ ಬೇಡ ಮುಂದಿನ ಜನ್ಮದಲ್ಲಿ ರಾಜಾ ಚಿತ್ರಭಾನುವಾಗಿ ಜನಿಸಿದ ಎಂಬುದು ಕಥೆ.

ಮಹಾಭಾರತದಲ್ಲಿ ಬರುವ ಈ ಕಥೆಯನ್ನು ಮರಣಶಯ್ಯೆಯಲ್ಲಿ ಮಲಗಿದ್ದ ಭೀಷ್ಮ ಹೇಳಿದನೆಂಬುದು ಪ್ರತೀತಿಯಿದೆ. ಅಲ್ಲದೆ ʻಶಿವ ಪುರಾಣ’ ದಲ್ಲಿ ಬರುವ ಬೇಡರ ಕಣ್ಣಪ್ಪನ ಕಥೆ, ಸ್ಕಂದ ಪುರಾಣದ ಬೇಡ ಚಂದನನ ಕಥೆ, ಗರುಡ ಮತ್ತು ಅಗ್ನಿ ಪುರಾಣಗಳ ಬೇಡ ಸುಂದರ ಸೇನನ ಕಥೆ. ಈ ಎಲ್ಲ ಕಥೆಗಳಲ್ಲೂ ಒಂದು ವಿಶೇಷವಾದ ಸಾಮ್ಯತೆಯನ್ನು ಕಾಣಬಹುದು. ಮಹಾ ಶಿವರಾತ್ರಿಯಂದು ಉಪವಾಸ ಮಾಡಿ ಶಿವನಿಗೆ ಅಭಿಷೇಕ ಮಾಡಿ ಬಿಲ್ವ ಪತ್ರೆಗಳನ್ನು ಅರ್ಪಿಸಿದ್ದರಿಂದ ಅವರೆಲ್ಲರಿಗೂ ಸದ್ಗತಿ ಪ್ರಾಪ್ತವಾಯಿತು. ಇದು ಶಿವರಾತ್ರಿ ಪೂಜೆಯ ಫಲದ ಮಹಿಮೆಯನ್ನು ಎತ್ತಿ ತೋರಿಸುತ್ತದೆ. ಕರುಣಾಮಯಿಯಾದ ಶಿವನನ್ನು ಭಕ್ತಿ ಪೂರಕವಾಗಿ ಯಾರೇ ಪೂಜಿಸಿದರೂ ಅವರನ್ನು ಅನುಗ್ರಹಿಸುತ್ತಾನೆ. ಹಿಂದು ಮುಂದು ನೋಡದೇ ಅವರಿಗೆ ಬೇಡಿದ ವರಗಳನ್ನು ನೀಡುತ್ತಾನೆ. ಭಕ್ತಿಗೆ ಮರುಳಾಗುವ ಶಿವನು ಹೀಗೆ ತನ್ನ ಭಕ್ತರಿಗೆ ಬೇಡಿದ ವರವನ್ನು ನೀಡುವುದರ ಮೂಲಕ ಎಷ್ಟೋ ಸಲ ಸಂಕಟಕ್ಕೆ ಸಿಲುಕಿದ್ದೂ ಪುರಾಣಗಳಲ್ಲಿ ಉಲ್ಲೇಖವಿದೆ. ಆದರೆ ಎಂಥದ್ದೇ ಸಂಕಟವಿದ್ದರೂ ಶಿವನು ಭಕ್ತರನ್ನು ಸದಾ ಅನುಗ್ರಹಿಸುತ್ತಲೇ ಇರುತ್ತಾನೆ. ಅದಕ್ಕೆ “ಶಿವ ಭಕ್ತನಿಗೆ ನರಕಾ ಇಲ್ಲ” ಅನ್ನೋ ಮಾತಿದೆ.

ಶಿವನಿಗೆ ಬಿಲ್ವಪತ್ರೆ ಅರ್ಪಿಸುವುದರ ಮಹತ್ವ:

ತ್ರಿದಳಂ ತ್ರಿಗುಣಾಕಾರಂ ತ್ರಿನೇತ್ರಂ ಚ ತ್ರಿಯಾಯುಧಂ।
ತ್ರಿಜನ್ಮ ಪಾಪಸಂಹಾರಮ್ ಏಕಬಿಲ್ವಂ ಶಿವಾರ್ಪಣಂ॥
ತ್ರಿಶಾಖೈಃ ಬಿಲ್ವಪತ್ರೈಶ್ಚ ಅಚ್ಚಿದ್ರೈಃ ಕೋಮಲೈಃ ಶುಭೈಃ।
ತವಪೂಜಾಂ ಕರಿಷ್ಯಾಮಿ ಏಕಬಿಲ್ವಂ ಶಿವಾರ್ಪಣಂ॥

ಸತ್ತ್ವ, ರಜ ಮತ್ತು ತಮಗಳಿಂದ ಉತ್ಪತ್ತಿ, ಸ್ಥಿತಿ ಮತ್ತು ಲಯಗಳು ಉತ್ಪನ್ನವಾಗುತ್ತವೆ. ಕುಮಾರಾವಸ್ಥೆ, ಯೌವನಾವಸ್ಥೆ ಮತ್ತು ವೃದ್ಧಾಪ್ಯ ಅವಸ್ಥೆ ಇವುಗಳ ಪ್ರತೀಕವೆಂದು ಶಂಕರನಿಗೆ ಬಿಲ್ವಪತ್ರೆಯನ್ನು ಅರ್ಪಿಸಲಾಗುತ್ತದೆ. ಅಂದರೆ ಶಂಕರನಿಗೆ ಈ ಮೂರೂ ಅವಸ್ಥೆಗಳ ಆಚೆಗೆ ಹೋಗುವ ಇಚ್ಛೆಯನ್ನು ಪ್ರಕಟಿಸಬಹುದಾದ ತ್ರಿಗುಣಾತೀತವಾಗುವುದರಿಂದ ಈಶ್ವರನ ಭೇಟಿಯಾಗುತ್ತದೆ ಎನ್ನಲಾಗಿದೆ.

ಶಿವಾಲಯದಲ್ಲಿ ಶಿವನ ದರ್ಶನ ಪಡೆಯುವ ಯೋಗ್ಯ ಪದ್ಧತಿ ಎಂದರೆ, ದರ್ಶನ ಪಡೆಯುವ ಮುನ್ನ ನಂದಿಯ ಎರಡೂ ಕೊಂಬುಗಳಿಗೆ ಕೈಮುಟ್ಟಿಸಿ ಶಿವನ ದರ್ಶನ ಪಡೆಯಬೇಕು ನಂದಿಯ ಕೊಂಬುಗಳಿಂದ ಪ್ರಕ್ಷೇಪಿತವಾಗುವ ಶಿವತತ್ತ್ವದ ಸಗುಣ ಮಾರಕ ಲಹರಿಗಳಿಂದ ವ್ಯಕ್ತಿಯ ಶರೀರದಲ್ಲಿನ ರಜ-ತಮ ಕಣಗಳ ವಿಘಟನೆಯಾಗಿ ವ್ಯಕ್ತಿಯ ಸಾತ್ತ್ವಿಕತೆಯು ಹೆಚ್ಚಾಗುತ್ತದೆ. ಇದರಿಂದ ವ್ಯಕ್ತಿಗೆ ಶಿವಲಿಂಗದಿಂದ ಹೊರ ಬೀಳುವ ಶಕ್ತಿಶಾಲಿ ಲಹರಿಗಳನ್ನು ಸಹಿಸಲು ಸಾಧ್ಯವಾಗುತ್ತದೆ.

ಶಿವರಾತ್ರಿಯ ದಿನ ರಾತ್ರಿ ಪೂಜೆಯೇ ವಿಶೇಷ. ಸಾಮಾನ್ಯವಾಗಿ ಎಲ್ಲ ಹಬ್ಬಗಳಲ್ಲಿಯೂ ದೇವರಿಗೆ ಹಗಲು ಪೂಜೆ ನಡೆಯುತ್ತದೆ. ಆದರೆ ಶಿವರಾತ್ರಿ ಮಾತ್ರ ರಾತ್ರಿಯ ಹೊತ್ತು ಪೂಜೆ, ಭಜನೆ ನಡೆಸುವ ವಿಶೇಷ ಆಚರಣೆ. ರಾತ್ರಿ ಎಂದರೆ ಕತ್ತಲು, ಕತ್ತಲು ಎಂದರೆ ಅಜ್ಞಾನ. ಅಜ್ಞಾನವನ್ನು ಕಳೆದು ಸುಜ್ಞಾನ ಬೆಳಗಿಸು ಎಂದು ಆ ಶಿವನನ್ನು ಬೇಡುವ ಶುಭ ದಿನವೇ ಶಿವರಾತ್ರಿ. ಅಜ್ಞಾನ ತುಂಬಿರುವಲ್ಲಿ ಶಿವ ಸಂಚರಿಸಿ ಜ್ಞಾನ ದೀವಿಗೆಯನ್ನು ಬೆಳಗುತ್ತಾನೆ ಎಂಬ ನಂಬಿಕೆ ಇದೆ.

