Site icon Vistara News

America v/s Russia:ಭಾರತದ ಚುನಾವಣೆಯಲ್ಲಿ ಹಸ್ತಕ್ಷೇಪ; ರಷ್ಯಾ ಆರೋಪಕ್ಕೆ ಅಮೆರಿಕ ಹೇಳಿದ್ದೇನು?

America v/s Russia

ವಾಷಿಂಗ್ಟನ್‌: ಅಮೆರಿಕದಲ್ಲಿ ಖಲಿಸ್ತಾನಿ ನಾಯಕ (Khalistan Leader) ಗುರುಪತ್‌ವಂತ್ ಸಿಂಗ್ ಪನ್ನುನ್ (Gurpatwant Singh Pannun) ಹತ್ಯೆಯ ಸಂಚಿನಲ್ಲಿ (Murder plot) ಭಾರತದ ʼರಾʼ (RAW) ಅಧಿಕಾರಿಯ ಕೈವಾಡದ ಕುರಿತು ಅಮೆರಿಕ(America)ದ ಆರೋಪಕ್ಕೆ ತಿರುಗೇಟು ನೀಡಿದ್ದ ರಷ್ಯಾ(America v/s Russia), ಅಮೆರಿಕವು ಭಾರತದ ಚುನಾವಣೆಯಲ್ಲಿ ಹಸ್ತಕ್ಷೇಪ ಮಾಡಲು ಯತ್ನಿಸುತ್ತಿದೆ ಎಂದು ಹೇಳಿತ್ತು. ಇದೀಗ ರಷ್ಯಾ ಆರೋಪಕ್ಕೆ ಪ್ರತಿಕ್ರಿಯಿಸಿರುವ ಅಮೆರಿಕ, ಭಾರತದ ಚುನಾವಣೆಯಲ್ಲಿ ಹಸ್ತಕ್ಷೇಪ ಮಾಡಲು ಅಮೆರಿಕ ಎಂದಿಗೂ ಬಯಸುವುದಿಲ್ಲ. ಭಾರತ ಮಾತ್ರ ಅಲ್ಲ ಬೇರೆ ಯಾವುದೇ ರಾಷ್ಟ್ರಗಳ ಆಂತರಿಕ ವಿಚಾರದಲ್ಲಿ ಅಮೆರಿಕ ಮೂಗು ತೂರಿಸುವುದಿಲ್ಲ ಎಂದು ಖಡಕ್‌ ಆಗಿ ಹೇಳಿದೆ.

ಅಮೆರಿಕ ಸ್ಟೇಟ್‌ ಡಿಪಾರ್ಟ್‌ಮೆಂಟ್‌ ವಕ್ತಾರ ಮ್ಯಾಥ್ಯೂ ಮಿಲ್ಲರ್‌ ಈ ಬಗ್ಗೆ ಮಾತನಾಡಿದ್ದು, ಭಾರತದ ಚುನಾವಣೆ ಬಗ್ಗೆ ಅಲ್ಲಿನ ಜನ ನಿರ್ಧಾರ ತೆಗೆದುಕೊಳ್ಳುತ್ತಾರೆಯೇ ಹೊರತು ನಾವಲ್ಲ. ಅಮೆರಿಕದಲ್ಲಿ ಭಾರತ ಕೆಲವೊಂದು ಕಾನೂನು ಕಾಯ್ದೆಗಳನ್ನು ಉಲ್ಲಂಘನೆಯಾದಾಗ ಇಂತಹ ಆರೋಪಗಳು ಸಹಜ ಎಂದು ಹೇಳಿದ್ದಾರೆ.

ರಷ್ಯಾ ಹೇಳಿದ್ದೇನು?

ಪನ್ನುನು ಹತ್ಯೆ ಪ್ರಕರಣದಲ್ಲಿ ಭಾರತದ ಕೈವಾಡ ಇದೆ ಎಂದು ಆರೋಪಿಸಿದ್ದ ಅಮೆರಿಕಕ್ಕೆ ಟಾಂಗ್‌ ನೀಡಿದ್ದ ರಷ್ಯಾ, ಭಾರತದಲ್ಲಿ ಆಂತರಿಕ ರಾಜಕೀಯ ಸ್ಥಿತಿಗತಿಯನ್ನು ಅಲ್ಲೋಲ ಕಲ್ಲೋಲ ಮಾಡಲು ಅಮೆರಿಕ ಯತ್ನಿಸುತ್ತಿದೆ. ಭಾರತೀಯ ರಾಷ್ಟ್ರೀಯತೆ ಮನಸ್ಥಿತಿ ಮತ್ತು ಇತಿಹಾಸವನ್ನು ಅರ್ಥಮಾಡಿಕೊಳ್ಳದ ಅಮೆರಿಕ ಸುಖಾ ಸುಮ್ಮನೆ ಭಾರತದ ಧಾರ್ಮಿಕ ಸ್ವಾತಂತ್ರ್ಯದ ಬಗ್ಗೆ ಆರೋಪ ಮಾಡುತ್ತಿದೆ. ಭಾರತದ ಆಂತರಿಕ ವಿಚಾರದಲ್ಲಿ ಅಮೆರಿಕ ನಿರಂತರವಾಗಿ ಮೂಗು ತೂರಿಸುವ ಪ್ರಯತ್ನ ನಡೆಸುತ್ತಲೇ ಇದೆ. ಭಾರತವನ್ನು ಗೌರವಿಸುವ ಮನಸ್ಸು ಅಮೆರಿಕಕ್ಕೆ ಇಲ್ಲ. ಅಮೆರಿಕದ ಆರೋಪಗಳು ಸುಳ್ಳು ಮತ್ತು ನಿರಾಧಾರವಾಗಿದ್ದು, ಅದನ್ನು ಒಪ್ಪಿಕೊಳ್ಳಲು ಸಾಧ್ಯವೇ ಇಲ್ಲ ಎಂದು ಖಡಕ್ಕಾಗಿ ಹೇಳಿದೆ.

