Sabarimala News | ಶಬರಿಮಲೆಗೆ ಮೊದಲ ದಿನವೇ ಭಾರಿ ಸಂಖ್ಯೆಯಲ್ಲಿ ಭಕ್ತರ ಆಗಮನ - Vistara News

ಧಾರ್ಮಿಕ

Sabarimala News | ಶಬರಿಮಲೆಗೆ ಮೊದಲ ದಿನವೇ ಭಾರಿ ಸಂಖ್ಯೆಯಲ್ಲಿ ಭಕ್ತರ ಆಗಮನ

ಕೊರೊನಾ ಭೀತಿ ದೂರವಾಗಿರುವುದರಿಂದ ಈ ಬಾರಿಯ ಅಯ್ಯಪ್ಪ ಸ್ವಾಮಿ ಯಾತ್ರೆ ಈ ಹಿಂದಿನಂತೆ (Shabarimala News) ನಡೆಯುತ್ತಿದೆ. ಮುಂದಿನ 41 ದಿನಗಳಲ್ಲಿ ಲಕ್ಷಾಂತರ ಮಾಲಾಧಾರಿಗಳು ದೇಗುಲಕ್ಕೆ ಭೇಟಿ ನೀಡುವ ನಿರೀಕ್ಷೆ ಇದೆ.

VISTARANEWS.COM


on

Sabarimala temple opens Heavy rush
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ತಿರುವನಂತಪುರ: ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಮಾಲಾಧಾರಿಗಳಿಗೆ ಇಂದಿನಿಂದ (ಗುರುವಾರ) ದೇವರ ದರ್ಶನಕ್ಕೆ ಅವಕಾಶ (Sabarimala News) ಮಾಡಿಕೊಡಲಾಗಿದೆ. ಬುಧವಾರ ಸಂಜೆ ದೇಗುಲದ ಬಾಗಿಲನ್ನು ತೆರೆಯಲಾಗಿದ್ದು, ವಿಶೇಷ ಪೂಜೆ ಪುನಸ್ಕಾರಗಳು ನಡೆದವು. ಇಂದು ಬೆಳಗ್ಗೆ 5 ಗಂಟೆಯಿಂದ ಇರುಮುಡಿ ಹೊತ್ತು ಬಂದ ಮಾಲಾಧಾರಿಗಳಿಗೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಯಿತು.

ನೂತನ ಪ್ರಧಾನ ಅರ್ಚಕ (ಮೇಲ್ಸಂತಿ) ಕೆ. ಜಯರಾಮನ್‌ ನಂಬೂದರಿ ಮತ್ತು ಮಾಲಿಕಪುರಮ್‌ನ ಹರಿಹರನ್‌ ನಂಬೂದರಿ ಅವರ ನೇತೃತ್ವದಲ್ಲಿ ವಿಶೇಷ ಪೂಜೆಗಳು ನಡೆದವು. ಕೆ. ಜಯರಾಮನ್‌ ನಂಬೂದರಿ ಅವರು ದೇಗುಲದ ಬಾಗಿಲನ್ನು ತೆರೆದು ಮಾಲಾಧಾರಿಗಳಿಗೆ ದರ್ಶನಕ್ಕೆ ಅವಕಾಶ ಮಾಡಿಕೊಟ್ಟರು.

ಕೊರೊನಾ ಭೀತಿ ದೂರವಾಗಿರುವುದರಿಂದ ಈ ಬಾರಿ ಯಾವುದೇ ನಿರ್ಬಂಧಗಳನ್ನು ವಿಧಿಸಲಾಗಿಲ್ಲ. ಹೀಗಾಗಿ ಮೊದಲ ದಿನವೇ ನಿರೀಕ್ಷೆಗೂ ಮೀರಿ ಮಾಲಾಧಾರಿಗಳು ಆಗಮಿಸಿದ್ದು, ಕೆಲ ಹೊತ್ತು ನೂಕುನುಗ್ಗಲು ಉಂಟಾಗಿತ್ತು. ಸುಮಾರು 49 ಸಾವಿರ ಭಕ್ತರು ಆನ್‌ಲೈನ್‌ನಲ್ಲಿ ಬುಕ್ಕಿಂಗ್‌ ಮಾಡಿಕೊಂಡು ಬಂದು ದರ್ಶನ ಪಡೆಯುತ್ತಿದ್ದಾರೆ.

Sabarimala pilgrimage season begins
ಗುರುವಾರ ಬೆಳಗ್ಗೆ ದರ್ಶನಕ್ಕೆ ಸಾಲುಗಟ್ಟಿ ನಿಂತಿದ್ದ ಮಾಲಾಧಾರಿಗಳು.

ಈ ವರ್ಷ ಬೆಳಗ್ಗೆ 3 ಗಂಟೆಗೇ ದೇಗುಲದ ಬಾಗಿಲನ್ನು ತೆರೆಯಲಾಗುತ್ತದೆ. 3.30 ಕ್ಕೆ ಗಣಪತಿ ಹೋಮ ನಡೆಯಲಿದೆ. ಬೆಳಗ್ಗೆ 8.30 ರಿಂದ 11.00 ರವರೆಗೆ ನೈಯ್ಯಾಭಿಷೇಕ (ಅಯ್ಯಪ್ಪಸ್ವಾಮಿ ಮೂರ್ತಿಗೆ ತುಪ್ಪದ ಅಭಿಷೇಕ) ನಡೆಯಲಿದೆ. ಈ ಹಿಂದಿನಂತೆಯೇ ತುಪ್ಪದ ಪ್ರಸಾದವನ್ನು ಭಕ್ತರಿಗೆ ನೀಡಲಾಗುತ್ತಿದೆ. ರಾತ್ರಿ 11 ಗಂಟೆಗೆ ಗರ್ಭಗುಡಿಯನ್ನು ಮುಚ್ಚಲಾಗುತ್ತದೆ.

ಏನಿದು ಪಡಿಪೂಜೆ?
ಆಯ್ದ ಕೆಲವು ದಿವಸಗಳಲ್ಲಿ ಪುಷ್ಪಾಭಿಷೇಕದ ಬಳಿಕ ಪವಿತ್ರವಾದ ಹದಿನೆಂಟು ಮೆಟ್ಟಿಲುಗಳಲ್ಲಿ ನಡೆಸುವ ಪೂಜೆಯನ್ನು ‘ಮೆಟ್ಟಲು ಪೂಜೆ’ (ಪಡಿಪೂಜೆ) ಎನ್ನುತ್ತಾರೆ. ಸಾಯಂಕಾಲ ಪ್ರಧಾನ ಅರ್ಚಕರ ನೇತೃತ್ವದಲ್ಲಿ ತಂತ್ರಿಗಳು ಈ ಪೂಜೆಯನ್ನು ನೆರವೇರಿಸುತ್ತಾರೆ. ರೇಷ್ಮೆ ಬಟ್ಟೆ ಮತ್ತು ಹೂಗಳಿಂದ ಮೆಟ್ಟಿಲುಗಳನ್ನು ಅಲಂಕರಿಸಿ, ಅವುಗಳಲ್ಲಿ ಪರಂಪರಾಗತ ರೀತಿಯಲ್ಲಿ ದೀಪಗಳನ್ನು ಉರಿಸಿ, ತಂತ್ರಿಗಳು ಆರತಿಯನ್ನು ಬೆಳಗುವುದರೊಂದಿಗೆ ಪೂಜೆ ಪೂರ್ಣಗೊಳ್ಳುತ್ತದೆ. ಒಂದು ಗಂಟೆಗಳಷ್ಟು ದೀರ್ಘವಾಗಿ ಈ ಪೂಜೆ ನಡೆಯುತ್ತದೆ.

ಈ ಸೇವೆಯ ಜತೆಗೆ ಭಕ್ತರು ಕಲ್ಯಾಣಾಭಿಷೇಕ, ಪುಷ್ಪಾಭಿಷೇಕ, ಅರ್ಚನೆ, ಗಣಪತಿ ಹೋಮ, ಭಗವತಿ ಸೇವೆ, ಉಷಾಪೂಜಾ, ಉಂಚಾ ಪೂಜಾ, ದೀಪಾರಾಧನೆ ಇನ್ನಿತರ ಸೇವೆಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಉದಯಾಸ್ತಮಾನ ಮತ್ತು ಪಡಿ ಪೂಜೆಗೆ ಮುಂಗಡವಾಗಿ ಬುಕ್ಕಿಂಗ್‌ ಮಾಡಿಕೊಳ್ಳಬೇಕು ಎಂದು ಸೂಚಿಸಲಾಗಿದೆ. ಆಪಂ, ಆರ್ವನದಂತಹ ಪ್ರಸಾದವನ್ನು ಭಕ್ತರಿಗೆ ವಿತರಿಸಲು ಕೌಂಟರ್‌ ವ್ಯವಸ್ಥೆ ಮಾಡಲಾಗಿದೆ. ಈ ವರ್ಷ ಪಡಿ ಪೂಜೆಗೂ ಅವಕಾಶ ನೀಡಲಾಗಿದೆ.

