Vivekananda Jayanti 2023 | ಹೊಸ ಚರಿತ್ರೆ ಬರೆದ ಚಾರಿತ್ರ್ಯವಂತ ಸ್ವಾಮಿ ವಿವೇಕಾನಂದ - Vistara News

ಧಾರ್ಮಿಕ

Vivekananda Jayanti 2023 | ಹೊಸ ಚರಿತ್ರೆ ಬರೆದ ಚಾರಿತ್ರ್ಯವಂತ ಸ್ವಾಮಿ ವಿವೇಕಾನಂದ

ಶಿಕ್ಷಣವೆಂದರೆ ವ್ಯಕ್ತಿತ್ವ ನಿರ್ಮಾಣ, ವ್ಯಕ್ತಿತ್ವ ನಿರ್ಮಾಣವೆಂದರೆ ಚಾರಿತ್ರ್ಯ ನಿರ್ಮಾಣ ಮತ್ತು ಚಾರಿತ್ರ್ಯ ನಿರ್ಮಾಣದ ಮೂಲಕ ಮಾತ್ರವೇ ರಾಷ್ಟ್ರ ನಿರ್ಮಾಣವನ್ನು ಸಾಧಿಸಬಹುದು ಎಂದಿದ್ದ ಸ್ವಾಮಿ ವಿವೇಕಾನಂದರ ಜನ್ಮದಿನ (Vivekananda Jayanti 2023) ಇಂದು. ಶುದ್ಧ ಚಾರಿತ್ರ್ಯದ ಮೂರ್ತರೂಪವೇ ಆಗಿದ್ದ ಈ ಮಹಾ ಸನ್ಯಾಸಿಯ ಕುರಿತು ಸ್ವಾಮಿ ವೀರೇಶಾನಂದ ಸರಸ್ವತೀ ಅವರು ಬರೆದ ವಿಶೇಷ ಲೇಖನ ಇಲ್ಲಿದೆ.

VISTARANEWS.COM


on

Vivekananda Jayanti 2023
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
Vivekananda Jayanti 2023

ಸ್ವಾಮಿ ವೀರೇಶಾನಂದ ಸರಸ್ವತೀ
ಪ್ರತಿಯೊಂದು ಸಮಾಜ ಹಾಗೂ ಪ್ರತಿಯೊಂದು ರಾಷ್ಟ್ರಕ್ಕೂ ತನ್ನದೇ ಆದ ಆದರ್ಶವಿರುವುದು ಸಹಜ. ಆದರೆ ಎಲ್ಲ ವ್ಯಕ್ತಿಗಳ, ಎಲ್ಲ ಸಮಾಜಗಳ ಹಾಗೂ ಎಲ್ಲ ರಾಷ್ಟ್ರಗಳ ಸಾರ್ವತ್ರಿಕ ಆದರ್ಶವಷ್ಟೇ ಅಲ್ಲ, ಸಾರ್ವತ್ರಿಕ ಅವಶ್ಯಕತೆ- ‘ಚಾರಿತ್ರ್ಯʼ, ಚಾರಿತ್ರ್ಯವಂತ ಮಾತ್ರ ಚರಿತ್ರೆ ನಿರ್ಮಿಸಬಲ್ಲ.

ಚಾರಿತ್ರ್ಯ ಎನ್ನುವುದು ವ್ಯಕ್ತಿಯೊಬ್ಬನ ಆಲೋಚನೆಗಳು, ಉದ್ದೇಶಗಳು, ಸ್ವಭಾವ ಹಾಗೂ ನಡೆವಳಿಕೆಗಳ ಒಟ್ಟು ಮೊತ್ತ. ಟೋಜರ್‌ ಎನ್ನುವವರು ಚಾರಿತ್ರ್ಯದ ಬಗ್ಗೆ ಹೀಗೆ ಹೇಳುತ್ತಾರೆ: “As the excellence of gold is its purity and the excellence of art is its beauty, so the excellence of man is his character.” ಆಲ್ಬರ್ಟ್‌ ಐನ್‌ಸ್ಟೈನ್‌ ಹೇಳುತ್ತಾರೆ: “Most people say that it is intellect which makes a great scientist. They are wrong: it is character”. ವ್ಯಕ್ತಿಯೊಬ್ಬ ಮೊದಲು ಮಾನವನಾದ ನಂತರ ಬರುವ ಪ್ರಶ್ನೆ ಆತ ವಿಜ್ಞಾನಿಯೋ, ಕಲಾವಿದನೋ, ಮತ್ತೊಂದೋ ಎನ್ನುವುದು. ಒಬ್ಬ ಶ್ರೇಷ್ಠ ವಿಜ್ಞಾನಿಯಾಗುವುದಕ್ಕೇ ‘ಚಾರಿತ್ರ್ಯ’ ಎನ್ನುವುದು ಅವಶ್ಯಕವಾದರೆ, ಇನ್ನು ನಿಜವಾದ ಅರ್ಥದಲ್ಲಿ ಒಬ್ಬ ‘ಮಾನವ’ನಾಗಲು ಅದು ಅನಿವಾರ್ಯ.

ವ್ಯಕ್ತಿಯೊಬ್ಬನ ಚಾರಿತ್ರ್ಯ ನಿರ್ಮಾಣ ಪ್ರಾರಂಭವಾಗುವುದು ಭ್ರೂಣಾವಸ್ಥೆಯಿಂದಲೇ, ಅದು ಮುಂದುವರಿಯುವುದು ಮನೆ, ಶಾಲೆ ಮತ್ತು ಸಮಾಜದಲ್ಲಿ. ಸುಸಂಸ್ಕೃತ ಸಮಾಜವನ್ನು ಸೃಷ್ಟಿಸುವವರು ವ್ಯಕ್ತಿಗಳು; ಸುಸಂಸ್ಕೃತ ವ್ಯಕ್ತಿ ಆ ಸಮಾಜದ ಸೃಷ್ಟಿ. ಇಲ್ಲಿ ಸುಸಂಸ್ಕೃತ ಸಮಾಜವೆಂದರೆ ಸಚಾರಿತ್ರ್ಯವಂತರ ಸಮೂಹ. ಇಂತಹ ಚಾರಿತ್ರ್ಯ ನಿರ್ಮಾಣದ ಮೊದಲ ಪಾಠಶಾಲೆ ಮನೆಯೇ. ಅದರಲ್ಲೂ ಮಗುವಿನ ಚಾರಿತ್ರ್ಯ ಎರಕ ಹೊಯ್ಯುವಲ್ಲಿ ತಾಯಿಯ ಪ್ರಭಾವ ಅತುಲ್ಯವಾದುದು.
ಮನು ಮಹರ್ಷಿಗಳು ಹೇಳುತ್ತಾರೆ:
ಉಪಾಧ್ಯಾಯಾನ್‌ ದಶಾಚಾರ್ಯಃ ಆಚಾರ್ಯಾಣಾಂ ಶತಂ ಪಿತಾ|
ಸಹಸ್ರಂತು ಪಿತೃನ್ ಮಾತಾ ಗೌರವೇಣಾತಿರಿಚ್ಯತೇ||

ರಾಮಕೃಷ್ಣ ಪರಂಪರೆಯ ಪೂಜ್ಯ ಸ್ವಾಮಿ ಬುಧಾನಂದಜೀಯವರು ಹೇಳುತ್ತಾರೆ, “ಜೀವನ ಪರ್ಯಂತ ತಮ್ಮ ಸ್ವಂತಚಾರಿತ್ರ್ಯವನ್ನು ರೂಪಿಸಿಕೊಳ್ಳಲು ಸತತ ಪ್ರಯತ್ನಿಸುವ ತಂದೆ ತಾಯಿಗಳು ಮಾತ್ರವೇ ತಮ್ಮ ಮಕ್ಕಳ ನಿಜವಾದ ಚಾರಿತ್ರ್ಯವನ್ನು ರೂಪಿಸಬಲ್ಲರು.” ಸ್ವಾಮಿ ವಿವೇಕಾನಂದರ ಜೀವನದಲ್ಲಿ ಅವರ ಜನ್ಮದಾರಭ್ಯ ಪ್ರತಿ ಹಂತದಲ್ಲಿಯೂ ಅವರ ಚಾರಿತ್ರ್ಯ ನಿರ್ಮಾಣದ ಪರಿ ಅಧ್ಯಯನ ಯೋಗ್ಯ; ಅಷ್ಟೇ ಅಲ್ಲ, ಅದು ನಮ್ಮ ಮತ್ತು ನಮ್ಮ ಮಕ್ಕಳ ಚಾರಿತ್ರ್ಯ ನಿರ್ಮಾಣಕ್ಕೊಂದು ಪಥದರ್ಶಿ.

