Bangladesh Unrest: ಶೇಖ್‌ ಹಸೀನಾ ಓಡಿ ಬಂದ ಬಳಿಕ ಬಾಂಗ್ಲಾದೇಶದಲ್ಲಿ 232 ಜನರ ಕಗ್ಗೊಲೆ, ಹಿಂದೂಗಳೇ ಟಾರ್ಗೆಟ್ - Vistara News

ವಿದೇಶ

Bangladesh Unrest: ಶೇಖ್‌ ಹಸೀನಾ ಓಡಿ ಬಂದ ಬಳಿಕ ಬಾಂಗ್ಲಾದೇಶದಲ್ಲಿ 232 ಜನರ ಕಗ್ಗೊಲೆ, ಹಿಂದೂಗಳೇ ಟಾರ್ಗೆಟ್

Bangladesh Unrest: ಈ ವಾರದ ಆರಂಭದಲ್ಲಿ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ನಿರ್ಗಮನದ ನಂತರ ದೇಶದ ಹಿಂದೂ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಹಿಂಸಾಚಾರಕ್ಕೆ ಪ್ರತಿಕ್ರಿಯೆಯಾಗಿ ಶುಕ್ರವಾರ, ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ನೂರಾರು ಜನ ಹಿಂದೂಗಳ ಪ್ರತಿಭಟನೆ ನಡೆಸಿದರು.

VISTARANEWS.COM


on

Bangladesh Unrest hindus protest
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಢಾಕಾ: ಕಳೆದ ಮೂರು ದಿನಗಳಲ್ಲಿ ಬಾಂಗ್ಲಾದೇಶದಾದ್ಯಂತ (Bangladesh Unrest) ನಡೆದ ವಿವಿಧ ದಾಳಿಗಳು ಮತ್ತು ಘರ್ಷಣೆಗಳಲ್ಲಿ (Bangladesh violence) ಕನಿಷ್ಠ 232 ಜನರು ಸಾವನ್ನಪ್ಪಿದ್ದಾರೆ. ಹೆಚ್ಚಾಗಿ ಅಲ್ಲಿನ ಅಲ್ಪಸಂಖ್ಯಾತ ಹಿಂದೂ (Hindus) ಸಮುದಾಯವನ್ನೇ ಗುರಿಯಾಗಿಸಿ ದಾಳಿಗಳು ನಡೆಯುತ್ತಿವೆ. ಅಮಾಯಕ ಹಿಂದೂಗಳ ಮೇಲೆ ಹಲ್ಲೆ, ಅತ್ಯಾಚಾರಗಳು (hindus protest) ನಿರಂತರವಾಗಿವೆ.

ಅಲ್ಲಿನ ಪ್ರಧಾನಿ ಶೇಖ್ ಹಸೀನಾ (Sheikh Hasina) ಅವರು ಆಗಸ್ಟ್ 5ರಂದು ರಾಜೀನಾಮೆ ನೀಡಿ ಭಾರತಕ್ಕೆ (India) ಪಲಾಯನ ಮಾಡಿದ್ದರು. ಅವರ ಪದಚ್ಯುತಿಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆಗಳು ನಡೆದಿದ್ದವು. ಕಳೆದ ಮೂರು ವಾರಗಳಿಂದ ಬಾಂಗ್ಲಾದೇಶದಲ್ಲಿ ನಡೆದ ತೀವ್ರ ಮತ್ತು ರಕ್ತಸಿಕ್ತ ಸರ್ಕಾರಿ ವಿರೋಧಿ ಪ್ರತಿಭಟನೆಗಳು ಶೇಖ್ ಹಸೀನಾ ಸರ್ಕಾರದ ಪತನಕ್ಕೆ ಕಾರಣವಾಯಿತು.

ನೊಬೆಲ್ ಪ್ರಶಸ್ತಿ ವಿಜೇತ ಮುಹಮ್ಮದ್ ಯೂನಸ್ (Muhammad Yunus) ನೇತೃತ್ವದ ಮಧ್ಯಂತರ ಸರ್ಕಾರ ದೇಶದ ಆಡಳಿತವನ್ನು ವಹಿಸಿಕೊಂಡಿದೆ. ವರದಿಗಳು ತಿಳಿಸುವಂತೆ ಇದುವರೆಗೆ 469 ಜನ ಗಲಭೆಗಳಲ್ಲಿ ಸತ್ತಿದ್ದಾರೆ. ಸ್ಥಳೀಯ ಮಾಧ್ಯಮಗಳು ಹೇಳುವಂತೆ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳಿಗೆ ತೀವ್ರ ಕಿರುಕುಳ ಸೃಷ್ಟಿಸಲಾಗುತ್ತಿದೆ. ಹಿಂಸಾಚಾರದ ಹಿನ್ನೆಲೆಯಲ್ಲಿ ಕಳೆದ ಕೆಲವು ದಿನಗಳಿಂದ ಭಯಭೀತರಾದ ಬಾಂಗ್ಲಾದೇಶಿಗಳು ಅಕ್ರಮವಾಗಿ ಭಾರತಕ್ಕೆ ದಾಟಲು ಹಲವಾರು ಪ್ರಯತ್ನಗಳನ್ನು ನಡೆಸಿದರು. ಆದರೆ ಅವರನ್ನು ಬಿಎಸ್‌ಎಫ್‌ ಹಿಮ್ಮೆಟ್ಟಿಸಿದೆ.

