Solar Eclipse 2022 | ಗೋಕರ್ಣ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗ ಸ್ಪರ್ಶ, ದರ್ಶನಕ್ಕೆ ಅವಕಾಶ - Vistara News

ಉತ್ತರ ಕನ್ನಡ

Solar Eclipse 2022 | ಗೋಕರ್ಣ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗ ಸ್ಪರ್ಶ, ದರ್ಶನಕ್ಕೆ ಅವಕಾಶ

Solar Eclipse 2022 | 27 ವರ್ಷಗಳ ನಂತರ ಕೇತುಗ್ರಸ್ಥ ಸೂರ್ಯಗ್ರಹಣದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಮಹಾಬಲೇಶ್ವರ ದೇವಸ್ಥಾನದಲ್ಲಿ ವಿಶೇಷ ದರ್ಶನ ವ್ಯವಸ್ಥೆ ಮಾಡಲಾಗಿದೆ.

VISTARANEWS.COM


on

gokarna temple
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಾರವಾರ: ಮಂಗಳವಾರ (ಅ.೨೫) 27 ವರ್ಷಗಳ ಬಳಿಕ ಬಂದಿರುವ ಕೇತುಗ್ರಸ್ತ ಸೂರ್ಯಗ್ರಹಣ (Solar Eclipse 2022) ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣ ಮಹಾಬಲೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಅ. ೨೫ ಗ್ರಹಣ ಕಾಲದಲ್ಲೂ ಆತ್ಮಲಿಂಗ ದರ್ಶನ ಮತ್ತು ಸ್ಪರ್ಶಸಹಿತ ಪೂಜೆಗೆ ಅವಕಾಶ ಕಲ್ಪಿಸಲಾಗಿದೆ. ಆದರೆ, ಇದಕ್ಕೆ ಸಮಯವನ್ನು ನಿಗದಿ ಮಾಡಲಾಗಿದೆ.

ಕುಮಟಾ ತಾಲೂಕಿನ ಗೋಕರ್ಣದ ಮಹಾಬಲೇಶ್ವರ ದೇವಸ್ಥಾನದಲ್ಲಿ ಅಂದು ಬೆಳಗ್ಗೆಯಿಂದಲೂ ದೇವಸ್ಥಾನದಲ್ಲಿ ಸ್ವಚ್ಛತೆ, ಪೂಜೆ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಗ್ರಹಣದ ಮಧ್ಯ ಕಾಲದಿಂದ ಮುಕ್ತಾಯದವರೆಗೆ ಭಕ್ತರಿಗೆ ವಿಶೇಷ ಅವಕಾಶವನ್ನು ದೇವಸ್ಥಾನದ ಆಡಳಿತ ಮಂಡಳಿಯವರು ಕಲ್ಪಿಸಿದ್ದಾರೆ. ಈ ಬಗ್ಗೆ ದೇವಸ್ಥಾನದಲ್ಲಿ ಪ್ರಕಟಣೆಯನ್ನೂ ಹೊರಡಿಸಲಾಗಿದೆ.

ಮುಂಜಾನೆಯಿಂದ ಪ್ರವೇಶ
ಮುಂಜಾನೆ 6:30ರಿಂದ 9:30ರ ವರಗೆ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದ್ದು, ಈ ವೇಳೆ ಭಕ್ತರು ಬಂದು ಮಹಾಬಲೇಶ್ವರ ದೇವರ ದರ್ಶವನ್ನು ಪಡೆದುಕೊಳ್ಳಬಹುದಾಗಿದೆ. ಪೂಜೆಗಳಲ್ಲಿ ಭಾಗಿಯಾಗಬಹುದಾಗಿದೆ. ನಂತರ 9:30ರಿಂದ ಮಧ್ಯಾಹ್ನ 4 ಗಂಟೆವರೆಗೆ ದರ್ಶಕ್ಕೆ ಭಕ್ತರಿಗೆ ಪ್ರವೇಶ ನಿರ್ಬಂಧ ಮಾಡಲಾಗಿದೆ.

ಆತ್ಮಲಿಂಗ ದರ್ಶನ, ಸ್ಪರ್ಶಕ್ಕೆ ಅವಕಾಶ
ಗ್ರಹಣದ ಮಧ್ಯಕಾಲ ಅಂದರೆ, ಸಂಜೆ 4ರಿಂದ 6 ಗಂಟೆವರಗೆ ಆತ್ಮಲಿಂಗ ದರ್ಶನ ಮತ್ತು ಸ್ಪರ್ಶಕ್ಕೆ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ. ಇದರ ಸದುಪಯೋಗವನ್ನು ಭಕ್ತರು ಪಡೆದುಕೊಳ್ಳಬಹುದಾಗಿದೆ. ಗ್ರಹಣ ಹಿನ್ನೆಲೆಯಲ್ಲಿ ಮಧ್ಯಾಹ್ನದ ಅಮೃತಾನ್ನ ಪ್ರಸಾದ ಮತ್ತು ರಾತ್ರಿ ಪ್ರಸಾದ ಭೋಜನದ ವ್ಯವಸ್ಥೆ ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ | Solar Eclipse 2022 | ಗ್ರಹಣದ ಸಂದರ್ಭದಲ್ಲಿ ಸೂರ್ಯನನ್ನು ಕೇತು ನುಂಗುತ್ತಾನಾ? ಈ ಪುರಾಣ ಕಥೆ ಓದಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Road Accident : ಸೈಕಲ್‌ಗೆ ಗುದ್ದಿದ ಕಾರು, ನರಳಾಡಿ ವ್ಯಕ್ತಿ ಸಾವು; ಹಿಟ್‌ ಆ್ಯಂಡ್‌ ರನ್‌ಗೆ ಬೈಕ್‌ ಸವಾರ ಬಲಿ

