ಶಿಂಜೊ ಅಬೆ ಸಾವು ಸಂಭ್ರಮಿಸಿದ ಚೀನಾ ಪ್ರಜೆಗಳು; ಈಗಿನ ಪ್ರಧಾನಿ ಸರದಿ ಯಾವಾಗ ಎಂಬ ಪ್ರಶ್ನೆ - Vistara News

ವಿದೇಶ

ಶಿಂಜೊ ಅಬೆ ಸಾವು ಸಂಭ್ರಮಿಸಿದ ಚೀನಾ ಪ್ರಜೆಗಳು; ಈಗಿನ ಪ್ರಧಾನಿ ಸರದಿ ಯಾವಾಗ ಎಂಬ ಪ್ರಶ್ನೆ

ವಿವಿಧ ದೇಶಗಳ ನಾಯಕರೆಲ್ಲ ಶಿಂಜೊ ಅಬೆ ನಿಧನಕ್ಕೆ ಸಂತಾಪ ಸೂಚಿಸುತ್ತಿದ್ದಾರೆ. ಆದರೆ ಚೀನಾದ ಸೋಷಿಯಲ್‌ ಮೀಡಿಯಾ ಆ್ಯಪ್‌ ವೈಬೋದಲ್ಲಿ ಅಬೆ ಸಾವಿನ ಬಗ್ಗೆ ಖುಷಿಯಿಂದ ಕಮೆಂಟ್‌ ಹಾಕಲಾಗುತ್ತಿದೆ.

VISTARANEWS.COM


on

Shinzo Abe death
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಟೋಕಿಯೋ: ಜಪಾನ್‌ ಮಾಜಿ ಪ್ರಧಾನಮಂತ್ರಿ ಶಿಂಜೊ ಅಬೆ ನಿಧನ ಇಡೀ ಜಗತ್ತಿನ ಪಾಲಿಗೆ ಆಘಾತಕಾರಿ. ಜಪಾನ್‌ ಪ್ರಧಾನಿಯಾಗಿ ಸುದೀರ್ಘ ಅವಧಿ ಆಡಳಿತ ನಡೆಸಿದವರೊಬ್ಬರು ಹೀಗೆ ರಸ್ತೆಯಲ್ಲಿ, ಬಿಗಿ ಭದ್ರತೆ ಇದ್ದಾಗ್ಯೂ ಗುಂಡೇಟು ತಿಂದು ಸಾಯುತ್ತಾರೆ ಎಂದರೆ ಅದು ಗಂಭೀರ ವಿಷಯವೇ ಹೌದು. ವಿವಿಧ ದೇಶಗಳ ನಾಯಕರೆಲ್ಲ ಅಬೆ ನಿಧನಕ್ಕೆ ಸಂತಾಪ ಸೂಚಿಸುತ್ತಿದ್ದಾರೆ. ಆದರೆ ಚೀನಾ ದೇಶದ ಹಲವು ನಾಗರಿಕರು ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಅಬೆಯನ್ನು ಕೊಂದವನನ್ನು ಹೀರೋ ಎಂದು ಹೊಗಳಿ, ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಹಾಕುತ್ತಿದ್ದಾರೆ.

ವೈಬೋ ಎನ್ನುವ, ಚೀನಾ ಮೂಲದ ಸಾಮಾಜಿಕ ಜಾಲತಾಣವೊಂದು ಇದೆ. ಟ್ವಿಟರ್‌ ಮಾದರಿಯಲ್ಲೇ ಇದು ಕಾರ್ಯನಿರ್ವಹಿಸುತ್ತದೆ. ಅದರಲ್ಲೀಗ ಚೀನಾದ ಪ್ರಜೆಗಳು ಅಬೆ ಸಾವನ್ನು ಸಂಭ್ರಮಿಸುತ್ತಿದ್ದಾರೆ. ಬೆಳಗ್ಗೆ ಶಿಂಜೊ ಅಬೆ ಮೇಲೆ ಗುಂಡಿನ ದಾಳಿ ನಡೆಯುತ್ತಿದ್ದಂತೆ, ವೈಬೋದಲ್ಲಿ ಚೀನಾ ದೇಶದ ಹಲವರು ಅಬೆ ಸಾಯಲಿ ಎಂದೇ ಪೋಸ್ಟ್‌ ಹಾಕಿದ್ದರು. ಹಾಗೇ, ಚಿಕಿತ್ಸೆ ಫಲಿಸದೆ ಅವರು ಮೃತಪಡುತ್ತಿದ್ದಂತೆ ಅದನ್ನೂ ಸಂಭ್ರಮಿಸಿದ್ದಾರೆ.

ಅಬೆ ಸಾವನ್ನು ಚೀನಾ ನಾಗರಿಕರು ಹೇಗೆಲ್ಲ ಸಂಭ್ರಮಿಸುತ್ತಿದ್ದಾರೆ. ಅವರ ಸಾವನ್ನು ಬಯಸಿ ಏನೆಲ್ಲ ಕಮೆಂಟ್‌ ಮಾಡಿದ್ದರು ಎಂಬುದರ ಸ್ಕ್ರೀನ್‌ ಶಾಟ್‌ಗಳನ್ನು ಆಸ್ಟ್ರೇಲಿಯಾ ಮೂಲದ ಚೀನಾದ ರಾಜಕೀಯ ವ್ಯಂಗ್ಯಚಿತ್ರಕಾರ, ಕಲಾವಿದ, ಹಕ್ಕುಗಳ ರಕ್ಷಣಾ ಹೋರಾಟಗಾರ ಬಾಡಿಯುಸಾ (Badiucao) ಎಂಬುವರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಆ ಸ್ಕ್ರೀನ್‌ ಶಾಟ್‌ನಲ್ಲಿ ಚೈನೀಸ್‌ ಭಾಷೆಯನ್ನು ನೀವು ನೋಡಬಹುದು. ಅನೇಕರು ಜಪಾನ್‌ನ ಈಗಿನ ಪ್ರಧಾನಿಯೂ ಸಾಯಬೇಕು ಎಂದು ಹೇಳಿದ್ದಾರೆ. ಉತ್ತರ ಕೊರಿಯಾ ಸರ್ವಾಧಿಕಾರಿಯೂ ಸತ್ತು ಹೋಗಲಿ ಎಂದು ಶಪಿಸಿದವರೂ ಇದ್ದಾರೆ.