ಬಾಂಗ್ಲಾದೇಶದ ಪ್ರಮುಖ ವಿರೋಧ ಪಕ್ಷವಾದ ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಾರ್ಟಿ, ಶೇಖ್ ಹಸೀನಾ ಅವರು ದೇಶದಲ್ಲಿ ಕ್ರಿಮಿನಲ್ ಮೊಕದ್ದಮೆಗಳನ್ನು ಎದುರಿಸಬೇಕಾಗುತ್ತದೆ ಎಂದು ಹೇಳಿದೆ. ಶೇಖ್‌ ಹಸೀನಾಗೆ ಆಶ್ರಯ ನೀಡಿರುವ ಹಿನ್ನೆಲೆಯಲ್ಲಿ, ಭಾರತವು ತನ್ನ ನೆರೆಹೊರೆಯವರೊಂದಿಗೆ ಸಂಬಂಧವನ್ನು ಹಾಳುಮಾಡುವ ಅಪಾಯದಲ್ಲಿದೆ ಎಂದು ಎಚ್ಚರಿಸಿದೆ.

ಜುಲೈ 16 ಮತ್ತು ಆಗಸ್ಟ್ 4ರ ನಡುವಿನ ಮೀಸಲಾತಿ ವಿರೋಧಿ ವಿದ್ಯಾರ್ಥಿ ಚಳುವಳಿಗಳ ವೇಳೆ ಒಟ್ಟು 328 ಸಾವುಗಳು ವರದಿಯಾಗಿವೆ ಎಂದು ಢಾಕಾ ಟ್ರಿಬ್ಯೂನ್ ವರದಿ ಮಾಡಿದೆ. ಹೀಗಾಗಿ, ಕಳೆದ 23 ದಿನಗಳಲ್ಲಿ ಒಟ್ಟು ಸಾವಿನ ಸಂಖ್ಯೆ 560 ಕ್ಕೆ ತಲುಪಿದೆ.

ಈ ವಾರದ ಆರಂಭದಲ್ಲಿ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ನಿರ್ಗಮನದ ನಂತರ ದೇಶದ ಹಿಂದೂ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಹಿಂಸಾಚಾರಕ್ಕೆ ಪ್ರತಿಕ್ರಿಯೆಯಾಗಿ ಶುಕ್ರವಾರ, ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ನೂರಾರು ಜನ ಹಿಂದೂಗಳ ಪ್ರತಿಭಟನೆ ನಡೆಸಿದರು. ಮುಸ್ಲಿಂ ಬಹುಸಂಖ್ಯಾತ ಬಾಂಗ್ಲಾದೇಶದಲ್ಲಿ ಹಿಂದೂ ಮನೆಗಳು, ವ್ಯಾಪಾರಗಳು ಮತ್ತು ದೇವಾಲಯಗಳ ಮೇಲೆ ದಾಳಿ ನಡೆದಿದೆ. ಇವುಗಳಲ್ಲಿ ಶಾಲಾ ಶಿಕ್ಷಕಿಯೊಬ್ಬರು ಸಾವನ್ನಪ್ಪಿ ಕನಿಷ್ಠ 45 ಮಂದಿ ಗಾಯಗೊಂಡರು.

ಬಾಂಗ್ಲಾದೇಶದ 17 ಕೋಟಿ ಜನಸಂಖ್ಯೆಯ ಸುಮಾರು 8 ಪ್ರತಿಶತ ಹಿಂದೂಗಳಿದ್ದಾರೆ. ಇವರು ಸಾಂಪ್ರದಾಯಿಕವಾಗಿ ಶೇಖ್ ಹಸೀನಾ ಅವರ ಅವಾಮಿ ಲೀಗ್ ಪಕ್ಷದ ಬೆಂಬಲಿಗರು. ಇದು ಕಳೆದ ತಿಂಗಳು ಕೋಟಾ ವಿರೋಧಿ ಪ್ರತಿಭಟನಾಕಾರರು ಮತ್ತು ಭದ್ರತಾ ಪಡೆಗಳ ನಡುವಿನ ಹಿಂಸಾತ್ಮಕ ಘರ್ಷಣೆಯ ನಂತರ ಮುಸ್ಲಿಮರ ಕೋಪದ ಕೇಂದ್ರಬಿಂದುವಾಗಿದೆ.

ನೊಬೆಲ್ ಪ್ರಶಸ್ತಿ ವಿಜೇತ ಅರ್ಥಶಾಸ್ತ್ರಜ್ಞ ಮುಹಮ್ಮದ್ ಯೂನಸ್ ನೇತೃತ್ವದಲ್ಲಿ ಗುರುವಾರ ಬಾಂಗ್ಲಾದೇಶದಲ್ಲಿ ಮಧ್ಯಂತರ ಸರ್ಕಾರವನ್ನು ನೇಮಿಸಲಾಯಿತು. ಸಂವಿಧಾನದ ಅಡಿಯಲ್ಲಿ, 90 ದಿನಗಳಲ್ಲಿ ಚುನಾವಣೆಯನ್ನು ನಡೆಸಬೇಕಾಗಿದೆ. ಆದರೆ ಯೂನಸ್ ಹಾಗೂ ಮಿಲಿಟರಿ ಮತ್ತು ಅಧ್ಯಕ್ಷರು, ಚುನಾವಣೆಗಳು ಯಾವಾಗ ನಡೆಯುತ್ತವೆ ಎಂಬುದರ ಕುರಿತು ಪ್ರತಿಕ್ರಿಯಿಸಿಲ್ಲ.

ಇದನ್ನೂ ಓದಿ: Muhammad Yunus: ಹಿಂದುಗಳನ್ನು ಮೊದಲು ರಕ್ಷಿಸಿ; ಬಾಂಗ್ಲಾದೇಶದ ಮೊಹಮ್ಮದ್‌ ಯೂನಸ್‌ಗೆ ಮೋದಿ ಆಗ್ರಹ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Arshad Nadeem : ಒಲಿಂಪಿಕ್ಸ್ ದಾಖಲೆಯೊಂದಿಗೆ ಬಂಗಾರ ಗೆದ್ದ ಅರ್ಷದ್ ನದೀಮ್​ಗೆ ಪಾಕ್​ ಪ್ರಧಾನಿ ಕೊಟ್ಟ ಬಹುಮಾನ ಕೇವಲ 3 ಲಕ್ಷ ರೂಪಾಯಿ!

