Ram Mandir: ಅಯೋಧ್ಯೆಯಲ್ಲಿ ರಾಮ ದೀಪೋತ್ಸವ! ರಾಮಜ್ಯೋತಿ ಬೆಳಗಿದ ಪಿಎಂ ಮೋದಿ - Vistara News

ದೇಶ

Ram Mandir: ಅಯೋಧ್ಯೆಯಲ್ಲಿ ರಾಮ ದೀಪೋತ್ಸವ! ರಾಮಜ್ಯೋತಿ ಬೆಳಗಿದ ಪಿಎಂ ಮೋದಿ

Ram Mandir: ರಾಮ ಮಂದಿರ ಉದ್ಘಾಟನೆಯ ಶುಭ ಸಂದರ್ಭದಲ್ಲಿ ರಾಮ ಜ್ಯೋತಿ ಬೆಳಗಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶವಾಸಿಗಳಿಗೆ ಕರೆ ನೀಡಿದ್ದರು.

VISTARANEWS.COM


on

Ram deepotsav in ayodhya ram mandir, PM Modi lights Ram Jyoti
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ರಾಮ ಮಂದಿರದಲ್ಲಿ (Ayodhya Ram Mandir) ರಾಮ ಲಲ್ಲಾನ (Ram Lalla) ವಿಗ್ರಹದ ‘ಪ್ರಾಣ ಪ್ರತಿಷ್ಠಾಪನೆ’ (Prana Pratishtha) ಸಮಾರಂಭದ ನಂತರ ಪ್ರಧಾನಿ ನರೇಂದ್ರ ಮೋದಿ (PM Narendra Modi) ಸೋಮವಾರ ಸಂಜೆ ‘ರಾಮ ಜ್ಯೋತಿ’ ಬೆಳಗಿಸಿದರು(Ram Jyothi). ಈ ಮೊದಲೇ ಅವರು ರಾಮ ಜ್ಯೋತಿ ಬೆಳಗಿಸುವಂತೆ ದೇಶವಾಸಿಗಳಿಗೆ ಕರೆ ನೀಡಿದ್ದರು. ಅದರಂತೆ ಅವರೂ ಕೂಡ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಶುಭ ಸಂದರ್ಭದಲ್ಲಿ ‘ರಾಮ ಜ್ಯೋತಿ’ಯನ್ನು ಬೆಳಗಿಸಿ ರಾಮ ಲಲ್ಲಾನನ್ನು ಸ್ವಾಗತಿಸುವಂತೆ ಪ್ರಧಾನಿ ನಾಗರಿಕರಿಗೆ ಹೇಳಿದ್ದರು. ಮತ್ತೊಂದೆಡೆ, ಅಯೋಧ್ಯೆಯ ಸರಯೂ ನದಿಯ ತಟದಲ್ಲಿ ಬಿಜೆಪಿ ಕಾರ್ಯಕರ್ತರು 1008 ರಾಮ ಜ್ಯೋತಿಗಳನ್ನು ಬೆಳಗಿದರು. ಒಟ್ಟಾರೆ 10 ಲಕ್ಷ ದೀಪಗಳಿಂದ ಅಯೋಧ್ಯೆ ಮಿನುಗುತ್ತಿದೆ.

ಈ ಶುಭ ಸಂದರ್ಭದಲ್ಲಿ ಎಲ್ಲಾ ದೇಶವಾಸಿಗಳು ರಾಮ ಜ್ಯೋತಿಯನ್ನು ಬೆಳಗಿಸಲು ಮತ್ತು ಅವರ ಮನೆಗಳಲ್ಲಿ ಭಗವಾನ್ ರಾಮನನ್ನು ಸ್ವಾಗತಿಸಲು ನಾನು ವಿನಂತಿಸುತ್ತೇನೆ. ಜೈ ಸಿಯಾ ರಾಮ್ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಎಕ್ಸ್ ವೇದಿಕೆಯ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಪ್ರತಿಷ್ಠಾಪನೆಯ ಸಮಾರಂಭದ ನಂತರ, ಅಯೋಧ್ಯಾ ನಗರವು 10 ಲಕ್ಷ ದೀಪಗಳ ಪ್ರಕಾಶದಿಂದ ಅಲಂಕರಿಸಲ್ಪಟ್ಟಿದೆ, ಅದರ ಭೂದೃಶ್ಯವನ್ನು ಮೋಡಿಮಾಡುವ ದೃಶ್ಯವಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಕರೆಯ ಮೇರೆಗೆ ಮನೆಗಳು, ಅಂಗಡಿಗಳು, ಧಾರ್ಮಿಕ ಸ್ಥಳಗಳು ಮತ್ತು ಐತಿಹಾಸಿಕ ಸ್ಥಳಗಳಲ್ಲಿ ‘ರಾಮ ಜ್ಯೋತಿ’ಯನ್ನು ಬೆಳಗಿಸಲಾಗುತ್ತದೆ, ಇದು ಅಯೋಧ್ಯೆಯಲ್ಲಿ ಭಗವಾನ್ ರಾಮನ ದೈವಿಕ ಉಪಸ್ಥಿತಿಯನ್ನು ಸಂಕೇತಿಸುವ ಮೋಡಿಮಾಡುವ ವಾತಾವರಣವನ್ನು ಸೃಷ್ಟಿಸಿದೆ.

ಇದಕ್ಕೂ ಮೊದಲು ಪ್ರಾದೇಶಿಕ ಪ್ರವಾಸೋದ್ಯಮ ಅಧಿಕಾರಿ ಆರ್‌ಪಿ ಯಾದವ್ ಅವರು, ಜನವರಿ 22ರ ಸಂಜೆ, 100 ಪ್ರಮುಖ ದೇವಾಲಯಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ದೀಪಗಳನ್ನು ಬೆಳಗಿಸಲಾಗುತ್ತದೆ. ಈ ಕಾರ್ಯಕ್ರಮಕ್ಕೆ ಸಿದ್ಧತೆಗಳು ಪೂರ್ಣಗೊಂಡಿವೆ. ಸರ್ಕಾರದ ದೃಷ್ಟಿಕೋನಕ್ಕೆ ಅನುಗುಣವಾಗಿ, ಸ್ಥಳೀಯವಾಗಿ ರಚಿಸಲಾದ ದೀಪಗಳನ್ನು ಬಳಸಲಾಗುವುದು ಮತ್ತು ಸ್ಥಳೀಯ ಕುಂಬಾರರು ದೀಪಗಳನ್ನು ಸಿದ್ಧ ಮಾಡುವಲ್ಲಿ ನಿರತರಾಗಿದ್ದಾರೆ ಎಂದು ಹೇಳಿದ್ದರು.

ಇದು ರಾಮಮಂದಿರ ಅಷ್ಟೇ ಅಲ್ಲ, ರಾಷ್ಟ್ರಮಂದಿರ: ಪ್ರಾಣ ಪ್ರತಿಷ್ಠೆ ಬಳಿಕ ಮೋದಿ ಭಾವುಕ ನುಡಿ

“ನೂರಾರು ವರ್ಷಗಳ ತ್ಯಾಗ, ಬಲಿದಾನದ ಪ್ರತೀಕವಾಗಿ ರಾಮಮಂದಿರ ನಮ್ಮ ಕಣ್ಣೆದುರು ನಿಂತಿದೆ. ಇದು ಕೇವಲ ರಾಮಮಂದಿರವಲ್ಲ, ರಾಷ್ಟ್ರಮಂದಿರ” ಎಂದು ಪ್ರಧಾನಿ ನರೇಂದ್ರ ಮೋದಿ ಭಾವುಕರಾಗಿ ಹೇಳಿದರು. ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ಭವ್ಯ ರಾಮ ಮಂದಿರದಲ್ಲಿ ರಾಮಲಲ್ಲಾನ ಮೂರ್ತಿಗೆ ಪ್ರಾಣ ಪ್ರತಿಷ್ಠಾಪನೆ ಬಳಿಕ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು.