ತ್ರಯೋದಶಿಯು ಶಕ್ತಿರೂಪವಾದರೆ, ಚತುರ್ದಶಿಯು ಶಿವರೂಪ. ತ್ರಯೋದಶಿಯು ಚತುರ್ದಶಿಯಲ್ಲಿ ಅಂತರ್ಗತವಾಗಿದ್ದರೆ ಅದು ಶಿವಶಕ್ತಿಯೋಗವಾಗುತ್ತದೆ. ಅದೆ ಶಿವರಾತ್ರಿಯ ಸಮಯವೆಂದು ಉಕ್ತಿಯೊಂದರಲ್ಲಿ ಉಲ್ಲೇಖವಿದೆ. ಈ ಶುಭ ಪುಣ್ಯದಿನದಂದು ಬ್ರಹ್ಮ ವಿಷ್ಣು ಆದಿಯಾಗಿ ಶಿವನನ್ನು ಪೂಜಿಸಿದ್ದು ಶಿವನೆ ತನಗೆ ಶಿವರಾತ್ರಿ ಪ್ರಿಯವಾದ ದಿನವೆಂದು ಹೇಳಿರುವನೆಂದು ಪ್ರತೀತಿ ಇದೆ. ಇಷ್ಟೆಲ್ಲಾ ಹೇಳಿದ ಮೇಲೆ ವೈಜ್ಞಾನಿಕವಾಗಿ ಶಿವರಾತ್ರಿಯ ಆಚರಣೆಯ ಬಗೆಗೆ ಸೂಕ್ಷ್ಮವಾಗಿ ಗಮನಿಸುವುದಾದರೆ, ಸೂರ್ಯ ಮತ್ತು ಚಂದ್ರರ ಚಲನೆಯಿಂದಾಗುವ ಎಲ್ಲಾ ಕಾಲ ವ್ಯತ್ಯಾಸಕ್ಕೆ ಈ ನಮ್ಮ ದೇಹ ಹೊಂದಿಕೊಳ್ಳಬೇಕಾಗುತ್ತದೆ. ಈ ನಿಟ್ಟಿನಲ್ಲಿ ಈ ಹಬ್ಬದ ಆಚರಣೆ ಬಹು ಮುಖ್ಯ. ಈ ಸಮಯದಲ್ಲಿ ಚಳಿಗಾಲವು ಮುಗಿದು ಬೇಸಗೆಕಾಲವು ಪ್ರಾರಂಭಗೊಳ್ಳುವುದು. ಅಂದರೆ ಈ ದಿನದಂದು ಚಳಿಗಾಲ ಉತ್ತುಂಗದಲ್ಲಿದ್ದು ಅಂದು ಕೃಷ್ಣ ಪಕ್ಷದ ಕೊನೆಯ ದಿನವೂ ಆಗಿರುತ್ತದೆ. ಈ ದಿನದಲ್ಲಿ ಸೂರ್ಯನ ಶಾಖ ಕಡಿಮೆಯಾಗಿರುತ್ತದೆ ಮತ್ತು ಚಂದ್ರನ ಪ್ರಕಾಶವೂ ಕ್ಷೀಣಿಸಿರುತ್ತದೆ. ನಮ್ಮ ಪೂರ್ವಜರು ಇದನ್ನೆಲ್ಲಾ ಅರಿತೇ ಹಬ್ಬ ಹರಿದಿನಗಳನ್ನು ಆಚರಿಸುತ್ತಿದ್ದರು.

ಈ ವ್ಯತ್ಯಯದ ಸಮಯದಲ್ಲಿ ನಮ್ಮ ದೇಹದಲ್ಲಿ ಬಹಳಷ್ಟು ಬದಲಾವಣೆಗಳಾಗುತ್ತವೆ. ಈ ಕಾಲ ವ್ಯತ್ಯಾಸದ ಸಮಯದಲ್ಲಿ ನಮ್ಮಲ್ಲಿ ಉಸಿರಾಟದ ತೊಂದರೆ (ನೆಗಡಿ, ಕೆಮ್ಮು, ಶೀತ ಮತ್ತಿತರೆ) ಬರುವುದು. ಈ ದಿನದಂದು ನಾವು ಮಾಡುವ ಶಿವನ ಪೂಜೆ, ಉಪವಾಸಗಳು ನಮಗೆ ತುಂಬಾ ಉಪಯುಕ್ತ. ಅಂದು ಪರಶಿವನಿಗೆ ನೀರಿನ ಅಭಿಷೇಕ ಮತ್ತು ಬಿಲ್ವ ಪತ್ರೆಯ ಪೂಜೆ. ಬಿಲ್ವ ಪತ್ರೆಯಲ್ಲಿ ಉಸಿರಾಟದ ತೊಂದರೆ ನಿವಾರಿಸುವ ಗುಣವಿದೆ. ಬಿಲ್ವವನ್ನು ಲಿಂಗದ ಮೇಲೆ ಹಾಕುವಾಗ ಅದರ ವಾಸನೆ ನಮ್ಮ ದೇಹದ ಒಳಗೆ ಹೋಗುವುದು. ಬಿಲ್ವವನ್ನು ಮೂಸಿ ಎಸೆಯುವುದು ಸರಿಯಾದ ವಿಧಾನ. ಶಿವನ ಲಿಂಗವು ಕಲ್ಲಿನದಾಗಿದ್ದು ಅದರ ಮೇಲೆ ನೀರನ್ನು ಸುರಿಯುವುದರಿಂದ ಬಹಳಷ್ಟು ಶಕ್ತಿ ಹೊರಹೊಮ್ಮುತ್ತದೆ. ಅದೊಂದು ವಿಶಿಷ್ಟ ಕಲ್ಲಿನಿಂದ ಮಾಡಿದ ಲಿಂಗವಾಗಿರುತ್ತದೆ. ಅಲ್ಲದೇ ದೇಹದಲ್ಲಿ ಆಗುವ ಬದಲಾವಣೆಗಳಿಗೆ ಪೂರಕವಾಗಿ ಋತುಮಾನಕ್ಕೆ ಅನುಸಾರವಾಗಿ ಸಿಗುವ ಹಣ್ಣು ಹಂಪಲುಗಳು, ಗಡ್ಡೆ ಗೆಣಸುಗಳು ನಮ್ಮ ದೇಹಕ್ಕೆ ಹೆಚ್ಚಿನ ಪೋಷಣೆಯನ್ನು ಒದಗಿಸುವ ಮೂಲಕ ಸಮಸ್ಥಿತಿ ಕಾಪಾಡುವಲ್ಲಿ ಇಂತಹ ಧಾರ್ಮಿಕ ನಂಬಿಕೆಗಳನ್ನು ಇಟ್ಟುಕೊಂಡೆ ನಮ್ಮ ಹಿರಿಯರು ಚೈತನ್ಯ ತುಂಬುವಂತೆ ಸಂಪ್ರಾದಾಯಗಳನ್ನು ಆಚರಿಸಿಕೊಂಡು ಬಂದಿದ್ದಾರೆ ಎಂದರೆ ಅವರ ಅನುಭವದ ರಸಪಾಕಕ್ಕೆ ವೈಜ್ಞಾನಿಕತೆಗೆ ಹಿಡಿದ ಕೈಗನ್ನಡಿ.

ಅಲ್ಲದೆ ಪೂಜಿಸುವ ದೇಗುಲವನ್ನು ಆಗಮ ವಾಸ್ತುವಿನ ಪ್ರಕಾರ ನಿರ್ಮಾಣ ಮಾಡಿರುತ್ತಾರೆ. ಶಿವಾಲಯದ ಸುತ್ತ ಮುತ್ತಲಿನ ಕ್ಷೇತ್ರದಲ್ಲಿ ಹೆಚ್ಚಿನ ಗುರುತ್ವಾಕರ್ಷಣವಿದ್ದು ಅದನ್ನು ಶಿವ ಶಕ್ತಿಯೆಂದೂ ಕರೆದರು. ಇಲ್ಲಿ ಮಂತ್ರಗಳನ್ನು ಪಠಿಸುತ್ತಾ ವಿಶಿಷ್ಟ ಕಲ್ಲಿನಿಂದ ಕೆತ್ತಿರುವ ಲಿಂಗಕ್ಕೆ ನೀರಿನ ಅಭಿಷೇಕ ಮಾಡುವುದರಿಂದ ಸುತ್ತ ಮುತ್ತಲಿಗೆಲ್ಲಾ ಹೆಚ್ಚಿನ ಶಕ್ತಿ ಬರುವುದೆಂಬ ನಂಬಿಕೆಯೂ ಸಹ ಇದೆ.