Arshad Nadeem : ಗೆಲುವಿನೊಂದಿಗೆ ಪಾಕಿಸ್ತಾನ ಒಲಿಂಪಿಕ್ಸ್​ನಲ್ಲಿ ತನ್ನ ಮೊದಲ ವೈಯಕ್ತಿಕ ಚಿನ್ನದ ಪದಕವನ್ನು ಗೆದ್ದುಕೊಂಡಿತು. ಈ ಹಿಂದೆ ಪಾಕಿಸ್ತಾನ 1960, 1968 ಮತ್ತು 1984ರಲ್ಲಿ ಹಾಕಿಯಲ್ಲಿ ಕೇವಲ ಮೂರು ಒಲಿಂಪಿಕ್ ಚಿನ್ನದ ಪದಕಗಳನ್ನು ಗೆದ್ದಿತ್ತು. ನದೀಮ್ ಅವರ ಗೆಲುವು ಆಟಗಾರ ಮತ್ತು ಪಾಕಿಸ್ತಾನ ಎರಡಕ್ಕೂ ಮಹತ್ವದ ಮೈಲಿಗಲ್ಲಾಗಿದೆ.

VISTARANEWS.COM


on

Arshad Nadeem
Koo

ನವದೆಹಲಿ: ಒಲಿಂಪಿಕ್ ನಲ್ಲಿ ದಾಖಲೆಯೊಂದಿಗೆ ಚಿನ್ನದ ಪದಕ ಗೆದ್ದ ಪಾಕಿಸ್ತಾನ ಜಾವೆಲಿನ್ ಎಸೆತಗಾರ ಅರ್ಷದ್​ ನದೀಮ್​ಗೆ (Arshad Nadeem) ಅಲ್ಲಿನ ಪ್ರಧಾನಿ ಘೋಷಿಸಿರುವ ಬಹುಮಾನ ಮೊತ್ತ ವಿವಾದಕ್ಕೆ ಕಾರಣವಾಗಿದೆ. ಈ ಬಗ್ಗೆ ಪಾಕಿಸ್ತಾನದ ಮಾಜಿ ಸ್ಪಿನ್ನರ್ ದಾನಿಶ್ ಕನೇರಿಯಾ ಪ್ರಧಾನಿ ಶೆಹಬಾಜ್ ಷರೀಫ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪ್ಯಾರಿಸ್ ಒಲಿಂಪಿಕ್ ಕ್ರೀಡಾಕೂಟದ ಪುರುಷರ ಫೈನಲ್ನಲ್ಲಿ ನದೀಮ್ 92.97 ಮೀಟರ್ ಜಾವೆಲಿನ್ ಎಸೆತದಲ್ಲಿ ದಾಖಲೆ ನಿರ್ಮಿಸುವ ಮೂಲಕ 32 ವರ್ಷಗಳ ನಂತರ ಪಾಕಿಸ್ತಾನದ ಮೊದಲ ಒಲಿಂಪಿಕ್ ಚಿನ್ನದ ಪದಕವನ್ನು ನದೀಮ್ ತಂದುಕೊಟ್ಟಿದ್ದರು. ಆದರೂ ಅವರಿಗೆ ಕೊಟ್ಟಿರುವುದು ಕೇವಲ 3 ಲಕ್ಷ ಭಾರತೀಯ ರೂಪಾಯಿ.

ಗೆಲುವಿನೊಂದಿಗೆ ಪಾಕಿಸ್ತಾನ ಒಲಿಂಪಿಕ್ಸ್​ನಲ್ಲಿ ತನ್ನ ಮೊದಲ ವೈಯಕ್ತಿಕ ಚಿನ್ನದ ಪದಕವನ್ನು ಗೆದ್ದುಕೊಂಡಿತು. ಈ ಹಿಂದೆ ಪಾಕಿಸ್ತಾನ 1960, 1968 ಮತ್ತು 1984ರಲ್ಲಿ ಹಾಕಿಯಲ್ಲಿ ಕೇವಲ ಮೂರು ಒಲಿಂಪಿಕ್ ಚಿನ್ನದ ಪದಕಗಳನ್ನು ಗೆದ್ದಿತ್ತು. ನದೀಮ್ ಅವರ ಗೆಲುವು ಆಟಗಾರ ಮತ್ತು ಪಾಕಿಸ್ತಾನ ಎರಡಕ್ಕೂ ಮಹತ್ವದ ಮೈಲಿಗಲ್ಲಾಗಿದೆ.

ಪಾಕ್ ಪ್ರಧಾನಿಯಿಂದ ಅವಮಾನ; ಡ್ಯಾನಿಶ್ ಕನೇರಿಯಾ

ಒಲಿಂಪಿಕ್ಸ್​ನಲ್ಲಿ ಐತಿಹಾಸಿಕ ವಿಜಯದ ಹೊರತಾಗಿಯೂ, ನದೀಮ್​​ಗೆ ಪ್ರಧಾನಿಯವರು 10 ಲಕ್ಷ ಪಾಕಿಸ್ತಾನ ರೂಪಾಇ (ಸುಮಾರು 3 ಲಕ್ಷ ಭಾರತ ರೂಪಾಯಿ) ನೀಡಿದರು. ಅಷ್ಟು ಕಡಿಮೆ ಮೊತ್ತ ಕೊಟ್ಟ ಹೊರತಾಗಿಯೂ ಚೆಕ್​ ನೀಡುವ ಚಿತ್ರವನ್ನು ಸೋಶಿಯಲ್ ಮೀಡಿಯಾಗಳಲ್ಲಿ ಪೋಸ್ಟ್ ಮಾಡಿದ್ದಾರೆ.