ಶ್ರೀ ರಾಮಚಂದ್ರ ಕೀ ಜೈ ಎಂದು ಭಾಷಣ ಆರಂಭಿಸಿದ ಅವರು ಹಲವು ವಿಷಯಗಳನ್ನು ಪ್ರಸ್ತಾಪಿಸಿದರು. ರಾಮನ ಎಲ್ಲ ಭಕ್ತರಿಗೆ ಪ್ರಣಾಮಗಳು. ಇಂದು ನಮ್ಮ ರಾಮ ಬಂದಿದ್ದಾನೆ. ಎಲ್ಲರ ಧೈರ್ಯ, ಬಲಿದಾನ, ತ್ಯಾಗ, ತಪಸ್ಸಿನ ಬಳಿಕ ನಮ್ಮ ಶ್ರೀರಾಮ ಬಂದಿದ್ದಾನೆ ಎಂದು ಹೇಳಿದರು.

“ಇಂತಹ ಶುಭ ಘಳಿಗೆಯಲ್ಲಿ ದೇಶದ ಸಮಸ್ತ ಜನರಿಗೆ ಪ್ರಣಾಮಗಳನ್ನು ಸಲ್ಲಿಸುತ್ತೇನೆ. ಈಗಷ್ಟೇ ನಾನು ಪ್ರಾಣಪ್ರತಿಷ್ಠೆ ಬಳಿಕ ನಿಮ್ಮ ಎದುರು ಬಂದು ನಿಂತಿದ್ದೇನೆ. ನಿಮ್ಮ ಜತೆ ನಾನು ಅಸಂಖ್ಯ ವಿಚಾರಗಳನ್ನು ಹೇಳಬೇಕು. ಆದರೆ, ನಾನು ಪದಗಳೇ ಇಲ್ಲದಂತಾಗಿದ್ದೇನೆ. ಈಗಲೂ ನನ್ನ ದೇಹ, ಮನಸ್ಸು ರಾಮನೊಂದಿಗೆ ವಿಲೀನವಾಗಿದೆ. ಈಗ ನಮ್ಮ ರಾಮಲಲ್ಲಾ ಟೆಂಟ್‌ನಲ್ಲಿ ಇರುವುದಿಲ್ಲ. ಇಂತಹ ಭವ್ಯ ರಾಮಮಂದಿರದಲ್ಲಿ ರಾಮನು ವಿರಾಜಮಾನನಾಗಿದ್ದಾನೆ” ಎಂದು ಹೇಳಿದರು.

ಈ ಸುದ್ದಿಯನ್ನೂ ಓದಿ: Ram Mandir: ಭಕ್ತನಿಗೆ ಹಾರ್ಟ್‌ ಅಟ್ಯಾಕ್, ಜೀವ ಉಳಿಸಿದ ವಾಯುಪಡೆಯ ಮೊಬೈಲ್ ಹಾಸ್ಪಿಟಲ್!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Rahul Gandhi: “ಅದಾನಿ-ಅಂಬಾನಿ… ಕಾಪಾಡಿ..ಕಾಪಾಡಿ ಅಂತಿದ್ದಾರೆ ಪ್ರಧಾನಿ ಮೋದಿ” ; ರಾಹುಲ್‌ ಗಾಂಧಿ ವ್ಯಂಗ್ಯ

Rahul Gandhi: ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್‌ ಯಾದವ್‌ ಸ್ಪರ್ಧಿಸುತ್ತಿರುವ ಕನೌಜ್‌ ಲೋಕಸಭಾ ಕ್ಷೇತ್ರದ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ರಾಹುಲ್‌ ಗಾಂಧಿ, ಒಬ್ಬ ವ್ಯಕ್ತಿ ಭಯಗೊಂಡಾಗ ಮಾತ್ರ ತನ್ನ ರಕ್ಷಣೆಗೆ ಇನ್ನೊಬ್ಬರ ಹೆಸರು ಹೇಳುತ್ತಾನೆ. ಅದೇ ರೀತಿ ಇಂಡಿಯಾ ಒಕ್ಕೂಟದಿಂದಾಗಿ ತಮ್ಮ ಸೋಲು ಖಚಿತ ಎಂದು ಅನಿಸಿದಾಗ ಪ್ರಧಾನಿ ಮೋದಿ ತನ್ನ ಇಬ್ಬರು ಸ್ನೇಹಿತರ ಹೆಸರನ್ನು ಎತ್ತಿದ್ದಾರೆ. ಕಾಪಾಡಿ.. ಕಾಪಾಡಿ. ಇಂಡಿಯಾ ಒಕ್ಕೂಟ ನನ್ನನ್ನು ಸೋಲಿಸುತ್ತಾರೆ ಅಂತಾ ಅದಾನಿ ಅಂಬಾನಿಯತ್ತ ಓಡುತ್ತಾರೆ.

VISTARANEWS.COM


on

Rahul gandhi
Koo

ಉತ್ತರಪ್ರದೇಶ: ಲೋಕಸಭಾ ಚುನಾವಣೆ(Lok Sabha Election 2024)ಗಾಗಿ ಕಾಂಗ್ರೆಸ್‌ಗೆ ಅಂಬಾನಿ ಹಾಗೂ ಅದಾನಿಯಿಂದ ಕಾಂಗ್ರೆಸ್‌ಗೆ ಟೆಂಪೋಗಟ್ಟಲೆ ಹಣ ಸಂದಾಯವಾಗಿದೆ ಹೇಳಿದ್ದ ಪ್ರಧಾನಿ ನರೇಂದ್ರ ಮೋದಿ(Narendra Modi)ಗೆ ಇದೀಗ ರಾಹುಲ್‌ ಗಾಂಧಿ(Rahul Gandhi) ತಿರುಗೇಟು ಕೊಟ್ಟಿದ್ದಾರೆ. ಕಳೆದ ಹತ್ತು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅಂಬಾನಿ ಅದಾನಿಯ ಹೆದರಿ ಎಲ್ಲೂ ಪ್ರಸ್ತಾಪಿಸಿಯೇ ಇರಲಿಲ್ಲ. ಇದೀಗ ತಾವು ಸೋಲುತ್ತೇವೆ ಎಂಬುದು ಖಚಿತವಾಗಿರುವುದರಿಂದ ಈ ಉದ್ಯಮಿಗಳ ಹೆಸರು ಎತ್ತಿದ್ದಾರೆ ಎಂದು ಟಾಂಗ್‌ ಕೊಟ್ಟಿದ್ದಾರೆ

ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್‌ ಯಾದವ್‌ ಸ್ಪರ್ಧಿಸುತ್ತಿರುವ ಕನೌಜ್‌ ಲೋಕಸಭಾ ಕ್ಷೇತ್ರದ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಒಬ್ಬ ವ್ಯಕ್ತಿ ಭಯಗೊಂಡಾಗ ಮಾತ್ರ ತನ್ನ ರಕ್ಷಣೆಗೆ ಇನ್ನೊಬ್ಬರ ಹೆಸರು ಹೇಳುತ್ತಾನೆ. ಅದೇ ರೀತಿ ಇಂಡಿಯಾ ಒಕ್ಕೂಟದಿಂದಾಗಿ ತಮ್ಮ ಸೋಲು ಖಚಿತ ಎಂದು ಅನಿಸಿದಾಗ ಪ್ರಧಾನಿ ಮೋದಿ ತನ್ನ ಇಬ್ಬರು ಸ್ನೇಹಿತರ ಹೆಸರನ್ನು ಎತ್ತಿದ್ದಾರೆ. ಕಾಪಾಡಿ.. ಕಾಪಾಡಿ. ಇಂಡಿಯಾ ಒಕ್ಕೂಟ ನನ್ನನ್ನು ಸೋಲಿಸುತ್ತಾರೆ ಅಂತಾ ಅದಾನಿ ಅಂಬಾನಿಯತ್ತ ಓಡುತ್ತಾರೆ. ಪ್ರಧಾನಿ ನರೇಂದ್ರ ಮೋದಿಯವರಿಗೇ ಗೊತ್ತಿದೆ ಅದಾನಿ-ಅಂಬಾನಿಯವರು ಟೆಂಪೋಗಟ್ಟಲೇ ಹಣ ಕಳಿಸುತ್ತಾ ಅಂತಾ. ಅವರಿಗೆ ವೈಯಕ್ತಿಕವಾಗಿ ಇದರ ಅನುಭವ ಇದೆ. ಪ್ರಧಾನಿ ಮೋದಿ ಕೇವಲ 22ಉದ್ಯಮಿಗಳಿಗಾಗಿ ಕೆಲಸ ಮಾಡುತ್ತಿದ್ದಾರೆ. ಈಗ ಬಿಜೆಪಿ, ನರೇಂದ್ರ ಮೋದಿ ಮತ್ತು ಅಮಿತ್‌ ಶಾ ನಿಮ್ಮನ್ನು ಈ ವಿಚಾರದಿಂದ ಬೇರೆಡೆ ಸೆಳೆಯಲು ಯತ್ನಿಸುತ್ತಾರೆ. ನೀವು ಅದರ ಕಡೆ ವಿಚಲಿತರಾಗಬೇಡಿ ಎಂದು ರಾಹುಲ್‌ ಗಾಂಧಿ ಜನರಲ್ಲಿ ಮನವಿ ಮಾಡಿದರು.