Road Accident : ಪ್ರತ್ಯೇಕ ಕಡೆಗಳಲ್ಲಿ ಸಂಭವಿಸಿದ ಅಪಘಾತದಲ್ಲಿ ಸವಾರರಿಬ್ಬರು ಮೃತಪಟ್ಟಿದ್ದಾರೆ. ಹಾಸನದಲ್ಲಿ ಕಾರೊಂದು ಸೈಕಲ್‌ಗೆ ಡಿಕ್ಕಿ ಹೊಡೆದಿದ್ದು, ನೆಲಕ್ಕೆ ಬಿದ್ದ ಸವಾರ ಮೃತಪಟ್ಟರೆ, ಆನೇಕಲ್‌ನಲ್ಲಿ ಹಿಟ್‌ ಆ್ಯಂಡ್‌ ರನ್‌ಗೆ ಬೈಕ್‌ ಸವಾರ ಮೃತಪಟ್ಟಿದ್ದಾರೆ. ಕಾರವಾರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಕಂದಕಕ್ಕೆ ಉರುಳಿದೆ.

VISTARANEWS.COM


on

By

Road Accident
Koo

ಹಾಸನ: ಸೈಕಲ್‌ನಲ್ಲಿ ತೆರಳುತ್ತಿದ್ದ ವೃದ್ಧನಿಗೆ ಕಾರೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕೆಳಗೆ ಬಿದ್ದ ಸೈಕಲ್‌ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಾಸನ ನಗರದ ಡೈರಿ ಸರ್ಕಲ್ ಬಳಿ ಅಪಘಾತ (Road Accident) ನಡೆದಿದೆ. ಶ್ರೀರಾಮನಗರದ ನಿವಾಸಿ ಆನಂದ್ (60) ಮೃತ ದುರ್ದೈವಿ.

ಕಾಟೀಹಳ್ಳಿ ಕಡೆಯಿಂದ ಬಂದ ಕಾರು ತಿರುವಿನಲ್ಲಿ ಸೈಕಲ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕೆಳಗೆ ಹಾರಿ ಬಿದ್ದ ಆನಂದ್‌ ಅವರ ಮುಖವೇ ಅಪ್ಪಚ್ಚಿ ಆಗಿತ್ತು. ತಲೆಗೆ ಗಂಭೀರವಾಗಿ ಗಾಯವಾಗಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಹಾಸನ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Self Harming : ಮಕ್ಕಳಾಗಿಲ್ಲವೆಂದು ಕಿರುಕುಳ; ಶೌಚಾಲಯದಲ್ಲಿ ನೇಣು ಬಿಗಿದುಕೊಂಡ ಗೃಹಿಣಿ

ಆನೇಕಲ್‌ನಲ್ಲಿ ಹಿಟ್‌ ಆ್ಯಂಡ್‌ ರನ್‌ಗೆ ಬೈಕ್‌ ಸವಾರ

ಬೆಂಗಳೂರು ಹೊರವಲಯದ ಆನೇಕಲ್-ಅತ್ತಿಬೆಲೆ ಮುಖ್ಯರಸ್ತೆಯ ಮಾಯಸಂದ್ರ ಬಳಿ ಹಿಟ್‌ ಆ್ಯಂಡ್‌ ರನ್‌ಗೆ ಬೈಕ್ ಸವಾರ ಬಲಿಯಾಗಿದ್ದಾರೆ. ಮಧುಸೂಧನ್ ಮೃತ ದುರ್ದೈವಿ. ಬುಧವಾರ ರಾತ್ರಿ ಎಂಟು ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಮಧುಸೂಧನ್‌ ಕೆಲಸ ಮುಗಿಸಿಕೊಂಡು ಅತ್ತಿಬೆಲೆಯಿಂದ ಆನೇಕಲ್ ಕಡೆಗೆ ಬರುವಾಗ ಬೈಕ್‌ಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ.

ಈ ವೇಳೆ ತಲೆಯ ಭಾಗಕ್ಕೆ ಗಂಭೀರವಾಗಿ ಗಾಯಗೊಂಡಿದ್ದ ಮಧುಸೂದನ್‌ರನ್ನು ಕೂಡಲೇ ಸ್ಥಳೀಯರು ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತ ಮಾಡಿ ಪರಾರಿ ಆಗಿರುವ ವಾಹನಕ್ಕೆ ಹುಡುಕಾಟ ನಡೆಸಿದ್ದಾರೆ.

ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಲಾರಿ

ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಕಂದಕಕ್ಕೆ ಬಿದ್ದಿದ್ದೆ. ಉತ್ತರಕನ್ನಡ ಜಿಲ್ಲೆಯ ಕುಮಟಾದ ರಾಷ್ಟ್ರೀಯ ಹೆದ್ದಾರಿ 66ರ ಮಾನೀರು ಕ್ರಾಸ್ ಬಳಿ ಘಟನೆ ನಡೆದಿದೆ. ಕುಮಟಾದಿಂದ ಅಂಕೋಲಾದತ್ತ ಉಸುಕು ತುಂಬಿಕೊಂಡು ಲಾರಿ ಹೊರಟಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಪಕ್ಕದ ತಡೆಗೋಡೆಗೆ ಗುದ್ದಿ ಕಂದಕಕ್ಕೆ ಬಿದ್ದಿದೆ.

