Shravana Masa 2023: ಶ್ರಾವಣ ಬಂತು ನಾಡಿಗೆ; ಮನಸು ಹಬ್ಬಗಳ ಕಡೆಗೆ - Vistara News

ಧಾರ್ಮಿಕ

Shravana Masa 2023: ಶ್ರಾವಣ ಬಂತು ನಾಡಿಗೆ; ಮನಸು ಹಬ್ಬಗಳ ಕಡೆಗೆ

ಇಂದಿನಿಂದ ಶ್ರಾವಣ (Shravana masa 2023) ಆರಂಭ. ಈ ತಿಂಗಳಲ್ಲೇ ಸಾಲು ಸಾಲು ಧಾರ್ಮಿಕ ಪೂಜೆ, ಹಬ್ಬ-ಹರಿದಿನಗಳು ಬರುತ್ತವೆ. ಒಳ್ಳೆಯ ಕಾರ್ಯಗಳನ್ನು ಆರಂಭಿಸಲು ಈ ತಿಂಗಳು ಹೆಚ್ಚು ಪ್ರಶಸ್ತ ಎಂಬ ನಂಬಿಕೆ.

VISTARANEWS.COM


on

shravana masa
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ʻʻಶ್ರಾವಣ ಬಂತು ಕಾಡಿಗೆ, ಬಂತು ನಾಡಿಗೆ, ಬಂತು ಬೀಡಿಗೆ…ʼʼ ಎಂದು ವರಕವಿ ದ.ರಾ.ಬೇಂದ್ರೆ ಅವರು ಹಾಡಿದ್ದರು. ಶ್ರಾವಣ (shravana masa 2023) ಬಂದರೆ ಪರಿಸರದಲ್ಲೂ ಮನುಷ್ಯನ ಮುಖದಲ್ಲೂ ಒಂದು ಉಲ್ಲಾಸ ಎದ್ದು ತೋರುತ್ತದೆ. ಅದಕ್ಕೆ ಕಾರಣ ಈ ಮಾಸದಲ್ಲಿ ಆಗುವ ಪ್ರಾಕೃತಿಕ ಬದಲಾವಣೆ ಮತ್ತು ಆಗಮಿಸುವ ಹಬ್ಬಗಳ (shravana masa festivals) ಸಾಲು.

ಚೈತ್ರ ವೈಶಾಖ ವಸಂತ ಋತು, ಜ್ಯೇಷ್ಠ ಆಷಾಢ ಗ್ರೀಷ್ಮ ಋತು ಎಂದು ನಮ್ಮ ಋತುಗಳನ್ನು ಲೆಕ್ಕ ಹಾಕುವುದು ವಾಡಿಕೆ. ಇವುಗಳ ನಂತರ ಬರುವ ಮಾಸವೇ ಶ್ರಾವಣ ಮಾಸ. ಶ್ರಾವಣದೊಂದಿಗೆ ವರ್ಷ ಋತು ಪ್ರವೇಶಿಸುತ್ತದೆ. ಹೀಗಾಗಿ ಇದು ವರ್ಷದ ಮೂರನೇ ಋತುವಿನ ಆರಂಭ ಹಾಗೂ ಐದನೇ ಮಾಸದ ಶುರು.

ಇದನ್ನು ವರ್ಷ ಋತುವೆಂದು ಕರೆದರೂ ನಮ್ಮಲ್ಲಿ ಗ್ರೀಷ್ಮದಿಂದಲೇ (ಜೂನ್‌, ಜುಲೈ) ಮುಂಗಾರು ಆರಂಭವಾಗಿರುತ್ತದೆ. ಶ್ರಾವಣದ ಹೊತ್ತಿಗೆ ಜೂನ್‌ ಜುಲೈ ತಿಂಗಳುಗಳ ಅಬ್ಬರ ಮಳೆಯ ಅಬ್ಬರ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿ, ಒಂದು ಬಗೆಯ ನೆಮ್ಮದಿ ನೆಲೆಸಿರುತ್ತದೆ. ಈ ವರ್ಷದ ಮಳೆ ಹೇಗಿದೆ ಎಂದು ಗೊತ್ತಾಗಿರುತ್ತದೆ. ಹೀಗಾಗಿ ಕೃಷಿ ಚಟುವಟಿಕೆಗಳು ಮೈದುಂಬಿಕೊಂಡು, ಒಂದು ಹಂತದ ಬಿತ್ತನೆ ನಾಟಿಗಳು ಮುಗಿದಿರುತ್ತವೆ. ಇದರಿಂದ ರೈತಾಪಿ ಜನಗಳಿಗೆ ಕೂಡ ತುಸು ವಿಶ್ರಾಂತಿ ದೊರೆತು, ಸಮಾಜದ ಜನಗಳ ಜೊತೆ ಒಡನಾಡುವ ಹುಮ್ಮಸ್ಸು ಬಂದಿರುತ್ತದೆ.

