Soraba News: ಮಾನವ ಜೀವನದ ಉನ್ನತಿಗೆ ಧರ್ಮಾಚರಣೆ ಅಗತ್ಯ: ಬಾಳೆಹೊನ್ನೂರು ರಂಭಾಪುರಿ ಶ್ರೀಗಳು - Vistara News

ಕರ್ನಾಟಕ

Soraba News: ಮಾನವ ಜೀವನದ ಉನ್ನತಿಗೆ ಧರ್ಮಾಚರಣೆ ಅಗತ್ಯ: ಬಾಳೆಹೊನ್ನೂರು ರಂಭಾಪುರಿ ಶ್ರೀಗಳು

Soraba News: ಸೊರಬ ತಾಲೂಕಿನ ದುಗ್ಲಿ ಶ್ರೀ ಗುರು ರೇವಣಸಿದ್ಧೇಶ್ವರ ಮಠದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ, ಶ್ರೀ ಜಗದ್ಗುರು ರೇವಣಸಿದ್ಧೇಶ್ವರ ರಥೋತ್ಸವ, ಶ್ರೀ ಮಠದ 47ನೇ ವಾರ್ಷಿಕೋತ್ಸವವು ವಿಜೃಂಭಣೆಯಿಂದ ಜರುಗಿತು.

VISTARANEWS.COM


on

Rambhapuri Swamiji Balehonnur soraba
ತಾಲೂಕಿನ ದುಗ್ಲಿ ಶ್ರೀ ಗುರು ರೇವಣಸಿದ್ಧೇಶ್ವರ ಮಠದಲ್ಲಿ ನಡೆದ ವಿವಿಧ ಕಾರ್ಯಕ್ರಮಗಳನ್ನು ಸಂಸದ ಬಿ.ವೈ.ರಾಘವೇಂದ್ರ ಉದ್ಘಾಟಿಸಿದರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಸೊರಬ: “ಮಾನವ ಜೀವನದ ಉನ್ನತಿಗೆ ಧರ್ಮಾಚರಣೆ ಅಗತ್ಯವಾಗಿದ್ದು, ಅರಿವು, ಆದರ್ಶಗಳಿಂದ ಮನುಷ್ಯನ ಬದುಕು ಸಮೃದ್ಧಗೊಳ್ಳಬೇಕು. ಈ ನಿಟ್ಟಿನಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯರ ವಿಚಾರ ಧಾರೆಗಳು ದಾರಿ ದೀಪ” ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ (Rambhapuri sri) ಡಾ. ವೀರಸೋಮೇಶ್ವರ ಜಗದ್ಗುರುಗಳು ತಿಳಿಸಿದರು.

ತಾಲೂಕಿನ ದುಗ್ಲಿ ಶ್ರೀ ಗುರು ರೇವಣಸಿದ್ಧೇಶ್ವರ ಮಠದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ, ಶ್ರೀ ಜಗದ್ಗುರು ರೇವಣಸಿದ್ಧೇಶ್ವರ ರಥೋತ್ಸವ, ಶ್ರೀ ಮಠದ 47ನೇ ವಾರ್ಷಿಕೋತ್ಸವ ಹಾಗೂ ಲಿಂ.ಶ್ರೀ ಮುರುಘೇಂದ್ರ ಸ್ವಾಮಿಗಳ ಚತುರ್ಥ ವರ್ಷದ ಪುಣ್ಯಾರಾಧನೆ ಅಂಗವಾಗಿ ಜರುಗಿದ ಧರ್ಮ ಜಾಗೃತಿ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು.

ಇದನ್ನೂ ಓದಿ: BY Vijayendra: ದೆಹಲಿವರೆಗೆ ದೂರು ಹೋದರೆ ಆ ವ್ಯಕ್ತಿ ಎತ್ತರಕ್ಕೆ ಬೆಳೆದಿದ್ದಾನೆಂದು ಅರ್ಥ; ವಿಜಯೇಂದ್ರ ಹೇಳಿದ್ದು ಯಾರಿಗೆ?

“ಹಗಲು ಸೂರ್ಯ, ರಾತ್ರಿ ಚಂದ್ರ ನಮಗೆ ಬೆಳಕನ್ನು ಕೊಡುತ್ತಾನೆ. ಆದರೆ ನಮಗೆ ನಿರಂತರ ಬೆಳಕನ್ನು ನೀಡುವುದು ಧರ್ಮ. ಸ್ವಧರ್ಮ ನಿಷ್ಠೆ ಮತ್ತು ಪರಧರ್ಮ ಸಹಿಷ್ಣುತೆಯನ್ನು ಹೊಂದಿ ಸಾಮರಸ್ಯದಿಂದ ಬದುಕಿ ಬಾಳಬೇಕು ಎಂಬುದು ಜಗದ್ಗುರುಗಳು ಲಿಂ.ಶ್ರೀ ಮುರುಘೇಂದ್ರ ಶ್ರೀಗಳ ಉಪದೇಶವಾಗಿದೆ. ಶ್ರೀ ಜಗದ್ಗುರು ರೇಣುಕಾಚಾರ್ಯರು ಯುಗ ಪುರುಷರಾಗಿ ಧರ್ಮದ ದಶ ವಿಧ ಸೂತ್ರಗಳನ್ನು ಬೋಧಿಸಿ ಉದ್ಧರಿಸಿದ್ದಾರೆ.
ಇಲ್ಲಿನ ಮಠಾಧ್ಯಕ್ಷರಾದ ರೇವಣಸಿದ್ಧೇಶ್ವರ ಶಿವಾಚಾರ್ಯ ಸ್ವಾಮೀಜಿಗಳು ಭಕ್ತರಿಗೆ ನಮ್ಮ ಸಂಸ್ಕೃತಿಯನ್ನು ಮನವರಿಕೆ ಮಾಡಿ ಜೀವನದಲ್ಲಿ ಆಶಾದಾಯಕ ಭಾವನೆ ಉಂಟು ಮಾಡಿರುವುದು ಸಂತಸ ತಂದಿದೆ” ಎಂದರು.

ಸಂಸದ ಬಿ.ವೈ.ರಾಘವೇಂದ್ರ ಸಮಾರಂಭವನ್ನು ಉದ್ಘಾಟಿಸಿದ ಮಾತನಾಡಿ, “ಶ್ರೀ ರಂಭಾಪುರಿ ಜಗದ್ಗುರುಗಳ ಮಾರ್ಗದರ್ಶನದಲ್ಲಿ ಶ್ರೀ ಮಠದ ಅಭಿವೃದ್ಧಿಯ ಕಾರ್ಯಗಳು ನಡೆದಿವೆ. ರೇವಣಸಿದ್ಧೇಶ್ವರ ಶ್ರೀಗಳ ಕ್ರಿಯಾಶೀಲತೆಯಿಂದಾಗಿ ಭಕ್ತರ ಸಹಕಾರದಿಂದಾಗಿ ಶ್ರೀ ಮಠ ಮುನ್ನಡೆಯುತ್ತಿರುವುದು ಸಂತೋಷದಾಯಕ” ಎಂದರು.

