Site icon Vistara News

Ramadan 2023: ರಂಜಾನ್‌ ವೇಳೆ ಮಸೀದಿಗಳಲ್ಲಿ ಲೌಡ್ ಸ್ಪೀಕರ್ ಬಳಕೆಗೆ ಅನುಮತಿ ಕೋರಿದ ಮುಸ್ಲಿಂ ಮುಖಂಡರು

Muslim leaders seek permission to use loudspeakers in mosques during Ramzan

Muslim leaders seek permission to use loudspeakers in mosques during Ramzan

ಚಿಕ್ಕಮಗಳೂರು: ಜಿಲ್ಲೆಯಲ್ಲಿರುವ ಮಸೀದಿಗಳಲ್ಲಿ ಲೌಡ್ ಸ್ಪೀಕರ್ ಬಳಕೆಗೆ ಅನುಮತಿ ನೀಡುವಂತೆ ಮುಸ್ಲಿಂ ಮುಖಂಡರು ಮನವಿ ಮಾಡಿದ್ದಾರೆ. ಮುಸ್ಲಿಮರಿಗೆ ರಂಜಾನ್ ಮಾಸವು (Ramadan 2023) ಬಹಳ ಪವಿತ್ರ ಮಾಸವಾಗಿರುತ್ತದೆ. ಈ ಸಮಯದಲ್ಲಿ ಶಾಂತಿ, ಸಹಬಾಳ್ವೆ, ದಾನ-ಧರ್ಮ ಉಪವಾಸದೊಂದಿಗೆ ಕಟ್ಟುನಿಟ್ಟಾಗಿ ಪ್ರಾರ್ಥನೆಗಳು ನಡೆಯುತ್ತವೆ. ಹೀಗಾಗಿ ನಮಗೆ ಲೌಡ್‌ ಸ್ಪೀಕರ್‌ ಬಳಕೆಗೆ ಅವಕಾಶ ಕೊಡಿ ಎಂದು ಕೇಳಿದ್ದಾರೆ.

ಇದರ ಜತೆಗೆ ಮುಸಲ್ಮಾನರಿಗೆ ಆಝಾನ್ ಕೂಡ ರಂಜಾನ್ ಆಚರಣೆಯ ಒಂದು ಭಾಗವಾಗಿರುತ್ತದೆ. ಹೀಗಿರುವಾಗ ರಂಜಾನ್ ಉಪವಾಸ ನಡೆಯುವ ಒಂದು ತಿಂಗಳ ಕಾಲ ಬೆಳಗಿನ ಆಝಾನ್‌ ಅನ್ನು ಧ್ವನಿವರ್ಧಕದ ಮೂಲಕ ಹೇಳಲು ಅವಕಾಶ ಮಾಡಿಕೊಡಬೇಕೆಂದು ಜಿಲ್ಲಾಡಳಿತಕ್ಕೆ ಕೋರಲಾಗಿದೆ.

ಇದನ್ನೂ ಓದಿ: CM Basavaraja Bommai : 2 ಗಂಟೆ ಬಂದ್‌ ಎಲ್ಲಾದರೂ ಕೇಳಿದ್ದೀರಾ? ಅದ್ಯಾವ ಸೀಮೆಯ ಬಂದ್‌?; ಸಿಎಂ ಬೊಮ್ಮಾಯಿ ವ್ಯಂಗ್ಯ

ವಿಶೇಷ ಸಂದರ್ಭಗಳು, ಧಾರ್ಮಿಕ ಕಾರ್ಯಕ್ರಮಗಳಿಗೆ, ಕ್ರೀಡಾಕೂಟಗಳಿಗೆ ರಾತ್ರಿ ಹಾಗೂ ಮುಂಜಾನೆ ಧ್ವನಿವರ್ಧಕವನ್ನು ಬಳಸಲು ಅನುಮತಿ ನೀಡಲಾಗುತ್ತದೆ. ಇದೇ ರೀತಿ ಮುಸಲ್ಮಾನರ ಪವಿತ್ರ ರಂಜಾನ್ ಮಾಸದಲ್ಲಿ ಬೆಳಗಿನ ಜಾವ 5ರಿಂದ 5.30ರ ಒಳಗೆ ಗರಿಷ್ಠ 5 ನಿಮಿಷಗಳ ಕಾಲ ಧ್ವನಿವರ್ಧಕದ ಮೂಲಕ ಆಝಾನ್‌ ನೀಡಲು ಅನುಮತಿ ನೀಡಬೇಕೆಂದು ಮನವಿ ಮಾಡಿದ್ದಾರೆ.‌

ಬೆಂಗಳೂರು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version