ಇದೇ ಹಬ್ಬಗಳು ಹೆಚ್ಚಲು ಕೂಡ ಕಾರಣ. ಈ ತಿಂಗಳಲ್ಲೇ ಸಾಲು ಸಾಲು ಧಾರ್ಮಿಕ ಪೂಜೆ, ಹಬ್ಬ-ಹರಿದಿನಗಳು ಬರುತ್ತವೆ. ಒಳ್ಳೆಯ ಕಾರ್ಯಗಳನ್ನು ಆರಂಭಿಸಲು ಈ ತಿಂಗಳು ಹೆಚ್ಚು ಪ್ರಶಸ್ತ ಎಂಬ ನಂಬಿಕೆ. ಆಷಾಢ ಮಾಸದ ಬಳಿಕ ಬರುವ ಹುಣ್ಣಿಮೆಯ ನಂತರ ಶ್ರಾವಣ ನಕ್ಷತ್ರಕ್ಕೆ ಚಂದ್ರನು ಪ್ರವೇಶಿಸುತ್ತಾನೆ. ಹೀಗಾಗಿ ಇದು ಶ್ರಾವಣ. ನಮ್ಮಲ್ಲಿ ಶ್ರವಣ, ಶ್ರಾವಣ ಎಂದರೆ ಆಲಿಸುವುದು ಎಂದೂ ಅರ್ಥವಿದೆ. ಹೀಗಾಗಿ ಈ ಮಾಸದಲ್ಲಿ ಹೆಚ್ಚಾಗಿ ಪುರಾಣ ಪ್ರವಚನಗಳನ್ನು ಆಲಿಸುವ ರೂಢಿ ಕೂಡ ಬೆಳೆದುಬಂದಿದೆ.

ಶ್ರಾವಣ ತಿಂಗಳಲ್ಲಿ ಪ್ರಕೃತಿ ಕೂಡ ಸಾಕಷ್ಟು ಮಳೆ ಕಂಡುದರಿಂದ ಚಿಗುರಿ ನಳನಳಿಸುತ್ತದೆ. ಹೂಗಳೂ ಜಾಸ್ತಿ ಬೆಳೆಯುತ್ತವೆ. ಹೀಗಾಗಿ ಚೂಡಿಪೂಜೆ (ಹೂವಿನ ಪೂಜೆ) ಕೂಡ ನಡೆಯುತ್ತದೆ. ಚೂಡಿಪೂಜೆ, ತುಳಸಿಪೂಜೆಯಿಂದ ಲಕ್ಷ್ಮೀದೇವಿ ಒಲಿಯುತ್ತಾಳೆ ಎಂಬ ನಂಬಿಕೆ ಇದೆ.

ಶಿವನ ಮಾಸ

ಶ್ರಾವಣ ಎಂದರೆ ಶಿವನ ಮಾಸ (shiva worship) ಎಂದೇ ನಂಬಿಕೆ. ಶಿವನ ಪೂಜೆ ಆಗ ಶ್ರೇಯಸ್ಕರ. ಅದೇಕೆ? ಇದೇ ಮಾಸದಲ್ಲಿ ಸಮುದ್ರ ಮಥನ ನಡೆಯಿತಂತೆ. ಆಗ ಉದಿಸಿದ ಹಾಲಾಹಲವನ್ನು ಶಿವನು ಕುಡಿದು ಗಂಟಲಲ್ಲಿ ಧರಿಸಿಕೊಂಡು ಲೋಕಕ್ಕೆ ಒಳಿತನ್ನು ಮಾಡಿದ. ಇದೇ ಅಂದು ಆತನ ನೆನೆಯಲು ಕಾರಣ. ಶಿವನಿಗೆ ಅಭಿಷೇಕ ಮಾಡುವುದು ಈ ವಿಷದಿಂದ ಕಾವೇರಿದ ಅವನ ದೇಹವನ್ನು ತಣಿಸಲು. ಶ್ರಾವಣದಲ್ಲಿ ರುದ್ರಾಕ್ಷಿಯ ಹಾರ ಧರಿಸುವುದು ಅತ್ಯಂತ ಶುಭ. ಶ್ರಾವಣ ಸೋಮವಾರದ ವ್ರತ ಮಾಡುವುದು ತುಂಬಾ ಶ್ರೇಷ್ಠ. ಶ್ರಾವಣ ಮಾಸದಲ್ಲಿ ರುದ್ರಾಕ್ಷಿ ಮಾಲೆ ಹಿಡಿದು, ಶಿವಪಂಚಾಕ್ಷರಿ ಮಂತ್ರವನ್ನು 108 ಬಾರಿ ಪಠಿಸಿದರೆ ಶುಭ.

ಮಹಾವಿಷ್ಣುವಿಗೂ ವಂದನೆ

ಶ್ರಾವಣ ಸೋಮವಾರಗಳಂದು ಪರಶಿವನನ್ನು ಆರಾಧಿಸಿದರೆ, ಗುರುವಾರ ಹಾಗೂ ಬುಧವಾರ ಮಹಾವಿಷ್ಣುವನ್ನು (vishnu worship) ಆರಾಧಿಸಲಾಗುತ್ತದೆ. ಮಂಗಳವಾರ, ಮನೆಯಲ್ಲಿನ ಮಹಿಳೆಯರು ಕುಟುಂಬದ ಸದಸ್ಯರ ಉತ್ತಮ ಆರೋಗ್ಯಕ್ಕಾಗಿ ಗೌರಿ ಪೂಜೆಯನ್ನು ಮಾಡುತ್ತಾರೆ. ಬುಧವಾರ, ಭಗವಾನ್ ವಿಷ್ಣು ಅಥವಾ ಕೃಷ್ಣನ ಇನ್ನೊಂದು ಅವತಾರವಾದ ವಿಠಲನನ್ನು ಆರಾಧಿಸುತ್ತಾರೆ. ಶ್ರಾವಣ ಮಾಸದ ಗುರುವಾರದಂದು ಬುಧ ಮತ್ತು ಗುರುವನ್ನು ಪೂಜಿಸುತ್ತಾರೆ. ಶುಕ್ರವಾರದಂದು ಲಕ್ಷ್ಮಿ ಮತ್ತು ತುಳಸಿಯನ್ನು ಪೂಜಿಸುತ್ತಾರೆ. ಶ್ರಾವಣ ಶನಿವಾರ ಅಥವಾ ಸಂಪತ್ ಶನಿವಾರದಂದು ಶನೀಶ್ವರನನ್ನು ಆರಾಧಿಸುತ್ತಾರೆ.

