ಢಾಕಾ, ಬಾಂಗ್ಲಾದೇಶ: ಬಾಂಗ್ಲಾದೇಶದ (Bangladesh:)ರಾಜಧಾನಿ ಢಾಕಾ ನಗರದ ಏಳು ಅಂತಸ್ತಿನ ಕಟ್ಟಡದಲ್ಲಿ ಸಂಭವಿಸಿದ ಸ್ಫೋಟದಲ್ಲಿ 14 ಜನರು ಮೃತಪಟ್ಟು 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಮಂಗಳವಾರ ಸಂಜೆ ಸುಮಾರು 4.50ಕ್ಕೆ ಸ್ಫೋಟ ಸಂಭವಿಸಿದ್ದು, ಅಗ್ನಿ ಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು bdnews24 ನ್ಯೂಸ್ ಪೋರ್ಟಲ್ ವರದಿ ಮಾಡಿದೆ.
ಏಳು ಅಂತಸ್ತಿನ ಕಟ್ಟಡದಲ್ಲಿ ಸಂಭವಿಸಿದ ಸ್ಫೋಟಕ್ಕೆ ಕಾರಣ ಏನೆಂದು ತಿಳಿದು ಬಂದಿಲ್ಲ. ಕೆಲವು ಮೂಲಗಳ ಪ್ರಕಾರ ಆಕ್ಸಿಜನ್ ಘಟಕ ಸ್ಫೋಟವಾಗಿದೆ ಎಂದು ಹೇಳಲಾಗುತ್ತಿದೆ. ಆದರೆ, ಈ ಬಗ್ಗೆ ಯಾವುದೇ ನಿಖರವಾದ ಮಾಹಿತಿಗಳಿಲ್ಲ.
ಇದನ್ನೂ ಓದಿ: Pakistan Blast: ಪಾಕಿಸ್ತಾನದ ರೈಲಿನಲ್ಲಿ ಸ್ಫೋಟ, ಇಬ್ಬರ ಸಾವು, ಹಲವರಿಗೆ ಗಾಯ
ಸ್ಫೋಟದಲ್ಲಿ ಗಾಯಗೊಂಡಿರುವ ಗಾಯಾಳುಗಳನ್ನು ಢಾಕಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಡಿಎಂಸಿಎಚ್ ಪೊಲೀಸ್ ಹೊರಠಾಣೆ ಇನ್ಸ್‌ಪೆಕ್ಟರ್ ಬಚ್ಚು ಮಿಯಾ ತಿಳಿಸಿದ್ದಾರೆ. ಇವರೆಲ್ಲರೂ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.