ಇದನ್ನೂ ಓದಿ: CJI DY Chandrachud: ಮುಚ್ಚಿದ ಲಕೋಟೆ ರೂಢಿಯನ್ನೇ ಕೊನೆಗೊಳಿಸಿ, ಕೇಂದ್ರಕ್ಕೆ ಸಿಜೆಐ ಚಂದ್ರಚೂಡ್‌ ಚಾಟಿ

ಸುಕ್ಷೇತ್ರ ದುಗ್ಲಿ ತಪೋ ಕ್ಷೇತ್ರ ಕಡೆನಂದಿಹಳ್ಳಿ ಶ್ರೀ ರೇವಣಸಿದ್ಧೇಶ್ವರ ಶಿವಾಚಾರ್ಯ ಸ್ವಾಮೀಜಿ, ಜಡೆ ಶ್ರೀ ಮಹಾಂತ ಸ್ವಾಮಿಗಳು, ಮಳಲಿ ಶ್ರೀ ಡಾ.ನಾಗಭೂಷಣ ಸ್ವಾಮೀಜಿ, ಸಿಂಧನೂರು-ಕನ್ನೂರು ಶ್ರೀ ಸೋಮನಾಥ ಸ್ವಾಮೀಜಿ, ಹಾರನಹಳ್ಳಿ ಶಿವಯೋಗಿ ಶ್ರೀಗಳು, ಕಾರ್ಜುವಳ್ಳಿ ಸದಾಶಿವ ಶ್ರೀಗಳು, ಚನ್ನಗಿರಿ ಕೇದಾರ ಶಿವಶಾಂತವೀರ ಶ್ರೀಗಳು, ಸಂಗನಾಳ ಶಿವಲಿಂಗ ಸ್ವಾಮೀಜಿಗಳು ಸಮಾರಂಭದಲ್ಲಿ ಪಾಲ್ಗೊಂಡು ಆಶೀರ್ವದಿಸಿದರು.

ಸಮಾರಂಭದಲ್ಲಿ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ಅಧ್ಯಕ್ಷ ರಾಜು ಎಂ. ತಲ್ಲೂರು, ಡಾ.ಜ್ಞಾನೇಶ್ ಎಚ್.ಇ., ಗುಡವಿ ಗ್ರಾ. ಪಂ. ಅಧ್ಯಕ್ಷೆ ಸರಿತಾ ಪರಶುರಾಮಪ್ಪ, ಉಪಾಧ್ಯಕ್ಷ ಮಂಜುನಾಥ ಸಿ.ಎಚ್., ಗ್ರಾಮ ಪಂಚಾಯಿತಿ ಸದಸ್ಯರಾದ ಚಂದ್ರಪ್ಪ ಡಿ., ರೂಪಾ ಪರಶುರಾಮ, ಬಸವರಾಜಪ್ಪ ಬಾರಂಗಿ, ವೀರೇಶಗೌಡ, ಗುರು ಪ್ರಸನ್ನ ಗೌಡ ಬಾಸೂರ, ಅರುಣ ಕುಮಾರ, ದೇಸಾಯಿ ಶಂಕ್ರಪ್ಪ ಗೌಡ, ಟಿ.ಜಿ.ನಾಡಿಗೇರ್, ದ್ಯಾಮಣ್ಣ ದೊಡ್ಡಮನಿ, ಪ್ರದೀಪ ಎಸ್. ಗೌಡ, ಪ್ರಶಾಂತ ಗೌಡ ಸಂತೊಳ್ಳಿ, ಹನುಮಂತಪ್ಪ ಮಡ್ಲೂರ, ಡಾ.ಪ್ರಭು ಸಾಹುಕಾರ್, ಪಂ.ಕೃಷ್ಣ ಭಟ್, ಮೃತ್ಯುಂಜಯಸ್ವಾಮಿ ಹಿರೇಮಠ, ಕೆರೆಸ್ವಾಮಿ ಗೌಡ, ಸಣ್ಣಪ್ಪ ಗೌಡ, ಕೆ.ಎಸ್. ಪ್ರಶಾಂತ ಇದ್ದರು.

ಇದನ್ನೂ ಓದಿ: Ugadi Jewel Fashion: ಯುಗಾದಿ ಹಬ್ಬದ ಗ್ರ್ಯಾಂಡ್‌ ಲುಕ್‌ಗೆ ಟ್ರೆಂಡಿಯಾದ ಮಿಕ್ಸ್‌ ಮ್ಯಾಚ್‌ ಆಭರಣಗಳು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

2nd PUC Exam: ಏ.29ರಿಂದ ದ್ವಿತೀಯ ಪಿಯುಸಿ ಪರೀಕ್ಷೆ-2; ಪ್ರವೇಶ ಪತ್ರ ಬಿಡುಗಡೆ

2nd PUC Exam: ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ವೆಬ್‌ಸೈಟ್‌ನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ-2ರ ಪ್ರವೇಶ ಪತ್ರ ಡೌನ್‌ಲೋಡ್‌ ಮಾಡಿಕೊಳ್ಳಬಹುದಾಗಿದೆ.

VISTARANEWS.COM


on

2nd PUC Exam
Koo

ಬೆಂಗಳೂರು: 2024ರ ದ್ವಿತೀಯ ಪಿಯುಸಿ ಪರೀಕ್ಷೆ-2, ಏಪ್ರಿಲ್ 29ರಿಂದ ಪ್ರಾರಂಭವಾಗಲಿರುವ ಹಿನ್ನೆಲೆಯಲ್ಲಿ ಪ್ರವೇಶ ಪತ್ರಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಬಿಡುಗಡೆ ಮಾಡಿದೆ. ಪರೀಕ್ಷೆಗೆ (2nd PUC Exam) ನೋಂದಾಯಿಸಿರುವ ಎಲ್ಲಾ ವಿದ್ಯಾರ್ಥಿಗಳು ಪ್ರವೇಶ ಪತ್ರವನ್ನು (Admission Ticket) ಮಂಡಲಿಯ ವೆಬ್‌ಸೈಟ್ https://kseab.karnataka.gov.inನಲ್ಲಿ ಪಡೆಯಬಹುದಾಗಿದೆ.

ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಅಧ್ಯಕ್ಷೆ ಎನ್‌.ಮಂಜುಶ್ರೀ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, 11 ಅಂಕಿಗಳನ್ನೊಳಗೊಂಡ ನೋಂದಣಿ ಸಂಖ್ಯೆಯನ್ನು ಹೊಂದಿರುವ ವಿದ್ಯಾರ್ಥಿಗಳು ಮಾತ್ರ ಪ್ರವೇಶ
ಪತ್ರವನ್ನು (Admission Ticket) online ನಲ್ಲಿ ಪಡೆಯಬಹುದಾಗಿದೆ. ಇನ್ನುಳಿದ ವಿದ್ಯಾರ್ಥಿಗಳು ತಮ್ಮ ಕಾಲೇಜಿನ ಪ್ರಾಂಶುಪಾಲರನ್ನು ಸಂಪರ್ಕಿಸಿ ಪ್ರವೇಶ ಪತ್ರವನ್ನು (Admission Ticket) ಪಡೆದುಕೊಳ್ಳುವುದು ಎಂದು ತಿಳಿಸಿದ್ದಾರೆ.

ಏ.29ರಿಂದ ಮೇ 16ರವರೆಗೆ ತೀಯ ಪಿಯುಸಿ ಪರೀಕ್ಷೆ-2

ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ -1ರಲ್ಲಿ ಕೆಲವರು ಅನುತ್ತೀರ್ಣರಾಗಿದ್ದರೆ, ಮತ್ತೆ ಕೆಲವರಿಗೆ ಅಂಕ ಕಡಿಮೆ ಬಂದಿದೆ ಎಂಬ ಅಸಮಾಧಾನ. ಅಂತಹವರಿಗಾಗಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ 2 ನಡೆಸಲಾಗುತ್ತಿದ್ದು, ಇದರ ಅಂತಿಮ ವೇಳಾಪಟ್ಟಿಯನ್ನು ಪ್ರಕಟ ಮಾಡಲಾಗಿದೆ. ಏಪ್ರಿಲ್ 29ರಿಂದ ಮೇ 16ರವರೆಗೆ 2ನೇ ಪರೀಕ್ಷೆಯನ್ನು ನಡೆಸಲಾಗುವುದು.

ದ್ವಿತೀಯ PUC ಫಲಿತಾಂಶಗಳು karresults.nic.in ನಲ್ಲಿ ಲಭ್ಯವಿರುತ್ತವೆ. ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ವಿಷಯ ಸಂಯೋಜನೆ/ಸ್ಟ್ರೀಮ್ ಅನ್ನು ಬಳಸಿಕೊಂಡು ಅದನ್ನು ಪರಿಶೀಲಿಸಬಹುದು. ವಿದ್ಯಾರ್ಥಿಗಳು ಈ ಹಂತಗಳನ್ನು ಅನುಸರಿಸುವ ಮೂಲಕ ಫಲಿತಾಂಶವನ್ನು ಪರಿಶೀಲಿಸಬಹುದು:

  • karresults.nic.in ನಲ್ಲಿ ಕರ್ನಾಟಕ ಫಲಿತಾಂಶ ಪೋರ್ಟಲ್‌ಗೆ ಭೇಟಿ ನೀಡಿ.
  • ಮುಖಪುಟದಲ್ಲಿ ನೀಡಲಾದ ಪಿಯುಸಿ 2 ಪರೀಕ್ಷೆಯ ಫಲಿತಾಂಶದ ಲಿಂಕ್ ಅನ್ನು ತೆರೆಯಿರಿ.
  • ಲಾಗಿನ್ ಪುಟದಲ್ಲಿ, ನಿಮ್ಮ KSEAB ನೋಂದಣಿ ಸಂಖ್ಯೆಯನ್ನು ಒದಗಿಸಿ; ವಿಷಯ ಸಂಯೋಜನೆ ಅಥವಾ ಸ್ಟ್ರೀಮ್ ಅನ್ನು ಆಯ್ಕೆ ಮಾಡಿ (ವಿಜ್ಞಾನ/ಕಲೆ/ವಾಣಿಜ್ಯ)
  • ನಿಮ್ಮ 2ನೇ ಪಿಯುಸಿ ಫಲಿತಾಂಶವನ್ನು ಮುಂದಿನ ಪುಟದಲ್ಲಿ ಪರಿಶೀಲಿಸಿ.

2ನೇ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಇಂತಿದೆ:

  • ಏಪ್ರಿಲ್ 29ರಂದು ಕನ್ನಡ/ಅರೇಬಿಕ್, 30ರಂದು ಇತಿಹಾಸ/ಭೌತಶಾಸ್ತ್ರ
  • ಮೇ 2ರಂದು ಇಂಗ್ಲಿಷ್, 3ರಂದು ರಾಜ್ಯಶಾಸ್ತ್ರ, ಸಂಖ್ಯಾ ಶಾಸ್ತ್ರ, 4ರಂದು ಭೂಗೋಳ ಶಾಸ್ತ್ರ, ಮನಃ ಶಾಸ್ತ್ರ, ರಸಾಯನ ಶಾಸ್ತ್ರ, ಗೃಹ ವಿಜ್ಞಾನ, ಮೂಲಗಣಿತ
  • ಮೇ 9ರಂದು ತರ್ಕ ಶಾಸ್ತ್ರ, ವ್ಯವಹಾರ ಅಧ್ಯಯನ, ಗಣಿತ, ಶಿಕ್ಷಣ ಶಾಸ್ತ್ರ
  • ಮೇ 11ರಂದು ಸಮಾಜಶಾಸ್ತ್ರ, ಜೀವಶಾಸ್ತ್ರ, ಭೂಗರ್ಭ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಿಕ ವಿಜ್ಞಾನ
  • ಮೇ 13ರಂದು ಅರ್ಥಶಾಸ್ತ್ರ, 14ರಂದು ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, 15ರಂದು ಹಿಂದಿ
  • ಮೇ 16ರಂದು ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್

ವಾರ್ಷಿಕ ಪರೀಕ್ಷೆ 1ರಲ್ಲಿ ನಿರೀಕ್ಷಿತ ಫಲಿತಾಂಶ ಪಡೆಯಲು ಆಗದ ಹಾಗೂ ಅನುತ್ತೀರ್ಣರಾದ ವಿದ್ಯಾರ್ಥಿಗಳು ಈ ಪರೀಕ್ಷೆಯನ್ನು ಬರೆಯಬಹುದಾಗಿದೆ.

