ರಾಮಾಯಣ ಸರ್ಕ್ಯೂಟ್‌ನಂತೆ ಪಂಚ ಆತ್ಮಲಿಂಗಗಳ ದರ್ಶನಕ್ಕೂ ಬೇಕಿದೆ ಸರ್ಕ್ಯೂಟ್ ಯೋಜನೆ - Vistara News

ಉತ್ತರ ಕನ್ನಡ

ರಾಮಾಯಣ ಸರ್ಕ್ಯೂಟ್‌ನಂತೆ ಪಂಚ ಆತ್ಮಲಿಂಗಗಳ ದರ್ಶನಕ್ಕೂ ಬೇಕಿದೆ ಸರ್ಕ್ಯೂಟ್ ಯೋಜನೆ

ಉತ್ತರ ಕನ್ನಡ ಜಿಲ್ಲೆಯಲ್ಲಿಯೇ ಆತ್ಮಲಿಂಗಕ್ಕೆ (Atmalinga) ಸಂಬಂಧಿಸಿದಂತೆ ಪಂಚ ಕ್ಷೇತ್ರಗಳಿದ್ದು, ಇವುಗಳನ್ನು ಒಂದೇ ದಿನದಲ್ಲಿ ದರ್ಶಿಸಲು ಅವಕಾಶ ಮಾಡಿಕೊಡುವ “ಸರ್ಕ್ಯೂಟ್ʼʼ ಯೋಜನೆಯೊಂದನ್ನು ರೂಪಿಸಬೇಕಿದೆ.

VISTARANEWS.COM


on

Atmalinga
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
ಪೆಟ್ರೊಲ್

ಡಾ. ರವಿಕಿರಣ ಪಟವರ್ಧನ, ಶಿರಸಿ
ಮರ್ಯಾದಾ ಪುರುಷೋತ್ತಮ ಶ್ರೀ ರಾಮ ಓಡಾಡಿದ 15 ಪುಣ್ಯ ಕ್ಷೇತ್ರಗಳನ್ನು ಒಮ್ಮೆಲೆ ದರ್ಶಿಸಲು ಅವಕಾಶ ಮಾಡಿಕೊಡುವ “ರಾಮಾಯಣ ಸರ್ಕ್ಯೂಟ್” ಎಂಬ ಯೋಜನೆಯನ್ನು ಕೇಂದ್ರ ಪ್ರವಾಸೋದ್ಯಮ ಇಲಾಖೆ ರೂಪಿಸಿರುವಂತೆಯೇ ನಮ್ಮ ರಾಜ್ಯದಲ್ಲಿಯೂ “ಮಹಾದೇವ ಆತ್ಮಲಿಂಗ (Atmalinga) ದರ್ಶನ ಸರ್ಕ್ಯೂಟ್‌ʼʼ ರೂಪಿಸಲು ಅವಕಾಶವಿದೆ. ಇದರಿಂದ ಶಿವನ ಭಕ್ತರು ಒಮ್ಮೆಗೆ ಆತ್ಮಲಿಂಗಕ್ಕೆ ಸಂಬಂಧಿಸಿದ ಪಂಚ ದೇಗುಲಗಳಿಗೆ ತರಳಿ ಮಹಾಬಲೇಶ್ವರದ ದರ್ಶನ ಮಾಡಬಹುದಾಗಿದೆ.

ಗೋಕರ್ಣದ ಮಹಾಬಲೇಶ್ವರನ ಆತ್ಮಲಿಂಗ ದರ್ಶನ ಮಾಡಿದವರು ಅದೇ ದಿನ ಸಂಜೆಯೊಳಗೆ ಕಾರವಾರದ ಸಜ್ಜೇಶ್ವರ, ಕುಮಟಾ ತಾಲೂಕಿನ ಧಾರೇಶ್ವರ, ಹೊನ್ನಾವರ ತಾಲೂಕಿನ ಗುಣವಂತೇಶ್ವರ, ಭಟ್ಕಳ ತಾಲೂಕಿನ ಮುರ್ಡೇಶ್ವರ ಈ ಪಂಚ ಕ್ಷೇತ್ರಗಳ ದರ್ಶನ ಪಡೆದರೆ ಸಿದ್ಧಿ ಲಭಿಸುತ್ತದೆ ಎಂಬ ನಂಬಿಕೆ ಇದೆ. ಆದರೆ ಬಹುತೇಕ ಭಕ್ತರಿಗೆ ಸದ್ಯ ಒಂದೇ ದಿನ ಈ ಪಂಚ ಕ್ಷೇತ್ರಗಳ ದರ್ಶನ ಸಾಧ್ಯವಾಗುತ್ತಿಲ್ಲ. ಇದಕ್ಕೆ ವ್ಯವಸ್ಥೆ ಮಾಡಿ, ಪ್ರಚಾರ ಮಾಡಿದಲ್ಲಿ ಇಲ್ಲಿಯ ಪ್ರವಾಸೋದ್ಯಮಕ್ಕೂ ಬೂಸ್ಟ್‌ ದೊರೆಯಲಿದೆ.

ಪಂಚ ಕ್ಷೇತ್ರಗಳ ಇತಿಹಾಸವೇನು?
ಒಂದು ಬಾರಿ ರಾವಣ ಸುದೀರ್ಘ‌ ತಪಸ್ಸಿನ ಮೂಲಕ ಪರಮೇಶ್ವರನನ್ನು ಮೆಚ್ಚಿಸಿ ಆತ್ಮಲಿಂಗವನ್ನು ನೀಡುವಂತೆ ಕೇಳಿಕೊಳ್ಳುತ್ತಾನೆ. ಆತನ ಬೇಡಿಕೆಯನ್ನು ಮನ್ನಿಸಿದ ಶಿವ, ಆತ್ಮಲಿಂಗವನ್ನು ದಾರಿ ಮಧ್ಯದಲ್ಲಿ ಎಲ್ಲಿಯೂ ಭೂಸ್ಪರ್ಷ ಮಾಡದಂತೆ ತಿಳಿಸಿ ಆತನಿಗೆ ನೀಡುತ್ತಾನೆ. ರಾವಣನಿಗೆ ಶಿವ ಆತ್ಮಲಿಂಗವನ್ನು ನೀಡಿದ ವಿಚಾರವನ್ನು ತಿಳಿದ ದೇವತೆಗಳು, ತನ ಬಲ ಹೆಚ್ಚಿ ಇನ್ನೇನು ಕೆಡುಕಾಗುವುದೋ ಎಂದು ಭಯಭೀತರಾಗುತ್ತಾರೆ. ಈ ಸಮಸ್ಯೆಗೆ ಮುಕ್ತಿ ಹಾಡುವಂತೆ ಶಿವ ಪುತ್ರ ಗಣೇಶನ ಮೊರೆ ಹೋಗುತ್ತಾರೆ. ದೇವತೆಗಳ ಕೂಗನ್ನಾಲಿಸಿದ ಗಣೇಶ, ಬಾಲ ಗಣಪತಿಯಾಗಿ ಅವರ ಸಮಸ್ಯೆಯನ್ನು ಪರಿಹರಿಸುವ ಭರವಸೆ ನೀಡುತ್ತಾನೆ. ಇತ್ತ ಆತ್ಮಲಿಂಗವನ್ನು ಹೊತ್ತುನಡೆದ ಮಹಾ ಬ್ರಾಹ್ಮಣ ರಾವಣನಿಗೆ ಸಂಧ್ಯಾವಂದನೆಗೆ ಸಮಯವಾಗುತ್ತದೆ.

ಅದೇ ಸಮಯದಲ್ಲಿ ಬಾಲ ಗಣಪತಿ ಅದೇ ಹಾದಿಯಲ್ಲಿ ಬರುತ್ತಾನೆ. ರಾವಣನೂ ಆತ್ಮಲಿಂಗವನ್ನು ಹಿಡಿದು ನಿಲ್ಲುವುದಕ್ಕಾಗಿ ಜನರನ್ನು ಹುಡುಕು ತ್ತಿರುತ್ತಾನೆ. ಗಣಪತಿಯನ್ನು ಕಂಡ ರಾವಣ ಆತನಲ್ಲಿ ಆತ್ಮಲಿಂಗವನ್ನು ನೀಡಿ ತಾನು ಆದಷ್ಟು ಬೇಗ ಸಂಧ್ಯಾವಂದನೆ ಮುಗಿಸಿ ಬರುವುದಾಗಿ ತಿಳಿಸುತ್ತಾನೆ. ಅದಕ್ಕೊಪ್ಪಿದ ಬಾಲ ಗಣಪ ತಾನು ಹತ್ತು ಎಣಿಸುವುದರೊಳಗಾಗಿ ಇಲ್ಲಿರಬೇಕು ಇಲ್ಲವಾದಲ್ಲಿ ಆತ್ಮಲಿಂಗವನ್ನು ಇಲ್ಲಿಯೇ ಇಟ್ಟು ಹೋಗುವುದಾಗಿ ತಿಳಿಸುತ್ತಾನೆ. ಅದಕ್ಕೊಪ್ಪಿದ ರಾವಣ ಸಂಧ್ಯಾವಂದನೆಗೆಂದು ನೀರಿಗಿಳಿಯುತ್ತಾನೆ.