ಮೋದಿ ಹೇಳಿದ್ದೇನು?

ತೆಲಂಗಾಣದಲ್ಲಿ ನಡೆದ ಚುನಾವಣೆ ರ‍್ಯಾಲಿಯಲ್ಲಿ ಮಾತನಾಡಿದ ಮೋದಿ, ರಾಹುಲ್‌ ಗಾಂಧಿ ಅವರಿಗೆ ತಿರುಗೇಟು ನೀಡಿದರು. “ಕಾಂಗ್ರೆಸ್‌ ಮಹಾರಾಜ (ರಾಹುಲ್‌ ಗಾಂಧಿ) ಈಗ ಮುಕೇಶ್‌ ಅಂಬಾನಿ ಹಾಗೂ ಗೌತಮ್‌ ಅದಾನಿ ಅವರ ಬಗ್ಗೆ ಮಾತನಾಡುತ್ತಿಲ್ಲ. ಏಕೆಂದರೆ, ಚುನಾವಣೆಗಾಗಿ ಉದ್ಯಮಿಗಳಿಂದ ಕಾಂಗ್ರೆಸ್‌ಗೆ ಟೆಂಪೋಗಟ್ಟಲೆ ಕಾಳಧನವನ್ನು ಕಾಂಗ್ರೆಸ್‌ಗೆ ನೀಡಲಾಗಿದೆ. ಇದೇ ಕಾರಣಕ್ಕಾಗಿ ರಾಹುಲ್‌ ಗಾಂಧಿ ಅವರು ಅಂಬಾನಿ, ಅದಾನಿ ಬಗ್ಗೆ ಈಗ ಮಾತನಾಡುತ್ತಿಲ್ಲ” ಎಂದು ಟೀಕಿಸಿದ್ದರು.

ಇದನ್ನೂ ಓದಿ:Arvind Kejriwal: ಜೂನ್‌ 1ರವರೆಗೆ ಕೇಜ್ರಿವಾಲ್‌ಗೆ ಜಾಮೀನು, ಮತದಾನ ಮುಗಿಯುವವರೆಗೆ ರಿಲೀಫ್‌

ಕಳೆದ ಐದು ವರ್ಷಗಳಿಂದ ರಾಹುಲ್‌ ಗಾಂಧಿ ಅವರು ನಮ್ಮ ವಿರುದ್ಧ ಆರೋಪಗಳನ್ನು ಮಾಡುತ್ತಲೇ ಇದ್ದರು. ರಾಫೆಲ್‌ ವಿಚಾರವಾಗಿ ಮಾಡಿದ ಆರೋಪವು ನೆಲಕಚ್ಚಿತು. ಅದಾದ ಬಳಿಕ ಐವರು ಉದ್ಯಮಿಗಳು, ಐವರು ಉದ್ಯಮಿಗಳು ಎಂದು ಪರೋಕ್ಷ ಆರೋಪ ಶುರುವಿಟ್ಟುಕೊಂಡರು. ಅದಾದ ಬಳಿಕ ಅಂಬಾನಿ-ಅದಾನಿ ಎಂದು ನೇರವಾಗಿ ಆರೋಪ ಮಾಡಿದರು. ಆದರೆ, ಚುನಾವಣೆ ಘೋಷಣೆಯಾಗುತ್ತಲೇ ರಾಹುಲ್‌ ಗಾಂಧಿ ಅವರು ಅಂಬಾನಿ ಹಾಗೂ ಅದಾನಿ ಹೆಸರೇ ಎತ್ತುತ್ತಿಲ್ಲ. ರಾಹುಲ್‌ ಗಾಂಧಿ ಏಕೆ ಈಗ ರಾತ್ರೋರಾತ್ರಿ ಬದಲಾದರು? ಏಕೆ ಅವರು ಅಂಬಾನಿ-ಅದಾನಿ ಹೆಸರು ಹೇಳುತ್ತಿಲ್ಲ” ಎಂದು ಪ್ರಶ್ನಿಸಿದ್ದರು.

Continue Reading

ದೇಶ

ಹೈದರಾಬಾದ್ ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಿ, ಮುಸ್ಲಿಂ ಗಲ್ಲಿಗಳಲ್ಲಿ ಪ್ರಚಾರ ಮಾಡಿದ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ

ಹಿಂದು ಧರ್ಮದ ಕುರಿತು ಪ್ರಖರವಾಗಿ ಮಾತನಾಡುವ, ಹೈದರಾಬಾದ್‌ನಲ್ಲಿ ಎಐಎಂಐಎಂ ಪಕ್ಷದ ವೈಫಲ್ಯಗಳನ್ನು ತೋರಿಸುವ ಛಾತಿ ಹೊಂದಿರುವ ಡಾ. ಮಾಧವಿ ಲತಾ ಕೊಂಪೆಲ್ಲ ಅವರು ಹಿಂದು ಫೈರ್‌ ಬ್ರ್ಯಾಂಡ್‌ ಎನಿಸಿದ್ದಾರೆ. ಇವರಿಗೆ ಅಚ್ಚರಿಯ ರೀತಿಯಲ್ಲಿ ಬಿಜೆಪಿಯು ಹೈದರಾಬಾದ್‌ ಲೋಕಸಭೆ ಕ್ಷೇತ್ರದಿಂದ ಟಿಕೆಟ್‌ ನೀಡಿದೆ. ಹಾಗಾಗಿ, ಈ ಬಾರಿ ಹೈದರಾಬಾದ್‌ನಲ್ಲಿ ಡಾ. ಮಾಧವಿ ಲತಾ ಕೊಂಪೆಲ್ಲ ಅವರು ಅಸಾದುದ್ದೀನ್‌ ಓವೈಸಿ ಅವರಿಗೆ ತೀವ್ರ ಪೈಪೋಟಿ ನೀಡುವುದು ನಿಶ್ಚಿತ ಎಂದೇ ಹೇಳಲಾಗುತ್ತಿದೆ.

