Udupi Paryaya : ಪರ್ಯಾಯ ಪೀಠದಲ್ಲಿ ಪುತ್ತಿಗೆ ಶ್ರೀ ದರ್ಬಾರ್‌, ಉಳಿದ ಯತಿಗಳ ಗೈರು - Vistara News

ಉಡುಪಿ

Udupi Paryaya : ಪರ್ಯಾಯ ಪೀಠದಲ್ಲಿ ಪುತ್ತಿಗೆ ಶ್ರೀ ದರ್ಬಾರ್‌, ಉಳಿದ ಯತಿಗಳ ಗೈರು

Udupi paryaya : ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಕೃಷ್ಣ ಮಠದ ಪರ್ಯಾಯ ಪೂಜಾಧಿಕಾರವನ್ನು ಸ್ವೀಕರಿಸಿದರು. ಅವರ ಪರ್ಯಾಯ ಮೆರವಣಿಗೆ ಮತ್ತು ದರ್ಬಾರ್‌ನಲ್ಲಿ ಉಳಿದ ಸಪ್ತಮಠಗಳ ಯತಿಗಳು ಭಾಗವಹಿಸಲಿಲ್ಲ.

VISTARANEWS.COM


on

Udupi krishna Matt Paryaya puttige Shri
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಉಡುಪಿ: ಉಡುಪಿ ಶ್ರೀ ಕೃಷ್ಣ ಮಠಕ್ಕೆ (Udupi Shri Krishna Matt) ಸಂಬಂಧಿಸಿ, 500 ವರ್ಷಗಳ ಇತಿಹಾಸದಲ್ಲಿ ನಡೆದ 252ನೇ ಪರ್ಯಾಯ ಮಹೋತ್ಸವದಲ್ಲಿ (Udupi Paryaya Mahotsava) ಉಡುಪಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು (Sri Sugunendra theertha Sripadaru) ನಾಲ್ಕನೇ ಬಾರಿಗೆ ಶ್ರೀಕೃಷ್ಣನ ದ್ವೈವಾರ್ಷಿಕ ಪೂಜಾಧಿಕಾರವನ್ನು ಸ್ವೀಕರಿಸಿದರು. ಮಧ್ವ ಪಂಥದ ಯತಿಯಾಗಿದ್ದು, ಸಮುದ್ರೋಲ್ಲಂಘನೆ ಮಾಡಿದ್ದು ಸರಿಯಲ್ಲ ಎಂದು ವಾದಿಸುವ ಉಳಿದ ಏಳು ಮಠಗಳ ಶ್ರೀಗಳು ಈ ಪರ್ಯಾಯೋತ್ಸವದಲ್ಲಿ ಭಾಗಿಯಾಗಿಲ್ಲ. ಹೀಗಾಗಿ ಪುತ್ತಿಗೆ ಶ್ರೀಗಳು ತಮ್ಮ ಶಿಷ್ಯ ಸುಶೀಂದ್ರ ತೀರ್ಥರ ಸಾಥ್‌ನೊಂದಿಗೆ ಪರ್ಯಾಯ ಪೀಠವೇರಿದರು. ಬುಧವಾರ ರಾತ್ರಿಯಿಂದಲೇ ಆರಂಭಗೊಂಡ ಪರ್ಯಾಯ ಮಹೋತ್ಸವ ದರ್ಬಾರ್‌ (Paryaya Darbar) ಕಾರ್ಯಕ್ರಮದೊಂದಿಗೆ ಗುರುವಾರ ಬೆಳಗ್ಗೆ ಮುಕ್ತಾಯಗೊಂಡಿತು.

Udupi krishna Matt Paryaya puttige Shri

ಉಡುಪಿ ಕೃಷ್ಣ ಮಠದ ವ್ಯಾಪ್ತಿಯಲ್ಲಿ ಕಾಣಿಯೂರು ಮಠ, ಸೋದೆ ಮಠ, ಪುತ್ತಿಗೆ ಮಠ, ಅದಮಾರು ಮಠ, ಪೇಜಾವರ ಮಠ, ಪಲಿಮಾರು ಮಠ, ಕೃಷ್ಣಾಪುರ ಮಠ, ಶೀರೂರು ಮಠ ಹೀಗೆ ಎಂಟು ಮಠಗಳಿವೆ. ಪ್ರತಿ ಮಠಕ್ಕೂ ಎರಡು ವರ್ಷಕ್ಕೊಮ್ಮೆ ಪೂಜಾಧಿಕಾರ ಹಸ್ತಾಂತರವಾಗುತ್ತದೆ. ಅಂದರೆ ಒಂದು ಮಠಕ್ಕೆ ಪ್ರತಿ 14 ವರ್ಷಕ್ಕೊಮ್ಮೆ ಪೂಜಾಧಿಕಾರ ದೊರೆಯುತ್ತದೆ.

Udupi krishna Matt Paryaya puttige Shri

ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು 2008ರಲ್ಲಿ ಪರ್ಯಾಯ ಪೀಠಾರೋಹಣ ಮಾಡಿದ್ದು, ಇದೀಗ ಅಷ್ಟಮಠಗಳ ಒಂದು ಸರತಿ ಮುಗಿದು ಮತ್ತೆ ಅಧಿಕಾರ ಸಿಕ್ಕಿದೆ. ಕಳೆದ ಬಾರಿಯ ಪರ್ಯಾಯದಲ್ಲೂ ಯಾವ ಯತಿಗಳೂ ಭಾಗವಹಿಸಿರಲಿಲ್ಲ. ಭೀಮನಕಟ್ಟೆ ಮಠದ ಶ್ರೀಗಳು ಅವರಿಗೆ ಸಾಥ್‌ ನೀಡಿದ್ದರು. ಈ ನಡುವೆ ಪುತ್ತಿಗೆ ಶ್ರೀಗಳು ಶಿಷ್ಯ ಸ್ವೀಕಾರ ಮಾಡಿದ್ದರಿಂದ ಶಿಷ್ಯರು ಈ ಬಾರಿ ಸಾಥ್‌ ನೀಡಿದ್ದಾರೆ.

2008ರಿಂದ 2010ರವರೆಗೆ ಪುತ್ತಿಗೆ ಶ್ರೀಗಳು ಪರ್ಯಾಯ ಪೀಠವೇರಿದ್ದರೂ ಅಷ್ಟ ಮಠಗಳ ನಿರ್ಣಯದಂತೆ ಶ್ರೀಕೃಷ್ಣನನ್ನು ಮುಟ್ಟಿ ಪೂಜೆ ಮಾಡಿರಲಿಲ್ಲ. ಅವರ ಬದಲಿಗೆ ಶೀರೂರು ಮಠಾಧೀಶರಾಗಿದ್ದ ಲಕ್ಷ್ಮೀವರ ತೀರ್ಥ ಶ್ರೀಪಾದರು ಪೂಜೆ ಮಾಡಿದ್ದರು. ಈ ಬಾರಿ ಕಿರಿಯ ಯತಿಗಳಾದ ಸುಶೀಂದ್ರ ತೀರ್ಥ ಶ್ರೀಗಳು ಪೂಜಾ ವಿಧಿ ವಿಧಾನಗಳನ್ನು ನಿರ್ವಹಿಸುವ ಸಾಧ್ಯತೆಗಳಿವೆ.

28 ದೇಶಗಳಲ್ಲಿ ಧರ್ಮ ಪ್ರಸಾರ ಮಾಡಿದ ಪುತ್ತಿಗೆ ಶ್ರೀಗಳು

Udupi krishna Matt Paryaya puttige Shri

ಸಾಗರೋಲ್ಲಂಘನ ಮಾಡಿ ಮಧ್ವ ಪರಂಪರೆಗೆ ಚ್ಯುತಿ ತಂದ ಆರೋಪದ ಹೊರತಾಗಿಯೂ ಪುತ್ತಿಗೆ ಮಠದ ಪರ್ಯಾಯ ಯತಿಗಳಾದ ಸುಗುಣೇಂದ್ರ ತೀರ್ಥರು 28 ರಾಷ್ಟ್ರಗಳಲ್ಲಿ ಧರ್ಮ ಪ್ರಚಾರ ಮಾಡಿರುವ ಖ್ಯಾತಿಯನ್ನು ಹೊಂದಿದ್ದಾರೆ. ವಿದೇಶದಲ್ಲಿ ಹದಿನಾಋಕ್ಕೂ ಅಧಿಕ ಕೃಷ್ಣಮಂದಿರ ಹಾಗೂ ಮಠಗಳನ್ನು ಸ್ಥಾಪಿಸಿ ಧರ್ಮ ಪ್ರಸಾರ ಮಾಡಿದ್ದಾರೆ.