ಇನ್ನು ಚೀನಾ ಸರ್ಕಾರ ಜಪಾನ್‌ ಮಾಜಿ ಪ್ರಧಾನಿ ಸಾವಿಗೆ ಸಂತಾಪ ಸೂಚಿಸಿದೆ. ಶಿಂಜೊ ಅಬೆ ಸಾವು ಆಘಾತ ಉಂಟು ಮಾಡಿದೆ. ಅವರ ಸಾವಿಗೆ ಸಂತಾಪ ಸೂಚಿಸುತ್ತೇವೆ. ಶಿಂಜೊ ಅಬೆ ಕುಟುಂಬಕ್ಕೆ ಈ ನೋವು ಸಹಿಸುವ ಶಕ್ತಿ ಸಿಗಲಿ ಎಂದು ಚೀನಾ ವಿದೇಶಾಂಗ ಇಲಾಖೆ ವಕ್ತಾರರು ಪ್ರಕಟಣೆ ಹೊರಡಿಸಿದ್ದಾರೆ.

ಇದನ್ನೂ ಓದಿ: ಗುಂಡೇಟಿನಿಂದ ಗಾಯಗೊಂಡಿದ್ದ ಜಪಾನ್‌ ಮಾಜಿ ಪ್ರಧಾನಿ ಶಿಂಜೊ ಅಬೆ ನಿಧನ; ಪಿಎಂ ಮೋದಿ ಸಂತಾಪ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Ebrahim Raisi: ಇಬ್ರಾಹಿಂ ರೈಸಿ ನಿಧನದಿಂದ ಭಾರತದಲ್ಲಿ ಚಿನ್ನ, ಪೆಟ್ರೋಲ್‌ ಬೆಲೆ ಏರಿಕೆ? ಹೀಗಿದೆ ವಿಶ್ವ ಮಾರುಕಟ್ಟೆ ಸ್ಥಿತಿ-ಗತಿ

Ebrahim Raisi: ಇಬ್ರಾಹಿಂ ರೈಸಿ ಅವರ ನಿಧನದ ಹಿನ್ನೆಲೆಯಲ್ಲಿ ಜಾಗತಿಕ ತೈಲ ಮಾರುಕಟ್ಟೆಯಲ್ಲಂತೂ ಹೆಚ್ಚಿನ ಆತಂಕ ಎದುರಾಗಿದೆ. ಜಾಗತಿಕ ರಾಜಕೀಯ ಹಾಗೂ ಹಣಕಾಸು ಸ್ಥಿತಿಯ ಮೇಲೆ ಇಬ್ರಾಹಿಂ ರೈಸಿ ಸಾವು ಪರಿಣಾಮ ಬೀರಿದೆ. ಇಬ್ರಾಹಿಂ ರೈಸಿ ನಿಧನದಿಂದಾಗಿ ಪ್ರಮುಖ ತೈಲೋತ್ಪಾದಿತ ದೇಶಗಳ ರಾಜಕೀಯ ವ್ಯವಸ್ಥೆ ಮೇಲೆ ಪರಿಣಾಮ ಬೀರುತ್ತಿದೆ. ಇದರಿಂದಾಗಿ ಭಾರತದಲ್ಲೂ ಬೆಲೆಯೇರಿಕೆ ನಿಶ್ಚಿತ ಎಂದು ಹೇಳಲಾಗುತ್ತಿದೆ.

VISTARANEWS.COM


on

Ebrahim Raisi
Koo

ಟೆಹ್ರಾನ್:‌ ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಭಾನುವಾರ (ಮೇ 19) ಅಜರ್‌ಬೈಜಾನ್‌ನ (Azerbaijan) ಗುಡ್ಡಗಾಡು ಪ್ರದೇಶದಲ್ಲಿ ನಡೆದ ಹೆಲಿಕಾಪ್ಟರ್‌ ದುರಂತದಲ್ಲಿ ಮೃತಪಟ್ಟಿದ್ದಾರೆ. ಹಂಗಾಮಿ ಅಧ್ಯಕ್ಷರನ್ನಾಗಿ ಮೊಹಮ್ಮದ್‌ ಮೊಖ್‌ಬೈರ್‌ (Mohammad Mokhber) ಅವರನ್ನು ನೇಮಿಸಲಾಗಿದೆ. ಇಬ್ರಾಹಿಂ ರೈಸಿ (Ebrahim Raisi) ನಿಧನದ ಹಿನ್ನೆಲೆಯಲ್ಲಿ ಇರಾನ್‌ನಲ್ಲಿ 5 ದಿನ ಶೋಕಾಚರಣೆ ಘೋಷಿಸಲಾಗಿದೆ. ಭಾರತದಲ್ಲೂ ಒಂದು ದಿನ ಶೋಕಾರಣೆ ಘೋಷಿಸಲಾಗಿದೆ. ಇಬ್ರಾಹಿಂ ರೈಸಿ ನಿಧನದ ಬೆನ್ನಲ್ಲೇ, ಜಾಗತಿಕ ಮಾರುಕಟ್ಟೆಯಲ್ಲಿ ತಲ್ಲಣ ಸೃಷ್ಟಿಯಾಗಿದೆ. ಹೌದು, ಇರಾನ್‌ ಅಧ್ಯಕ್ಷರ ನಿಧನದ ಹಿನ್ನೆಲೆಯಲ್ಲಿ ಜಾಗತಿಕವಾಗಿ ಬಂಗಾರದ ಬೆಲೆ ಜಾಸ್ತಿಯಾಗಿದೆ. ಕೆಲವೇ ದಿನಗಳಲ್ಲಿ ತೈಲ ಹಾಗೂ ಷೇರು ಮಾರುಕಟ್ಟೆ ಮೇಲೆಯೂ ಇದರ ಪರಿಣಾಮ ಆಗಲಿದೆ ಎಂದು ಹೇಳಲಾಗುತ್ತಿದೆ. ಇದು ಭಾರತದ ಮೇಲೂ ಪರಿಣಾಮ ಬೀರಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

ಚಿನ್ನದ ಬೆಲೆ ಶೇ.1ರಷ್ಟು ಏರಿಕೆ

ಇಬ್ರಾಹಿಂ ರೈಸಿ ನಿಧನದ ಬೆನ್ನಲ್ಲೇ ಚಿನ್ನದ ಬೆಲೆಯು ಶೇ.1ರಷ್ಟು ಏರಿಕೆಯಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಒಂದು ಔನ್ಸ್‌ಗೆ (Ounce) (ಒಂದು ಔನ್ಸ್‌ ಎಂದರೆ 28.3 ಗ್ರಾಂ) 2,438.44 ಡಾಲರ್‌ ಆಗಿದೆ. ಬೆಳ್ಳಿಯ ಬೆಲೆಯೂ ಕಳೆದ 11 ವರ್ಷದಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಾಗತಿಕವಾಗಿ ಚಿನ್ನದ ಮಾರುಕಟ್ಟೆಯಲ್ಲಿ ಬೆಲೆ ಜಾಸ್ತಿಯಾದರೆ, ಖಂಡಿತವಾಗಿಯೂ ಭಾರತದಲ್ಲಿ ಚಿನ್ನದ ಬೆಲೆಯೇರಿಕೆ ಆಗಲಿದೆ. ಈಗಾಗಲೇ ಭಾರತದಲ್ಲಿ ಚಿನ್ನದ ಬೆಲೆಯು ಗಗನಕ್ಕೇರಿದ್ದು, ಈಗ ಮತ್ತಷ್ಟು ಏರಿಕೆಯಾಗುವ ಭೀತಿ ಉಂಟಾಗಿದೆ.