ತಾಯಿ ಭುವನೇಶ್ವರಿದೇವಿ ಹಾಗೂ ಶ್ರೀ ವಿಶ್ವನಾಥದತ್ತರ ವಿಶೇಷ ಪ್ರಾರ್ಥನೆಯ ಫಲವಾಗಿ ಕಾಶಿ ವಿಶ್ವೇಶ್ವರ ಶಿವನ ವರಪ್ರಸಾದವಾಗಿ ಜನಿಸಿದವನೇ ‘ನರೇಂದ್ರ’. ಭಗವಂತನಲ್ಲಿ ಶರಣಾಗಿದ್ದು ಕೊಂಡು ಜೀವನದ ಸಂಕಷ್ಟಗಳನ್ನು ಎದುರಿಸಬೇಕೆಂಬುದೇ ಭುವನೇಶ್ವರಿದೇವಿಯ ಧ್ಯೇಯ ಮಂತ್ರ. ಅವಳಿಂದ,“ಮಗೂ, ನೀನು ನಿನ್ನಜೀವನದುದ್ದಕ್ಕೂ ಪರಿಶುದ್ಧನಾಗಿರಬೇಕು, ನಿನ್ನ ಆತ್ಮ ಗೌರವವನ್ನು ಯಾವಾಗಲೂ ಕಾಪಾಡಿಕೋ; ಹಾಗೆಯೇ ಇತರರ ಗೌರವಕ್ಕೆ ಧಕ್ಕೆ ತರದಂತೆ ನೋಡಿಕೋ. ಯಾವಾಗಲೂ ಸಮಾಧಾನದಿಂದ ಇರುವುದನ್ನು ಅಭ್ಯಾಸಮಾಡು. ಆದರೆ ಸಮಯ ಬಂದಾಗ ಕಲ್ಲೆದೆಯವನಾಗಿರುವುದಕ್ಕೂ ಸಿದ್ಧನಾಗಿರು” ಎನ್ನುವ ಮಾತುಗಳನ್ನು ಕೇಳುತ್ತಾ ಬೆಳೆದ ನರೇಂದ್ರ ಮುಂದೆ ಸ್ವಾಮಿ ವಿವೇಕಾನಂದರಾಗಿ ಆ ಮಾತುಗಳ ಮೂರ್ತರೂಪವೇ ಆದದ್ದು ಈಗ ಇತಿಹಾಸ.

ಇನ್ನು ವಿಶ್ವನಾಥದತ್ತ ತನ್ನ ಮಗನ ವ್ಯಕ್ತಿತ್ವವನ್ನು ರೂಪಿಸಿದ ರೀತಿ ಜಗತ್ತಿನ ಪ್ರತಿಯೊಬ್ಬ ತಂದೆಗೂ ಆದರ್ಶಪ್ರಾಯ. ತನ್ನ ಮಕ್ಕಳಿಗಾಗಿ ಹಣವನ್ನು ಕೂಡಿಡುವುದರಲ್ಲಿ ನಂಬಿಕೆ ಇಟ್ಟವನಲ್ಲ ಆತ. ಬದಲಾಗಿ ಮಕ್ಕಳನ್ನು ಗುಣವಂತರನ್ನಾಗಿ ಮಾಡಬೇಕೇ ಹೊರತು ಧನವಂತರನ್ನಾಗಿ ಅಲ್ಲ, ಎಂದು ನಂಬಿದವ. ಜೊತೆಗೆ ವಿಶ್ವನಾಥದತ್ತ ತನ್ನ ಮಗನಿಗೆ, “ಯಾವುದಕ್ಕೂ ಆಶ್ಚರ್ಯಪಡದಿರುವುದೇ ಉತ್ತಮ ನಡವಳಿಕೆಯ ಲಕ್ಷಣ”ಎಂದು ಕಲಿಸಿದ ಮಹತ್ತರವಾದ ಪಾಠವು ಸ್ವಾಮಿ ವಿವೇಕಾನಂದರಿಗೆ ಅವರ ಜೀವನದುದ್ದಕ್ಕೂ ಅನುಭವವೇದ್ಯವಾದ ಸಂದರ್ಭಗಳು ಅಸಂಖ್ಯ.

ಬಡತನವೆಂಬುದು ಮಾನವನನ್ನು ಕ್ರೂರಿಯಾಗಿಸಿದರೆ ಸಿರಿತನವು ಆತನನ್ನು ಧೂರ್ತನನ್ನಾಗಿಸುತ್ತದೆ ಎನ್ನುವುದು ಅತಿ ಸಹಜ ಎಂಬಷ್ಟು ವ್ಯಾಪಕವಾಗಿ ಕಂಡುಬಂದರೂ, ಗಮನಿಸಿ ನೋಡಿದಾಗ ನಮಗೆ ವೇದ್ಯವಾಗುವ ವಿಚಾರ–ಈ ಎರಡೂ ರೀತಿಯ ಅತಿರೇಕಗಳು ಚಾರಿತ್ರ್ಯ ಹೀನತೆಯ ದುಷ್ಫಲಗಳು ಎಂಬುದು. ಆದರೆ ಇದೇ ಸಿರಿತನ ಬಡತನಗಳು ಸಚಾರಿತ್ರ್ಯವಂತನ ವಿಷಯದಲ್ಲಿ ಅವನ ವ್ಯಕ್ತಿತ್ವವನ್ನು ಪುಟಕ್ಕಿಟ್ಟು ಅಪರಂಜಿಯನ್ನಾಗಿಸುವ ಕುಲುಮೆಗಳು. ಮಹಾನ್‌ ದಾರ್ಶನಿಕ ಕನ್‌ಫ್ಯೂಷಿಯಸ್ ಹೇಳುತ್ತಾನೆ –“ಯಾವ ವ್ಯಕ್ತಿ ನಿಜವಾದ ಮನುಷ್ಯನಲ್ಲವೋ, ಅರ್ಥಾತ್ ಸಚಾರಿತ್ರ್ಯವಂತನಲ್ಲವೋ ಆತ ದೀರ್ಘಕಾಲ ಬಡತನವನ್ನು ಸಹಿಸಲಾರ, ಸಿರಿವಂತಿಕೆ ಯನ್ನೂ ಸಹಿಸಲಾರ.”

ಹುಟ್ಟಿನಿಂದಲೇ ಅರಮನೆಯಂತಹ ಮನೆಯಲ್ಲಿ ಶ್ರೀಮಂತಿಕೆಯ ವೈಭವವನ್ನಷ್ಟೇ ಕಂಡಿದ್ದ ನರೇಂದ್ರ ಮತ್ತು ಅವನ ಕುಟುಂಬ ವಿಶ್ವನಾಥದತ್ತನ ಅಕಾಲಿಕ ಮರಣದ ಮರುಕ್ಷಣವೇ ಅಪಾರ ಆರ್ಥಿಕ ಸಂಕಷ್ಟಕ್ಕೆ ಗುರಿಯಾಯಿತು. ಸಾವಿರಾರು ಜನರಿಗೆ ಅನ್ನದಾನ ಮಾಡಿದ್ದ ಅವನ ಮನೆತನ ಹೊತ್ತೊಪ್ಪತ್ತಿನಲ್ಲಿ ಹಿಡಿ ಅನ್ನಕ್ಕಾಗಿ ಪರಿತಪಿಸುವಂತಾಯಿತು. ಆಗ ನರೇಂದ್ರನು ಕೌಟುಂಬಿಕ ಹೊಣೆಗಾರಿಕೆಯನ್ನು ಹೊತ್ತು, ಕಷ್ಟಪಟ್ಟು, ಅದನ್ನು ನಿರ್ವಹಿಸುತ್ತಾ ಬಂದ. ಅನ್ಯಾಯದ ಮಾರ್ಗಗಳಿಂದ ಹಣ ಸಂಪಾದನೆ ಮಾಡಿದ್ದ ನರೇಂದ್ರನ ಹಲವಾರು ಮಿತ್ರರು ಆತನ ಆರ್ಥಿಕ ಮುಗ್ಗಟ್ಟನ್ನು ಕಂಡು ಮರುಗಿ ತಮ್ಮೊಂದಿಗೆ ಕೈ ಜೋಡಿಸಲು ಆಹ್ವಾನವಿತ್ತಾಗ ನರೇಂದ್ರನು ಸ್ಪಷ್ಟವಾಗಿ ನಿರಾಕರಿಸಿದ. ಇದು ನರೇಂದ್ರನ ನೈತಿಕತೆಯೆಂಬುದು ಮರಳಿನ ಮೇಲೆ ಕಟ್ಟಿದಕಟ್ಟಡವಲ್ಲ ಎಂಬುದನ್ನು ಆ ಸ್ನೇಹಿತರಿಗೆ ಸಾಬೀತುಪಡಿಸಿತು.

