Site icon Vistara News

Renukamba Devi Jatre: ವಿಜೃಂಭಣೆಯಿಂದ ನಡೆದ ಚಂದ್ರಗುತ್ತಿಯ ಶ್ರೀ ರೇಣುಕಾಂಬಾ ದೇವಿಯ ರಥೋತ್ಸವ

Renukamba Devi Jatre soraba

#image_title

ಸೊರಬ: ಯಲ್ಲಮ್ಮ ನಿನಾಲ್ಕೂ ಉದೋ ಉದೋ ಎಂಬ ಉದ್ಗಾರ ಘೋಷದೊಂದಿಗೆ ಶ್ರೀ ಕ್ಷೇತ್ರ ಇತಿಹಾಸ ಹಾಗೂ ಪುರಾಣ ಪ್ರಸಿದ್ಧ ಚಂದ್ರಗುತ್ತಿಯ ಶ್ರೀ ರೇಣುಕಾಂಬಾ ದೇವಿಯ ಜಾತ್ರೆ (Renukamba Devi Jatre) ಮಹೋತ್ಸವ ವಿಜೃಂಭಣೆಯಿಂದ ಮಂಗಳವಾರ (ಫೆ.28) ಜರುಗಿತು.

ಸಾಗರ ಉಪವಿಭಾಗಾಧಿಕಾರಿ ಪಲ್ಲವಿ ಸಾತೇನಹಳ್ಳಿ ಅವರು ರಥೋತ್ಸವಕ್ಕೆ ಚಾಲನೆ ನೀಡಿದರು. ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಸಹಸ್ರಾರು ಜನರು ಪಾಲ್ಗೊಂಡಿದ್ದರು. ಹರಕೆ ಹೊತ್ತವರು ಪಡ್ಲಿಗೆ ತುಂಬಿಸುವುದು, ಚೌಲ, ಮಕ್ಕಳಿಗೆ ಕಿವಿ ಚುಚ್ಚಿಸುವುದು ಮುಂತಾದ ಧಾರ್ಮಿಕ ಕಾರ್ಯಕ್ರಮ ಮಾಡುವ ಮೂಲಕ ದೇವಿಯ ಕೃಪೆಗೆ ಪಾತ್ರರಾದರು.

ಇದನ್ನೂ ಓದಿ: Govt Employees Strike : ಸರ್ಕಾರದಿಂದ ವೇತನ ಹೆಚ್ಚಳದ ಆದೇಶ; ಮುಷ್ಕರ ಹಿಂದಕ್ಕೆ ಪಡೆದ ಸರ್ಕಾರಿ ನೌಕರರು

ಭಕ್ತರಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಟ್ಯಾಂಕರ್ ಮೂಲಕ ನೀರಿನ ವ್ಯವಸ್ಥೆ ಮಾಡಲಾಗಿತ್ತು. ದೇವಸ್ಥಾನ ಸಮಿತಿ ಹಾಗೂ ಸಾರ್ವಜನಿಕರ ಸಹಕಾರದೊಂದಿಗೆ ಭಕ್ತರಿಗೆ ಅನ್ನ ಸಂತರ್ಪಣೆ ನಡೆಯಿತು. ಜಾತ್ರೆಯಲ್ಲಿ ಯಾವುದೇ ಅಹಿತಕರ ಘಟನೆ ಜರುಗದಂತೆ ಸಿಪಿಐ ಭಾಗ್ಯವತಿ ಮತ್ತು ಪಿಎಸ್‍ಐ ನಾಗರಾಜ್ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿತ್ತು.

ಶಾಸಕ ಎಸ್. ಕುಮಾರ್ ಬಂಗಾರಪ್ಪ ಅವರು ಕುಟುಂಬಸ್ಥರೊಂದಿಗೆ ಆಗಮಿಸಿ ರಥೋತ್ಸವದ ಪೂಜಾ ವಿಧಿ ವಿಧಾನಗಳಿಗೆ ಚಾಲನೆ ನೀಡಿದರು. ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ರಾಜು ಎಂ. ತಲ್ಲೂರು, ತಹಶೀಲ್ದಾರ್ ಹುಸೇನ್ ಸರಕಾವಸ್, ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಪ್ರಸನ್ನ ಶೇಟ್ ಸೇರಿದಂತೆ ಸಾವಿರಾರು ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿ: Greece Train Crash: ಗ್ರೀಸ್​​ನಲ್ಲಿ ಪ್ರಯಾಣಿಕರ ರೈಲಿಗೆ ಡಿಕ್ಕಿಯಾದ ಸರಕು ರೈಲು; 32 ಮಂದಿ ಸಾವು, 85ಕ್ಕೂ ಹೆಚ್ಚು ಜನರಿಗೆ ಗಾಯ

ಅಭಿಮಾನಿಗಳೊಂದಿಗೆ ಪ್ರತ್ಯೇಕವಾಗಿ ಆಗಮಿಸಿದ ಕೆಪಿಸಿಸಿ ಹಿಂದುಳಿದ ವರ್ಗಗಳ ಅಧ್ಯಕ್ಷ ಎಸ್. ಮಧು ಬಂಗಾರಪ್ಪ ಅವರು ದೇವಿಗೆ ಪದ್ಧತಿಯಂತೆ ಉಡಿ ಅರ್ಪಿಸಿದರು. ಈ ಸಂದರ್ಭದಲ್ಲಿ ಈಡಿಗ ಸಮಾಜದ ಜಿಲ್ಲಾಧ್ಯಕ್ಷ ಡಾ. ಆರ್. ಶ್ರೀಧರ್ ಹುಲ್ತಿಕೊಪ್ಪ, ತಾಪಂ ಮಾಜಿ ಅಧ್ಯಕ್ಷ ಎಚ್.ಗಣಪತಿ ಹುಲ್ತಿಕೊಪ್ಪ, ಪ್ರಮುಖರಾದ ಎನ್.ಜಿ. ನಾಗರಾಜ್, ಜಯಶೀಲ ಗೌಡ, ಎಂ.ಪಿ. ರತ್ನಾಕರ, ಮಾರ್ಯಪ್ಪ ಬೆನ್ನೂರು, ರೇಣುಕಾ ಪ್ರಸಾದ್, ಲೋಕೇಶ್, ಪ್ರದೀಪ್ ಬಾಡದಬೈಲು ಸೇರಿದಂತೆ ನೂರಾರು ಕಾರ್ಯಕರ್ತರು ಇದ್ದರು.

Exit mobile version