ಅದ್ಧೂರಿ ಪರ್ಯಾಯ ಮೆರವಣಿಗೆ, ದರ್ಬಾರ್‌

ಅಷ್ಟ ಮಠಗಳ ಒಳಗಿನ ವಿವಾದ ಏನೇ ಇದ್ದರೂ ದ್ವೈವಾರ್ಷಿಕ ಪರ್ಯಾಯ ಮಹೋತ್ಸವದಲ್ಲಿ ಸಂಭ್ರಮಕ್ಕೇನೂ ಕೊರತೆ ಇರಲಿಲ್ಲ. ಪರ್ಯಾಯ ಮೆರವಣಿಗೆಯ ಅಬ್ಬರ ಮುಗಿಲು ಮುಟ್ಟಿತ್ತು. ಪರ್ಯಾಯ ದರ್ಬಾರ್‌ನಲ್ಲಿ ಧಾರ್ಮಿಕ ಮತ್ತು ರಾಜಕೀಯ ಕ್ಷೇತ್ರದ ಹಲವಾರು ಗಣ್ಯ ವ್ಯಕ್ತಿಗಳು ಭಾಗವಹಿಸಿದ್ದರು.

Udupi krishna Matt Paryaya puttige Shri BSY
ಪರ್ಯಾಯ ದರ್ಬಾರ್‌ನಲ್ಲಿ ಬಿ.ಎಸ್‌. ಯಡಿಯೂರಪ್ಪ

ದಂಡತೀರ್ಥದಿಂದ ಪರ್ಯಾಯ ದರ್ಬಾರ್‌ವರೆಗೆ…

ಪುತ್ತಿಗೆ ಶ್ರೀಗಳು ತಮ್ಮ ಶಿಷ್ಯ ಸಮೇತರಾಗಿ ಗುರುವಾರ ಬೆಳಗಿನ ಜಾವ 1.30ರ ವೇಳೆಗೆ ಕಾಪು ಸಮೀಪದ ದಂಡ ತೀರ್ಥದಲ್ಲಿ ಪವಿತ್ರ ಸ್ನಾನ ಮಾಡಿ ಜೋಡುಕಟ್ಟೆಗೆ ಆಗಮಿಸಿದ ಶ್ರೀಗಳಿಗೆ ಸಾಂಪ್ರದಾಯಿಕ ಸ್ವಾಗತ ಕೋರಲಾಯಿತು. ಅಲ್ಲಿ ಪಟ್ಟದ ದೇವರಿಗೆ ಪೂಜೆ ಸಲ್ಲಿಸಿದ ಯತಿ ದ್ವಯರನ್ನು ಮೆರವಣಿಗೆಯಲ್ಲಿ ರಥಬೀದಿಗೆ ಕರೆ ತರಲಾಯಿತು.

ಮೆರವಣಿಗೆಯಲ್ಲಿ‌ ಹತ್ತಾರು ಟ್ಯಾಬ್ಲೋಗಳು, ರಾಜ್ಯದ ನಾನಾ ಭಾಗಗಳಿಂದ ಬಂದ ಕಲಾ ತಂಡಗಳು ಭಾಗಿಯಾಗಿದ್ದವು. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವನ್ನು ಸಂಕೇತಿಸುವ ಟ್ಯಾಬ್ಲೋ ಗಮನ ಸೆಳೆಯಿತು.

ಚಂಡೆ ಬಳಗ, ಭಜನಾ ತಂಡಗಳ ಕಲರವ, ಹುಲಿ ವೇಷ ಸಹಿತ ಬಗೆ ಬಗೆಯ ವೇಷಧಾರಿಗಳ ಅಬ್ಬರ ಜೋರಾಗಿತ್ತು. ಮೆರವಣಿಗೆಯ ಕೊನೆಯಲ್ಲಿ ಶ್ರೀ ಸುಗುಣೇಂದ್ರ ತೀರ್ಥರು ಹಾಗೂ ಸುಶೀಂದ್ರ ತೀರ್ಥರನ್ನು ಹೊತ್ತ ಪಲ್ಲಕ್ಕಿ ಮೆರವಣಿಗೆ ನಡೆಯಿತು.

ಪರ್ಯಾಯ ಕಾಲದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಉಡುಪಿ ವಿವಿಧ ಭಾಗಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ರಥ ಬೀದಿ ,ಪಾರ್ಕಿಂಗ್, ಪಿಪಿಸಿ ಕಾಲೇಜ್, ಜೋಡುಕಟ್ಟೆ ಸೇರಿದಂತೆ ವಿಧದ ಕಡೆ ವೇದಿಕೆ ನಿರ್ಮಾಣ ಮಾಡಲಾಗಿತ್ತು. ಎಲ್ಲಾ ವೇದಿಕೆಯಲ್ಲಿ ಭಜನೆ ,ಸಂಗೀತ ರಸಮಂಜರಿ ಯಕ್ಷಗಾನ, ನಾಟಕ ಕಾರ್ಯಕ್ರಮ ನಡೆದವು.

ಕನಕನ ಕಿಂಡಿಯಲ್ಲಿ ಕೃಷ್ಣ ದರ್ಶನ, ಅಧಿಕಾರ ಸ್ವೀಕಾರ

ಜೋಡುಕಟ್ಟೆಯಿಂದ ಮೆರವಣಿಗೆಯಲ್ಲಿ ರಥಬೀದಿಗೆ ಆಗಮಿಸಿದ ಪುತ್ತಿಗೆ ಮಠದ ಅವಳಿ ಶ್ರೀಗಳು ಕನಕನ ಕಿಂಡಿ ಮೂಲಕ ಕೃಷ್ಣ ದರ್ಶನ ಮಾಡಿದರು. ಅನಂತೇಶ್ವರ ಮತ್ತು ಚಂದ್ರಮೌಳೇಶ್ವರ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಬಳಿಕ ಕೃಷ್ಣ ಮಠ ಪ್ರವೇಶಿಸಿದ ಅವರು, ಅಕ್ಷಯ ಪಾತ್ರೆ ಸ್ವೀಕರಿಸಿ ಸರ್ವಜ್ಞ ಪೀಠಾರೋಹಣ ಮಾಡಿದರು. ಈ ಮೂಲಕ ಎರಡು ವರ್ಷಗಳ ಅವಧಿಗೆ ಕೃಷ್ಣ ಪೂಜೆಯ ದೀಕ್ಷೆಯನ್ನು ಸ್ವೀಕರಿಸಿದರು.

ಇದನ್ನೂ ಓದಿ: ಕೃಷ್ಣ ಮಠದಲ್ಲಿ ಪರ್ಯಾಯಕ್ಕೆ ಬಾಳೆ ಮುಹೂರ್ತ; ಶಿಷ್ಯನ‌ ಜತೆಯಾಗಿ ಪರ್ಯಾಯ ಮಾಡುವೆ ಎಂದ ಪುತ್ತಿಗೆ ಶ್ರೀ

ಪೀಠಾರೋಹಣ ಮಾಡಿದ ಬಳಿಕ ಶ್ರೀಗಳು ಇನ್ನು ಎರಡು ವರ್ಷ ಕೃಷ್ಣ ಮಠದ ರಥಬೀದಿ ಬಿಟ್ಟು ಹೋಗುವಂತಿಲ್ಲ. ಹೊರಗಿನ ಇತರೆ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತಿಲ್ಲ ಎಂಬ ನಿಯಮವಿದೆ.