ಇತ್ತ ಗಣಪತಿ ರಾವಣನಿಗೆ ಕೇಳಿಸುವಂತೆ ಸಂಖ್ಯೆಗಳನ್ನು ಎಣಿಸುತ್ತಾನೆ. ಉಪಾಯವಾಗಿ ಕೊನೆಯಲ್ಲಿ ಸಂಖ್ಯೆಯನ್ನು ವೇಗವಾಗಿ ಎಣಿಸಿ ಹತ್ತು ಎನ್ನುತ್ತಾನೆ. ಲಿಂಗವನ್ನು ನೆಲದಲ್ಲಿಟ್ಟು ಅಲ್ಲಿಂದ ತೆರಳುತ್ತಾನೆ. ರಾವಣ ನೀರಿನಿಂದ ಮೇಲೆ ಬಂದು ನೋಡುತ್ತಾನೆ. ಆತ್ಮಲಿಂಗ ಅಲ್ಲಿಯೇ ಪ್ರತಿಷ್ಠಾಪನೆಯಾಗಿದೆ. ಆ ಕ್ಷೇತ್ರವೇ ಗೋಕರ್ಣ. ಆಗ ಪರಮೇಶ್ವರನ ಪರಮಭಕ್ತನಾದಂತಹ ರಾವಣ ಈ ಆತ್ಮ ಲಿಂಗವನ್ನು ಎತ್ತಲು ಪ್ರಯತ್ನಿಸುತ್ತಾನೆ, ಆದರೆ ಸಾಧ್ಯವಾಗುವುದಿಲ್ಲ. ಮಹಾಬಲಶಾಲಿಯಾದ ರಾವಣನ ಪ್ರಯತ್ನದಿಂದಾಗಿ ಕೈಗೆ ಆತ್ಮಲಿಂಗದ ಭಾಗಗಳನ್ನು ಕಾರವಾರದ ಶೇಜವಾಡ, ಕುಮಟಾದ ಧಾರೇಶ್ವರ, ಹೊನ್ನಾವರದ ಗುಣವಂತೆ ಮತ್ತು ಮುರುಡೇಶ್ವರದಲ್ಲಿ ಎಸೆಯುತ್ತಾನೆ. ಹೀಗಾಗಿ ಈ ಐದು ಕ್ಷೇತ್ರಗಳಿಗೂ ಆತ್ಮಲಿಂಗಕ್ಕೂ ಸಂಬಂಧವಿದೆ.

ಇತಿಹಾಸ ಪ್ರಸಿದ್ಧ ಸ್ಥಳ

ನಮ್ಮ ಭಾರತ ದೇಶದಲ್ಲಿನ ಅತ್ಯಂತ ಪ್ರಾಚೀನವಾದ ಶೈವ ಕ್ಷೇತ್ರಗಳಲ್ಲಿ ಗೋಕರ್ಣ ಕೂಡ ಒಂದು. ಪವಿತ್ರವಾದ ಯಾತ್ರಾಸ್ಥಳಗಳಾದ ವಾರಣಾಸಿ ಹಾಗೂ ರಾಮೇಶ್ವರದಷ್ಟೇ ಮಹತ್ವ ಪಡೆದಿದೆ.

ಗೋಕರ್ಣ ಕ್ಷೇತ್ರದ ಸುತ್ತ ಅರೇಬಿಯಾ ಸಮುದ್ರವಿದ್ದು, ಪ್ರಕೃತಿ ರಮಣೀಯತೆಯಿಂದ ಎಲ್ಲರನ್ನೂ ಆಕರ್ಷಿಸುತ್ತಿದೆ. ಈ ಪುಣ್ಯ ಕ್ಷೇತ್ರ ರಾಮಾಯಾಣ ಹಾಗೂ ಮಹಾ ಭಾರತದಲ್ಲಿಯೂ ಉಲ್ಲೇಖಗೊಂಡಿವೆ. ಈ ರೀತಿಯ ಮಹತ್ವದ ದೇವಾಲಯ ನಮ್ಮ ರಾಜ್ಯದಲ್ಲಿರುವುದು ಹೆಮ್ಮೆಯ ವಿಷಯ. ಆದರೆ ವಾರಣಾಸಿ ಹಾಗೂ ರಾಮೇಶ್ವರದಷ್ಟು ಈ ಕ್ಷೇತ್ರ ಪ್ರಚಾರ ಪಡೆದಿಲ್ಲ.

ಭೋಲೆನಾಥನ ಈ ಆತ್ಮಲಿಂಗದ ಪಂಚ ಕ್ಷೇತ್ರಗಳ ಪ್ರವಾಸವನ್ನು ಶೇಜವಾಡನಿಂದ ಪ್ರಾರಂಭಿಸಿ ಗೋಕರ್ಣ, ಗುಣವಂತೆ, ಧಾರೇಶ್ವರ, ಮುರುಡೇಶ್ವರ ಹೀಗೆ ಒಟ್ಟು ಐದು ಕ್ಷೇತ್ರಗಳಿಗೆ ಭೇಟಿ ನೀಡಲು 150 ಕಿಲೋ ಮೀಟರ್ ಪ್ರಯಾಣಿಸಬೇಕಾಗುತ್ತದೆ. ಈ ಕೆಲಸವನ್ನು ಮಾಡಲು “ಆತ್ಮಲಿಂಗ ಸರ್ಕ್ಯೂಟ್ʼʼ ರೂಪಿಸುವುದು ಬಹಳ ಅವಶ್ಯವಾಗಿದೆ.

atmalinga

ಪಂಚ ಆತ್ಮಲಿಂಗ ಕ್ಷೇತ್ರಗಳು
1. ಗೋಕರ್ಣ
ಭೂ ಕೈಲಾಸ, ಪರಶುರಾಮ ಭೂಮಿ, ಶ್ರೀ ಕ್ಷೇತ್ರ ಗೋಕರ್ಣ ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನಲ್ಲಿದೆ. ಕಾಶಿ, ರಾಮೇಶ್ವರದಷ್ಟೇ ಪವಿತ್ರ ಸ್ಥಳ ಎಂದು ಭಕ್ತರು ಭಾವಿಸುತ್ತಾರೆ. ಕಡಲತೀರದ ಈ ಸ್ಥಳ ಸುಂದರವಾಗಿದೆ.

atmalinga

2. ಶೆಜ್ಜೇಶ್ವರ
ಕಾರವಾರಕ್ಕೆ ಸಮೀಪದ ಶೇಜವಾಡದ ಶೆಜ್ಜೇಶ್ವರ. ಶಿವನ ಆತ್ಮಲಿಂಗದಿಂದ ರೂಪುತಳೆದ ಪಂಚಲಿಂಗೇಶ್ವರಗಳಲ್ಲಿ ಶೇಜವಾಡದ ಶೆಜ್ಜೇಶ್ವರನೇ ಪ್ರಥಮ ಲಿಂಗವೆಂದು ಹೇಳಲಾಗುತ್ತದೆ. ಹೀಗಾಗಿ ಶೇಜವಾಡವು ಭಕ್ತರ ಪಾಲಿಗೆ ಗೋಕರ್ಣದಷ್ಟೇ ಪವಿತ್ರ ಕ್ಷೇತ್ರವಾಗಿದೆ. ಸಂಪೂರ್ಣ ಕಲ್ಲಿನಿಂದಲೇ ನಿರ್ಮಾಣವಾಗಿರುವ ಗರ್ಭಗುಡಿಯಲ್ಲಿ ಅಂದಾಜು 7 ಅಡಿ ಎತ್ತರದ ಲಿಂಗವಿದೆ. ಆರಂಭದಲ್ಲಿ ಶೆಜ್ಜೇಶ್ವರನನ್ನು ಸಂಪುಟೇಶ್ವರ ಎಂಬ ಹೆಸರಿನಿಂದ ಕರೆಯಲಾಗುತ್ತಿತ್ತು. ಲಿಂಗದ 20 ಅಡಿ ಆಳದಲ್ಲಿ ಆತ್ಮಲಿಂಗದ ಭಾಗವಿದೆ. 20 ಅಡಿ ಕೆಳಗಿಳಿಯಲು ಮೆಟ್ಟಿಲುಗಳೂ ಇವೆ.

