ಕಾಬೂಲ್: ಅಫಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರ ಆಡಳಿತ ಜಾರಿಗೆ ಬಂದ ಬಳಿಕ ಉಗ್ರರ ದಾಳಿಗಳು ಹೆಚ್ಚಾಗಿವೆ. ನಾಗರಿಕರ ಮೂಲಭೂತ ಹಕ್ಕುಗಳನ್ನು ಕಸಿಯುವುದರ ಜತೆಗೆ ಜನ ಭೀತಿಯಲ್ಲಿಯೇ ಬದುಕುವಂತಾಗಿದೆ. ಇಂತಹ ಪರಿಸ್ಥಿತಿ ಇರುವ ಬೆನ್ನಲ್ಲೇ ಆಫ್ಘನ್‌ನ ಮದರಸಾವೊಂದರ ಮೇಲೆ ಬಾಂಬ್ ದಾಳಿ (Bombing In Afghan) ನಡೆಸಿದ್ದು, ಮಕ್ಕಳು ಸೇರಿ ೧೭ ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಸಮಂಗನ್ ಪ್ರಾಂತ್ಯದ ರಾಜಧಾನಿ ಎಬಕ್‌ನಲ್ಲಿರುವ ಅಲ್ ಜಿಹಾದ್ ಮದರಸಾದಲ್ಲಿ ಬಾಂಬ್ ಸ್ಫೋಟಗೊಂಡಿದೆ. ಮದರಸಾದಲ್ಲಿ ಪ್ರಾರ್ಥನೆ ಸಲ್ಲಿಸುವ ವೇಳೆಯೇ ಬಾಂಬ್ ಸ್ಫೋಟಗೊಂಡಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಮಕ್ಕಳು ಸೇರಿ ೧೭ ಮಂದಿ ಮೃತಪಟ್ಟಿದ್ದಾರೆ. ಮೃತರ ಸಂಖ್ಯೆ ಇನ್ನೂ ಜಾಸ್ತಿಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಆದಾಗ್ಯೂ, ಬಾಂಬ್ ದಾಳಿ ಬಗ್ಗೆ ಯಾವುದೇ ಉಗ್ರ ಸಂಘಟನೆಯು ಹೊಣೆ ಹೊತ್ತುಕೊಂಡಿಲ್ಲ. ಈ ಕುರಿತು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ | Somalia Attack | ಸೊಮಾಲಿಯಾ ಶಿಕ್ಷಣ ಇಲಾಖೆ ಕಚೇರಿ ಬಳಿ ಬಾಂಬ್ ದಾಳಿ; 100 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