ಪರ್ಯಾಯ ದರ್ಬಾರ್‌ನಲ್ಲಿ ಗಣ್ಯಾತಿಗಣ್ಯರು ಭಾಗಿ

ಸರ್ವಜ್ಞ ಪೀಠಾರೋಹಣದ ಬಳಿಕ ಅವರು ರಾಜಾಂಗಣಕ್ಕೆ ಆಗಮಿಸಿ ಪರ್ಯಾಯ ದರ್ಬಾರ್‌ನಲ್ಲಿ ಭಾಗವಹಿಸಿದರು. ದರ್ಬಾರ್‌ನಲ್ಲಿ ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌, ಸ್ಪೀಕರ್‌ ಯು.ಟಿ. ಖಾದರ್‌, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಗಾಳಿ ಸಹಿತ ಜೋರು ಮಳೆ; 11 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka Weather Forecast: ಕರಾವಳಿ, ಮಲೆನಾಡು ಸೇರಿದಂತೆ ಒಳನಾಡಿ ಸುತ್ತಮುತ್ತ ಭಾರಿ ಮಳೆಯಾಗಲಿದ್ದು, 11 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಜತೆಗೆ ಹಾಸನದ ಕೆಲ ಶಾಲೆಗಳಿಗೆ ರಜೆ (Rain news) ನೀಡಲಾಗಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಭಾರಿ (Heavy Rain) ಮಳೆಯಾಗಲಿದ್ದು, ಮುಂಜಾಗ್ರತಾ ದೃಷ್ಟಿಯಿಂದ ಶಾಲೆಗಳಿಗೆ ರಜೆ ಘೋಷಣೆ (Holiday) ಮಾಡಲಾಗಿದೆ. ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ (Karnataka Weather Forecast) ಸಾಧ್ಯತೆಯಿದೆ. ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಚಿತ್ರದುರ್ಗ, ದಾವಣಗೆರೆ, ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದೆಡೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡು ಜಿಲ್ಲೆಯಾದ್ಯಂತ ಭಾರೀ ಮಳೆಯಾಗಲಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ವ್ಯಾಪಕವಾಗಿ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ.

ರಾಜಧಾನಿ ಬೆಂಗಳೂರಿನಲ್ಲಿ ವ್ಯಾಪಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನಗಳು 28 ಮತ್ತು 21 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಗಾಳಿ ಸಹಿತ ಭಾರಿ ಮಳೆ- ರೆಡ್‌ ಅಲರ್ಟ್‌ ಘೋಷಣೆ

ನಿರಂತರ ಗಾಳಿ ಜತೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ ಮತ್ತು ಹಾಸನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಬೀದರ್, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ: Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

ಶನಿವಾರ ಹಾಸನದ ಕೆಲವುಶಾಲೆಗಳಿಗೆ ರಜೆ ಘೋಷಣೆ

ಹಾಸನ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದ ಹಿನ್ನೆಲೆಯಲ್ಲಿ ಆರು ತಾಲೂಕುಗಳ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸಕಲೇಶಪುರ, ಆಲೂರು, ಬೇಲೂರು, ಹಾಸನ, ಹೊಳೆನರಸೀಪುರ ಮತ್ತು ಅರಕಲಗೂಡು ತಾಲೂಕಿನ ಶಾಲೆಗಳಿಗೆ ಮುಂಜಾಗ್ರತಾ ಕ್ರಮವಾಗಿ ರಜೆ ನೀಡಲಾಗಿದೆ. ಅಂಗನವಾಡಿ, ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಡಿಡಿಪಿಐ ಎಚ್ ಕೆ ಪಾಂಡು ಆದೇಶ ಹೊರಡಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ವಾಯುಭಾರ ಕುಸಿತ ಎಫೆಕ್ಟ್‌; ವಾರಾಂತ್ಯದಲ್ಲಿ ಭಾರಿ ಮಳೆ ಎಚ್ಚರಿಕೆ, ಶಾಲೆಗಳಿಗೆ ರಜೆ ಘೋಷಣೆ

Karnataka Weather Forecast : ವಾಯುಭಾರ ಕುಸಿತದಿಂದಾಗಿ ವಾರಾಂತ್ಯದಲ್ಲಿ ಭಾರಿ ಮಳೆಯಾಗುವ (Rain News) ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ. ಶನಿವಾರ ಹಲವು ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ಅರಬ್ಬಿ ಸಮುದ್ರದ ಪೂರ್ವಭಾಗದಲ್ಲಿ ಟ್ರಫ್ ಹಾಗೂ ವಾಯುಭಾರ ಉಂಟಾಗಿರುವ ಹಿನ್ನೆಲೆಯಲ್ಲಿ ವಾರಾಂತ್ಯದಲ್ಲಿ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast ) ಮುನ್ಸೂಚನೆಯನ್ನು ನೀಡಿದೆ. ಮಳೆಯೊಂದಿಗೆ ಗಾಳಿ ವೇಗವು 50 ಕಿ.ಮೀ ತಲುಪುವ ಸಾಧ್ಯತೆ ಇದೆ. ಹೀಗಾಗಿ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

ಶನಿವಾರದಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಜತೆಗೆ ನಿರಂತರ ಗಾಳಿಯ ವೇಗವು 40-50 ಕಿಮೀ ತಲುಪುವ ಸಾಧ್ಯತೆಯಿದೆ.

ಇನ್ನೂ ಹಾಸನ ಜಿಲ್ಲೆಯಲ್ಲೂ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಉಳಿದ ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ ಗಾಳಿಯ ವೇಗವು (40-50 kmph) ತಲುಪುವ ಸಾಧ್ಯತೆಯಿದೆ ಹಾಗೊ ಹಗುರದಿಂದ ಸಾಧಾರಣ ಮಳೆಯಾಗಲಿದೆ.

ಇನ್ನೂ ಭಾನುವಾರದಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ನಿರಂತರ ಗಾಳಿಯ ವೇಗವು (30-40 ಕಿಮೀ) ವಿಪರೀತ ಮಳೆಯಾಗಲಿದೆ. ಒಳನಾಡಿನ ಬೆಳಗಾವಿ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಮುಂದಿನ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ನಿರಂತರ ಗಾಳಿಯ ವೇಗವು 35-45 ಕಿ.ಮೀ ತಲುಪುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 25 ಮತ್ತು 20 ಡಿ.ಸೆ ಇರಲಿದೆ.

ಇದನ್ನೂ ಓದಿ: Karnataka Rain : ಉಕ್ಕಿ ಹರಿಯುತ್ತಿದ್ದ ಹೊಳೆಯಲ್ಲಿ ಕೊಚ್ಚಿ ಹೋದ ಕಾರ್ಮಿಕ; ಮನೆಯ ಗೋಡೆ ಕುಸಿದು ಗೃಹಿಣಿ ಸಾವು

ಶನಿವಾರ ಹಾಸನದ ಕೆಲವುಶಾಲೆಗಳಿಗೆ ರಜೆ ಘೋಷಣೆ

ಹಾಸನ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದ ಹಿನ್ನೆಲೆಯಲ್ಲಿ ಆರು ತಾಲೂಕುಗಳ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸಕಲೇಶಪುರ, ಆಲೂರು, ಬೇಲೂರು, ಹಾಸನ, ಹೊಳೆನರಸೀಪುರ ಮತ್ತು ಅರಕಲಗೂಡು ತಾಲೂಕಿನ ಶಾಲೆಗಳಿಗೆ ಮುಂಜಾಗ್ರತಾ ಕ್ರಮವಾಗಿ ರಜೆ ನೀಡಲಾಗಿದೆ. ಅಂಗನವಾಡಿ, ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಡಿಡಿಪಿಐ ಎಚ್ ಕೆ ಪಾಂಡು ಆದೇಶ ಹೊರಡಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಉಕ್ಕಿ ಹರಿಯುತ್ತಿದ್ದ ಹೊಳೆಯಲ್ಲಿ ಕೊಚ್ಚಿ ಹೋದ ಕಾರ್ಮಿಕ; ಮನೆಯ ಗೋಡೆ ಕುಸಿದು ಗೃಹಿಣಿ ಸಾವು

Karnataka Rain : ಹಾಸನದಲ್ಲಿ ಉಕ್ಕಿ ಹರಿಯುತ್ತಿದ್ದ ಹೊಳೆ ದಾಟಲು ಹೋದ ಕೂಲಿ ಕಾರ್ಮಿಕ ಕೊಚ್ಚಿ ಹೋಗಿದ್ದರೆ, ಇತ್ತ ಮೈಸೂರಿನಲ್ಲಿ ಮಳೆಗೆ ಮನೆ ಗೋಡೆ ಕುಸಿದು ಮಹಿಳೆಯೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ.