atmalinga

3. ಮುರುಡೇಶ್ವರ
ಗೋಕರ್ಣದ ಸುತ್ತಮುತ್ತಲಿನ ಪಂಚಲಿಂಗಂ ದೇವಾಲಯಗಳಲ್ಲಿ ಮುರುಡೇಶ್ವರ ದೇವಾಲಯ ಕೂಡ ಒಂದು. ಕಂಡುಕಾಗಿರಿ ಶಿಖರದಲ್ಲಿರುವ ಮುರುಡೇಶ್ವರ ದೇವಾಲಯ ಮತ್ತು ರಾಜಗೋಪುರ ಮುರುಡೇಶ್ವರದ ಪ್ರಮುಖ ಆಕರ್ಷಣೆಯಾಗಿದೆ. ಈ ದೇವಾಲಯವು ಮೂರು ಕಡೆಗಳಿಂದಲೂ ಸಮುದ್ರದಿಂದ ಸುತ್ತುವರೆದಿದೆ. ಶಿವನಿಗೆ ಅರ್ಪಿತವಾದ 123 ಅಡಿ ಉದ್ದದ ಶಿವನ ಪ್ರತಿಮೆ ಹಾಗೂ ಶಿವಲಿಂಗವನ್ನೂ ಈ ದೇವಾಲಯದಲ್ಲಿ ನಾವು ಕಾಣಬಹುದು. ಶಿವನ ದೈತ್ಯ ವಿಗ್ರಹವು ಅತ್ಯಂತ ಜನಪ್ರಿಯವಾಗಿದೆ. ನೇಪಾಳದ ಕೈಲಾಸನಾಥ ಮಹಾದೇವ ಪ್ರತಿಮೆಯ ನಂತರ ವಿಶ್ವದ ಎರಡನೇ ಅತಿ ಎತ್ತರದ ಶಿವ ಪ್ರತಿಮೆ ಇದು ಎಂದು ಹೇಳಲಾಗುತ್ತದೆ.
ರಾಜ ಗೋಪುರ ಎಂದರೆ ‘ಕಿಂಗ್ ಆಫ್ ಟವರ್ಸ್’ ಮುರುಡೇಶ್ವರದ ಮತ್ತೊಂದು ಪ್ರಮುಖ ಆಕರ್ಷಣೆ. ರಾಜ ಗೋಪುರದಲ್ಲಿ 20 ಮಹಡಿಗಳಿದ್ದು, ಜನರು ಲಿಫ್ಟ್‌ಗಳನ್ನು ಬಳಸುವ ಮೂಲಕ ಗೋಪುರದ ಮೇಲ್ಭಾಗವನ್ನೂ ತಲುಪಬಹುದು. ಗೋಪುರದ ಕೊನೆಯ ಮಹಡಿಯಲ್ಲಿ ನಿಂತು ನೋಡಿದರೆ ನಾವು ಮುರುಡೇಶ್ವರದ ಸಂಪೂರ್ಣ ಸೌಂದರ್ಯವನ್ನು ಸವಿಯಬಹುದು. ಗೋಪುರದ ತುದಿಗೆ ಹೋಗುತ್ತಿದ್ದಂತೆ ಆಕಾಶದಲ್ಲಿ ಹಾರಾಡುತ್ತಿರುವ ಅನುಭವವಾಗುತ್ತದೆ. ಅತಿ ದೊಡ್ಡ ಶಿವನ ಪ್ರತಿಮೆಯೂ ಕೂಡ ಹತ್ತಿರದಲ್ಲಿರುವಂತೆ ಕಾಣುತ್ತದೆ.

atmalinga

4. ಸಿದ್ಧಿಪ್ರದಾಯಕ ಗುಣವಂತೆ ಶಭುಲಿಂಗೇಶ್ವರ
ಹೊನ್ನಾವರ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊನ್ನಾವರ ಪಟ್ಟಣದಿಂದ 10 ಕಿ.ಮೀ. ದೂರದಲ್ಲಿ ಈ ಶಂಭುಲಿಂಗೇಶ್ವರ ದೇವಸ್ಥಾನವಿದ್ದು. “ಗುಣವಂತೇಶ್ವರʼʼ ಎಂದೇ ಪ್ರಸಿದ್ಧಿ ಪಡೆದಿದೆ. ಗುಣವಂತೆಯ ಶಂಭುಲಿಂಗೇಶ್ವರ ಅಭಿಷೇಕ ಪ್ರಿಯ. ದೇವರಿಗೆ ಅಭಿಷೇಕ ಮಾಡಿಸಿದರೆ ಕಾರ್ಯ ಸಿದ್ಧ್ದಿಯಾಗುತ್ತದೆ ಎಂಬ ನಂಬಿಕೆ ಭಕ್ತರ ವಲಯದಲ್ಲಿದೆ. ನೀರಿನ ಅಭಿಷೇಕ, ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ಎಳನೀರಿನ ಅಭಿಷೇಕ ಮುಂತಾದವುಗಳನ್ನು ಭಕ್ತರು ಹರಕೆಯಾಗಿ ಸಲ್ಲಿಸುತ್ತಾರೆ.
ಮನೋಭಿಲಾಷೆಗಳ ಈಡೇರಿಕೆಗೆ ಅಭಿಷೇಕದ ಹರಕೆ ಸಲ್ಲಿಸುವ ಸಂಪ್ರದಾಯ ಬಹಳ ಹಿಂದಿನಿಂದ ನಡೆದುಕೊಂಡು ಬಂದಿದ್ದು, ದೇವಾಲಯದ ಮುಂಭಾಗದಲ್ಲಿಕೊಳವಿದೆ. ಇಲ್ಲಿ ಸ್ನಾನ ಮಾಡಿದರೆ ಚರ್ಮರೋಗ ಗುಣವಾಗುತ್ತದೆ ಎಂದೂ ಭಕ್ತರು ನಂಬಿದ್ದಾರೆ. ಶಿವರಾತ್ರಿಯಂದು ನಾನಾ ಭಾಗಗಳಿಂದ ಭಕ್ತರು ಆಗಮಿಸಿ ದೇವರಿಗೆ ಅಭಿಷೇಕ ಮಾಡಿ ಕೃತಾರ್ಥರಾಗುತ್ತಾರೆ.

5. ಧಾರೇಶ್ವರ
ಧಾರೇಶ್ವರ ಕ್ಷೇತ್ರವೂ ಗೋಕರ್ಣದ ಸಮೀಪದಲ್ಲೇ ಇದೆ. ಉತ್ತರಕನ್ನಡ ಜಿಲ್ಲೆಯ ಪ್ರಮುಖ ತಾಲ್ಲೂಕು ಕೇಂದ್ರ ಕುಮಟಾದಿಂದ ಐದೇ ಕಿಲೋಮೀಟರ್‌ ದೂರದಲ್ಲಿ ಈ ದೇಗುಲವಿದ್ದು, ಇದು ಜಿಲ್ಲೆಯ ಅತಿ ಪುರಾತನ ದೇವಾಲಯ ಎಂದು ಹೆಸರಾಗಿದೆ. ದೇಗುಲದ ನವರಂಗಕ್ಕೆ ಮೂರು ಕಡೆಯಿಂದಲೂ ಪ್ರವೇಶಿಸಲು ಅನುಕೂಲವಾಗುವಂತೆ ಬಾಗಿಲುಗಳಿವೆ. ಒರಗಿಕೊಳ್ಳಲು ಕಕ್ಷಾಸನ. ಅದನ್ನು ಆಧರಿಸಿದ ಕಿರುಕಂಬಗಳೂ ನವರಂಗವನ್ನು ಅಲಂಕರಿಸಿದ ದೊಡ್ಡಕಂಬಗಳೂ ಸೊಗಸಾದ ಕೆತ್ತನೆಯಿಂದ ಕೂಡಿವೆ. ಬುಡದಲ್ಲಿ ಚಚ್ಚೌಕವಾಗಿರುವ ಕಂಬಗಳನ್ನು ತಿರುಗಣೆಯ ಯಂತ್ರದಲ್ಲಿ ದುಂಡಗೆ ವಿನ್ಯಾಸಗೊಳಿಸಿ ಬಗೆಬಗೆಯ ಚಿತ್ತಾರಗಳನ್ನು ಕೆತ್ತಿರುವ ರೀತಿ ಮನಸೆಳೆಯುತ್ತದೆ.
ಗರ್ಭಗುಡಿಯಲ್ಲಿ ಶಿವಲಿಂಗವಿದ್ದು, ಇದೇ ಧಾರೇಶ್ವರನೆಂಬ ಹೆಸರು ಪಡೆದ ರೂಪ. ಒಳಗುಡಿಯಲ್ಲಿ ಶಿವನಿಗೆ ಅಭಿಮುಖವಾಗಿರುವ ನಂದಿಯಿದೆ. ಇಲ್ಲಿಯೇ ಹಲವು ಪ್ರಾಚೀನ ವಿಗ್ರಹಗಳಿರುವುದನ್ನು ಗಮನಿಸಬಹುದು. ಒಂದೆಡೆ ವೇಣುಗೋಪಾಲನ ವಿಗ್ರಹ. ಕೊಳಲು ನುಡಿಸುತ್ತಿರುವ ಕೃಷ್ಣನ ಸುತ್ತ ಗೋಪಿಕೆಯರೂ ದನಕರುಗಳೂ ಗೊಲ್ಲರೂ ಇದ್ದಾರೆ. ಇನ್ನೊಂದು ಪ್ರತಿಮೆ- ಶಂಖಚಕ್ರಗದಾಧಾರಿಯಾದ ವಿಷ್ಣುವಿನದು. ಪ್ರತ್ಯೇಕ ಗೂಡುಗಳಲ್ಲಿ ಗಣೇಶ, ಸರಸ್ವತಿಯರ ಪ್ರತಿಮೆಗಳಿವೆ. ಎಡತೊಡೆಯನ್ನೂ ಬಲಪಾದವನ್ನೂ ನೆಲಕ್ಕೂರಿ ಕುಳಿತ ಗಣಪತಿಯ ವಿಗ್ರಹ ಮೋಹಕವಾಗಿದೆ. ಗಣಪತಿ ತೊಟ್ಟ ಆಭರಣಗಳು, ಸೊಂಟಕ್ಕೆ ಸುತ್ತಿದ ಹಾವು, ಪಾದದೆಡೆಯ ಇಲಿ- ಎಲ್ಲವೂ ಸೊಗಸಾಗಿ ಚಿತ್ರಿತವಾಗಿವೆ. ಕೈಗಳಲ್ಲಿ ಜಪಮಾಲೆ, ಪುಸ್ತಕಗಳನ್ನು ಹಿಡಿದು ವರದಹಸ್ತೆಯಾಗಿರುವ ಸರಸ್ವತಿಯ ವಿಗ್ರಹವೂ ಸುಂದರವಾಗಿದೆ.ಆ ಕಾಲದ ಶಿಲ್ಪಗಳ ರೂಪರೇಖೆಗಳೇ ಮುಂದಿನ ಹೊಯ್ಸಳಶಿಲ್ಪಗಳಿಗೆ ಮಾದರಿಯಾಗಿದ್ದರೆ ಅಚ್ಚರಿಯಿಲ್ಲ.