ಶ್ರಾವಣದ ಹಬ್ಬಗಳು

ಶ್ರಾವಣದಲ್ಲಿ ಸಾಲು ಸಾಲಾಗಿ ಬರುವ ಹಬ್ಬಗಳು ಹೀಗಿವೆ- ನಾಗಚೌತಿ, ನಾಗಪಂಚಮಿ (nagara panchami), ಪುತ್ರದಾ ಏಕಾದಶಿ, ರಕ್ಷಾಬಂಧನ (raksha bandhan), ಗುರು ಆರಾಧನೆ, ಗೋಕುಲಾಷ್ಟಮಿ, ಅಜ ಏಕಾದಶಿ, ಕಲ್ಕಿ ಜಯಂತಿ, ವರಮಹಾಕ್ಷ್ಮೀ ಪೂಜೆ, ಮಂಗಳಗೌರಿ ವ್ರತ, ಶ್ರಾವಣ ಶನಿವಾರ, ಋಗ್ಉಪಾಕರ್ಮ, ಯಜುರುಪಾಕರ್ಮ, ಸಿರಿಯಾಳ ಷಷ್ಠೀ, ವಾಮನ ಜಯಂತಿ, ಶ್ರೀ ಕೃಷ್ಣ ಜನ್ಮಾಷ್ಟಮಿ. ಈ ಹಬ್ಬಗಳಲ್ಲಿ ಕನಿಷ್ಠ ಒಂದನ್ನಾದರೂ ಪ್ರತೀ ಹಿಂದೂ ಕುಟುಂಬ ಆಚರಿಸುತ್ತದೆ. ಸಮಾಜದ ಜನತೆ ಒಟ್ಟಾಗಿ ಬಂಧುಮಿತ್ರರನ್ನು ಭೇಟಿಯಾಗಿ, ಸಿಹಿತಿಂಡಿಗಳನ್ನು ಹಂಚಿಕೊಂಡು, ಮಕ್ಕಳು ಮರಿಗಳೊಂದಿಗೆ ಆಟವಾಡಿ ಖುಷಿಪಡುತ್ತದೆ.

ಭಾದ್ರಪದ ಮಾಸದ ಪ್ರವೇಶವಾಗುತ್ತಿದ್ದಂತೆ ಚೌತಿ, ದೀಪಾವಳಿ ಮುಂತಾದ ದೊಡ್ಡ ಹಬ್ಬಗಳಿಗೆ ತೆರೆದುಕೊಳ್ಳಲು ಈ ಹಬ್ಬಗಳು ಮೂಲವಾಗುತ್ತವೆ. ಸಮಾಜದ ಆರ್ಥಿಕತೆ ಸ್ವಲ್ಪಸ್ವಲ್ಪವೇ ಬೆಳೆಯುತ್ತ, ದೀಪಾವಳಿ- ನವರಾತ್ರಿಯ ಹೊತ್ತಿಗೆ ಸಾಮಾಜಿಕ ಬಾಂಧವ್ಯದ ಗಟ್ಟಿ ಬೆಸುಗೆಯೊಂದು ರೂಪುಗೊಳ್ಳುತ್ತದೆ. ಹಬ್ಬದ ಮೂಲ ಆಶಯವೇ ಸಹಬಾಳ್ವೆ. ಇದು ಆರ್ಥಿಕತೆಯ ವಿಸ್ತರಣೆ, ಬೆಳವಣಿಗೆಗೂ ಕಾರಣವಾಗುತ್ತದೆ.

ಇದನ್ನೂ ಓದಿ: Festive Season Shopping: ಶುರುವಾಯ್ತು ಶ್ರಾವಣ ಮಾಸದ ಫೆಸ್ಟೀವ್‌ ಸೀಸನ್‌ ಶಾಪಿಂಗ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಬೆಳಗಾವಿಯಲ್ಲಿ ನಿರ್ಮಾಣವಾಗಲಿದೆ ಭವ್ಯ ತಿರುಪತಿ ತಿಮ್ಮಪ್ಪನ ದೇಗುಲ: 100 ಕೋಟಿ ವೆಚ್ಚ, 7 ಎಕರೆ ಜಾಗ ಮಂಜೂರು