ಶರೀಫ್ ತಮ್ಮ ಅಭಿನಂದನಾ ಪೋಸ್ಟ್​ನಲ್ಲಿ “ಶಹಬ್ಬಾಸ್​ ಅರ್ಷದ್​ ಇತಿಹಾಸ ಸೃಷ್ಟಿ ಮಾಡಿದ್ದೀರಿ. ಪಾಕಿಸ್ತಾನದ ಮೊದಲ ಒಲಿಂಪಿಕ್ ಜಾವೆಲಿನ್ ಚಾಂಪಿಯನ್​ ನೀವು. ದೇಶಕ್ಕೆ ಹೆಮ್ಮೆ ತಂದಿದ್ದಿರಿ ಎಂದು ಬರೆದುಕೊಂಡಿದ್ದಾರೆ.

ಪಾಕಿಸ್ತಾನ ಪ್ರಧಾನಿ ನದೀಮ್​​ ನೀಡಿದ ಗೌರವದ ಬಗ್ಗೆ ಪ್ರತಿಕ್ರಿಯಿಸಿದ ಕನೇರಿಯಾ, ಈ ಮೊತ್ತವನ್ನು ಒಲಿಂಪಿಕ್ ಚಿನ್ನದ ಪದಕ ವಿಜೇತ ಮತ್ತು ಅವರ ಗಮನಾರ್ಹ ಸಾಧನೆಗೆ ಅಗೌರವ ಎಂದು ಕರೆದಿದ್ದಾರೆ. ಇತರ ದೇಶಗಳು ತಮ್ಮ ಒಲಿಂಪಿಕ್ ಹೀರೋಗಳಿಗೆ ನೀಡುವ ಬಹುಮಾನದ ಮೊತ್ತಕ್ಕೆ ಹೋಲಿಸಿದರೆ ಬಹುಮಾನದ ಮೊತ್ತ ಏನೂ ಅಲ್ಲ ಪಾಕಿಸ್ತಾನದ ಮಾಜಿ ಸ್ಪಿನ್ನರ್ ಹೇಳಿದ್ದಾರೆ.

ನದೀಮ್​​ಗೆ ಉತ್ತಮ ಮಾನ್ಯತೆ ನೀಡುವಂತೆ ಕನೇರಿಯಾ ಆಗ್ರಹ

2024ರ ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಚಿನ್ನ ಗೆದ್ದಿದ್ದಕ್ಕಾಗಿ ನದೀಮ್ ಕೂಡ ಸುಮಾರು 42 ಲಕ್ಷ ರೂ.ಗಳನ್ನು ಬಹುಮಾನವಾಗಿ ಪಡೆಯುತ್ತಾರೆ. ಅಂಥದ್ದರಲ್ಲಿ ಕೇವಲ 10 ಲಕ್ಷ ರೂಪಾಯಿ ಘೋಷಿಸಿದ್ದೀರಿ. ಅದರಲ್ಲಿ 243,069 ರೂಪಾಯಿ ಪ್ಯಾರಿಸ್​ಗೆ ಹೋಗುವ ವಿಮಾನದ ಟಿಕೆಟ್​ಗೆ ಇದೆ ಎಂದು ಕನೇರಿಯಾ ಹೇಳಿದ್ದಾರೆ.

ಒಲಿಂಪಿಕ್ ಕ್ರೀಡಾಕೂಟದಲ್ಲಿ ಐತಿಹಾಸಿಕ ಸಾಧನೆಗಾಗಿ ನದೀಮ್ ಅವರಿಗೆ ಹೆಚ್ಚು ಬಹುಮಾನವನ್ನು ನೀಡುವಂತೆ ಅವರು ಪ್ರಧಾನಿಯನ್ನು ಒತ್ತಾಯಿಸಿದ್ದಾರೆ. ಕನೇರಿಯಾ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ. “ಮಾನ್ಯ ಪ್ರಧಾನ ಮಂತ್ರಿಯವರೇ, ಕನಿಷ್ಠ ಆಕರ್ಷಕ ಅಭಿನಂದನೆಗಳನ್ನು ಸಲ್ಲಿಸಿ. ನೀವು ನೀಡಿದ ಸಣ್ಣ ಮೊತ್ತದ ಚಿತ್ರವನ್ನು ತೆಗೆಯಿರಿ. ಈ ಮೊತ್ತವು ತುಂಬಾ ಸಣ್ಣದು. ಅವರಿಗೆ ವಿಮಾನ ಟಿಕೆಟ್ ಗಳನ್ನು ಸಹ ಖರೀದಿಸಲು ಸಾಧ್ಯವಿಲ್ಲ. ಅರ್ಷದ್ ಅವರ ಶ್ರಮವನ್ನು ಪರಿಗಣಿಸಿದರೆ ಇದು ಅವರಿಗೆ ಮತ್ತು ರಾಷ್ಟ್ರಕ್ಕೆ ಮಾಡಿದ ಅವಮಾನ” ಎಂದು ಅವರು ಹೇಳಿದ್ದಾರೆ.

ಭಾರತದಲ್ಲಿ ಕಂಚಿನ ಪದಕ ಗೆದ್ದಿರುವ ಸ್ಪರ್ಧಿಗಳಿಗೆ ಆಯಾ ರಾಜ್ಯಗಳೇ ಕೋಟಿ ಕೋಟಿ ರೂಪಾಯಿ ಬಹುಮಾನ ನೀಡುತ್ತಿದೆ. ಅಂಥದ್ದರಲ್ಲಿ ಪಾಕಿಸ್ತಾನದ ಪ್ರಧಾನಿ ಕೇವಲ 10 ಲಕ್ಷ ರೂಪಾಯಿ ಕೊಟ್ಟು ಟೀಕೆಗೆ ಒಳಗಾಗಿದ್ದಾರೆ.

