ಬೆಂಗಳೂರು: ವರಮಹಾಲಕ್ಷ್ಮಿ ವ್ರತವನ್ನು (Vara Mahalakshmi) ಈ ಬಾರಿ ಮುಜರಾಯಿ ಇಲಾಖೆಯ ವತಿಯಿಂದ ವಿಶೇಷವಾಗಿ ಆಚರಿಸಲು ನಿರ್ಧರಿಸಲಾಗಿದೆ. ಹಬ್ಬದಂದು ಮುಜರಾಯಿ ವ್ಯಾಪ್ತಿಯ ದೇವಸ್ಥಾನಗಳಲ್ಲಿ ವಿಶೇಷ ಪೂಜೆಯನ್ನು ನೆರವೇರಿಸಿ, ದೇವಾಲಯಗಳಿಗೆ ಆಗಮಿಸುವಂತಹ ಮಹಿಳೆಯರಿಗೆ ಕಸ್ತೂರಿ ಅರಿಶಿಣ-ಕುಂಕುಮ ಮತ್ತು ಹಸಿರು ಬಳೆಗಳನ್ನು ಗೌರವ ಸೂಚಕವಾಗಿ ನೀಡಬೇಕು ಎಂದು ಮುಜರಾಯಿ ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಸೂಚಿಸಿದ್ದಾರೆ.
ಇತ್ತೀಚೆಗೆ ನಡೆದ ರಾಜ್ಯ ಧಾರ್ಮಿಕ ಪರಿಷತ್ತಿನ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಲಾಗಿತ್ತು. ಸಚಿವರ ನಿರ್ದೇಶನದ ಮೇರೆಗೆ ಸುತ್ತೋಲೆಯನ್ನು ಹೊರಡಿಸಲಾಗಿದೆ. ಪ್ರತಿವರ್ಷ ದೀಪಾವಳಿಯ ಸಂಧರ್ಭದಲ್ಲಿ ದೇವಸ್ಥಾನಗಳಲ್ಲಿ ಗೋಪೂಜೆ, ಯುಗಾದಿ ದಿನವನ್ನು ಧಾರ್ಮಿಕ ದಿನವಾಗಿ ಆಚರಣೆ ಮಾಡುವ ಸಂಪ್ರದಾಯವನ್ನು ಜಾರಿಗೆ ತರಲಾಗಿತ್ತು. ಈಗ ವರಮಹಾಲಕ್ಷ್ಮಿ ವೃತವನ್ನು ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡಲಾಗಿರುವ 6 ಹಸಿರು ಬಳೆಗಳು ಹಾಗೂ ಕಸ್ತೂರಿ ಅರಿಶಿಣ-ಕುಂಕುಮವನ್ನು ವಿತರಿಸಬೇಕು ಎಂದು ದೇವಾಲಯದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಇದನ್ನೂ ಓದಿ | ಮುಜರಾಯಿ ದೇಗುಲದ ಅರ್ಚಕರಿಗೂ 65 ವರ್ಷಕ್ಕೆ ನಿವೃತ್ತಿ?