ಇದನ್ನೂ ಓದಿ:Neeraj Chopra: 3 ವರ್ಷದ ಬಳಿಕ ದೇಶೀಯ ಕ್ರೀಡಾಕೂಟದಲ್ಲಿ ನೀರಜ್​ ಚೋಪ್ರಾ ಸ್ಪರ್ಧೆ

ವಿಕ್ರಮ್ ಯಾದವ್ ಎಂದು ಗುರುತಿಸಲಾದ ರಾ ಅಧಿಕಾರಿಯು ಯುಎಸ್‌ನಲ್ಲಿ ಗುರುಪತ್‌ವಂತ್ ಸಿಂಗ್ ಪನ್ನುನ್ ಹತ್ಯೆಯ ಸಂಚಿನಲ್ಲಿ ಭಾಗಿಯಾಗಿದ್ದಾರೆ ಎಂದು ವಾಷಿಂಗ್ಟನ್ ಪೋಸ್ಟ್‌ನ “ತನಿಖಾ” ವರದಿ ಮಾಡಿತ್ತು. ಆ ಸಂದರ್ಭದಲ್ಲಿ ಬೇಹುಗಾರಿಕಾ ಸಂಸ್ಥೆಯ ಮುಖ್ಯಸ್ಥ ಸಮಂತ್ ಗೋಯೆಲ್ ಆಗಿದ್ದರು ಎಂದು ವರದಿ ತಿಳಿಸಿದೆ. ಖಲಿಸ್ತಾನ್ ಚಳವಳಿಯ ಪ್ರಮುಖ ಉಗ್ರರಲ್ಲಿ ಒಬ್ಬನಾದ ಗುರುಪತ್ವಂತ್ ಸಿಂಗ್ ಪನ್ನುನ್, ಸಿಖ್ಸ್ ಫಾರ್ ಜಸ್ಟಿಸ್‌ನ ಕಾನೂನು ಸಲಹೆಗಾರ ಮತ್ತು ವಕ್ತಾರನಾಗಿದ್ದಾನೆ. ಇದು ಪ್ರತ್ಯೇಕ ಸಿಖ್ ದೇಶದ ಕಲ್ಪನೆಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ. ಭಾರತ ಸರ್ಕಾರ ಗುರುಪತ್ವಂತ್ ಸಿಂಗ್ ಪನ್ನೂನ್‌ನನ್ನು ಭಯೋತ್ಪಾದಕ ಎಂದು ಘೋಷಿಸಿದೆ. ಹಿಂದೂ ಮುಖಂಡನೊಬ್ಬನನ್ನು ಹತ್ಯೆ ಮಾಡಿದ್ದ ಆರೋಪವೂ ಈತನ ಮೇಲಿತ್ತು. ಹೀಗಾಗಿ 2007ರಲ್ಲಿ ಅಮೆರಿಕಕ್ಕೆ ಪರಾರಿಯಾಗಿದ್ದ. ಮತ್ತೊಂದೆಡೆ ಕೆನಡಾ ಕೂಡ ಪನ್ನುನ್‌ ಬೆಂಬಲಕ್ಕೆ ನಿಂತಿದೆ. ಕೆನಡಾದಲ್ಲಿ ಸಿಕ್ಖರು ಹೆಚ್ಚಿನ ಪ್ರಮಾಣದಲ್ಲೇ ಇದ್ದು, ಹೀಗಾಗಿ ಅಲ್ಲಿನ ಪ್ರಧಾನಿ ಜಸ್ಟಿನ್‌ ಟ್ರಾಡೊ ಖಲಿಸ್ಥಾನಿ ಉಗ್ರರ ಜತೆಗೆ ನಿಂತಿದ್ದಾರೆ ಎನ್ನಲಾಗಿದೆ.

Exit mobile version