Continue Reading

ಪ್ರಮುಖ ಸುದ್ದಿ

Plane Crash: ವಿಮಾನ ಪತನ; 62 ಪ್ರಯಾಣಿಕರು ಸೇರಿ ಎಲ್ಲ 70 ಮಂದಿಯ ದುರ್ಮರಣ, Videoಗಳು ಇವೆ

Plane Crash: ವಿಮಾನದ ಅವಶೇಷಗಳಿಂದ ಶವಗಳನ್ನು ಹೊರತೆಗೆಯಲಾಗುತ್ತಿದೆ. ಮೃತಪಟ್ಟವರ ಗುರುತು ಪತ್ತೆ ಹಚ್ಚಲಾಗುತ್ತಿದೆ. ಅಗ್ನಿಶಾಮಕ ಸಿಬ್ಬಂದಿಯು ಸ್ಥಳದಲ್ಲೇ ಬೀಡು ಬಿಟ್ಟಿದ್ದಾರೆ. ಶವಗಳನ್ನು ಸಾಗಿಸಲು ಆಂಬುಲೆನ್ಸ್‌ ವ್ಯವಸ್ಥೆ ಮಾಡಲಾಗಿದೆ ಎಂಬುದಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

VISTARANEWS.COM


on

Plane Crash
Koo

ಬ್ರೆಸಿಲಿಯಾ: ಬ್ರೆಜಿಲ್‌ನಲ್ಲಿ ಭೀಕರ ವಿಮಾನ ದುರಂತ (Brazil Plane Crash) ಸಂಭವಿಸಿದೆ. 62 ಪ್ರಯಾಣಿಕರು ಸೇರಿ ಒಟ್ಟು 70 ಜನರಿದ್ದ ವಿಮಾನವು ಬ್ರೆಜಿಲ್‌ನ ಸಾವೋ ಪೌಲೋದಲ್ಲಿ (Sao Paulo) ಪತನಗೊಂಡಿದ್ದು (Plane Crash), ಭೂಮಿಗೆ ಅಪ್ಪಳಿಸುತ್ತಲೇ ವಿಮಾನಕ್ಕೆ ಬೆಂಕಿ ಹೊತ್ತಿಕೊಂಡಿದೆ. ಪತನಗೊಂಡ ಕೆಲವೇ ಸೆಕೆಂಡ್‌ಗಳಲ್ಲಿ ಭೀಕರವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಸುತ್ತಲೂ ಹೊಗೆ ಆವರಿಸಿದೆ. ಇದರಿಂದಾಗಿ ವಿಮಾನದಲ್ಲಿದ್ದ ಎಲ್ಲ 70 ಜನರೂ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ ಎಂಬುದಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಕಾಸ್ಕಾವೆಲ್‌ನಿಂದ ಗುವಾರುಲ್ಹೋಸ್‌ ಏರ್‌ಪೋರ್ಟ್‌ಗೆ ತೆರಳುತ್ತಿದ್ದ ವೇಳೆ ಸಾವೋ ಪೌಲೋ ರಾಜ್ಯದ ವಿನ್ಹೇಡೋ ಎಂಬ ಪ್ರದೇಶದಲ್ಲಿ ವಿಮಾನವು ಪತನಗೊಂಡಿದೆ. ಅದೃಷ್ಟವಶಾತ್‌, ವಿಮಾನವು ಜನವಸತಿ ಪ್ರದೇಶದಲ್ಲಿ ಪತನಗೊಂಡಿಲ್ಲ. ಆದರೂ, ವಿಮಾನದಲ್ಲಿದ್ದ ಎಲ್ಲ ಪ್ರಯಾಣಿಕರು ಪತನಗೊಂಡ ಬಳಿಕ ಹೊತ್ತಿಕೊಂಡ ಬೆಂಕಿಯಲ್ಲಿ ಸುಟ್ಟು ಕರಕಲಾಗಿದ್ದಾರೆ ಎಂಬುದಾಗಿ ಮಾಹಿತಿ ಲಭ್ಯವಾಗಿದೆ. ಬ್ರೆಜಿಲ್‌ನಲ್ಲಿಯೇ ಇದು ಇತ್ತೀಚೆಗೆ ಸಂಭವಿಸಿದ ಭೀಕರ ವಿಮಾನ ದುರಂತ ಎಂದು ತಿಳಿದುಬಂದಿದೆ.

ವಿಮಾನದಲ್ಲಿ 62 ಪ್ರಯಾಣಿಕರು ಹಾಗೂ 8 ವಿಮಾನದ ಸಿಬ್ಬಂದಿ ಇದ್ದರು. ವಿಮಾನ ಹಾರಾಟ ನಡೆಸುತ್ತಿರುವಾಗಲೇ ನಿಯಂತ್ರಣ ತಪ್ಪಿದೆ. ಅದು ಬೀಳುವ ಮುನ್ನ ಬೆಂಕಿ ಕಾಣಿಸಿಕೊಂಡಿರಲಿಲ್ಲ. ಭೂಮಿಗೆ ಅಪ್ಪಳಿಸಿದ ರಭಸಕ್ಕೆ ಕೆಲವೇ ಕ್ಷಣಗಳಲ್ಲಿ ಬೆಂಕಿ ಹೊತ್ತಿಕೊಂಡಿದೆ. ಸ್ಥಳಕ್ಕೆ ಭದ್ರತಾ ಸಿಬ್ಬಂದಿ, ಅಗ್ನಿಶಾಮಕ ಸಿಬ್ಬಂದಿ ಆಗಮಿಸುವ ವೇಳೆಗೆ ಎಲ್ಲ ಪ್ರಯಾಣಿಕರು ಮೃತಪಟ್ಟಿದ್ದರು ಎನ್ನಲಾಗಿದೆ. ವಿಮಾನ ಪತನವಾಗುವ ಭೀಕರ ವಿಡಿಯೊಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ವಿಮಾನದ ಅವಶೇಷಗಳಿಂದ ಶವಗಳನ್ನು ಹೊರತೆಗೆಯಲಾಗುತ್ತಿದೆ. ಮೃತಪಟ್ಟವರ ಗುರುತು ಪತ್ತೆ ಹಚ್ಚಲಾಗುತ್ತಿದೆ. ಅಗ್ನಿಶಾಮಕ ಸಿಬ್ಬಂದಿಯು ಸ್ಥಳದಲ್ಲೇ ಬೀಡು ಬಿಟ್ಟಿದ್ದಾರೆ. ಶವಗಳನ್ನು ಸಾಗಿಸಲು ಆಂಬುಲೆನ್ಸ್‌ ವ್ಯವಸ್ಥೆ ಮಾಡಲಾಗಿದೆ ಎಂಬುದಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಇದುವರೆಗೆ, ವಿಮಾನ ಪತನಕ್ಕೆ ನಿಖರ ಕಾರಣ ಏನು ಎಂಬುದು ಗೊತ್ತಾಗಿಲ್ಲ. ಆದಾಗ್ಯೂ, ಪ್ರಕರಣವನ್ನು ಸರ್ಕಾರವು ತನಿಖೆಗೆ ಆದೇಶಿಸಿದೆ.

