ಆದಿಚುಂಚನಗಿರಿ ಮಠದಿಂದ (Sri Adichunchanagiri Mutt) ಅಮೆರಿಕದ ನ್ಯೂ ಜೆರ್ಸಿಯ ಫ್ರ್ಯಾಂಕ್ಲಿನ್ ಟೌನ್ ಶಿಪ್‌ನಲ್ಲಿ ಕಾಲಭೈರವೇಶ್ವರ ದೇಗುಲ ನಿರ್ಮಾಣ (Kalabhairaveshwara temple) ಮಾಡಲಾಗುತ್ತಿದೆ.
ದೇಗುಲ ಕಾಮಗಾರಿ ಪರಿಶೀಲನೆಗಾಗಿ ಆದಿಚುಂಚನಗಿರಿ ಮಠ ಸಂಸ್ಥಾನದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ (Nirmalanandanatha Swamiji) ಅಮೆರಿಕಾ ಪ್ರವಾಸವನ್ನು ಕೈಗೊಂಡಿದ್ದಾರೆ.
ಸುಮಾರು 10 ಮಿಲಿಯನ್ ಡಾಲರ್ (80 ಕೋಟಿ ರೂ.) ಮೊತ್ತದ ಯೋಜನೆ ಇದಾಗಿದೆ. ಆದಿಚುಂಚನಗಿರಿ ಮಹಾಸಂಸ್ಥಾನ ಈ ಟೌನ್‌ಶಿಪ್‌ನಲ್ಲಿ 20 ಎಕರೆ ಜಮೀನು ಖರೀದಿಸಲಾಗಿದೆ. ಇಲ್ಲಿ ನಿರ್ಮಾಣ ಆಗುತ್ತಿರುವ 5000 ಚದರ ಮೀಟರ್ ಕಟ್ಟಡದಲ್ಲಿ ಯೋಗ, ಧ್ಯಾನ ಹಾಗೂ ಇತರೆ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆಯ ಉದ್ದೇಶ ಹೊಂದಿದೆ.
ಇದನ್ನೂ ಓದಿ: Free Bus Service : ಶಕ್ತಿ ಯೋಜನೆಯಿಂದ ದೇವರೂ ಶ್ರೀಮಂತರಾದರು; ಪುಣ್ಯಕ್ಷೇತ್ರಗಳಲ್ಲಿ ಹೆಚ್ಚಿದ ಆದಾಯ
ಮೊದಲ ಹಂತದಲ್ಲಿ ದೇವಾಲಯ ಹಾಗೂ ಅರ್ಚಕರ ನಿವಾಸ ನಿರ್ಮಾಣವಾಗಲಿದೆ. ಡಾ. ಅಮರನಾಥಗೌಡ, ಡಾ. ಬಾಬು ಕಿಲಾರ ಅವರ ಮುಂದಾಳತ್ವದಲ್ಲಿ ಈ ಕಾಮಗಾರಿಗಳು ಆರಂಭವಾಗಿವೆ. ಕಿಲಾರ ಅವರು ದೇವಾಲಯದ ವಿನ್ಯಾಸ, ಪರಿಸರ ಇಲಾಖೆ ಅನುಮತಿ ಮತ್ತು ನಿರ್ಮಾಣದ ಜವಾಬ್ದಾರಿ ವಹಿಸಿಕೊಂಡಿದ್ದಾರೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