Site icon Vistara News

Ram Mandir: ಮಂದಿರ ಉದ್ಘಾಟನೆ ದಿನ ಮದ್ಯ ಮಾರಾಟ ಇಲ್ಲ; ಯೋಗಿ ಖಡಕ್‌ ಆರ್ಡರ್

Yogi Adityanath

No sale of liquor in Uttar Pradesh on Ram Mandir's Pran Pratishtha day, Yogi govt issues order

ಅಯೋಧ್ಯೆ: ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ರಾಮಮಂದಿರದಲ್ಲಿ (Ram Mandir) ಜನವರಿ 22ರಂದು ರಾಮಲಲ್ಲಾನ ಮೂರ್ತಿಯ ಪ್ರತಿಷ್ಠಾಪನೆಗೆ ಸಕಲ ಸಿದ್ಧತೆ ನಡೆಯುತ್ತಿವೆ. ಜನವರಿ 22ರಂದು ನಡೆಯುವ ಅದ್ಧೂರಿ ಕಾರ್ಯಕ್ರಮಕ್ಕೆ ಕೆಲವೇ ದಿನಗಳು ಬಾಕಿ ಇರುವ ಕಾರಣ ಸಿದ್ಧತೆಗಳಿಗೆ ಶರವೇಗ ನೀಡಲಾಗಿದೆ. ಇದರ ಬೆನ್ನಲ್ಲೇ ರಾಮಲಲ್ಲಾ ಮೂರ್ತಿಗೆ (Ram Lalla Statue) ಪ್ರಾಣಪ್ರತಿಷ್ಠಾಪನೆ ನಡೆಯುವ ಜನವರಿ 22ರಂದು ಉತ್ತರ ಪ್ರದೇಶ ರಾಜ್ಯಾದ್ಯಂತ ಮದ್ಯ ಮಾರಾಟವನ್ನು ನಿಷೇಧಿಸಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ (Yogi Adityanath) ಆದೇಶ ಹೊರಡಿಸಿದ್ದಾರೆ.

“ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೂ, ಜನರಿಗೂ ಭಾವನಾತ್ಮಕ ನಂಟಿದೆ. ಹಾಗಾಗಿ, ಜನವರಿ 22ರಂದು ರಾಜ್ಯದಲ್ಲಿ ಮದ್ಯ ಮಾರಾಟ ಮಾಡುವಂತಿಲ್ಲ. ಈ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಅಧಿಕಾರಿಗಳು ಕ್ರಮ ತೆಗೆದುಕೊಳ್ಳಬೇಕು. ಇನ್ನು ಪ್ರಾಣಪ್ರತಿಷ್ಠಾಪನೆಯ ದಿನ ಅಯೋಧ್ಯೆಗೆ ಸಾವಿರಾರು ವಿವಿಐಪಿಗಳು ಆಗಮಿಸುತ್ತಾರೆ. ಅವರಿಗೆ ಎಲ್ಲ ಸೌಕರ್ಯಗಳನ್ನು ಒದಗಿಸಬೇಕು. ಸರಿಯಾದ ಭದ್ರತೆ ನೀಡಬೇಕು. ಪ್ರಮುಖ ಸ್ವಚ್ಛಗಳಲ್ಲಿ ಕಸ, ಧೂಳು ಇರದಂತೆ ನೋಡಿಕೊಳ್ಳಬೇಕು. ಸ್ವಚ್ಛತೆಗಾಗಿ ಇನ್ನೂ 1,500 ಸಿಬ್ಬಂದಿಯನ್ನು ನಿಯೋಜಿಸಿ” ಎಂದು ಅಧಿಕಾರಿಗಳಿಗೆ ಯೋಗಿ ಆದಿತ್ಯನಾಥ್‌ ಸೂಚಿಸಿದ್ದಾರೆ.

ram mandir

ಬಿಗಿ ಪೊಲೀಸ್‌ ಬಂದೋಬಸ್ತ್

ರಾಮಮಂದಿರ ಲೋಕಾರ್ಪಣೆಯ ದಿನ ಉತ್ತರ ಪ್ರದೇಶ ಪೊಲೀಸರು ಹಾಗೂ ಪ್ಯಾರಾ ಮಿಲಿಟರಿ ಸಿಬ್ಬಂದಿ ಸೇರಿ ಒಟ್ಟು 11 ಸಾವಿರ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತದೆ. ಇದರ ಜತೆಗೆ ಹೆಚ್ಚಿನ ನಿಗಾ ಇರಿಸಲು, ಪ್ರತಿಯೊಂದು ಚಲನವಲನಗಳನ್ನು ಗಮನಿಸಲು ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಬಳಸಿಕೊಳ್ಳಲಾಗುತ್ತದೆ. ರಾಮಮಂದಿರ ಉದ್ಘಾಟನೆ ದಿನ ಪ್ರಾಯೋಗಿಕವಾಗಿ ಇದನ್ನು ಬಳಸಿಕೊಳ್ಳಲಾಗುತ್ತದೆ. ಮುಂದಿನ ದಿನಗಳಲ್ಲಿ ಶಾಶ್ವತವಾಗಿ ಇದೇ ತಂತ್ರಜ್ಞಾನ ಅಳವಡಿಸಿಕೊಳ್ಳುವ ಚಿಂತನೆ ಇದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Megastar Chiranjeevi: ರಾಮಮಂದಿರ ಉದ್ಘಾಟನೆಗೆ ಫ್ಯಾಮಿಲಿ ಜತೆ ಭಾಗಿಯಾಗಲಿದ್ದಾರೆ ನಟ ಚಿರಂಜೀವಿ

ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಲಲ್ಲಾನಿಗೆ ಪ್ರಾಣ ಪ್ರತಿಷ್ಠಾಪನೆ ಮಾಡಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರೇ ಪ್ರಾಣ ಪ್ರತಿಷ್ಠಾಪನೆ ನೆರವೇರಿಸಲಿದ್ದಾರೆ. ಇದಕ್ಕಾಗಿ ರಾಮಮಂದಿರ ಟ್ರಸ್ಟ್‌ ದೇಶದ ಹಲವು ಗಣ್ಯರಿಗೆ ಆಹ್ವಾನ ನೀಡಿದೆ. ಕನ್ನಡದ ಯಶ್‌, ರಿಷಬ್‌ ಶೆಟ್ಟಿ ಸೇರಿ ಬಾಲಿವುಡ್‌ನ ಅಮಿತಾಭ್‌ ಬಚ್ಚನ್‌, ರಣಬೀರ್‌ ಕಪೂರ್‌, ಮಾಧುರಿ ದೀಕ್ಷಿತ್‌, ಅಕ್ಷಯ್‌ ಕುಮಾರ್‌, ಆಲಿಯಾ ಭಟ್‌, ಆಯುಷ್ಮಾನ್‌ ಕುರಾನ, ಅಜಯ್‌ ದೇವಗನ್‌, ಅನುಪಮ್‌ ಖೇರ್‌, ಸಂಜಯ್‌ ಲೀಲಾ ಬನ್ಸಾಲಿ ಸೇರಿ ಹಲವು ನಟ-ನಟಿಯರು, ನಿರ್ದೇಶಕರಿಗೆ ಆಹ್ವಾನಿಸಲಾಗಿದೆ. ದಕ್ಷಿಣ ಭಾರತದ ನಟರಾದ ರಜನಿಕಾಂತ್‌, ಚಿರಂಜೀವಿ ಸೇರಿ ಹಲವು ನಟರಿಗೂ ಆಹ್ವಾನಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version