VISTARANEWS.COM


on

ಬೆಳಗಾವಿ: ಉತ್ತರ ಕರ್ನಾಟಕದ ಭಕ್ತರ ಪಾಲಿಗೆ ತಿರುಮಲ ತಿರುಪತಿ ದೇವಸ್ಥಾನ (TTD) ಮಂಡಳಿಯು ಸಿಹಿ ಸುದ್ದಿಯೊಂದನ್ನು ನೀಡಿದೆ. ತಿರುಪತಿಯ ಭವ್ಯ ವೆಂಕಟೇಶ್ವರ ದೇವಾಲಯದ ಮಾದರಿಯಲ್ಲೇ ಬೆಳಗಾವಿಯಲ್ಲಿಯೂ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಶ್ರೀನಿವಾಸನ ಸನ್ನಿಧಿ ತಲೆಯೆತ್ತಲಿದೆ. ಬೆಳಗಾವಿ ತಾಲೂಕಿನ ಕೋಳಿಕೊಪ್ಪ ಹೊರವಲಯದ ಸುಮಾರು 7 ಎಕರೆ ಪ್ರದೇಶದಲ್ಲಿ ಈ ಯೋಜನೆ ಸಾಕಾರಗೊಳ್ಳಲಿದ್ದು, ಇದಕ್ಕಾಗಿ ಬೆಳಗಾವಿ ರೆಡ್ಡಿ ಸಂಘವು ಭೂಮಿಯನ್ನು ಖರೀದಿಸಿ ಈಗಾಗಲೇ ಟಿಟಿಡಿ ಮಂಡಳಿಗೆ ಅಧಿಕೃತವಾಗಿ ಹಸ್ತಾಂತರಿಸಿದೆ. ಈ ಮೂಲಕ ಕುಂದಾನಗರಿಯಲ್ಲಿ ತಿಮ್ಮಪ್ಪನ ದರ್ಶನಕ್ಕೆ ಮೊದಲ ಭದ್ರ ಬುನಾದಿ ಬಿದ್ದಿದೆ.

ಈ ದೇವಾಲಯವು ಕೇವಲ ಧಾರ್ಮಿಕ ಕೇಂದ್ರವಾಗಿರದೆ, ವಾಸ್ತುಶಿಲ್ಪ, ಲಡ್ಡು ವಿತರಣೆ ಮತ್ತು ಭಕ್ತರ ವಾಸ್ತವ್ಯದ ಸೌಲಭ್ಯ ಸೇರಿದಂತೆ ಪ್ರತಿಯೊಂದೂ ಅಂಶದಲ್ಲೂ ಮೂಲ ತಿರುಪತಿ ಕ್ಷೇತ್ರವನ್ನೇ ಹೋಲುವಂತೆ ನಿರ್ಮಾಣವಾಗಲಿದೆ. ನೂರು ಕೋಟಿ ರೂಪಾಯಿ ವೆಚ್ಚದ ಈ ಯೋಜನೆಯಲ್ಲಿ ಶೇ. 10ರಷ್ಟು ಹಣವನ್ನು ಮಾತ್ರ ದಾನಿಗಳಿಂದ ಸಂಗ್ರಹಿಸಿ, ಉಳಿದ ವೆಚ್ಚವನ್ನು ಟಿಟಿಡಿ ಭರಿಸಲಿದೆ. ಮುಂದಿನ ಎರಡು ವರ್ಷಗಳಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸುವ ಗುರಿ ಹೊಂದಲಾಗಿದ್ದು, ಇದಕ್ಕಾಗಿ ಟಿಟಿಡಿ ಪ್ರತ್ಯೇಕ ಟ್ರಸ್ಟ್ ರಚಿಸಿ ಸ್ಥಳೀಯರನ್ನು ಒಳಗೊಳ್ಳಲಿದೆ. ಈ ದೇವಾಲಯದ ನಿರ್ಮಾಣದಿಂದ ಬೆಳಗಾವಿ ಜಿಲ್ಲೆಯಷ್ಟೇ ಅಲ್ಲದೆ, ನೆರೆಯ ಗೋವಾ ಮತ್ತು ಮಹಾರಾಷ್ಟ್ರದ ಭಕ್ತರಿಗೂ ತಿಮ್ಮಪ್ಪನ ದರ್ಶನ ಪಡೆಯಲು ಸುಲಭವಾಗಲಿದೆ.

ನೂತನ ದೇವಾಲಯಗಳ ನಿರ್ಮಾಣಕ್ಕಾಗಿ ಟಿಟಿಡಿ ಮೀಸಲಿಟ್ಟಿರುವ ಒಂಬತ್ತು ಸಾವಿರ ಕೋಟಿ ರೂಪಾಯಿ ನಿಧಿಯಲ್ಲಿ ಬೆಳಗಾವಿ ಯೋಜನೆಯೂ ಸೇರಿದೆ. ದೇಶದ ಆರು ಪ್ರಮುಖ ಸ್ಥಳಗಳಲ್ಲಿ ವೆಂಕಟೇಶ್ವರ ದೇವಾಲಯ ನಿರ್ಮಿಸಲು ಉದ್ದೇಶಿಸಿರುವ ಟಿಟಿಡಿ, ಬೆಳಗಾವಿಯಲ್ಲಿ ಶೀಘ್ರವೇ ಭೂಮಿಪೂಜೆ ನೆರವೇರಿಸುವುದಾಗಿ ತಿಳಿಸಿದೆ. ರೆಡ್ಡಿ ಸಂಘದ ಈ ಉದಾರ ಕಾರ್ಯಕ್ಕೆ ಟಿಟಿಡಿ ಮಂಡಳಿ ಪ್ರಶಂಸೆ ವ್ಯಕ್ತಪಡಿಸಿದ್ದು, ಈ ಯೋಜನೆಯಿಂದ ಬೆಳಗಾವಿ ನಗರವು ಧಾರ್ಮಿಕ ಭೂಪಟದಲ್ಲಿಯೂ ಹೊಸ ಗುರುತು ಪಡೆಯಲಿದೆ. ಶೈಕ್ಷಣಿಕ ಮತ್ತು ಸಾಮಾಜಿಕವಾಗಿ ಬೆಳೆಯುತ್ತಿರುವ ಬೆಳಗಾವಿಗೆ ಈ ವೆಂಕಟರಮಣನ ಸನ್ನಿಧಿ ಮತ್ತಷ್ಟು ಮೆರುಗು ನೀಡಲಿದೆ.