ಇಂತಹ ಶಿವನು ಸರಳತೆ, ಪ್ರಾಮಾಣಿಕತೆ ಮತ್ತು ನಿಷ್ಕಲ್ಮಶ ಮನಸ್ಸುಗಳ ಪ್ರತೀಕ. ಛಲಬಿಡದ ಸಾಧನೆಯ ದ್ಯೋತಕ. ಧ್ಯಾನಪ್ರಿಯ ಶಿವ ಭಕ್ತರಿಂದ ಬಯಸುವುದು ನಿಶ್ಕಲ್ಮಶ ಮತ್ತು ಪ್ರಾಮಾಣಿಕ ಭಕ್ತಿ ಮಾತ್ರ. ತೋರಿಕೆಯ ಮತ್ತು ಆಡಂಬರದ ಪೂಜೆಯನ್ನು ಬಯಸದ ಮಹಾದೇವನನ್ನು ಇಂದ್ರಿಯ ನಿಗ್ರಹ, ಧ್ಯಾನ, ಸಂಯಮ ಮತ್ತು ವಿಶ್ವಾಸ ಭರಿತರಾಗಿ ಶಿವರಾತ್ರಿಯಂದು ಧ್ಯಾನಿಸಿದರೆ ಆತ ಪ್ರಸನ್ನಗೊಳ್ಳುತ್ತಾನೆ.

ಎಲ್ಲ ಆಡಂಬರಗಳಿಂದ ಮುಕ್ತರಾಗಿ, ಸರಳ ಮನಸ್ಸಿನಿಂದ ಪರಶಿವನನ್ನು ನೆನೆದು, ಭಜಿಸಿ ಶಿವರಾತ್ರಿಯನ್ನು ಆಚರಿಸೋಣ. ಸರಳತೆ, ಪ್ರಾಮಾಣಿಕತೆ, ಸತ್ಯ ಮತ್ತು ಶಕ್ತಿಯ ದೇವತೆ ಈಶ್ವರ ಲೋಕದಲ್ಲಿರುವ ಸಕಲ ಸಂಕಷ್ಟಗಳಿಗೆ ಪರಿಹಾರ ನೀಡಲಿ ಎಂಬುದು ಶಿವಭಕ್ತರ ಕೋರಿಕೆ. ಎಲ್ಲರಿಗೂ ಮಹಾ ಶಿವರಾತ್ರಿ ಹಬ್ಬದ ಹಾರ್ದಿಕ ಶುಭಾಶಯಗಳು.

ಇದನ್ನೂ ಓದಿ: Maha Shivaratri : ಅಯೋಧ್ಯೆ ಮಾದರಿ ಮಹಾಶಿವರಾತ್ರಿಗೆ ಹುಬ್ಬಳ್ಳಿ ಮೈದಾನ ರೆಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Tirupati Temple: ತಿರುಪತಿಯ ಆಗಸ್ಟ್ ತಿಂಗಳ ಟಿಕೆಟ್ ವೇಳಾಪಟ್ಟಿ ಬಿಡುಗಡೆ: ಹೀಗೆ ಬುಕ್‌ ಮಾಡಿ

Tirupati Temple: ತಿರುಮಲ ತಿರುಪತಿ ದೇವಸ್ಥಾನಕ್ಕೆ ತೆರಳುವ ಭಕ್ತರಿಗೆ ಗುಡ್‌ನ್ಯೂಸ್‌. ಆಗಸ್ಟ್ ತಿಂಗಳ ದರ್ಶನ ಟಿಕೆಟ್ ವೇಳಾಪಟ್ಟಿಯನ್ನು ತಿರುಪತಿ ತಿರುಮಲ ದೇವಸ್ಥಾನ ಬಿಡುಗಡೆ ಮಾಡಿದೆ. ತಿರುಮಲ ಶ್ರೀವಾರಿ ಆರ್ಜಿತ ಸೇವಾ ಟಿಕೆಟ್‌ಗಳ ಕೋಟಾವನ್ನು ಮೇ 18ರಂದು ಬಿಡುಗಡೆ ಮಾಡಲಾಗುವುದು. ಬೆಳಗ್ಗೆ 10 ಗಂಟೆಗೆ ಆನ್‌ಲೈನ್‌ನಲ್ಲಿ ಈ ಟಿಕೆಟ್‌ಗಳನ್ನು ಬುಕ್ ಮಾಡಬಹುದು ಎಂದು ಪ್ರಕಟಣೆ ತಿಳಿಸಿದೆ. ಈ ಸೇವಾ ಟಿಕೆಟ್‌ಗಳ ಎಲೆಕ್ಟ್ರಾನಿಕ್ ಡಿಪ್‌ಗಾಗಿ ಭಕ್ತರು ಮೇ 20ರಂದು ಬೆಳಿಗ್ಗೆ 10 ಗಂಟೆಯವರೆಗೆ ಆನ್‌ಲೈನ್‌ನಲ್ಲಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು. ಈ ಟಿಕೆಟ್ ಪಡೆದವರು ಮೇ 20ರಿಂದ ಮೇ 22ರವರೆಗೆ ಮಧ್ಯಾಹ್ನ 12 ಗಂಟೆಯೊಳಗೆ ಹಣ ಪಾವತಿಸಿದರೆ ಲಕ್ಕಿಡಿಪ್‌ನಲ್ಲಿ ಟಿಕೆಟ್ ಹಂಚಿಕೆ ಮಾಡಲಾಗುತ್ತದೆ.

VISTARANEWS.COM


on

Tirupathi Temple
Koo

ತಿರುಪತಿ: ದೇಶದ ಪ್ರಸಿದ್ಧ ಯಾತ್ರಾ ಸ್ಥಳ ತಿರುಮಲ ತಿರುಪತಿ ದೇವಸ್ಥಾನ(Tirupati Temple)ಕ್ಕೆ ತೆರಳುವ ಭಕ್ತರಿಗೆ ಗುಡ್‌ನ್ಯೂಸ್‌. ಆಗಸ್ಟ್ ತಿಂಗಳ ದರ್ಶನ ಟಿಕೆಟ್ ವೇಳಾಪಟ್ಟಿಯನ್ನು ತಿರುಪತಿ ತಿರುಮಲ ದೇವಸ್ಥಾನ (TTD) ಬಿಡುಗಡೆ ಮಾಡಿದೆ. ಹೀಗಾಗಿ ಆಗಸ್ಟ್‌ನಲ್ಲಿ ತಿರುಪತಿಗೆ ಭೇಟಿ ನೀಡಲು ಬಯಸುವ ಭಕ್ತರು ಈ ಪಟ್ಟಿಯನ್ನು ಗಮನಿಸಿ ಟಿಕೆಟ್ ಕಾಯ್ದಿರಿಸಬಹುದಾಗಿದೆ.

ತಿರುಮಲ ಶ್ರೀವಾರಿ ಆರ್ಜಿತ ಸೇವಾ ಟಿಕೆಟ್‌ಗಳ ಕೋಟಾವನ್ನು ಮೇ 18ರಂದು ಬಿಡುಗಡೆ ಮಾಡಲಾಗುವುದು. ಬೆಳಗ್ಗೆ 10 ಗಂಟೆಗೆ ಆನ್‌ಲೈನ್‌ನಲ್ಲಿ ಈ ಟಿಕೆಟ್‌ಗಳನ್ನು ಬುಕ್ ಮಾಡಬಹುದು ಎಂದು ಪ್ರಕಟಣೆ ತಿಳಿಸಿದೆ. ಈ ಸೇವಾ ಟಿಕೆಟ್‌ಗಳ ಎಲೆಕ್ಟ್ರಾನಿಕ್ ಡಿಪ್‌ಗಾಗಿ ಭಕ್ತರು ಮೇ 20ರಂದು ಬೆಳಿಗ್ಗೆ 10 ಗಂಟೆಯವರೆಗೆ ಆನ್‌ಲೈನ್‌ನಲ್ಲಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು. ಈ ಟಿಕೆಟ್ ಪಡೆದವರು ಮೇ 20ರಿಂದ ಮೇ 22ರವರೆಗೆ ಮಧ್ಯಾಹ್ನ 12 ಗಂಟೆಯೊಳಗೆ ಹಣ ಪಾವತಿಸಿದರೆ ಲಕ್ಕಿಡಿಪ್‌ನಲ್ಲಿ ಟಿಕೆಟ್ ಹಂಚಿಕೆ ಮಾಡಲಾಗುತ್ತದೆ.