atmalinga

ಧಾರೇಶ್ವರ ದೇಗುಲದ ಆವರಣದಲ್ಲಿ ಒಂದು ಕೊಳವೂ ಇದೆ. ಇಲ್ಲೇ ಬದಿಯಲ್ಲಿ ಹಲವು ಶಾಸನಗಳನ್ನೂ ವೀರಗಲ್ಲುಗಳನ್ನೂ ಇರಿಸಿದ್ದು, ಶಾಸನದಲ್ಲಿ ರಾಣಿಯೊಬ್ಬಳು ಗೋದಾನ ನೀಡುತ್ತಿರುವುದರ ಸಚಿತ್ರ ವಿವರಣೆಯಿದೆ. ಬರಹವಲ್ಲದೆ ನಾಲ್ಕು ಸ್ತರದ ಚಿತ್ರಣವಿರುವ ಈ ಶಾಸನದಲ್ಲಿ ಅನುಕ್ರಮವಾಗಿ ರಾಜರಾಣಿಯರು ದೇಗುಲದಲ್ಲಿ ಶಿವಲಿಂಗಕ್ಕೆ ಅಭಿಷೇಕ ಮಾಡುತ್ತಿರುವ ದೃಶ್ಯ, ರಾಜರಾಣಿಯರು ಪರಿವಾರದೊಡನಿರುವ ಚಿತ್ರ, ಯೋಧರ ಸಾಲು ಹಾಗೂ ರಾಣಿಯು ದನಕರುಗಳನ್ನು ಯಾಚಕರಿಗೆ ದಾನವಾಗಿ ನೀಡುತ್ತಿರುವುದರ ಚಿತ್ರನಿರೂಪಣೆ ಸೊಗಸಾಗಿ ಮೂಡಿಬಂದಿದೆ. ಇಂತಹ ವಿಶಿಷ್ಟ ಶಾಸನ ಬೇರೆಲ್ಲೂ ಕಂಡುಬರುವುದಿಲ್ಲವೆಂಬುದು ವಿಶೇಷ. ಇದಲ್ಲದೆ ಹಲವು ವೀರಗಲ್ಲುಗಳನ್ನೂ ಇಲ್ಲಿ ಕಾಣಬಹುದು.

ಇದನ್ನೂ ಓದಿ | Mahalaya 2022 | ಪಿತೃಕಾರ್ಯಗಳಿಗೆ ಹೆಸರಾದ ರಾಜ್ಯದ ತೀರ್ಥಕ್ಷೇತ್ರಗಳು ಯಾವವು ಗೊತ್ತೇ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Karnataka Rain : ರಾಜ್ಯದಲ್ಲಿ ಮಳೆ ಅವಾಂತರವು (Rain news) ಮುಂದುವರಿದಿದೆ. ಭಾರಿ ಮಳೆಗೆ ಹಲವೆಡೆ ಮರಗಳು ಉರುಳಿದ್ದರೆ, ಬೆಳೆಗೆಳು ನೆಲಸಮವಾಗಿತ್ತು. ಇತ್ತ ವಿದ್ಯುತ್‌ ಸಂಪರ್ಕ ಇಲ್ಲದೆ ರೋಗಿಗಳಿಗೆ ವೈದ್ಯರು ಕತ್ತಲಲ್ಲೇ ಚಿಕಿತ್ಸೆ ಕೊಡುವಂತೆ ಆಯಿತು. ಮನೆಗಳಿಗೆ ಮಳೆ ನೀರಿನ ಜತಗೆ ಚರಂಡಿ ನೀರು ನುಗ್ಗಿತ್ತು.ರಸ್ತೆ ಎಲ್ಲವೂ ಕೆರೆಯಂತಾಗಿತ್ತು.

VISTARANEWS.COM


on

By

Karnataka Rain
Koo

ಬೆಂಗಳೂರು/ಚಿತ್ರದುರ್ಗ: ರಾಜ್ಯದ ಹಲವೆಡೆ ವರುಣಾರ್ಭಟಕ್ಕೆ ಅವಾಂತರವೇ (Karnataka Rain ) ಸೃಷ್ಟಿಯಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ (Karnataka weather) ಕರೆಂಟ್ ಕಟ್ ಆಗಿದ್ದು, ದೀಪದ ಬೆಳಕಿನಲ್ಲಿ ವೈದ್ಯರು ರೋಗಿಗಳಿಗೆ ಚಿಕಿತ್ಸೆ ನೀಡಿದ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕು ಆಸ್ಪತ್ರೆಯಲ್ಲಿ ಒಂದು ವಾರದಿಂದ ಜನರೇಟರ್ ಕೆಟ್ಟು ಹೋಗಿದ್ದು, ಸರಿಪಡಿಸದೇ ಅಧಿಕಾರಿಗಳು ಸುಮ್ಮನಾಗಿದ್ದಾರೆ. ಸೋಮವಾರ ರಾತ್ರಿ ಸುರಿದ ಮಳೆಯಿಂದ (rain News) ಆಸ್ಪತ್ರೆಯಲ್ಲಿ ವಿದ್ಯುತ್ ಸಂಪರ್ಕ ಇಲ್ಲದೇ ರೋಗಿಗಳಿಗೆ ಮೇಣದ ಬತ್ತಿ ಹಿಡಿದು ವೈದ್ಯರು ಚಿಕಿತ್ಸೆ ನೀಡಿದ್ದಾರೆ.

ಕುಮಟಾದಲ್ಲಿ ಮಳೆಗೆ ಮನೆ ಮೇಲೆ ಬಿದ್ದ ಬೃಹತ್‌ ಮರ

ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ದೇವರಹಕ್ಕಲ ಗ್ರಾಮದಲ್ಲಿ ಮಳೆಗೆ ಭಾರೀ ಗಾತ್ರದ ಮರ ಬಿದ್ದು ಮನೆಗೆ ಹಾನಿಯಾಗಿದೆ. ಲಲಿತಾ ನಾಯ್ಕ ಎಂಬುವವರ ಮನೆಯ ಮೇಲೆ ಮರ ಬಿದ್ದ ಪರಿಣಾಮ ಎದುರಿದ್ದ ಸ್ಕೂಟಿ ಜಖಂಗೊಂಡಿದೆ. ಮನೆಯ ಮುಂಭಾಗದ ಕೋಣೆಯ ಚಾವಣಿ ಹಾನಿಯಾಗಿದೆ. ಮರ ಬಿದ್ದ ಪರಿಣಾಮ ಸ್ಕೂಟಿ, ಮನೆ ಸೇರಿ ಲಕ್ಷಾಂತರ ರೂಪಾಯಿ ಹಾನಿಯಾಗಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣ ಹಾನಿ ಆಗಿಲ್ಲ. ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಿಕ್ಕಮಗಳೂರಲ್ಲಿ ಕೆರೆ ಏರಿ ತುಂಡು

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಅವಾಂತರ ಮುಂದುವರೆದಿದೆ. ಮಳೆಯ ಆರ್ಭಟಕ್ಕೆ ಕೆರೆಯ ಏರಿ ಹೊಡೆದು ನೀರು ಪೋಲಾಗಿದೆ. ಕಡೂರು ತಾಲೂಕಿನ ಗೌಡನ ಕಟ್ಟೆ ಗ್ರಾಮದಲ್ಲಿರುವ ಗೌಡನಕಟ್ಟೆ ಕೆರೆಯು ಕಳೆದ ಮೂರು ನಾಲ್ಕು ದಿನಗಳಿಂದ ಸುರಿದ ಮಳೆಗೆ ಭರ್ತಿಯಾಗಿದೆ. ಪರಿಣಾಮ ಕೆರೆ ಏರಿ ತುಂಡಾಗಿ ಪಿ ಕೋಡಿಹಳ್ಳಿ ಕೆರೆಗೆ ನೀರು ಹರಿವು ಹೆಚ್ಚಾಗಿದೆ. ಭಾರಿ ಪ್ರಮಾಣದ ನೀರಿನ ಒತ್ತಡ ತಡೆಯಲಾಗದೆ ಕೆರೆ ಏರಿ ಹಿಂಭಾಗದ ತೋಟ ಜಮೀನುಗಳು ಜಲಾವೃತಗೊಂಡಿತ್ತು.