Continue Reading

ಕೊಡಗು

Deepawalli 2024 : ಮಡಿಕೇರಿಯಲ್ಲಿ ಅದ್ಧೂರಿಯಾಗಿ ನಡೆದ ದೀಪಾವಳಿ ಉತ್ಸವ

Deepawalli 2024 : ಮಡಿಕೇರಿಯಲ್ಲಿ ದೀಪಾವಳಿ ಉತ್ಸವ ಅದ್ಧೂರಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ ವಿಸ್ತಾರ ನ್ಯೂಸ್‌ನ ವರದಿಗಾರ ಹಾಗೂ ಕ್ಯಾಮೆರಾಮನ್‌ಗೆ ಸನ್ಮಾನಿಸಲಾಯಿತು.

VISTARANEWS.COM


on

Deepavali festival held in Madikeri

ಕೊಡಗು: ದೀಪಾವಳಿ ಹಬ್ಬದ (Deepawalli 2024) ಪ್ರಯುಕ್ತ ಮಡಿಕೇರಿಯ ಕಾಲನಗರ ಸಾಂಸ್ಕೃತಿಕ ವೇದಿಕೆ ವತಿಯಿಂದ ಆಯೋಜಿಸಿದ್ದ 11ನೇ ವರ್ಷದ ದೀಪಾವಳಿ ಉತ್ಸವವು ಬಹಳ ಸಂಭ್ರಮ ಸಡಗರದಿಂದ ನಡೆಯಿತು. ಕಾರ್ಯಕ್ರಮವನ್ನು ಸಮಾಜ ಸೇವಕ ಹಾಗೂ ಮುಳುಗು ತಜ್ಞ ಈಶ್ವರ್ ಮಲ್ಪೆ ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಈಶ್ವರ್ ಮಲ್ಪೆ, ಮಡಿಕೇರಿಯ ಕಲಾ ನಗರಕ್ಕೆ ಕರೆಸಿರೋದು ಬಹಳ‌ ಸಂತೋಷವಾಗಿದೆ‌. ನಾನೂ ರಾಜ್ಯದ ಬೇರೆ ಬೇರೆ ಭಾಗಗಳಿಗೆ ತೆರಳಿ ನೀರಿನಲ್ಲಿ ಮುಳುಗಿದ್ದ ಶವ ಹೊರ ತೆಗೆದಿದ್ದೇನೆ. ಕಳೆದ ವರ್ಷ ಕೂಡ ಇಲ್ಲಿಗೆ ಬಂದು ಒಂದು ಶವವನ್ನು ಹೊರ ತೆಗೆದಿದ್ದೇನೆ‌. ಈ ಒಂದು ಸಣ್ಣ ಸಮಾಜಮುಖಿ ಕಾರ್ಯವನ್ನು ಗುರುತಿಸಿ ನನ್ನ ಈ ಕಾರ್ಯಕ್ರಮಕ್ಕೆ ಕರೆಸಿರೋದು ಬಹಳ ಸಂತಸ ತಂದಿದೆ. ಕಲಾನಗರದಲ್ಲಿ ಕಲಾ ರಸಿಕರೆ ಇದ್ದು ತಮ್ಮಲ್ಲಿರುವ ಕಲೆಯನ್ನು ಪ್ರದರ್ಶನ ಮಾಡುವ ಮೂಲಕ ಮತ್ತಷ್ಟು ಸಾಧನೆ ಮಾಡಲೆಂದು ಹಾರೈಸಿದರು.

Deepavali festival held in Madikeri

ಇನ್ನೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಮಾಜ ಸೇವಕರನ್ನು ಗುರುತಿಸಿ ಸನ್ಮಾನಿಸಿ ಗೌರವಿಸಲಾಯಿತು. ಸಮಾಜ ಸೇವಕ ಮುಳುಗು ತಜ್ಞ ಈಶ್ವರ್ ಮಲ್ಪೆ ಹಾಗೂ ವಯನಾಡು ದುರಂತದ ಕುರಿತು ಪ್ರತ್ಯಕ್ಷ ವರದಿಗಾರಿಕೆ‌ ಮಾಡಿದ್ದ ಕೊಡಗಿನ ಪತ್ರಕರ್ತರಾದ ವಿಸ್ತಾರ ನ್ಯೂಸ್‌ನ ಜಿಲ್ಲಾ ವರದಿಗಾರ ಲೋಹಿತ್ ಎಂ.ಆರ್, ಕ್ಯಾಮೆರಾಮನ್ ಮನೋಜ್, ನ್ಯೂಸ್ ಫಸ್ಟ್ ಜಿಲ್ಲಾ ವರದಿಗಾರ ಪ್ರಜ್ವಲ್ ಎನ್‌.ಸಿ, ನಗರದ ಸ್ವಚ್ಚತಾ ಕಾರ್ಯದಲ್ಲಿ ಶ್ರಮಿಸುತ್ತಿರುವ ನಗರಸಭೆಯ ರಂಗಪ್ಪ , ಆರೋಗ್ಯ ಇಲಾಖೆಯ ಪ್ರತಿಮಾ ರೈ, ಅಣ್ಣಯ್ಯ, ಸೇರಿದಂತೆ ಹಲವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಬಳಿಕ ವಿವಿಧ ಆಟೋಟ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು‌‌. ಮಕ್ಕಳ ಮಂಟಪ, ಸಾಂಸ್ಕೃತಿಕ ಕಾರ್ಯಕ್ರಮಗಳು ಎಲ್ಲರನ್ನು ರಂಜಿಸಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾದ ಡಿವೈಎಸ್ಪಿ ಮಹೇಶ್ ಕುಮಾರ್, ಆಕಾಶವಾಣಿಯ ಸುಬ್ರಾಯ ಸಂಪಾಜೆ ಅಧ್ಯಕ್ಷರಾದ ಮಹೇಶ್, ಆಶಾ ನಟರಾಜ್, ಸ್ಥಾಪದ ಸದಸ್ಯರು ಚಂದ್ರು, ಕೆ.ಎಸ್ ರಮೇಶ್,ಕೋಡಿ ಭರತ್, ತಿಲಖ್ ಸಿಂಗ್ ಕುಮಾರ್ ಉಪಸ್ಥಿತರಿದ್ದರು.