VISTARANEWS.COM


on

By

Karnataka Rain
Koo

ಉಡುಪಿ/ಮೈಸೂರು: ಭಾರಿ ಮಳೆಗೆ (Karnataka Rain) ಉಕ್ಕಿ ಹರಿಯುತ್ತಿದ್ದ ಹೊಳೆಯಲ್ಲಿ ಕೂಲಿಕಾರ್ಮಿಕ ಕೊಚ್ಚಿ ಹೋಗಿದ್ದಾರೆ. ಉಡುಪಿಯ ಹೆಬ್ರಿ ನಾಡ್ಪಾಲು ಗ್ರಾಮದ ನೆಲ್ಲಿಕಟ್ಟೆ ಚಿರೋಳ್ಳಿ ಎಂಬಲ್ಲಿ ಘಟನೆ ನಡೆದಿದೆ. ತುಮಕೂರು ಮೂಲದ ಆನಂದ್ (45) ನೀರು ಪಾಲಾದವರು. ಕೆಲಸಕ್ಕೆ ತೆರಳಲು ಸೀತ ನದಿಯ ಉಪನದಿಯನ್ನು ದಾಟುತ್ತಿದ್ದಾಗ ಈ ಅವಘಡ ಸಂಭವಿಸಿದೆ.

ಕಾಲು ಸೇತುವೆ ಇಲ್ಲದ ಹಿನ್ನೆಲೆಯಲ್ಲಿ ಹಗ್ಗದ ಸಹಾಯದಿಂದ ಹೊಳೆ ದಾಟುವಾಗ ಹಗ್ಗ ತುಂಡಾಗಿದೆ. ಪರಿಣಾಮ ರಭಸವಾಗಿ ಹರಿಯುತ್ತಿದ್ದ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ನಾಡ್ಪಾಲಿನ ಮನೋರಮ ಹೆಗ್ಡೆ ಎಂಬುವರ ತೋಟದಲ್ಲಿ ಕೂಲಿಕಾರ್ಮಿಕರಾಗಿ ದುಡಿಯುತ್ತಿದ್ದರು. ಘಟನಾ ಸ್ಥಳಕ್ಕೆ ಹೆಬ್ರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ಮೈಸೂರು ಜಿಲ್ಲೆಯಲ್ಲಿ ಮಳೆಗೆ ಮೊದಲ ಬಲಿ

ಮೈಸೂರು ಜಿಲ್ಲೆಯಲ್ಲಿ ಮಳೆಗೆ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ನಿರಂತರ ಮಳೆಗೆ ಮನೆಯ ಗೋಡೆ ಕುಸಿದು ಮಹಿಳೆ ಮೃತಪಟ್ಟಿದ್ದಾರೆ. ಹೇಮಲತಾ (22) ಮೃತ ದುರ್ದೈವಿ. ಅವಘಡದಲ್ಲಿ ತಾಯಿ ಮೃತಪಟ್ಟರೆ ಜತೆಗಿದ್ದ ಮಗುವನ್ನು ರಕ್ಷಣೆ ಮಾಡಲಾಗಿದೆ. ಮೈಸೂರಿನ ಪಿರಿಯಾಪಟ್ಟಣ ತಾಲೂಕಿನ ಕಗ್ಗುಂಡಿ ಗ್ರಾಮದಲ್ಲಿ ಮನೆ ಘಟನೆ ನಡೆದಿದೆ.

ಚಿಕ್ಕಮಗಳೂರಲ್ಲಿ ಭಾರಿ ಗಾಳಿ ಮಳೆಗೆ ಮನೆ ನೆಲಸಮ

ಚಿಕ್ಕಮಗಳೂರಿನಲ್ಲಿ ಅವಾಂತರಗಳು ಮುಂದುವರಿದಿದ್ದು, ಭಾರಿ ಗಾಳಿ ಮಳೆಗೆ ಮನೆಯೊಂದು ನೆಲಸಮವಾಗಿದೆ. ಗೋಡೆ ಕುಸಿದು ಮನೆಯ ಚಾವಣಿ ಧ್ವಂಸಗೊಂಡಿದೆ. ಮೂಡಿಗೆರೆ ತಾಲೂಕಿನ ಬೆಟ್ಟಿಗೆರಿ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ಸುಂದರ್ ಎಂಬುವವರ ಮನೆಗೆ ಹಾನಿಯಾಗಿದ್ದು, ಮನೆಯಲ್ಲಿದ್ದ ಪೀಠೋಪಕರಣಗಳು, ಆಹಾರ ಪದಾರ್ಥ ನಾಶವಾಗಿವೆ. ಮನೆಯ ಗೋಡೆ ಕುಸಿದು ಸ್ವಲ್ಪದರಲ್ಲೇ ಕುಟುಂಬ ಸದಸ್ಯರು ಪಾರಾಗಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಹಿರೇಕೊಳಲೆ, ಒಡೆಯರ ಪುರ ಗ್ರಾಮದಲ್ಲಿ ಗ್ರಾಮದ ದ್ಯಾವಯ್ಯ, ಲಕ್ಷ್ಮಮ್ಮ ಎಂಬುವರಿಗೆ ಸೇರಿದ ಮನೆಗೂ ಹಾನಿಯಾಗಿದೆ. ಜಿಲ್ಲೆಯಾದ್ಯಂತ ಮಳೆಗೆ 190ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ.

ಹಾಸನದಲ್ಲೂ ಕುಸಿದು ಬಿದ್ದ ಮನೆ ಗೋಡೆ

ಇತ್ತ ಹಾಸನ ಜಿಲ್ಲೆಯಲ್ಲೂ ಮಳೆ ಅಬ್ಬರಕ್ಕೆ ಜನರು ನಲುಗಿ ಹೋಗಿದ್ದಾರೆ. ವ್ಯಾಪಕವಾಗಿ ಸುರಿದ ಮಳೆಗೆ ಮನೆಯ ಗೋಡೆಯು ಕುಸಿದಿದೆ. ಅದೃಷ್ಟವಶಾತ್ ಮನೆಯಲ್ಲಿದ್ದ ವಿಶೇಷ ಚೇತನ ವ್ಯಕ್ತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಕಲೇಶಪುರ ತಾಲೂಕಿನ ಚಂಗಡಿಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ನಾಗನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ನಂದೀಶ್ ಮನೆಯಲ್ಲಿ ಒಬ್ಬರೇ ಇದ್ದಾಗ ಈ ಅವಘಡ ನಡೆದಿದೆ. ಮನೆಯಲ್ಲಿದ್ದ ವಸ್ತುಗಳಿಗೆ ಹಾನಿಯಾಗಿದ್ದು, ವಾಸದ ಮನೆ ಕಳೆದುಕೊಂಡು ನಂದೀಶ್‌ ಕಂಗಾಲಾಗಿದ್ದಾರೆ.

