ಮಂತ್ರಾಲಯ: ಶ್ರೀ ರಾಘವೇಂದ್ರ ತೀರ್ಥ ಗುರುಸಾರ್ವಭೌಮರ ೩೫೧ನೇ ಆರಾಧನಾ ಮಹೋತ್ಸವ ಬುಧವಾರ ಆರಂಭಗೊಂಡಿದೆ. ದೇಶ ವಿದೇಶಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಮಂತ್ರಾಲಯಕ್ಕೆ ಆಗಮಿಸುತ್ತಿದ್ದಾರೆ.
ಕೋವಿಡ್ -೧೯ ಕಾರಣದಿಂದಾಗಿ ಕಳೆದ ಎರಡು ವರ್ಷಗಳೂ ಆರಾಧನಾ ಮಹೋತ್ಸವ ವಿಜೃಂಭಣೆಯಿಂದ ನಡೆದಿರಲಿಲ್ಲ. ಆದರೆ ಈ ಬಾರಿ ಸಕಲ ಸಿದ್ಧತೆ ಮಾಡಿಕೊಂಡು ವಿಜೃಂಭಣೆಯಿಂದ ಆರಾಧನಾ ಮಹೋತ್ಸವ ನಡೆಸಲಾಗುತ್ತಿದೆ.
ಬುಧವಾರದಂದು ಶ್ರೀ ಸುಬುಧೇಂದ್ರ ತೀರ್ಥ ಮಹಾಸ್ವಾಮಿಗಳು ಧ್ವಜಾರೋಹಣ, ಗೋ, ಧಾನ್ಯ ಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಆರಾಧನಾ ಮಹೋತ್ಸವಕ್ಕೆ ಚಾಲನೆ ನೀಡಿದರು. ಸಂಜೆ ಚಿಕ್ಕ ಮಕ್ಕಳಿಂದ “ದಾಸವಾಣಿ”ಕಾರ್ಯಕ್ರಮ, ಶ್ರೀ ಗುರು ರಾಯರ 351ನೇ ಆರಾಧನಾ ಸಪ್ತರಾತ್ರೋತ್ಸವದ ಉದ್ಘಾಟನೆ ಹಾಗೂ ಧ್ವಜಾರೋಹಣ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ನಡೆದವು.
ಆ. 11 ರಂದು ಶಾಕೋತ್ಸವ ಪೂಜೆ, ಆ.12 ರಂದು ರಾಯರ ಪೂರ್ವಾರಾಧನೆ, ಆ.13 ರಂದು ಮಧ್ಯಾರಾಧನೆ, ಆ. 14 ರಂದು ಉತ್ತರಾರಾಧನೆ ನಡೆಯಲಿದೆ. ಶ್ರೀ ಮಠಕ್ಕೆ ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿದೆ.
ಇದನ್ನೂ ಓದಿ | ಮಂತ್ರಾಲಯದಲ್ಲಿ ರಾಯರ 351ನೇ ಆರಾಧನಾ ಮಹೋತ್ಸವ ಆರಂಭ: ತುಂಗಭದ್ರಾ ನದಿ ಸ್ನಾನಕ್ಕೆ ಬ್ರೇಕ್