ಆರ್ಥಿಕ ಸಂಕಷ್ಟದಲ್ಲಿದ್ದ ನರೇಂದ್ರನಿಗೆ ಆತನ ಮೇಲೆ ಕಣ್ಣಿಟ್ಟಿದ್ದ ಶ್ರೀಮಂತ ಮಹಿಳೆಯೊಬ್ಬಳು ಅನೈತಿಕ ಸಲಹೆಯನಿತ್ತು ಅದನ್ನು ಪೂರೈಸಿದರೆ ಆತನ ಸಂಕಷ್ಟಗಳನ್ನೆಲ್ಲ ತಾನು ಪರಿಹರಿಸುವುದಾಗಿ ಸೂಚಿಸಿದಾಗ ಆತ ಆಕೆಯ ಸಲಹೆಯನ್ನು ಕಟುವಾಗಿ ತುಚ್ಛೀಕರಿಸಿದ. ಮನೆಯವರ ಕಣ್ಣುತಪ್ಪಿಸಿಯಾದರೂ ಕೈಗೆ ಸಿಕ್ಕಿದ್ದನ್ನು ದೀನ ದಲಿತರಿಗೆ ದಾನ ಮಾಡಿಬಿಡುತ್ತಿದ್ದ ನರೇಂದ್ರನಲ್ಲಿ ಹೇಗೆ ‘ಸಿರಿತನ’ ಎನ್ನುವುದು ಅಮಲೇರಿಸಲಿಲ್ಲವೂ ಅಂತೆಯೇ ಅವನ ಬದುಕಿನಲ್ಲಿ ಎದುರಾದ ಕಷ್ಟಗಳಿಗೆ ಆತನನ್ನು ನೈತಿಕ ಶಿಖರದಿಂದ ಜಾರಿಸಲೂ ಸಾಧ್ಯವಾಗಲಿಲ್ಲ. ಇದು ನಿಜವಾದ ಸಚ್ಛರಿತನ ಲಕ್ಷಣ. ದಾರಿದ್ರ್ಯದಲ್ಲೂ ಪ್ರಕಾಶಿಸುವ ದಿವ್ಯತೇಜಸ್ಸುಚಾರಿತ್ರ್ಯ.

Vivekananda Jayanti 2023

ಮುಂದೆ ವಿವೇಕಾನಂದರೇ ಹೇಳುತ್ತಾರೆ; “Neither money pays, nor name, nor fame, it is CHARACTER that can cleave through adamantine walls of difficulties.” ಮತ್ತೊಮ್ಮೆ ಸ್ವಾಮೀಜಿ ಹೇಳಿದ್ದುಂಟು, “ಅಮೇರಿಕಾದೇಶದಲ್ಲಿ ನನ್ನ ಮೊದಲ ಉಪನ್ಯಾಸದಲ್ಲಿ ಶೋತೃಗಳನ್ನು ಕುರಿತು ನಾನು “ಸೋದರ ಸೋದರಿಯರೇ….” ಎಂದು ಸಂಬೋಧಿಸಿದೆ. ನೆರೆದಿದ್ದವರೆಲ್ಲಾ ಹರ್ಷೋದ್ಘಾರಗೈದರು. ಅವರಲ್ಲಿನ ಉತ್ಸಾಹ ಹಾಗೂ ಭಾವನೆಗಳು ಪುಟಿದೆದ್ದು ಅವರುಗಳನ್ನು ತುದಿಗಾಲ ಮೇಲೆ ನಿಲ್ಲಿಸಿತು. ಅವರ ಈ ನಡವಳಿಕೆಗೆ ಕಾರಣವೇನಿರಬಹುದು?
“ನನ್ನಲ್ಲಿರಬಹುದಾದಯಾವ ವಿಶೇಷ ಶಕ್ತಿಯು, ಅಪರೂಪವಾದ ಶಕ್ತಿಯು ಅವರುಗಳನ್ನು ಈ ರೀತಿಯಲ್ಲಿ ಪ್ರತಿಕ್ರಿಯಿಸಲು ಪ್ರೇರೇಪಿಸಿರಬಹುದು? ನನ್ನಲ್ಲಿರುವ ವಿಶೇಷ ಶಕ್ತಿಯ ಬಗ್ಗೆ ನೀವು ತಿಳಿಯಬಯಸಿದಾಗ ನಿಮಗೆ ಆಶ್ಚರ್ಯವಾಗಬಹುದು. ನಿಜ! ಇದುವರೆಗೂ ನನ್ನಜೀವನದಲ್ಲಿ ಯಾವುದೇ ಲೈಂಗಿಕ ಆಲೋಚನೆಯು ನನ್ನ ಮನಸ್ಸಿನಲ್ಲಿ ಸುಳಿಯಲು ಆಸ್ಪದ ನೀಡಲಿಲ್ಲ. ನನ್ನ ಮನಸ್ಸು, ಆಲೋಚನೆ ಮತ್ತು ಸಾಮರ್ಥ್ಯಗಳನ್ನು ಉನ್ನತ ಸ್ತರದಲ್ಲಿ ಸುಶಿಕ್ಷಿತಗೊಳಿಸಿದ್ದರಿಂದ ನನ್ನನ್ನು ಯಾವ ಪ್ರಲೋಭನೆಗಳೂ ನಿಯಂತ್ರಿಸಲಾರದಾದವು.”

“By the observance of Brahmacharya all learning can be mastered in a short time – one has an unfailing memory of what one hears or knows but once” ಎಂದಿರುವ ಸ್ವಾಮೀಜಿ, “ಪರಿಪೂರ್ಣ ಬ್ರಹ್ಮಚರ್ಯವು ವ್ಯಕ್ತಿಯಲ್ಲಿ ಅತ್ಯುತ್ತಮವಾದ ಬೌದ್ಧಿಕ ಹಾಗೂ ಆಧ್ಯಾತ್ಮಿಕ ಸಾಮರ್ಥ್ಯಗಳನ್ನು ದೊರಕಿಸಿಕೊಡುತ್ತದೆ” ಎನ್ನುತ್ತಾರೆ.

ನರೇಂದ್ರನ ಹಾಡುಗಾರಿಕೆ, ವಾದ್ಯನುಡಿಸುವಿಕೆ, ಅವುಗಳಿಗಷ್ಟೇ ಅಲ್ಲದೆ ಜಿತೇಂದ್ರಿಯನಾದ ಆತನ ಮನಸ್ಸು ಸದಾಕಾಲ ಭಗವಂತನೆಡೆಗೇ ಇರುವುದನ್ನು ಶ್ರೀರಾಮಕೃಷ್ಣರು ಗುರುತಿಸಿದ್ದರು. “ನರಕದ ಭೀತಿಗಾಗಿದೇವರನ್ನು ನಂಬುವ ಹೇಡಿಯಲ್ಲ ನಾನು” ಎಂಬ ನರೇಂದ್ರನ ಮಾತಿನಲ್ಲಿ ಅವನು ನಿರ್ಭಯತೆಯ ಮೂರ್ತರೂಪದಂತಿದ್ದ ಎಂಬುದನ್ನು ತೋರಿಸುತ್ತದೆ. ನರೇಂದ್ರನ ಕುರಿತು ಯಾರಾದರೂ ಟೀಕಿಸಿ ಮಾತನಾಡಿದರೆ, ಶ್ರೀರಾಮಕೃಷ್ಣರು,“ಏನು ಮಾತನಾಡುತ್ತಿದ್ದೀಯೆ ನೀನು? ಶಿವನಿಂದೆ! ಶಿವನಿಂದೆ ಮಾಡುತ್ತಿದ್ದೀ!” ಎಂದು ಗದರುತ್ತಿದ್ದುದು ನರೇಂದ್ರನ ಶುದ್ಧಚಾರಿತ್ರ್ಯದ ಬಗ್ಗೆ ಅವರಿತ್ತ ಯೋಗ್ಯತಾ ಪತ್ರವಲ್ಲದೆ ಮತ್ತೇನು?