ಇದನ್ನೂ ಓದಿ: Dengue Fever : ಡೆಂಗ್ಯೂ ಭೀತಿ- ಸೊಳ್ಳೆಗಳ ನಾಶಕ್ಕೆ ಫೀಲ್ಡಿಗಿಳಿದ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

ಹೆದ್ದಾರಿ ಮಧ್ಯೆ ನೆಲ ಕಚ್ಚಿದ ಬೃಹತ್‌ ಮರ

ರಾಜ್ಯ ಹೆದ್ದಾರಿಗೆ ಬೃಹತ್ ಗಾತ್ರದ ಮರ ಉರುಳಿ ಬಿದ್ದಿದ್ದು, ಸೊರಬ – ಆನವಟ್ಟಿ – ಶಿರಸಿ ಸಂಚಾರ ವ್ಯತ್ಯಯವಾಗಿದೆ. ಒಂದು ಗಂಟೆಗೂ ಹೆಚ್ಚು ಕಾಲ ವಾಹನಗಳು ನಿಂತಲೇ ನಿಲ್ಲುವಂತಾಯಿತು. ಸ್ಥಳಕ್ಕೆ ಅರಣ್ಯಾಧಿಕಾರಿ ತಂಡ ಭೇಟಿ ನೀಡಿ ಮರ ತೆರವು ಮಾಡಿದ್ದಾರೆ. ಶಿವಮೊಗ್ಗದಲ್ಲಿ ಮಳೆಯು ಅಬ್ಬರಿಸುತ್ತಿದ್ದು, ತುಂಗಾ ನದಿ ಉಕ್ಕಿ ಹರಿಯುತ್ತಿದೆ. ಅಪಾಯ ಮಟ್ಟ ಮೀರಿ ನೀರು ಹರಿಯುತ್ತಿದ್ದು, ನದಿ ಪಾತ್ರದ ಜನರಲ್ಲಿ ಆತಂಕ ಹೆಚ್ಚಿಸಿದೆ. ಕ್ಷಣ ಕ್ಷಣಕ್ಕೂ ತುಂಗಾ ನದಿಯ ಹರಿವಿನ ಮಟ್ಟ ಏರಿಕೆ ಆಗುತ್ತಿದ್ದು, ಶಿವಮೊಗ್ಗ ನಗರದ ರಾಜೀವ್ ಗಾಂಧಿ ಬಡಾವಣೆ ಜನರು ಆತಂಕದಲ್ಲೇ ದಿನಕಳೆಯುವಂತಾಗಿದೆ.

ಅದ್ಯಪಾಡಿಯಲ್ಲಿ ನೆರೆ ಸೃಷ್ಟಿ

ದಕ್ಷಿಣ ಕನ್ನಡದ ಮಂಗಳೂರಿನ ಅದ್ಯಪಾಡಿ ಗ್ರಾಮದಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಫಲ್ಗುಣಿ ನದಿಯಲ್ಲಿ ನೆರೆ ಬಂದು ಗ್ರಾಮಕ್ಕೆ ನೀರು ನುಗ್ಗಿದ್ದು, ಅದ್ಯಪಾಡಿಯಲ್ಲಿ 35 ಮನೆಗಳಿಗೆ ಜಲ ದಿಗ್ಬಂಧನ ಹಾಕಲಾಗಿದೆ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸಂತ್ರಸ್ತರ ಮನೆಗಳಿಗೆ ದೋಣಿಯಲ್ಲಿ ತೆರಳಿ ಪರಿಶೀಲನೆ ನಡೆಸಿದ್ದರು. ನೆರೆ ನೀರಿನಿಂದ ಸಂತ್ರಸ್ತರಾಗಿರುವ 80 ಮಂದಿಯ ಸ್ಥಳಾಂತರಕ್ಕೆ ಸೂಚನೆ ನೀಡಿದರು.

ನದಿ ದಾಟಲು ಎಮ್ಮೆ ಬಾಲವೇ ಆಸರೆ

ನದಿ ದಾಟಲು ಎಮ್ಮೆ ಬಾಲವೇ ರೈತರಿಗೆ ಆಸರೆಯಾಗಿದ್ದು, ಈ ದೃಶ್ಯ ಎದೆ ಝೆಲ್ ಎನಿಸುತ್ತದೆ. ಜೀವ ಪಣಕ್ಕಿಟ್ಟು ರೈತರು ಮಲಪ್ರಭಾ ನದಿ ದಾಟುತ್ತಿದ್ದಾರೆ. ಹತ್ತು ಸಾವಿರ ಕ್ಯೂಸೆಕ್‌ನಷ್ಟು ನೀರಿನ ಹರಿವಿನಲ್ಲಿ ನದಿ ದಾಟುತ್ತಿದ್ದು, ಬೆಳಗಾವಿಯ ಹುಣಶೀಕಟ್ಟಿ ಗ್ರಾಮದ ರೈತರು ಗೋಳಾಟ ಹೇಳತಿರದು. ದಿನವೂ ಪ್ರಾಣ ಕೈಯಲ್ಲಿ ಹಿಡಿದುಕೊಂಡು ನದಿ ದಾಟಿ ಜಮೀನಿಗೆ ಹೋಗುವ ಪರಿಸ್ಥಿತಿ ಇದೆ.

ಯುವಕರು ಎಮ್ಮೆಯೊಟ್ಟಿಗೆ ಈಜಿ ದಡ ಸೇರಿ ಜಮೀನಿನಲ್ಲಿ ಕೆಲಸ ಮಾಡಿದರೆ, ಮಹಿಳೆಯರು ತೆಪ್ಪದಲ್ಲಿ ನದಿ ದಾಟಿ ಜಮೀನಿಗೆ ಹೋಗುತ್ತಾರೆ. ಕಾರವಾರದಿಂದ ಈಗಾಗಲೇ ಒಂದು ಬೋಟ್ ನೀಡಿದರೂ ಪ್ರಯೋಜನವಾಗಿಲ್ಲ. ಬೋಟ್ ನಿರ್ವಹಣೆ ಮತ್ತು ಸಿಬ್ಬಂದಿಗೆ ಸಂಬಳ ಕೊಡಲು ಆಗದೇ ಸ್ಥಗಿತಗೊಂಡಿದೆ. ಹೊಲಗದ್ದಗಳಿಗೆ ಹೋಗುವುದಕ್ಕೆ ಇಲ್ಲಿ ತೆಪ್ಪವೇ ಆಸರೆಯಾಗಿದೆ. ಡಿಸೇಲ್ ಬೋಟ್ ಇದ್ದರೂ ಪ್ರಯೋಜನವಿಲ್ಲ. ಹೀಗಾಗಿ ಅನಿವಾರ್ಯವಾಗಿ ತೆಪ್ಪದಲ್ಲಿಯೇ ಹೊಲಗದ್ದೆಗಳಿಗೆ ತೆರಳುವಂತಾಗಿದೆ.

ಕುಮಟಾದಲ್ಲೂ ಗುಡ್ಡ ಕುಸಿತ

ಉತ್ತರಕನ್ನಡ ಜಿಲ್ಲೆಯಲ್ಲಿ ಮಳೆಯಾಟಕ್ಕೆ ಈಗಾಗಲೇ ಶಿರೂರು ಗುಡ್ಡ ಕುಸಿದಿದೆ. ಇದೀಗ ಕುಮಟಾ ಭಾಗದಲ್ಲೂ ಗುಡ್ಡ ಕುಸಿದಿದೆ. ಕುಮಟಾ-ಸಿದ್ದಾಪುರ ಹೆದ್ದಾರಿಯ ಉಳ್ಳೂರುಮಠ ರಸ್ತೆಗೆ ಧರೆ ಕುಸಿದಿದೆ. ನೂರು ಮೀಟರ್ ಎತ್ತರದಿಂದ ಗುಡ್ಡದ ಮಣ್ಣು, ಮರವು ಕುಸಿದು ಹೆದ್ದಾರಿಗೆ ಬಿದ್ದಿದೆ. ಹೀಗಾಗಿ ಕುಮಟಾ-ಸಿದ್ದಾಪುರ ಹೆದ್ದಾರಿ ಸಂಚಾರ ಬಂದ್ ಮಾಡಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ದೌಡಾಯಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain : ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಮಳೆಗೆ ಜನರು ಕಂಗಲಾಗಿದ್ದಾರೆ. ಚಿಕ್ಕಮಗಳೂರಲ್ಲಿ ಮನೆ ಮುಂಭಾಗ ಕಂದಕ ನಿರ್ಮಾಣವಾಗಿದೆ. ಬೃಹತ್‌ ಮರಗಳು ಧರೆಗುರುಳಿದ್ದು, ಮನೆಯ ಚಾವಣಿಗಳು ಕುಸಿದು ಬಿದ್ದಿವೆ.