ಶ್ರೀವಾರಿ ದೇವಸ್ಥಾನದಲ್ಲಿ ವಾರ್ಷಿಕ ಪವಿತ್ರೋತ್ಸವ ಆಗಸ್ಟ್ 15ರಿಂದ 17ರವರೆಗೆ ನಡೆಯಲಿದೆ. ಈ ಸಂದರ್ಭದಲ್ಲಿ ನಡೆಸುವ ಕಲ್ಯಾಣೋತ್ಸವ, ಊಂಜಾಲ್ ಸೇವೆ, ಆರ್ಜಿತ ಬ್ರಹ್ಮೋತ್ಸವ, ಸಹಸ್ರ ದೀಪಾಲಂಕರ ಸೇವೆ, ವಾರ್ಷಿಕ ಪವಿತ್ರೋತ್ಸವ ಸೇವಾ ಟಿಕೆಟ್‌ಗಳನ್ನು ಮೇ 21ರಂದು ಬೆಳಿಗ್ಗೆ 10 ಗಂಟೆಗೆ ಆನ್‌ಲೈನ್‌ನಲ್ಲಿ ಬಿಡುಗಡೆ ಮಾಡಲಾಗುತ್ತದೆ.

ಮಾತ್ರವಲ್ಲ ತಿರುಮಲ ಶ್ರೀವಾರಿ ವರ್ಚುವಲ್ ಸೇವೆಗಳಿಗೆ ಸಂಬಂಧಿಸಿದ ಆಗಸ್ಟ್ ತಿಂಗಳ ಕೋಟಾ ಮತ್ತು ಅವುಗಳ ಸ್ಲಾಟ್‌ಗಳನ್ನು ಮೇ 21ರಂದು ಮಧ್ಯಾಹ್ನ 3 ಗಂಟೆಗೆ ಆನ್‌ಲೈನ್‌ನಲ್ಲಿ ಲಭ್ಯ. ಜತೆಗೆ ಆಗಸ್ಟ್‌ನ ಅಂಗಪ್ರದಕ್ಷಿಣಂ ಟೋಕನ್‌ಗಳ ಕೋಟಾವನ್ನು ಮೇ 23ರಂದು ಬೆಳಿಗ್ಗೆ 10 ಗಂಟೆಗೆ ಬಿಡುಗಡೆ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ವಿಶೇಷ ಚೇತನರು, ವೃದ್ಧರಿಗಾಗಿ ವಿಶೇಷ ಕೋಟಾ

ವೃದ್ಧರು, ವಿಶೇಷ ಚೇತನರು ಮತ್ತು ದೀರ್ಘಕಾಲದ ಕಾಯಿಲೆ ಇರುವವರಿಗೆ ನೀಡಲಾಗುವ ಆಗಸ್ಟ್‌ನ ಉಚಿತ ವಿಶೇಷ ದರ್ಶನ ಟಿಕೆಟ್‌ಗಳು ಮೇ 23ರಂದು ಮಧ್ಯಾಹ್ನ 3 ಗಂಟೆಯಿಂದ ಆನ್‌ಲೈನ್‌ನಲ್ಲಿ ಲಭಿಸಲಿದೆ. ಮೇ 24ರಂದು ಬೆಳಿಗ್ಗೆ 10 ಗಂಟೆಗೆ ಟಿಟಿಡಿ ಆಗಸ್ಟ್ ತಿಂಗಳ ವಿಶೇಷ ಪ್ರವೇಶ ದರ್ಶನ ಟಿಕೆಟ್‌ಗಳನ್ನು ಪ್ರಕಟಿಸಲಿದೆ. ಜತೆಗೆ ತಿರುಮಲ ಮತ್ತು ತಿರುಪತಿಯಲ್ಲಿ ಆಗಸ್ಟ್ ರೂಮ್ ಕೋಟಾವನ್ನು ಮೇ 24 ರಂದು ಮಧ್ಯಾಹ್ನ 3 ಗಂಟೆಗೆ ಆನ್‌ಲೈನ್‌ನಲ್ಲಿ ಬಿಡುಗಡೆ ಮಾಡಲಾಗುತ್ತದೆ.

ಟಿಕೆಟ್‌ ಬುಕ್‌ ಮಾಡುವ ವಿಧಾನ

  • ತಿರುಮಲ ತಿರುಪತಿ ದೇವಸ್ಥಾನಗಳ ದರ್ಶನ ಟಿಕೆಟ್ ಬುಕ್ ಮಾಡಲು, ಟಿಟಿಡಿಯ ಅಧಿಕೃತ ಆನ್‌ಲೈನ್ ಬುಕಿಂಗ್ ವೆಬ್‌ಸೈಟ್‌ https://ttdevasthanams.ap.gov.inಗೆ ಭೇಟಿ ನೀಡಿ.
  • ದರ್ಶನ ಪ್ರಕಾರವನ್ನು ಆಯ್ಕೆ ಮಾಡಿಕೊಂಡು ಮೊಬೈಲ್‌ ನಂಬರ್‌ ನೀಡಿ ಲಾಗಿನ್‌ ಆಗಿ.
  • ದಿನಾಂಕ ಮತ್ತು ಸಮಯವನ್ನು ನಿಗದಿಪಡಿಸಿ.
  • ಆಲ್‌ನೈಲ್‌ ಮೂಲಕ ಟಿಕೆಟ್‌ ಮೊತ್ತವನ್ನು ಪಾವತಿಸಿ.
  • ನಿಮ್ಮ ಟಿಕೆಟ್‌ ಬುಕ್‌ ಆಗಿರುವ ಬಗ್ಗೆ ಮಾಹಿತಿ ಎಸ್‌ಎಂಎಸ್‌ ಮೂಲಕ ನಿಮಗೆ ರವಾನೆಯಾಗುತ್ತದೆ.

ಇದನ್ನೂ ಓದಿ: Ayodhya: ಅಯೋಧ್ಯೆಯಲ್ಲಿ ಜನದಟ್ಟಣೆ ನಿಭಾಯಿಸುವ ಸಲಹೆ ನೀಡಿದ ತಿರುಪತಿಯ ಎಂಜಿನಿಯರ್‌ಗಳ ತಂಡ

Continue Reading

ಧಾರ್ಮಿಕ

Shankara Jayanti 2024: ಇಂದು ಶಂಕರ ಜಯಂತಿ; ಶಂಕರಾಚಾರ್ಯರ ಕುರಿತ 9 ಕುತೂಹಲಕರ ಸಂಗತಿಗಳು

ಶ್ರೀ ಶಂಕರರು (Shankara Jayanti 2024) ಎಷ್ಟು ಪ್ರತಿಭಾವಂತರಾಗಿದ್ದರು ಎಂದರೆ, ನಾಲ್ಕೂ ವೇದಗಳನ್ನು ಎಂಟು ವರ್ಷಗಳಾಗುವಾಗಲೇ ಕರಗತ ಮಾಡಿಕೊಂಡಿದ್ದರು. ಹನ್ನೆರಡು ವರ್ಷಗಳಿರುವಾಗ ಸಕಲ ಶಾಸ್ತ್ರಗಳನ್ನೂ ಕಲಿತಿದ್ದರು. ಸಂನ್ಯಾಸಕ್ಕೆ ತಾಯಿಯ ಅನುಮತಿ ಇರಲಿಲ್ಲ. ಒಮ್ಮೆ ಅವರು ಕೆರೆಯಲ್ಲಿರುವಾಗ ಅವರ ಕಾಲನ್ನು ಮೊಸಳೆ ಹಿಡಿದುಬಿಟ್ಟಿತು. ತಾಯಿ ಕಂಗಾಲಾದರು. ಆಗ ಶಂಕರರು, ‘ನಾನು ಸಂನ್ಯಾಸ ಸ್ವೀಕರಿಸಲು ನೀನು ಒಪ್ಪಿದರೆ ಈ‌ ಮೊಸಳೆ ಬಿಡುತ್ತದಂತೆ’ ಎಂದು ಹೇಳಿದರು. ಆಗ ತಾಯಿ ಒಪ್ಪಲೇಬೇಕಾಯಿತು.

VISTARANEWS.COM


on

Shankara Jayanti 2024
Koo

ಶಂಕರಾಚಾರ್ಯರು (Shankara Jayanti 2024) ಜೀವಿಸಿದ್ದು ಕೇವಲ 32 ವರ್ಷ. ಆದರೆ ಅವರು ಸಾಧಿಸಿದ್ದು ಅಪಾರ. ಹಿಂದೂ ಧರ್ಮದ ಏಳಿಗೆಗೆ ಅವರ ಕೊಡುಗೆ ಅಮೂಲ್ಯ. ಶಂಕರರ ಬದುಕಿನ ಕುರಿತ ಕುತೂಹಲಕರ ಸಂಗತಿಗಳು ಇಲ್ಲಿವೆ.