ಚಾರಿತ್ರ್ಯದ ಲಕ್ಷಣವನ್ನು ವಿವರಿಸುತ್ತ ಸ್ವಾಮಿ ವಿವೇಕಾನಂದರು ಹೇಳುತ್ತಾರೆ “ಯಾವುದೇ ವ್ಯಕ್ತಿಯ ಚಾರಿತ್ರ್ಯವು ಆತನ ಒಲವು, ಸ್ವಭಾವಗಳ ಸಮಷ್ಟಿಯಲ್ಲದೆ ಬೇರೆ ಅಲ್ಲ. ನಮ್ಮ ಆಲೋಚನೆಗಳೇ ನಮ್ಮನ್ನು ಈ ರೀತಿಯಾಗಿ ರೂಪಿಸಿವೆ. ಭಾವನೆಗಳು ಬದುಕುತ್ತವೆ! ಅವು ದೂರ ಸಾಗುತ್ತವೆ. ಈ ಕಾರಣದಿಂದ ನೀವು ಏನನ್ನು ಆಲೋಚಿಸುವಿರಿ ಎಂಬುದರ ಬಗ್ಗೆ ಎಚ್ಚರವಾಗಿರಿ. ನಾವು ಮಾಡುವ ಪ್ರತಿಯೊಂದು ಕೆಲಸ, ಶರೀರದ ಪ್ರತಿಯೊಂದು ಚಲನೆ, ಭಾವಿಸುವ ಪ್ರತಿಯೊಂದು ಭಾವನೆ ಚಿತ್ತದಲ್ಲಿ ಮುದ್ರೆಯನ್ನೊತ್ತುತ್ತವೆ. ಮನಸ್ಸಿನ ಮೇಲಿನ ಈ ಸಂಸ್ಕಾರಗಳ ಒಟ್ಟು ಮೊತ್ತವೇ ಚಾರಿತ್ರ್ಯ. ಪ್ರತಿಯೊಬ್ಬ ವ್ಯಕ್ತಿಯ ಚಾರಿತ್ರ್ಯ ಈ ಸಂಸ್ಕಾರಗಳ ಒಟ್ಟು ಮೊತ್ತದಿಂದ ನಿರ್ಧಾರವಾಗುತ್ತದೆ. ಉತ್ತಮ ಭಾವನೆಗಳು ಮೇಲುಗೈ ಸಾಧಿಸಿದರೆ ಚಾರಿತ್ರ್ಯವು ಉತ್ತಮಗೊಳ್ಳುತ್ತದೆ. ಕೆಟ್ಟವಾದರೆ ಅದೂಕೆಟ್ಟದಾಗುತ್ತದೆ.”

ಸ್ವಾಮಿ ಬುಧಾನಂದಜೀರವರು ಹೇಳುತ್ತಾರೆ –“ಜೀವನದಯಾವುದೇ ಗೂಢ ಸಮಸ್ಯೆಯ ಕೀಲಿಕೈ ಚಾರಿತ್ರ್ಯ. ಅದು ಪ್ರತಿಯೊಂದು ದುಷ್ಟತನದ ಎಲ್ಲೆಯನ್ನು ಬೇಧಿಸಬಲ್ಲದು. ಚಾರಿತ್ರ್ಯದಿಂದ ಬಿಡಿಸಲಾಗದ ರಹಸ್ಯವಿಲ್ಲ, ವಾಸಿ ಮಾಡಲಾಗದ ಗಾಯವಿಲ್ಲ, ತುಂಬಲಾರದ ಕೊರತೆ ಹಾಗೂ ನಷ್ಟವಿಲ್ಲ. ಈ ಕಾರಣದಿಂದ ಜೀವನದ ಎಲ್ಲಾ ಕ್ರಿಯಾತ್ಮಕ ಪ್ರಯತ್ನಗಳಲ್ಲಿ ತನ್ನ ಸ್ವಂತಚಾರಿತ್ರ್ಯ ನಿರ್ಮಿಸುವ ವಿಧಾನವನ್ನು ತಿಳಿದುಕೊಳ್ಳುವುದು ಹಾಗೂ ತನ್ನ ಜೊತೆಯಲ್ಲಿರುವವರ ಚಾರಿತ್ರ್ಯ ನಿರ್ಮಾಣಕ್ಕೆ ನೆರವಾಗುವುದು ಅತಿ ಮುಖ್ಯವಾಗಿ ಆಗಬೇಕಾದ ಕೆಲಸ.”

“ಶಿಕ್ಷಣವೇ ಸರ್ವ ಸಮಸ್ಯೆಗಳಿಗೆ ರಾಮಬಾಣ”ಎಂದರಿತಿದ್ದ ಸ್ವಾಮಿ ವಿವೇಕಾನಂದರು, “ಶಿಕ್ಷಣವೆಂದರೆ ವ್ಯಕ್ತಿತ್ವ ನಿರ್ಮಾಣ, ವ್ಯಕ್ತಿತ್ವ ನಿರ್ಮಾಣವೆಂದರೆ ಚಾರಿತ್ರ್ಯ ನಿರ್ಮಾಣ ಮತ್ತು ಚಾರಿತ್ರ್ಯ ನಿರ್ಮಾಣದ ಮೂಲಕ ಮಾತ್ರವೇ ರಾಷ್ಟ್ರ ನಿರ್ಮಾಣವನ್ನು ಸಾಧಿಸಬಹುದು” ಎಂಬ ಹೇಳಿದರು. ಅವರ ಪ್ರಕಾರ ಶಿಕ್ಷಣವು ಚಾರಿತ್ರ್ಯವಂತರನ್ನುರೂಪಿಸಬೇಕು.

ಸ್ವಾಮಿ ವಿವೇಕಾನಂದರ ಸಂದೇಶಗಳಲ್ಲಿ ‘Be and make’ಎಂಬುದು ಜನಜನಿತವಾದುದು. ಶುದ್ಧ ಚಾರಿತ್ರ್ಯದ ಮೂರ್ತರೂಪವೇ ಅವರಾಗಿದ್ದರಲ್ಲದೆ ಶ್ರೇಷ್ಟ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಅವರು ಸೂಚಿಸಿದ ವಿಚಾರಗಳು ಸಾರ್ವಕಾಲಿಕವಾಗಿವೆ.

ಲೇಖಕರು ಅಧ್ಯಕ್ಷರು, ರಾಮಕೃಷ್ಣ-ವಿವೇಕಾನಂದ ಆಶ್ರಮ, ತುಮಕೂರು

ಇದನ್ನೂ ಓದಿ | Swami Vivekananda | ಜಗತ್ತಿನ ಕಣ್ಣು ತೆರೆಸಿದ ಸ್ವಾಮಿ ವಿವೇಕಾನಂದರ ಚಿಕಾಗೋ ಭಾಷಣ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಶಿವಮೊಗ್ಗ

Shivamogga News: ವಿಜೃಂಭಣೆಯ ರಿಪ್ಪನ್‌ಪೇಟೆ ಶ್ರೀ ಸಿದ್ಧಿವಿನಾಯಕ ಸ್ವಾಮಿಯ ರಥೋತ್ಸವ

Shivamogga News: ರಿಪ್ಪನ್‌ಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಸಿದ್ಧಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವವು ಗುರುವಾರ ಅಪಾರ ಭಕ್ತರ ಮಧ್ಯೆ ವಿಜೃಂಭಣೆಯಿಂದ ಜರುಗಿತು.

VISTARANEWS.COM


on

Sri Siddhivinayaka Swami SrimanMaharathotsava in Ripponpet
Koo

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ಧ ಶ್ರೀ ಸಿದ್ಧಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವವು ಗುರುವಾರ ಅಪಾರ ಭಕ್ತರ ಮಧ್ಯೆ ವಿಜೃಂಭಣೆಯಿಂದ ಜರುಗಿತು. ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಶ್ರೀ ಆಭಿನವ ಚನ್ನಬಸವ ಸ್ವಾಮೀಜಿ ರಥೋತ್ಸವಕ್ಕೆ ಚಾಲನೆ ನೀಡಿ, ಈ ವರ್ಷ ನಾಡಿಗೆ ಸಮೃದ್ಧ ಮಳೆ-ಬೆಳೆಯಾಗಿ ರೈತರ ಬದುಕು ಹಸನಾಗಲೆಂದು ಮತ್ತು ಜಗತ್ತಿನಲ್ಲೆಡೆ ಶಾಂತಿ, ನೆಮ್ಮದಿಯನ್ನು ಕರುಣಿಸುವಂತಾಗಲಿ ಎಂದು ಸಿದ್ಧಿವಿನಾಯಕ ದೇವರಲ್ಲಿ ಶ್ರೀಗಳು ಪ್ರಾರ್ಥಿಸಿದರು.

ಇದನ್ನೂ ಓದಿ: IPL 2024 : ಐಪಿಎಲ್​ ಮಧ್ಯದಲ್ಲಿಯೇ ಕೆಕೆಆರ್​ ತಂಡ ತೊರೆದ ಆರಂಭಿಕ ಆಟಗಾರ

ಮನ್ಮಹಾರಥೋತ್ಸವದ ಅಂಗವಾಗಿ ದೇವಸ್ಥಾನದಲ್ಲಿ ಶಿವಮೊಗ್ಗದ ವಸಂತ ಭಟ್ ಮತ್ತು ಚಂದ್ರಶೇಖರ ಭಟ್ ಹಾಗೂ ಗುರುರಾಜ ಭಟ್ ಅವರ ನೇತೃತ್ವದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು. ಭಕ್ತಾಧಿಗಳು ಶ್ರದ್ಧಾ ಭಕ್ತಿಯಿಂದ ರಥವನ್ನು ಎಳೆದು ಇಷ್ಠಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದರು. ಭಕ್ತರಿಗೆ ಉಚಿತವಾಗಿ ಕಬ್ಬಿನ ಹಾಲು ಮತ್ತು ಐಸ್‌ಕ್ರೀಮ್, ಕುಡಿಯುವ ನೀರಿನ ವ್ಯವಸ್ಥೆಯನ್ನು ವಿವಿಧ ಸಂಘಟನೆಗಳಿಂದ ಆಯೋಜಿಸಲಾಗಿತ್ತು.