ತೈಲ ಮಾರುಕಟ್ಟೆ ಗತಿ ಏನು?

ಇಬ್ರಾಹಿಂ ರೈಸಿ ಅವರ ನಿಧನದ ಹಿನ್ನೆಲೆಯಲ್ಲಿ ಜಾಗತಿಕ ತೈಲ ಮಾರುಕಟ್ಟೆಯಲ್ಲಂತೂ ಹೆಚ್ಚಿನ ಆತಂಕ ಎದುರಾಗಿದೆ. ಜಾಗತಿಕ ರಾಜಕೀಯ ಹಾಗೂ ಹಣಕಾಸು ಸ್ಥಿತಿಯ ಮೇಲೆ ಇಬ್ರಾಹಿಂ ರೈಸಿ ಸಾವು ಪರಿಣಾಮ ಬೀರಿದೆ. ಇಬ್ರಾಹಿಂ ರೈಸಿ ನಿಧನದಿಂದಾಗಿ ಪ್ರಮುಖ ತೈಲೋತ್ಪಾದಿತ ದೇಶಗಳ ರಾಜಕೀಯ ವ್ಯವಸ್ಥೆ ಮೇಲೆ ಪರಿಣಾಮ ಬೀರುತ್ತಿದೆ. ಸೌದಿ ಅರೇಬಿಯಾ ದೊರೆಯು ಜಪಾನ್‌ ಪ್ರವಾಸವನ್ನು ರದ್ದುಗೊಳಿಸಿದ್ದಾರೆ. ಇರಾನ್‌ನಲ್ಲಿಯೂ ಅಧ್ಯಕ್ಷರ ಬದಲಾವಣೆಯಿಂದಾಗಿ ತೈಲದ ಉತ್ಪಾದನೆ ಕುಸಿಯುವ ಸಾಧ್ಯತೆ ಇದೆ.

crude oil

ಹೀಗೆ, ತೈಲ ಉತ್ಪಾದಿಸುವ ದೇಶಗಳಲ್ಲಿ ರಾಜಕೀಯ ಸ್ಥಿತ್ಯಂತರಗಳ ಬದಲಾವಣೆಯಿಂದಾಗಿ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ತೈಲದ ಬೆಲೆಯು ಏರಿಕೆಯಾಗಲಿದೆ. ಇನ್ನು ಉತ್ಪಾದನೆ ಕಡಿಮೆಯಾಗಿ, ಬೇಡಿಕೆ ಜಾಸ್ತಿಯಾದರೆ ಕಚ್ಚಾತೈಲದ ಬೆಲೆಯು ಗಗನಕ್ಕೇರಲಿದೆ. ಇದರಿಂದ ಸಹಜವಾಗಿಯೇ ಭಾರತದಲ್ಲಿ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯು ಇನ್ನಷ್ಟು ಏರಿಕೆಯಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಚಿನ್ನ, ಇಂಧನದ ಜತೆಗೆ ಷೇರು ಮಾರುಕಟ್ಟೆ ಮೇಲೂ ಪರಿಣಾಮ ಬೀರಲಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: Ebrahim Raisi: ಹೆಲಿಕಾಪ್ಟರ್‌ ದುರಂತಕ್ಕೂ ಮುಂಚಿನ ಇಬ್ರಾಹಿಂ ರೈಸಿ ವಿಡಿಯೋ ವೈರಲ್‌

Continue Reading

ವಿದೇಶ

Air Crashes: ವಿಮಾನ ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟ 10 ಪ್ರಭಾವಿ ರಾಜಕಾರಣಿಗಳಿವರು

ಇರಾನ್ ಅಧ್ಯಕ್ಷರ ಸಾವು ವಿಶ್ವದಲ್ಲೇ ರಾಜಕೀಯ ನಾಯಕರ ಸುರಕ್ಷತೆಯ ಬಗ್ಗೆ ಮತ್ತೊಮ್ಮೆ ಪ್ರಶ್ನೆ ಮಾಡುವಂತೆ ಮಾಡಿದೆ. ವಿಮಾನ, ಹೆಲಿಕಾಪ್ಟರ್ ಅಪಘಾತದಲ್ಲಿ (Air Crashes) ರಾಜಕೀಯ ನಾಯಕರ ಸಾವು ಇದೇ ಮೊದಲಲ್ಲ. ವಿಶ್ವದ ಹತ್ತು ಪ್ರಮುಖ ನಾಯಕರು ಈ ರೀತಿಯ ದುರಂತದಲ್ಲಿ ಮೃತಪಟ್ಟಿದ್ದಾರೆ.

VISTARANEWS.COM


on

By

Air Crashes
Koo

ಇರಾನ್ ಅಧ್ಯಕ್ಷ (Iran President) ಇಬ್ರಾಹಿಂ ರೈಸಿ (Ebrahim Raisi) ಅವರು ಭಾನುವಾರ ರಾತ್ರಿ ದೇಶದ ಪರ್ವತ ಪ್ರದೇಶದಲ್ಲಿ ಹೆಲಿಕಾಪ್ಟರ್ ಅಪಘಾತದಲ್ಲಿ (Air Crashes) ಸಾವನ್ನಪ್ಪಿದ್ದಾರೆ. ರೈಸಿ ಅವರ ದಣಿವರಿಯದ ಸ್ಫೂರ್ತಿಯ ಸೇವೆಯ ಮಾರ್ಗದಲ್ಲಿ ಮುಂದುವರಿಯುವುದಾಗಿ ಇರಾನ್‌ ಆಡಳಿತ ರಾಷ್ಟ್ರದ ಜನರಿಗೆ ಭರವಸೆ ನೀಡಿದೆ. ವಿಮಾನ ದುರಂತಗಳಲ್ಲಿ ರಾಜಕೀಯ ನಾಯಕರು ಸಾವನ್ನಪ್ಪಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ಬೇರೆಬೇರೆ ರಾಷ್ಟ್ರಗಳಲ್ಲಿ ಇಂತಹ ಘಟನೆಗಳು ನಡೆದಿವೆ. ಆ ಕುರಿತ ಹಿನ್ನೋಟ ಇಲ್ಲಿದೆ.


