ಢಾಕಾ: ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ (Sheikh Hasina) ಅವರ ನಿವಾಸ ಈಗ ಕನ್ನಡದ ‘ಭೂತಯ್ಯನ ಮಗ ಅಯ್ಯು’ ಸಿನಿಮಾದ ಭೂತಯ್ಯನ ಮನೆಯಂತಾಗಿದೆ. ಹೌದು, ಶೇಖ್ ಹಸೀನಾ ರಾಜೀನಾಮೆ ನೀಡಿ, ಪಲಾಯನಗೈದ ಬಳಿಕ ಪ್ರತಿಭಟನಾಕಾರರು (Bangladesh Protest) ಅವರ ನಿವಾಸಕ್ಕೆ ನುಗ್ಗಿದ್ದಾರೆ. ಶೇಖ್ ಹಸೀನಾ ನಿವಾಸದಲ್ಲಿ ಪ್ರತಿಭಟನಾಕಾರರು ಬಿರಿಯಾನಿ ಸೇರಿ ಎಲ್ಲ ಆಹಾರವನ್ನು ಸೇವಿಸಿದ್ದಾರೆ. ಕೈಗೆ ಸಿಕ್ಕ ವಸ್ತುಗಳನ್ನು ಕದ್ದಿದ್ದಾರೆ. ಶೇಖ್ ಹಸೀನಾ ಮನೆಯಲ್ಲಿ ಪ್ರತಿಭಟನಾಕಾರರ ಹುಚ್ಚಾಟದ ವಿಡಿಯೊಗಳು ಈಗ ವೈರಲ್ ಆಗಿವೆ.
ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಹೋರಾಟ ಆರಂಭಿಸಿದ ಪ್ರತಿಭಟನಾಕಾರರು, ಪ್ರಧಾನಿ ರಾಜೀನಾಮೆ ಬಳಿಕ ಅವರ ಭವ್ಯವಾದ ನಿವಾಸಕ್ಕೆ ಲಗ್ಗೆ ಇಟ್ಟಿದ್ದಾರೆ. ಶೇಖ್ ಹಸೀನಾ ಮನೆಯಲ್ಲಿರುವ ಸ್ವಿಮ್ಮಿಂಗ್ ಪೂಲ್‌ನಲ್ಲಿ ಸಾಮೂಹಿಕವಾಗಿ ಈಜಾಡುವುದು, ಬೆಡ್‌ರೂಮ್‌ನಲ್ಲಿ ಮಲಗುವುದು, ಎಲ್ಲ ಐಷಾರಾಮಿ ವಸ್ತುಗಳನ್ನು ತೆಗೆದುಕೊಂಡು ಹೋಗುವುದು, ಭಕ್ಷ್ಯ ಭೋಜನ ಸವಿದು, ಕುಣಿದು ಕುಪ್ಪಳಿಸಿ ಮಜಾ ಉಡಾಯಿಸಿದ್ದಾರೆ. ಆ ಮೂಲಕ ಪ್ರಧಾನಿ ಮೇಲಿನ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಈ ವಿಡಿಯೊಗಳು ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿವೆ.
ಬೆಡ್‌ರೂಮ್‌ನಲ್ಲಿ ಮಜಾ
According to #Indian media, this is #SheikhHasina's bedroom in the PM House today.#Bangladesh #DGISPR #Iran #Afghanistan #WestBengalNews #BangladeshBleeding pic.twitter.com/9IL5tx9Rhg
— Turab Ali (@TurabAl70296514) August 5, 2024
ಬಾಂಗ್ಲಾದೇಶದಲ್ಲಿ ಶೇಖ್ ಹಸೀನಾ ಫೋಟೊಗಳಿಗೆ ಮಸಿ ಬಳಿಯಲಾಗಿದೆ. ಶೇಖ್ ಹಸೀನಾ ಅವರ ತಂದೆಯ ಮೂರ್ತಿಗಳನ್ನು ಉದ್ರಿಕ್ತರು ಒಡೆದು ಹಾಕಿದ್ದಾರೆ. ಕೆಲ ಸರ್ಕಾರಿ ಕಚೇರಿಗಳನ್ನೂ ಧ್ವಂಸಗೊಳಿಸಿದ್ದಾರೆ. ಸುಮಾರು 4 ಲಕ್ಷ ಜನ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಭರ್ಜರಿ ಭೋಜನ ಸವಿದ ಪ್ರತಿಭಟನಾಕಾರರು
After #SheikhHasina's escape, people enjoy 😅 food at the Prime Minister's House#Bangladesh pic.twitter.com/38AztQXT6a