Sabarimala pilgrimage season begins prasadam
ಮೊದಲ ಪೂಜೆಯ ನಂತರ ಗಣ್ಯ ಭಕ್ತರಿಗೆ ಪ್ರಸಾದ ವಿತರಿಸಲಾಯಿತು.

ಮಂಡಲ ಪೂಜೆಯು 41 ದಿನಗಳ ಕಾಲ ನಡೆಯಲಿದ್ದು, ಮಲಯಾಳ ಪಂಚಾಂಗದ ಪ್ರಕಾರ ವೃಶ್ಚಿಕ ಮಾಸದ ಮೊದಲ ದಿನ ಮಂಡಲ ವ್ರತಾಚರಣೆ ಆರಂಭವಾಗಿದೆ. ಧನುರ್ಮಾಸದ 11ನೇ ದಿನ ವ್ರತಾಚರಣೆ ಸಂಪನ್ನವಾಗಲಿದೆ. ಅಂದರೆ ಡಿಸೆಂಬರ್‌ 27ಕ್ಕೆ ಮಂಡಲ ಪೂಜೆಯ ವ್ರತಾಚರಣೆ ಅಂತ್ಯವಾಗಲಿದೆ. ಮಂಡಲ ಪೂಜೆಗಾಗಿ ಡಿಸೆಂಬರ್‌ 27 ರಂದು ದೇಗುಲವನ್ನು ಮುಚ್ಚಲಾಗುತ್ತದೆ. ಡಿಸೆಂಬರ್‌ 30 ರಂದು ಮತ್ತೆ ದೇಗುಲದ ಬಾಗಿಲನ್ನು ತೆರೆದು ಮಕರ ಜ್ಯೋತಿಯು ದರ್ಶನವಾಗುವವರೆಗೂ ಅಂದರೆ ಜನವರಿ 14 ರವರೆಗೆ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ.

ಇದನ್ನೂ ಓದಿ | Shabarimale News | ತೆರೆದ ಶಬರಿಮಲೆ ದೇಗುಲದ ಬಾಗಿಲು; ಅಯ್ಯಪ್ಪ ಸ್ವಾಮಿ ಯಾತ್ರೆ ಶುರು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಧಾರ್ಮಿಕ

Ram Navami: ಅಯೋಧ್ಯೆ ಬಾಲಕ ರಾಮನಿಗೆ ಮೊದಲ ರಾಮ ನವಮಿ; ಇಲ್ಲಿದೆ ಅಪೂರ್ವ ಕ್ಷಣಗಳ ಫೋಟೊ ಗ್ಯಾಲರಿ

Ram Navami: ಇಂದು ರಾಮ ನವಮಿ. ರಾಮನ ಭಕ್ತರು ಅತ್ಯಂತ ಸಡಗರದಿಂದ ರಾಮ ನವಮಿಯನ್ನು ಆಚರಿಸುತ್ತಿದ್ದಾರೆ. ಈ ಬಾರಿ ಆಚರಣೆ ಇನ್ನೂ ವಿಶೇಷ ಎನಿಸಿಕೊಂಡಿದ್ದು ಅಯೋಧ್ಯೆ ರಾಮನಿಗೆ ಇದು ಮೊದಲ ರಾಮ ನವಮಿ ಎನ್ನುವ ಕಾರಣಕ್ಕೆ. ಈ ವಿಶೇಷ ದಿನವನ್ನು ಇನ್ನೂ ಸ್ಮರಣೀಯವಾಗಿಸಿದ್ದು, ಬಾಲಕ ರಾಮನ ಹಣೆಯ ಮೇಲೆ ಮೂಡಿದ ಸೂರ್ಯ ತಿಲಕ. ಸುಮಾರು 4-5 ನಿಮಿಷಗಳ ಕಾಲ ಪ್ರಭು ಶ್ರೀರಾಮನ ಹಣೆಯ ಮೇಲೆ ಕಂಗೊಳಿಸಿದ ಸೂರ್ಯ ತಿಲಕವನ್ನು ನೋಡಿ ಭಕ್ತರು ರೋಮಾಂಚನಗೊಂಡಿದ್ದಾರೆ. ಇಲ್ಲಿದೆ ಆ ಅಪೂರ್ವ ಕ್ಷಣದ ಫೋಟೊ.

VISTARANEWS.COM


on

Ram Navami
Koo

ಅಯೋಧ್ಯೆ: ದೇಶಾದ್ಯಂತ ಇಂದು (ಏಪ್ರಿಲ್‌ 17) ಸಂಭ್ರಮದಿಂದ ರಾಮ ನವಮಿ (Ram Navami)ಯನ್ನು ಆಚರಿಸಲಾಗುತ್ತಿದೆ. ಜತೆಗೆ ಈ ಬಾರಿ ಇನ್ನೂ ವಿಶೇಷ ಎನಿಸಿದ್ದು ಅಯೋಧ್ಯೆಯ ಬಾಲಕ ರಾಮನಿಗೆ ಮೊದಲ ರಾಮ ನವಮಿ ಎನ್ನುವ ಕಾರಣಕ್ಕೆ (Ayodhya Ram Mandir). ಲಕ್ಷಾಂತರ ಮಂದಿ ಅಯೋಧ್ಯೆಗೆ ತೆರಳಿ ರಾಮನ ದರ್ಶನ ಪಡೆದುಕೊಂಡರು. ಇದೇ ವೇಳೆ ಇನ್ನೊಂದು ಚಮತ್ಕಾರವೂ ನಡೆಯಿತು. ಸೂರ್ಯ ರಶ್ಮಿ ಬಾಲಕ ರಾಮನ ಹಣೆ ಮೇಲೆ ತಿಲಕದಂತೆ ಕಂಗೊಳಿಸಿತು. ಸುಮಾರು 4-5 ನಿಮಿಷಗಳ ಕಾಲ ಪ್ರಭು ಶ್ರೀರಾಮನ ಹಣೆಯ ಮೇಲೆ ಕಂಗೊಳಿಸಿದ ಸೂರ್ಯ ತಿಲಕವನ್ನು ನೋಡಿ ಭಕ್ತರು ರೋಮಾಂಚನಗೊಂಡರು. ಇಲ್ಲಿದೆ ಆ ವಿಸ್ಮಯಕಾರಿ ಕ್ಷಣಗಳ ಫೋಟೊಗಳು.

ಇದನ್ನೂ ಓದಿ: Ram Navami: ಅಯೋಧ್ಯೆ ಶ್ರೀರಾಮನಿಗೆ ಮನಮೋಹಕ ಸೂರ್ಯ ತಿಲಕ; ಇಲ್ಲಿದೆ ನೋಡಿ ವಿಡಿಯೊ

Continue Reading

ದೇಶ

Ram Navami: ಅಯೋಧ್ಯೆ ರಾಮ ಮಂದಿರಲ್ಲಿ ಮೊದಲ ರಾಮ ನವಮಿ; ದೇಶದ ಜನತೆಗೆ ಮೋದಿ ನೀಡಿದ ಸಂದೇಶ ಇದು

Ram Navami: ದೇಶಾದ್ಯಂತ ರಾಮ ನವಮಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತಿದೆ. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ರಾಮ ನವಮಿಯ ಶುಭಾಶಯ ತಿಳಿಸಿದ್ದಾರೆ. “ಅಯೋಧ್ಯೆಯಲ್ಲಿ ಪ್ರಾಣ ಪ್ರತಿಷ್ಠಾಪನೆಯ ನಂತರದ ಮೊದಲ ರಾಮ ನವಮಿ ಒಂದು ಪೀಳಿಗೆಯ ಮೈಲಿಗಲ್ಲು. ಶತಮಾನಗಳ ಭಕ್ತಿಯನ್ನು ಭರವಸೆ ಮತ್ತು ಪ್ರಗತಿಯ ಹೊಸ ಯುಗದೊಂದಿಗೆ ಹೆಣೆಯಲಾಗುತ್ತದೆ. ಇದು ಕೋಟ್ಯಂತರ ಭಾರತೀಯರು ಕಾಯುತ್ತಿದ್ದ ದಿನ” ಎಂದು ಮೋದಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

VISTARANEWS.COM


on

Ram Navami
Koo

ನವದೆಹಲಿ: ಇಂದು (ಏಪ್ರಿಲ್‌ 17) ದೇಶಾದ್ಯಂತ ರಾಮ ನವಮಿ (Ram Navami)ಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತಿದೆ. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ (Narendra Modi) ದೇಶದ ಜನತೆಗೆ ರಾಮ ನವಮಿಯ ಶುಭಾಶಯ ತಿಳಿಸಿದ್ದಾರೆ. ಜತೆಗೆ ಅಯೋಧ್ಯೆ ರಾಮ ಮಂದಿರ (Ayodhya Ram Mandir)ದಲ್ಲಿ ಪ್ರಾಣ ಪ್ರತಿಷ್ಠಾಪನೆಯ ನಂತರ ಇದೇ ಮೊದಲ ಬಾರಿಗೆ ಹಬ್ಬವನ್ನು ಆಚರಿಸಲಾಗುತ್ತಿದೆ ಎಂದು ಹೇಳಿದ್ದಾರೆ.