Continue Reading

ಕರ್ನಾಟಕ

Mysore Dasara : ವಿಜಯ ದಶಮಿ ಜಂಬೂ ಸವಾರಿಗೆ ಕ್ಷಣಗಣನೆ; ಅರಮನೆ ಆವರಣದಲ್ಲಿ ವಜ್ರಮುಷ್ಠಿ ಕಾಳಗ

Mysore Dasara : ವಿಜಯ ದಶಮಿ ಜಂಬೂ ಸವಾರಿಗೆ ಕ್ಷಣಗಣನೆ ಶುರವಾಗಿದ್ದು, ಚಾಮುಂಡಿ ಬೆಟ್ಟದಿಂದ ಚಾಮುಂಡೇಶ್ವರಿ ಉತ್ಸವ ಮೂರ್ತಿಯನ್ನು ಅರಮನೆಗೆ ತರಲಾಗುತ್ತಿದೆ. ಜತೆಗೆ ಮೈಸೂರು ಆವರಣದಲ್ಲಿ ವಜ್ರಮುಷ್ಠಿ ಕಾಳಗ ನಡೆಯುತ್ತಿದೆ.

VISTARANEWS.COM


on

mysore dasara

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ (Mysore Dasara ) ಜಂಬೂ ಸವಾರಿಗೆ ಕ್ಷಣಗಣನೆ ಪ್ರಾರಂಭವಾಗಿದೆ. ಶನಿವಾರ ಮುಂಜಾನೆಯಿಂದಲೇ ಬಿರುಸಿನ ರೀತಿಯಲ್ಲಿ ಪೂಜಾ ಕೈಂಕರ್ಯಗಳನ್ನು ನೆರವೇರಿಸಿಕೊಂಡು ಬರಲಾಗುತ್ತಿದೆ. ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ತಾಯಿ ಚಾಮುಂಡೇಶ್ವರಿಯನ್ನು 750 ಕೆ.ಜಿ. ತೂಕದ ಚಿನ್ನದ ಅಂಬಾರಿಯಲ್ಲಿ ಕೂರಿಸಿ ಮೆರವಣಿಗೆ ಮಾಡುವ ಸಮಯ ಸನ್ನಿಹಿತವಾಗುತ್ತಿದೆ. ಇದಕ್ಕಿಂತ ಮೊದಲು ಚಾಮುಂಡಿ ಸನ್ನಿಧಿಯಲ್ಲಿ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿ ಬೆಳ್ಳಿ ರಥದ ಮೂಲಕ ಅರಮನೆಗೆ ಮೆರವಣಿಗೆ ಮೂಲಕ ಕಳಿಸಿಕೊಡಲಾಯಿತು.

ವಿಜಯ ದಶಮಿಯ ಜಂಬೂ ಸವಾರಿಗೆ ಅಂಬಾವಿಲಾಸ ಅರಮನೆ ಸಜ್ಜಾಗಿದೆ. ಅರಮನೆ ಅಂಗಳದಲ್ಲಿ 35 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ 8 ಗಂಟೆಗೆ ಚಾಮುಂಡಿಬೆಟ್ಟದಿಂದ ಉತ್ಸವ ಮೂರ್ತಿ ಮೆರವಣಿಗೆ ಶುರುವಾಗಿದ್ದು, ಅಂಬಾವಿಲಾಸ ಅರಮನೆ ತಲುಪಲಿದೆ. ನೇರಳೆ ಬಣ್ಣದ ಸೀರೆಯಿಂದ ತಾಯಿ ಚಾಮುಂಡೇಶ್ವರಿ ಉತ್ಸವ ಮೂರ್ತಿಯನ್ನು ಅಲಂಕಾರ ಮಾಡಲಾಗಿತ್ತು. ಅಲ್ಲದೆ, ಅಶ್ವಾರೋಹಣ ಅಲಂಕಾರದಿಂದ ಕಂಗೊಳಿಸುತ್ತಿರುವ ಚಾಮುಂಡಿ ದೇವಿಯ ಉತ್ಸವ ಮೂರ್ತಿಯನ್ನು ಬೆಳ್ಳಿ ರಥದಲ್ಲಿ ಕುಳ್ಳಿರಿಸಿ ಅಲ್ಲಿಂದ ಅರಮನೆಗೆ ಮೆರವಣಿಗೆ ಮೂಲಕ ಕೊಂಡೊಯ್ಯಲಾಯಿತು.