VISTARANEWS.COM


on

Madhavi Latha
Koo

ಹೈದರಾಬಾದ್:‌ ತೆಲಂಗಾಣದ ಹೈದರಾಬಾದ್‌ ಲೋಕಸಭೆ ಕ್ಷೇತ್ರದ ಚುನಾವಣೆ (Lok Sabha Election) ರಣಕಣವು ಈ ಬಾರಿ ಭಾರಿ ಕುತೂಹಲದಿಂದ ಕೂಡಿದೆ. ಎಐಎಂಐಎಂ ಪಕ್ಷದ ಅಸಾದುದ್ದೀನ್‌ ಓವೈಸಿ (Asaduddin Owaisi) ವಿರುದ್ಧ ಬಿಜೆಪಿಯಿಂದ ಹಿಂದು ಫೈರ್‌ ಬ್ರ್ಯಾಂಡ್‌ ಮಾಧವಿ ಲತಾ (Madhavi Latha) ಕಣಕ್ಕಿಳಿದಿದ್ದಾರೆ. ಪ್ರಖರ ಹಿಂದುತ್ವವಾದಿಯೂ ಆಗಿರುವ ಮಾಧವಿ ಲತಾ ಅವರು ಈಗ ಮುಸ್ಲಿಮರ ಮತಗಳನ್ನೂ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ. ಇದಕ್ಕಾಗಿ ಅವರು ಹೈದರಾಬಾದ್‌ನಲ್ಲಿರುವ ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಿದ ಅವರು, ಮುಸ್ಲಿಂ ಗಲ್ಲಿಗಲ್ಲಿಗಳಲ್ಲಿ ಪ್ರಚಾರ ಕೈಗೊಂಡಿದ್ದಾರೆ.

ಹೌದು, ಹೈದರಾಬಾದ್ ಲೋಕಸಭೆ ಕ್ಷೇತ್ರದಲ್ಲಿ ಶೇ.52ರಷ್ಟು ಮುಸ್ಲಿಮರ ಮತಗಳಿದ್ದರೆ, ಶೇ.48ರಷ್ಟು ಹಿಂದು ಮತದಾರರಿದ್ದಾರೆ. ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿ ಅಸಾದುದ್ದೀನ್‌ ಓವೈಸಿಗೆ ಮತ ನೀಡಲಿದ್ದಾರೆ. ಮುಸ್ಲಿಮರ ಮತಗಳಿಲ್ಲದೆ ಗೆಲುವು ಸಾಧಿಸುವುದು ಕಷ್ಟಸಾಧ್ಯ ಎಂಬುದನ್ನು ಅರಿತ ಮಾಧವಿ ಲತಾ ಅವರು ಹೈದರಾಬಾದ್‌ನ ಮುಸ್ಲಿಂ ಗಲ್ಲಿಗಳಲ್ಲಿ ಪ್ರಚಾರ ನಡೆಸುವ ಮೂಲಕ ಅವರ ವಿಶ್ವಾಸ ಗಳಿಸಲು ಯತ್ನಿಸುತ್ತಿದ್ದಾರೆ. ಮೇ 13ರಂದು ಹೈದರಾಬಾದ್‌ನಲ್ಲಿ ಮತದಾನ ನಡೆಯಲಿದ್ದು, ಇದಕ್ಕಾಗಿ ಅವರು ಅಬ್ಬರದ ಪ್ರಚಾರ ಕೈಗೊಳ್ಳುತ್ತಿದ್ದಾರೆ.

221 ಕೋಟಿ ರೂ. ಆಸ್ತಿಯ ಒಡತಿ

ಕೊಂಪೆಲ್ಲಾ ಮಾಧವಿ ಲತಾ ಅವರ ಕುಟುಂಬದ ಒಟ್ಟು ಆಸ್ತಿ ಮೌಲ್ಯ 221.37 ಕೋಟಿ ರೂ. ಎಂಬುದಾಗಿ ನಾಮಪತ್ರ ಸಲ್ಲಿಸುವ ವೇಳೆ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ. ಮಾಧವಿ ಲತಾ ಮತ್ತು ಅವರ ಪತಿ ಕೊಂಪೆಲ್ಲಾ ವಿಶ್ವನಾಥ್ ಇಬ್ಬರೂ ವ್ಯಾಪಾರಿಗಳು. ಅವರ ಮೂವರು ಅವಲಂಬಿತ ಮಕ್ಕಳು, 165.46 ಕೋಟಿ ರೂಪಾಯಿಗಳ ಚರ ಆಸ್ತಿಯನ್ನು ಹೊಂದಿದ್ದಾರೆ ಮತ್ತು ಮಾಧವಿ ಲತಾ ದಂಪತಿ 55.91 ಕೋಟಿ ರೂಪಾಯಿಗಳ ಸ್ಥಿರ ಆಸ್ತಿಯನ್ನು ಹೊಂದಿದ್ದಾರೆ. ತೆಲಂಗಾಣದ ಅವಳಿ ನಗರವಾದ ಸಿಕಂದರಾಬಾದ್‌ನಲ್ಲಿ ನೆಲೆಸಿರುವ 49 ವರ್ಷದ ಮಾಧವಿ ಲತಾ ಇತ್ತೀಚೆಗಷ್ಟೇ ಬಿಜೆಪಿ ಸೇರ್ಪಡೆಗೊಂಡರು. ಮೊದಲ ಬಾರಿಗೆ ಚುನಾವಣೆಯ ಕಣಕ್ಕೆ ಇಳಿದಿದ್ದಾರೆ.

ರಾಜಕೀಯ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಮಾಧವಿ ಲತಾ ಅವರು ಬಹುಮುಖ ಪ್ರತಿಭೆ ಎನಿಸಿದ್ದಾರೆ. ವಿರಿಂಚಿ ಆಸ್ಪತ್ರೆಯ ಅಧ್ಯಕ್ಷೆಯಾಗಿರುವ ಇವರು ಉದ್ಯಮದ ಜತೆಗೆ ಸಮಾಜಮುಖಿಯಾಗಿ ಕೆಲಸ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಬೋಧನೆ, ಆರೋಗ್ಯ ಸೇವೆ ಹಾಗೂ ಆಹಾರ ವಿತರಣೆಯ ಮೂಲಕ ಇವರು ಜನಮಾನಸದಲ್ಲಿ ಜಾಗ ಪಡೆದಿದ್ದಾರೆ. ಭರತನಾಟ್ಯ ಪ್ರವೀಣೆಯೂ ಆಗಿರುವ ಇವರು ಹಿಂದು ಧರ್ಮದ ಕುರಿತು ಮಾಡುವ ಭಾಷಣಗಳು ಸಾಮಾಜಿಕ ಜಾಲತಾಣಗಳಲ್ಲಿ ಇವರಿಗೆ ಹೆಚ್ಚು ಅಭಿಮಾನಿಗಳನ್ನು ನೀಡಿದೆ.

ತ್ರಿವಳಿ ತಲಾಕ್‌ ವಿರುದ್ಧ ಹೋರಾಟ

ಮುಸ್ಲಿಂ ಮಹಿಳೆಯರಿಗೆ ಕಂಟಕವಾಗಿದ್ದ ತ್ರಿವಳಿ ತಲಾಕ್‌ ವಿರುದ್ಧ ಮಾಧವಿ ಲತಾ ಅವರು ಹೋರಾಟ ನಡೆಸಿದ್ದರು. ಅದರಲ್ಲೂ, ಕೇಂದ್ರ ಸರ್ಕಾರವು ತ್ರಿವಳಿ ತಲಾಕ್‌ಅನ್ನು ಕೇಂದ್ರ ಸರ್ಕಾರವು ರದ್ದುಗೊಳಿಸಿದ ಬಳಿಕ ಅಸಾದುದ್ದೀನ್‌ ಓವೈಸಿ ಅವರು ಇದನ್ನು ಅಸಾಂವಿಧಾನಿಕ ಎಂದು ಕರೆದಿದ್ದರು. ಆಗ, ತ್ರಿವಳಿ ತಲಾಕ್‌ ಕುರಿತು ಜನರಿಗೆ ತಿಳಿವಳಿಕೆ, ಜಾಗೃತಿ ಮೂಡಿಸುವ ಕುರಿತು ಮಾಧವಿ ಲತಾ ಅವರು ಅಭಿಯಾನ ಆರಂಭಿಸಿದ್ದರು. ಆಗಲೇ ಅಸಾದುದ್ದೀನ್‌ ಓವೈಸಿ ಅವರಿಗೆ ಮಾಧವಿ ಲತಾ ಸೆಡ್ಡು ಹೊಡೆದಿದ್ದರು.