ಲಾರಿ ಗುದ್ದಿದ ರಭಸಕ್ಕೆ ರಸ್ತೆಯ ತಡೆಗೋಡೆ ಕಿತ್ತುಹೋಗಿದೆ. ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುಮಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಕಂದಕ್ಕೆ ಬಿದ್ದ ಗಾಡಿಯನ್ನು ಮೇಲಕ್ಕೆತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ರಭಸವಾದ ಗಾಳಿಯೊಂದಿಗೆ ಗುಡುಗು ಸಹಿತ ಭಾರಿ ಮಳೆ; ಇನ್ನೊಂದು ವಾರ ಈ ಜಿಲ್ಲೆಗಳಿಗೆ ಅಲರ್ಟ್‌

Rain News : ಈ ವಾರ ಪೂರ್ತಿ ರಾಜ್ಯಾದ್ಯಂತ ಬಿರುಗಾಳಿ ಸಹಿತ ಗುಡುಗು, ಮಿಂಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (karnataka Weather Forecast) ಮುನ್ಸೂಚನೆಯನ್ನು ನೀಡಿದೆ. ಆದರೆ ಕರಾವಳಿಯಲ್ಲಿ ಬಿಸಿ ಹಾಗೂ ಆರ್ದ್ರತೆ ವಾತಾವರಣ ಮೇಲುಗೈ ಸಾಧಿಸಲಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ಉತ್ತರ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಹಗುರ ಮಳೆಯಾಗುವ (Rain News) ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ಉತ್ತರ ಒಳನಾಡಿನ ಬೀದರ್, ಕಲಬುರಗಿ, ಬೆಳಗಾವಿ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗಲಿದೆ. ಈ ಪ್ರದೇಶದ ಉಳಿದ ಭಾಗಗಳಲ್ಲಿ ಒಣ ಹವೆ ಮೇಲುಗೈ ಸಾಧಿಸುವ ಸಾಧ್ಯತೆಯಿದೆ.

ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ನಿರೀಕ್ಷೆ ಇದೆ. ಉಳಿದೆಡೆ ಶುಷ್ಕ ವಾತಾವರಣ ಇರಲಿದೆ. ಇತ್ತ ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡದ ಅಲ್ಲಲ್ಲಿ ಸಣ್ಣ ಮಳೆಯಾಗಬಹುದು.

ಬೆಂಗಳೂರು ಸೇರಿ ಹಲವೆಡೆ ಒಣ ಹವೆ

ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ. ಬೆಂಗಳೂರಿನಲ್ಲೂ ಆಕಾಶವು ನಿರ್ಮಲವಾಗಿರಲಿದೆ. ಯಾವುದೇ ಮಳೆಯಾಗುವ ಮುನ್ಸೂಚನೆ ಇಲ್ಲ.

ಹೀಟ್‌ ವೇವ್‌ ಅಲರ್ಟ್‌

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಹವಾಮಾನದ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಖ್ಯವಾಗಿ ಏಪ್ರಿಲ್ 18 ರಿಂದ 20 ರವರೆಗೆ ಇದೇ ಹವಾಮಾನ ಇರಲಿದೆ.

ಬಿರುಗಾಳಿ ಎಚ್ಚರಿಕೆ

ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಕರಾವಳಿ ಕರ್ನಾಟಕದ ಪ್ರತ್ಯೇಕ ಸ್ಥಳಗಳಲ್ಲಿ30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಇನ್ನು ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯೂ ಇದೆ.

ಇದನ್ನೂ ಓದಿ: Oil Pulling: ಆಯಿಲ್‌ ಪುಲ್ಲಿಂಗ್‌; ನಿಮ್ಮ ಬಾಯಿಯೊಳಗಿನ ಎಲ್ಲ ಸಮಸ್ಯೆಗಳಿಗೂ ಉತ್ತರ ಇಲ್ಲಿದೆ!

Summer Fashion: ಸಮ್ಮರ್‌ ಫ್ಯಾಷನ್‌ನಲ್ಲಿ ಬಂತು ತಂಪೆರೆಯುವ ವಾಟರ್‌ಫಾಲ್‌ ಇಯರಿಂಗ್ಸ್‌


ಈ ಸೀಸನ್‌ನ ಸಮ್ಮರ್‌ ಫ್ಯಾಷನ್‌ನಲ್ಲಿ (Summer Fashion) ಇದೀಗ ತಂಪೆರೆಯುವ ವಾಟರ್‌ ಫಾಲ್‌ ಇಯರಿಂಗ್‌ಗಳು ಟ್ರೆಂಡಿಯಾಗಿವೆ. ಮೇಲಿನಿಂದ ಕೆಳಗೆ ಇಳಿಯುವ ಜಲಧಾರೆಯಂತೆ ಕಾಣಿಸುವ ಕ್ರಿಸ್ಟಲ್‌ ಅಥವಾ ಅಮೆರಿಕನ್‌ ಡೈಮಂಡ್‌ ಹೊಂದಿರುವ ಈ ಇಯರಿಂಗ್ಸ್‌ ಸದ್ಯ ಹುಡುಗಿಯರ ಫೇವರೇಟ್‌ ಆಕ್ಸೆಸರೀಸ್‌ ಲಿಸ್ಟ್‌ಗೆ ಸೇರಿವೆ.

Summer Fashion

ಏನಿದು ವಾಟರ್ಫಾಲ್‌ ಇಯರಿಂಗ್ಸ್‌ ?