ಇದನ್ನೂ ಓದಿ: Plane Crash: ನೇಪಾಳದಲ್ಲಿ 19 ಪ್ರಯಾಣಿಕರಿದ್ದ ವಿಮಾನ ಪತನ; ವಿಡಿಯೋ ಇದೆ

Continue Reading

ದೇಶ

Tarsem Singh: ಎನ್‌ಐಎ ಪ್ರಮುಖ ಕಾರ್ಯಾಚರಣೆ; ಅಬುಧಾಬಿಯಲ್ಲಿ ಖಲಿಸ್ತಾನಿ ಉಗ್ರ ತರ್ಸೇಮ್‌ ಸಿಂಗ್ ಬಂಧನ!

Tarsem Singh: ಪಂಜಾಬ್‌ನವನಾದ ತರ್ಸೇಮ್‌ ಸಿಂಗ್‌, ಉಗ್ರ ಲಖಬೀರ್‌ ಲಾಂಡಾನ ಸಹೋದರನಾಗಿದ್ದಾನೆ. ಈತನು ಮತ್ತೊಬ್ಬ ಉಗ್ರ ಹರ್ವಿಂದರ್‌ ಸಿಂಗ್‌ ರಿಂಡಾನ ಆಪ್ತನೂ ಆಗಿದ್ದಾನೆ. ಈತನು ಬಬ್ಬರ್‌ ಖಲಿಸ್ತಾನ ಇಂಟರ್‌ನ್ಯಾಷನಲ್‌ (BKI) ಉಗ್ರ ಸಂಘಟನೆಯ ಸದಸ್ಯನೂ ಆಗಿದ್ದಾನೆ. ಈತನನ್ನು ಎನ್‌ಐಎ ಅಧಿಕಾರಿಗಳು ಯುಎಇಯಲ್ಲಿ ಬಂಧಿಸಿದ್ದಾರೆ.

VISTARANEWS.COM


on

Tarsem Singh
Koo

ನವದೆಹಲಿ: ಭಾರತದ ರಾಷ್ಟ್ರೀಯ ತನಿಖಾ ಸಂಸ್ಥೆಯು (NIA) ವಿದೇಶದಲ್ಲೂ ಮಹತ್ವದ ಕಾರ್ಯಾಚರಣೆಯೊಂದರಲ್ಲಿ ಯಶಸ್ವಿಯಾಗಿದೆ. ಖಲಿಸ್ತಾನಿ ಉಗ್ರ (Khalistan Terrorist) ತರ್ಸೇಮ್‌ ಸಿಂಗ್‌ನನ್ನು (Tarsem Singh) ಎನ್‌ಐಎ ಅಧಿಕಾರಿಗಳು ಯುಎಇಯ ಅಬುಧಾಬಿಯಲ್ಲಿ ಬಂಧಿಸಿದ್ದು, ಭಾರತಕ್ಕೆ ಕರೆದುಕೊಂಡು ಬರುತ್ತಿದ್ದಾರೆ. ತರ್ಸೇಮ್‌ ಸಿಂಗ್‌ ವಿರುದ್ಧ ಎನ್‌ಐಎ ಅಧಿಕಾರಿಗಳು ಇದಕ್ಕೂ ಮೊದಲೇ ಜಾಮೀನು ರಹಿತ ವಾರಂಟ್‌ ಹೊರಡಿಸಿದ್ದರು. ಅದರಂತೆ, ಯುಎಇ ಅಧಿಕಾರಿಗಳು, ಇಂಟರ್‌ಪೋಲ್‌ ಜತೆ ಸಂಪರ್ಕ ಸಾಧಿಸಿ, ಹಸ್ತಾಂತರ ಪ್ರಕ್ರಿಯೆ ಮುಗಿಸಿ, ತರ್ಸೇಮ್‌ ಸಿಂಗ್‌ನನ್ನು ಅಬುಧಾಬಿಯಲ್ಲಿ ಬಂಧಿಸಿದ್ದಾರೆ.

ಪಂಜಾಬ್‌ನವನಾದ ತರ್ಸೇಮ್‌ ಸಿಂಗ್‌, ಉಗ್ರ ಲಖಬೀರ್‌ ಲಾಂಡಾನ ಸಹೋದರನಾಗಿದ್ದಾನೆ. ಈತನು ಮತ್ತೊಬ್ಬ ಉಗ್ರ ಹರ್ವಿಂದರ್‌ ಸಿಂಗ್‌ ರಿಂಡಾನ ಆಪ್ತನೂ ಆಗಿದ್ದಾನೆ. ಈತನು ಬಬ್ಬರ್‌ ಖಲಿಸ್ತಾನ ಇಂಟರ್‌ನ್ಯಾಷನಲ್‌ (BKI) ಉಗ್ರ ಸಂಘಟನೆಯ ಸದಸ್ಯನೂ ಆಗಿದ್ದಾನೆ ಎಂದು ಎನ್‌ಐಎ ಮೂಲಗಳು ತಿಳಿಸಿವೆ. 2023ರ ನವೆಂಬರ್‌ನಲ್ಲಿ ಅಬುಧಾಬಿಯಲ್ಲಿ ವಶಪಡಿಸಿಕೊಳ್ಳಲಾಗಿತ್ತು. ಎನ್‌ಐಎ ವಿಶೇಷ ನ್ಯಾಯಾಲಯವು ವಾರಂಟ್‌ ಹೊರಡಿಸಿದ ಬಳಿಕ ಇಂಟರ್‌ಪೋಲ್‌ ರೆಡ್‌ ಕಾರ್ನರ್‌ ನೋಟಿಸ್‌ ಹೊರಡಿಸಿತ್ತು.