“ಅಯೋಧ್ಯೆಯಲ್ಲಿ ಪ್ರಾಣ ಪ್ರತಿಷ್ಠಾಪನೆಯ ನಂತರದ ಮೊದಲ ರಾಮ ನವಮಿ ಒಂದು ಪೀಳಿಗೆಯ ಮೈಲಿಗಲ್ಲು. ಶತಮಾನಗಳ ಭಕ್ತಿಯನ್ನು ಭರವಸೆ ಮತ್ತು ಪ್ರಗತಿಯ ಹೊಸ ಯುಗದೊಂದಿಗೆ ಹೆಣೆಯಲಾಗುತ್ತದೆ. ಇದು ಕೋಟ್ಯಂತರ ಭಾರತೀಯರು ಕಾಯುತ್ತಿದ್ದ ದಿನ” ಎಂದು ಮೋದಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ʼʼಅಯೋಧ್ಯೆಯ ರಾಮ ಮಂದಿರ ಹಲವು ವರ್ಷಗಳಿಂದ ದೇಶದ ಜನರು ಮಾಡಿದ ಕಠಿಣ ಪರಿಶ್ರಮ ಮತ್ತು ತ್ಯಾಗದ ಫಲ. ಇದು ಅಸಂಖ್ಯಾತ ರಾಮನ ಭಕ್ತರು ಮತ್ತು ರಾಮ ಮಂದಿರ ನಿರ್ಮಾಣಕ್ಕಾಗಿ ತಮ್ಮ ಇಡೀ ಜೀವನವನ್ನು ಮುಡಿಪಾಗಿಟ್ಟ ಸಂತರನ್ನು ನೆನಪಿಸಿಕೊಳ್ಳುವ ಮತ್ತು ಗೌರವ ಸಲ್ಲಿಸುವ ಸಂದರ್ಭವೂ ಆಗಿದೆʼʼ ಎಂದು ಅವರು ಹೇಳಿದ್ದಾರೆ.

“ಪ್ರಭು ಶ್ರೀ ರಾಮನ ಆಶೀರ್ವಾದವು ಯಾವಾಗಲೂ ನಮ್ಮ ಮೇಲೆ ಇರಲಿ ಮತ್ತು ನೀತಿ ಮತ್ತು ಶಾಂತಿಯತ್ತ ನಡೆಯುವಂತೆ ರಾಮ ನಮಗೆ ಮಾರ್ಗದರ್ಶನ ನೀಡಲಿ. ನಮ್ಮ ಜೀವನವನ್ನು ಬುದ್ಧಿವಂತಿಕೆ ಮತ್ತು ಧೈರ್ಯದಿಂದ ಬೆಳಗಿಸಲಿ” ಎಂದು ಮೋದಿ ಬೇಡಿಕೊಂಡಿದ್ದಾರೆ. ʼʼಭಗವಾನ್ ರಾಮ ಭಾರತೀಯರ ಹೃದಯದಲ್ಲಿ ಆಳವಾಗಿ ಬೇರೂರಿದ್ದಾನೆ. ಮರ್ಯಾದಾ ಪುರುಷೋತ್ತಮ ಭಗವಾನ್ ರಾಮ ಅವರ ಜೀವನ ಮತ್ತು ಆದರ್ಶಗಳು ‘ವಿಕಸಿತ್‌ ಭಾರತ್’ ನಿರ್ಮಾಣಕ್ಕೆ ಬಲವಾದ ಆಧಾರವಾಗುತ್ತವೆ ಎಂಬುದರ ಬಗ್ಗೆ ನನಗೆ ಪೂರ್ಣ ವಿಶ್ವಾಸವಿದೆ. ರಾಮನ ಆಶೀರ್ವಾದವು ‘ಆತ್ಮ ನಿರ್ಭರ ಭಾರತ’ದ ಸಂಕಲ್ಪಕ್ಕೆ ಹೊಸ ಶಕ್ತಿಯನ್ನು ನೀಡುತ್ತದೆ” ಎಂದು ಪ್ರಧಾನಿ ಹೇಳಿಕೊಂಡಿದ್ದಾರೆ.

ರಾಮ ನವಮಿಯ ಇತಿಹಾಸವೇನು?

ಹಿಂದೂ ಪುರಾಣಗಳಲ್ಲಿ ಅತ್ಯಂತ ಶ್ರೇಷ್ಠ ವ್ಯಕ್ತಿಯೆಂದೇ ಪರಿಗಣಿಸಲ್ಪಟ್ಟಿರುವ ಭಗವಾನ್ ರಾಮನ ರಾಮ ನವಮಿಯಂದು ಜನ್ಮ ತಾಳಿದ್ದನು. ಹಿಂದೂ ಕ್ಯಾಲೆಂಡರ್‌ನಲ್ಲಿ ಸಾಂಪ್ರದಾಯಿಕವಾಗಿ ಚೈತ್ರ ಮಾಸದ ಒಂಬತ್ತನೇ ದಿನದಂದು ರಾಮ ನವಮಿಯನ್ನು ಆಚರಿಸಲಾಗುತ್ತದೆ. ಶ್ರೀರಾಮನು ವಿಷ್ಣುವಿನ ಏಳನೇ ಅವತಾರವೆಂದು ನಂಬಲಾಗುತ್ತದೆ. ಸದಾಚಾರ ಮತ್ತು ಸದ್ಗುಣಗಳ ಪ್ರತಿಪಾದಕನೆಂದು ರಾಮನನ್ನು ಕರೆಯಲಾಗುತ್ತದೆ. ಅನೇಕ ಶತಮಾನಗಳಿಂದ ರಾಮ ನವಮಿಯನ್ನು ಅತ್ಯಂತ ವೈಭವಾಗಿ ಆಚರಿಸಲಾಗುತ್ತದೆ. ಹೊರದೇಶಗಳಲ್ಲೂ ಆಚರಣೆ ರಾಮ ಜನ್ಮದಿನವನ್ನು ಭಾರತದಲ್ಲಿ ಮಾತ್ರವಲ್ಲ ನೇಪಾಳ, ಬಾಂಗ್ಲಾದೇಶದ ಹಿಂದೂಗಳೂ ಅತ್ಯಂತ ವೈಭವದಿಂದ ಆಚರಿಸುತ್ತಾರೆ. ಉತ್ತರ ಅಮೆರಿಕ ಮತ್ತು ಯುರೋಪ್ ನ ಕೆಲವು ರಾಷ್ಟ್ರಗಳಲ್ಲೂ ರಾಮನವಮಿಯನ್ನು ಆಚರಿಸಲಾಗುತ್ತದೆ.

ಇದನ್ನೂ ಓದಿ: Ayodhya Ram Mandir: ಜನ್ಮದಿನದ ಸಂಭ್ರಮಕ್ಕೆ ಕಾತರ; ರಾಮಲಲ್ಲಾನಿಗೆ ಸೂರ್ಯ ಕಿರಣ ಅಭಿಷೇಕ ಪ್ರಯೋಗ ಸಕ್ಸೆಸ್!

ಅಯೋಧ್ಯೆಯಲ್ಲಿ ಭಕ್ತಜನ ಸಾಗರ

ಇನ್ನು ಅಯೋಧ್ಯೆ ರಾಮ ಮಂದಿರದತ್ತ ಭಕ್ತ ಜನ ಸಾಗರವೇ ಹರಿದು ಬಂದಿದೆ. ಮಂದಿರ ಉದ್ಘಾಟನೆಯಾದ ಬಳಿಕ ಆಚರಿಸುತ್ತಿರುವ ಮೊದಲ ರಾಮ ನವಮಿ ಆಗಿರುವ ಕಾರಣದಿಂದ ಅಯೋಧ್ಯೆಗೆ 40 ಲಕ್ಷ ಜನ ಭಕ್ತರು ಬರುವ ನಿರೀಕ್ಷೆಯಿದೆ. ರಾಮನಿಗೆ ಉಣಬಡಿಸಲು 56 ಬಗೆಯ ಪ್ರಸಾದಗಳನ್ನು ಸಿದ್ಧಪಡಿಸಲಾಗಿದೆ.