VISTARANEWS.COM


on

By

Karnataka Rain
Koo

ಚಿಕ್ಕಮಗಳೂರು: ಮಲೆನಾಡಿನ ಚಿಕ್ಕಮಗಳೂರು ಸೇರಿ ರಾಜ್ಯಾದ್ಯಂತ ಭಾರಿ (Karnataka Rain) ಮಳೆಯಾಗುತ್ತಿದ್ದು, ಅವಾಂತರವೇ ಸೃಷ್ಟಿಯಾಗಿದೆ. ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕವೊಂದು ಸೃಷ್ಟಿಯಾಗಿದೆ. ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಮೇಗೂರು ಗ್ರಾಮದಲ್ಲಿ ಮನೆಯ ಮುಂಭಾಗವೇ 30 ಅಡಿ ಆಳದ ಕಂದಕ ಸೃಷ್ಟಿಯಾಗಿದೆ. ಗ್ರಾಮದ ಪ್ರೇಮ ಬಾಬು ಗೌಡ ಎಂಬುವವರ ಮನೆ ಮುಂದೆ ಕಂದಕ ಸೃಷ್ಟಿಯಾಗಿದ್ದು, ವಿಚಿತ್ರ ಕಂದಕ ಕಂಡು ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ. ಕಂದಕದ ಒಳಗಿಂದ ಭೂಮಿ ಒಳಗೆ ನೀರಿನ ಬುಗ್ಗೆ ಹರಿಯುತ್ತಿದೆ. ಬಾವಿ ಆಕಾರದಲ್ಲಿ ಕಂದಕ ಸೃಷ್ಟಿಯಾಗಿದೆ.

ಚಿಕ್ಕಮಗಳೂರಿನಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಜನ-ಜೀವನ ಅಸ್ತವ್ಯಸ್ತಗೊಂಡಿದೆ. ಮಳೆಯ ಅಬ್ಬರಕ್ಕೆ ಮನೆಯ ಹಿಂಭಾಗದಲ್ಲಿ ಭೂ ಕುಸಿತ ಉಂಟಾಗಿದೆ. ಕಳಸ ತಾಲೂಕಿನ ಮಾವಿನಕೆರೆ ಕಲ್ಲಾನೆಯಲ್ಲಿ ಘಟನೆ ನಡೆದಿದೆ. ಕಲ್ಲಾನೆಯ ಬಾಸ್ಕರ್ ಪೂಜಾರಿ ಎಂಬುವವರು ಕಂಗಲಾಗಿದ್ದಾರೆ. ಮಳೆ ಹೆಚ್ಚಾದಂತೆ ಸ್ವಲ್ಪ ಸ್ವಲ್ಪವೇ ಭೂಮಿ ಕುಸಿಯುತ್ತಿದೆ.

ಪ್ರಪಾತಕ್ಕೆ ಬಿದ್ದ ಲಾರಿ, ಚಾಲಕ ಗ್ರೇಟ್‌ ಎಸ್ಕೇಪ್‌

ಚಿಕ್ಕಮಗಳೂರಿನಲ್ಲಿ ಲಾರಿ ಚಾಲಕರೊಬ್ಬರು ಗ್ರೇಟ್ ಎಸ್ಕೇಪ್ ಆಗಿದ್ದಾರೆ. ಲಾರಿ ಪ್ರಪಾತಕ್ಕೆ ಬಿದ್ದರೂ ಅದೃಷ್ಟವಶಾತ್ ಚಾಲಕ ಬದುಕುಳಿದಿದ್ದಾರೆ. ನಿರಂತರ ಮಳೆಗೆ ನೆಮ್ಮಾರು ಸಮೀಪದ ರಸ್ತೆ ಕುಸಿದು, ಲಾರಿಯೊಂದು ಸುಮಾರು 50 ಅಡಿ ಆಳದಲ್ಲಿ ಬಿದ್ದಿದೆ. ಲಾರಿ ಸಂಪೂರ್ಣ ನಜ್ಜು-ಗುಜ್ಜಾಗಿದ್ದು, ಚಾಲಕ ಪವಾಡ ಸದೃಶ ಪಾರಾಗಿದ್ದಾರೆ. ಶೃಂಗೇರಿ ನೆಮ್ಮಾರು ಬಳಿ ರಸ್ತೆ ಕುಸಿದ ಪರಿಣಾಮ ಲಾರಿಯು ಪ್ರಪಾತಕ್ಕೆ ಬಿದ್ದಿದೆ. ನೆಮ್ಮಾರು ವ್ಯಾಪ್ತಿಯ ಹೊಸದೇವರಹಡ್ಳು ಸಮೀಪದಲ್ಲಿ ಘಟನೆ ನಡೆದಿದೆ.

ನಿದ್ರೆಗೆ ಜಾರಿದಾಗ ಮನೆ ಮೇಲೆ ಬಿದ್ದ ಬೃಹತ್‌ ಮರ

ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಬಸರಿಕಟ್ಟೆ ಸುತ್ತಮುತ್ತ ಅಪಾಯದ ಮಟ್ಟ ಮೀರಿ ಹಳ್ಳ ಕೊಳ್ಳಗಳು ಹರಿಯುತ್ತಿದ್ದು, ಬಸರಿ ಕಟ್ಟೆ -ಬಿಲಾಳು ಕೊಪ್ಪ ರಸ್ತೆಯು ಜಲಾವೃತಗೊಂಡಿದೆ. ಇತ್ತ ಅಜ್ಜಂಪುರ ತಾಲೂಕಿನ ಗುಡ್ಡದಹಳ್ಳಿ ಗ್ರಾಮದಲ್ಲಿ ಭಾರಿ ಗಾಳಿ-ಮಳೆಗೆ ಮನೆಯ ಮೇಲೆ ಬೃಹತ್ ಗಾತ್ರದ ಮರ ಉರುಳಿ ಬಿದ್ದಿದೆ. ಮರ ಬಿದ್ದ ರಭಸಕ್ಕೆ ಕುಟುಂಬಸ್ಥರು ಮನೆಯಿಂದ ಎದ್ದು ಓಡಿದ್ದಾರೆ. ಕುಟುಂಬಸ್ಥರು ನಿದ್ದೆಯಲ್ಲಿದ್ದಾಗ ಏಕಾಏಕಿ ಮರ ಬಿದ್ದು, ಚಾವಣಿ ಸಂಪೂರ್ಣ ಹಾನಿಯಾಗಿದೆ. ಗ್ರಾಮದ ರವಿ ಎಂಬುವರಿಗೆ ಸೇರಿದ ಮನೆಯವರು ಪಾರಾಗಿದ್ದಾರೆ.

ಕೊಚ್ಚಿ ಹೋದ ಅಡಿಕೆ ತೋಟ

ಭದ್ರಾ ನದಿ ಪ್ರವಾಹದಿಂದ ತೋಟ-ಗೆದ್ದೆಗಳು ಜಲಾವೃತಗೊಂಡಿದೆ. ಮಹಾಮಳೆಗೆ ಅರ್ಧ ಎಕರೆ ಅಡಿಕೆ‌ ತೋಟ ಕೊಚ್ಚಿ ಹೋಗಿದೆ. ಕಳಸ ತಾಲೂಕಿನ ಮಕ್ಕಿಮನೆಯ ನಾಗೇಂದ್ರ ಎಂಬುವರಿಗೆ ಸೇರಿದ ತೋಟದಲ್ಲಿ ಮಣ್ಣು ಕುಸಿತವಾಗಿ ಅರ್ಧ ಎಕರೆ ಅಡಿಕೆ ಗಿಡಗಳು ಮಣ್ಣುಪಾಲಾಗಿದೆ. ನಡ್ಲುಮನೆಯ ವರ್ಧಮಾನಯ್ಯ ಎಂಬುವವರ 3 ಎಕರೆ ನಾಟಿ ಮಾಡಿದ ಭತ್ತದ ಗದ್ದೆ ಜಲಾವೃತವಾಗಿದೆ.

ಇದನ್ನೂ ಓದಿ: Kannada Actress: `ಬ್ಯಾಕ್‍ ಬೆಂಚರ್ಸ್’ ಬಿಡುಗಡೆಗೂ ಮುನ್ನವೇ ಹಲವು ಅವಕಾಶಗಳು ಈ ನಟಿಗೆ!