ಇದನ್ನೂ ಓದಿ: Kompella Madhavi Latha: ಹೈದರಾಬಾದ್‌ನಲ್ಲಿ ಓವೈಸಿ ವಿರುದ್ಧ ಕಣಕ್ಕಿಳಿದಿರುವ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಆಸ್ತಿ ಎಷ್ಟಿದೆ ನೋಡಿ!

Continue Reading

ಪ್ರಮುಖ ಸುದ್ದಿ

Covishield: ಭಾರತದಲ್ಲೂ ಎಲ್ಲಾ ಕೋವಿಡ್ ಲಸಿಕೆಗಳ ಸೈಡ್‌ ಎಫೆಕ್ಟ್‌ ಪರಿಶೀಲಿಸಿ: ವೈದ್ಯರ ಒತ್ತಾಯ

Covishield: ಬ್ರಿಟನ್‌ ಅಸ್ಟ್ರಾಜೆನೆಕಾ ತನ್ನ ಕೋವಿಶೀಲ್ಡ್‌ ಲಸಿಕೆಯನ್ನು ಜಾಗತಿಕವಾಗಿ ಹಿಂತೆಗೆದುಕೊಳ್ಳಲು ಪ್ರಾರಂಭಿಸಿದೆ. ಇದನ್ನು ಭಾರತದಲ್ಲಿ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಸಹಭಾಗಿತ್ವದಲ್ಲಿ ʼಕೋವಿಶೀಲ್ಡ್’ ಎಂದು ಒದಗಿಸಲಾಗಿದೆ. ಇದು ರಕ್ತ ಹೆಪ್ಪುಗಟ್ಟುವಿಕೆ ಮತ್ತು ಪ್ಲೇಟ್‌ಲೆಟ್‌ಗಳನ್ನು ಕಡಿಮೆ ಮಾಡುವ ಅಪರೂಪದ ಅಡ್ಡಪರಿಣಾಮಗಳನ್ನು ಉಂಟುಮಾಡುತ್ತದೆ ಎಂದು ಕಂಪನಿ ಒಪ್ಪಿಕೊಂಡಿದೆ.

VISTARANEWS.COM


on

Covishield Vaccine
Koo

ಹೊಸದಿಲ್ಲಿ: ಔಷಧೀಯ ದಿಗ್ಗಜ ಆಸ್ಟ್ರಾಜೆನೆಕಾ (AstraZeneca) ತನ್ನ ಕೋವಿಡ್ ಲಸಿಕೆ (Covid Vaccine) ಅಪರೂಪದ ಸಂದರ್ಭಗಳಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ (Blood clotting) ಕಾರಣವಾಗಬಹುದು ಎಂದು ಯುಕೆ ನ್ಯಾಯಾಲಯದಲ್ಲಿ ಒಪ್ಪಿಕೊಂಡ ಹಿನ್ನೆಲೆಯಲ್ಲಿ, ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ತಯಾರಿಸಿದ ಕೋವಿಶೀಲ್ಡ್ ಲಸಿಕೆಯ (Covishield Vaccine) ಸುರಕ್ಷತೆಯ ಬಗ್ಗೆಯೂ ಭಾರತೀಯ ವೈದ್ಯರ ಗುಂಪು ತೀವ್ರ ಕಳವಳ ವ್ಯಕ್ತಪಡಿಸಿದೆ.

ʼಅವೇಕನ್ ಇಂಡಿಯಾ ಮೂವ್‌ಮೆಂಟ್ʼ (ಎಐಎಂ) ಬ್ಯಾನರ್‌ನಡಿಯಲ್ಲಿ ಒಗ್ಗೂಡಿರುವ ವೈದ್ಯರು, ಎಲ್ಲಾ ಕೋವಿಡ್ ಲಸಿಕೆಗಳ ಹಿಂದಿನ ವೈಜ್ಞಾನಿಕತೆಯನ್ನು ಪರಿಶೀಲಿಸಲು, ಅವುಗಳ ವಾಣಿಜ್ಯೀಕರಣದ ಪ್ರಮಾಣವನ್ನು ಲೆಕ್ಕ ಹಾಕಲು, ಜೊತೆಗೆ ಲಸಿಕೆಯ ಅಡ್ಡ ಪರಿಣಾಮಗಳ (side effects) ಮೇಲೆ ನಿಗಾ ಇಡಲು ಸಕ್ರಿಯ ಕಣ್ಗಾವಲು ಮತ್ತು ಮೇಲ್ವಿಚಾರಣೆ ಕಾರ್ಯವಿಧಾನ ರೂಢಿಸಿಕೊಳ್ಳಲು ಸರ್ಕಾರವನ್ನು ಒತ್ತಾಯಿಸಿದ್ದಾರೆ.

“ಸರ್ಕಾರವು ಕೋವಿಡ್ ಲಸಿಕೆ ನೀಡುವಿಕೆಯ ನಂತರದ ದುರಂತ ಸಾವಿನ ಪ್ರಕರಣಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ. ವೈಜ್ಞಾನಿಕ ತನಿಖೆ ಮತ್ತು ಸಾಂಕ್ರಾಮಿಕ ರೋಗಶಾಸ್ತ್ರದ ಮೂಲ ಪರಿಶೀಲಿಸದೆ ಕೋವಿಡ್ ಲಸಿಕೆಗಳನ್ನು ʼಸುರಕ್ಷಿತ ಮತ್ತು ಪರಿಣಾಮಕಾರಿʼ ಎಂದು ಪ್ರಚಾರ ಮಾಡುವುದನ್ನು ಮುಂದುವರೆಸಿದೆ” ಎಂದು ವಿಕಿರಣಶಾಸ್ತ್ರಜ್ಞ ಮತ್ತು ತರುಣ್ ಕೊಠಾರಿ ಹೇಳಿದ್ದಾರೆ.

ಥ್ರಂಬೋಸಿಸ್ ವಿತ್ ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್ (ಟಿಟಿಎಸ್) ಎಂಬ ಕೋವಿಡ್ ಲಸಿಕೆಯ ಅಡ್ಡ ಪರಿಣಾಮದ ಬಗ್ಗೆ ಈಗ ಜಗತ್ತು ತಿಳಿಯುತ್ತಿದೆ. ಕೋವಿಡ್-19 ಲಸಿಕೆಗಳನ್ನು ನೀಡುತ್ತಿರುವಾಗ, ಹಂತ-3 ಪ್ರಯೋಗಗಳನ್ನು ಪೂರ್ಣಗೊಳಿಸದೆಯೇ ಇದನ್ನು ಮಾಡಲಾಗುತ್ತಿದೆ ಎಂದು ಅನೇಕ ಜನರಿಗೆ ತಿಳಿದಿರಲಿಲ್ಲ. ಕೋವಿಡ್-19 ಲಸಿಕೆಗಳ ತಯಾರಕರು ಅಲ್ಪಾವಧಿಯ ಅಥವಾ ದೀರ್ಘಾವಧಿಯ ಅಡ್ಡಪರಿಣಾಮಗಳು ಅಥವಾ ಸಾವುಗಳ ಬಗ್ಗೆ ಸಂಪೂರ್ಣ ಮಾಹಿತಿ ಮತ್ತು ಡೇಟಾವನ್ನು ಹೊಂದಿರದೆ ಲಸಿಕೆ ನೀಡಲು ಪ್ರಾರಂಭಿಸಿದ್ದರು ಎಂದು ಸ್ತ್ರೀರೋಗತಜ್ಞ ಮತ್ತು ಆಂಕೊಲಾಜಿಸ್ಟ್ ಡಾ ಸುಜಾತಾ ಮಿತ್ತಲ್ ಹೇಳಿದ್ದಾರೆ.