Mysore dasara 2024

ಅರಮನೆ ಬಲರಾಮ ದ್ವಾರದ ಕೋಟೆ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಶನಿವಾರ ಮಧ್ಯಾಹ್ನ 1:41 ರಿಂದ 2:10ರ ಶುಭ ಮಕರ ಲಗ್ನದಲ್ಲಿ ನಂದಿಧ್ವಜ ಪೂಜೆ ನೆರವೇರಲಿದೆ. ನಂದಿ ಧ್ವಜ ಪೂಜೆಯನ್ನು ಉದ್ಘಾಟಕ ಹಂಪನಾ, ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವೇರಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್ ಸಿ ಮಹದೇವಪ್ಪ ಸೇರಿದಂತೆ ಇತರೆ ಜನಪ್ರತಿನಿಧಿಗಳು ಭಾಗಿಯಾಗಲಿದ್ದಾರೆ.

ನಂದಿಧ್ವಜ ಪೂಜೆ ಬಳಿಕ ವಿಜಯದಶಮಿ ಮೆರವಣಿಗೆ ಆರಂಭವಾಗಲಿದ್ದು, ಅರಮನೆ ಒಳಂಗಣದಿಂದ ಪ್ರಾರಂಭಗೊಂಡು ಬನ್ನಿ ಮಂಟಪದ ವರಗೆ ಮೆರವಣಿಗೆ ನಡೆಯಲಿದೆ. ಜಂಬೂಸವಾರಿಯಲ್ಲಿ ವಿವಿಧ ಜಿಲ್ಲೆ ಹಾಗೂ ವಿವಿಧ ಇಲಾಖೆಗಳಿಂದ 49 ಸ್ಥಬ್ದ ಚಿತ್ರಗಳು ಸಂಚಾರ ಇರಲಿದೆ. ಸಂಜೆ 4ಗಂಟೆಯಿಂದ 4:30 ರವರೆಗೆ ಸಲ್ಲುವ ಶುಭ ಕುಂಭ ಲಗ್ನದಲ್ಲಿ ಜಂಬೂ ಸವಾರಿಗೆ ಪುಷ್ಪಾರ್ಚನೆ ನಡೆಯಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್ ಸಿ ಮಹದೇವಪ್ಪ, ಸಂಸದ ಹಾಗೂ ರಾಜ ವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಜಿಲ್ಲಾಧಿಕಾರಿ ಜಿ ಲಕ್ಷ್ಮಿಕಾಂತ ರೆಡ್ಡಿ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ರವರಿಂದ ಪುಷ್ಪರ್ಚನೆ ಮಾಡಲಿದ್ದಾರೆ. ಸಂಜೆ 7 ಗಂಟೆಗೆ ಬನ್ನಿಮಂಟಪ ಮೈದಾನದಲ್ಲಿ ಪಂಜಿನ ಕವಾಯತು, ರಾಜ್ಯಪಾಲ ಥಾವರ ಚಂದ್ ಗೆಹಲೊಟ್ ರಿಂದ ಕವಯತು ವೀಕ್ಷಣೆಯೊಂದಿಗೆ ಗೌರವ ವಂದನೆ ಸ್ವೀಕಾರ ಆಗಲಿದೆ.

Continue Reading

ಬೆಂಗಳೂರು

Ayudha Puja: ನಾಡಿನೆಲ್ಲೆಡೆ ಆಯುಧ ಪೂಜೆ ಸಂಭ್ರಮ; ಭಕ್ತಾಧಿಗಳಿಂದ ದೇವಸ್ಥಾನಗಳು ಹೌಸ್‌ಫುಲ್‌

Ayudha Puja: ನಾಡಿನೆಲ್ಲೆಡೆ ಆಯುಧ ಪೂಜೆ ಸಂಭ್ರಮ ಮನೆ ಮಾಡಿದ್ದು, ಭಕ್ತಾಧಿಗಳಿಂದ ದೇವಸ್ಥಾನಗಳು ಹೌಸ್‌ಫುಲ್‌ ಆಗಿವೆ. ಸವಾರರು ತಮ್ಮ ವಾಹನಗಳಿಗೆ ಪೂಜೆ ಸಲ್ಲಿಸಲು ದೇವಸ್ಥಾನಕ್ಕೆ ಲಗ್ಗೆ ಇಟ್ಟಿದ್ದರು.

VISTARANEWS.COM


on

Ayudha Puja celebrations across the karnataka state Temples housefull by devotees

ಬೆಂಗಳೂರು: ನಾಡಿನೆಲ್ಲೆಡೆ ಆಯುಧ ಪೂಜಾ (Ayudha Puja) ಸಂಭ್ರಮ ಜೋರಾಗಿದೆ. ಆಯುಧ ಪೂಜೆಯ ಸಲುವಾಗಿ ನಗರದ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನಡೆಯುತ್ತಿದೆ.