ಕೊಡಗಿನಲ್ಲಿ ಗುಡ್ಡ ಕುಸಿತ ಭೀತಿ; ರಾತ್ರಿ ಸಂಚಾರ ಬಂದ್‌

ಕೊಡಗಿನಲ್ಲಿ ಮಳೆ ತಗ್ಗಿದರೂ ಪ್ರವಾಹದ ಪರಿಸ್ಥಿತಿ ತಗ್ಗಿಲ್ಲ. ಕುಶಾಲನಗರದ ಸಾಯಿ ಬಡಾವಣೆಗೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿದೆ. ಸುಮಾರು 25ಕ್ಕೂ ಅಧಿಕ ಮನೆಗಳಿರುವ ಸಾಯಿ ಬಡಾವಣೆಯೊಳಗೆ ಕಾವೇರಿ ನದಿ ನೀರು ನುಗ್ಗಿ‌ ಜಲಾವೃತಗೊಂಡಿದೆ. ಹೀಗಾಗಿ ನಿವಾಸಿಗಳು ಮನೆಗಳನ್ನು ತೊರೆಯುತ್ತಿದ್ದಾರೆ. ಮಳೆ ಹೆಚ್ಚಾದರೇ ಬಡಾವಣೆಯೇ ಮುಳುಗುವ ಆತಂಕವಿದೆ. ಸಾಯಿ ಬಡಾವಣೆ ಜತೆಗೆ ಕುವೆಂಪು ಬಡಾವಣೆಗೂ ಜಲ ಕಂಟಕವಿದೆ.

ಕೊಡಗು ಜಿಲ್ಲೆಯ ಮಡಿಕೇರಿ ಮಂಗಳೂರು ರಸ್ತೆಯ ರಾಷ್ಟ್ರೀಯ ಹೆದ್ದಾರಿ 275ರ ಕರ್ತೋಜಿ ಬಳಿ ಗುಡ್ಡ ಕುಸಿಯುವ ಭೀತಿ ಇದೆ. ಹೀಗಾಗಿ ರಾತ್ರಿ ವೇಳೆ ವಾಹನ ಸಂಚಾರ ಬಂದ್ ಮಾಡಿ ಕೊಡಗು ಡಿಸಿ ಆದೇಶ ಹೊರಡಿಸಿದ್ದಾರೆ. ಗುಡ್ಡದ ಕೆಳಭಾಗದಲ್ಲಿ ಸ್ವಲ್ಪ ಮಣ್ಣು ಜರಿದಿದ್ದು, ಬಿರುಕು ಮೂಡುವ ಸಾಧ್ಯತೆ ಇದೆ.

ಮೈಸೂರಿನಲ್ಲಿ ಜೋರು ಮಳೆಗೆ ಕುಸಿದು ಬಿದ್ದ ಮನೆ

ಕರಾವಳಿ, ಮಲೆನಾಡು ಮಾತ್ರವಲ್ಲದೇ ಒಳನಾಡು ಭಾಗದಲ್ಲೂ ಮಳೆಯು ಅಬ್ಬರಿಸುತ್ತಿದೆ. ಮೈಸೂರಿನಲ್ಲಿ ವರುಣನ ಆರ್ಭಟಕ್ಕೆ ಮನೆಯೊಂದು ಕುಸಿದು ಬಿದ್ದಿದೆ. ಮೈಸೂರಿನ ಸಾಲಿಗ್ರಾಮ ತಾಲೂಕಿನ ಚಿಕ್ಕಕೊಪ್ಪಲು ಗ್ರಾಮದಲ್ಲಿ ಸರೋಜಮ್ಮ ದೇವೇಗೌಡ ಎಂಬುವರಿಗೆ ಸೇರಿದ ಮನೆ ಕುಸಿದು ಬಿದ್ದಿದೆ. ಮನೆಯಲ್ಲಿದ್ದ ಪಾತ್ರೆಗಳು, ದಿನಸಿ ಸಾಮಗ್ರಿಗಳು, ಬಟ್ಟೆ ಬರೆ ಎಲ್ಲವೂ ಹಾನಿಯಾಗಿದೆ. ಮನೆಯವರು ಕೆಲಸ ನಿಮಿತ್ತ ಹೊರಗಡೆ ಹೋದಾಗ ಈ ಅವಘಡ ಸಂಭವಿಸಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ ಮಳೆಯಿಂದ ವಾಸದ ಮನೆ ಕಳೆದುಕೊಂಡ ಸರೋಜಮ್ಮ, ದೇವೇಗೌಡ ಕಂಗಲಾಗಿದ್ದಾರೆ. ಸಾಲಿಗ್ರಾಮ ತಾಲೂಕು ಆಡಳಿತ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.

ಜೋರಾಗಿ ಬೀಸಿದ ಗಾಳಿಗೆ ನೆಲಕ್ಕುರುಳಿದ ಟವರ್‌

ಭಾರಿ ಗಾಳಿ- ಮಳೆಗೆ ಬೃಹತ್ ಗಾತ್ರದ ಟವರ್ ನೆಲಕ್ಕೆ ಉರುಳಿ ಬಿದ್ದಿದೆ. ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ದರೂರು ಗ್ರಾಮದಲ್ಲಿ ಘಟನೆ ನಡೆದಿದೆ. ಏಕಾಏಕಿ ಬೀಸಿದ ಭಾರೀ ಗಾಳಿಗೆ ಬೃಹತ್ ಟವರ್ ನೆಲಕ್ಕುರುಳಿದ ಪರಿಣಾಮ ಅಂಗಡಿ ಮುಂಗಟ್ಟು, ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಇದನ್ನೂ ಓದಿ: Donald Trump: ಅಮೆರಿಕವೂ ಐರನ್ ಡೋಮ್ ಕ್ಷಿಪಣಿ ತಯಾರಿಸಲಿದೆ; ಡೊನಾಲ್ಡ್‌ ಟ್ರಂಪ್‌ ಸೂಚನೆ

ಹಾಸನದಲ್ಲಿ ಸೇತುವೆ ಮುಳುಗಡೆ, ಹೊಳೆಮಲ್ಲೇಶ್ವರ ದೇಗುಲ ಜಲಾವೃತ

ಹಾಸನ ಜಿಲ್ಲೆಯಲ್ಲೂ ಮಳೆಯ ಅಬ್ಬರ ಮುಂದುವರಿದಿದೆ. ಭಾರಿ ಮಳೆಯಿಂದಾಗಿ ಬಾಣಗೇರಿ ಹೊಳೆ ನೀರು ಉಕ್ಕಿ ಹರಿಯುತ್ತಿದೆ. ಮಾಗೇರಿ ಗ್ರಾಮದ ಸೇತುವೆ ಮೇಲೆ ಅಪಾರ ಪ್ರಮಾಣದ ನೀರು ಹರಿಯುತ್ತಿದೆ. ಸಕಲೇಶಪುರ ತಾಲೂಕಿನ ಮಾಗೇರಿ ಗ್ರಾಮದ ಸೇತುವೆ ಮುಳುಗಡೆಗೊಂಡಿದೆ. ಇದರಿಂದಾಗಿ ಸಕಲೇಶಪುರ-ಮಾಗೇರಿ-ಸೋಮವಾರಪೇಟೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ಸೇತುವೆ ಮೇಲೆ ಹರಿಯುತ್ತಿರುವ ನೀರಿನಲ್ಲಿ ವಾಹನ ಸವಾರರು ಪರದಾಡುತ್ತಿದ್ದಾರೆ.

ಇನ್ನೂ ಸಕಲೇಶಪುರ, ಮೂಡಿಗೆರೆ ಭಾಗದಲ್ಲಿ ಮಳೆ ಮುಂದುವರಿದಿದ್ದು, ಹೇಮಾವತಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ನದಿಯ ಅಕ್ಕ-ಪಕ್ಕ ಹಾಗೂ ತಗ್ಗು ಪ್ರದೇಶಕ್ಕೂ ನೀರು ನುಗ್ಗಿದೆ. ಹೇಮಾವತಿ ನದಿ ದಂಡೆಯಲ್ಲಿರುವ ಸಕಲೇಶಪುರದ ಹೊಳೆಮಲ್ಲೇಶ್ವರ ದೇಗುಲದ ಮೆಟ್ಟಿಲು ಜಲಾವೃತಗೊಂಡಿದೆ. ಮಳೆ ಹೀಗೆ ಮುಂದುವರೆದರೆ ದೇಗುಲವೂ ಜಲಾವೃತವಾಗುವ ಸಾಧ್ಯತೆ ಇದೆ.