ಇದನ್ನೂ ಓದಿ: Karnataka Weather : ರಾಜ್ಯದಲ್ಲಿ ಮುಂದುವರಿಯಲಿದೆ ಶಾಖದ ಹೊಡೆತ; ಕೋಲಾರದಲ್ಲಿ ಮೊದಲ ಮಳೆಯ ಸಿಂಚನ

ಈ ಸಂದರ್ಭದಲ್ಲಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಈಶ್ವರಶಟ್ಟಿ, ಎನ್. ಸತೀಶ್, ಗಣೇಶ್ ಎನ್. ಕಾಮತ್, ಎಂ.ಡಿ. ಇಂದ್ರಮ್ಮ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸುಧೀಂದ್ರ ಪೂಜಾರಿ, ತುಳೋಜಿರಾವ್, ಸ್ವಾಮಿ ದೊಡ್ಡಿನಕೊಪ್ಪ, ವೈ.ಜೆ. ಕೃಷ್ಣ, ಉಮೇಶ್ ಆರ್., ಮಂಜನಾಯ್ಕ್, ಎಂ.ಬಿ. ಮಂಜುನಾಥ, ಎಂ. ಸುರೇಶ್‌ ಸಿಂಗ್, ಸುಧೀರ್ ಪಿ., ರವೀಂದ್ರ ಕೆರೆಹಳ್ಳಿ, ನಾಗರತ್ನ ದೇವರಾಜ್, ಎಸ್.ಎನ್. ಬಾಲಚಂದ್ರ, ಕುಸುಮಾ ಬಾಲಚಂದ್ರ, ಪದ್ಮಾ ಸುರೇಶ್, ನಿವೃತ್ತ ಶಿಕ್ಷಕ ರಾಧಾಕೃಷ್ಣ, ಜಯಲಕ್ಷ್ಮಿ ಮೋಹನ್ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಪಾಲ್ಗೊಂಡಿದ್ದರು.

Continue Reading

ಧಾರ್ಮಿಕ

Ballari News: ಬಾಯಿಯೊಳಗೆ ತ್ರಿಶೂಲ; ಬೆನ್ನಿಗೆ ಕೊಕ್ಕೆ ಕಟ್ಟಿಕೊಂಡು ಕಾರು, ರಿಕ್ಷಾ ಎಳೆದ ಭಕ್ತರು!

Ballari News: ಕಂಪ್ಲಿ ಕೋಟೆಯ ಮೀನುಗಾರರ ಕಾಲೋನಿಯಲ್ಲಿ ಮೀನುಗಾರ ಸಮುದಾಯದ ಆರಾಧ್ಯ ದೈವ ಶ್ರೀ ಕಾಳಮ್ಮ ದೇವಿಯ ಪೂಜಾ ಮಹೋತ್ಸವವು ಮಂಗಳವಾರ ಅದ್ಧೂರಿಯಾಗಿ ಜರುಗಿತು. ಹರಕೆ ತೀರಿಸುವ ಭಕ್ತರ ಆಚರಣೆಗಳು ಗಮನ ಸೆಳೆದವು.

VISTARANEWS.COM


on

Kalamma Devi Pooja Mahotsava in Kampli
Koo

ಕಂಪ್ಲಿ: ಕಂಪ್ಲಿ ಕೋಟೆಯ ಮೀನುಗಾರರ ಕಾಲೋನಿಯಲ್ಲಿ ಮೀನುಗಾರ ಸಮುದಾಯದ ಆರಾಧ್ಯ ದೈವ ಶ್ರೀ ಕಾಳಮ್ಮ ದೇವಿಯ ಪೂಜಾ ಮಹೋತ್ಸವವು ಮಂಗಳವಾರ ಅದ್ಧೂರಿಯಾಗಿ (Ballari News) ಜರುಗಿತು.

ಸೋಮವಾರ ಸಂಜೆ ಗಂಗೆಸ್ಥಳ ಮತ್ತು ಅಗ್ನಿ ಕುಂಭೋತ್ಸವ ಸೇರಿದಂತೆ ವಿವಿಧ ರೀತಿಯ ಧಾರ್ಮಿಕ ಕಾರ್ಯಕ್ರಮಗಳು ಶ್ರದ್ಧಾಭಕ್ತಿಯಿಂದ ಜರುಗಿದವು. ಮೆರವಣಿಗೆಯಲ್ಲಿ ಮೂವರು ಭಕ್ತಾದಿಗಳು ಬಾಯಿಗೆ 12 ಅಡಿ ಉದ್ದದ ತ್ರಿಶೂಲ ಅಸ್ತ್ರವನ್ನು ಹಾಕಿಸಿಕೊಂಡು ಕಲ್ಲುಗುಂಡು, ಇಬ್ಬರು ಭಕ್ತಾದಿಗಳು ಆಟೋರಿಕ್ಷಾ, ಇಬ್ಬರು ಭಕ್ತರು ಕಾರುಗಳನ್ನು ತಮ್ಮ ಬೆನ್ನುಗಳಿಗೆ ಹಾಕಿದ್ದ ಕಬ್ಬಿಣದ ಕೊಕ್ಕೆಗಳಿಂದ ಎಳೆದು ತಮ್ಮ ಹರಕೆ ತೀರಿಸಿದರು. ಟ್ರ್ಯಾಕ್ಟರ್‌ಗೆ ಹಾಕಲಾಗಿದ್ದ ಬೊಂಬುಗಳಿಗೆ ತಮ್ಮ ಬೆನ್ನಿಗೆ ಹಾಕಲಾಗಿದ್ದ ಕೊಕ್ಕೆಯಿಂದ ಜೋತು ಬೀಳುವ ಮೂಲಕ ಭಕ್ತಿ ಸಮರ್ಪಿಸಿದರು.

ಇದನ್ನೂ ಓದಿ: Job Alert: ನೈವೇಲಿ ಲಿಗ್ನೈಟ್ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಪದವಿ ಪಡೆದವರು ಅರ್ಜಿ ಸಲ್ಲಿಸಿ

ಮೆರವಣಿಗೆಯು ಶ್ರೀ ಕಾಳಮ್ಮ ದೇವಸ್ಥಾನದಿಂದ ಶ್ರೀ ಸುಂಕಲಮ್ಮ ದೇವಸ್ಥಾನದ ವರೆಗೂ ಜರುಗಿತು. ಭಕ್ತಾದಿಗಳು ರಸ್ತೆಯುದ್ದಕ್ಕೂ ತಮ್ಮ ಬೆನ್ನಿಗೆ ಹಾಕಲಾಗಿದ್ದ ಕೊಕ್ಕೆಯಿಂದ ತಮ್ಮ ಹರಕೆಯಂತೆ ಸುಡು ಬಿಸಿಲ ಮಧ್ಯೆಯು ಗುಂಡು, ಆಟೋ, ಕಾರುಗಳನ್ನು ಎಳೆದೊಯ್ದು ಭಕ್ತಿ ಸಮರ್ಪಿಸಿದರು.

ಪಟ್ಟಣದ ಸೇರಿದಂತೆ ತಾಲೂಕಿನ ವಿವಿಧೆಡೆಗಳಿಂದ ಆಗಮಿಸಿದ್ದಂತಹ ಭಕ್ತರು ವಿಶೇಷ ಆಚರಣೆಯನ್ನು ನೋಡಿ ಕಣ್ ತುಂಬಿಕೊಳ್ಳುವ ಮೂಲಕ ಆಶ್ಚರ್ಯ ಚಕಿತರಾದರು. ಕಾರ್ಯಕ್ರಮದ ಪೌರೋಹಿತ್ಯವನ್ನು ಮಾರೆಪ್ಪ ಪೂಜಾರಿ ವಹಿಸಿದ್ದರು.