ಲಸಿಕೆ ಬಳಿಕ ಸಾವಿರಾರು ಮಹಿಳೆಯರು ತಮ್ಮ ಋತುಚಕ್ರದಲ್ಲಿ ಅಸಹಜತೆಗಳನ್ನು ವರದಿ ಮಾಡಿದ್ದಾರೆ. ಇದು ಸೆಪ್ಟೆಂಬರ್ 2022ರಲ್ಲಿ ಪ್ರಕಟವಾದ ಅಧ್ಯಯನದಲ್ಲಿ ಕಂಡುಬಂದಿದೆ ಎಂದು ಅವರು ಹೇಳಿದರು.

“ಅವೇಕನ್ ಇಂಡಿಯಾ ಮೂವ್‌ಮೆಂಟ್ (ಎಐಎಂ) ಭಾರತದಲ್ಲಿ ಕೋವಿಡ್ ಲಸಿಕೆ ಸಾವಿನ ವಿವರಗಳನ್ನು ಸಂಗ್ರಹಿಸುತ್ತಿದೆ. ಲಸಿಕೆ ಪ್ರಾರಂಭವಾದ 2021ರಿಂದ ದೇಶದ ವಿವಿಧ ಉನ್ನತ ಅಧಿಕಾರಿಗಳಿಂದ ಈ ಮಾಹಿತಿಯನ್ನು ಪಡೆಯುತ್ತಿದೆ. ಸರ್ಕಾರ ನಮಗೆ ಪ್ರತಿಕ್ರಿಯಿಸಲು ವಿಫಲವಾಗಿದೆ” ಎಂದು ಡಾ. ಕೊಥಾರಿ ಹೇಳಿದರು.

ಲಸಿಕೆ ತಯಾರಕ ಕಂಪನಿಗಳನ್ನೂ ಹೊಣೆಯಾಗಿಸಿಕೊಂಡು, ಕೋವಿಡ್ ಲಸಿಕೆಗಳ ಬಲಿಪಶುಗಳ ಕುಟುಂಬ ಸದಸ್ಯರಿಗೆ ಪರಿಹಾರವನ್ನು ನೀಡುವಂತೆ AIM ಭಾರತ ಸರ್ಕಾರವನ್ನು ಒತ್ತಾಯಿಸಿದೆ. “ಲಸಿಕೆಯಿಂದ ಅಸ್ವಸ್ಥಗೊಂಡವರು ಮತ್ತು ಅವರ ಕುಟುಂಬಗಳಿಗೆ ತ್ವರಿತ ನ್ಯಾಯ ಒದಗಿಸಲು ತ್ವರಿತ ನ್ಯಾಯಾಲಯಗಳು ಮತ್ತು ಲಸಿಕೆ ನ್ಯಾಯಾಲಯಗಳನ್ನು ಸ್ಥಾಪಿಸಲು ನಾವು ಒತ್ತಾಯಿಸುತ್ತೇವೆ” ಎಂದು ಡಾ. ಮಿತ್ತಲ್ ಹೇಳಿದರು.

ಲಸಿಕೆ ಅಡ್ಡ ಪರಿಣಾಮ ಘಟನೆಗಳನ್ನು ಸಾಧ್ಯವಾದಷ್ಟು ಬೇಗ ಗುರುತಿಸಲು ಸಕ್ರಿಯ ಕಣ್ಗಾವಲು ಮತ್ತು ಮೇಲ್ವಿಚಾರಣಾ ಕಾರ್ಯವಿಧಾನಗಳನ್ನು ಅಳವಡಿಸಬೇಕು. ಆರಂಭಿಕ ಚಿಕಿತ್ಸಾ ಪ್ರೋಟೋಕಾಲ್‌ಗಳನ್ನು ರೂಪಿಸಬೇಕು ಮತ್ತು ವ್ಯಾಪಕವಾಗಿ ಪ್ರಚಾರ ಮಾಡಬೇಕು. ಇದರಿಂದ ಜೀವಗಳನ್ನು ಉಳಿಸಬಹುದು ಎಂದು ಅವರು ಹೇಳಿದರು.

ಬ್ರಿಟನ್‌ ಅಸ್ಟ್ರಾಜೆನೆಕಾ ತನ್ನ ಕೋವಿಶೀಲ್ಡ್‌ ಲಸಿಕೆಯನ್ನು ಜಾಗತಿಕವಾಗಿ ಹಿಂತೆಗೆದುಕೊಳ್ಳಲು ಪ್ರಾರಂಭಿಸಿದೆ. ಇದನ್ನು ಭಾರತದಲ್ಲಿ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಸಹಭಾಗಿತ್ವದಲ್ಲಿ ʼಕೋವಿಶೀಲ್ಡ್’ ಎಂದು ಒದಗಿಸಲಾಗಿದೆ. ಇದು ರಕ್ತ ಹೆಪ್ಪುಗಟ್ಟುವಿಕೆ ಮತ್ತು ಪ್ಲೇಟ್‌ಲೆಟ್‌ಗಳನ್ನು ಕಡಿಮೆ ಮಾಡುವ ಅಪರೂಪದ ಅಡ್ಡಪರಿಣಾಮಗಳನ್ನು ಉಂಟುಮಾಡುತ್ತದೆ ಎಂದು ಕಂಪನಿ ಒಪ್ಪಿಕೊಂಡಿದೆ.

ಭಾರತದಲ್ಲಿ, ಕಂಪನಿಯ ಪಾಲುದಾರ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಡಿಸೆಂಬರ್ 2021ರಿಂದ ಕೋವಿಶೀಲ್ಡ್‌ನ ಹೆಚ್ಚುವರಿ ಡೋಸ್‌ಗಳ ತಯಾರಿಕೆ ಮತ್ತು ಪೂರೈಕೆಯನ್ನು ನಿಲ್ಲಿಸಿದೆ ಎಂದು ಹೇಳಿದೆ. ಆದರೆ 2021ರಲ್ಲಿಯೇ ಲಸಿಕೆಯ ಪ್ಯಾಕೇಜಿಂಗ್ ಇನ್ಸರ್ಟ್‌ನಲ್ಲಿ TTS ಸೇರಿದಂತೆ ಎಲ್ಲಾ ಅಪರೂಪದ ಮತ್ತು ಅತ್ಯಂತ ಅಪರೂಪದ ಅಡ್ಡಪರಿಣಾಮಗಳನ್ನು ತಿಳಿಸಲಾಗಿದೆ ಎಂದು ಪುನರುಚ್ಚರಿಸಿದೆ. ಕೋವಿಶೀಲ್ಡ್‌ ಲಸಿಕೆಯನ್ನು ಅಸ್ಟ್ರಾಜೆನೆಕಾ ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯದೊಂದಿಗೆ ಸೇರಿ ಅಭಿವೃದ್ಧಿಪಡಿಸಿದೆ. ಇದನ್ನು ಯುರೋಪ್‌ನಲ್ಲಿ ವ್ಯಾಕ್ಸ್‌ಜೆವ್ರಿಯಾ ಎಂದು ಮಾರಾಟ ಮಾಡಲಾಯಿತು.

ಇದನ್ನೂ ಓದಿ: Covishield: ಭಾರತದಲ್ಲಿ ಕೋವಿಶೀಲ್ಡ್‌ ಸೈಡ್‌ ಎಫೆಕ್ಟ್‌ನ ಎಲ್ಲ ಮಾಹಿತಿ ಬಹಿರಂಗ ಎಂದ ಕಂಪನಿ, ಉತ್ಪಾದನೆಯೂ ಸ್ಥಗಿತ!

Continue Reading

ಪ್ರಮುಖ ಸುದ್ದಿ

Arvind Kejriwal: ಜೂನ್‌ 1ರವರೆಗೆ ಕೇಜ್ರಿವಾಲ್‌ಗೆ ಜಾಮೀನು, ಮತದಾನ ಮುಗಿಯುವವರೆಗೆ ರಿಲೀಫ್‌

ಅಬಕಾರಿ ನೀತಿಗೆ ಸಂಬಂಧಿಸಿದಂತೆ ಅಕ್ರಮ ಹಣ (Illegal money transaction) ವರ್ಗಾವಣೆ ಪ್ರಕರಣದಲ್ಲಿ ಅರೆಸ್ಟ್‌ ಆಗಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಕೊನೆಗೂ ನಿಟ್ಟುಸಿರು ಬಿಡುವಂತಾಗಿದೆ. ಜೂನ್‌ 1ರವರೆಗೆ ಅವರಿಗೆ ಸುಪ್ರೀಂ ಕೋರ್ಟ್‌ ಜಾಮೀನು ನೀಡಿದೆ.