ಇಂಟರ್‌ಪೋಲ್‌ ರೆಡ್‌ ಕಾರ್ನರ್‌ ನೋಟಿಸ್‌ ಹೊರಡಿಸಿದ ಬಳಿಕ 2023ರಲ್ಲಿ ಅಬುಧಾಬಿಯಲ್ಲಿ ಖಲಿಸ್ತಾನಿ ಉಗ್ರನನ್ನು ವಶಪಡಿಸಿಕೊಳ್ಳಲಾಗಿತ್ತು ಇದಾದ ಬಳಿಕ ಎನ್‌ಐಎ ಅಧಿಕಾರಿಗಳು ಯುಎಇ, ಇಂಟರ್‌ಪೋಲ್‌ ಅಧಿಕಾರಿಗಳೊಂದಿಗೆ ಸಂಪರ್ಕ ಸಾಧಿಸಿ, ಸಮರ್ಪಕ ದಾಖಲೆಗಳನ್ನು ಒದಗಿಸಿ, ಯುಎಇಗೆ ತೆರಳಿ, ಉಗ್ರನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈಗ ತರ್ಸೇಮ್‌ ಸಿಂಗ್‌ನನ್ನು ಭಾರತಕ್ಕೆ ಹಸ್ತಾಂತರಿಸಲಾಗಿದ್ದು, ಎನ್‌ಐಎ ಅಧಿಕಾರಿಗಳು ಆತನನ್ನು ಕರೆತರುತ್ತಿದ್ದಾರೆ ಎಂದು ತಿಳಿದುಬಂದಿದೆ.

ಉಗ್ರ ಚಟುವಟಿಕೆಗಳ ಹಿನ್ನೆಲೆಯಲ್ಲಿ ತರ್ಸೇಮ್‌ ಸಿಂಗ್‌ ವಿರುದ್ಧ ಎನ್‌ಐಎ 2022ರ ಆಗಸ್ಟ್‌ನಲ್ಲಿ ಸುಮೋಟೊ (ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಳ್ಳುವುದು) ಕೇಸ್‌ ದಾಖಲಿಸಿಕೊಂಡಿತ್ತು. ಖಲಿಸ್ತಾನ ಲಿಬರೇಷನ್‌ ಫೊರ್ಸ್‌, ಬಿಕೆಐ, ಇಂಟರ್‌ನ್ಯಾಷನಲ್‌ ಸಿಖ್‌ ಯೂತ್‌ ಫೆಡರೇಷನ್‌ ಸೇರಿ ಹಲವು ಉಗ್ರ ಸಂಘಟನೆಗಳು ಭಾರತದಲ್ಲಿ ಉಗ್ರ ಚಟುವಟಿಕೆಗಳನ್ನು ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸುಮೋಟೊ ಕೇಸ್‌ ದಾಖಲಿಸಿಕೊಂಡು ತನಿಖೆ ನಡೆಸಿದಾಗ, ತರ್ಸೇಮ್‌ ಸಿಂಗ್‌ ಕೃತ್ಯಗಳು ಬಯಲಾಗಿವೆ. ಇದಾದ ಬಳಿಕ ಎನ್‌ಐಎ ತನಿಖೆ ಚುರುಕುಗೊಳಿಸಿದೆ.

ಇದನ್ನೂ ಓದಿ: Khalistani Terrorist: ಖಲಿಸ್ತಾನಿ ಭಯೋತ್ಪಾದಕ ಲಾಂಡಾನ ಪ್ರಮುಖ ಸಹಾಯಕ ಬಲ್ಜೀತ್ ಸಿಂಗ್ ಬಂಧನ

Continue Reading

ದೇಶ

CAA Rules: ಪಾಕ್‌, ಬಾಂಗ್ಲಾ, ಆಘ್ಘನ್‌ ನಿರಾಶ್ರಿತರಿಗೆ ಸಿಹಿ ಸುದ್ದಿ; ಸಿಎಎ ನಿಯಮ ಸಡಿಲಿಸಿದ ಕೇಂದ್ರ ಸರ್ಕಾರ!

CAA Rules: ಭಾರತದ ಪೌರತ್ವ ಪಡೆಯಲು ನಿರಾಶ್ರಿತ ಅಲ್ಪಸಂಖ್ಯಾತರು ಇನ್ನು ಮುಂದೆ ಸುಲಭವಾಗಿ ಪೌರತ್ವ ಪಡೆಯುವ ರೀತಿಯಲ್ಲಿ ಸಿಎಎ ಕಾಯ್ದೆಯ ಪರಿಚ್ಛೇದ 1 ಎ ನಿಯಮಗಳನ್ನು ಕೇಂದ್ರ ಸರ್ಕಾರ ಬದಲಿಸಿದೆ. ದಾಖಲೆ ಸಲ್ಲಿಕೆಯಲ್ಲಿ ನಿರಾಶ್ರಿತರಿಗೆ ವಿಳಂಬ, ತೊಂದರೆಯಾಗಬಾರದು ಎಂಬ ದೃಷ್ಟಿಯಿಂದ ಸಿಎಎ ನಿಯಮಗಳನ್ನು ಬದಲಾಯಿಸಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