ನೋಡಲು ಥೇಟ್‌ ಜಲಪಾತದಂತೆ ಕಾಣಿಸುವ ಈ ಹ್ಯಾಂಗಿಂಗ್ಸ್‌ನಂತಹ ಕಿವಿಯೊಲೆಗಳು ನೋಡಲು ವಾಟರ್‌ಫಾಲ್‌ನಂತೆ ಕಾಣುತ್ತವೆ. ಹಾಗಾಗಿ ಇವನ್ನು ವಾಟರ್‌ಫಾಲ್‌ ಇಯರಿಂಗ್ಸ್‌ ಎನ್ನಲಾಗುತ್ತದೆ. ಕಿವಿಗೆ ಧರಿಸಿದಾಗ ಇಳೆ ಬೀಳುವ ಲೇಯರ್‌ನಂತಹ ಕ್ರಿಸ್ಟಲ್‌ ಸರಪಳಿಗಳು ವಾಟರ್‌ಫಾಲ್‌ನಂತೆ ಕಾಣಿಸುತ್ತವೆ. ಈ ವಿನ್ಯಾಸದಲ್ಲೆ ಇದೀಗ ಸಾಕಷ್ಟು ಡಿಸೈನ್‌ನವು ಆಕ್ಸೆಸರೀಸ್‌ ಲೋಕಕ್ಕೆ ಬಂದಿವೆ. ಮೈಕ್ರೋ ಕ್ರಿಸ್ಟಲ್ಸ್‌ ಅಂದರೇ, ಅಮೆರಿಕನ್‌ ಡೈಮಂಡ್‌ ಅಥವಾ ಆರ್ಟಿಫಿಷಿಯಲ್‌ ಅಮೆರಿಕನ್‌ ಡೈಮಂಡ್‌ ಹೊಂದಿರುವ ನಾಲ್ಕೈದು ಲೇಯರ್‌ ಹೊಂದಿರುವಂತಹ ಇಳೆ ಬೀಳುವಂತಹ ಇಯರಿಂಗ್‌ಗಳು ವೈಟ್‌ ಶೇಡ್‌ನಲ್ಲಿ ಲಭ್ಯ. ಇದೀಗ ಪಾಸ್ಟೆಲ್‌ ಶೇಡ್‌ಗಳಲ್ಲೂ ದೊರಕುತ್ತಿವೆ. ಲೈಟ್‌ ಪಿಂಕ್‌, ಪೀಚ್‌, ಬೀಚ್‌ ಬ್ಲ್ಯೂ, ಸ್ಕೈ ಬ್ಲ್ಯೂ, ಪಿಸ್ತಾ ಗ್ರೀನ್‌ ಶೇಡ್‌ನವು ಹೆಚ್ಚು ಪಾಪುಲರ್‌ ಆಗಿವೆ. ಹುಡುಗಿಯರನ್ನು ಸೆಳೆದಿವೆ.

Summer Fashion

ಪಾರ್ಟಿವೇರ್‌ ಆಕ್ಸೆಸರೀಸ್‌

ಪಾರ್ಟಿವೇರ್‌ ಆಕ್ಸೆಸರೀಸ್‌ ಕೆಟಗರಿಗೆ ಸೇರುವ ಈ ವಾಟರ್‌ ಫಾಲ್‌ ಇಯರಿಂಗ್‌ಗಳು ಕೆಲವು ಮೇಲ್ಭಾಗದಲ್ಲಿ ಬಿಗ್‌ ಸ್ಟೋನ್‌ ಅಥವಾ ಕಲರ್‌ಫುಲ್‌ ಇಮಿಟೇಡ್‌ ಸ್ಟೋನ್ಸ್‌ ಹೊಂದಿರುತ್ತವೆ. ಇಲ್ಲವೇ ಬೀಡ್ಸ್‌ ಅಥವಾ ಪರ್ಲ್‌ ಹೊಂದಿರುತ್ತವೆ. ಅದರ ಕೆಳಗೆ ಸುಮಾರು ನಾಲ್ಕೈದು ಇಂಚಿನಷ್ಟು ಉದ್ದದ ಹ್ಯಾಂಗಿಂಗ್‌ ಡಿಸೈನ್‌ ಹೊಂದಿರುತ್ತವೆ. ಕೆಲವು ಒಂದೇ ಸಮನಾಗಿ ಇದ್ದರೇ, ಇನ್ನು ಕೆಲವು ಆಸೆಮ್ಮಿಟ್ರಿಕಲ್‌ ಲೆಂಥ್‌ ಹೊಂದಿರುತ್ತವೆ. ಇವು ಇದೀಗ ಪಾರ್ಟಿವೇರ್‌ ಆಕ್ಸೆಸರೀಸ್‌ ಕೆಟಗರಿಯಲ್ಲಿ ಟಾಪ್‌ ಲಿಸ್ಟ್‌ನಲ್ಲಿವೆ. ಇವುಗಳ ವಿಶೇಷತೆಯೇಂದರೇ, ಯಾವುದೇ ಬಗೆಯ ಶಿಮ್ಮರ್‌ ಅಥವಾ ಶೈನಿಂಗ್‌ ಫ್ಯಾಬ್ರಿಕ್‌ನ ಪಾರ್ಟಿವೇರ್‌ ಔಟ್‌ಫಿಟ್‌ನೊಂದಿಗೆ ಇವನ್ನು ಧರಿಸಬಹುದು. ಎಲ್ಲವಕ್ಕೂ ಇವು ಮ್ಯಾಚ್‌ ಆಗುತ್ತವೆ. ಎಲ್ಲದಕ್ಕಿಂತ ಹೆಚ್ಚಾಗಿ ಇಡೀ ಮುಖವನ್ನು ಹೈ ಲೈಟ್‌ ಮಾಡುತ್ತವೆ. ಮಿರುಗುತ್ತವೆ ಎನ್ನುತ್ತಾರೆ ಸ್ಟೈಲಿಸ್ಟ್‌ಗಳು.