ಕಾರುಗಳ ಮೇಲೆ ಬಿದ್ದ ಮರ; ಅಪಾಯದಿಂದ ಪಾರಾದ ತಾಯಿ-ಮಗ

ದಾವಣಗೆರೆ ಆಶೋಕ್ ಟಾಕೀಸ್ ಬಳಿ ಚಲಿಸುತ್ತಿದ್ದ ಕಾರುಗಳ ಮೇಲೆ ಮರವೊಂದು ಬಿದ್ದಿತ್ತು. ಪರಿಣಾಮ ಡಸ್ಟರ್ ಕಾರು ನಜ್ಜುಗುಜ್ಜಾಗಿತ್ತು. ಡಸ್ಟರ್‌ ಕಾರು ಚಾಲಕ ಹಾಗೂ ಮತ್ತೊಂದು ಕಾರಿನಲ್ಲಿದ್ದ ಚಿಕ್ಕ ಮಗು ಹಾಗು ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದರು. ಘಟನಾ ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಕ್ರೇನ್ ಮೂಲಕ ಮರ ತೆರವು ಮಾಡಿದರು.

ದಾವಣಗೆರೆ ಜೆಲ್ಲೆಯ ಜಗಳೂರು ತಾಲೂಕಿನ ಗಡೆಮಾಕುಂಟೆ, ಭರಮಸಮುದ್ರ, ಮರಿಕಟ್ಟೆ, ತುಂಬಿನಕಟ್ಟೆ, ಕ್ಯಾಸೇನಹಳ್ಳಿ, ತಮ್ಮಲೇಹಳ್ಳಿ ಸೇರಿದಂತೆ ಬಹುತೇಕ ಕಡೆ ತಡ ರಾತ್ರಿ ಭರ್ಜರಿ ಮಳೆಯಾಗಿದೆ. ಇದರಿಂದಾಗಿ ಗಡೆಮಾಕುಂಟೆ ಹಾಗೂ ಭರಮಸಮುದ್ರ ಕೆರೆಗಳು ಭರ್ತಿಯಾಗಿವೆ. ಇನ್ನೂ ಖಾಲಿಯಾದ ಕೆರೆಯಲ್ಲಿ ನೀರು ಕಂಡು ರೈತರ ಮುಖದಲ್ಲಿ ಮಂದಹಾಸ ಮೂಡಿದೆ.

ಇದನ್ನೂ ಓದಿ: Road Accident : ತಾಯಿ-ಮಗನ ಬಲಿ ಪಡೆದ ಕಂಟೇನರ್‌; ಆಟೋ ಪ್ರಯಾಣಿಕ ಸೇರಿ ಸವಾರರಿಬ್ಬರ ಪ್ರಾಣ ಕಸಿದ ಬೈಕ್‌

ವಿಜಯನಗರದಲ್ಲಿ ಕೊಚ್ಚಿ ಹೋದ ರೋಡ್‌

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿ ಮಳೆ ನೀರಿನ ರಭಸಕ್ಕೆ ರಸ್ತೆಯೇ ಕೊಚ್ಚಿ ಹೋಗಿತ್ತು. ಇದರಿಂದಾಗಿ ಕೂಡ್ಲಿಗಿ ತಾಲೂಕಿನ ಯಂಬ್ಳಿ- ಆಲೂರು ಗ್ರಾಮಗಳ ಮಾರ್ಗ ರಸ್ತೆ ಸಂಪರ್ಕ ಕಟ್ ಆಗಿತ್ತು. ರಸ್ತೆ ಸಂಪರ್ಕ ಇಲ್ಲದೆ ವಾಹನ ಸವಾರರು ಪರದಾಡಬೇಕಾಯಿತು.

ತುಮಕೂರಿನಲ್ಲಿ ನೀರಿನಲ್ಲಿ ಸಿಲುಕಿದ ಲಾರಿ ಹಾಗೂ ಬಸ್

ಮಳೆಯಿಂದ ಜಲಾವೃತವಾದ ರಸ್ತೆಯಲ್ಲಿ ಸಂಚಾರಿಸಿದ ಪರಿಣಾಮ ಲಾರಿ- ಬಸ್ಸು ಕೆಸರಿನಲ್ಲಿ ಸಿಲುಕಿದ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಲಕ್ಕನಹಳ್ಳಿ ನಡೆದಿದೆ. ಶಿರಾ- ಅಮರಾಪುರ ರಸ್ತೆ ಕಾಮಗಾರಿ ನಿಧಾನವಾಗಿ ನಡೆಯುತ್ತಿರುವುದರಿಂದ ಬಿಡ್ಜ್ ಕಾಮಗಾರಿ ಬಳಿ‌ ರಸ್ತೆಯು ಜಲಾವೃತಗೊಂಡು ಸವಾರರು ಪರದಾಡುವಂತಾಗಿದೆ.

ಇನ್ನೂ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಅರಸಿಕೆರೆ ಗ್ರಾಮದಲ್ಲಿ ಗಾಳಿ- ಮಳೆ ರಭಸಕ್ಕೆ ಅಡಿಕೆ ಮರಗಳು ನೆಲಕ್ಕುರುಳಿದ್ದವು. ರೈತ ಪ್ರಕಾಶ್ ಎಂಬುವರಿಗೆ ಸೇರಿದ 12 ವರ್ಷದ ಹಳೇ ಅಡಿಕೆ ಮರಗಳು ಫಸಲಿಗೆ ಬಂದಿತ್ತು. ಇದೀಗ ಮಳೆಯಿಂದಾಗಿ ಅಂದಾಜು 2 ಲಕ್ಷ ರೂಪಾಯಿ ನಷ್ಟವಾಗಿದೆ.

ಮೈಸೂರಿನಲ್ಲಿ ಕೆರೆಯಂತಾದ ಜಮೀನುಗಳು

ಮೈಸೂರು ಜಿಲ್ಲೆಯಲ್ಲಿ ಮಳೆಯು ಮುಂದುವರಿದ್ದು, ಹುಣಸೂರು ತಾಲೂಕಿನ ಜಮೀನುಗಳಲ್ಲಿ ಜಲಾವೃತಗೊಂಡಿತ್ತು. ನೂರಾರು ಎಕರೆ ಬೆಳೆದ ಶುಂಠಿ, ತಂಬಾಕು ಬೆಳೆ ನಾಶವಾಗಿತ್ತು. ಗ್ರಾಮದ ಜಮೀನುಗಳು ಕೆರೆಗಳಂತಾಗಿತ್ತು. ಇತ್ತ ಬಿರುಗಾಳಿ ಮಳೆಗೆ ಮನೆ ಚಾವಣಿ, ಬ್ಯಾರನ್‌ ಹಾರಿಹೋಗಿತ್ತು. ಮೈಸೂರಿನ ಅತ್ತಿಕುಪ್ಪೆಯಲ್ಲಿ ಕೆರೆ ಕೋಡಿ ಒಡೆದು ಬೆಳೆ ನಾಶವಾಗಿತ್ತು. ಇದರಿಂದಾಗಿ ತೆಂಗಿನ ಸಸಿಗಳು ಕೊಚ್ಚಿಹೋಗಿದ್ದವು. ಹನಗೋಡು ಹೋಬಳಿ ಕಚುವಿನಹಳ್ಳಿ ಗ್ರಾಮದ ಜಯಮ್ಮ ಮತ್ತು ಲಲಿತಮ್ಮರಿಗೆ ಸೇರಿದ ತಂಬಾಕು ಹದಗೊಳಿಸುವ ಬ್ಯಾರನ್ ಗೋಡೆ ಕುಸಿದಿತ್ತು. ಚಿಲ್ಕುಂದ ಗ್ರಾಮದಲ್ಲಿ ಬಿರುಗಾಳಿಗೆ ರಾಮಶೆಟ್ಟರ ಮನೆ ಚಾವಣಿ ಹಾಗೂ ಚಂದ್ರುರವರ ಕೊಟ್ಟಿಗೆಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿ ಹೋಗಿದೆ. ಇತ್ತ ಸುಜ್ಜಲೂರು ಗ್ರಾಮದಲ್ಲಿ ಮನೆಗಳಿಗೆ ಚರಂಡಿ ನೀರು ನುಗ್ಗಿತ್ತು.

ಕೆರೆ ನೀರಲ್ಲಿ ಕೊಚ್ಚಿ ಹೋಗುತ್ತಿದ್ದ ಕರು

ಮೈಸೂರು ಮಳೆ ಅವಾಂತರಕ್ಕೆ ಜನರು ಹೈರಾಣಾಗಿದ್ದಾರೆ. ಕೆರೆ‌ ನೀರಲ್ಲಿ ಕೊಚ್ಚಿ ಹೋಗುತ್ತಿದ್ದ ಕರುವೊಂದನ್ನು ಯುವಕರು ರಕ್ಷಿಸಿದ ಘಟನೆ ಪಿರಿಯಾಪಟ್ಟಣ ತಾಲೂಕು ತರಿಕಲ್ ಗ್ರಾಮದಲ್ಲಿ ನಡೆದಿದೆ. ಹಾರನಹಳ್ಳಿ ಗ್ರಾಮದ ಶಿವಣ್ಣ ಅವರ ಹಸುವಿನ ಕರುವನ್ನು ರಕ್ಷಣೆ ಮಾಡಲಾಗಿತ್ತು. ಬಾಲಗೆರೆ ತುಂಬಿ ಕೋಡಿ ಒಡೆದ ಪರಿಣಾಮ ಬೆಟ್ಟದಪುರ- ಕುಶಾಲನಗರ ರಸ್ತೆ ಮೇಲೆ ಮಂಡಿಯುದ್ದ‌ ನೀರು ನಿಂತಿತ್ತು. ಮಳೆ‌ ನೀರಿನಲ್ಲಿ ತಂಬಾಕು ಸಸಿಗಳು, ಗಿಡಕ್ಕೆ ಸಿಂಪಡಿಸಲು ತಂದಿದ್ದ ರಸಾಯನಿಕ ವಸ್ತುಗಳು ಹಾಳಾಗಿದ್ದವು.