ಸ್ವೀಡನ್ ಪ್ರಧಾನಿ ಅರ್ವಿಡ್ ಲಿಂಡ್‌ಮನ್ (1936)

ಸ್ವೀಡನ್‌ನ ಹಿಂದಿನ ಅಡ್ಮಿರಲ್ ಮತ್ತು ಎರಡು ಬಾರಿ ಸ್ವೀಡನ್‌ನ ಪ್ರಧಾನಮಂತ್ರಿ ಆಗಿದ್ದ ಸಾಲೋಮನ್ ಅರ್ವಿಡ್ ಅಚಾಟೆಸ್ ಲಿಂಡ್‌ಮನ್ ಪ್ರಭಾವಿ ಸಂಪ್ರದಾಯವಾದಿ ರಾಜಕಾರಣಿಯಾಗಿದ್ದರು. 1936ರ ಡಿಸೆಂಬರ್ 9ರಂದು ಲಿಂಡ್‌ಮನ್ ಅವರು ಪ್ರಯಾಣಿಸುತ್ತಿದ್ದ ಡಗ್ಲಾಸ್ ಡಿಸಿ-2 ಯುನೈಟೆಡ್ ಕಿಂಗ್‌ಡಂನ ಕ್ರೊಯ್ಡಾನ್ ವಿಮಾನವು ನಿಲ್ದಾಣದ ಬಳಿ ದಟ್ಟವಾದ ಮಂಜಿನಿಂದ ಟೇಕಾಫ್ ಆದ ಸ್ವಲ್ಪ ಸಮಯದ ಅನಂತರ ಮನೆಗಳಿಗೆ ಅಪ್ಪಳಿಸಿದಾಗ ಮೃತಪಟ್ಟರು.

ಫಿಲಿಪೈನ್ಸ್ ಅಧ್ಯಕ್ಷ ರಾಮನ್ ಮ್ಯಾಗ್ಸೆಸೆ (1957)

ಫಿಲಿಪೈನ್ಸ್‌ನ ಏಳನೇ ಅಧ್ಯಕ್ಷ ರಾಮನ್ ಮ್ಯಾಗ್ಸೆಸೆ ಅವರು ತಮ್ಮ ಬಲವಾದ ಭ್ರಷ್ಟಾಚಾರ ವಿರೋಧಿ ನಿಲುವು ಮತ್ತು ಜನಪ್ರಿಯ ಕಾರ್ಯಕ್ಕೆ ಹೆಸರುವಾಸಿಯಾಗಿದ್ದರು. ಅವರ ಅಧ್ಯಕ್ಷತೆಯು 1957ರ ಮಾರ್ಚ್ 17ರಂದು ಥಟ್ಟನೆ ಕೊನೆಗೊಂಡಿತು. “ಮೌಂಟ್ ಪಿನಾಟುಬೊ” ಎಂದು ಕರೆಯಲ್ಪಡುವ ಅವರ ಸಿ-47 ವಿಮಾನವು ಸೆಬು ನಗರದ ಮನುಂಗಲ್ ಪರ್ವತಕ್ಕೆ ಅಪ್ಪಳಿಸಿತು. ಆಗ ಮ್ಯಾಗ್ಸೆಸೆ ಮೃತಪಟ್ಟರು. 25 ಪ್ರಯಾಣಿಕರ ಪೈಕಿ ಒಬ್ಬರು ಮಾತ್ರ ಬದುಕುಳಿದಿದ್ದರು.


ಬ್ರೆಜಿಲ್ ಅಧ್ಯಕ್ಷ ನೆರೆಯು ರಾಮೋಸ್ (1958)

ಬ್ರೆಜಿಲ್‌ನ ಹಂಗಾಮಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ನೆರೆಯು ರಾಮೋಸ್ ಅವರು 1958ರ ಜೂನ್ 16ರಂದು ನಿಧನರಾದರು. ರಾಮೋಸ್ ಅವರು ಕ್ರೂಝೈರೊ ಡೊ ಸುಲ್ ವಿಮಾನದಲ್ಲಿ ಪ್ರಯಾಣಿಸುತ್ತಿದ್ದಾಗ ಪರಾನಾ ರಾಜ್ಯದ ಕುರಿಟಿಬಾ ಅಫೊನ್ಸೊ ಪೆನಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಅಪಘಾತಕ್ಕೀಡಾಗಿ ಮೃತಪಟ್ಟರು.

ಇರಾಕ್ ಅಧ್ಯಕ್ಷ ಅಬ್ದುಲ್ ಸಲಾಂ ಆರಿಫ್ (1966)

ಇರಾಕ್‌ನ ಎರಡನೇ ಅಧ್ಯಕ್ಷರಾದ ಅಬ್ದುಲ್ ಸಲಾಂ ಆರಿಫ್ ರಾಜಪ್ರಭುತ್ವವನ್ನು ಉರುಳಿಸಿದ 1958ರ ಕ್ರಾಂತಿಯಲ್ಲಿ ನಿರ್ಣಾಯಕ ಪಾತ್ರ ವಹಿಸಿದರು. 1966ರ ಏಪ್ರಿಲ್ 13ರಂದು ಆರಿಫ್ ಅವರ ಇರಾಕಿ ಏರ್ ಫೋರ್ಸ್ ವಿಮಾನ, ಡಿ ಹ್ಯಾವಿಲ್ಯಾಂಡ್ ಡಿಹೆಚ್ 104 ಡೋವ್, ಬಸ್ರಾ ಬಳಿ ಅಪಘಾತಕ್ಕೀಡಾದಾಗ ನಿಧನರಾದರು. ಅವರ ಸಹೋದರ ಅಬ್ದುಲ್ ರಹಮಾನ್ ಆರಿಫ್ ಅವರ ಅನಂತರ ಅಧ್ಯಕ್ಷರಾದರು.


ಬ್ರೆಜಿಲ್ ಅಧ್ಯಕ್ಷ ಹಂಬರ್ಟೊ ಡಿ ಅಲೆಂಕಾರ್ ಕ್ಯಾಸ್ಟೆಲೊ ಬ್ರಾಂಕೊ (1967)

ಬ್ರೆಜಿಲ್‌ನ 26ನೇ ಅಧ್ಯಕ್ಷ ಮತ್ತು ಮಾಜಿ ಮಿಲಿಟರಿ ಸರ್ವಾಧಿಕಾರದ ಪ್ರಮುಖ ವ್ಯಕ್ತಿಯಾಗಿದ್ದ ಹಂಬರ್ಟೊ ಡಿ ಅಲೆಂಕಾರ್ ಕ್ಯಾಸ್ಟೆಲೊ ಬ್ರಾಂಕೊ 1967ರ ಜುಲೈ 18ರಂದು ನಿಧನರಾದರು. ಅವರ ಅಧ್ಯಕ್ಷೀಯ ಅವಧಿ ಮುಗಿದ ಸ್ವಲ್ಪ ಸಮಯದ ಅನಂತರ ಕ್ಯಾಸ್ಟೆಲೊ ಬ್ರಾಂಕೋ ಅವರ ಪೈಪರ್ ಪಿಎ -23 ಅಜ್ಟೆಕ್ ವಿಮಾನ ಬ್ರೆಜಿಲಿಯನ್ ವಾಯುಪಡೆ ವಿಮಾನಕ್ಕೆ ಡಿಕ್ಕಿ ಹೊಡೆದು ದುರಂತ ಸಂಭವಿಸಿತು. ಅವರ ಸಾವು ಭಾರಿ ಚರ್ಚೆಗೆ ಕಾರಣವಾಗಿತ್ತು.