ಇದನ್ನೂ ಓದಿ: Koppala News: ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಸಿಗುವಂತೆ ಕ್ರಮ ಕೈಗೊಳ್ಳಲು ಜಿ.ಪಂ ಸಿಇಒ ಸೂಚನೆ

ಈ ಸಂದರ್ಭದಲ್ಲಿ ಮೀನುಗಾರ ಸಹಕಾರ ಸಂಘದ ಅಧ್ಯಕ್ಷ ಚೆನ್ನರಾಜು, ಉಪಾಧ್ಯಕ್ಷ ಷಣ್ಮುಖಪ್ಪ, ಮುಖಂಡರಾದ ಮಾರೆಪ್ಪ ಪೂಜಾರಿ, ಸ್ವಾಮಿ ದೊರೆ, ಎ. ಗಣೇಶ್, ಎಸ್.ಜಿ.ಪೂಜಾರಿ, ಗುರುಮೂರ್ತಿ, ಪಣಿಯಪ್ಪ, ಆರ್. ಕೃಷ್ಣ ಪೂಜಾರಿ, ಎಸ್.ಆರ್. ಸುರೇಶ್ ಸೇರಿದಂತೆ ಸರ್ವ ಸಮುದಾಯಗಳ ಸದ್ಭಕ್ತರು ಪಾಲ್ಗೊಂಡಿದ್ದರು.

Continue Reading

ಬೆಂಗಳೂರು

Sadhguru Jaggi Vasudev: ಮೆದುಳಿನ ಶಸ್ತ್ರಚಿಕಿತ್ಸೆಯ ತಿಂಗಳ ಬಳಿಕ ಕಾಂಬೋಡಿಯಾಗೆ ಸದ್ಗುರು ಪ್ರವಾಸ

Sadhguru Jaggi Vasudev: ಕಾಂಬೋಡಿಯಾದ ಸಾಂಸ್ಕೃತಿಕ ಮತ್ತು ಅಧ್ಯಾತ್ಮಿಕತೆಯ ಅನ್ವೇಷಣೆಗಾಗಿ ಸದ್ಗುರು ಜಗ್ಗಿ ವಾಸುದೇವ್‌ ಅವರು ತೆರಳಿದ್ದಾರೆ. ಇದು ಶಸ್ತ್ರಚಿಕಿತ್ಸೆಯ ಒಂದು ತಿಂಗಳ ನಂತರ ಸದ್ಗುರುಗಳ ಮೊದಲ ಪ್ರಯಾಣವಾಗಿದೆ.

VISTARANEWS.COM


on

Sadhguru Jaggi Vasudev
Koo

ಸೀಮ್‌ ರೀಪ್‌(ಕಾಂಬೋಡಿಯಾ): ಮೆದುಳಿನ ಶಸ್ತ್ರಚಿಕಿತ್ಸೆಯ ಒಂದು ತಿಂಗಳ ನಂತರ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕತೆಯ ಆಳದ ಅನ್ವೇಷಣೆಗಾಗಿ ಆಧ್ಯಾತ್ಮಿಕ ಗುರು ಹಾಗೂ ಈಶ ಫೌಂಡೇಶನ್‌ ಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್‌ (Sadhguru Jaggi Vasudev) ಅವರು ಕಾಂಬೋಡಿಯಾಗೆ ತೆರಳಿದ್ದಾರೆ. ಕಾಂಬೋಡಿಯಾ ಪ್ರವಾಸೋದ್ಯಮ ಸಚಿವ ಎಚ್.ಇ. ಎಸ್ಒಕೆ ಸೋಕೆನ್ ಅವರು ಸೀಮ್ ರೀಪ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸದ್ಗುರುಗಳನ್ನು ಆತ್ಮೀಯತೆಯಿಂದ ಸ್ವಾಗತಿಸಿದರು.

ಗಮನಾರ್ಹ ಆತಿಥ್ಯದ ಜತೆಗೆ ಸಚಿವರು, ಕಾಂಬೋಡಿಯಾದ ಪ್ರಧಾನ ಮಂತ್ರಿಯವರ ವೈಯಕ್ತಿಕ ಪತ್ರವನ್ನು ಸದ್ಗುರುಗಳಿಗೆ ಪ್ರಸ್ತುತಪಡಿಸಿದರು. ಸಚಿವರೊಂದಿಗೆ ಅವರ ಪತ್ನಿ, ಕಾಂಬೋಡಿಯಾದ ಪ್ರವಾಸೋದ್ಯಮ ಸಚಿವಾಲಯದ ಅಧಿಕಾರಿಗಳು ಮತ್ತು ಭಾರತದ ಕಾನ್ಸುಲೇಟ್ ಜನರಲ್ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಇದು ಶಸ್ತ್ರಚಿಕಿತ್ಸೆಯ ಒಂದು ತಿಂಗಳ ನಂತರ ತಮ್ಮ ಚಟುವಟಿಕೆಗಳಿಗೆ ಮರಳಿರುವ ಸದ್ಗುರುಗಳ ಮೊದಲ ಪ್ರಯಾಣ. ಅಲ್ಲಿ ಅವರು ಸ್ಥಳೀಯ ಸಂಸ್ಕೃತಿ ಮತ್ತು ದೇವಾಲಯಗಳ ಹಿಂದಿನ ವಿಜ್ಞಾನವನ್ನು ಅನ್ವೇಷಿಸಲಿದ್ದಾರೆ. ಅವರ ಕಾರ್ಯಕ್ರಮವು ಏಪ್ರಿಲ್ 30 ರವರೆಗೆ ಜರುಗಲಿದ್ದು, ಈ ಸಮಯದಲ್ಲಿ ಅಲ್ಲಿನ ಸ್ಥಳೀಯ ಸಂಸ್ಕೃತಿಯಲ್ಲಿ ಮಿಂದೇಳುವುದರ ಜತೆಗೆ, ಕಾಂಬೋಡಿಯಾದ ಸೀಮ್ ರೀಪ್‌ನಲ್ಲಿರುವ ಬೇಯಾನ್ ಮತ್ತು ಅಂಕೋರ್ ವಾಟ್ ದೇವಾಲಯಗಳಿಗೆ ಭೇಟಿ ನೀಡಲಿದ್ದಾರೆ.

ಯಾವುದೇ ಬೋಧನೆ, ತತ್ವಶಾಸ್ತ್ರ, ಮತಧರ್ಮ ಅಥವಾ ನಂಬಿಕೆಯ ವ್ಯವಸ್ಥೆಗಳಿಗೆ ಒಳಗಾಗದ ಸದ್ಗುರುಗಳು, ತಮ್ಮ ಆಧ್ಯಾತ್ಮಿಕ ಮತ್ತು ಸಾಮಾಜಿಕ ಪ್ರಯತ್ನಗಳು, ಪರಿಸರ ಕಾರ್ಯಗಳು, ಗ್ರಾಮೀಣ ಶಿಕ್ಷಣ ಮತ್ತು ಇನ್ನೂ ಹೆಚ್ಚಿನವುಗಳ ಮೂಲಕ ವಿಶ್ವದಾದ್ಯಂತ ಲಕ್ಷಾಂತರ ಜನರನ್ನು ತಲುಪಿದ್ದಾರೆ. ಪ್ರಪಂಚದಾದ್ಯಂತ ಮೂವತ್ತು ಲಕ್ಷ ಜನರು ಅವರ ಪ್ರಮುಖ ಕಾರ್ಯಕ್ರಮವಾದ ಇನ್ನರ್ ಎಂಜಿನಿಯರಿಂಗ್ ಕಾರ್ಯಕ್ರಮದ ಪ್ರಯೋಜನ ಪಡೆದಿದ್ದಾರೆ. ಆ ಮೂಲಕ ಜನರು ತಮ್ಮ ಜೀವನದ ಗ್ರಹಿಕೆಯಲ್ಲಿ ಹೆಚ್ಚಿನ ಸಮತೋಲನ ಮತ್ತು ಗಮನಾರ್ಹ ಸ್ಪಷ್ಟತೆಯನ್ನು ಪಡೆದುಕೊಂಡಿದ್ದಾರೆ.

ಇದನ್ನೂ ಓದಿ | Prerane : ಗೆಲುವಿಗೆ ಸೂತ್ರಗಳಿವೆಯೇ? ಸದ್ಗುರು ಹೀಗೆನ್ನುತ್ತಾರೆ!

2023 ರಲ್ಲಿ ಸದ್ಗುರುಗಳ ಸಾಮಾಜಿಕ ಮಾಧ್ಯಮವು 4.37 ಶತಕೋಟಿಗೂ ಹೆಚ್ಚು ವೀಕ್ಷಣೆಗಳನ್ನು ಪಡೆದಿತ್ತು. ಈ ಹಿನ್ನೆಲೆಯಲ್ಲಿ ಕಾಂಬೋಡಿಯಾದ ಅವರ ಅನ್ವೇಷಣೆಯು, ಆ ದೇಶದ ಬಗೆಗಿನ ಅವರ ಒಳನೋಟಗಳಿಂದ ಪ್ರಯೋಜನ ಪಡೆಯಲು ಜಗತ್ತಿಗೆ ಒಂದು ವಿಶಿಷ್ಟ ಅವಕಾಶವನ್ನು ಒದಗಿಸಲಿದೆ.

