ಮಂಗಳೂರು: ತುಳು ನಾಡಿನ ದೈವಗಳ ಬಗ್ಗೆ ಈಗೀಗ ಜನರಿಗೆ ನಂಬಿಕೆ ಹೆಚ್ಚಾಗುತ್ತಿದೆ. ಹಲವಾರು ಮಂದಿ ದೈವಾರಾಧನೆಗಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡುತ್ತಾ ಬರುತ್ತಿದ್ದು, ಕೊರಗಜ್ಜನ ಸನ್ನಿಧಿ, ಕಟೀಲು ದುರ್ಗಾಪರಮೇಶ್ವರಿ, ಧರ್ಮಸ್ಥಳ ಮಂಜುನಾಥ, ಕುಕ್ಕೆ ಸುಬ್ರಹ್ಮಣ್ಯ ಹೀಗೆ ನಾನಾ ಪುಣ್ಯ ಕ್ಷೇತ್ರಕ್ಕೆ ಭೇಟಿ ನೀಡುವವರು ಹೆಚ್ಚಾಗಿದ್ದಾರೆ. ಶನಿವಾರ (ಡಿ. ೧೭) ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಬೆಳ್ತಂಗಡಿ ತಾಲೂಕಿನ ಅಳದಂಗಡಿ ಶ್ರೀ ಸತ್ಯ ದೇವತೆ ಕಲ್ಲುರ್ಟಿ ದೇವಸ್ಥಾನಕ್ಕೆ (Kallurti Temple) ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.
ಆನಂದ್ ಸಿಂಗ್ ಕುಟುಂಬ ಸಮೇತರಾಗಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಇದಕ್ಕೂ ಮೊದಲು ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಹ್ಮಣ್ಯಕ್ಕೂ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದರು. ಅಲ್ಲಿಂದ ಅಳದಂಗಡಿಗೆ ಭೇಟಿ ನೀಡಿದ್ದಾರೆ.
ಕಲ್ಲುರ್ಟಿ ದೈವದ ಕೋಲ ಸೇವೆಯಲ್ಲಿ ಪಾಲ್ಗೊಂಡ ಸಚಿವರು ಮತ್ತವರ ಕುಟುಂಬದವರು, ದೈವದ ಗಂಧ ಪ್ರಸಾದ ಸ್ವೀಕರಿಸಿದರು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಜತೆಗಿದ್ದರು.
ಇದನ್ನೂ ಓದಿ | Dress code in temple | ಮುರ್ಡೇಶ್ವರ ದೇವಾಲಯದಲ್ಲಿ ವಸ್ತ್ರ ಸಂಹಿತೆ ಕಡ್ಡಾಯಕ್ಕೆ ಹಿಂದು ಸಂಘಟನೆಗಳ ಮನವಿ