ಇಂದಿರಾ ಗಾಂಧಿ ಮಗ ಸಂಜಯ್ ಗಾಂಧಿ (1980)

ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಪುತ್ರ ಸಂಜಯ್ ಗಾಂಧಿ 1980ರ ಜೂನ್ 23ರಂದು ವಿಮಾನ ಅಪಘಾತದಲ್ಲಿ ನಿಧನರಾದರು. ದೆಹಲಿಯ ಸಫ್ದರ್‌ಜಂಗ್ ವಿಮಾನ ನಿಲ್ದಾಣದಲ್ಲಿ ತಾವು ಚಲಾಯಿಸುತ್ತಿದ್ದ ವಿಮಾನದ ನಿಯಂತ್ರಣವನ್ನು ಕಳೆದುಕೊಂಡು ದುರಂತ ಸಾವು ಕಂಡರು.


ಲೆಬನಾನ್ ಪ್ರಧಾನಿ ರಶೀದ್ ಕರಾಮಿ (1987)

ಲೆಬನಾನ್‌ನ ಅತಿ ಹೆಚ್ಚು ಬಾರಿ ಚುನಾಯಿತರಾದ ಪ್ರಧಾನಮಂತ್ರಿ ರಶೀದ್ ಕರಾಮಿ ಅವರು ಲೆಬನಾನಿನ ಅಂತರ್ಯುದ್ಧದ ಸಮಯದಲ್ಲಿ ಪ್ರಮುಖ ವ್ಯಕ್ತಿಯಾಗಿದ್ದರು. 1987ರ ಜೂನ್ 1ರಂದು, ಬೈರುತ್‌ಗೆ ಹೋಗುವ ಮಾರ್ಗದಲ್ಲಿ ಅವರ ಹೆಲಿಕಾಪ್ಟರ್‌ನಲ್ಲಿ ಬಾಂಬ್ ಸ್ಫೋಟಗೊಂಡು ಕರಾಮಿ ಕೊಲ್ಲಲ್ಪಟ್ಟರು.

ಪಾಕಿಸ್ತಾನದ ಅಧ್ಯಕ್ಷ ಮುಹಮ್ಮದ್ ಜಿಯಾ-ಉಲ್-ಹಕ್ (1988)

ಪಾಕಿಸ್ತಾನದ ಆರನೇ ಅಧ್ಯಕ್ಷರಾದ ಜನರಲ್ ಮುಹಮ್ಮದ್ ಜಿಯಾ-ಉಲ್-ಹಕ್ ಅವರು 1988ರ ಆಗಸ್ಟ್ 17ರಂದು ನಿಧನರಾದರು. ಅವರು ಪ್ರಯಾಣಿಸುತ್ತಿದ್ದ ಸಿ-130 ಹರ್ಕ್ಯುಲಸ್ ವಿಮಾನವು ಬಹವಾಲ್‌ಪುರದಿಂದ ಟೇಕಾಫ್ ಆದ ಸ್ವಲ್ಪ ಸಮಯದ ಅನಂತರ ಅಪಘಾತಕ್ಕೀಡಾಯಿತು. ಅಪಘಾತದ ಕಾರಣವು ಇನ್ನೂ ನಿಗೂಢವಾಗಿಯೇ ಉಳಿದಿದೆ.

ಇದನ್ನೂ ಓದಿ: Ebrahim Raisi: ಹೆಲಿಕಾಫ್ಟರ್‌ ಪತನದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮೃತ್ಯು; ವಿಧ್ವಂಸಕ ಕೃತ್ಯವೇ?


ಕಾಂಗ್ರೆಸ್‌ ನಾಯಕ ಮಾಧವರಾವ್ ಸಿಂಧಿಯಾ (2001)

ಮಾಧವರಾವ್ ಸಿಂಧಿಯಾ ಭಾರತದ ಪ್ರಮುಖ ರಾಜಕಾರಣಿ ಮತ್ತು ಕಾಂಗ್ರೆಸ್ ನಾಯಕರಾಗಿದ್ದರು. 2001ರ ಸೆಪ್ಟೆಂಬರ್ 30ರಂದು ವಿಮಾನ ಅಪಘಾತದಲ್ಲಿ ದಾರುಣ ಅಂತ್ಯ ಕಂಡರು. ಉತ್ತರ ಪ್ರದೇಶದ ಮೈನ್‌ಪುರಿ ಬಳಿ ಅವರ ಖಾಸಗಿ ಬೀಚ್‌ಕ್ರಾಫ್ಟ್ ಕಿಂಗ್ ಏರ್ ಸಿ 90 ಗಾಳಿಯಲ್ಲಿ ಬೆಂಕಿ ಹೊತ್ತಿಕೊಂಡು ಅಪಘಾತ ಸಂಭವಿಸಿತ್ತು.

ಚಿಲಿಯ ಅಧ್ಯಕ್ಷ ಸೆಬಾಸ್ಟಿಯನ್ ಪಿನೆರಾ (2024)

ಚಿಲಿಯ ಮಾಜಿ ಅಧ್ಯಕ್ಷರಾದ ಸೆಬಾಸ್ಟಿಯನ್ ಪಿಮೆರಾ ಅವರು ಫೆಬ್ರವರಿ 2024ರಲ್ಲಿ ನಿಧನರಾದರು. ಪಿನೆರಾ ಅವರ ಹೆಲಿಕಾಪ್ಟರ್ ದಕ್ಷಿಣ ಚಿಲಿಯ ಸರೋವರಕ್ಕೆ ಅಪ್ಪಳಿಸಿತು. ಈ ದುರಂತದಲ್ಲಿ ಅವರು ಪ್ರಾಣ ಕಳೆದುಕೊಂಡರು. ಅವರು ಸತತ ಎರಡು ಬಾರಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಆಂಧ್ರಪ್ರದೇಶ ಮುಖ್ಯಮಂತ್ರಿಯಾಗಿದ್ದ ವೈ ಎಸ್‌ ರಾಜಶೇಖರ್‌ ರೆಡ್ಡಿ ಅವರೂ ಹೆಲಿಕಾಪ್ಟರ್‌ ಅಪಘಾತದಲ್ಲಿ ಮೃತಪಟ್ಟಿದ್ದರು.