— . (@siyasikhichrii) August 5, 2024
ಬಾಂಗ್ಲಾದೇಶದಲ್ಲಿ ಭುಗಿಲೆದ್ದಿರುವ ಹಿಂಸಾಚಾರಕ್ಕೆ ಪಾಕಿಸ್ತಾನ ಕಾರಣ ಎಂದು ತಿಳಿದುಬಂದಿದೆ. ಬಾಂಗ್ಲಾದೇಶದಲ್ಲಿ ಜಮಾತ್-ಎ-ಇಸ್ಲಾಮಿ ಎಂಬ ನಿಷೇಧಿತ ಸಂಘಟನೆಯ ವಿದ್ಯಾರ್ಥಿ ಘಟಕವಾಗಿರುವ ಛತ್ರಾ ಶಿಬಿರ್ ಎಂಬ ಸಂಘಟನೆಗೆ ಪಾಕಿಸ್ತಾನದ ಐಎಸ್‌ಐ ಬೆಂಬಲ ಇದೆ ಎಂದು ತಿಳಿದುಬಂದಿದೆ. ಬಾಂಗ್ಲಾದೇಶ ವಿಮೋಚನೆ ಹೋರಾಟದ ವೇಳೆ ಭಾಗಿಯಾದವರ ಕುಟುಂಬಸ್ಥರಿಗೆ ನೀಡುವ ಮೀಸಲಾತಿಯನ್ನು ಶೇ.5ಕ್ಕೆ ಇಳಿಸಿದರೂ ಪ್ರತಿಭಟನೆ ನಡೆಸಲಾಗುತ್ತಿದೆ. ಪ್ರತಿಭಟನೆಯ ಹಿಂದಿರುವ ಪ್ರಮುಖ ವಿದ್ಯಾರ್ಥಿ ಸಂಘಟನೆಗಳಲ್ಲಿ ಛತ್ರಾ ಶಿಬಿರ್ ಎಂಬ ಸಂಘಟನೆಯ ಪಾತ್ರ ಪ್ರಮುಖವಾಗಿದೆ. ಇದಕ್ಕೆ ಪಾಕಿಸ್ತಾನವು ಹಣಕಾಸು ನೆರವು ಕೂಡ ನೀಡುತ್ತಿದೆ ಎಂದು ತಿಳಿದುಬಂದಿದೆ.
House of Bangladesh former PM Sheikh Hasina invaded by rioters
— Dimple Yadav Commentary (@DimpleBabhi) August 5, 2024
– She was forced to resign by Bangladesh Army Chief & has fled Dhaka #SheikhHasina | Bangladeshis | East Pakistan Islamophobia | Haseena #Bangladesh#BangladeshViolence #SheikhHasina
pic.twitter.com/HGLTAUqh1t
ಶೇಖ್ ಹಸೀನಾ ಅವರು ಕಳೆದ 15 ವರ್ಷಗಳಿಂದ ಬಾಂಗ್ಲಾದೇಶದಲ್ಲಿ ಆಡಳಿತ ನಡೆಸುತ್ತಿದ್ದಾರೆ. ಅವರು ರಾಷ್ಟ್ರೀಯವಾದದಲ್ಲಿ ನಂಬಿಕೆ ಇರಿಸಿರುವುದರ ಜತೆಗೆ ಜನರ ಬೆಂಬಲ ಗಳಿಸಿದ್ದಾರೆ. ಬಡತನ ಪ್ರಮಾಣವನ್ನು ಶೇ.5ಕ್ಕೆ ಇಳಿಸಿದ್ದಾರೆ. ಇದರ ಜತೆಗೆ ಭಾರತದ ಜತೆ ಉತ್ತಮ ದ್ವಿಪಕ್ಷೀಯ ಸಂಬಂಧ ಹೊಂದಿದ್ದಾರೆ. ಮೇಲಾಗಿ, ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಇದನ್ನು ಸಹಿಸದ ಪಾಕಿಸ್ತಾನವು, ಬಾಂಗ್ಲಾದೇಶದಲ್ಲಿ ಭಾರತ ವಿರೋಧಿ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿಯು ಅಧಿಕಾರಕ್ಕೆ ಬರಬೇಕು ಎಂಬುದು ಪಾಕಿಸ್ತಾನದ ಕುತಂತ್ರವಾಗಿದೆ. ಇದಕ್ಕಾಗಿ ಹಿಂಸೆಗೆ ಪ್ರಚೋದನೆ ನೀಡುತ್ತಿದೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ: Bangladesh Protests: ಬಾಂಗ್ಲಾ ಹಿಂಸಾಚಾರದ ಹಿಂದೆ ಪಾಕ್ ಕೈವಾಡ; ಭಾರತದ ಜತೆ ಹಸೀನಾ ಸ್ನೇಹ ಕಾರಣ?