ವಿಜಯನಗರದಲ್ಲಿ ನೆಲಸಮವಾದ ವೀಳ್ಯದೆಲೆ ಬಳ್ಳಿ

ಭಾರಿ ಮಳೆಗೆ ವೀಳ್ಯದೆಲೆ ಬಳ್ಳಿ ತೋಟ ನೆಲಸಮವಾಗಿತ್ತು. ವಿಜಯನಗರದ ಕೂಡ್ಲಿಗಿ ತಾಲೂಕಿನ ಎಚ್. ಮ್ಯಾಸರಹಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. ದುಡಿಯುವ ಮಗನಂತೆ ಬೆಳೆದು ನಿಂತಿದ್ದ ಎಲೆಬಳ್ಳಿ ತೋಟ ನೆಲಕಚ್ಚಿತ್ತು. ಮಲ್ಲಮ್ಮ ಗಂಡ ಪೂಜಾರಿ ಮಾರಣ್ಣಗೆ ಸೇರಿದ ಒಂದು ಎಕರೆ ಎಲೆಬಳ್ಳಿ ತೋಟ ನೆಲಕ್ಕುರುಳಿದ್ದನ್ನು ಕಂಡು ಕಣ್ಣೀರುಇಟ್ಟರು.

ಮನೆಗಳಿಗೆ ನುಗ್ಗಿದ ಚರಂಡಿ ನೀರು

ಕೊಡಗು ಜಿಲ್ಲೆಯ ಗುಮ್ಮನ ಕೊಲ್ಲಿ ಚೌಡೇಶ್ವರಿ ಬಡಾವಣೆಯ ತಗ್ಗು ಪ್ರದೇಶಕ್ಕೆ ಚರಂಡಿ ನೀರು ನುಗ್ಗಿತ್ತು. ಚರಂಡಿ ನೀರು ಉಕ್ಕಿ ರಸ್ತೆ ಮೇಲೆ ಹರಿದ ಪರಿಣಾಮ ಮನೆಯಂಗಳಕ್ಕೆ ನೀರು ನುಗ್ಗಿತ್ತು. ಪ್ರವಾಹದಂತೆ ರಸ್ತೆ ತುಂಬೆಲ್ಲ ನೀರು ನಿಂತಿತ್ತು. ಇತ್ತ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲದ ಅಜ್ಜನಕಟ್ಟೆಯಲ್ಲಿ 20 ಕ್ಕೂ ಹೆಚ್ಚು ಕುಟುಂಬಗಳು ಜಲದಿಗ್ಬಂಧನದಿಂದ ಓಡಾಡಲು ಪರದಾಡಬೇಕಾಯಿತು. ಇತ್ತ ಶಾಲಾ ಮಕ್ಕಳು ಕೆಸರಲ್ಲಿ ಬೀಳುವ ಆತಂಕದಲ್ಲಿಯೇ ಮನೆಯಿಂದ ಹೊರ ಬರುತ್ತಿದ್ದರು.ಕಾಲೋನಿಯಲ್ಲಿ ಎಮರ್ಜೆನ್ಸಿ ಅಂದರೆ ಆಂಬುಲೆನ್ಸ್ ಕೂಡ ಬರಲು ಆಗುತ್ತಿಲ್ಲ ಎಂದು ಸ್ಥಳೀಯರು ಅಸಮಾಧಾನ ಹೊರಹಾಕಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಗರಿಷ್ಠ ತಾಪಮಾನ ಇಳಿಕೆ; ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

ಕರಾವಳಿ, ಮಲೆನಾಡು, ಉತ್ತರ ಒಳನಾಡಿನಲ್ಲಿ ಭಾರಿ ಮಳೆಯಾಗುವ (Rain News) ನಿರೀಕ್ಷೆ ಇದ್ದು, ಯೆಲ್ಲೋ ಹಾಗೂ ಆರೆಂಜ್‌ ಆಲರ್ಟ್‌ ನೀಡಲಾಗಿದೆ. ಗಾಳಿ ವೇಗವು ಪ್ರತಿ ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ಚದುರಿದಂತೆ ಮಧ್ಯಮ ಮಳೆಯಾಗಲಿದ್ದು, ರಾಜ್ಯಾದ್ಯಂತ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯಾಗುವ (Rain News) ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಮತ್ತು 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (karnataka Weather Forecast) ಎಚ್ಚರಿಕೆಯನ್ನು ನೀಡಿದೆ.

ದಕ್ಷಿಣ ಒಳನಾಡಿನ ತುಮಕೂರು, ಮೈಸೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ವ್ಯಾಪಕವಾಗಿ ಮಧ್ಯಮ ಮಳೆಯಾಗಲಿದೆ. ಉತ್ತರ ಒಳನಾಡಿನ ಹಾವೇರಿ, ಬಳ್ಳಾರಿ ಮತ್ತು ಬೆಳಗಾವಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ವಿಜಯಪುರ, ರಾಯಚೂರು, ಕೊಪ್ಪಳ, ವಿಜಯನಗರ ಮತ್ತು ಧಾರವಾಡ ಜಿಲ್ಲೆಯಲ್ಲಿ ಹಗುರವಾದ ಮಳೆಯಾಗಲಿದೆ.

ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನ ಅನುಕ್ರಮವಾಗಿ ಸುಮಾರು 29 ಮತ್ತು 22 ಡಿ.ಸೆ ಇರಲಿದೆ.

ಇದನ್ನೂ ಓದಿ: Food Department : ಜೀವಂತ ಇದ್ದವಳನ್ನು ಸತ್ತಿದ್ದಾಗಿ ಘೋಷಿಸಿದ ಆಹಾರ ಇಲಾಖೆ; ರೇಷನ್‌ ಕಾರ್ಡ್‌ನಿಂದಲೇ ಹೆಸರು ಡಿಲೀಟ್‌

ಬಿರುಗಾಳಿ ಎಚ್ಚರಿಕೆ

ಗುಡುಗು ಸಹಿತ ಭಾರೀ ಮಳೆಯೊಂದಿಗೆ ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಗಾಳಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಚಿತ್ರದುರ್ಗ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಉಡುಪಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಉತ್ತರ ಕನ್ನಡ, ಧಾರವಾಡ, ಗದಗ ಮತ್ತು ಹಾವೇರಿ, ದಾವಣಗೆರೆ, ವಿಜಯನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಯಾದಗಿರಿಯಲ್ಲಿ ಸಿಡಿಲಿಗೆ ಕುರಿಗಾಹಿ ಸಾವು ; ಬಿರುಗಾಳಿ ಸಹಿತ ಮಳೆಗೆ ಸಿಲುಕಿದ ಪ್ರವಾಸಿಗರು

Karnataka Weather Forecast : ಮಲೆನಾಡು ಹಾಗೂ ಒಳನಾಡಿನಲ್ಲಿ ಮಳೆಯು (rain News) ಅಬ್ಬರಿಸುತ್ತಿದೆ. ಯಾದಗಿರಿಯಲ್ಲಿ ಸಿಡಿಲಿಗೆ ಕುರಿಗಾಹಿ ಸ್ಥಳದಲ್ಲೇ ಮೃತಪಟ್ಟರೆ, ಗೋಪಾಲಸ್ವಾಮಿ ಬೆಟ್ಟದಲ್ಲಿ ಬಿರುಗಾಳಿ ಸಹಿತ ಮಳೆಗೆ ಸಿಲುಕಿದ ಪ್ರವಾಸಿಗರು ಪರದಾಡಿದರು.

VISTARANEWS.COM


on

By

Karnataka weather Forecast
Koo

ಯಾದಗಿರಿ/ಚಿಕ್ಕಮಗಳೂರು: ಮಳೆಯ ಆರ್ಭಟ (Karnataka Weather Forecast) ಮುಂದುವರಿದಿದ್ದು, ಸಾವು-ನೋವಿಗೆ ಕಾರಣವಾಗುತ್ತಿದೆ. ಯಾದಗಿರಿಯ ಗುರುಮಠಕಲ್ ತಾಲೂಕಿನ ಭಾಗದಲ್ಲಿ ಸೋಮವಾರ ಗುಡುಗು, ಸಿಡಿಲಿನ ಜತೆಗೆ ಬಿರುಗಾಳಿ ಸಹಿತ ಮಳೆಯಾಗಿದೆ. ಪರಿಣಾಮ ಸಿಡಿಲು ಬಡಿದು ಕುರಿಗಾಹಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗುರುಮಠಕಲ್ ತಾಲೂಕಿನ ರಾಂಪುರು ಗ್ರಾಮದಲ್ಲಿ ದುರ್ಘಟನೆ ನಡೆದಿದೆ.