Continue Reading

ಬೆಂಗಳೂರು

Bengaluru Karaga: ವೈಭವದ ಕರಗ ಮಹೋತ್ಸವ ಸಂಪನ್ನ; ಲಕ್ಷಾಂತರ ಭಕ್ತರ ನಡುವೆ ಮಸ್ತಾನ್ ಸಾಬ್ ದರ್ಗಾಗೆ ಭೇಟಿ

Bengaluru Karaga: ಸಂಪ್ರದಾಯದಂತೆ ಹಜರತ್ ತವಕಲ್ ಮಸ್ತಾನ್ ಷಾ ದರ್ಗಕ್ಕೆ ಕರಗ ಭೇಟಿ ನೀಡಿತು. ಹಜರತ್ ತವಕಲ್‌ ಮಸ್ತಾನ್ ಷಾನಲ್ಲಿ ಕರಗದ ಆಗಮನಕ್ಕಾಗಿ ಸಕಲ‌ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ವಿದ್ಯುತ್ ದೀಪಗಳಿಂದ ಕಂಗೊಳಿಸಿತು. ದರ್ಗದಲ್ಲಿ ಕರಗಕ್ಕೆ ‌ಪೂಜೆ ಸಲ್ಲಿಸಲಾಗಿದ್ದು, ನಂತರ ದರ್ಗಾವನ್ನು ಪ್ರದಕ್ಷಿಣೆ ಮಾಡಿ ಅಣ್ಣಮ್ಮ ದೇವಸ್ಥಾನದತ್ತ ತೆರಳಿತು.

VISTARANEWS.COM


on

bengaluru karaga in darga
Koo

ಬೆಂಗಳೂರು: ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವ (Bengaluru karaga Festival) ಮಂಗಳವಾರ ರಾತ್ರಿ ಅದ್ಧೂರಿಯಾಗಿ ನೆರವೇರಿತು. ನಗರ್ತಪೇಟೆಯಲ್ಲಿ ಧರ್ಮರಾಯಸ್ವಾಮಿ (Dharmaraya swamy) ರಥೋತ್ಸವ ಬಳಿಕ ರಾತ್ರಿ 2 ಗಂಟೆಗೆ ಕರಗ ಶಕ್ತ್ಸೋತ್ಸವಕ್ಕೆ (Bangalore Karaga) ಚಾಲನೆ ನೀಡಲಾಯಿತು. ಮುಂಜಾನೆ ಹಾಜಿ ಮಸ್ತಾನ್‌ ಸಾಬ್‌ ದರ್ಗಾಗೂ (Haji Mastan Saab Darga) ಭೇಟಿ ಕೊಟ್ಟು 5.45ರ ವೇಳೆಗೆ ಧರ್ಮರಾಯ ಸ್ವಾಮಿ ದೇವಸ್ಥಾನದೊಳಗೆ ಕರಗ ಸೇರಿಕೊಂಡಿತು. ವೈಭವದ ಕರಗ ಕಣ್ತುಂಬಿಕೊಳ್ಳಲು ವಿವಿಧೆಡೆಯಿಂದ ಲಕ್ಷಾಂತರ ಜನರು ಆಗಮಿಸಿದ್ದರು.

ನಿನ್ನೆ ರಾತ್ರಿ ಧರ್ಮರಾಯ ಸ್ವಾಮಿ ದೇವಾಲಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂಸದ ತೇಜಸ್ವಿ ಸೂರ್ಯ, ಶಾಸಕ ಹ್ಯಾರಿಸ್‌, ಕಾಂಗ್ರೆಸ್‌ ಅಭ್ಯರ್ಥಿ ಸೌಮ್ಯ ರೆಡ್ಡಿ ಮುಂತಾದವರು ಭೇಟಿ ನೀಡಿದರು. ಬೆಳಗ್ಗೆಯಿಂದಲೇ ತಾಯಿಗೆ ಬಳೆ ಶಾಸ್ತ್ರ, ತಾಳಿ ಶಾಸ್ತ್ರ, ಹೂ ಶಾಸ್ತ್ರ ವಿಶೇಷ ಪೂಜೆ ಸಲ್ಲಿಸಲಾಯಿತು. ಮಂಗಳವಾರ ರಾತ್ರಿ 10.30ಕ್ಕೆ ಕಲ್ಯಾಣಿಗೆ ಹೋಗಿ ಪೂಜೆ ಸಲ್ಲಿಸಲಾಯಿತು. ಅಲ್ಲಿಂದ ವಾಪಸ್ ಬಂದು ಧರ್ಮರಾಯ ದೇವಸ್ಥಾನದಲ್ಲಿ ಪೂಜೆ ಮಾಡಲಾಯಿತು. ರಥೋತ್ಸವದ ಬಳಿಕ ಭಕ್ತರ ಗೋವಿಂದ… ಗೋವಿಂದ… ಎಂಬ ಘೋಷಣೆಗಳ ನಡುವೆ ಅರ್ಚಕ ಜ್ಞಾನೇಂದ್ರ ಅವರು ಕರಗ ಹೊತ್ತು ಸಾಗಿದರು.

ಮುಖ್ಯ ರಥ ಧರ್ಮರಾಯಸ್ವಾಮಿ ರಥದಲ್ಲಿ ಅರ್ಜುನ‌ ಮತ್ತು ದ್ರೌಪದಿ ದೇವಿ ವಿರಾಜಮಾನರಾಗಿದ್ದರು. ಚಿಕ್ಕ ರಥದಲ್ಲಿ ಗ್ರಾಮದೇವಿ ಮುತ್ಯಾಲಮ್ಮ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿತ್ತು. ಪಾಂಡವರ ಮೂರ್ತಿಗಳು ಸೇರಿ ಒಟ್ಟು ಒಂಬತ್ತು ಮೂರ್ತಿಗಳಿಗೆ ವೀರಕುಮಾರರಿಂದ ಪೂಜೆ ಸಲ್ಲಿಸಿದ ಬಳಿಕ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ರಥಗಳು ಮುಂದೆ ಸಾಗುತ್ತಿದ್ದಂತೆ ದೇಗುಲದಿಂದ ದ್ರೌಪದಿ ದೇವಿ ಕರಗ ಹೊರಬಂದಿತು.

ಕರಗ ಸಾಗುವ ರಾಜಬೀದಿಗಳೆಲ್ಲಾ ಬಣ್ಣ ಬಣ್ಣದ ಲೈಟಿಂಗ್‌ ಹಾಗೂ ಜನರಿಂದ ಕಂಗೊಳಿಸಿದವು. ಸಾಂಪ್ರದಾಯಿಕವಾಗಿ ಎ. ಜ್ಞಾನೇಂದ್ರ 14ನೇ ಬಾರಿ ಕರಗ ಹೊತ್ತರು. ಒಂದು ರಥದಲ್ಲಿ ಮುತ್ಯಾಲಮ್ಮ ಮೂರ್ತಿ ಪ್ರತಿಷ್ಠಾಪನೆಯಾಗಿದ್ದು, ಪಾಂಡವರ ಮೂರ್ತಿಗಳು ಸೇರಿದಂತೆ ಒಟ್ಟು ಒಂಬತ್ತು ಮೂರ್ತಿಗಳಿಗೆ ವೀರಕುಮಾರರಿಂದ ಪೂಜೆ ಸಂದಿತು. ಪೂಜೆ ನಂತರ ಮತ್ತೊಂದು ರಥದಲ್ಲಿ ದ್ರೌಪದಿ ಮತ್ತು ಅರ್ಜುನ ಮೂರ್ತಿ ಪ್ರತಿಷ್ಠಾಪನೆಯಾಯಿತು. ನಂತರ ರಥಗಳ ಮೆರವಣಿಗೆ ಆರಂಭವಾಯಿತು. ಖಡ್ಗಗಳನ್ನು ಹಿಡಿದು ನೂರಾರು ವೀರಕುಮಾರರು ಮೆರವಣಿಗೆಯಲ್ಲಿ ತೆರಳಿದರು. ರಥಗಳು ಮುಂದೆ ಸಾಗುತ್ತಿದ್ದಂತೆ ದ್ರೌಪದಿ ದೇವಿ ಕರಗ ದೇಗುಲದಿಂದ ಹೊರ ಬಂದಿದ್ದು, ಅದನ್ನು ಕಂಡು ಭಕ್ತರು ಹರ್ಷೋದ್ಗಾರ ಮಾಡಿದರು.