Summer Fashion

ವಾಟರ್‌ ಫಾಲ್‌ ಕ್ಲಾಸಿ ಲುಕ್‌

“ಶಿಮ್ಮರ್‌ ಔಟ್‌ಫಿಟ್‌ಗಳಿಗೆ ಈ ವಾಟರ್‌ಫಾಲ್‌ ಇಯರಿಂಗ್‌ಗಳು ಹೇಳಿ ಮಾಡಿಸಿದಂತಿರುತ್ತವೆ. ಕಿವಿ ಮಾತ್ರವಲ್ಲ, ಇಡೀ ಲುಕ್‌ಗೆ ಇವು ಸಾಥ್‌ ನೀಡುತ್ತವೆ. ಆಕರ್ಷಕವಾಗಿ ಕಾಣಿಸುತ್ತವೆ. ಕ್ಲಾಸಿ ಲುಕ್‌ ನೀಡುವುದರೊಂದಿಗೆ ಸೆಲೆಬ್ರೆಟಿ ಇಮೇಜ್‌ ನೀಡುತ್ತವೆ” ಎನ್ನುತ್ತಾರೆ ಜ್ಯುವೆಲ್‌ ಡಿಸೈನರ್‌ ರೀಟಾ. ಅವರ ಪ್ರಕಾರ, ಯುವತಿಯರು ಮಾತ್ರವಲ್ಲ, ಎಲ್ಲಾ ವಯಸ್ಸಿನ ಮಹಿಳೆಯರು ಧರಿಸುವುದು ಹೆಚ್ಚಾಗಿದೆ.

Summer Fashion

ವಾಟರ್‌ ಫಾಲ್‌ ಇಯರಿಂಗ್‌ ಆಯ್ಕೆ ಹೀಗಿರಲಿ

  • ಶಿಮ್ಮರ್‌ ಡಿಸೈನರ್‌ವೇರ್‌ ಶೇಡ್ಸ್‌ಗೆ ತಕ್ಕಂತೆ ವಾಟರ್‌ ಫಾಲ್‌ ಇಯರಿಂಗ್‌ ಆಯ್ಕೆ ಮಾಡಿ.
  • ಪಾಸ್ಟೆಲ್‌ ಶೇಡ್‌ ಡಿಸೈನ್‌ನವು ಟ್ರೆಂಡ್‌ನಲ್ಲಿವೆ.
  • ಆದಷ್ಟೂ ಮಿನುಗುವಂತವನ್ನು ಸೆಲೆಕ್ಟ್‌ ಮಾಡಿ.
  • ಶೋಲ್ಡರ್‌ ತನಕ ನೇತಾಡುವಂತವು ಇದೀಗ ಜೆನ್‌ ಜಿ ಹುಡುಗಿಯರನ್ನು ಸೆಳೆದಿವೆ.
  • ನಾಲ್ಕೈದು ಎಳೆ ಎಳೆಯಾಗಿರುವಂತವನ್ನು ಧರಿಸಿ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉತ್ತರ ಕನ್ನಡ

Lok Sabha Election 2024: ಗ್ಯಾರಂಟಿ ಬಗ್ಗೆ ಟೀಕೆ ಮಾಡಿದ್ದ ಬಿಜೆಪಿಗರೇ ಈಗ ಗ್ಯಾರಂಟಿ ಪದ ಬಳಸುತ್ತಿದ್ದಾರೆ: ಆರ್.ವಿ.ದೇಶಪಾಂಡೆ

Lok Sabha Election 2024: ಗ್ಯಾರಂಟಿ ಬಗ್ಗೆ ಟೀಕೆ ಮಾಡಿದ್ದ ಬಿಜೆಪಿಗರೇ ಈಗ ಗ್ಯಾರಂಟಿ ಪದ ಬಳಸುತ್ತಿದ್ದಾರೆ. ಮೋದಿ ಗ್ಯಾರಂಟಿ ಎಂದು ಪ್ರಚಾರಕ್ಕೆ‌ ಇಳಿದಿದ್ದಾರೆ ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ‌ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ.

VISTARANEWS.COM


on

State Administrative Reforms Commission Chairman R V Deshpande statement
Koo

ಕಾರವಾರ: ಗ್ಯಾರಂಟಿ (Guarantee) ಬಗ್ಗೆ ಟೀಕೆ ಮಾಡಿದ್ದ ಬಿಜೆಪಿಗರೇ ಈಗ ಗ್ಯಾರಂಟಿ ಪದ ಬಳಸುತ್ತಿದ್ದಾರೆ. ಮೋದಿ ಗ್ಯಾರಂಟಿ ಎಂದು ಪ್ರಚಾರಕ್ಕೆ‌ ಇಳಿದಿದ್ದಾರೆ ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ‌ಆರ್.ವಿ. ದೇಶಪಾಂಡೆ (Lok Sabha Election 2024) ತಿಳಿಸಿದರು.