Continue Reading

ದೇಶ

Ayodhya Ram Mandir: ಇಂದು ಅಯೋಧ್ಯೆ ಶ್ರೀರಾಮನಿಗೆ ಮನಮೋಹಕ ಸೂರ್ಯ ತಿಲಕ; ಮನೆಯಲ್ಲೇ ಹೀಗೆ ನೋಡಿ

Ayodhya Ram Mandir: ಇಂದು (ಏಪ್ರಿಲ್‌ 17) ರಾಮ ನವಮಿ. ಅಯೋಧ್ಯೆಯ ಭವ್ಯ ಶ್ರೀರಾಮ ಮಂದಿರದಲ್ಲಿ ಪ್ರತಿಷ್ಠಾಪನೆಗೊಂಡಿರುವ ಬಾಲಕ ರಾಮನಿಗೆ ಇಂದು ಸೂರ್ಯ ತಿಲಕ ಇಡಲಿದ್ದಾನೆ. ಇದನ್ನು ಮನೆಯಲ್ಲೇ ಕೂತು ನೀವೂ ವೀಕ್ಷಿಸಬಹುದು. ಅದು ಹೇಗೆ ಎನ್ನುವುದರ ವಿವರ ಇಲ್ಲಿದೆ.

VISTARANEWS.COM


on

Ayodhya Ram Mandir
Koo

ಅಯೋಧ್ಯೆ: ಇಂದು (ಏಪ್ರಿಲ್‌ 17) ರಾಮ ನವಮಿ  (Ram Navami). ಉತ್ತರ ಪ್ರದೇಶದ ಅಯೋಧ್ಯೆಯ ಭವ್ಯ ರಾಮ ಮಂದಿರದಲ್ಲಿ ಪ್ರತಿಷ್ಠಾಪನೆಗೊಂಡಿರುವ ಬಾಲಕ ರಾಮನಿಗೆ ಇದು ಮೊದಲ ಶ್ರೀ ರಾಮ ನವಮಿ (Ayodhya Ram Mandir). ಹೀಗಾಗಿ ಈ ಬಾರಿಯ ಹಬ್ಬ ಇನ್ನೂ ವಿಶೇಷ ಎನಿಸಿಕೊಂಡಿದೆ. ಜತೆಗೆ ರಾಮನಿಗೆ ‘ಸೂರ್ಯ ಅಭಿಷೇಕ / ಸೂರ್ಯ ತಿಲಕʼವೂ ಇಂದು ನೆರವೇರಲಿದೆ.

ಏನಿದು ಸೂರ್ಯ ತಿಲಕ ?

ಈ ಸುಂದರ ರಾಮ ವಿಗ್ರಹದ ಹಣೆಯ ಮೇಲೆ 3ರಿಂದ 5 ನಿಮಿಷಗಳ ಕಾಲ ಸೂರ್ಯನ ಕಿರಣಗಳು ಮಧ್ಯಾಹ್ನ 12. 16ಕ್ಕೆ ಬೀಳುವಂತೆ ವ್ಯವಸ್ಥೆ ಮಾಡಲಾಗಿದೆ. ಮೊದಲ ಬಾರಿಗೆ ಬಾಲರಾಮನ ಹಣೆಯಲ್ಲಿ ಸೂರ್ಯ ತಿಲಕ ಕಂಗೊಳಿಸಲಿದ್ದು, ಇದಕ್ಕೆ ಬೇಕಾದ ವಿಶಿಷ್ಟ ವೈಜ್ಞಾನಿಕ ತಂತ್ರವನ್ನು ಅಳವಡಿಸಿಕೊಳ್ಳಲಾಗಿದೆ. ಪ್ರತಿ ವರ್ಷ ರಾಮ ನವಮಿಯಂದು ಈ ಚಮತ್ಕಾರ ನಡೆಯಲಿದೆ.

ಹೀಗೆ ಕಣ್ತುಂಬಿಕೊಳ್ಳಿ

‘ಸೂರ್ಯತಿಲಕ’ ಏಪ್ರಿಲ್ 17ರ ಬೆಳಗ್ಗೆ 11.58ಕ್ಕೆ ಪ್ರಾರಂಭವಾಗಲಿದೆ ಮತ್ತು ಮಧ್ಯಾಹ್ನ 12.03ರ ವರೆಗೆ ಇರುತ್ತದೆ ಎಂದು ನಿರೀಕ್ಷಿಸಲಾಗಿದೆ. ರಾಮ ಭಕ್ತರಿಗಾಗಿ ಪ್ರಸಾರ ಭಾರತಿ ಈ ಕಾರ್ಯಕ್ರಮವನ್ನು ನೇರ ಪ್ರಸಾರ ಮಾಡಲಿದ್ದು, ಮನೆಯಲ್ಲೇ ವೀಕ್ಷಿಸಬಹುದು. ರಾಮ ನವಮಿಯಂದು ನೀವು ಮನೆಯಲ್ಲಿ ಕುಳಿತೇ ಈ ಸೂರ್ಯ ಅಭಿಷೇಕವನ್ನು ವೀಕ್ಷಿಸಬಹುದು. ಈ ಸಂಪೂರ್ಣ ಕಾರ್ಯಕ್ರಮ ದೂರದರ್ಶನದಲ್ಲಿ ನೇರ ಪ್ರಸಾರವಾಗಲಿದೆ. ಅಲ್ಲದೆ ಅಯೋಧ್ಯೆ ಸೇರಿದಂತೆ ಹಲವು ನಗರಗಳಲ್ಲಿ ದೊಡ್ಡ ಎಲ್‌ಇಡಿ ಪರದೆಗಳನ್ನು ಅಳವಡಿಸಲು ಸಿದ್ಧತೆ ನಡೆಸಲಾಗಿದೆ. ಡಿಡಿ ನ್ಯೂಸ್ ಮತ್ತು ಡಿಡಿ ನ್ಯಾಷನಲ್ ಯೂಟ್ಯೂಬ್ ಚಾನಲ್‌ನಲ್ಲಿಯೂ ಲೈವ್ ಕವರೇಜ್ ಲಭ್ಯ. ಹೆಚ್ಚುವರಿಯಾಗಿ ಪಿವಿಆರ್ ಐನಾಕ್ಸ್, ಮಾಧ್ಯಮ ಚಾನಲ್‌ಗಳ ಸಹಯೋಗದೊಂದಿಗೆ ಭಾರತದ 70ಕ್ಕೂ ಹೆಚ್ಚು ನಗರಗಳಲ್ಲಿ ತನ್ನ 160+ ಚಿತ್ರಮಂದಿರಗಳಲ್ಲಿ ಸಮಾರಂಭವನ್ನು ನೇರ ಪ್ರಸಾರ ಮಾಡಲಿದೆ.

ಪ್ರಯೋಗ ಯಶಸ್ವಿ

ರಾಮ ನವಮಿಗೆ ಮುಂಚಿತವಾಗಿ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಅಯೋಧ್ಯೆಯೊಳಗಿನ ಶ್ರೀ ರಾಮಲಲ್ಲಾ ವಿಗ್ರಹಕ್ಕೆ ಎರಡನೇ ಬಾರಿ ಯಶಸ್ವಿಯಾಗಿ ಸೂರ್ಯ ತಿಲಕ ಅಥವಾ ಸೂರ್ಯಾಭಿಷೇಕವನ್ನು ನಡೆಸಿದೆ. ಈ ಹಿಂದೆ ಏಪ್ರಿಲ್ 8ರಂದು ಮೊದಲ ಬಾರಿಗೆ ಇದರ ಪ್ರಯೋಗ ನಡೆಸಲಾಗಿತ್ತು. ರಾಮನವಮಿಯಂದು ಮಧ್ಯಾಹ್ನ 12 ಗಂಟೆಗೆ ಸೂರ್ಯನ ಕಿರಣಗಳು ದೇವರ ಮೇಲೆ ಎರಡರಿಂದ ಎರಡೂವರೆ ನಿಮಿಷಗಳ ಕಾಲ ಪೂರ್ಣ ಪ್ರಮಾಣದಲ್ಲಿ ಬೀಳಲಿದೆ. ಬಳಿಕ ಮತ್ತೆ ಎರಡೂವರೆ ನಿಮಿಷ ಭಾಗಶಃ ಬೀಳುತ್ತದೆ ಎಂದು ಆರ್‌ಎಸ್‌ಎಸ್ ಹಿರಿಯ ನಾಯಕ ಗೋವಿಂದ್ ರಾವ್ ತಿಳಿಸಿದ್ದಾರೆ.

ಏನಿದು ತಂತ್ರಜ್ಞಾನ?

ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್‌ ಆಸ್ಟ್ರೋಫಿಸಿಕ್ಸ್‌ ಸಹಭಾಗಿತ್ವದಲ್ಲಿ ಒಪ್ಟಿಕಾ ಎಂಬ ಕಂಪನಿ ಈ ಯೋಜನೆಯನ್ನು ರೂಪಿಸಿದೆ. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್ ಮತ್ತು ಸೆಂಟ್ರಲ್ ಬಿಲ್ಡಿಂಗ್ ರಿಸರ್ಚ್ ಇನ್‌ಸ್ಟಿಟ್ಯೂಟ್ ಸಹಯೋಗದಲ್ಲಿ ಯಂತ್ರ ಅಭಿವೃದ್ಧಿಪಡಿಸಲಾಗಿದೆ. ಒಂದಿಷ್ಟು ನಿಮಿಷ ರಾಮನ ಹಣೆ ಮೇಲೆ ತಿಲಕದಂತೆ ಸೂರ್ಯನ ಕಿರಣ ಬೀಳಲಿದೆ. ಇಲ್ಲಿ ಅಳವಡಿಸಲಾದ ಆಪ್ಟೋಮೆಕಾನಿಕಲ್ ಸಿಸ್ಟಮ್ ಅತಿಗೆಂಪು ಫಿಲ್ಟರ್‌ನಿಂದ ಮಾಡಲ್ಪಟ್ಟಿದೆ. ಇದಕ್ಕೆ ನಿಖರ ಮಸೂರ ಮತ್ತು ಕನ್ನಡಿಗಳನ್ನು ಬಳಸಿ ವಿಶಿಷ್ಟ ವಿನ್ಯಾಸವನ್ನು ಒದಗಿಸಲಾಗಿದೆ. ಈ ಅಂಶಗಳು ನೈಸರ್ಗಿಕ ಸೂರ್ಯನ ಬೆಳಕನ್ನು ಬಳಸಿಕೊಂಡು ದೈವಿಕ ಸಂಕೇತವಾಗಿ ತಿಲಕವನ್ನು ಉಂಟು ಮಾಡುತ್ತವೆ.

ತಜ್ಞರ ಉಪಸ್ಥಿತಿ

ಸೂರ್ಯ ತಿಲಕದ ಪ್ರಯೋಗವನ್ನು ನಡೆಸಿದ ರೂರ್ಕಿಯ ಸೆಂಟ್ರಲ್ ಬಿಲ್ಡಿಂಗ್ ರಿಸರ್ಚ್ ಇನ್‌ಸ್ಟಿಟ್ಯೂಟ್ (ಸಿಬಿಆರ್‌ಐ) ತಜ್ಞರು ರಾಮ ನವಮಿಯಂದು ‘ಸೂರ್ಯ ಅಭಿಷೇಕ’ ಯಶಸ್ವಿ ನೆರವೇರಿಸಲು ಅಯೋಧ್ಯೆಯಲ್ಲೇ ಉಪಸ್ಥಿತರಿದ್ದಾರೆ. ಸಿಬಿಆರ್ ಐ ಯ ನಿರ್ದೇಶಕ ರೂರ್ಕಿ, ಪ್ರೊ. ಪ್ರದೀಪ್ ಕುಮಾರ್ ರಾಮಂಚಾರ್ಲಾ ಮತ್ತು ಪ್ರೊ. ದೇವದತ್ ಘೋಷ್ ಸೂರ್ಯ ತಿಲಕ ಯೋಜನೆಯ ಮೇಲ್ವಿಚಾರಣೆ ನಡೆಸಲಿದ್ದಾರೆ.

ಇದನ್ನೂ ಓದಿ: Ayodhya Ram Mandir: ಜನ್ಮದಿನದ ಸಂಭ್ರಮಕ್ಕೆ ಕಾತರ; ರಾಮಲಲ್ಲಾನಿಗೆ ಸೂರ್ಯ ಕಿರಣ ಅಭಿಷೇಕ ಪ್ರಯೋಗ ಸಕ್ಸೆಸ್!

Continue Reading

ಅಂಕಣ

ರಾಜಮಾರ್ಗ ಅಂಕಣ: ಶ್ರೀರಾಮ ಆಗುವುದು ಕಷ್ಟ, ರಾವಣ ಆಗುವುದು ಕೂಡ ಕಷ್ಟವೇ!

ರಾಜಮಾರ್ಗ ಅಂಕಣ: ಇಂದು ಶ್ರೀರಾಮ ನವಮಿ. ಯಾವ ಕೋನದಲ್ಲಿ ನೋಡಿದರೂ ರಾಮನ ವ್ಯಕ್ತಿತ್ವದಲ್ಲಿ ಒಂದು ಕಪ್ಪುಚುಕ್ಕೆ ಕೂಡ ಕಂಡು ಬರುವುದು ಸಾಧ್ಯ ಇಲ್ಲ. ಆದ್ದರಿಂದ ರಾಮ ಆಗುವುದು ಎಲ್ಲರಿಗೂ ಕಷ್ಟ!

VISTARANEWS.COM


on

sri rama rajamarga column
Koo

ಈ ಕತೆಯನ್ನು ಓದಿದ ನಂತರ ನೀವು ಯಾರನ್ನೂ ದ್ವೇಷ ಮಾಡುವುದಿಲ್ಲ!

Rajendra-Bhat-Raja-Marga-Main-logo

ಇಂದು ರಾಮನವಮಿ (Sri Ram Navami). ನನ್ನ ಜನ್ಮ ನಕ್ಷತ್ರ ಪುನರ್ವಸು. ಅದು ಶ್ರೀ ರಾಮಚಂದ್ರನ ಜನ್ಮ ನಕ್ಷತ್ರವೂ ಹೌದು! ನಾನು ಕೂಡ ರಾಮನ ಹಾಗೆ ನನ್ನ ಹೆತ್ತವರಿಗೆ ಹಿರಿಯ ಮಗ. ಆದರೆ ನಮ್ಮ ಹೋಲಿಕೆಯು ಅಷ್ಟಕ್ಕೇ ನಿಂತು ಬಿಡುತ್ತದೆ!

ಏಕೆಂದರೆ ಶ್ರೀರಾಮನ ಹಾಗೆ ಬದುಕುವುದು ತುಂಬಾನೆ ಕಷ್ಟ. ಶ್ರೀಕೃಷ್ಣನ ಹಾಗೆ ಯೋಚನೆ ಮಾಡುವುದು ಕೂಡ ಕಷ್ಟ. ನನಗೆ ಎರಡೂ ಈವರೆಗೆ ಸಾಧ್ಯವಾಗಲೇ ಇಲ್ಲ ಅನ್ನುವುದು ವಾಸ್ತವ. ಅದರಲ್ಲಿಯೂ ಮೊದಲನೆಯದ್ದು ಭಾರೀ ಕಷ್ಟ.

ವಾಲ್ಮೀಕಿಯು ಕೆತ್ತಿದ್ದು ಅದ್ಭುತವಾದ ವ್ಯಕ್ತಿತ್ವ ರಾಮ

ಶ್ರೀರಾಮನ ಬಗ್ಗೆ ಬೇರೆ ಬೇರೆ ವೇದಿಕೆಗಳಲ್ಲಿ ಗಂಟೆಗಳ ಕಾಲ ಮಾತಾಡಿದ್ದೇನೆ. ಅವನ ಜೀವನದ ಪ್ರತೀ ಒಂದು ಘಟನೆ ಕೂಡ ನನಗೆ ಬೆರಗನ್ನೇ ಮೂಡಿಸುತ್ತದೆ. ಆದಿ ಕವಿ ವಾಲ್ಮೀಕಿಯು ರಾಮಾಯಣದ ಮೂಲಕ ಕೆತ್ತಿದ ರಾಮನ ಪಾತ್ರವು ಅದು ವಿಶ್ವದ ಅದ್ಭುತ!

ನನಗೆ ಅಚ್ಚರಿ ಮೂಡಿಸಿದ ಒಂದೆರಡು ಘಟನೆಗಳು

ಶ್ರೀ ರಾಮನಿಗೆ ಪಟ್ಟಾಭಿಷೇಕಕ್ಕೆ ಸಂಕಲ್ಪವನ್ನು ದಶರಥನು ತೆಗೆದುಕೊಂಡಾಗಿತ್ತು. ಅದಕ್ಕಾಗಿ ತೀವ್ರ ಹಂಬಲ ಪಟ್ಟವರು ಅಯೋಧ್ಯೆಯ ಪ್ರತೀ ಒಬ್ಬ ನಾಗರಿಕರು. ರಾಮನು ಅರಸ ಆಗಬಾರದು ಅಂತ ಒಬ್ಬರೂ ಹೇಳಿರಲಿಲ್ಲ. ಪಟ್ಟಾಭಿಷೇಕಕ್ಕೆ ದಿನವನ್ನು ನಿಗದಿ ಮಾಡಿದ ದಶರಥ ಮಹಾರಾಜನು ಇಡೀ ಅಯೋಧ್ಯಾ ನಗರವನ್ನು ಸಿಂಗಾರ ಮಾಡಿ ಪಟ್ಟಕ್ಕೆ ಸಿದ್ಧತೆ ಮಾಡಿದ್ದನು.