ಸಂಪ್ರದಾಯದಂತೆ ಹಜರತ್ ತವಕಲ್ ಮಸ್ತಾನ್ ಷಾ ದರ್ಗಕ್ಕೆ ಕರಗ ಭೇಟಿ ನೀಡಿತು. ಹಜರತ್ ತವಕಲ್‌ ಮಸ್ತಾನ್ ಷಾನಲ್ಲಿ ಕರಗದ ಆಗಮನಕ್ಕಾಗಿ ಸಕಲ‌ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ವಿದ್ಯುತ್ ದೀಪಗಳಿಂದ ಕಂಗೊಳಿಸಿತು. ದರ್ಗದಲ್ಲಿ ಕರಗಕ್ಕೆ ‌ಪೂಜೆ ಸಲ್ಲಿಸಲಾಗಿದ್ದು, ನಂತರ ದರ್ಗಾವನ್ನು ಪ್ರದಕ್ಷಿಣೆ ಮಾಡಿ ಅಣ್ಣಮ್ಮ ದೇವಸ್ಥಾನದತ್ತ ತೆರಳಿತು. ಒಟ್ಟು 11-12 ಕಿಲೋಮೀಟರ್ ಕರಗದ ಮೆರವಣಿಗೆ ಸಾಗಿದೆ.

ಕರಗ ಮೆರವಣಿಗೆ ಮಾರ್ಗ

ರಥೋತ್ಸವದ ನಂತರ ಮಧ್ಯರಾತ್ರಿ 1 ಗಂಟೆಯಿಂದ ಕರಗ ಮಹೋತ್ಸವದ ಮೆರವಣಿಗೆ ಸಾಗಿತು. ನಗರ್ತಪೇಟೆಯ ಧರ್ಮರಾಯಸ್ವಾಮಿ ದೇವಸ್ಥಾನದಿಂದ ಕರಗ ಮೆರವಣಿಗೆ ಆರಂಭವಾಗಿ ಕಬ್ಬನ್​ಪೇಟೆ, ಗಾಣಿಗರಪೇಟೆ, ಅವೆನ್ಯೂ ರಸ್ತೆ ಮೂಲಕ ಸಾಗಿ ನಂತರ ಕೆ.ಆರ್. ರಸ್ತೆಯಲ್ಲಿರುವ ಕೋಟೆ ಆಂಜನೇಯ ದೇಗುಲಕ್ಕೆ ತೆರಳಿತು. ಬಳಿಕ ಸಿಟಿ ಮಾರ್ಕೆಟ್ ಪೊಲೀಸ್ ಠಾಣೆ ರಸ್ತೆಯ ರಾಣಾಸಿಂಗ್​ಪೇಟೆ, ಅಕ್ಕಿಪೇಟೆ, ಅರಳಿಪೇಟೆ, ಒಟಿಸಿ ರಸ್ತೆ, ಮಸ್ತಾನ್ ಸಾಹೇಬ್ ದರ್ಗಾ, ಬಳೆಪೇಟೆ ಮುಖ್ಯ ರಸ್ತೆ, ಕೆ.ಜಿ.ರಸ್ತೆ, ಎಸ್​ಪಿ ರಸ್ತೆ ಮೂಲಕ ಸಾಗಿ ಅಣ್ಣಮ್ಮ ದೇಗುಲಕ್ಕೆ ಬಂದು ಅದೇ ಮಾರ್ಗದಲ್ಲಿ ವಾಪಸಾಯಿತು. ಬೆಳಗ್ಗೆ 5.45 ಗಂಟೆಗೆ ಧರ್ಮರಾಯಸ್ವಾಮಿ ದೇವಾಲಯ ಸೇರಿತು. ಬೆಳಗ್ಗೆ 8 ಗಂಟೆಗೆ ತಾಯಿಗೆ ವಿಶೇಷ ಪೂಜೆ ಸಲ್ಲಿಸುವುದರೊಂದಿಗೆ ಕರಗಕ್ಕೆ ತೆರೆ ಬೀಳಲಿದೆ.

ಇದನ್ನೂ ಓದಿ | Bengaluru Karaga 2024: ಬೆಂಗಳೂರು ಕರಗ ಶಕ್ತ್ಸೋತ್ಸವಕ್ಕೆ ಕೌಂಟ್‌ ಡೌನ್‌; 8 ಲಕ್ಷ ಜನ ಭಾಗಿ!

Continue Reading
Advertisement
Prajwal Revanna Case Who is behind pen drive mastermind Karthik HD Kumaraswamy Question
ರಾಜಕೀಯ4 mins ago

Prajwal Revanna Case: ಪೆನ್‌ಡ್ರೈವ್‌ ಸೂತ್ರಧಾರಿ ಕಾರ್ತಿಕ್‌ ಹಿಂದೆ ಯಾರಿದ್ದಾರೆ? ಎಲ್ಲಿದ್ದಾನೆ? ಅವನನ್ನೇಕೆ ಹಿಡಿಯಲಿಲ್ಲ? ಎಚ್‌ಡಿಕೆ ಪ್ರಶ್ನೆ

Lok Sabha election 2024
ದೇಶ12 mins ago

Lok Sabha Election 2024: ನಟ ಶೇಖರ್‌ ಸುಮನ್‌, ಕಾಂಗ್ರೆಸ್‌ ನಾಯಕಿ ರಾಧಿಕಾ ಖೇರಾ ಬಿಜೆಪಿ ಸೇರ್ಪಡೆ

Prajwal Revanna Case Kumaraswamy demands DK Shivakumar dismissal behind pen drive conspiracy
ರಾಜಕೀಯ28 mins ago

Prajwal Revanna Case: ಪೆನ್‌ಡ್ರೈವ್‌ ಸಂಚಿನ ಹಿಂದಿರುವ ಡಿ.ಕೆ. ಶಿವಕುಮಾರ್‌ ವಜಾಗೆ ಕುಮಾರಸ್ವಾಮಿ ಆಗ್ರಹ

T20 World Cup 2024
ಕ್ರೀಡೆ40 mins ago

T20 World Cup 2024: ಟಿ20 ವಿಶ್ವಕಪ್​ಗೆ ಪ್ರಕಟಗೊಂಡ ಎಲ್ಲ ತಂಡಗಳ ಆಟಗಾರರ ಪಟ್ಟಿ

Theft Case In Bengaluru
ಬೆಂಗಳೂರು43 mins ago

Theft Case : ಹಬ್ಬಕ್ಕೆ ಊರಿಗೆ ಹೋದ ಅಕ್ಕನ ಮನೆಗೆ ಕನ್ನ; ಸಾಕ್ಷಿ ನಾಶಕ್ಕೆ ಖಾರದ ಪುಡಿ ಚೆಲ್ಲಿದ ತಂಗಿ!

Sunita Williams
ತಂತ್ರಜ್ಞಾನ51 mins ago

Sunita Williams: ಸುನೀತಾ ವಿಲಿಯಮ್ಸ್‌ ಮೂರನೇ ಬಾಹ್ಯಾಕಾಶ ಯಾತ್ರೆ ಮುಂದೂಡಿಕೆ; ಹೊಸ ದಿನಾಂಕ ಶೀಘ್ರ ಘೋಷಣೆ

Money Guide
ಮನಿ ಗೈಡ್58 mins ago

Money Guide: ಮಹಿಳಾ ಸಮ್ಮಾನ್‌ ಸರ್ಟಿಫಿಕೆಟ್‌ ಮತ್ತು ಸುಕನ್ಯಾ ಸಮೃದ್ಧಿ; ಇವುಗಳ ಪ್ರಯೋಜನ ಏನೇನು?

Prajwal Revanna Case HD Revanna gets bail today court asked if there was a chance Hearing adjourned till tomorrow
ಕ್ರೈಂ60 mins ago

Prajwal Revanna Case: ಎಚ್‌.ಡಿ. ರೇವಣ್ಣಗೆ ಇಂದು ಸಿಗದ ಜಾಮೀನು; ಅವಕಾಶ ಇದೆಯೇ ಎಂದು ಕೋರ್ಟ್‌ ಪ್ರಶ್ನೆ; ನಾಳೆಗೆ ವಿಚಾರಣೆ ಮುಂದೂಡಿಕೆ

Rahul Gandhi
ದೇಶ1 hour ago

Rahul Gandhi: ಮೇಲ್ವರ್ಗದವರಿಂದಾಗಿ ಪರೀಕ್ಷೆಗಳಲ್ಲಿ ದಲಿತರು ಫೇಲ್‌; ರಾಹುಲ್‌ ಗಾಂಧಿ ಹೊಸ ವಿವಾದ

5 Day Work in Banks
ವಾಣಿಜ್ಯ1 hour ago

5 Days Work in Banks: ಬ್ಯಾಂಕ್‌ಗಳು ವಾರದಲ್ಲಿ ಐದೇ ದಿನ ಓಪನ್‌ ಇರಲಿವೆ; ಪರ್ಯಾಯ ವ್ಯವಸ್ಥೆಗೆ ಸಜ್ಜಾಗಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ19 hours ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ20 hours ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ20 hours ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ2 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ2 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ2 days ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ3 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ4 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

ಟ್ರೆಂಡಿಂಗ್‌