ರಾಂಪುರು ಗ್ರಾಮದ ಕುರಿಗಾಹಿ ಚಂದಪ್ಪ (55) ಮೃತ ದುರ್ದೈವಿ. ಕುರಿಗಾಹಿ ಚಂದಪ್ಪ ಜೇಬಿನಲ್ಲಿ ಮೊಬೈಲ್ ಇಟ್ಟುಕೊಂಡು ಕುರಿ ಮೇಯಿಸಲು ತೆರಳಿದ್ದರು. ಈ ವೇಳೆ ಮೊಬೈಲ್ ಇಟ್ಟುಕೊಂಡ ಭಾಗಕ್ಕೆ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಗುರುಮಠಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಗೋಪಾಲಸ್ವಾಮಿ ಬೆಟ್ಟದಲ್ಲಿ ಮಳೆಗೆ ಸಿಲುಕಿ ಪ್ರವಾಸಿಗರ ಪರದಾಟ

ಗೋಪಾಲಸ್ವಾಮಿ ಬೆಟ್ಟದಲ್ಲಿ ಜೋರು ಮಳೆಯಾಗುತ್ತಿದ್ದು ಪ್ರವಾಸಿಗರು ಪರದಾಡಿದರು. ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳುವ ಚೆಕ್ ಪೋಸ್ಟ್ ಸಮೀಪ ನೀರು ನದಿಯಂತೆ ಹರಿಯುತ್ತಿದೆ. ಚೆಕ್ ಪೋಸ್ಟ್‌ನಲ್ಲಿ ಬಸ್‌ಗಾಗಿ ಕಾಯುತ್ತಿದ್ದ ವೇಳೆ ನೂರಾರು ಮಂದಿ ಮಳೆಗೆ ಸಿಲುಕಿದರು. 1 ಗಂಟೆಗೂ ಹೆಚ್ಚು ಕಾಲ ಮಳೆ ಸುರಿದಿದ್ದರಿಂದ ಬೆಟ್ಟದ ಮೇಲಿಂದ ನದಿಯಂತೆ ನೀರು ಹರಿದು ಬಂದಿತ್ತು. ಮಳೆಗೆ ಸಿಲುಕಿ ಪ್ರವಾಸಿಗರ ಪರದಾಟ ಒಂದು ಕಡೆಯಾದರೆ, ಮಳಿಗೆಗಳಿಗೂ ನೀರು ನುಗ್ಗಿತ್ತು.

ಚಾಮರಾಜನಗರದಲ್ಲಿ ಮಳೆಯ ಅಬ್ಬರ

ಚಾಮರಾಜನಗರದಲ್ಲಿ ಎರಡು ಗಂಟೆಗೂ ಹೆಚ್ಚು ಸಮಯ ಮಳೆ ಸುರಿದಿದೆ. ಜಿಲ್ಲೆಯ ಕೆಲ ಕಡೆ ತುಂತುರು ಮಳೆಯಾದರೆ ಕೆಲವು ಕಡೆ ಭರ್ಜರಿ ಮಳೆಯಾಗಿದೆ. ರಸ್ತೆ ಬದಿಗಳಲ್ಲಿ ನದಿಯಂತೆ ಮಳೆ ನೀರು ಹರಿಯುತ್ತಿದೆ. ಇತ್ತ ಗುಂಡ್ಲುಪೇಟೆ ತಾಲೂಕಿನ ಗೋಪಾಲಸ್ವಾಮಿ ಬೆಟ್ಟ, ಹಂಗಳ ಗ್ರಾಮದ ಸುತ್ತ ಮುತ್ತ ಭರ್ಜರಿ ಮಳೆಯಾಗಿದೆ.

ಶಿವಮೊಗ್ಗದಲ್ಲಿ ಧಾರಾಕಾರ ಮಳೆ

ಮಲೆನಾಡು ಶಿವಮೊಗ್ಗದಲ್ಲೂ ಧಾರಾಕಾರವಾಗಿ ಮಳೆ ಸುರಿದಿದೆ. ಶಿವಮೊಗ್ಗ, ತೀರ್ಥಹಳ್ಳಿ, ಹೊಸನಗರ, ಶಿಕಾರಿಪುರ, ಸೊರಬ, ಭದ್ರಾವತಿ ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗಿದೆ. ಮಳೆಯಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಒಂದು ಗಂಟೆಯಿಂದ ಬಿಡುವು ನೀಡದೆ ಗುಡುಗು, ಸಿಡಿಲು ಸಹಿತ ಮಳೆಯಾಗಿದೆ.

ಇದನ್ನೂ ಓದಿ: Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಗುಡುಗು ಸಹಿತ ಮಳೆ

ದಕ್ಷಿಣ ಕನ್ನಡ, ಉಡುಪಿಯಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗಾಳಿ (40-50 kmph) ಸಹಿತ ಭಾರಿ ಮಳೆಯಾಗಲಿದೆ.

ಉತ್ತರ ಕನ್ನಡದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-50 ಕಿ.ಮೀ) ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಭಾಗದಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿ (40-50 ಕಿ.ಮೀ.) ಮಳೆ ಸಂಭವವಿದೆ.

ಮುಂದಿನ 5 ದಿನಗಳವರೆಗೆ ಕರ್ನಾಟಕದ ಒಳನಾಡಿನಲ್ಲಿ ಗರಿಷ್ಠ ತಾಪಮಾನವು 2-4 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆಯಿದೆ. ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರದಿಂದ ಸಾಧಾರಣ ಮಳೆಯಾಗಲಿದೆ. ಕೆಲವೊಮ್ಮೆ ಮೇಲ್ಮೈ ಗಾಳಿಯು ಬಲವಾಗಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಮತ್ತು 21 ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain : ರಾಜ್ಯದಲ್ಲಿ ಮಳೆ ಅವಾಂತರ ಮುಂದುವರಿದಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆಯನ್ನು ನೀಡಲಾಗಿದೆ.

VISTARANEWS.COM


on

By

Karnataka Rain
ಭಾರಿ ಮಳೆಗೆ ಕೊಚ್ಚಿ ಹೋದ ಬೆಳೆಗಳು
Koo

ಮಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಸಮುದ್ರ ತೀರದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಸಮುದ್ರಕ್ಕಿಳಿಯದಂತೆ ಮಂಗಳೂರಿನ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ದಕ್ಷಿಣ ಕನ್ನಡದಲ್ಲಿ 115 .5 ಮಿಮಿ ನಿಂದ 204 .5 ಮಿಮಿ ಮಳೆಯಾಗುವ (Karnataka Rain) ಸಾಧ್ಯತೆ ಇದ್ದು, ಎರಡು ದಿನಕ್ಕೆ ಆರೆಂಜ್ ಅಲರ್ಟ್ ನೀಡಲಾಗಿದೆ.

ಕರಾವಳಿಯುದ್ದಕ್ಕೂ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಮೀನುಗಾರಿಕೆಗೆ ತೆರಳದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಈಗಾಗಲೇ ಸಮುದ್ರಕ್ಕೆ ತೆರಳಿದ ಮೀನುಗಾರಿಕಾ ಬೋಟ್‌ಗಳಿಗೆ ತಕ್ಷಣ ದಡಕ್ಕೆ ಬರುವಂತೆ ಸೂಚನೆಯನ್ನು ನೀಡಲಾಗಿದೆ. ಗಂಟೆಗೆ 45 ಕಿ.ಮೀ ನಿಂದ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.

ದಾವಣಗೆರೆಯಲ್ಲಿ ನಿಯಂತ್ರಣ ತಪ್ಪಿ ಕೊಚ್ಚಿಹೋದ ಕಾರು

ದಾವಣಗೆರೆ ಜಿಲ್ಲೆಯ ಜಗಳೂರಿನಲ್ಲಿ ಭರ್ಜರಿ ಮಳೆಯಾಗುತ್ತಿದೆ. ಭಾನುವಾರ ರಾತ್ರಿ ಸುರಿದ ಮಳೆಯಿಂದಾಗಿ ಜಗಳೂರಿನ ಕಾನನಕಟ್ಟೆ ಗ್ರಾಮದ ಸೇತುವೆ ಮೇಲೆ ನೀರು ಹರಿದಿದೆ. ಹರಿಯುತ್ತಿರುವ ನೀರಿನಲ್ಲೇ ಕಾರು ಚಲಾಯಿಸುವಾಗ ಚಾಲಕ‌ನ ನಿಯಂತ್ರಣ ತಪ್ಪಿ ಕಾರು ಕೊಚ್ಚಿಹೋಗಿದೆ. ಕೂಡಲೇ ಸ್ಥಳೀಯರಿಂದ ಕಾರು ಚಾಲಕ ಹಾಗೂ ಪ್ರಯಾಣಿಕರನ್ನು ರಕ್ಷಣೆ ಮಾಡಲಾಗಿದೆ. ಜತೆಗೆ ಕೊಚ್ಚಿ ಹೋದ ಕಾರನ್ನು ದಡಕ್ಕೆ ಎಳೆದು ತಂದಿದ್ದಾರೆ. ಜಗಳೂರಿನ ದೊಡ್ಡ ಬೊಮ್ಮನಹಳ್ಳಿ, ಸೇರಿದಂತೆ ಹಲವು ಕಡೆ ಚೆಕ್ ಡ್ಯಾಂಗಳು ತುಂಬಿ ಹರಿಯುತ್ತಿವೆ.