ಆದರೆ ಮಂಥರೆ ಎಂಬ ಅತೃಪ್ತ ಆತ್ಮವು ಕೈಕೇಯಿ ರಾಣಿಯ ತಲೆಯನ್ನು ಕೆಡಿಸಿ ರಾಮನ ಪಟ್ಟಾಭಿಷೇಕಕ್ಕೆ ವಿಘ್ನವನ್ನು ಒಡ್ಡಿದ್ದು ನಮಗೆಲ್ಲ ಗೊತ್ತಿದೆ. ಹಿಂದೆ ಯಾವುದೋ ಒಂದು ಕಾಲದಲ್ಲಿ ಕೊಟ್ಟಿದ್ದ ಎರಡು ವರಗಳನ್ನು ಕೈಕೇಯಿಯು ಆ ಮಧ್ಯರಾತ್ರಿ ದಶರಥ ಮಹಾರಾಜನಿಗೆ ಕೇಳಿದಾಗ ರಾಜನು ಅದನ್ನು ನೆರವೇರಿಸಲು ಸಾಧ್ಯವೇ ಆಗದೇ ಕುಸಿದು ಬಿದ್ದ ಕಥೆಯು ಕೂಡ ನಮಗೆ ಗೊತ್ತಿದೆ.

ಪಿತೃ ವಾಕ್ಯಂ ಶಿರೋಧಾರ್ಯಂ!

ಆಗ ಶ್ರೀ ರಾಮನು ಕಟ್ಟು ಬಿದ್ದದ್ದು ಯಾವುದೋ ಒಂದು ಗಳಿಗೆಯಲ್ಲಿ ತನ್ನ ಅಪ್ಪ ತನ್ನ ಚಿಕ್ಕಮ್ಮನಿಗೆ ಕೊಟ್ಟಿದ್ದ ಒಂದು ಮಾತಿಗೆ! ಅದನ್ನು ತಂದೆಯು ನೇರವಾಗಿ ಹೇಳಲು ಸಾಧ್ಯ ಆಗದೆ ಕಣ್ಣೀರನ್ನು ಸುರಿಸುತ್ತ ನೆಲಕ್ಕೆ ಒರಗಿದಾಗಲೂ ರಾಮನಿಗೆ ಅದು ಖಂಡಿತವಾಗಿಯೂ ‘ಪಿತೃ ವಾಕ್ಯಮ್ ಶಿರೋಧಾರ್ಯಮ್’!

king dasharatha

ರಾಮನು ಅರಸ ಆಗಬಾರದು ಎಂದು ರಾಣಿ ಕೈಕೇಯಿಯ ಮನಸ್ಸಿನಲ್ಲಿ ಕೂಡ ಇರಲಿಲ್ಲ. ಆದರೆ ಆಕೆಯಲ್ಲಿ ಆ ಭ್ರಮೆ ಮತ್ತು ಪುತ್ರ ವಾತ್ಸಲ್ಯವನ್ನು ಹುಟ್ಟಿಸಿದವಳು ಆ ಗೂನಜ್ಜಿ ಮಂಥರೆ!

ಅವಳು ಹೇಗೂ ಅಯೋಧ್ಯೆಯ ಪ್ರಜೆ ಆಗಿರಲಿಲ್ಲ. ಅವಳು ಕೈಕೇಯಿಯ ತಾಯಿಯ ಮನೆಯಿಂದ ಕೈಕೇಯಿ ಜೊತೆಗೆ ಬಂದವಳು. ಒಂದು ರೀತಿಯಲ್ಲಿ ಶ್ರೀರಾಮನು ಪಟ್ಟವೇರಿ ಅರಸನಾಗಲು ಆ ಅಯೋಧ್ಯೆಯಲ್ಲಿ ನೂರು ಪ್ರತಿಶತದ ಬಹುಮತದ ಮುದ್ರೆ ಇತ್ತು! ಆದರೆ ರಾಮನು ತಂದೆ ಬಹಳ ಹಿಂದೆ ತನ್ನ ರಾಣಿಗೆ ಕೊಟ್ಟ ಒಂದು ಮಾತಿಗೆ ಕಟ್ಟು ಬಿದ್ದು ಅರಸೊತ್ತಿಗೆಯನ್ನು ಎಡಗಾಲಿನಿಂದ ಒದ್ದು ನಾರು ಮುಡಿ ತೊಟ್ಟು ಕಾಡಿಗೆ ಹೋದವನು. ತನ್ನದೇ ಹಕ್ಕಿನ ರಾಜ್ಯವನ್ನು ತ್ಯಾಗ ಮಾಡಲು ಆತ ಹಿಂದೆ ಮುಂದೆ ನೋಡಲಿಲ್ಲ!

‘ನೀನು ಕೊಟ್ಟ ಮಾತಿಗೆ ನಾನು ಹೇಗೆ ಹೊಣೆ ಆಗಬೇಕು?’ ಎಂದು ಅಪ್ಪನನ್ನು ಒಂದು ಮಾತು ಕೂಡ ಶ್ರೀ ರಾಮನು ಕೇಳಲಿಲ್ಲ! ಆ ರೀತಿಯ ಸಣ್ಣ ಯೋಚನೆ ಕೂಡ ಆತನ ಮನದಲ್ಲಿ ಬರಲಿಲ್ಲ ಅಂದರೆ ಅದು ಅದ್ಭುತವೇ ಹೌದು! ಸರ್ವಾಲಂಕಾರ ಆಗಿದ್ದ ಅಯೋಧ್ಯೆಯ ನಡುವೆ ಯಾವ ವಿಷಾದ ಕೂಡ ಇಲ್ಲದೆ ಎದ್ದು ಹೋಗುವುದು ಸುಲಭ ಅಲ್ಲ! ಅದು ರಾಮನಿಗೆ ಮಾತ್ರ ಸಾಧ್ಯವಾಗುವ ನಡೆ.

ರಾಮನಿಗೆ ನೂರು ಪ್ರತಿಶತ ಜನಮತದ ಬೆಂಬಲ ಇತ್ತು!

ಆಗ ಪೂರ್ಣ ಜನಮತ ತನ್ನ ಪರವಾಗಿ ಇದ್ದಾಗ ರಾಮನು ಪಿತೃ ವಾಕ್ಯವನ್ನು ಧಿಕ್ಕರಿಸಿ ಆಡಳಿತವನ್ನು ಮಾಡಬಹುದಿತ್ತು ಎಂದು ನನಗೆ ಹಲವರು ಕೇಳಿದ್ದಾರೆ. ಆದರೆ ಆಗ ರಾಮನು ಕೇವಲ ದಶರಥನ ಮಗ ಮಾತ್ರ ಆಗಿದ್ದ. ಅರಸ ಆಗಿರಲಿಲ್ಲ ಅನ್ನುವುದು ನನ್ನ ಉತ್ತರ!

ಮುಂದೆ ರಾಣಿ ಕೈಕೇಯಿ ಕಾಡಿಗೆ ಬಂದು ತಮ್ಮ ತಪ್ಪಿಗೆ ಕ್ಷಮೆ ಕೇಳಿ ಮತ್ತೆ ಅಯೋಧ್ಯೆಗೆ ಬರಬೇಕು ಎಂದು ಎಷ್ಟು ವಿನಂತಿ ಮಾಡಿದರೂ ರಾಮಚಂದ್ರನ ಮನಸ್ಸು ಒಂದಿಷ್ಟೂ ವಿಚಲಿತ ಆಗಲಿಲ್ಲ. ಕಣ್ಣೀರು ಸುರಿಸುತ್ತಾ ಬಂದ ಭರತನನ್ನು ಧೈರ್ಯ ತುಂಬಿಸಿ ಅರಸನಾಗಲು ಮಾನಸಿಕವಾಗಿ ಸಿದ್ಧತೆ ಮಾಡಿ ಕಳುಹಿಸಿದ್ದು ಅದೇ ರಾಮ. ಈ ರೀತಿಯ ನಿರ್ಧಾರಗಳು ರಾಮನ ವ್ಯಕ್ತಿತ್ವದ ಕೈಗನ್ನಡಿ.

Sri Ramachandra

ಮುಂದೆ ಅದೇ ರಾಮನು ರಾವಣನ ವಧೆಯಾದ ನಂತರ ಅತ್ಯಂತ ವಿಧಿವತ್ತಾಗಿ ಲಂಕೆಯಲ್ಲಿ ಆತನ ಕ್ರಿಯಾಕರ್ಮ ಮುಗಿಸುತ್ತಾನೆ. ಆಗ ರಾಮ ಹೇಳಿದ ಎರಡು ಮಾತುಗಳನ್ನು ಕೇಳಿ.

ರಾಮನು ದ್ವೇಷ ಮಾಡಿದ್ದು ರಾವಣನನ್ನು ಅಲ್ಲ!

‘ನಾನು ದ್ವೇಷ ಮಾಡಿದ್ದು ರಾವಣನನ್ನು ಅಲ್ಲ. ಅವನ ಒಳಗಿದ್ದ ರಾವಣತ್ವವನ್ನು! ಯಾರನ್ನೇ ಆದರೂ ಮರಣದ ನಂತರ ದ್ವೇಷ ಮಾಡಬಾರದು. ರಾವಣನು ಹೇಳಿ ಕೇಳಿ ಮಹಾ ಬ್ರಾಹ್ಮಣ. ಆತನು ದೈವಭಕ್ತ. ಆದ್ದರಿಂದ ಅವನನ್ನು ಗೌರವಿಸುವುದು ನಮ್ಮ ಕರ್ತವ್ಯ!’