Continue Reading

ಕರ್ನಾಟಕ

Lok Sabha Election 2024: ನನ್ನ ಜೀವ, ನನ್ನ ದೇಹ ಇರುವುದೇ ನಮ್ಮ ಜನರಿಗಾಗಿ: ಡಿ.ಕೆ. ಶಿವಕುಮಾರ್

Lok Sabha Election 2024: ನಮ್ಮ ಜನ ನಮಗೆ ಬಹಳ ಪ್ರೀತಿ, ವಿಶ್ವಾಸ ತೋರಿದ್ದಾರೆ. ಅವರ ಆಶೀರ್ವಾದದಿಂದ ಇಡೀ ರಾಜ್ಯದ ಜನರ ಸೇವೆ ಮಾಡುವ ಅವಕಾಶ ಸಿಕ್ಕಿದೆ. ಇಡೀ ಊರಿಗೆ ಊರೇ ಒಗ್ಗಟ್ಟಿನಿಂದ ಆಶೀರ್ವಾದ ಮಾಡುತ್ತಿದೆ. ಜನರಿಗೆ ನನ್ನ ಮೇಲೆ ನಂಬಿಕೆ ಇದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

VISTARANEWS.COM


on

DCM D K Shivakumar visit adichunchanagiri mutt
ಬೆಂಗಳೂರಿನ ವಿಜಯನಗರ ಮಠದಲ್ಲಿ ಆದಿ ಚುಂಚನಗಿರಿ ಶ್ರೀ ನಿರ್ಮಲಾನಂದ ಸ್ವಾಮೀಜಿ ಅವರನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ಭೇಟಿ ಮಾಡಿ, ಆಶೀರ್ವಾದ ಪಡೆದರು.
Koo

ಕನಕಪುರ: ನಾವು ನಮ್ಮ ಜನರಿಗಾಗಿ ಪ್ರಾಣ ಕೊಡುವುದಕ್ಕೂ ಸಿದ್ಧವಿದ್ದೇವೆ. ಈ ದೇಹ ಇರುವುದೇ ನಮ್ಮ ಜನರಿಗಾಗಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (Lok Sabha Election 2024) ತಿಳಿಸಿದರು.

ಕನಕಪುರದ ದೊಡ್ಡಆಲಹಳ್ಳಿಯಲ್ಲಿ ಬುಧವಾರ ಚುನಾವಣೆ ಪ್ರಚಾರದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಜನ ನಮಗೆ ಬಹಳ ಪ್ರೀತಿ, ವಿಶ್ವಾಸ ತೋರಿದ್ದಾರೆ. ಅವರ ಆಶೀರ್ವಾದದಿಂದ ಇಡೀ ರಾಜ್ಯದ ಜನರ ಸೇವೆ ಮಾಡುವ ಅವಕಾಶ ಸಿಕ್ಕಿದೆ. ಇಡೀ ಊರಿಗೆ ಊರೇ ಒಗ್ಗಟ್ಟಿನಿಂದ ಆಶೀರ್ವಾದ ಮಾಡುತ್ತಿದೆ. ಜನರಿಗೆ ನನ್ನ ಮೇಲೆ ನಂಬಿಕೆ ಇದೆ. ಕ್ಷೇತ್ರ ಹಿಂದೆ ಹೇಗಿತ್ತು, ಈಗ ಯಾವ ರೀತಿ ಬದಲಾವಣೆ ಮಾಡಿದ್ದೇವೆ ಎಂದು ಜನರಿಗೆ ಗೊತ್ತಿದೆ.

ಇದನ್ನೂ ಓದಿ: Kotak Bank: ಕೊಟಕ್‌ ಬ್ಯಾಂಕ್‌ ಕ್ರೆಡಿಟ್‌ ಕಾರ್ಡ್‌ ನಿಷೇಧ; ಹಳೆಯ ಗ್ರಾಹಕರಿಗೆ ಏನು ತೊಂದರೆ? ಇಲ್ಲಿದೆ ಮಾಹಿತಿ

ಅನೇಕ ಕಡೆಗಳಲ್ಲಿ ನಮ್ಮ ಆಸ್ತಿಗಳನ್ನು ಮಕ್ಕಳ ವಿದ್ಯಾಭ್ಯಾಸಕ್ಕೆ ನಾವು ಬಿಟ್ಟುಕೊಟ್ಟಿದ್ದೇವೆ. ನಾವು ಸ್ವಾರ್ಥಕ್ಕಾಗಿ ರಾಜಕಾರಣ ಮಾಡುತ್ತಿಲ್ಲ ಎಂದು ಜನರಿಗೆ ಗೊತ್ತಿದೆ. ಬಿಜೆಪಿಯವರಾಗಲಿ, ಕುಮಾರಸ್ವಾಮಿ ಅವರಾಗಲಿ ಅವರ ಊರುಗಳಲ್ಲಿ ಇಂತಹ ಕೆಲಸ ಮಾಡಿದ್ದಾರಾ? ನಾವು ನಮ್ಮ ದೇಹ ಇರುವುದೇ ಜನರಿಗಾಗಿ. ನಾವು ಜನರಿಗಾಗಿ ಪ್ರಾಣ ಕೊಡುವುದಕ್ಕೂ ಸಿದ್ಧವಿದ್ದೇವೆ ಎಂದು ಅವರು ತಿಳಿಸಿದರು.

ಮೈತ್ರಿ ಅಭ್ಯರ್ಥಿ ಸೋಲಿನ ಭಯದಿಂದ ಐಟಿ ದಾಳಿ

ಆಪ್ತರ ಮನೆ ಮೇಲೆ ಐಟಿ ದಾಳಿ ನಡೆಯುತ್ತಿರುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಉದ್ದೇಶಪೂರ್ವಕವಾಗಿ ನಮ್ಮ ಬ್ಲಾಕ್ ಅಧ್ಯಕ್ಷರ ಮನೆಗಳ ಮೇಲೆ ಐಟಿ ದಾಳಿ ನಡೆಯುತ್ತಿವೆ. ನಮಗೆ ಕೆಟ್ಟ ಹೆಸರು ತರಬೇಕು, ನಮ್ಮ ಕಾರ್ಯಕರ್ತರು ಚುನಾವಣೆಯಲ್ಲಿ ಭಾಗವಹಿಸದಂತೆ ಮಾಡಲು ಈ ರೀತಿ ಮಾಡುತ್ತಿದ್ದಾರೆ.