karnataka rain

ಶಿವಮೊಗ್ಗದಲ್ಲಿ ಮನೆ ಮೇಲೆ ಬಿದ್ದ ಅರಳಿ ಮರ

ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ. ಶಿವಮೊಗ್ಗದ ಸೊರಬ ಪಟ್ಟಣದಲ್ಲಿ ಮನೆ ಮೇಲೆ ಬೃಹತ್ ಅರಳಿ ಮರ, ತೆಂಗಿನ ಮರ ಬಿದ್ದು ಹಾನಿಯಾಗಿದೆ. ಭಾಗ್ಯ ಎಂಬುವರಿಗೆ ಸೇರಿದ ಮನೆ ಸಂಪೂರ್ಣ ದ್ವಂಸವಾಗಿದ್ದು,ಭಾಗ್ಯ ಅವರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮನೆ ಮೇಲೆ ಬೃಹತ್ ಮರ ಬಿದ್ದ ಪರಿಣಾಮ ಮನೆಯಲ್ಲಿದ್ದ ಗೃಹಪಯೋಗಿ ವಸ್ತುಗಳು ಹಾನಿಯಾಗಿವೆ. ಸ್ಥಳಕ್ಕೆ ತಹಸೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸೂಕ್ತ ಪರಿಹಾರ ನೀಡುವಂತೆ ಮನೆ ಮಾಲೀಕರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: Rain news: ಚಾರ್ಮಾಡಿ ಘಾಟಿಯಲ್ಲಿ ಮಳೆಗೆ ಸಿಲುಕಿಕೊಂಡ ನೂರಾರು ಪ್ರಯಾಣಿಕರು

ಕೋಲಾರದಲ್ಲಿ ಮಳೆಗೆ ಬೆಳೆಗಳು ನೀರುಪಾಲು

ಕೋಲಾರದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮಲ್ಲಸಂದ್ರ ಗ್ರಾಮದಲ್ಲಿ ಬೆಳೆಗಳು ನೀರುಪಾಲಾಗಿದೆ. ಕೋಲಾರ ತಾಲೂಕಿನ ನರಸಾಪುರ ಹೋಬಳಿಯ ಮಲ್ಲಸಂದ್ರ ಗ್ರಾಮದಲ್ಲಿ ನಿನ್ನೆ ಭಾನುವಾರ ಸಂಜೆ ಸುರಿದ ಮಳೆಗೆ ಬೆಳೆಗಳು ಜಲಾವೃತಗೊಂಡಿದೆ. ಮಳೆಯ ನೀರಿನಲ್ಲಿ ಸೌತೆಕಾಯಿ, ಬೀನ್ಸ್, ಹೂ ಬೆಳೆಗಳು ಕೊಚ್ಚಿಹೋಗಿವೆ. ಅವೈಜ್ಞಾನಿಕ ಲೇಔಟ್ ನಿರ್ಮಾಣ ಮಾಡಿರುವುದೇ ಇದಕ್ಕೆಲ್ಲ ಕಾರಣ ಎಂದು ರೈತರು ಆರೋಪಿಸಿದ್ದಾರೆ. ದೊಂಬರಹಳ್ಳಿ ಗ್ರಾಮದ ವ್ಯಾಪ್ತಿಯಲ್ಲಿರುವ ಲೇಔಟ್‌ನಲ್ಲಿ ಮಳೆಯ ನೀರು ಹರಿಯಲು ಯಾವುದೇ ಕಾಲುವೆ ಮಾಡಿಲ್ಲ. ಇದರಿಂದ ಮಳೆ ಬಿದ್ದಾಗಲೆಲ್ಲಾ ಲೇಔಟ್‌ನಿಂದ ಹರಿದು ಬರುವ ನೀರು ತೋಟಗಳಿಗೆ ನುಗ್ಗುತ್ತಿದೆ ಎಂದು ಕಿಡಿಕಾರಿದ್ದಾರೆ.

ಚಿಕ್ಕಮಗಳೂರಿನ ಮಳೆ ಅಬ್ಬರಕ್ಕೆ ಕುಸಿದ ಮನೆ

ಚಿಕ್ಕಮಗಳೂರಿನಲ್ಲಿ ಭಾನುವಾರ ರಾತ್ರಿ ಸುರಿದ ಗಾಳಿ-ಮಳೆಗೆ ಮನೆ ಕುಸಿದಿದೆ. ಎನ್.ಆರ್.ಪುರ ತಾಲೂಕಿನ ಕರ್ಕೇಶ್ವರ ಗ್ರಾಮದಲ್ಲಿ ಘಟನೆ ನಡೆದಿದೆ. ಗುಲಾಬಿ ಎಂಬಾಕೆಯ ಮನೆ ಕುಸಿದಿದೆ. ಒಂಟಿ ಮಹಿಳೆಯಾಗಿರುವ ಗುಲಾಬಿ, ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದು, ಗಾಳಿ-ಮಳೆಗೆ ಇದ್ದವೊಂದು ಮನೆಯೂ ನೆಲಸಮವಾಗಿದೆ ಎಂದು ಕಂಗಲಾಗಿದ್ದಾರೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳೀಯರಿಂದ ನಿರ್ಗತಿಕ ಮಹಿಳೆಗೆ ಸಹಾಯ ಮಾಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Tamil Nadu Officers
ದೇಶ6 mins ago

ಐಎಎಸ್‌ ಆಫೀಸರ್‌ ಆಗಿರುವ ಮಾಜಿ ಪತ್ನಿಯಿಂದ ನನ್ನ ಮನೆಗೆ ವಿದ್ಯುತ್‌ ಕಟ್; ಇದು ಐಪಿಎಸ್‌ ಆಫೀಸರ್‌ ಅಳಲು!

Rameshwaram Cafe Blast
ಕರ್ನಾಟಕ22 mins ago

Rameshwaram Cafe Blast: ಹುಬ್ಬಳ್ಳಿ ಸೇರಿ 4 ರಾಜ್ಯಗಳ ಹಲವೆಡೆ ಎನ್‌ಐಎ ದಾಳಿ; 11 ಶಂಕಿತ ಉಗ್ರರು ವಶಕ್ಕೆ

Virat kohli
ಪ್ರಮುಖ ಸುದ್ದಿ29 mins ago

IPL 2024 : ಕೊಹ್ಲಿಯನ್ನು ಗಂಭೀರ್ ಅಪ್ಪಿಕೊಂಡಿದ್ದು ಫೇರ್​ಪ್ಲೇ ಅವಾರ್ಡ್​ಗಾಗಿಯಾ? ಅವರ ಮಾತಲ್ಲೇ ಕೇಳಿ

Phone tapping case and R Ashok demands for CBI investigation
ರಾಜಕೀಯ49 mins ago

Phone tapping: ಸಿಬಿಐಗೆ ಫೋನ್‌ ಕದ್ದಾಲಿಕೆ ಪ್ರಕರಣ ವಹಿಸಲಿ: ಸರ್ಕಾರಕ್ಕೆ ಅಶೋಕ್‌ ಸವಾಲು ಏನು?

Porsche Crash
ದೇಶ58 mins ago

Porsche Crash: 2 ಕಾರು, 4 ನಗರ, 1 ಸಿಮ್‌ ಕಾರ್ಡ್;‌ ಮಗ ಕಾರು ಗುದ್ದಿದ ಬಳಿಕ ಅಪ್ಪನ ಪ್ಲಾನ್‌ ಏನು? ಇಲ್ಲಿದೆ ಭೀಕರ ಮಾಹಿತಿ

IPL 2024
ಕ್ರೀಡೆ1 hour ago

IPL 2024 : ಕೊಹ್ಲಿಯನ್ನೂ ಟೀಕಿಸುವುದರ ನಡುವೆಯೂ ಆರ್​​ಸಿಬಿ ಕಪ್​ ಗೆಲ್ಲುತ್ತದೆ ಎಂದ ಗವಾಸ್ಕರ್​

Road Accident
ಶಿವಮೊಗ್ಗ1 hour ago

Road Accident: ಮರಕ್ಕೆ ಬಸ್‌ ಡಿಕ್ಕಿಯಾಗಿ ಹಲವರಿಗೆ ಗಾಯ; ಆಟೋ ಪಲ್ಟಿಯಾಗಿ ಚಾಲಕ ಸಾವು

Dwayne Bravo
ಪ್ರಮುಖ ಸುದ್ದಿ2 hours ago

Dwayne Bravo : ಅಫಘಾನಿಸ್ತಾನ ತಂಡದಲ್ಲಿ ದೊಡ್ಡ ಜವಾಬ್ದಾರಿ ವಹಿಸಿಕೊಂಡ ಡ್ವೇನ್ ಬ್ರಾವೊ

Narendra Modi
ಪ್ರಮುಖ ಸುದ್ದಿ2 hours ago

Narendra Modi: ಅಂಬೇಡ್ಕರ್‌ ಇರದಿದ್ದರೆ ಮೀಸಲಾತಿ ಜಾರಿಗೆ ನೆಹರು ಬಿಡುತ್ತಿರಲಿಲ್ಲ ಎಂದ ಮೋದಿ!

Self Harming
ಕರ್ನಾಟಕ2 hours ago

Self Harming: ಹುಬ್ಬಳ್ಳಿಯಲ್ಲಿ ನೇಣಿಗೆ ಶರಣಾದ ಜೋಡಿ; ಅನೈತಿಕ ಸಂಬಂಧ ಶಂಕೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ3 hours ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು8 hours ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು9 hours ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ1 day ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ5 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

ಟ್ರೆಂಡಿಂಗ್‌