ಉಡುಪಿಯ ಆತ್ರಾಡಿಯಲ್ಲಿ ಕೃತಕ ನೆರೆ

ಉಡುಪಿಯ ಮಲ್ಪೆ- ಮೊಳಕಾಲ್ಮೂರು ಹೆದ್ದಾರಿ ಅವ್ಯವಸ್ಥೆಯಿಂದಾಗಿ ಆತ್ರಾಡಿ ಬಳಿ ಕೃತಕ ನೆರೆ ಸೃಷ್ಟಿಯಾಗಿದೆ. ಮಲ್ಪೆಯಿಂದ ಉಡುಪಿ ಮೂಲಕ ಮಣಿಪಾಲದ ಮೇಲೆ ಹಾದು ಹೋಗುವ ಹೆದ್ದಾರಿಯಲ್ಲಿ ಅವಾಂತರ ಸೃಷ್ಟಿಯಾಗಿದ್ದು, ಆತ್ರಾಡಿಯ ಮನೆಗಳಿಗೆ ನೀರು ನುಗ್ಗಿದೆ. ಸರಿಯಾದ ಒಳಚರಂಡಿ ವ್ಯವಸ್ಥೆ ನಿರ್ಮಿಸಿದ ಹಿನ್ನೆಲೆಯಲ್ಲಿ ಚರಂಡಿ ನೀರು ನುಗ್ಗಿ ಈ ಸಮಸ್ಯೆ ಸೃಷ್ಟಿಯಾಗಿದೆ.

ಶಿರೂರು ಗುಡ್ಡ ಕುಸಿತ; ನಿಂತಲ್ಲೇ ನಿಂತ ಟ್ರಕ್‌ಗಳು

ಅಂಕೋಲಾ ಶಿರೂರು ಹೆದ್ದಾರಿಯಲ್ಲಿ ಗುಡ್ಡ ಕುಸಿತ ಹಿನ್ನೆಲೆ, ಟ್ರಕ್ ಚಾಲಕರು ಕಂಗಾಲಾಗಿದ್ದಾರೆ. ಉಡುಪಿ ಜಿಲ್ಲೆಯ ಶಿರೂರು ಟೋಲ್ ಗೇಟ್‌ನಲ್ಲಿ ಕಳೆದ ಮೂರು ದಿನಗಳಿಂದ ಟ್ರಕ್‌ಗಳು ನಿಂತಲ್ಲೇ ನಿಲ್ಲುವಂತಾಗಿದೆ. ಹೆದ್ದಾರಿ ಮೇಲೆ ಬಿದ್ದಿರುವ ಮಣ್ಣು ತೆರವಾಗದ ಕಾರಣ ಸಂಪರ್ಕ ಬಂದ್ ಆಗಿದೆ. ಮಂಗಳೂರಿನಿಂದ ಎಲ್‌ಪಿಜಿ ಸಾಗಿಸುತ್ತಿದ್ದ ಟ್ಯಾಂಕರ್‌ಗಳು ಶಿರೂರು ಟೋಲ್ ನಲ್ಲಿಯೇ ಸ್ಟ್ರಕ್ ಆಗಿವೆ. ಸುಮಾರು 120 ಅಧಿಕ ಸರಕು ಮತ್ತು ಗ್ಯಾಸ್ ಟ್ಯಾಂಕರ್‌ಗಳು ಟೋಲ್ ಬಳಿ ಮೊಕ್ಕಾಂ ಹೂಡಿವೆ. ಮೂರು ದಿನಗಳಿಂದ ಟ್ರಕ್‌ಗಳಲ್ಲೆ ಅಡುಗೆ ಮನೆ ಮಾಡಿಕೊಂಡು, ಅಲ್ಲೆ ಊಟ ಅಲ್ಲೆ ನಿದ್ರೆ ಮಾಡುತ್ತಿದ್ದಾರೆ. ಹೆದ್ದಾರಿ ಮೇಲೆ ಬಿದ್ದಿರುವ ಮಣ್ಣು ತೆರವಾಗದೆ ಇಲ್ಲಿಂದ ತೆರಳಾಗದ ಸ್ಥಿತಿಯಲ್ಲಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Vicky Kaushal box office collection Movie Collects Only 8 Crore
ಬಾಲಿವುಡ್3 mins ago

Vicky Kaushal: ವಿಕ್ಕಿ ಕೌಶಲ್ ಅಭಿನಯದ ‘ಬ್ಯಾಡ್ ನ್ಯೂಸ್’ ಚಿತ್ರಕ್ಕೆ ಕಳಪೆ ಕಲೆಕ್ಷನ್ ; ಮೊದಲ ದಿನದ ಗಳಿಕೆ ಎಷ್ಟು?

Paris Olympics
ಕ್ರೀಡೆ21 mins ago

Paris Olympics: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ ಕನ್ನಡತಿ ಭಾವನಾ ಪ್ರದ್ಯುಮ್ನ

bangladesh protests dhaka
ಪ್ರಮುಖ ಸುದ್ದಿ28 mins ago

Bangladesh Protests: ಬಾಂಗ್ಲಾದಲ್ಲಿ ಹಿಂಸಾಚಾರ ಉಲ್ಬಣ, 105 ಸಾವು; 300 ಭಾರತೀಯ ವಿದ್ಯಾರ್ಥಿಗಳು ಸ್ವದೇಶಕ್ಕೆ

Music Composer Hamsalekha Ask Apology To Jain Community controversial
ಸಿನಿಮಾ33 mins ago

Music Composer Hamsalekha : ಜೈನ ಫಿಲಾಸಫಿ ಬುಲ್‌‌ಶಿಟ್ ಎಂದು ಅವಮಾನಿಸಿದ ಹಂಸಲೇಖ ಈಗ ಕ್ಷಮಿಸಿ ಅಂತಿದ್ದಾರೆ!

road accident savadatti belagavi news
ಬೆಳಗಾವಿ1 hour ago

Road Accident: ಬೈಕ್‌ಗಳು ಮುಖಾಮುಖಿ ಡಿಕ್ಕಿ, ಇಬ್ಬರು ಸಾವು, ಇಬ್ಬರು ಗಂಭೀರ

road rage bangalore
ಬೆಂಗಳೂರು2 hours ago

Road Rage: ರಸ್ತೆಯಲ್ಲಿ ಗೂಂಡಾಗಿರಿ, ಇನೋವಾ ಚಾಲಕನ ಮೇಲೆ ಫಾರ್ಚುನರ್‌ನಲ್ಲಿದ್ದ ತಂಡದಿಂದ ತೀವ್ರ ಹಲ್ಲೆ

Pets in Designer Outfits
Latest2 hours ago

Pets in Designer Outfits : ಅನಂತ್-ರಾಧಿಕಾ ಮದುವೆಯಲ್ಲಿ ಅಂಬಾನಿ ಕುಟುಂಬದ ನಾಯಿಗಳ ಸಂಭ್ರಮ ನೋಡಿ!

dengue fever death davanagere
ಪ್ರಮುಖ ಸುದ್ದಿ2 hours ago

Dengue fever: ಶಂಕಿತ ಡೆಂಗ್ಯು ಜ್ವರಕ್ಕೆ ಯುವತಿ ಸಾವು, ರಾಜ್ಯದಲ್ಲಿ ಡೆಂಗ್ಯು ಸಾವು 9ಕ್ಕೆ ಏರಿಕೆ

ರಾಜಮಾರ್ಗ ಅಂಕಣ alphe hevett
ಅಂಕಣ2 hours ago

ರಾಜಮಾರ್ಗ ಅಂಕಣ: ಆಲ್ಫೀ ಹೆವೆಟ್ಟ್- ವೀಲ್ ಚೇರ್ ಮೇಲಿನ ಟೆನ್ನಿಸ್ ಬೆರಗು

karnataka weather Forecast
ಮಳೆ3 hours ago

Karnataka Weather : ಗಾಳಿ ಸಹಿತ ಜೋರು ಮಳೆ; 11 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ20 hours ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ20 hours ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ2 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ4 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ5 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ5 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ5 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ6 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

ಟ್ರೆಂಡಿಂಗ್‌