ಬಿಜೆಪಿ ಹಾಗೂ ದಳದವರು ಯಾರೂ ಹಣ ಹಂಚುತ್ತಿಲ್ಲವೇ? ಅವರ ಮನೆಗಳ ಮೇಲೆ ಯಾಕೆ ದಾಳಿಯಾಗುತ್ತಿಲ್ಲ? ಅವರ ವಿಚಾರದಲ್ಲಿ ಐಟಿ ಅಧಿಕಾರಿಗಳು ಕಣ್ಣುಮುಚ್ಚಿ ಕೂತಿದ್ದಾರಾ? ಅವರು ಯಾರ ಮನೆ ಮೇಲೆ ದಾಳಿ ನಡೆಯಬೇಕು ಎಂದು ಪಟ್ಟಿ ಮಾಡಿದ್ದಾರೆ. ಬೇರೆ ಕಡೆಗಳಲ್ಲಿ ಗುತ್ತಿಗೆದಾರರ ಮನೆಯಲ್ಲಿ ಹಣ ಸಿಕ್ಕರೂ ಇದು ಡಿ.ಕೆ. ಶಿವಕುಮಾರ್ ಅವರ ಹಣ ಎಂದು ಹೇಳಲು ಒತ್ತಾಯಿಸುತ್ತಿದ್ದಾರೆ. ಇನ್ನು ನಮ್ಮ ಸುರೇಶ್ ಅವರ ಚಾಲಕನ ಮನೆ ಮೇಲೆ ದಾಳಿ ಮಾಡಿ ಆತನ ಹೆಂಡತಿ ಜುಟ್ಟನ್ನು ಎಳೆದಾಡಿದ್ದಾರೆ, ಮಕ್ಕಳ ಮೇಲೆ ಹಲ್ಲೆ ಮಾಡಿದ್ದಾರೆ. ಐಟಿ ಅಧಿಕಾರಿಗಳಿಗೆ ಎಲ್ಲೂ ಹಣ ಸಿಕ್ಕಿಲ್ಲ. ಕೇವಲ ಚುನಾವಣೆಯಲ್ಲಿ ಭಾಗವಹಿಸದಂತೆ ಮಾಡಲು ಈ ರೀತಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಇದನ್ನೂ ಓದಿ: Narsingh Yadav: ಕುಸ್ತಿ ಫೆಡರೇಷನ್‌ನ ಅಥ್ಲೀಟ್‌ ವಿಭಾಗಕ್ಕೆ ನರಸಿಂಗ್‌ ಯಾದವ್ ಅಧ್ಯಕ್ಷ

ಅವರ ಅಭ್ಯರ್ಥಿ ಸೋಲುತ್ತಾರೆ ಎಂಬ ಕಾರಣಕ್ಕೆ ಅಧಿಕಾರಿಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಆರೋಪಿಸಿದರು.

Continue Reading

ಕರ್ನಾಟಕ

Road Accident: ಕಾರು ಟಯರ್‌ ಬ್ಲಾಸ್ಟ್ ಆಗಿ ಬೈಕ್‌ಗೆ ಡಿಕ್ಕಿ; ಇಬ್ಬರು ಸವಾರರ ದುರ್ಮರಣ

Road Accident: ರಾಯಚೂರು ಜಿಲ್ಲೆಯ ‌ದೇವದುರ್ಗ ಪಟ್ಟಣದ ಹೊರವಲಯದಲ್ಲಿ ಘಟನೆ ನಡೆದಿದೆ. ಕಾರು ಟಯರ್ ಬ್ಲಾಸ್ಟ್ ಆಗಿ ಬೈಕ್‌ಗೆ ಡಿಕ್ಕಿಯಾಗಿದ್ದರಿಂದ ಇಬ್ಬರು ಸವಾರರು ಕೊನೆಯುಸಿರೆಳೆದಿದ್ದಾರೆ.

VISTARANEWS.COM


on

Road Accident
Koo

ರಾಯಚೂರು: ಕಾರು ಟಯರ್ ಬ್ಲಾಸ್ಟ್ ಆಗಿ ಬೈಕ್‌ಗೆ ಡಿಕ್ಕಿಯಾಗಿದ್ದರಿಂದ ಇಬ್ಬರು ಬೈಕ್ ಸವಾರರು ದುರ್ಮರಣ ಹೊಂದಿದ ಘಟನೆ (Road Accident) ಜಿಲ್ಲೆಯ ‌ದೇವದುರ್ಗ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ದೇವದುರ್ಗ ತಾಲೂಕಿನ ಜಾಲಹಳ್ಳಿ ನಿವಾಸಿಗಳಾದ ಗುತ್ತೆಪ್ಪ (45), ಜಗದೀಶ್ (50) ಮೃತರು. ದೇವದುರ್ಗ ‌ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯಪುರ ಜಿಲ್ಲೆಯಲ್ಲಿ ಸಿಡಿಲು ಬಡಿದು 10 ಕುರಿಗಳ ಸಾವು

ವಿಜಯಪುರ: ಸಿಡಿಲು ಬಡಿದು 10 ಕುರಿಗಳು ಮೃತಪಟ್ಟ ಘಟನೆ ಜಿಲ್ಲೆಯ ದೇವರ ಹಿಪ್ಪರಗಿಯ ಚಿಕ್ಕರೂಗಿ ಗ್ರಾಮದಲ್ಲಿ ನಡೆದಿದೆ. ಸುಬ್ಬರಾಯ ನಾಟೀಕಾರ ಎಂಬುವವರ 10 ಕುರಿಗಳು ಮೃತಪಟ್ಟಿವೆ. ಜಮೀನಿನಲ್ಲಿ ಕುರಿಗಳು ಮೇಯಲು ಹೋದಾಗ ಸಿಡಿಲು ಬಡಿದು ದುರ್ಘಟನೆ ಸಂಭವಿಸಿದೆ.

ಇದನ್ನೂ ಓದಿ | Noida Scrap Mafia: ಥೈಲ್ಯಾಂಡ್‌ನಲ್ಲಿ ಪೊಲೀಸ್‌ ಬಲೆಗೆ ಬಿದ್ದ ಗ್ಯಾಂಗ್‌ಸ್ಟರ್‌ ರವಿ ಕಾನಾ

ಅಂಕೋಲಾದಲ್ಲಿ ಭೀಕರ ಅಪಘಾತ; ಬೈಕ್‌ ಸವಾರ ಸುಟ್ಟು ಕರಕಲು!

Road accident in Ankola The biker was burnt to death

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅಂಕೋಲಾದ ರಾಷ್ಟ್ರೀಯ ಹೆದ್ದಾರಿ 66ರ ಹಟ್ಟಿಕೇರಿ ಗ್ರಾಮದ ಬಳಿ ತಡರಾತ್ರಿ ಬೈಕ್ ಹಾಗೂ ಟ್ರ್ಯಾಕ್ಸ್ ನಡುವೆ ಮುಖಾಮುಖಿ ಡಿಕ್ಕಿ (Road Accident) ಸಂಭವಿಸಿದ್ದು, ಪೆಟ್ರೋಲ್ ಟ್ಯಾಂಕ್‌ಗೆ ಬೆಂಕಿ ತಗುಲಿ ಬೈಕ್ ಸವಾರ ಸ್ಥಳದಲ್ಲೇ ಸುಟ್ಟು ಕರಕಲಾಗಿದ್ದಾರೆ. ಬೈಕ್‌ನಲ್ಲಿದ್ದ ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿವೆ.