ಸೀತೆಯನ್ನು ಅಗ್ನಿಪರೀಕ್ಷೆ ಮಾಡಿದ್ದು ಸರಿಯಾ?

ಮುಂದೆ ಅದೇ ರಾಮಚಂದ್ರನು ಅಯೋಧ್ಯೆಗೆ ಬಂದು ಪಟ್ಟಾಭಿಷೇಕ ಆಗುವ ಮೊದಲು ತನ್ನ ಪತ್ನಿ ಸೀತೆಯನ್ನು ಅಯೋಧ್ಯೆಯ ಜನರ ಮುಂದೆ ಅಗ್ನಿ ಪರೀಕ್ಷೆಗೆ ಒಡ್ಡಿದ ವಿಷಯದ ಬಗ್ಗೆ ತುಂಬಾ ಟೀಕೆಗಳು ಇವೆ. ಅದೇ ರೀತಿ ಒಬ್ಬ ಸಾಮಾನ್ಯ ಅಗಸನ ಮಾತನ್ನು ಕೇಳಿ ತನ್ನ ಕೈ ಹಿಡಿದ ಮಡದಿ ಸೀತೆಯನ್ನು ಮತ್ತೆ ಕಾಡಿಗೆ ಕಳುಹಿಸಿದ ನಿರ್ಧಾರದ ಬಗ್ಗೆ ಕೂಡ ಸಾಕಷ್ಟು ಟೀಕೆಗಳು ಬಂದಿವೆ.

ಆದರೆ ಅವೆರಡು ಕೂಡ ಶ್ರೀರಾಮನು ರಾಜಾರಾಮನಾಗಿ ತೆಗೆದುಕೊಂಡ ನಿರ್ಧಾರಗಳು. ಅವು ಸೀತಾರಾಮನಾಗಿ ತೆಗೆದುಕೊಂಡ ನಿರ್ಧಾರಗಳು ಅಲ್ಲ!

ರಾಜನ ನಡೆಗಳು ಸಂಶಯಾಸ್ಪದ ಆಗಿರಬಾರದು!

ರಾಜಾರಾಮನಾಗಿ ತನ್ನ ಪ್ರತಿಯೊಬ್ಬ ಪ್ರಜೆಯ ಮುಂದೆ ಸಂಶಯಾತೀತವಾಗಿ ಇರಬೇಕು ಮತ್ತು ಕಾಣಿಸಿಕೊಳ್ಳಬೇಕು ಎನ್ನುವುದು ರಾಜನ ಆದ್ಯ ಕರ್ತವ್ಯ. ತಾನು ನೆಟ್ಟಗಿರುವುದು ಮಾತ್ರವಲ್ಲ, ತನ್ನ ನೆರಳು ಕೂಡ ನೆಟ್ಟಗಿರಬೇಕು ಎಂದು ಭಾವಿಸುವುದು ಒಬ್ಬ ರಾಜನ ಆದ್ಯತೆಯೇ ಆಗಿದೆ. ಒಬ್ಬ ಬಹು ಸಾಮಾನ್ಯ ಅಗಸನೂ ಅರಸನಿಗೆ ಒಬ್ಬ ಗೌರವಾನ್ವಿತ ಪ್ರಜೆಯೇ ಆಗಿದ್ದಾನೆ. ಆತನ ಮನದ ಸಂಶಯವನ್ನು ಕೂಡ ನಿವಾರಣೆ ಮಾಡುವುದು ಒಬ್ಬ ಅರಸನ ಕರ್ತವ್ಯ. ಹೀಗೆ ಯಾವ ಕೋನದಲ್ಲಿ ನೋಡಿದರೂ ರಾಮನ ವ್ಯಕ್ತಿತ್ವದಲ್ಲಿ ಒಂದು ಕಪ್ಪುಚುಕ್ಕೆ ಕೂಡ ಕಂಡು ಬರುವುದು ಸಾಧ್ಯ ಇಲ್ಲ. ಆದ್ದರಿಂದ ರಾಮ ಆಗುವುದು ಎಲ್ಲರಿಗೂ ಕಷ್ಟ!

ರಾವಣ ಆಗುವುದು ಕಷ್ಟವೇ!

ರಾಮ ಆಗುವುದು ಎಷ್ಟು ಕಷ್ಟವೋ ರಾವಣ ಆಗುವುದು ಅಷ್ಟೇ ಕಷ್ಟ! ಕವಿ ವಾಲ್ಮೀಕಿಯು ಕಥಾ ನಾಯಕ ರಾಮನ ಪಾತ್ರಕ್ಕೆ ಎಷ್ಟು ಶಕ್ತಿ ತುಂಬಿದ್ದಾನೋ ಖಳನಾದ ರಾವಣನ ಪಾತ್ರಕ್ಕೆ ಕೂಡ ಅಷ್ಟೇ ಶಕ್ತಿಯನ್ನು ತುಂಬಿದ್ದಾನೆ. ಆತನ ಪಾತ್ರವೂ ಅಮೋಘವೆ ಆಗಿದೆ!

ಸೀತಾ ಸ್ವಯಂವರದಲ್ಲಿ ತನಗಾದ ಅಪಮಾನದಿಂದ ಕುದ್ದು ಹೋಗಿದ್ದ ರಾವಣನ ಅಂತರ್ಯದಲ್ಲಿ ಸೀತೆಯನ್ನು ಒಮ್ಮೆ ಗೆಲ್ಲಬೇಕು ಎಂದು ಮಾತ್ರ ಇತ್ತು. ಅನುಭವಿಸುವುದು ಆಗಿರಲಿಲ್ಲ. ಅನುಭವಿಸುವ ಆಸೆ ಇದ್ದಿದ್ದರೆ ಅವನದ್ದೇ ಲಂಕೆಯಲ್ಲಿ ಏಕಾಂಗಿ ಆಗಿದ್ದ ಸೀತೆಯು ತನ್ನ ಮಾನವನ್ನು ಉಳಿಸಿಕೊಳ್ಳಲು ಸಾಧ್ಯವೇ ಇರಲಿಲ್ಲ!

ಹೀಗೊಂದು ಕಥೆಯನ್ನು ನಾನು ಓದಿದ್ದು!

ಈ ಕಥೆಯು ಮೂಲ ರಾಮಾಯಣದಲ್ಲಿ ಇಲ್ಲ. ಆದರೆ ಅದ್ಭುತವಾಗಿದೆ. ಕಾಲ್ಪನಿಕ ಎಂದು ಬೇಕಾದರೂ ಕರೆಯಿರಿ. ಸೀತೆಯನ್ನು ಹುಡುಕುತ್ತಾ ಲಂಕೆಗೆ ಬಂದಿದ್ದ ಶ್ರೀರಾಮನಿಗೆ ರಾವಣನ ಬಗ್ಗೆ ಸಾಕಷ್ಟು ಒಳ್ಳೆಯ ಮಾತುಗಳು ಆಲ್ಲಿ ಕೇಳಿಬರುತ್ತವೆ. ಆತನು ಮಹಾ ಯೋಧ. ಆತನನ್ನು ಸೋಲಿಸುವುದು ಖಂಡಿತ ಸುಲಭದ ಕೆಲಸ ಅಲ್ಲ ಎಂದು ಗೊತ್ತಾಗುತ್ತದೆ. ಅದಕ್ಕೆ ‘ಶತ್ರು ಸಂಹಾರ’ದ ಯಾಗವನ್ನು ಮಾಡಬೇಕು ಎಂದು ಅಲ್ಲಿದ್ದ ಹಿರಿಯರು ಹೇಳುತ್ತಾರೆ.

ಲಂಕೆ ಹೇಳಿ ಕೇಳಿ ರಾಕ್ಷಸರ ನಾಡು! ಅಲ್ಲಿ ಆ ಯಾಗವನ್ನು ಮಾಡಬೇಕು ಅಂತಾದರೆ ಪುರೋಹಿತರು ಯಾರು ಸಿಗುತ್ತಾರೆ? ಆಗ ಹಿರಿಯರು ಇನ್ನೊಂದು ಉಪಾಯವನ್ನು ಹೇಳುತ್ತಾರೆ. ಲಂಕೆಯಲ್ಲಿ ಒಬ್ಬನೇ ಬ್ರಾಹ್ಮಣ ಇರುವುದು ಅದು ರಾವಣ! ಆತನಿಗೆ ಎಲ್ಲಾ ವೇದ ವಿದ್ಯೆಗಳು ಗೊತ್ತಿವೆ. ಆತ ಪುರೋಹಿತನಾಗಿ ಬರಲು ಒಪ್ಪಿದರೆ ಆದೀತು ಎಂಬ ಅಭಿಪ್ರಾಯ ಬಂತು.