Continue Reading

ವಿದೇಶ

ಇಸ್ರೇಲ್‌ ಪಿಎಂ ಬೆಂಜಮಿನ್‌ ನೆತನ್ಯಾಹು, ಹಮಾಸ್‌ ಉಗ್ರರಿಗೆ ಜಾಗತಿಕ ಕೋರ್ಟ್‌ ಅರೆಸ್ಟ್‌ ವಾರೆಂಟ್! ಶೀಘ್ರ ಬಂಧನ?

ಕಳೆದ ಏಳು ತಿಂಗಳಲ್ಲಿ ಇಸ್ರೇಲ್‌ ಹಾಗೂ ಪ್ಯಾಲೆಸ್ತೀನ್‌ನಲ್ಲಿ ನಡೆದ ಹಿಂಸಾಚಾರ, ಮಾನವ ಹಕ್ಕುಗಳ ದಮನ, ಪ್ರಾದೇಶಿಕ ಅಸ್ಥಿರತೆಗೆ ಧಕ್ಕೆ ತಂದ ಹಿನ್ನೆಲೆಯಲ್ಲಿ ಬೆಂಜಮಿನ್‌ ನೆತನ್ಯಾಹು ಸೇರಿ ಹಲವರ ವಿರುದ್ಧ ಅರೆಸ್ಟ್‌ ವಾರೆಟ್‌ ಹೊರಡಿಸಬೇಕು ಎಂಬುದಾಗಿ ಐಸಿಸಿ ಆದೇಶಿಸಿದೆ ಎಂದು ಕೋರ್ಟ್‌ನ ಮುಖ್ಯ ಪ್ರಾಸಿಕ್ಯೂಟರ್‌ ಆಗಿರುವ ಕರೀಮ್‌ ಖಾನ್‌ ಮಾಹಿತಿ ನೀಡಿದ್ದಾರೆ.

VISTARANEWS.COM


on

Benjamin Netanyhu
Koo

ಹೇಗ್:‌ ಕಳೆದ ಅಕ್ಟೋಬರ್‌ನಿಂದಲೂ ಗಾಜಾ ನಗರದ ಮೇಲೆ ಇಸ್ರೇಲ್‌ ಪ್ರತಿದಾಳಿ ಮಾಡುತ್ತಿದೆ. ಹಮಾಸ್‌ ಉಗ್ರರ ದಾಳಿಗೆ ಪ್ರತಿಯಾಗಿ ಇಸ್ರೇಲ್‌ ದಾಳಿ ನಡೆಸುತ್ತಿದೆ. ಇದರ ಬೆನ್ನಲ್ಲೇ, ಯುದ್ಧಾಪರಾಧದ ಹಿನ್ನೆಲೆಯಲ್ಲಿ ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು (Benjamin Netanyahu) ಹಾಗೂ ಮೂವರು ಹಮಾಸ್‌ ಉಗ್ರರ ವಿರುದ್ಧ ಇಂಟರ್‌ನ್ಯಾಷನಲ್‌ ಕ್ರಿಮಿನಲ್‌ ಕೋರ್ಟ್‌ (International Criminal Court) ಅರೆಸ್ಟ್‌ ವಾರಂಟ್‌ ಹೊರಡಿಸಲು ಮುಂದಾಗಿದೆ. ಯುದ್ಧಾಪರಾಧದ ಹಿನ್ನೆಲೆಯಲ್ಲಿ ಅರೆಸ್ಟ್‌ ವಾರಂಟ್‌ ಹೊರಡಿಸಲಿದೆ ಎಂದು ಹೇಳಲಾಗುತ್ತಿದೆ.

ಬೆಂಜಮಿನ್‌ ನೆತನ್ಯಾಹು, ಇಸ್ರೇಲ್‌ ರಕ್ಷಣಾ ಸಚಿವ ಯೊಯಾವ್‌ ಗ್ಯಾಲಂಟ್‌, ಹಮಾಸ್‌ ಉಗ್ರ ಸಂಘಟನೆಯ ಯೆಹಿಯಾ ಸಿನ್ವರ್‌, ಮೊಹಮ್ಮದ್‌ ಡೈಫ್‌ ಹಾಗೂ ಇಸ್ಮಾಯಿಲ್‌ ಹನಿಯೇಹ್‌ ವಿರುದ್ಧ ಅರೆಸ್ಟ್‌ ವಾರಂಟ್‌ ಹೊರಡಿಸಬೇಕು ಎಂಬುದು ಜಾಗತಿಕ ಕೋರ್ಟ್‌ನ ಆದೇಶವಾಗಿದೆ. ಕಳೆದ ಏಳು ತಿಂಗಳಲ್ಲಿ ಇಸ್ರೇಲ್‌ ಹಾಗೂ ಪ್ಯಾಲೆಸ್ತೀನ್‌ನಲ್ಲಿ ನಡೆದ ಹಿಂಸಾಚಾರ, ಮಾನವ ಹಕ್ಕುಗಳ ದಮನ, ಪ್ರಾದೇಶಿಕ ಅಸ್ಥಿರತೆಗೆ ಧಕ್ಕೆ ತಂದ ಹಿನ್ನೆಲೆಯಲ್ಲಿ ಇವರ ವಿರುದ್ಧ ಅರೆಸ್ಟ್‌ ವಾರೆಟ್‌ ಹೊರಡಿಸಬೇಕು ಎಂಬುದಾಗಿ ಐಸಿಸಿ ಆದೇಶಿಸಿದೆ ಎಂದು ಕೋರ್ಟ್‌ನ ಮುಖ್ಯ ಪ್ರಾಸಿಕ್ಯೂಟರ್‌ ಆಗಿರುವ ಕರೀಮ್‌ ಖಾನ್‌ ಮಾಹಿತಿ ನೀಡಿದ್ದಾರೆ.

ಕರೀಮ್‌ ಖಾನ್‌ ಅವರು ಅರೆಸ್ಟ್‌ ವಾರಂಟ್‌ ಕುರಿತು ಸಲ್ಲಿಸುವ ದಾಖಲೆಗಳ ಆಧಾರದ ಮೇಲೆ ಅಂತಾರಾಷ್ಟ್ರೀಯ ಕ್ರಿಮಿನಲ್‌ ಕೋರ್ಟ್‌ ನ್ಯಾಯಮೂರ್ತಿಗಳು ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಅರೆಸ್ಟ್‌ ವಾರಂಟ್‌ ಹೊರಡಿಸಿದರೂ ಬೆಂಜಮಿನ್‌ ನೆತನ್ಯಾಹು ಹಾಗೂ ಅವರ ರಕ್ಷಣಾ ಸಚಿವರ ಬಂಧನ ಆಗುವುದಿಲ್ಲ ಎಂದು ತಿಳಿದುಬಂದಿದೆ. ಇಂಟರ್‌ನ್ಯಾಷನಲ್‌ ಕ್ರಿಮಿನಲ್‌ ಕೋರ್ಟ್‌ನ ಸದಸ್ಯತ್ವವನ್ನು ಇಸ್ರೇಲ್‌ ಪಡೆದಿಲ್ಲ. ಹಾಗಾಗಿ, ಕೋರ್ಟ್‌ ಅರೆಸ್ಟ್‌ ವಾರಂಟ್‌ ಹೊರಡಿಸಿದರೂ ಬಂಧನ ಸಾಧ್ಯವಿಲ್ಲ ಎಂದೇ ವಿಶ್ಲೇಷಿಸಲಾಗುತ್ತಿದೆ.