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಸುಮಂತ ಹರಿಕಂತ್ರ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಬೈಕ್‌ನಲ್ಲಿದ್ದ ಸುಮಿತ್ ಹರಿಕಂತ್ರ, ಚಾಣಕ್ಯ ಹರಿಕಂತ್ರ ಎಂಬುವವರಿಗೆ ಗಂಭೀರ ಗಾಯಗಳಾಗಿವೆ.

ಬೈಕ್ ಸವಾರರು ಮಂಗಳವಾರ (ಏಪ್ರಿಲ್‌ 24) ತಡರಾತ್ರಿ ಅಂಕೋಲಾದಿಂದ ಕಾರವಾರದತ್ತ ತೆರಳುತ್ತಿದ್ದರು. ಈ ವೇಳೆ ಕಾರವಾರ ಕಡೆಯಿಂದ ಬಂದ ಟ್ರ್ಯಾಕ್ಸ್‌ವೊಂದು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಈ ಅಪಘಾತದ ವೇಳೆ ಬೈಕ್‌ನ ಪೆಟ್ರೋಲ್‌ ಟ್ಯಾಂಕ್‌ಗೆ ಬೆಂಕಿ ತಗುಲಿದ್ದು, ಬೈಕ್‌ಗೆ ಬೆಂಕಿ ಹೊತ್ತಿಕೊಂಡಿದೆ. ಆದರೆ, ಬೈಕ್‌ ಸವಾರನ ಮೇಲೆ ಬೈಕ್‌ ಬಿದ್ದಿದ್ದರಿಂದ ಮೇಲೆ ಏಳಲು ಆಗಿಲ್ಲ. ಹೀಗೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದ್ದರಿಂದ ಅಲ್ಲೇ ಸಿಲುಕಿದ್ದ ಬೈಕ್‌ ಸವಾರ ಸುಮಂತ ಹರಿಕಂತ್ರ ಅವರ ಮೈಗೂ ಬೆಂಕಿ ತಗುಲಿದೆ. ಹೀಗಾಗಿ ಅವರು ಸ್ಥಳದಲ್ಲೇ ಸುಟ್ಟು ಕರಕಲಾಗಿದ್ದಾರೆ.

ಗಾಯಾಳುಗಳು ಆಸ್ಪತ್ರೆಗೆ ದಾಖಲು

ಗಾಯಾಳುಗಳಾದ ಸುಮಿತ್‌ ಹಾಗೂ ಚಾಣಕ್ಯ ಹರಿಕಂತ್ರ ಅವರನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಂಕೋಲಾ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಗುಜರಿ ಅಂಗಡಿ ಮಾಲೀಕನಿಗೆ ಬೆದರಿಸಿ ಹಣ ಪೀಕಿದ ಪೊಲೀಸ್‌ 

ಬೆಂಗಳೂರು: ಮಾರತ್ತಹಳ್ಳಿ ಪೊಲೀಸ್ ಠಾಣೆ ಸಿಬ್ಬಂದಿ ಸುಳ್ಳು ಆರೋಪಗಳನ್ನು ಮಾಡಿ ಗುಜರಿ ಅಂಗಡಿ ಮಾಲೀಕನಿಂದ ಹಣ ವಸೂಲಿ (Fraud Case) ಮಾಡಿರುವ ಆರೋಪವೊಂದು ಕೇಳಿ ಬಂದಿದೆ. ಗುಜರಿ ಅಂಗಡಿ ಮಾಲೀಕ ಅಖ್ತಿರ್ ಅಲಿ ಮಂಡಲ್‌ ಎಂಬುವವರು ಈ ಸಂಬಂಧ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾರೆ.

ಅಖ್ತರ್ ಅವರು ವೈಟ್ ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ನಲ್ಲೂರಳ್ಳಿಯಲ್ಲಿ ಗುಜರಿ ಅಂಗಡಿ ಇಟ್ಟುಕೊಂಡಿದ್ದರು. ಕಳೆದ ಏಪ್ರಿಲ್ 17ರ ಮಧ್ಯಾಹ್ನ 12ಗಂಟೆಗೆ ಗುಜುರಿ ಬಳಿ ಪೊಲೀಸ್ ಸಿಬ್ಬಂದಿ, ಇನ್ಫಾರ್ಮರ್ ಎಸ್.ನಿವಾಸ್ ಎಂಬಾತನ ಜತೆಗೆ ಆಗಮಿಸಿದ್ದರು. ಹೀಗೆ ಬಂದವರೇ ನಾವು ಪೊಲೀಸರು ನೀವು ದಂಧೆ ನಡೆಸುತ್ತಿದ್ದೀರಾ? ಗಾಂಜಾ ಮಾರಾಟ ಮಾಡುತ್ತೀದ್ದೀರಾ ಎಂದು ಬೆದರಿಕೆ ಹಾಕಿದ್ದಾರೆ.

ಕೆಲಸಗಾರರ ಮೇಲೆ ಹಲ್ಲೆ ಮಾಡಿ ಅಖ್ತರ್ ಬಳಿ ಸುಮಾರು 2 ಲಕ್ಷ ರೂ. ಹಣವನ್ನು ಇನ್ಫಾರ್ಮರ್ ಖಾತೆಗೆ ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಮೊದಲು 20 ಸಾವಿರ ನಗದು ಪಡೆದುಕೊಂಡು ಬಳಿಕ ಬ್ಯಾಂಕ್ ಖಾತೆಯಿಂದ 80 ಸಾವಿರ ರೂ. ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಅಷ್ಟೇ ಅಲ್ಲ ಹೋಗುವಾಗ ಬೆದರಿಕೆ ಹಾಕಿ ಎಟಿಎಂ ಕಾರ್ಡ್ ಹಾಗೂ ಪಿನ್ ನಂಬರ್‌ ಪಡೆದುಕೊಂಡಿದ್ದಾರೆ. ಬಳಿಕ ಎಟಿಎಂನಿಂದ 50 ಸಾವಿರ ಹಣ ಡ್ರಾ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: Neha Murder Case: ಫಯಾಜ್‌ ಜೈಲಲ್ಲಿ ಇರೋವಾಗ ಮೊಬೈಲ್ ಫೋಟೊ ಲೀಕ್ ಆಗಲು ಹೇಗೆ ಸಾಧ್ಯ?