VISTARANEWS.COM


on

Aravind Kejriwal
Koo

ನವದೆಹಲಿ: ಏಳು ಹಂತದ ಲೋಕಸಭೆ ಚುನಾವಣೆಯ (Lok Sabha Election 2024) ಅಂತಿಮ ಹಂತದ ಮತದಾನವಾದ ಜೂನ್ 1ರವರೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರಿಗೆ ಸುಪ್ರೀಂ ಕೋರ್ಟ್ (Supreme court) ಮಧ್ಯಂತರ ಜಾಮೀನು ನೀಡಿದೆ. ದೆಹಲಿ ಅಬಕಾರಿ ನೀತಿ (Delhi Excise policy) ಹಗರಣದಲ್ಲಿ ಮಾರ್ಚ್ 21ರಂದು ಜಾರಿ ನಿರ್ದೇಶನಾಲಯದಿಂದ (ED) ಬಂಧಿಸಲ್ಪಟ್ಟಿರುವ ಆಮ್ ಆದ್ಮಿ ಪಕ್ಷದ (Aam Admi Party) ನಾಯಕ ಜೂನ್ 2ರೊಳಗೆ ಜೈಲು ಅಧಿಕಾರಿಗಳಿಗೆ ಶರಣಾಗಬೇಕಿದೆ.

ಅಬಕಾರಿ ನೀತಿಗೆ ಸಂಬಂಧಿಸಿದಂತೆ ಅಕ್ರಮ ಹಣ (Illegal money transaction) ವರ್ಗಾವಣೆ ಪ್ರಕರಣದಲ್ಲಿ ಅರೆಸ್ಟ್‌ ಆಗಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ಮಧ್ಯಂತರ ಜಾಮೀನು ಅರ್ಜಿ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌(Supreme Court)ನಲ್ಲಿ ನಡೆಯಿತು. ಸದ್ಯ ತಿಹಾರ್‌ ಜೈಲಿನಲ್ಲಿರುವ ಕೇಜ್ರಿವಾಲ್‌ ಲೋಕಸಭೆ ಚುನಾವಣೆ ಹಿನ್ನೆಲೆ ಮಧ್ಯಂತರ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.

ಕೇಜ್ರಿವಾಲ್ ಅವರ ಬಂಧನದ ವಿರುದ್ಧ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಪೀಠವು ಎರಡು ಭಾಗಗಳಾಗಿ ವಿಂಗಡಿಸಿದೆ. ಅವರ ಪ್ರಮುಖ ಅರ್ಜಿಯು ಕೇಂದ್ರ ತನಿಖಾ ಸಂಸ್ಥೆಯಿಂದ ತನ್ನ ಬಂಧನವನ್ನು ಪ್ರಶ್ನಿಸಿದೆ ಮತ್ತು ಅದನ್ನು “ಕಾನೂನುಬಾಹಿರ” ಎಂದು ಘೋಷಿಸುವಂತೆ ಕೋರಿದೆ. ಎರಡನೇ ಅಂಶವು ನಡೆಯುತ್ತಿರುವ ಲೋಕಸಭಾ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಮಧ್ಯಂತರ ಜಾಮೀನು ಮಂಜೂರು ಮಾಡಲು ಸಂಬಂಧಿಸಿದೆ. ಎರಡನೇ ಭಾಗಕ್ಕೆ ಸಂಬಂಧಿಸಿ ಇಂದು ಕೋರ್ಟ್‌ ತೀರ್ಪು ನೀಡಿದೆ.

ನ್ಯಾಯಮೂರ್ತಿ ಸಂಜೀವ್‌ ಖನ್ನಾ ನೇತೃತ್ವದ ಪೀಠ ಮಧ್ಯಂತರ ಜಾಮೀನು ಅರ್ಜಿ ವಿಚಾರಣೆ ನಡೆಸಿದೆ. ED ಪರ ವಕೀಲ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ, ಅರವಿಂದ ಕೇಜ್ರಿವಾಲ್‌ ಅವರಿಗೆ ಚುನಾವಣೆ ದೃಷ್ಟಿಯಿಂದ ಜಾಮೀನು ನೀಡಿದರೆ ಜನರಿಗೆ ತಪ್ಪು ಸಂದೇಶ ಹೋದಂತಾಗುತ್ತದೆ. ರಾಜಕಾರಣಿಗಳಿಗೊಂದು ನ್ಯಾಯ, ಜನರಿಗೊಂದು ನ್ಯಾಯ ಎಂದು ಜನ ಭಾವಿಸುತ್ತಾರೆ ಎಂದು ಈಗಾಗಲೇ ವಾದ ಮಂಡಿಸಿದ್ದರು. ಇದಾದ ಬಳಿಕ ಈ ಪ್ರಕರಣವನ್ನು ನ್ಯಾಯಪೀಠ ಎರಡು ಭಾಗವನ್ನಾಗಿ ವಿಭಜಿಸಿತ್ತು. ಒಂದು ಇಡಿ ಬಂಧನ ಪ್ರಶ್ನಿಸಿ ಕೇಜ್ರಿವಾಲ್‌ ಸಲ್ಲಿಸಿದ ಅರ್ಜಿ. ಮತ್ತೊಂದು ಮಧ್ಯಂತರ ಜಾಮೀನು ಅರ್ಜಿ. ಮಂಗಳವಾರ ವಿಚಾರಣೆ ನಡೆಸಿದ ಕೋರ್ಟ್‌ ಕೇಜ್ರಿವಾಲ್‌ ಅವರ ನ್ಯಾಯಾಂಗ ಬಂಧನವನ್ನು ಮೇ 20ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿತ್ತು ಮತ್ತು ಮಧ್ಯಂತರ ಜಾಮೀನು ಅರ್ಜಿ ವಿಚಾರಣೆಯನ್ನು ಇಂದು ನಡೆಸುವುದಾಗಿ ಹೇಳಿತ್ತು.

ಏ.9ರಂದು ಇದೇ ಪ್ರಕರಣ ವಿಚಾರಣೆ ನಡೆಸಿದ್ದ ದಿಲ್ಲಿ ಹೈಕೋರ್ಟ್‌, ಅಕ್ರಮ ಹಣ ವರ್ಗಾವಣೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ವಿಚಾರಣೆಗೆ ಹಾಜರಾಗುವಂತೆ ಪದೇ ಪದೇ ಸಮನ್ಸ್‌ ನೀಡಿದರೂ ಅವರು ವಿಚಾರಣೆಗೆ ಹಾಜರಾಗಿಲ್ಲ. ಹೀಗಾಗಿ ಇಡಿ ಕೊನೆಗೆ ಅವರನ್ನು ಅರೆಸ್ಟ್‌ ಮಾಡಲೇಬೇಕಾಗಿತ್ತು. ಅದರಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ಹೇಳಿತ್ತು. ಹೀಗಾಗಿ ಕೇಜ್ರಿವಾಲ್‌ ಕೊನೆಗೆ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದರು.

ಅಬಕಾರಿ ನೀತಿ ಪ್ರಕರಣವೇನು?