ತನ್ನದೇ ವಧೆಯನ್ನು ಮಾಡುವ ‘ಶತ್ರುಸಂಹಾರ ಯಾಗ’ಕ್ಕೆ ಪುರೋಹಿತನಾಗಿ ರಾವಣನು ಬರಬಹುದೇ? ಈ ಪ್ರಶ್ನೆಯು ಎದ್ದಾಗ ನೋಡೋಣ, ಒಮ್ಮೆ ಪ್ರಯತ್ನ ಮಾಡೋಣ ಎಂಬ ಮಾತು ಬಂತು. ಆಗ ರಾವಣನಿಗೆ ಶ್ರೀರಾಮನ ಕಡೆಯಿಂದ ಗೌರವಪೂರ್ವಕ ಆಮಂತ್ರಣವು ಹೋಯಿತು. ರಾವಣ ಬರಲು ಸಾಧ್ಯ ಇಲ್ಲವೇ ಇಲ್ಲ ಎಂದು ಎಲ್ಲರೂ ನಂಬಿದ್ದರು.

ಇದನ್ನೂ ಓದಿ: ರಾಜಮಾರ್ಗ ಅಂಕಣ: RCB- ʼಹೊಸ ಅಧ್ಯಾಯʼ ಆರಂಭ ಆಗೋದು ಯಾವಾಗ?

ಆದರೆ ಶ್ರೀರಾಮನ ಆಮಂತ್ರಣಕ್ಕೆ ತಲೆ ಬಾಗಿ ರಾವಣನು ಬಂದೇ ಬಿಟ್ಟ! ಪುರೋಹಿತನಾಗಿ ಕೂತು ‘ಶತ್ರು ಸಂಹಾರ’ ಯಾಗವನ್ನು ಪೂರ್ತಿ ಮಾಡಿದ. ಪೂರ್ಣಾಹುತಿ ಆದ ನಂತರ ಶ್ರೀರಾಮನು ಪುರೋಹಿತ ರಾವಣನ ಪಾದ ಮುಟ್ಟಿ ನಮಸ್ಕಾರ ಮಾಡಿದ!

ಆಗ ರಾವಣ ರಾಮನಿಗೆ ಕೈ ಮುಗಿದು ಹೇಳಿದ ಮಾತು ಕೇಳಿ.

“ಶ್ರೀರಾಮ, ಸೀತೆಯನ್ನು ಅಪಹರಣ ಮಾಡಿಕೊಂಡು ಬಂದ ನಂತರ ಪಾಪ ಪ್ರಜ್ಞೆಯಿಂದ ಸರಿಯಾಗಿ ನಿದ್ದೆಯು ಬರುತ್ತಿಲ್ಲ. ನಿದ್ದೆ, ವಿಶ್ರಾಂತಿ ಇಲ್ಲದೆ ದಣಿದು ಬಿಟ್ಟಿದ್ದೇನೆ. ನಿನ್ನ ಕಾಲ ಮೇಲೆ ಒಂದು ಗಳಿಗೆ ಮಲಗಬೇಕು ಅನ್ನಿಸ್ತಾ ಇದೆ! ನಿನ್ನ ಅನುಮತಿಯನ್ನು ಕೊಡುವೆಯಾ?’

ತನ್ನ ಗೆಲುವಿಗೆ ಬೇಕಾಗಿ ದೊಡ್ಡ ಯಾಗವನ್ನೇ ಮಾಡಿಕೊಟ್ಟ ರಾವಣನ ವಿನಂತಿಯನ್ನು ಶ್ರೀರಾಮನು ನಿರಾಕರಿಸಲು ಸಾಧ್ಯವೇ ಇರಲಿಲ್ಲ. ಶ್ರೀರಾಮ ಅಸ್ತು ಅಂದ. ರಾವಣನು ಪುಟ್ಟ ಮಗುವಿನ ಹಾಗೆ ರಾಮನ ಕಾಲಿನ ಮೇಲೆ ಸುದೀರ್ಘ ಕಾಲ ಮೈಮರೆತು ಮಲಗಿದ. ಎಲ್ಲವನ್ನೂ ಮರೆತು ಬಿಟ್ಟನು! ತನ್ನ ಪಾಪದ ಭೀತಿಯನ್ನು ರಾಮನ ಪಾದಮೂಲದಲ್ಲಿ ಇಟ್ಟು ಎದೆಯ ಭಾರವನ್ನು ಇಳಿಸಿ ಹೊರಟು ಹೋದನು ರಾವಣ!

ಈಗ ಹೇಳಿ ರಾವಣ ಆಗುವುದು ಅಷ್ಟು ಸುಲಭವಾ?

ಇದನ್ನೂ ಓದಿ: Ram Navami : ಇಂದು ದೇಶಾದ್ಯಂತ ರಾಮ ನವಮಿ ಸಂಭ್ರಮ; ಏನು ಈ ದಿನದ ಮಹತ್ವ?

Continue Reading
Advertisement
Lok sabha Election
ರಾಜಕೀಯ4 mins ago

lok Sabha Election : ಮೊದಲ ಹಂತದಲ್ಲಿ ಶೇ.60.3ರಷ್ಟು ಮತದಾನ

Actor Darshan
ಕರ್ನಾಟಕ9 mins ago

Actor Darshan: ನಟ ದರ್ಶನ್‌ ಇದ್ದ ಪ್ರಚಾರ ವಾಹನಕ್ಕೆ ವಿದ್ಯುತ್‌ ಸ್ಪರ್ಶ; ತಪ್ಪಿದ ಭಾರೀ ಅನಾಹುತ!

Boat Capsizes
ದೇಶ22 mins ago

Boat Capsizes: ದೋಣಿ ಮುಳುಗಿ ಇಬ್ಬರು ಜಲಸಮಾಧಿ; ಏಳು ಮಂದಿ ನಾಪತ್ತೆ

Chikkaballapur Lok Sabha Constituency NDA candidate Dr K Sudhakar election campaign
ಚಿಕ್ಕಬಳ್ಳಾಪುರ30 mins ago

Lok Sabha Election: ಯಲಹಂಕದಲ್ಲಿ ಡಾ.ಕೆ.ಸುಧಾಕರ್ ಗೆ 1 ಲಕ್ಷ ಮತಗಳ ಲೀಡ್ ಕೊಡಿಸುತ್ತೇನೆ: ಎಸ್ ಆರ್ ವಿಶ್ವನಾಥ್ ಪ್ರತಿಜ್ಞೆ

Chikkaballapur Lok Sabha Constituency Congress candidate Raksha Ramaiah election campaign in Yalahanka
ಬೆಂಗಳೂರು51 mins ago

Lok Sabha Election 2024: ಬಿಜೆಪಿ ಆಡಳಿತದಲ್ಲಿ ಶೇ. 5ರಷ್ಟೂ ಉದ್ಯೋಗ ಸೃಷ್ಟಿಯಾಗಿಲ್ಲ: ರಕ್ಷಾ ರಾಮಯ್ಯ

kaalnadige Jatha programme in Uttara kannada
ಉತ್ತರ ಕನ್ನಡ1 hour ago

Lok Sabha Election 2024: ಉ.ಕ ಜಿಲ್ಲೆಯಲ್ಲಿ ದಾಖಲೆ ಪ್ರಮಾಣದ ಮತದಾನದ ಗುರಿ; ಡಿಸಿ

Bangalore Rural Lok Sabha Constituency Congress candidate D K Suresh Election campaign
ಬೆಂಗಳೂರು ಗ್ರಾಮಾಂತರ1 hour ago

Lok Sabha Election 2024: ಗ್ಯಾರಂಟಿ ಯೋಜನೆಗಳು ಇಡೀ ದೇಶಕ್ಕೆ ಮಾದರಿ: ಡಿ.ಕೆ. ಸುರೇಶ್

Neha Murder Case
ಕರ್ನಾಟಕ1 hour ago

Neha Murder Case: ನನ್ನ ಮಗನಿಗೆ ಶಿಕ್ಷೆ ಆಗಬೇಕು; ಯಾರೂ ಇಂಥ ಕೃತ್ಯ ಎಸಗಬೇಡಿ ಎಂದು ಫಯಾಜ್‌ ತಂದೆ ಕಣ್ಣೀರು

IPL 2024
ಪ್ರಮುಖ ಸುದ್ದಿ1 hour ago

IPL 2024 : ಇಂಪ್ಯಾಕ್ಟ್​ ಪ್ಲೇಯರ್ ನಿಯಮಕ್ಕೆ ಆಕ್ಷೇಪ ಎತ್ತಿದ ರಿಕಿ ಪಾಂಟಿಂಗ್​

Lok Sabha Election 2024
Lok Sabha Election 20241 hour ago

Lok Sabha Election 2024: ನಾಗಾಲ್ಯಾಂಡ್‌ನ 6 ಜಿಲ್ಲೆಗಳಲ್ಲಿ ಶೂನ್ಯ ಮತದಾನ; ಕಾರಣ ಇದು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Neha Murder Case
ಹುಬ್ಬಳ್ಳಿ7 hours ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ18 hours ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ3 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ4 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20244 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20245 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ6 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ7 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ1 week ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

ಟ್ರೆಂಡಿಂಗ್‌