ಮರುದಿನ ವಾಪಸ್‌ ಗುಜುರಿ ಅಂಗಡಿಗೆ ಬಂದಿದ್ದ ಆರೋಪಿಗಳು, ಎಟಿಎಂ ಕಾರ್ಡ್ ಕೊಟ್ಟು ಮತ್ತೆ 50 ಸಾವಿರ ಹಣ ಪಡೆದುಕೊಂಡು ಹೋಗಿದ್ದಾರೆ. ಮತ್ತೊಮ್ಮೆ 50 ಸಾವಿರ ರೂ. ಕೊಡಬೇಕು ಇಲ್ಲದಿದ್ದರೆ ಬೈಕ್ ತೆಗೆದುಕೊಂಡು ಹೋಗುವುದಾಗಿ ಬೆದರಿಕೆ ಹಾಕಿದ್ದಾರೆ. ಇವರ ಕಾಟ ತಾಳಲಾರದೆ ಅಖ್ತಿರ್‌ ವೈಟ್ ಫೀಲ್ಡ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ನಿವಾಸ್ ಎಂಬಾತನನ್ನು ಬಂಧಿಸಿದ್ದಾರೆ. ತಲೆಮರೆಸಿಕೊಂಡಿರುವ ಮೂವರು ಆರೋಪಿಗಳಿಗೆ ಹುಡುಕಾಟ ನಡೆಸಿದ್ದಾಗಿ ವೈಟ್ ಫೀಲ್ಡ್ ಡಿಸಿಪಿ ಶಿವಕುಮಾರ್ ಗುಣಾರೆ ಮಾಹಿತಿ ನೀಡಿದ್ದಾರೆ.

Continue Reading

ಪ್ರಮುಖ ಸುದ್ದಿ

Lok Sabha Election 2024: ಲೋಕಸಭಾ ಚುನಾವಣೆ 2ನೇ ಹಂತದ ಬಹಿರಂಗ ಪ್ರಚಾರ ಅಂತ್ಯ, ನಾಳೆ ಮನೆ ಮನೆ ಪ್ರಚಾರ

Lok Sabha Election 2024: ಏಪ್ರಿಲ್ 26 ರಂದು 13 ರಾಜ್ಯಗಳ 89 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಈ ನಿಟ್ಟಿನಲ್ಲಿ ಏ.24ರಂದು ಸಂಜೆ ರಾಜಕೀಯ ಪಕ್ಷಗಳ ಬಹಿರಂಗ ಪ್ರಚಾರ ಅಂತ್ಯಗೊಂಡಿದೆ.

VISTARANEWS.COM


on

Lok sabha Election
Koo

ಬೆಂಗಳೂರು: ಲೋಕಸಭಾ ಚುನಾವಣೆ 2ನೇ ಹಂತದ ಬಹಿರಂಗ ಪ್ರಚಾರ ಬುಧವಾರ ಸಂಜೆ ಅಂತ್ಯಗೊಂಡಿದ್ದು, ನಾಳೆ ಮನೆ ಮನೆ ಪ್ರಚಾರ ನಡೆಯಲಿದೆ. ಬಹಿರಂಗ ಪ್ರಚಾರಕ್ಕೆ ಕೊನೆಯ ದಿನವಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‌, ಬಿಜೆಪಿ ಸೇರಿ ವಿವಿಧ ಪಕ್ಷಗಳಿಂದ ಮತದಾರರನ್ನು ಸೆಳೆಯಲು ಅಂತಿಮ ಹಂತದ ಕಸರತ್ತು ನಡೆಯಿತು.

ಏಪ್ರಿಲ್ 26 ರಂದು 13 ರಾಜ್ಯಗಳ 89 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಅಸ್ಸಾಂ 5, ಬಿಹಾರದ 4, ಛತ್ತೀಸ್‌ಗಢದ 3, ಕರ್ನಾಟಕ 14, ಕೇರಳ 20, ಮಧ್ಯಪ್ರದೇಶ 7, ಮಹಾರಾಷ್ಟ್ರ 8, ಮಣಿಪುರದ 1, ರಾಜಸ್ಥಾನದ 13 ತ್ರಿಪುರ 1, ಉತ್ತರ ಪ್ರದೇಶದ 8, ಪಶ್ಚಿಮ ಬಂಗಾಳದ 3, ಜಮ್ಮುಕಾಶ್ಮೀರ 1 ಕ್ಷೇತ್ರದಲ್ಲಿ ಮತದಾನ ನಡೆಯಲಿದ್ದು, ಕೇರಳದಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.

ಇದನ್ನೂ ಓದಿ | Lok Sabha Election 2024: ಪ್ರಚಾರಕ್ಕೆ ದರ್ಶನ್‌ ಕರೆಸುವ ಡಿ.ಕೆ. ಸುರೇಶ್‌ ಪ್ಲ್ಯಾನ್‌ ಫ್ಲಾಪ್‌ ಮಾಡಿದ ಮುನಿರತ್ನ!

ಏಪ್ರಿಲ್‌ 26ಕ್ಕೆ ಮೊದಲ ಹಂತದ ಮತದಾನ; ಸಾರ್ವತ್ರಿಕ ರಜೆ ಘೋಷಿಸಿದ ರಾಜ್ಯ ಸರ್ಕಾರ

Lok Sabha Election 2024 General holiday for first phase of polling on April 26

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಏಪ್ರಿಲ್ 26ರಂದು ಮೊದಲ ಹಂತದ ಮತದಾನ (Voting in Karnataka) ನಡೆಯಲಿದೆ. ಅಂದು ಎಲ್ಲ ಕಾರ್ಮಿಕರು, ಅರ್ಹ ಮತದಾರರು (Labour Voters) ಮತದಾನ ಮಾಡುವ ಸಲುವಾಗಿ ಸಾರ್ವತ್ರಿಕ ರಜೆ (General holiday for voting) ಘೋಷಿಸಿ ರಾಜ್ಯ ಸರ್ಕಾರ ಆದೇಶ ಮಾಡಿದೆ.

ಈ ಬಗ್ಗೆ ಕಾರ್ಮಿಕ ಆಯುಕ್ತರು ಆದೇಶವನ್ನು ಹೊರಡಿಸಿದ್ದು, ಭಾರತ ಚುನಾವಣಾ ಆಯೋಗವು 2024ರ ಲೋಕಸಭಾ ಚುನಾವಣೆ ದಿನಾಂಕವನ್ನು 2024ರ ಮಾರ್ಚ್‌ 16ರಂದು ಘೋಷಿಸಿದ್ದು, ಅದರಂತೆ ಕರ್ನಾಟಕ ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಿಗದಿಯಾಗಿರುತ್ತದೆ. ಏಪ್ರಿಲ್‌ 26ರ ಶುಕ್ರವಾರ ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಹಾಗೂ ಮೇ 07ರ ಮಂಗಳವಾರ ಎರಡನೇ ಹಂತದ ಲೋಕಸಭಾ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಕಾರ್ಮಿಕರು ಸಹ ಮತದಾನ ಮಾಡಬೇಕಿದೆ. ಹಾಗಾಗಿ ಅಂದು ಕಾರ್ಮಿಕರಿಗೆ ಸಾರ್ವತ್ರಿಕ ರಜೆಯನ್ನು ಘೋಷಣೆ ಮಾಡಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ | Lok Sabha Election 2024: ಏ. 26ಕ್ಕೆ ವೋಟ್‌ ಹಾಕಿ ಈ ಹೋಟೆಲ್‌ಗಳಿಗೆ ಬನ್ನಿ; ಏನೇ ತಿಂದ್ರೂ 10 ಪರ್ಸೆಂಟ್‌ ಡಿಸ್ಕೌಂಟ್‌!