Adi Shankaracharya Jayanti
  1. ಶ್ರೀ ಶಂಕರರು ಎಷ್ಟು ಪ್ರತಿಭಾವಂತರಾಗಿದ್ದರು ಎಂದರೆ, ನಾಲ್ಕೂ ವೇದಗಳನ್ನು ಎಂಟು ವರ್ಷಗಳಾಗುವಾಗಲೇ ಕರಗತ ಮಾಡಿಕೊಂಡುಬಿಟ್ಟರು. ಹನ್ನೆರಡು ವರ್ಷಗಳಿರುವಾಗ ಸಕಲ ಶಾಸ್ತ್ರಗಳನ್ನೂ ಕಲಿತರು. ಸಾಮಾನ್ಯರಿಗೆ ಒಂದು ವೇದವನ್ನು ಅರ್ಥ ಮಾಡಿಕೊಳ್ಳಲೇ ಹತ್ತಾರು ವರ್ಷಗಳು ಬೇಕು.
  2. ಶಂಕರಾಚಾರ್ಯರು ಜನಿಸಿದ್ದು ಕೇರಳ ಕಾಲಟಿ ಎಂಬ ಪುಟ್ಟ ಗ್ರಾಮದಲ್ಲಿ. ತಂದೆಯನ್ನು ಕಳೆದುಕೊಂಡರು. ತಾಯಿ ಅವರನ್ನು ಬೆಳೆಸಿದರು. ಅವರು ಸಂನ್ಯಾಸ ಸ್ವೀಕರಿಸಲು ಒಂದು ಪುಟ್ಟ ಪವಾಡವನ್ನೇ ಮಾಡಬೇಕಾಯಿತು. ಸಂನ್ಯಾಸಕ್ಕೆ ತಾಯಿ ಆರ್ಯಾಂಬೆಯವರ ಅನುಮತಿ ಇರಲಿಲ್ಲ. ಒಮ್ಮೆ ಅವರು ಕೆರೆಯಲ್ಲಿರುವಾಗ ಅವರ ಕಾಲನ್ನು ಮೊಸಳೆ ಹಿಡಿದುಬಿಟ್ಟಿತು. ತಾಯಿ ಕಂಗಾಲಾದರು. ಆಗ ಶಂಕರರು, ‘ನಾನು ಸಂನ್ಯಾಸ ಸ್ವೀಕರಿಸಲು ನೀನು ಒಪ್ಪಿದರೆ ಈ‌ ಮೊಸಳೆ ಬಿಡುತ್ತದಂತೆ’ ಎಂದು ಹೇಳಿದರು. ಮಗ ಬದುಕುತ್ತಾನಲ್ಲ ಎಂಬ ಭರವಸೆಯೊಂದಿಗೆ ತಾಯಿ ಒಪ್ಪಿದರು.
  3. ಹದಿನಾರು ವರ್ಷ ಪ್ರಾಯ ಆಗುವುದರೊಳಗಾಗಿ ಅವರು ಉಪನಿಷತ್, ಬ್ರಹ್ಮಸೂತ್ರ, ಭಗವದ್ಗೀತೆಗಳಿಗೆ ಭಾಷ್ಯವನ್ನು ರಚಿಸಿದರು. ಆದಿಶಂಕರರು ಭಗವದ್-ಗೀತೆ, ಉಪನಿಷತ್ ಹಾಗು ಬ್ರಹ್ಮಸೂತ್ರಗಳಿಗೆ ಭಾಷ್ಯ ಬರೆದ ಮೊದಲ ಆಚಾರ್ಯರಾದರು.
  4. ಭಾರತದಾದ್ಯಂತ ‘ದಿಗ್ವಿಜಯ ಯಾತ್ರೆʼ ಕೈಗೊಂಡರು. ವೇದವಿರೋಧಿಗಳನ್ನು ವಾಗ್ವಾದಕ್ಕೆ ಕರೆದರು. ಏಕಾಂಗಿಯಾಗಿ ಚರ್ಚೆ, ವಿಚಾರಮಂಡನೆ, ವಾದಗಳ‌ ಮೂಲಕ ಬ್ರಹ್ಮವಾದಕ್ಕೆ ಎಳೆತಂದರು. ದೇಶದುದ್ದಗಲಕ್ಕೂ ಸಂಚರಿಸಿ, ಅಲ್ಲಿಯ ವಿದ್ವಾಂಸರನ್ನು, ಜನರನ್ನು, ರಾಜರನ್ನು ವೈದಿಕತೆಗೆ ತಂದರು.
  5. ಆರು ಮತಗಳನ್ನು ಖಂಡಿಸಿ ತಮ್ಮ ಮತವನ್ನು ಸ್ಥಾಪಿಸಿದ ಪರಿಣಾಮ ಅವರನ್ನು ‘ಷಣ್ಮತ ಖಂಡನಾಚಾರ್ಯ’ ಮತ್ತು ಷಣ್ಮತ ಪ್ರತಿಷ್ಠಾಪನಾಚಾರ್ಯ’ ಎಂದು ಕರೆಯಲಾಯಿತು. ಶೈವ, ವೈಷ್ಣವ, ಶಾಕ್ತ, ಗಾಣಪತ್ಯ, ಸೌರ ಹಾಗೂ ಸ್ಕಂದ ಮತಗಳನ್ನು ಒಗ್ಗೂಡಿಸಿ, ಷಣ್ಮತ ಪ್ರತಿಷ್ಠಾಪಕರಾದರು.
  6. ಧರ್ಮವನ್ನು ಉಳಿಸಿ ಬೆಳೆಸುವ ಉದ್ದೇಶಕ್ಕಾಗಿ ಮಠಗಳ ಪರಿಕಲ್ಪನೆಯನ್ನು ತಂದರು. ಮಠ ಮತ್ತು ಯತಿಗಳು ಸಮಾಜಕ್ಕೆ ಮಾರ್ಗದರ್ಶನ ಮಾಡಬೇಕು ಎಂಬ ಆಶಯ ಅವರದಾಗಿತ್ತು. ದೇಶದ ಉದ್ದಗಲಗಳಲ್ಲಿ ಮಠಗಳನ್ನು ಸ್ಥಾಪಿಸಿದರು. ಅವುಗಳಲ್ಲಿ ಮುಖ್ಯವಾದದ್ದು ಶೃಂಗೇರಿಯ ಮಠ. ಇತರವು ಪೂರ್ವದಲ್ಲಿ ಪುರಿ, ಪಶ್ಚಿಮದಲ್ಲಿ ದ್ವಾರಕಾ, ಉತ್ತರದಲ್ಲಿ ಬದರೀನಾಥ, ಕಂಚಿಯ ಕಾಮಕೋಟಿಗಳಲ್ಲಿವೆ.
  7. ಸೂರ್ಯ- ಗಣಪತಿ- ಅಂಬಿಕಾ- ಶಿವ- ವಿಷ್ಣುಗಳನ್ನು ಪೂಜಿಸುವ ಪಂಚಾಯತನ ಪೂಜೆಯನ್ನು ತಂದರು. ಈ ದೇವತೆಗಳನ್ನು ಭಾರತದ ಐದು ಕಡೆಗಳಲ್ಲಿ ಸಿಗುವ ಸ್ಫಟಿಕ, ಶೋಣಾಭದ್ರ, ಸ್ವರ್ಣಮುಖಿ, ಬಾಣಲಿಂಗ, ಸಾಲಿಗ್ರಾಮ ಎಂಬ ಕಲ್ಲಿನ ಮೂಲಕ ಪೂಜಿಸಲಾಗುತ್ತದೆ.
  8. ಮೂವತ್ತೆರಡು ವರ್ಷಗಳಲ್ಲಿ ಹಲವು ಮನುಷ್ಯರು ಸೇರಿ ಹಲವು ಜನ್ಮಗಳಲ್ಲಿ ಮಾಡುವಷ್ಟು ಕೆಲಸವನ್ನು ಮಾಡಿ ಮುಗಿಸಿದರು. ಭಾಷ್ಯಗಳನ್ನು ಹೊರತುಪಡಿಸಿ ನೂರಾರು ಸ್ತೋತ್ರ – ಸಾಹಿತ್ಯಗಳನ್ನು ರಚಿಸಿದರು.
  9. ಮೂರು ಸೂತ್ರಗಳಲ್ಲಿ ಶ್ರೀ ಶಂಕರರ ಉಪದೇಶವನ್ನು ಸೂತ್ರೀಕರಿಸಬಹುದು- “ಅಹಂ ಬ್ರಹ್ಮಾಸ್ಮಿ” (ನನ್ನೊಳಿರುವ ಆತ್ಮವೇ ಪರಂಬ್ರಹ್ಮ), “ತತ್ ತ್ವಮ್ ಅಸಿ” (ನೀನು ಅದೇ ಆತ್ಮದಿಂದ ಆಗಿರುವೆ) ಮತ್ತು ಜೀವಶ್ಶಿವೋಹಂʼ (ಜೀವನೇ ಶಿವ) ಎಂಬುದು ಅದ್ವೈತ ತತ್ವದ ಮೂಲ ಮಂತ್ರಗಳು. ಇದಲ್ಲದೇ ಪರಮಾತ್ಮ ಮಾತ್ರ ಸತ್ಯ; ಈ ಜಗತ್ತಿನಲ್ಲಿ ಮಿಕ್ಕೆಲ್ಲವೂ ಮಿಥ್ಯ ಹಾಗೂ “ಸರ್ವಂ ಬ್ರಹ್ಮಮಯಂ ಜಗತ್” (ಈ ಜಗತ್ತಿನಲ್ಲಿ ಎಲ್ಲವೂ ಪರಮಾತ್ಮನಿಂದಲೇ ಆವರಿಸಲ್ಪಟ್ಟಿದೆ) ಎಂಬುದಾಗಿ ಜಗತ್ತಿಗೆ ಸಾರಿದರು.
Continue Reading

