ಸೊರಬ: ಐತಿಹಾಸಿಕ ಹಾಗೂ ಪುರಾಣ ಪ್ರಸಿದ್ಧ ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಸ್ಥಾನದ (Sri Renukamba Temple) ಹುಂಡಿ ಎಣಿಕೆ ಕಾರ್ಯ ದೇವಸ್ಥಾನದ ಆಡಳಿತ ಮಂಡಳಿಯ ಕಚೇರಿಯಲ್ಲಿ ನಡೆಯಿತು.
ಜಾತ್ರೆಯಲ್ಲಿ ಭಕ್ತರ ಮೂಲಕ ಬಂದಂತಹ ಕಾಣಿಕೆ ಹುಂಡಿ ಹಣ ಎಣಿಕೆ ಕಾರ್ಯವನ್ನು ಚಂದ್ರಗುತ್ತಿ ನಾಡ ಕಚೇರಿ ಉಪ ತಹಸೀಲ್ದಾರ್ ಹಾಗೂ ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ವಿ.ಎಲ್. ಶಿವಪ್ರಸಾದ್ ಸಮ್ಮುಖದಲ್ಲಿ ನಡೆಸಲಾಯಿತು.
ದೇವಸ್ಥಾನದ ಹುಂಡಿಯಲ್ಲಿ 18,56,210 ರೂ. ಕಾಣಿಕೆ ಸಂಗ್ರಹವಾಗಿದ್ದು, ಕಳೆದ ಫೆಬ್ರವರಿ ತಿಂಗಳಲ್ಲಿ ಹುಂಡಿ ಹಣ ಎಣಿಸಿದಾಗ 22,67,710 ರೂ. ಕಾಣಿಕೆ ಸಂಗ್ರಹವಾಗಿತ್ತು. ಕೇವಲ ಎರಡು ತಿಂಗಳಿನಲ್ಲಿ ದೇವಸ್ಥಾನದಲ್ಲಿ ಗರಿಷ್ಠ ಮೊತ್ತದ ಕಾಣಿಕೆ ಹಣ 41,23,920 ರೂ. ಸಂಗ್ರಹವಾಗಿದೆ. ಎಣಿಕೆ ಕಾರ್ಯ ನಡೆಯುವ ಕೊಠಡಿ ಸುತ್ತ ಸಿಸಿ ಕ್ಯಾಮೆರಾ ಅಳವಡಿಸಲಾಗಿತ್ತು.
ಇದನ್ನೂ ಓದಿ: Anil Shetty: ಬಿಜೆಪಿಯ ಅನಿಲ್ ಶೆಟ್ಟಿಗೆ ಕುಕ್ಕರ್ ʻಪ್ರೆಶರ್ʼ; ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು
ಹುಂಡಿ ಎಣಿಕೆ ಕಾರ್ಯದಲ್ಲಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಗಳು, ಮುಜರಾಯಿ ಇಲಾಖೆಯ ವಿಷಯ ನಿರ್ವಾಹಕರು, ತಾಲೂಕು ಕಂದಾಯ ಇಲಾಖೆಯ ಗ್ರಾಮ ಲೆಕ್ಕಿಗರು ಮತ್ತು ದೇವಸ್ಥಾನದ ಸಿಬ್ಬಂದಿ ಪಾಲ್ಗೊಂಡಿದ್ದರು.
ಶ್ರೀ ರೇಣುಕಾಂಬ ದೇವಸ್ಥಾನದಿಂದ ಸರ್ಕಾರಕ್ಕೆ ಕೋಟಿಗಟ್ಟಲೆ ಆದಾಯ ಸಂಗ್ರಹವಾಗುತ್ತಿದೆ. ಆದರೆ, ಕ್ಷೇತ್ರಕ್ಕೆ ಆಗಮಿಸುವ ಭಕ್ತರಿಗೆ ಬೇಕಾಗುವ ಮೂಲ ಸೌಕರ್ಯಗಳು ಒದಗಿಸುವಲ್ಲಿ ಸರ್ಕಾರವು ಏಕೆ ಮುಂದಾಗುತ್ತಿಲ್ಲ ಎಂಬುದು ರೇಣುಕಾಂಬ ದೇವಿಯ ಭಕ್ತರ ಪ್ರಶ್ನೆಯಾಗಿದೆ.
ಇದನ್ನೂ ಓದಿ: Small savings schemes : ಸುಕನ್ಯಾ ಸಮೃದ್ಧಿ ಸೇರಿ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರ 0.70% ತನಕ ಏರಿಕೆ