Site icon Vistara News

Soraba News: ಚಂದ್ರಗುತ್ತಿ ರೇಣುಕಾಂಬಾ ಬ್ರಹ್ಮ ರಥೋತ್ಸವ: ಪೊಲೀಸ್‌ ಬಂದೋಬಸ್ತ್‌ಗೆ ಸೂಚನೆ

Preparatory Meeting

#image_title

ಸೊರಬ: ತಾಲೂಕಿನ ಐತಿಹಾಸಿಕ ಚಂದ್ರಗುತ್ತಿ ರೇಣುಕಾಂಬಾ ದೇವರ ಬ್ರಹ್ಮ ರಥೋತ್ಸವಕ್ಕೆ ಅಧಿಕ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುವ ಹಿನ್ನೆಲೆಯಲ್ಲಿ ಮೂಲ ಸೌಕರ್ಯಗಳ ಕೊರತೆ ಎದುರಾಗದಂತೆ ಮುನ್ನೆಚ್ಚರಿಕೆ ವಹಿಸಲು ತಾಲೂಕು ಆಡಳಿತಕ್ಕೆ ಸಾಗರ ಉಪ ವಿಭಾಗಾಧಿಕಾರಿ ಪಲ್ಲವಿ ಸಾತೇನಹಳ್ಳಿ ಸೂಚಿಸಿದರು.

ತಾಲೂಕಿನ ಚಂದ್ರಗುತ್ತಿ ಗ್ರಾಮದಲ್ಲಿ ರೇಣುಕಾಂಬಾ ಜಾತ್ರಾ ಮಹೋತ್ಸವದ ಪ್ರಯುಕ್ತ ಹಮ್ಮಿಕೊಂಡಿದ್ದ ಜಾತ್ರಾ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಜಾತ್ರೆಗೆ ತಾಲೂಕು ಸೇರಿದಂತೆ ನೆರೆಯ ಜಿಲ್ಲೆಯ ವಿವಿಧ ಭಾಗಗಳಿಂದ ಒಂದು ವಾರದ ಮುಂಚೆಯೇ ಆಗಮಿಸುವುದರಿಂದ ಕುಡಿಯುವ ನೀರು, ಸುಲಭ ಶೌಚಾಲಯ ವ್ಯವಸ್ಥೆಯನ್ನು ಅಗತ್ಯವಾಗಿ ಕಲ್ಪಿಸಬೇಕು. ಸ್ವಚ್ಛತೆಗೆ ಆದ್ಯತೆ ನೀಡಬೇಕು. ಅಹಿತಕರ ಘಟನೆಗಳು ನಡೆಯದಂತೆ ಬಂದೋಬಸ್ತ್ ಮಾಡುವಂತೆ ಸಭೆಯಲ್ಲಿದ್ದ ಅಧಿಕಾರಿಗಳಿಗೆ ತಿಳಿಸಿದರು.

ಫೆ. 27, 28 ಹಾಗೂ 29ರಂದು ಜಾತ್ರೆ ನಡೆಯಲಿದ್ದು, 25 ರಿಂದಲೇ ಕ್ಷೇತ್ರದಲ್ಲಿ ವಿವಿಧ ಧಾರ್ಮಿಕ ವಿಧಿ ವಿಧಾನಗಳಿಗೆ ಚಾಲನೆ ನೀಡಲಾಗುವುದು. ಜಾತ್ರಾ ಮಹೋತ್ಸವ ಸುಗಮವಾಗಿ ನಡೆಯಲು ಸ್ಥಳೀಯ ಗ್ರಾಮ ಪಂಚಾಯಿತಿ, ದೇವಸ್ಥಾನ ಆಡಳಿತ ಮಂಡಳಿ ಹಾಗೂ ಸಾರ್ವಜನಿಕರು ಸಹಕಾರ ನೀಡುವಂತೆ ಮನವಿ ಮಾಡಿದರು.

ಇದನ್ನೂ ಓದಿ: RSS chief Mohan Bhagwat: ಶಾಸ್ತ್ರಗಳ ಆಧಾರದ ಮೇಲೆ ಕೆಲವು ಪಂಡಿತರು ಹೇಳುವುದು ಸುಳ್ಳು

ಪೂರ್ವಭಾವಿ ಸಭೆಯಲ್ಲಿ ಸಿಪಿಐ ಭಾಗ್ಯವತಿ, ಪಿಎಸ್‍ಐ ನಾಗರಾಜ್, ತಾಲೂಕು ವೈದ್ಯಾಧಿಕಾರಿ ಪ್ರಭು ಸಾಹುಕಾರ್, ದೇವಸ್ಥಾನ ಆಡಳಿತ ಮಂಡಳಿಯ ಅಧ್ಯಕ್ಷ ಪ್ರಸನ್ನ ಶೇಟ್, ಚಂದ್ರಗುತ್ತಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಲಕ್ಷ್ಮೀಚಂದ್ರಪ್ಪ, ಸದಸ್ಯರಾದ ರೇಣುಕಾ ಪ್ರಸಾದ್, ರತ್ನಾಕರ್, ರೇಣುಕಾಂಬಾ ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿ ವಿ.ಎಲ್.ಶಿವಪ್ರಸಾದ್, ಪಿಡಿಒ ನಾಗೇಂದ್ರ, ಮುಜರಾಯಿ ಇಲಾಖೆಯ ಶ್ರುತಿ, ಶಿರಸ್ತೇದಾರ್ ನಾಗರಾಜ್, ದೇವಸ್ಥಾನ ಆಡಳಿತ ಮಂಡಳಿಯ ಸದಸ್ಯರು, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಸಾರ್ವಜನಿಕರು ಇದ್ದರು.

Exit mobile version