ನಗರದ ಜಿಲ್ಲಾ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಈ ಬಾರಿ ಬಿಜೆಪಿ 400 ಸ್ಥಾನ ಗೆಲ್ಲುತ್ತದೆ ಎಂದು ಬಿಜೆಪಿಗರು ಪ್ರಚಾರಕ್ಕೆ ಇಳಿದಿದ್ದಾರೆ. ಆದರೆ ಕಾಂಗ್ರೆಸ್ ಸರ್ಕಾರದ ಸಾಧನೆ ನೋಡಿ, ಗೆಲ್ಲುವುದು ಸುಲಭವಿಲ್ಲ ಎಂದು ತಿಳಿದು ತಾವೂ ಗ್ಯಾರಂಟಿ ಕೊಡುತ್ತೇವೆಂದು ಜನರ ಮುಂದೆ ಹೋಗುತ್ತಿದ್ದಾರೆ ಎಂದು ಕಿಡಿಕಾರಿದರು.

ಇದನ್ನೂ ಓದಿ: UPSC Results 2023: ಯುಪಿಎಸ್‌ಸಿ ಪರೀಕ್ಷೆ; ಯುನಿವರ್ಸಲ್‌ನ 18 ಅಭ್ಯರ್ಥಿಗಳ ಅಭೂತಪೂರ್ವ ಸಾಧನೆ

ಸದ್ಯ ರಾಜ್ಯದಲ್ಲಿ ಬರಗಾಲ ಇದೆ. ಕೇಂದ್ರದಿಂದ ಒಂದು ರೂಪಾಯಿ ಹಣವನ್ನೂ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿದರು.

ಪ್ರಧಾನಿ ನರೇಂದ್ರ ಮೋದಿ ಆಡಳಿತದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. ವಿದ್ಯಾಭ್ಯಾಸ ಮಾಡಿದ ನಂತರ ಯುವಕರು ಕೆಲಸ ಸಿಗದೇ ಮನೆಯಲ್ಲಿ ಕೂರುವ ಪರಿಸ್ಥಿತಿ ಇದೆ ಎಂದು ಆರೋಪಿಸಿದ ಅವರು, ರಾಜ್ಯದಲ್ಲಿ ಇಂತಹ ಸಮಸ್ಯೆಯನ್ನು ಮನಗಂಡ ಕಾಂಗ್ರೆಸ್ ರಾಜ್ಯದಲ್ಲಿ ಯುವನಿಧಿ ನೀಡುವ ಮೂಲಕ ಯುವಕರ ಏಳಿಗೆಗೆ ಸಹಕಾರಿಯಾಗುವ ಕಾರ್ಯಕ್ರಮ ಚಾಲನೆ ತಂದಿದೆ.

ರೈತರ, ಮಹಿಳೆಯರ, ಯುವಕರ, ಶ್ರಮಿಕರ ಪರ ಗ್ಯಾರಂಟಿ ಯೋಜನೆ ಘೋಷಿಸಿದ್ದೇವೆ. ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿ ಈಡೇರಿಸುತ್ತೇವೆ. ರಾಜ್ಯದಲ್ಲಿ ಮಾತು ಕೊಟ್ಟಂತೆ ಗ್ಯಾರಂಟಿ ಜಾರಿಗೆ ತಂದಿದ್ದು ಹಾಗೇ ಕೇಂದ್ರದಲ್ಲೂ ತರಲಿದ್ದೇವೆ ಎಂದರು.

ಇದನ್ನೂ ಓದಿ: Uttara Kannada News: ಟ್ಯಾಂಕರ್ ಮೂಲಕ ತಕ್ಷಣ ನೀರು ಒದಗಿಸಲು ಉತ್ತರ ಕನ್ನಡ ಡಿಸಿ ಸೂಚನೆ

ಈ ಬಾರಿ ಉತ್ತರ ಕನ್ನಡದಲ್ಲಿ ಕಾಂಗ್ರೆಸ್ ಗೆಲುವು ಖಚಿತವಾಗಿದೆ. ನಾಮಪತ್ರ ಸಲ್ಲಿಕೆ ವೇಳೆ ಬಿಸಿಲನ್ನು ಲೆಕ್ಕಿಸದೇ ಜನರು ಬಂದಿರುವುದನ್ನು ನೋಡಿದರೆ ಕಾಂಗ್ರೆಸ್ ಗೆಲ್ಲುವುದರಲ್ಲಿ ಅನುಮಾನವಿಲ್ಲ ಎಂದು ತಿಳಿಸಿದರು.

Continue Reading

ಉತ್ತರ ಕನ್ನಡ

Uttara Kannada News: ಟ್ಯಾಂಕರ್ ಮೂಲಕ ತಕ್ಷಣ ನೀರು ಒದಗಿಸಲು ಉತ್ತರ ಕನ್ನಡ ಡಿಸಿ ಸೂಚನೆ

Uttara Kannada News: ಜಿಲ್ಲೆಯಲ್ಲಿ ಕುಡಿಯುವ ನೀರಿನ ಕುರಿತಂತೆ ಯಾವುದೇ ಸಂದರ್ಭದಲ್ಲೂ ಸಾರ್ವಜನಿಕರಿಗ ತೊಂದರೆ ಆಗದಂತೆ ಹೆಚ್ಚಿನ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಡಿಸಿ ಗಂಗೂಬಾಯಿ ಮಾನಕರ್‌ ಸೂಚನೆ ನೀಡಿದ್ದಾರೆ.