ಈ ಪ್ರಕರಣವು 2021-22ರ ದೆಹಲಿ ಸರ್ಕಾರದ ಅಬಕಾರಿ ನೀತಿಯನ್ನು ರೂಪಿಸುವಲ್ಲಿ ಮತ್ತು ಕಾರ್ಯಗತಗೊಳಿಸುವಲ್ಲಿ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದೆ. ದೆಹಲಿ ಸರ್ಕಾರವು ನಗರದ ಪ್ರಮುಖ ಮದ್ಯದ ವ್ಯಾಪಾರವನ್ನು ಪರಿಷ್ಕರಿಸುವ ನೀತಿಯನ್ನು ರೂಪಿಸಿದ್ದು, ವ್ಯಾಪಾರಿಗಳಿಗೆ ಪರವಾನಗಿ ಶುಲ್ಕದ ಬದಲಾವಣೆ ಸೇರಿದಂತೆ ಹಲವು ಬದಲಾವಣೆ ಮಾಡಿತ್ತು. ಆದರೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಇದರಲ್ಲಿ ಅಕ್ರಮಗಳನ್ನು ಆರೋಪಿಸಿ ನೀತಿಯ ಬಗ್ಗೆ ಸಿಬಿಐ ತನಿಖೆಗೆ ಕೋರಿದ್ದರು. ನಂತರ ನೀತಿಯನ್ನು ರದ್ದುಗೊಳಿಸಲಾಯಿತು.

ಇದನ್ನೂ ಓದಿ:Char Dham Yatra: ಇಂದಿನಿಂದ ಪವಿತ್ರ ಚಾರ್‌ಧಾಮ್‌ ಯಾತ್ರೆ ಆರಂಭ

ಸಿಬಿಐ ಮತ್ತು ಇಡಿ ಪ್ರಕಾರ, ಎಎಪಿ ನಾಯಕರು ಅಬಕಾರಿ ನೀತಿಯ ಅಡಿಯಲ್ಲಿ ಪರವಾನಗಿ ನೀಡಲು ರಾಜಕಾರಣಿಗಳು ಮತ್ತು ಮದ್ಯದ ಉದ್ಯಮಿಗಳ ಗುಂಪಿನಿಂದ ₹ 100 ಕೋಟಿ ಕಿಕ್‌ಬ್ಯಾಕ್‌ಗಳನ್ನು ಸ್ವೀಕರಿಸಿದ್ದಾರೆ. ಆರೋಪಪಟ್ಟಿಯಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಹೆಸರನ್ನೂ ಉಲ್ಲೇಖಿಸಲಾಗಿದ್ದು, ಅಬಕಾರಿ ನೀತಿ ಪ್ರಕರಣದ ಎಲ್ಲಾ ಆರೋಪಿಗಳು ಅಬಕಾರಿ ನೀತಿಯನ್ನು ರೂಪಿಸಲು ದೆಹಲಿ ಸಿಎಂ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ಹೇಳಲಾಗಿತ್ತು. ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ಜೊತೆಗೆ ಭಾರತ್ ರಾಷ್ಟ್ರ ಸಮಿತಿ (BRS) ನಾಯಕಿ ಕೆ. ಕವಿತಾ ಮತ್ತು ಆಮ್ ಆದ್ಮಿ ಪಕ್ಷದ ಗೋವಾ ಚುನಾವಣೆ ನಿಧಿ ವ್ಯವಸ್ಥಾಪಕ ಚನ್‌ಪ್ರೀತ್ ಸಿಂಗ್ ಅವರನ್ನು ಬಂಧಿಸಲಾಗಿತ್ತು.

ಇದನ್ನೂ ಓದಿ: Arvind Kejriwal: ಕೇಜ್ರಿವಾಲ್‌ ಜಾಮೀನು ಅರ್ಜಿ ಇಂದು ವಿಚಾರಣೆ; ದಿಲ್ಲಿ ಸಿಎಂಗೆ ಜೈಲಾ…? ಬೇಲಾ?

Continue Reading
Advertisement
Rahul gandhi
ದೇಶ2 mins ago

Rahul Gandhi: “ಅದಾನಿ-ಅಂಬಾನಿ… ಕಾಪಾಡಿ..ಕಾಪಾಡಿ ಅಂತಿದ್ದಾರೆ ಪ್ರಧಾನಿ ಮೋದಿ” ; ರಾಹುಲ್‌ ಗಾಂಧಿ ವ್ಯಂಗ್ಯ

Madhavi Latha
ದೇಶ6 mins ago

ಹೈದರಾಬಾದ್ ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಿ, ಮುಸ್ಲಿಂ ಗಲ್ಲಿಗಳಲ್ಲಿ ಪ್ರಚಾರ ಮಾಡಿದ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ

Covishield Vaccine
ಪ್ರಮುಖ ಸುದ್ದಿ16 mins ago

Covishield: ಭಾರತದಲ್ಲೂ ಎಲ್ಲಾ ಕೋವಿಡ್ ಲಸಿಕೆಗಳ ಸೈಡ್‌ ಎಫೆಕ್ಟ್‌ ಪರಿಶೀಲಿಸಿ: ವೈದ್ಯರ ಒತ್ತಾಯ

Kannada New Movie
ಸಿನಿಮಾ32 mins ago

Kannada New Movie: ‘ಗಾಡ್ ಪ್ರಾಮಿಸ್’ ಚಿತ್ರಕ್ಕೆ ಮುನ್ನುಡಿ; ಆನೆಗುಡ್ಡೆ ಗಣಪತಿ ದೇಗುಲದಲ್ಲಿ ಮುಹೂರ್ತ

Aravind Kejriwal
ಪ್ರಮುಖ ಸುದ್ದಿ58 mins ago

Arvind Kejriwal: ಜೂನ್‌ 1ರವರೆಗೆ ಕೇಜ್ರಿವಾಲ್‌ಗೆ ಜಾಮೀನು, ಮತದಾನ ಮುಗಿಯುವವರೆಗೆ ರಿಲೀಫ್‌

KIA bengaluru terminal 2
ಪ್ರಮುಖ ಸುದ್ದಿ1 hour ago

Terminal 2: ಭಾರಿ ಮಳೆಗೆ ಬೆಂಗಳೂರು ವಿಮಾನ ನಿಲ್ದಾಣದ 2ನೇ ಟರ್ಮಿನಲ್‌ ಸೋರಿಕೆ; ವಿಮಾನ ಹಾರಾಟ ಅಸ್ತವ್ಯಸ್ತ

Prajwal Revanna Case Pen drive case personal quarrel No threat to BJP and JDS alliance says R Ashoka
ರಾಜಕೀಯ1 hour ago

Prajwal Revanna Case: ಪೆನ್‌ಡ್ರೈವ್‌ ಕೇಸ್‌ ವೈಯಕ್ತಿಕ ಜಗಳ; ಬಿಜೆಪಿ – ಜೆಡಿಎಸ್‌ ಮೈತ್ರಿಗೆ ಧಕ್ಕೆ ಇಲ್ಲ: ಆರ್.‌ ಅಶೋಕ್‌

Physical Abuse The public prosecutor called the client woman to the lodge
ಕ್ರೈಂ1 hour ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

Roopa Iyer
ಕ್ರೈಂ2 hours ago

Roopa Iyer: ನಿರ್ದೇಶಕಿ ರೂಪಾ ಅಯ್ಯರ್‌ಗೂ ಆನ್‌ಲೈನ್‌ ಕಳ್ಳರ ಕಾಟ; ಅಧಿಕಾರಿಗಳ ಹೆಸರಿನಲ್ಲಿ ಕರೆ ಮಾಡಿ 30 ಲಕ್ಷ ರೂ.ಗೆ ಬೇಡಿಕೆ

Viral video
ಕ್ರೈಂ2 hours ago

Viral Video:ಛೀ.. ಎಂಥಾ ಹೇಯ ಕೃತ್ಯ! ಶಾಲಾ ಬಾಲಕಿ ಮೇಲೆ ಆಟೋ ಚಾಲಕನ ನೀಚ ಕೃತ್ಯ; ಶಾಕಿಂಗ್‌ ವಿಡಿಯೋ ವೈರಲ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Physical Abuse The public prosecutor called the client woman to the lodge
ಕ್ರೈಂ1 hour ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ3 hours ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ4 hours ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ11 hours ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ18 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ19 hours ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ20 hours ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ1 day ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ1 day ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ1 day ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

ಟ್ರೆಂಡಿಂಗ್‌