ಆದೇಶದಲ್ಲೇನಿದೆ?

ಸದರಿ ದಿನಾಂಕದಂದು ಮತದಾನ ನಡೆಯಲಿರುವ ಕ್ಷೇತ್ರದ ವ್ಯಾಪ್ತಿಯಲ್ಲಿ ನೋಂದಾಯಿತರಾದ ಅರ್ಹ ಮತದಾರರಾಗಿರುವ ಎಲ್ಲ ಕಾರ್ಮಿಕರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ಸಂಬಂಧಪಟ್ಟ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಮತ್ತು ಇತರೆ ಸಂಸ್ಥೆಗಳು 1963ರ ಕರ್ನಾಟಕ ಔದ್ಯೋಗಿಕ ಸಂಸ್ಥೆಗಳ (ರಾಷ್ಟ್ರೀಯ ಹಾಗೂ ಹಬ್ಬದ ರಜಾ ದಿನಗಳು) ಕಾಯ್ದೆಯ ಕಲಂ 3-ಎ ಪ್ರಕಾರ ಮತ ಚಲಾಯಿಸಲು ಅವಕಾಶ ಮಾಡಿ ಕೊಡಬೇಕಾಗುತ್ತದೆ. ಆದ್ದರಿಂದ, ಮತದಾನ ನಡೆಯಲಿರುವ ಕ್ಷೇತ್ರದಲ್ಲಿ ಅರ್ಹರಿರುವ ಎಲ್ಲ ಕಾರ್ಮಿಕ ಮತದಾರರಿಗೆ ಏಪ್ರಿಲ್‌ 26ರಂದು ವೇತನ ಸಹಿತ ರಜೆ ನೀಡಿ, ಎಲ್ಲ ಅರ್ಹ ಕಾರ್ಮಿಕರು ಸಂವಿಧಾನಾತ್ಮಕ/ಶಾಸನಾತ್ಮಕ ಹಕ್ಕಾದ ಮತವನ್ನು ಚಲಾಯಿಸಲು ಅನುವು ಮಾಡಿಕೊಡಲು ಸೂಚಿಸಲಾಗಿದೆ.

Continue Reading
Advertisement
Sunetra Pawar
ದೇಶ14 mins ago

Sunetra Pawar: 25 ಸಾವಿರ ಕೋಟಿ ರೂ. ಹಗರಣ; ಅಜಿತ್‌ ಪವಾರ್‌ ಪತ್ನಿ ಸುನೇತ್ರಾಗೆ ಕ್ಲೀನ್‌ಚಿಟ್!

2nd PUC Exam
ಕರ್ನಾಟಕ14 mins ago

2nd PUC Exam: ಏ.29ರಿಂದ ದ್ವಿತೀಯ ಪಿಯುಸಿ ಪರೀಕ್ಷೆ-2; ಪ್ರವೇಶ ಪತ್ರ ಬಿಡುಗಡೆ

T20 World Cup 2024
ಕ್ರೀಡೆ17 mins ago

T20 World Cup 2024: ಟಿ20 ವಿಶ್ವಕಪ್​ಗೆ ಉಸೇನ್‌ ಬೋಲ್ಟ್ ಬ್ರ್ಯಾಂಡ್‌ ಅಂಬಾಸಿಡರ್

DCM D K Shivakumar visit adichunchanagiri mutt
ಕರ್ನಾಟಕ24 mins ago

Lok Sabha Election 2024: ನನ್ನ ಜೀವ, ನನ್ನ ದೇಹ ಇರುವುದೇ ನಮ್ಮ ಜನರಿಗಾಗಿ: ಡಿ.ಕೆ. ಶಿವಕುಮಾರ್

Road Accident
ಕರ್ನಾಟಕ50 mins ago

Road Accident: ಕಾರು ಟಯರ್‌ ಬ್ಲಾಸ್ಟ್ ಆಗಿ ಬೈಕ್‌ಗೆ ಡಿಕ್ಕಿ; ಇಬ್ಬರು ಸವಾರರ ದುರ್ಮರಣ

Madrid Open 2024
ಕ್ರೀಡೆ1 hour ago

Madrid Open 2024: ಫಿಟ್​ನೆಸ್​ ಸಲುವಾಗಿ ಮ್ಯಾಡ್ರಿಡ್ ಓಪನ್‌ನಿಂದ ಹಿಂದೆ ಸರಿದ ಹಾಲೆಪ್‌

Kotak Bank
ದೇಶ1 hour ago

Kotak Bank: ಕೊಟಕ್‌ ಬ್ಯಾಂಕ್‌ ಕ್ರೆಡಿಟ್‌ ಕಾರ್ಡ್‌ ನಿಷೇಧ; ಹಳೆಯ ಗ್ರಾಹಕರಿಗೆ ಏನು ತೊಂದರೆ? ಇಲ್ಲಿದೆ ಮಾಹಿತಿ

Lok sabha Election
ಪ್ರಮುಖ ಸುದ್ದಿ1 hour ago

Lok Sabha Election 2024: ಲೋಕಸಭಾ ಚುನಾವಣೆ 2ನೇ ಹಂತದ ಬಹಿರಂಗ ಪ್ರಚಾರ ಅಂತ್ಯ, ನಾಳೆ ಮನೆ ಮನೆ ಪ್ರಚಾರ

Narsingh Yadav
ಕ್ರೀಡೆ2 hours ago

Narsingh Yadav: ಕುಸ್ತಿ ಫೆಡರೇಷನ್‌ನ ಅಥ್ಲೀಟ್‌ ವಿಭಾಗಕ್ಕೆ ನರಸಿಂಗ್‌ ಯಾದವ್ ಅಧ್ಯಕ್ಷ

Narendra Modi
ದೇಶ2 hours ago

Narendra Modi: ಕರ್ನಾಟಕದಲ್ಲಿ ಮುಸ್ಲಿಮರಿಗೆ ಒಬಿಸಿ ಮೀಸಲಾತಿ; ಕಾಂಗ್ರೆಸ್‌ ಒಬಿಸಿ ವಿರೋಧಿ ಎಂದ ಮೋದಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ17 hours ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು2 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ2 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು2 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು2 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ3 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ4 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ4 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20244 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

ಟ್ರೆಂಡಿಂಗ್‌