VISTARANEWS.COM


on

Drinking water problem Provide water immediately by tanker says DC
Koo

ಕಾರವಾರ: ಜಿಲ್ಲೆಯಲ್ಲಿ ಕುಡಿಯುವ ನೀರು (Drinking Water) ಸಮಸ್ಯೆ ಕಂಡು ಬರುತ್ತಿರುವ ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ತಕ್ಷಣವೇ ಸಾರ್ವಜನಿಕರಿಗೆ ಕುಡಿಯುವ ನೀರು ಒದಗಿಸುವಂತೆ ಸಂಬಂಧಪಟ್ಟ ಎಲ್ಲಾ ತಹಸೀಲ್ದಾರ್‌ಗಳಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್‌ ಸೂಚನೆ (Uttara Kannada News) ನೀಡಿದ್ದಾರೆ.

ಜಿಲ್ಲೆಯ ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಪ್ರತಿದಿನ ವರದಿಯಾಗುತ್ತಿದ್ದು, ಸಂಬಂಧಪಟ್ಟ ತಾಲೂಕುಗಳ ತಹಸೀಲ್ದಾರ್‌ಗಳು ಆ ಗ್ರಾಮಗಳಿಗೆ ತಕ್ಷಣವೇ ಟ್ಯಾಂಕರ್ ಮೂಲಕ ಕುಡಿಯುವ ನೀರು ಸೌಲಭ್ಯ ಒದಗಿಸಬೇಕು, ಕುಡಿಯುವ ನೀರಿನ ಕುರಿತಂತೆ ಯಾವುದೇ ಸಂದರ್ಭದಲ್ಲೂ ಸಾರ್ವಜನಿಕರಿಗ ತೊಂದರೆ ಆಗದಂತೆ ಹೆಚ್ಚಿನ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದ್ದಾರೆ.

ಇದನ್ನೂ ಓದಿ: Karnataka Weather : ಮುಂದಿನ 4 ತಿಂಗಳು ವಾಡಿಕೆಗಿಂತ‌ ಹೆಚ್ಚು ಮಳೆ; ನಾಳಿನ ಹವಾಮಾನ ಏನು?

ಜಿಲ್ಲೆಯಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಸುವ ಕುರಿತು ಟೆಂಡರ್ ಕರೆಯಲು ಎಲ್ಲಾ ತಹಸೀಲ್ದಾರ್‌ಗಳಿಗೆ ಈಗಾಗಲೇ ಅನುಮತಿಯನ್ನು ನೀಡಲಾಗಿದೆ. ಈಗಾಗಲೇ ಟೆಂಡರ್ ಕರೆದು, ಒಂದು ವೇಳೆ ಅಗತ್ಯ ಪ್ರಕ್ರಿಯೆಗಳು ವಿಳಂಬವಾಗುತ್ತಿದ್ದಲ್ಲಿ, ಸದರಿ ಟೆಂಡರ್‌ಗೆ ಸಾರ್ವಜನಿಕ ಹಿತದೃಷ್ಠಿಯಿಂದ ಘಟನೋತ್ತರ ಮಂಜೂರಾತಿ ನೀಡಲು ಅನುಮತಿ ನೀಡಲಾಗುವುದು. ಆದರೆ ಯಾವುದೇ ಆಡಳಿತಾತ್ಮಕ ಮತ್ತು ತಾಂತ್ರಿಕ ಕಾರಣಗಳಿಂದ ಸಾರ್ವಜನಿಕರಿಗೆ ನೀರು ಒದಗಿಸಲು ತೊಂದರೆಯಾಗದಂತೆ ಎಚ್ಚರಿಕೆ ವಹಿಸಿ ಎಂದು ತಿಳಿಸಿದ್ದಾರೆ.

ಸಾರ್ವಜನಿಕರು ಮಾತ್ರವಲ್ಲದೇ ಜಿಲ್ಲೆಯಲ್ಲಿನ ಜಾನುವಾರುಗಳಿಗೆ ಕೂಡಾ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಜಿಲ್ಲೆಯಲ್ಲಿರುವ ಎಲ್ಲಾ ಗೋಕಟ್ಟೆಗಳಿಗೂ ಟ್ಯಾಂಕರ್ ಮೂಲಕ ನೀರು ಒದಗಿಸುವಂತೆ ಮತ್ತು ಜಿಲ್ಲೆಯ ಅರಣ್ಯ ಭಾಗದ ಗ್ರಾಮಗಳಲ್ಲಿ ಕೂಡಾ ಜಾನುವಾರುಗಳಿಗೆ ಸೂಕ್ತ ನೀರಿನ ವ್ಯವಸ್ಥೆ ಮಾಡುವಂತೆ ನಿರ್ದೇಶನ ನೀಡಿದ್ದಾರೆ.

ಜಿಲ್ಲೆಯ ಗ್ರಾಮೀಣ ಪ್ರದೇಶ ಮಾತ್ರವಲ್ಲದೇ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿಯೂ ಸಹ ಯಾವುದೇ ವಾರ್ಡ್‌ನಲ್ಲಿ ನೀರಿನ ಸಮಸ್ಯೆ ಕಂಡು ಬಂದಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವಂತೆ ಸೂಚನೆ ನೀಡಿರುವ ಜಿಲ್ಲಾಧಿಕಾರಿಗಳು, ಸಾರ್ವಜನಿಕರು ಕುಡಿಯುವ ನೀರಿನ ಕುರಿತು ತಮ್ಮ ಸಮಸ್ಯೆಯಿದ್ದಲ್ಲಿ 24*7 ಕಾರ್ಯ ನಿರ್ವಹಿಸುವ ಉಚಿತ ಸಹಾಯವಾಣಿ ಸಂಖ್ಯೆ 1950 ಗೆ ಕರೆ ಮಾಡಬಹುದಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Job Alert: ಅಂಗನವಾಡಿಯಲ್ಲಿದೆ 513 ಹುದ್ದೆ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ; ಏ. 19 ಕೊನೆಯ ದಿನ