ಪ್ರಮುಖ ಸುದ್ದಿ

PM Narendra Modi: ವಿಡಿಯೋ ಸಂದೇಶ ಮೂಲಕ ಬಸವೇಶ್ವರ ಜಯಂತಿಗೆ ಶುಭ ಕೋರಿದ ಪಿಎಂ

PM Narendra Modi: ಶತಮಾನಗಳಷ್ಟು ಮೊದಲೇ ಬಸವೇಶ್ವರರು ಸಾಮಾಜಿಕ ನ್ಯಾಯ, ಲಿಂಗ ಸಮಾನತೆಯಂಥ ಮಹತ್ವದ ಸಂಗತಿಗಳ ಬಗ್ಗೆ ಸಮಾಜಕ್ಕೆ ಬೋಧಿಸಿದ್ದರು. ನಾವು ಅವರ ವಚನಗಳು- ಆದರ್ಶಗಳನ್ನು ಜಾಗತಿಕವಾಗಿ ಪಸರಿಸಬೇಕು. ಜಗತ್ತನ್ನು ಆ ಮೂಲಕ ಇನ್ನಷ್ಟು ಸುಂದರಗೊಳಿಸೋಣ ಎಂದು ಮೋದಿ ಹೇಳಿದ್ದಾರೆ.

VISTARANEWS.COM


on

pm narendra modi basava jayanti 2024
Koo

ಹೊಸದಿಲ್ಲಿ: ಭಕ್ತಿ ಭಂಡಾರಿ, ಸಮಾಜ ಸುಧಾರಕ, ವಚನ ಚಳವಳಿಯ ಆದ್ಯ ಪೂಜ್ಯ ಶ್ರೀ ಬಸವೇಶ್ವರ ಜಯಂತಿ (Basava Jayanti 2024) ಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ತಮ್ಮ ಶುಭಾಶಯಗಳನ್ನು ಹಂಚಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಸೋಶಿಯಲ್‌ ಮೀಡಿಯಾ (Social media) ಎಕ್ಸ್‌ನಲ್ಲಿ ಪಠ್ಯ ಸಂದೇಶ ಹಾಗೂ ವಿಡಿಯೋ ಸಂದೇಶಗಳೆರಡನ್ನೂ ಅವರು ನೀಡಿದ್ದಾರೆ.

“ಬಸವ ಜಯಂತಿಯ ಸಂದರ್ಭದಲ್ಲಿ ನಾನು, ಜಗದ್ಗುರು ಬಸವೇಶ್ವರರಿಗೆ ಗೌರವ ನಮನ ಸಲ್ಲಿಸುತ್ತೇನೆ. ಅವರ ಆದರ್ಶಗಳು ಕೋಟ್ಯಂತರ ಜನರ ಬದುಕಿಗೆ ಬೆಳಕು ನೀಡಿವೆ. ನ್ಯಾಯಯುತ ಮತ್ತು ಸಮೃದ್ಧ ಸಮಾಜದ ಅವರ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ನಾವು ಶ್ರಮಿಸುತ್ತಿದ್ದೇವೆ” ಎಂದು ಅವರು ಎಕ್ಸ್‌ನಲ್ಲಿ ಬರೆದಿದ್ದಾರೆ.

“ಭಗವಾನ್‌ ಬಸವೇಶ್ವರರ ಸಂದೇಶ ಹಾಗೂ ಅವರ ವಚನಗಳು ನನಗೆ ಹೊಸಹೊಸದಾಗಿ ಕಲಿಸುತ್ತಲೇ ಇರುತ್ತವೆ. ನಾವು ಅವರಿಂದ ಅವರ ದೈವೀಯ ಗುಣವನ್ನೂ ಕಲಿಯಬಹುದು; ಜೊತೆಗೆ ಅವರು ಉತ್ತಮ ಆಡಳಿತಗಾರ, ಸುಧಾರಕನೂ ಹೌದು. ಸಮಾಜ ಸುಧಾರಣೆಯ ಅವರ ಬದುಕು ನಮಗೆ ಪ್ರೇರಣೆಯಾಗುವಂಥದು. ಬಸವಣ್ಣನವರ ವಚನಗಳು ಹಾಗೂ ಸಂದೇಶಗಳು ಆಧ್ಯಾತ್ಮಿಕವೂ ಹೌದು, ಬದುಕಿನ ಪ್ರಾಯೋಗಿಕ ಮಾರ್ಗದರ್ಶಕ ಸೂತ್ರಗಳೂ ಹೌದು” ಎಂದು ಅವರು ಕೊಂಡಾಡಿದ್ದಾರೆ.

“ಅವರ ಉಪದೇಶಗಳು ನಮಗೆ ಉತ್ತಮ ಮಾನವರಾಗುವುದನ್ನು ಕಲಿಸುತ್ತವೆ. ಇನ್ನಷ್ಟು ದಯಾಳು, ಅಧಿಕ ಉದಾರಿ, ಹೆಚ್ಚಿನ ಮಾನವೀಯ ಸಂವೇದನೆಗಳನ್ನು ನಮ್ಮಲ್ಲಿ ತುಂಬುತ್ತದೆ. ಶತಮಾನಗಳಷ್ಟು ಮೊದಲೇ ಬಸವೇಶ್ವರರು ಸಾಮಾಜಿಕ ನ್ಯಾಯ, ಲಿಂಗ ಸಮಾನತೆಯಂಥ ಮಹತ್ವದ ಸಂಗತಿಗಳ ಬಗ್ಗೆ ಸಮಾಜಕ್ಕೆ ಬೋಧಿಸಿದ್ದರು. ನಾವು ಅವರ ವಚನಗಳು- ಆದರ್ಶಗಳನ್ನು ಜಾಗತಿಕವಾಗಿ ಪಸರಿಸಬೇಕು. ಜಗತ್ತನ್ನು ಆ ಮೂಲಕ ಇನ್ನಷ್ಟು ಸುಂದರಗೊಳಿಸೋಣ. ಈ ಶುಭಸಂದರ್ಭದಲ್ಲಿ ನಿಮಗೆಲ್ಲರಿಗೂ ಶುಭಕಾಮನೆಗಳು” ಎಂದು ಅವರು ಹಾರೈಸಿದ್ದಾರೆ.

ಇದನ್ನೂ ಓದಿ: Basava Jayanti 2024: ಬದುಕಿನ ಪಾಠ ಕಲಿಸುವ ಬಸವಣ್ಣನ 10 ವಚನಗಳಿವು

Continue Reading

ಪ್ರಮುಖ ಸುದ್ದಿ

Akshaya Tritiya 2024: ಇಂದು ಏನೇನು ಖರೀದಿಸಬಹುದು? ಚಿನ್ನ- ಬೆಳ್ಳಿ ಏಕೆ ಖರೀದಿಸಬೇಕು?

Akshaya Tritiya 2024: ದೇವಸ್ಥಾನಗಳಿಗೆ ಭೇಟಿ ನೀಡುವವರು, ಬಡವರಿಗೆ ಅನ್ನದಾನ ಅಥವಾ ವಿಶೇಷ ಕೊಡುಗೆಗಳನ್ನು ನೀಡುವವರು ಅಥವಾ ಬಡ ಮಕ್ಕಳಿಗೆ ಅವರ ಶಿಕ್ಷಣ ಶುಲ್ಕಕ್ಕಾಗಿ ಸಹಾಯ ಮಾಡುವವರಿಗೂ ಈ ದಿನ ಶುಭಕರ. ಹೀಗಾಗಿ ಚಿನ್ನ ಬೆಳ್ಳಿಗೆ ಸೀಮಿತವಾಗದೆ, ಧಾನ್ಯಗಳನ್ನು ಕೂಡ ಖರೀದಿಸಬಹುದು. ಬಡವರಿಗೆ ದಾನ ಮಾಡುವುದರಿಂದಲೂ ನಿಮ್ಮ ಸಂಪತ್ತು ಅಕ್ಷಯವಾಗುತ್ತದೆ.

