ಸೊರಬ: ಸರ್ಕಾರ ಮಾಡದಿರುವ ಕೆಲಸವನ್ನು ವಿದ್ಯೆ, ದಾಸೋಹದ ಮೂಲಕ ಸಮಾಜ ಪರಿವರ್ತನೆಗೆ ಶ್ರಮಿಸುತ್ತಿರುವ ಕಾರ್ಯಗಳನ್ನು ಮಠಗಳು ಮಾಡುತ್ತಿವೆ ಎಂದು ಆನಂದಪುರ ಮಠದ ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಹೇಳಿದರು.
ತಾಲೂಕಿನ ಜಡೆ ಸಂಸ್ಥಾನ ಮಠದಲ್ಲಿ ಸಿದ್ಧವೃಷಭೇಂದ್ರ ಜಾತ್ರಾ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಮಹಿಳಾ ಗೋಷ್ಠಿಯಲ್ಲಿ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.
ಇದನ್ನೂ ಓದಿ: Modi In Karnataka: ಮೋದಿಯೆದುರು ಸಿಎಂ ಬೊಮ್ಮಾಯಿ ಹೇಳಿದ ಯುವ ಉದ್ಯಮಿ ವಿಜಯ್ ನಿರಾಣಿ ಯಾರು? ಅವರ ಸಾಧನೆ ಏನು?
ಜಡೆ ಮಠದ ಸಿದ್ಧವೃಷಭೇಂದ್ರ ಸ್ವಾಮೀಜಿಗಳು 400 ವರ್ಷಗಳ ಹಿಂದೆಯೇ ಭಕ್ತ ಸಮೂಹದ ಮೇಲೆ ಪ್ರಭಾವ ಬೀರಿದ್ದರು. ಬಳ್ಳಿಗಾವಿ, ಉಡುತಡಿ ಸ್ಥಳಗಳು ಮಲೆನಾಡಿನ ಶಕ್ತಿ ಕೇಂದ್ರಗಳಾಗಿವೆ. ಅವುಗಳ ಸಮಗ್ರ ಅಭಿವೃದ್ಧಿ ಕಾರ್ಯ ನಡೆದರೆ ಮಲೆನಾಡಿನ ಧಾರ್ಮಿಕ, ಸಾಮಾಜಿಕ ಇತಿಹಾಸಕ್ಕೆ ಮುನ್ನುಡಿಯಾಗಲಿದೆ. ಕುಟುಂಬದ ಯಶಸ್ಸಿನಲ್ಲಿ ಸಮರ್ಥವಾಗಿ ತಮ್ಮ ಪಾತ್ರವನ್ನು ನಿಭಾಯಿಸುವ ಮಹಿಳೆಯರನ್ನು ಗೌರವದಿಂದ ನೋಡಬೇಕು ಎಂದು ತಿಳಿಸಿದರು.
ಇದನ್ನೂ ಓದಿ: Delhi Mayor Polls: ದಿಲ್ಲಿ ಮಹಾನಗರ ಪಾಲಿಕೆ ಸಭೆ ಮುಂದೂಡಿಕೆ, ಮತ್ತೆ ಆಯ್ಕೆಯಾಗಲಿಲ್ಲ ಮೇಯರ್! ಆಪ್ ಕೋರ್ಟ್ ಮೊರೆ?
ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಾತನಾಡಿ, ಮಠಗಳು ಧರ್ಮ ಆಚರಣೆಗೆ ಸೀಮಿತವಾಗದೆ ಚಿಂತನ, ಮಂಥನ, ಭಾವೈಕ್ಯತೆಯ ಬಗ್ಗೆ ಚರ್ಚೆ ನಡೆಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು.
12ನೇ ಶತಮಾನದಲ್ಲಿ ಬಸವಣ್ಣ ಸಾಮಾಜಿಕ ಕ್ರಾಂತಿ ಜತೆಗೆ ಸಾಂಸ್ಕೃತಿಕವಾಗಿ ತಮ್ಮದೇ ಪ್ರಭಾವವನ್ನು ಸಮಾಜದಲ್ಲಿ ಬೀರಿದರು. ಬಸವ ಧರ್ಮವೇ ನಿಜವಾದ ಮಾನವ ಧರ್ಮ ಎಂದು ವಿಶ್ವಕ್ಕೆ ಪರಿಚಯಿಸಿದರು. ಲಿಂಗ ಸಮಾನತೆ ಬಗ್ಗೆ ಹೆಚ್ಚು ಬೆಳಕು ಚೆಲ್ಲಿದ ಶರಣರು ಲಿಂಗ ಸಮಾನತೆಗಾಗಿ ಹೋರಾಟ ನಡೆಸಿದರು ಎಂದು ತಿಳಿಸಿದರು.
ಇದನ್ನೂ ಓದಿ: PM Modi in Karnataka : ರಾಜ್ಯದ ವರ್ಗಾವಣೆ ದಂಧೆ ಬಗ್ಗೆ ಮಾತಾಡಲ್ಲ; ಇದು ಮೋದಿ ಗ್ಯಾರಂಟಿ ಎಂದು ಗೇಲಿ ಮಾಡಿದ ಕಾಂಗ್ರೆಸ್
ಜಡೆ ಸಂಸ್ಥಾನ ಮಠದ ಡಾ.ಮಹಾಂತ ಸ್ವಾಮೀಜಿ, ಶಿವಮೊಗ್ಗದ ಬಸವ ಕೇಂದ್ರದ ಬಸವ ಮರುಳಸಿದ್ಧ ಸ್ವಾಮೀಜಿ, ಜಡೆ ಹಿರೇಮಠದ ಘನಬಸವ ಅಮರೇಶ್ವರ ಸ್ವಾಮೀಜಿ, ದುಗ್ಲಿ ಮಠದ ರೇವಣಸಿದ್ಧ ಶಿವಾಚಾರ್ಯ ಸ್ವಾಮೀಜಿ, ಚಲನಚಿತ್ರ ನಿರ್ದೇಶಕ ಲಿಂಗದೇವರು, ಶಿಮುಲ್ ಅಧ್ಯಕ್ಷ ಶ್ರೀಪಾದ ಹೆಗಡೆ, ಮಡಿವಾಳ ಮಾಚಿದೇವ ನಿಗಮದ ಅಧ್ಯಕ್ಷ ರಾಜು ಎಂ.ತಲ್ಲೂರು, ದಂತ ವೈದ್ಯ ಡಾ.ಎಚ್.ಇ.ಜ್ಞಾನೇಶ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಿರ್ದೇಶಕ ಬಾಬು ನಾಯ್ಕ, ಶಿರಸಿ ಎಪಿಎಂಸಿ ಅಧ್ಯಕ್ಷ ಪ್ರಶಾಂತ್ ಸಂಪಳ್ಳಿ, ಅಶೋಕ್ ನಾಯ್ಕ್, ವಿಜೇಂದ್ರಗೌಡ ತಲಗುಂದ, ಲೋಲಾಕ್ಷಮ್ಮ ಇದ್ದರು.