ಜಿಲ್ಲೆಯಲ್ಲಿ ಈಗಾಗಲೇ ಕುಡಿಯುವ ನೀರಿನ ಸಮಸ್ಯೆ ತಲೆದೊರಿದ ಗೋಕರ್ಣ, ನಾಡುಮಾಸ್ಕೇರಿ, ಹೆಗಡೆ, ಕುಜಣಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಡಿಸಿ ಗಂಗೂಬಾಯಿ ಮಾನಕರ್‌ ತಿಳಿಸಿದ್ದಾರೆ.

Continue Reading
Advertisement
Lok sabha election 2024
ದೇಶ8 mins ago

Lok sabha election: 2019ರ ಅವಲೋಕನ; ಗರಿಷ್ಠ- ಕನಿಷ್ಠ ಮತಗಳ ಅಂತರದಿಂದ ಗೆದ್ದವರು

Student Death in Bengaluru
ಬೆಂಗಳೂರು11 mins ago

Student Death: ರೈಲಿಗೆ ತಲೆ ಕೊಟ್ಟು ಮಣಿಪಾಲ್‌ ಆಸ್ಪತ್ರೆಯ ಸ್ಟಾಫ್ ನರ್ಸ್ ಸೂಸೈಡ್‌

LSG vs CSK
ಕ್ರೀಡೆ37 mins ago

LSG vs CSK: ಗೆಲುವಿನ ಹಳಿ ಏರೀತೇ ಲಕ್ನೋ?; ಚೆನ್ನೈ ಎದುರಾಳಿ

Nestle Company
ಲೈಫ್‌ಸ್ಟೈಲ್1 hour ago

Nestle Company: ಮಕ್ಕಳ ಜೀವದ ಜತೆ ನೆಸ್ಲೆ ಕಂಪನಿ ಚೆಲ್ಲಾಟ? ಸೆರೆಲಾಕ್‌ ಕುಡಿಸೋ ಮುನ್ನ ಎಚ್ಚರ!

Lok Sabha Election 20241 hour ago

Lok Sabha Election 2024: ಈ ಬಾರಿ ಕೇಂದ್ರದಲ್ಲೂ ಬಿಜೆಪಿ ಅಧಿಕಾರಕ್ಕೆ ಬರೋದಿಲ್ಲ: ಸಿಎಂ ಸಿದ್ದರಾಮಯ್ಯ ಭವಿಷ್ಯ

Supreme Court
ದೇಶ1 hour ago

ಚುನಾವಣೆ ಪವಿತ್ರವಾದುದು, ಧಕ್ಕೆ ಆಗಬಾರದು; ಚುನಾವಣಾ ಆಯೋಗಕ್ಕೆ ಸುಪ್ರೀಂ ಸೂಚಿಸಿದ್ದೇಕೆ?

Aaradhya Bachchan is wiser more intelligent than I
ಬಾಲಿವುಡ್1 hour ago

Navya Naveli Nanda: ಆರಾಧ್ಯ ಬಚ್ಚನ್‌ ನನಗಿಂತ ಹೆಚ್ಚು ಬುದ್ಧಿವಂತೆ ಎಂದ ಶ್ವೇತಾ ಬಚ್ಚನ್ ಮಗಳು!

Road Accident
ಬಾಗಲಕೋಟೆ2 hours ago

Road Accident : ಕ್ರೂಸರ್‌- ಬಸ್‌ ನಡುವೆ ಭೀಕರ ಅಪಘಾತ; ಮೂವರು ಸಾವು, ಐವರು ಗಂಭೀರ

Raj Kundra Shilpa Shetty
ಕ್ರೈಂ2 hours ago

Raj Kundra: ಬಿಟ್‌ಕಾಯಿನ್‌ ಪೋಂಜಿ ಸ್ಕೀಮ್‌; ಇಡಿಯಿಂದ ರಾಜ್‌ ಕುಂದ್ರಾ ₹97 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

Jai Shree Ram slogan Rahul Gandhi instigated anti Hindu activities says Pralhad Joshi
ರಾಜಕೀಯ2 hours ago

Jai Shree Ram slogan: ಹಿಂದೂ ವಿರೋಧಿ ಕೃತ್ಯಗಳಿಗೆ ರಾಹುಲ್ ಗಾಂಧಿ ಕುಮ್ಮಕ್ಕು: ಜೋಶಿ ಕಿಡಿ

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ1 day ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ2 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20243 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20244 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ4 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ5 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ6 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ6 days ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

Lok Sabha Election 2024 Vokkaliga support us says DK Shivakumar
ಕರ್ನಾಟಕ1 week ago

Lok Sabha Election 2024: ಒಕ್ಕಲಿಗರ ಬೆಂಬಲ ನಮಗೇ; ನಿರ್ಮಲಾನಂದನಾಥ ಶ್ರೀ ಹೆಸರನ್ನು ರಾಜಕೀಯಕ್ಕೆ ಎಳೆದಿಲ್ಲ: ಡಿಕೆಶಿ ಸ್ಪಷ್ಟನೆ

ಟ್ರೆಂಡಿಂಗ್‌