VISTARANEWS.COM


on

Akshaya Tritiya 2024
Koo

ಅಕ್ಷಯ ತೃತೀಯ (Akshaya Tritiya 2024) ಅಂದರೆ ಚಿನ್ನ- ಬೆಳ್ಳಿ (gold, silver) ಖರೀದಿಸಬೇಕು ಎಂಬುದು ಸಾಮಾನ್ಯ ನಂಬಿಕೆ. ಆದರೆ ಇದು ಮಾತ್ರವಲ್ಲ. ಸಂಪತ್ತು ಎಂದು ಕರೆಸಿಕೊಳ್ಳುವ ಯಾವುದನ್ನೇ ಆದರೂ ಇಂದು ನೀವು ಖರೀದಿಸಬಹುದು ಅಥವಾ ಹೊಂದಬಹುದು. ಅದರಿಂದ ಆ ಸಂಪತ್ತು ಅಕ್ಷಯವಾಗುತ್ತದೆ ಎಂಬ ನಂಬಿಕೆ. ಈ ಹಿಂದಿನ ಕಾಲದಲ್ಲಿ ಕೃಷಿಪ್ರಧಾನ ಸಮಾಜದಲ್ಲಿ ಅಕ್ಕಿ ರಾಗಿ ಗೋಧಿಯಂಥ ಧಾನ್ಯಗಳನ್ನು ಮನೆ ತುಂಬಿಸಿಕೊಳ್ಳುತ್ತಿದ್ದರು.

ಹಿಂದೂಗಳಿಗೆ ಸಂಪತ್ತಿನ ಪುಣ್ಯ ಫಲ ನೀಡುವ ಹಬ್ಬ. ಅಕ್ಷಯ ತೃತೀಯದಂದು (Akshaya Tritiya 2024) ಶುಭ, ಅಶುಭ ಮುಹೂರ್ತಗಳನ್ನು ನೋಡದೇ ಯಾವುದೇ ಕಾರ್ಯವನ್ನು ಪ್ರಾರಂಭಿಸಬಹುದು ಎಂಬ ಮಾತಿದೆ. ಉತ್ತರ ಭಾರತದಲ್ಲಿ ಅಖಾ ತೀಜ್ ಎಂದೂ ಕರೆಯಲ್ಪಡುವ ಈ ಮಂಗಳಕರ ದಿನ ಅಪಾರ ಪ್ರಾಮುಖ್ಯತೆ ಹೊಂದಿದೆ. ಈ ದಿನದಂದು ಪ್ರಾರಂಭಿಸಿದ ಯಾವುದೇ ಕಾರ್ಯ ಯಾವಾಗಲೂ ಯಶಸ್ವಿಯಾಗುತ್ತದೆ ಎಂಬ ನಂಬಿಕೆ. ಖರೀದಿಸಿದ ಸಂಪತ್ತು ಅಕ್ಷಯವಾಗುತ್ತದೆ ಎಂಬ ನಂಬಿಕೆ.

ಈ ದಿನವು ಅದೃಷ್ಟ, ಯಶಸ್ಸು ಮತ್ತು ಅದೃಷ್ಟದ ಲಾಭದ ಸಂಕೇತವಾಗಿದೆ. ಅಕ್ಷಯ ತೃತೀಯದಂದು ಸಂಪತ್ತಿನ ಅಧಿದೇವತೆ ಲಕ್ಷ್ಮಿಯನ್ನು ಮೆಚ್ಚಿಸಲು ಈ ದಿನ ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ಖರೀದಿಸುವುದು ವಾಡಿಕೆ. ಅಕ್ಷಯ ತೃತೀಯವನ್ನು ಭಾರತ ಮತ್ತು ನೇಪಾಳದ ಅನೇಕ ಪ್ರದೇಶಗಳಲ್ಲಿ ಹಿಂದೂಗಳು ಮತ್ತು ಜೈನರು ಹೊಸ ಉದ್ಯಮಗಳು, ಮದುವೆಗಳು, ದಾನ, ಮತ್ತು ಚಿನ್ನ ಅಥವಾ ಇತರ ಆಸ್ತಿಯಂತಹ ಹೂಡಿಕೆಗಳಿಗೆ ಮಂಗಳಕರವೆಂದು ಪರಿಗಣಿಸುತ್ತಾರೆ. ಅಂದು ಚಿನ್ನ, ಬೆಳ್ಳಿ, ವಾಹನ ಖರೀದಿಸಿ ತಂದರೆ ಸಂಪತ್ತು ಮತ್ತು ಸಮೃದ್ಧಿ ಬರುತ್ತದೆ ಎಂದು ಹಲವರು ನಂಬುತ್ತಾರೆ.

ಸಂಸ್ಕೃತದಲ್ಲಿ ಅಕ್ಷಯ ಪದವು “ಅಭ್ಯುದಯ, ಭರವಸೆ, ಸಂತೋಷ, ಯಶಸ್ಸು” ಎಂಬ ಅರ್ಥದಲ್ಲಿ “ಎಂದಿಗೂ ಕಡಿಮೆಯಾಗುವುದಿಲ್ಲ” ಎಂಬ ಅರ್ಥವನ್ನು ಸೂಚಿಸುತ್ತದೆ. ಈ ದಿನದಂದು ಸೂರ್ಯ ಮತ್ತು ಚಂದ್ರ ಇಬ್ಬರೂ ತಮ್ಮ ಗ್ರಹಗಳ ಅತ್ಯುತ್ತಮ ನೆಲೆಯಲ್ಲಿರುತ್ತಾರೆ ಎಂದು ನಂಬಲಾಗಿದೆ.

ಅಕ್ಷಯ ತೃತೀಯ ಆಚರಣೆಯ ಇತಿಹಾಸದ ಪ್ರಕಾರ ಅಕ್ಷಯ ತೃತೀಯ ದಿನದಂದು ನಾಲ್ಕು ಯುಗಗಳಲ್ಲಿ ಎರಡನೇ ಯುಗವಾದ ತ್ರೇತಾಯುಗವು ಪ್ರಾರಂಭವಾಯಿತು ಎಂದು ಹೇಳಲಾಗುತ್ತದೆ. ಭಗವಾನ್ ವಿಷ್ಣುವಿನ ಆರನೇ ಅವತಾರವಾದ ಪರಶುರಾಮನು ಅಕ್ಷಯ ತೃತೀಯ ದಿನದಂದು ಜನಿಸಿದರು ಎಂದು ಹೇಳಲಾಗುತ್ತದೆ. ಹೀಗಾಗಿ ಭಕ್ತರು ಅಕ್ಷಯ ತೃತೀಯವನ್ನು ಪರಶುರಾಮನ ಜನ್ಮ ದಿನವಾಗಿ ಆಚರಿಸುತ್ತಾರೆ. ಅಕ್ಷಯ ತೃತೀಯದ ಆಚರಣೆಗಳು ಅಕ್ಷಯ ತೃತೀಯದಂದು ಭಕ್ತರು ಪವಿತ್ರ ಸ್ನಾನ ಮಾಡುವ ಮೂಲಕ ಮತ್ತು ಹಳದಿ ವೇಷಭೂಷಣದಲ್ಲಿ ತಮ್ಮನ್ನು ತಾವು ಅಲಂಕರಿಸಿಕೊಳ್ಳುವುದರೊಂದಿಗೆ ದಿನವನ್ನು ಪ್ರಾರಂಭಿಸುತ್ತಾರೆ. ಈ ದಿನ ವಿಶೇಷವಾಗಿ ವಿಷ್ಣು ಸಹಸ್ರನಾಮ ಮತ್ತು ವಿಷ್ಣು ಚಾಲೀಸಾದ ಪಠಣಗಳೊಂದಿಗೆ ಭಗವಾನ್ ವಿಷ್ಣುವಿಗೆ ಪ್ರಾರ್ಥನೆಗಳನ್ನು ಸಲ್ಲಿಸಲಾಗುತ್ತದೆ.

ಚಿನ್ನ, ಬೆಳ್ಳಿ ಏಕೆ ಖರೀದಿಸಬೇಕು?