ಬನಶಂಕರಿ, ಆ್ಯಕ್ಸಿಡೆಂಡ್ ಗಣೇಶ, ಸರ್ಕಲ್ ಮಾರಮ್ಮ, ಕಾಡುಮಲ್ಲೆಶ್ವರಂ ದೇವಸ್ಥಾನಕ್ಕೆ ಭಕ್ತರು ದೌಡಾಯಿಸಿದ್ದಾರೆ. ಬೆಳಗಿನಿಂದಲೇ ಪಂಚಾಭಿಷೇಕ ನೇರಿವೇರಿದ್ದು, ವಿಶೇಷ ಅಲಂಕಾರ ಮಾಡಿ ನಂತರ ಭಕ್ತಾಧಿಗಳಿಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

Ayudha Puja celebrations across the karnataka state  Temples housefull by devotees

ಅಲ್ಲದೇ ಮನೆಗಳಲ್ಲಿ ಆಯುಧಗಳಿಗೆ ಪೂಜೆ ಮಾಡಿ ಸಲ್ಲಿಸಿದ್ದು, ವಾಹನಗಳಿಗೆ ಪೂಜೆ ಮಾಡುವ ಸಲುವಾಗಿ ಸಾಕಷ್ಟು ಸಂಖ್ಯೆಯಲ್ಲಿ ದೇವಸ್ಥಾನಕ್ಕೆ ವಾಹನ ಸವಾರರು ಆಗಮಿಸುತ್ತಿದ್ದಾರೆ. ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಸರ್ಕಲ್ ಮಾರಮ್ಮ ದೇವಸ್ಥಾನದಲ್ಲಿ ಆಯುಧ ಪೂಜೆಯ ಸಂಭ್ರಮ ಜೋರಾಗಿತ್ತು. ದೇವಿಗೆ ಮುತ್ತಿನ ಅಲಂಕಾರ ಮಾಡಲಾಗಿದ್ದು, ಬೆಳಗ್ಗೆಯಿಂದ ದೇವಿಗೆ ವಿಶೇಷ ಪೂಜೆ ಪುರಸ್ಕಾರ ನಡೆದಿದೆ.

Ayudha Puja celebrations across the karnataka state  Temples housefull by devotees

ಭಕ್ತರು ತಮ್ಮ ವಾಹನಗಳಿಗೆ ಪೂಜೆ ಮಾಡಿಸಲು ಮುಗಿಬಿದ್ದಿದ್ದರು. ಹೀಗಾಗಿ ಸರ್ಕಲ್ ಮಾರಮ್ಮ ದೇವಸ್ಥಾನದ ಸುತ್ತ ಟ್ರಾಫಿಕ್ ಜಾಮ್‌ ಉಂಟಾಗಿತ್ತು. ಟ್ರಾಫಿಕ್‌ ಕ್ಲಿಯರ್‌ ಮಾಡಲು ಪೊಲೀಸರು ಹರಸಾಹಸ ಪಡಬೇಕಾಯಿತು. ಇಂದು ಶುಕ್ರವಾರ ಬೆಳಗ್ಗೆಯಿಂದ ಸಂಜೆಯವೆಗೂ ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ನಡೆಯಲಿದೆ.

ವಿಸ್ತಾರ ನ್ಯೂಸ್‌ ಕಚೇರಿಯಲ್ಲೂ ಆಯುಧ ಪೂಜೆ ಸಂಭ್ರಮ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Latest1 hour ago

ಪಶ್ಚಿಮ ಬಂಗಾಳದಲ್ಲಿ ಕೇಸರಿ ಪರ್ವ: ಯಾರಾಗಲಿದ್ದಾರೆ ʼಸಿಎಂʼ?

Latest2 hours ago

ದಳಪತಿʼ ಪಟ್ಟಾಭಿಷೇಕಕ್ಕೆ ಕ್ಷಣಗಣನೆ : ತಮಿಳುನಾಡು ರಾಜಕಾರಣದಲ್ಲಿ ಬಿರುಗಾಳಿ

Latest21 hours ago

ಸಿಎಂ ಸ್ಥಾನಕ್ಕೆ ನಾನು ರಾಜೀನಾಮೆ ನೀಡುವುದಿಲ್ಲ ಎಂದಿದ್ದೇಕೆ ಮಮತಾ ಬ್ಯಾನರ್ಜಿ?

Latest1 day ago

ಬಿಜೆಪಿ ಬಂಗಾಳ ಗೆದ್ದಾಯ್ತು, ಸಿಎಂ ರೇಸ್‌ನಲ್ಲಿ ಯಾರು?

Latest1 day ago

ತಮಿಳುನಾಡು: ಬಹುಮತ ಪಡೆಯಲು ದಳಪತಿ ಮುಂದಿರುವ ತಂತ್ರಗಳೇನು?

Latest2 days ago

ಪಶ್ಚಿಮ ಬಂಗಾಳದಲ್ಲಿ ಕೇಸರಿ, ತಮಿಳುನಾಡಲ್ಲಿ ದಳಪತಿ, ಕೇರಳಂನಲ್ಲಿ ಕಾಂಗ್ರೆಸ್‌ ದರ್ಬಾರ್‌

Latest2 days ago

ಕೇರಳಂ: ಯುಡಿಎಫ್‌ ಗೆಲುವಿನ ಹಿಂದಿನ ಏಳು ರಣತಂತ್ರ!

Latest2 days ago

ದಾವಣಗೆರೆ ದಕ್ಷಿಣ ʼಕೈʼ ವಶ, ಸಮರ್ಥ್‌ಗೆ ವಿಜಯಮಾಲೆ

Latest2 days ago

ಬಾಗಲಕೋಟೆಯಲ್ಲಿ ಕಾಂಗ್ರೆಸ್‌‌‌ನ ಉಮೇಶ್‌ ಮೇಟಿ ಭರ್ಜರಿ ಗೆಲುವು

Latest2 days ago

ದ್ರಾವಿಡ ನಾಡಲ್ಲಿ ʼದಳಪತಿʼ ಯುಗಾರಂಭ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