ಅಕ್ಟೋಬರ್ 7ರಂದು ಹಮಾಸ್ ಇಸ್ರೇಲ್ ಮೇಲೆ ದಾಳಿ ನಡೆಸಿ 1,200 ನಾಗರಿಕರ ಸಾವಿಗೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಇಸ್ರೇಲ್, ಗಾಜಾಪಟ್ಟಿಯಲ್ಲಿನ ಹಮಾಸ್ ಉಗ್ರರನ್ನು ನಾಶ ಮಾಡುವ ಪಣತೊಟ್ಟು, ಸೇನಾ ಕಾರ್ಯಾಚರಣೆಯನ್ನು ಕೈಗೆತ್ತಿಕೊಂಡಿದೆ. ಗಾಜಾ ನಗರದ ಮೇಲೆ ಇಸ್ರೇಲ್‌ ನಡೆಸುತ್ತಿರುವ ನಿರಂತರ ದಾಳಿಗಳಿಂದಾಗಿ ಸಾವಿರಾರು ಜನ ಮೃತಪಟ್ಟಿದ್ದಾರೆ. ಲಕ್ಷಾಂತರ ಮಂದಿ ನಿರಾಶ್ರಿತರಾಗಿದ್ದಾರೆ. ಸಾವಿರಾರು ಕಟ್ಟಡಗಳು ಧರೆಗುರುಳಿವೆ. ಇಷ್ಟಾದರೂ ಇಸ್ರೇಲ್‌ ಪ್ರತಿದಾಳಿ ನಿಲ್ಲಿಸುತ್ತಿಲ್ಲ.

ಇದನ್ನೂ ಓದಿ: Al Jazeera: ಹಮಾಸ್‌ ಉಗ್ರರ ಪರ ನಿಲುವು; ಇಸ್ರೇಲ್‌ನಲ್ಲಿ ಅಲ್‌ಜಜೀರಾ ಚಾನೆಲ್‌ ಬಂದ್‌ ಮಾಡಿದ ನೆತನ್ಯಾಹು!

Continue Reading

ದೇಶ

ISIS Terrorists: ಐಪಿಎಲ್‌ ಪಂದ್ಯಕ್ಕೂ ಮೊದಲೇ ಗುಜರಾತ್‌ನಲ್ಲಿ ನಾಲ್ವರು ಐಸಿಸ್‌ ಉಗ್ರರ ಬಂಧನ; ಇವರ ಸಂಚೇನು?

ISIS Terrorists: ಗುಜರಾತ್‌ನ ಅಹಮದಾಬಾದ್‌ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಐಪಿಎಲ್‌ನ ಎಲಿಮಿನೇಟರ್‌ ಹಾಗೂ ಕ್ವಾಲಿಫೈಯರ್‌ ಪಂದ್ಯಗಳು ನಡೆಯುವ ಕೆಲವೇ ಗಂಟೆಗಳ ಮೊದಲೇ ಉಗ್ರರನ್ನು ಬಂಧಿಸಿರುವುದು ಪ್ರಾಮುಖ್ಯತೆ ಪಡೆದಿದೆ.

VISTARANEWS.COM


on

ISIS Terrorists
Koo

ಅಹಮದಾಬಾದ್: ಗುಜರಾತ್‌ ಭಯೋತ್ಪಾದನಾ ನಿಗ್ರಹ ದಳವು (ATS) ಅಹಮದಾಬಾದ್‌ ಏರ್‌ಪೋರ್ಟ್‌ನಲ್ಲಿ ನಾಲ್ವರು ಐಸಿಸ್‌ ಉಗ್ರರನ್ನು (ISIS Terrorists) ಬಂಧಿಸಿದ್ದಾರೆ. ಸರ್ದಾರ್‌ ವಲ್ಲಭಭಾಯಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Ahmedabad Airport) ಎಟಿಸ್‌ ಸಿಬ್ಬಂದಿಯು ಶ್ರೀಲಂಕಾದ ನಾಲ್ವರು ಉಗ್ರರನ್ನು ಬಂಧಿಸಿದ್ದಾರೆ. ನಾಲ್ವರೂ ಉಗ್ರರು ವಿಮಾನ ನಿಲ್ದಾಣದಲ್ಲಿ ತಮ್ಮ ಹ್ಯಾಂಡ್ಲರ್‌ಗಾಗಿ ಕಾಯುತ್ತಿರುವಾಗಲೇ ಅವರನ್ನು ಬಲೆಗೆ ಹಾಕಿದ್ದಾರೆ. ನಾಲ್ವರನ್ನೂ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ನಾಲ್ವರನ್ನೂ ಬಂಧಿಸುತ್ತಲೇ ಅಜ್ಞಾತ ಸ್ಥಳಕ್ಕೆ ಕರೆದೊಯ್ದ ಎಟಿಎಸ್‌ ಸಿಬ್ಬಂದಿಯು ವಿಚಾರಣೆ ನಡೆಸುತ್ತಿದ್ದಾರೆ. ನಾಲ್ವರೂ ಉಗ್ರರು ವಿಮಾನ ನಿಲ್ದಾಣದಲ್ಲಿ ಏನು ಮಾಡುತ್ತಿದ್ದರು? ಅವರು ರೂಪಿಸಿದ ಸಂಚೇನು? ಎಲ್ಲಿಗೆ ಹೋಗುವವರಿದ್ದರು ಎಂಬುದರ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಗುಜರಾತ್‌ನ ಅಹಮದಾಬಾದ್‌ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಐಪಿಎಲ್‌ನ ಎಲಿಮಿನೇಟರ್‌ ಹಾಗೂ ಕ್ವಾಲಿಫೈಯರ್‌ ಪಂದ್ಯಗಳು ನಡೆಯುವ ಕೆಲವೇ ಗಂಟೆಗಳ ಮೊದಲೇ ಉಗ್ರರನ್ನು ಬಂಧಿಸಿರುವುದು ಪ್ರಾಮುಖ್ಯತೆ ಪಡೆದಿದೆ.