ದಂತಕಥೆಯ ಪ್ರಕಾರ, ಅಕ್ಷಯ ತೃತೀಯದಲ್ಲಿ, ಸಂಪತ್ತಿನ ದೇವತೆಯಾದ ಕುಬೇರನು ಭಗವಾನ್ ಶಿವ ಮತ್ತು ಬ್ರಹ್ಮನಿಂದ ಆಶೀರ್ವಾದವನ್ನು ಪಡೆದನು, ಅಲಕಾಪುರಿ ಎಂದು ಕರೆಯಲ್ಪಡುವ ಲೋಕವನ್ನು ಸ್ವಾಧೀನಪಡಿಸಿಕೊಂಡ. ಪರಿಣಾಮವಾಗಿ, ಈ ದಿನ ಕುಬೇರನ ಹೆಸರಿನಲ್ಲಿ ಚಿನ್ನದ ಆಭರಣಗಳು ಮತ್ತು ಆಸ್ತಿಗಳನ್ನು ಖರೀದಿಸುವುದು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗಿದೆ. ಹೊಸ ವ್ಯಾಪಾರ, ಉದ್ಯಮಗಳು, ನಿರ್ಮಾಣ ಕಾರ್ಯಗಳನ್ನು ಈ ವಿಶೇಷ ದಿನದಂದು ಪ್ರಾರಂಭಿಸಲಾಗುತ್ತದೆ. ಉದ್ಯಮಿಗಳು ಮುಂದಿನ ಆರ್ಥಿಕ ವರ್ಷಕ್ಕೆ ಹೊಸ ಆಡಿಟ್ ಪುಸ್ತಕವನ್ನು ಪ್ರಾರಂಭಿಸುವ ಮೊದಲು ಅಕ್ಷಯ ತೃತೀಯ ದಿನದಂದು ಗಣೇಶ ಮತ್ತು ಲಕ್ಷ್ಮೀ ದೇವಿಯನ್ನು ಪೂಜಿಸುತ್ತಾರೆ. ಇದನ್ನು ಹಲ್ಖಾತಾ ಎಂದು ಕರೆಯುತ್ತಾರೆ.

ಇದಲ್ಲದೇ ಅಕ್ಕಿ ಕೊಳ್ಳುವವರು, ಬ್ಯಾಂಕ್ ಖಾತೆಗೆ ಹಣ ಜಮಾ ಮಾಡುವವರು, ಯಾವುದೇ ರೀತಿಯ ಹೊಸ ವಸ್ತುಗಳು ಅಥವಾ ಪಾತ್ರೆಗಳನ್ನು ಖರೀದಿಸುವವರು- ದೇವಸ್ಥಾನಗಳಿಗೆ ಭೇಟಿ ನೀಡುವವರು, ಬಡವರಿಗೆ ಅನ್ನದಾನ ಅಥವಾ ವಿಶೇಷ ಕೊಡುಗೆಗಳನ್ನು ನೀಡುವವರು ಅಥವಾ ಬಡ ಮಕ್ಕಳಿಗೆ ಅವರ ಶಿಕ್ಷಣ ಶುಲ್ಕಕ್ಕಾಗಿ ಸಹಾಯ ಮಾಡುವವರಿಗೂ ಈ ದಿನ ಶುಭಕರ. ಹೀಗಾಗಿ ಚಿನ್ನ ಬೆಳ್ಳಿಗೆ ಸೀಮಿತವಾಗದೆ, ಧಾನ್ಯಗಳನ್ನು ಕೂಡ ಖರೀದಿಸಬಹುದು. ಬಡವರಿಗೆ ದಾನ ಮಾಡುವುದರಿಂದಲೂ ನಿಮ್ಮ ಸಂಪತ್ತು ಅಕ್ಷಯವಾಗುತ್ತದೆ.

ಇದನ್ನೂ ಓದಿ: Akshaya Tritiya 2024: ದೇಹ ಮತ್ತು ಮನಸ್ಸು ಪರಿಪೂರ್ಣತೆಯನ್ನು ಪಡೆಯುವ ದಿನ ಅಕ್ಷಯ ತೃತೀಯ

Continue Reading
Advertisement
Chetan Chandra
ಕರ್ನಾಟಕ39 mins ago

Chetan Chandra: ಸ್ಯಾಂಡಲ್ ವುಡ್ ನಟ ಚೇತನ್ ಚಂದ್ರ ಮೇಲೆ ಹಲ್ಲೆ; ರಕ್ತ ಬರುವಂತೆ ಥಳಿತ

Virat kohli
Latest47 mins ago

Virat kohli: ಅಂಪೈರ್​ಗಳ ಜತೆ ಮತ್ತೆ ಜಗಳವಾಡಿದ ವಿರಾಟ್​ ಕೊಹ್ಲಿ; ಇಲ್ಲಿದೆ ವಿಡಿಯೊ

Sunil Narine
ಪ್ರಮುಖ ಸುದ್ದಿ1 hour ago

Sunil Narine : ಐಪಿಎಲ್​ನಲ್ಲಿ ವಿಶೇಷ ದಾಖಲೆ ಬರೆದು ಎಲೈಟ್​ ಪಟ್ಟಿ ಸೇರಿದ ಸುನೀಲ್ ನರೈನ್​

vijay Rao herur
ಸಿನಿಮಾ1 hour ago

Vijay Rao Herur: ‘ವಿಜಯದಾಸರು’ ಚಿತ್ರದ ಸಹ ನಟ ವಿಜಯ್‌ ರಾವ್ ಹೇರೂರು ವಿಧಿವಶ

Virat Kohli
ಪ್ರಮುಖ ಸುದ್ದಿ1 hour ago

Virat kohli: ಕೊಹ್ಲಿಯನ್ನುಔಟ್ ಮಾಡಿ ಕೆಣಕಿದ ಇಶಾಂತ್​ ಶರ್ಮಾ; ವಿಡಿಯೊ ನೋಡಿ

Ravindra Jadeja
ಕ್ರೀಡೆ2 hours ago

Ravindra Jadeja : ವಿಕೆಟ್​ಗೆ ಹೋಗುತ್ತಿದ್ದ ಚೆಂಡು ತಡೆದ ಜಡೇಜಾಗೆ ಔಟ್ ಕೊಟ್ಟ ಅಂಪೈರ್​; ಇಲ್ಲಿದೆ ವಿಡಿಯೊ

Rain News
ಕರ್ನಾಟಕ2 hours ago

Rain News: ಬಾಗಲಕೋಟೆಯಲ್ಲಿ ಸಿಡಿಲಿಗೆ ಬಾಲಕ ಬಲಿ; ಬೆಳಗಾವಿಯ ಮನೆಗಳಿಗೆ ನುಗ್ಗಿದ ಮಳೆ ನೀರು

IPL 2024
ಪ್ರಮುಖ ಸುದ್ದಿ2 hours ago

IPL 2024 : ಅತಿಯಾಗಿ ಸಂಭ್ರಮಿಸುತ್ತಿದ್ದ ಡೆಲ್ಲಿ ಬೌಲರ್​ ರಸಿಕ್ ಸಲಾಮ್​ನನ್ನು ತಳ್ಳಿದ ರಜತ್​ ಪಾಟೀದಾರ್​

IPL 2024
Latest2 hours ago

IPL 2024 : ಸಿಎಸ್​ಕೆ ವರ್ಸಸ್​ ಆರ್​ಆರ್​ ಪಂದ್ಯದಲ್ಲಿ ಮ್ಯಾಚ್ ಫಿಕ್ಸಿಂಗ್ ನಡೆಯಿತಾ? ಅಭಿಮಾನಿಗಳ ಅನುಮಾನ

Self Harming
ಕ್ರೈಂ2 hours ago

Self Harming: ಎರಡು ಸಬ್ಜೆಕ್ಟ್‌ ಫೇಲ್ ಆಗಿದ್ದಕ್ಕೆ ಕೆರೆಗೆ ಹಾರಿ ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case I was never kidnapped and son has made a false complaint Video of victim goes viral
ಕ್ರೈಂ5 hours ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Karnataka Weather Forecast Heavy rain in chikkmagalur
ಮಳೆ6 hours ago

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

Prajwal Revanna Case Naveen Gowda post against MLA A Manju
ರಾಜಕೀಯ6 hours ago

Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ವಿಡಿಯೊ ವೈರಲ್‌ಗೆ ಟ್ವಿಸ್ಟ್‌; ಶಾಸಕ ಎ. ಮಂಜು ವಿರುದ್ಧ ನವೀನ್‌ ಗೌಡ ಪೋಸ್ಟ್‌!

Prajwal Revanna Case: Beware of making a statement Parameshwara warns to HD Kumaraswamy
ಕ್ರೈಂ9 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಕೇಸ್‌; ನಿಮ್ಮನ್ನೂ ವಿಚಾರಣೆಗೆ ಕರೆಯಬೇಕಾಗುತ್ತದೆ: ಎಚ್‌ಡಿಕೆಗೆ ಪರಮೇಶ್ವರ್‌ ವಾರ್ನಿಂಗ್‌!

Prajwal Revanna Case Two people of pen drive allottees arrested
ಕ್ರೈಂ11 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಕೇಸ್‌; ಇಬ್ಬರು ಪೆನ್‌ಡ್ರೈವ್‌ ಹಂಚಿಕೆದಾರರ ಅರೆಸ್ಟ್‌

Dina Bhavishya
ಭವಿಷ್ಯ18 hours ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು1 day ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ2 days ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ2 days ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

ಟ್ರೆಂಡಿಂಗ್‌