ಮೊದಲ ಕ್ವಾಲಿಫೈಯರ್​ ಪಂದ್ಯ ಮಂಗಳವಾರ (ಮೇ 21) ಅಹಮದಾಬಾದ್​ನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಕೆಕೆಆರ್​ ಮತ್ತು ಸನ್​ರೈಸರ್ಸ್​ ಹೈದರಾಬಾದ್​ ಮುಖಾಮುಖಿಯಾಗಲಿವೆ. ಬುಧವಾರ (ಮೇ 22) ನಡೆಯುವ ಎಲಿಮಿನೇಟರ್​ ಪಂದ್ಯದಲ್ಲಿ ಆರ್​ಸಿಬಿ ತಂಡ ರಾಜಸ್ಥಾನ್​ ರಾಯಲ್ಸ್​ ವಿರುದ್ಧ ಆಡಲಿದೆ. ಈ ಪಂದ್ಯವೂ ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿದೆ. ಇದರಿಂದಾಗಿ ಅಹಮದಾಬಾದ್‌ನಲ್ಲಿ ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿದೆ. ಇದರ ಮಧ್ಯೆಯೇ, ಏರ್‌ಪೋರ್ಟ್‌ನಲ್ಲಿ ನಾಲ್ವರು ಉಗ್ರರ ಬಂಧನವಾಗಿದೆ.

ಮೇ 12ರಂದು ಬಾಂಬ್‌ ಬೆದರಿಕೆ

ಮೇ 12ರಂದು ಅಹಮದಾಬಾದ್‌ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಒಡ್ಡಲಾಗಿತ್ತು. ಇ-ಮೇಲ್‌ ಮೂಲಕ ಹುಸಿ ಬಾಂಬ್‌ ಬೆದರಿಕೆ ಒಡ್ಡಲಾಗಿತ್ತು. ಬೆದರಿಕೆಯ ಮೇಲ್‌ ಬರುತ್ತಲೇ ಭದ್ರತಾ ಸಿಬ್ಬಂದಿಯು ವಿಮಾನ ನಿಲ್ದಾಣದಲ್ಲಿ ಪರಿಶೀಲನೆ ನಡೆಸಿತ್ತು. ಇಡೀ ವಿಮಾನ ನಿಲ್ದಾನದಲ್ಲಿ ಅನುಮಾನಾಸ್ಪದ ವ್ಯಕ್ತಿಗಳು, ವಸ್ತುಗಳಿಗಾಗಿ ಇನ್ನಿಲ್ಲದಂತೆ ಪರಿಶೀಲನೆ ನಡೆಸಲಾಗಿತ್ತು. ಹಾಗಾಗಿ, ಉಗ್ರರ ಬಂಧನವು ಮತ್ತಷ್ಟು ಪ್ರಾಮುಖ್ಯತೆ ಪಡೆದಿದೆ.

ಇದನ್ನೂ ಓದಿ: ISIS link: ಐಸಿಸ್‌ ಲಿಂಕ್ ಕೇಸ್‌ನಲ್ಲಿ ಮಾಜಿ ಶಾಸಕ ಇದಿನಬ್ಬ ಮೊಮ್ಮಗನಿಗೆ ದಿಲ್ಲಿ ಹೈಕೋರ್ಟ್‌ ಜಾಮೀನು; ಕೋರ್ಟ್‌ ಕೊಟ್ಟ ಕಾರಣ ನೋಡಿ!

Continue Reading
Advertisement
Postal Ballot
ದೇಶ9 mins ago

Postal Ballot: ಅನಾರೋಗ್ಯದ ಕಾರಣ ಅಂಚೆ ಮತದಾನ ಕೋರಿ 78ರ ಅಜ್ಜಿ ಅರ್ಜಿ; ಬೇಡವೆಂದ ಸುಪ್ರೀಂ!

Model PSI Varsha repaired the road at own expense
ಕರ್ನಾಟಕ10 mins ago

Mysore News: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೊಳಿಸಿ ಮಾದರಿಯಾದ ಪಿಎಸ್‌ಐ

Driving Licence New Rules
ದೇಶ16 mins ago

Driving Licence New Rules: ಡ್ರೈವಿಂಗ್‌ ಲೈಸೆನ್ಸ್‌; ಜೂನ್‌ 1ರಿಂದ ಹೊಸ ರೂಲ್ಸ್‌!

2nd PUC Exam 2 Result tomorrow
ಶಿಕ್ಷಣ18 mins ago

2nd PUC Exam 2 Result: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2ರ ಫಲಿತಾಂಶ ನಾಳೆ; ಸಿಇಟಿ ಫಲಿತಾಂಶ ಯಾವಾಗ?

Compound Wall Collapse
ಕರ್ನಾಟಕ31 mins ago

Compound Wall Collapse: ಹಾಜಬ್ಬರ ಶಾಲೆ ಕಾಂಪೌಂಡ್ ಗೋಡೆ ಕುಸಿದು ವಿದ್ಯಾರ್ಥಿನಿ ದಾರುಣ ಸಾವು

T20 World Cup 2024
ಕ್ರೀಡೆ35 mins ago

T20 World Cup 2024: ಇಂಡೋ-ಪಾಕ್​ ಮಿನಿ ವಿಶ್ವಕಪ್​ ಸಮರ ನಡೆಯುವ ಸ್ಟೇಡಿಯಂನ ವಿಡಿಯೊ ವೈರಲ್​

Ebrahim Raisi
ದೇಶ1 hour ago

Ebrahim Raisi: ಇಬ್ರಾಹಿಂ ರೈಸಿ ನಿಧನದಿಂದ ಭಾರತದಲ್ಲಿ ಚಿನ್ನ, ಪೆಟ್ರೋಲ್‌ ಬೆಲೆ ಏರಿಕೆ? ಹೀಗಿದೆ ವಿಶ್ವ ಮಾರುಕಟ್ಟೆ ಸ್ಥಿತಿ-ಗತಿ

Hit And Run Case
ಕರ್ನಾಟಕ1 hour ago

Hit And Run Case: ಕೂಡ್ಲಿಗಿಯಲ್ಲಿ ಹಿಟ್ ಆ್ಯಂಡ್ ರನ್; ಬೈಕ್‌ಗೆ ಲಾರಿ ಡಿಕ್ಕಿಯಾಗಿ ಯುವತಿ ಸಾವು

IPL 2024
ಕ್ರೀಡೆ2 hours ago

IPL 2024: ಮೋದಿ ಸ್ಟೇಡಿಯಂನಲ್ಲಿ ಫುಟ್ಬಾಲ್​ ಆಡಿದ ಆರ್​ಸಿಬಿ ಆಟಗಾರರು

Cannes Star Fashion
ಫ್ಯಾಷನ್2 hours ago

Cannes Star Fashion: ಕ್ರಾಪ್‌ ಟುಕ್ಸೆಡೊ ಧರಿಸಿ ತಾಯಿಗೆ ಶ್ರದ್ಧಾಂಜಲಿ ಅರ್ಪಿಸಿದ ನಟ ಪ್ರತೀಕ್‌ ಬಬ್ಬರ್

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ7 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 day ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ1 day ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ1 day ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