VISTARANEWS.COM


on

CAA Rules
Koo

ನವದೆಹಲಿ: ಬಾಂಗ್ಲಾದೇಶದಲ್ಲಿ ರಾಜಕೀಯ ಅರಾಜಕತೆ ಸೃಷ್ಟಿಯಾಗಿದ್ದು, ಹಿಂದುಗಳ ಮೇಲೆ ಹಲ್ಲೆ, ಹತ್ಯೆ, ದೇವಾಲಯಗಳ ಮೇಲೆ ದಾಳಿಗಳು ನಡೆಯುತ್ತಿವೆ. ಮುಸ್ಲಿಮರೇ ಬಹುಸಂಖ್ಯಾತರಾಗಿರುವ ಬಾಂಗ್ಲಾದೇಶದಲ್ಲಿ ಹಿಂದುಗಳು ಸೇರಿ ಹಲವು ಅಲ್ಪಸಂಖ್ಯಾತ ಸಮುದಾಯಗಳ ಮೇಲೆ ದೌರ್ಜನ್ಯ ಎಸಗಲಾಗುತ್ತಿದೆ. ಇದರ ಬೆನ್ನಲ್ಲೇ, ಕೇಂದ್ರ ಸರ್ಕಾರವು ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಅಫಘಾನಿಸ್ತಾನದ ಮುಸ್ಲಿಮೇತರ ಅಲ್ಪಸಂಖ್ಯಾತರಿಗೆ ಭಾರತದ ಪೌರತ್ವ ನೀಡುವ ಪೌರತ್ವ ತಿದ್ದುಪಡಿ ಕಾಯ್ದೆಯ (CAA) ನಿಯಮಗಳನ್ನು ಬದಲಿಸಿದೆ.

ಹೌದು, ಭಾರತದ ಪೌರತ್ವ ಪಡೆಯಲು ನಿರಾಶ್ರಿತ ಅಲ್ಪಸಂಖ್ಯಾತರು ಇನ್ನು ಮುಂದೆ ಸುಲಭವಾಗಿ ಪೌರತ್ವ ಪಡೆಯುವ ರೀತಿಯಲ್ಲಿ ಸಿಎಎ ಕಾಯ್ದೆಯ ಪರಿಚ್ಛೇದ 1 ಎ ನಿಯಮಗಳನ್ನು ಕೇಂದ್ರ ಸರ್ಕಾರ ಬದಲಿಸಿದೆ. ಅದರಂತೆ, ನಿರಾಶ್ರಿತರು ಕೇಂದ್ರ ಸರ್ಕಾರ, ಯಾವುದೇ ರಾಜ್ಯ ಸರ್ಕಾರ ಅಥವಾ ನ್ಯಾಯಾಂಗ ನೀಡುವ ದಾಖಲೆ, ಭೂಮಿಯ ದಾಖಲೆ ನೀಡಿದರೂ ಸಾಕು, ಭಾರತದ ಪೌರತ್ವವನ್ನು ಪಡೆಯಬಹುದಾಗಿದೆ. ಇದರ ಜತೆಗೆ ನಿರಾಶ್ರಿತರ ಅಜ್ಜ-ಅಜ್ಜಿ, ಮುತ್ತಜ್ಜ-ಮುತ್ತಜ್ಜಿಯು ಬಾಂಗ್ಲಾ, ಪಾಕ್‌ ಹಾಗೂ ಅಫಘಾನಿಸ್ತಾನದ ನಿವಾಸಿಗಳು ಎಂಬುದರ ಯಾವುದೇ ದಾಖಲೆ ನೀಡಿದರೂ ಭಾರತದ ಪೌರತ್ವ ಪಡೆಯಬಹುದಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಪೌರತ್ವ ತಿದ್ದುಪಡಿ ಕಾಯ್ದೆ ಎಂದರೇನು?

2014 ರ ಡಿಸೆಂಬರ್ 31 ಕ್ಕಿಂತ ಮೊದಲು ನೆರೆಯ ಮುಸ್ಲಿಂ ಬಹುಸಂಖ್ಯಾತ ದೇಶಗಳಾದ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ವಲಸೆ ಬಂದ ಹಿಂದೂಗಳು, ಸಿಖ್ಖರು, ಕ್ರಿಶ್ಚಿಯನ್ನರು, ಬೌದ್ಧರು, ಜೈನರು ಮತ್ತು ಪಾರ್ಸಿಗಳಿಗೆ ಭಾರತೀಯ ಪೌರತ್ವಕ್ಕೆ ಮಾರ್ಗವನ್ನು ಒದಗಿಸಲು ಸಿಎಎ 1955 ರ ಪೌರತ್ವ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ.

ಸಿಎಎ ಅನುಷ್ಠಾನದ ಬಗ್ಗೆ ಆಡಳಿತಾರೂಢ ಭಾರತೀಯ ಜನತಾ ಪಕ್ಷವು ತನ್ನ ಹಿಂದಿನ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿತ್ತು. ಆದರೆ ಅದರ ನಿಯಮಗಳನ್ನು ತಿಳಿಸಿರಲಿಲ್ಲ. ಕಾಯ್ದೆಯ 2019ರ ತಿದ್ದುಪಡಿಯ ಪ್ರಕಾರ ಡಿಸೆಂಬರ್ 31, 2014 ರವರೆಗೆ ಭಾರತಕ್ಕೆ ಪ್ರವೇಶಿಸಿದ ಮತ್ತು ತಮ್ಮ ಮೂಲ ದೇಶದಲ್ಲಿ “ಧಾರ್ಮಿಕ ಕಿರುಕುಳ ಅಥವಾ ಭಯ ಅಥವಾ ಧಾರ್ಮಿಕ ಕಿರುಕುಳ” ಅನುಭವಿಸಿದ ವಲಸಿಗರಿಗೆ ಭಾರತೀಯ ಪೌರತ್ವ ಲಭಿಸುತ್ತದೆ.

ಸಿಎಎಗೆ 2019 ರ ತಿದ್ದುಪಡಿ ಮೂಲಕ ಮೇಲೆ ಹೇಳಿರುವ ದೇಶಗಳ ಮುಸ್ಲಿಮೇತರ ವಲಸಿಗರಿಗೆ ಪೌರತ್ವ ನೀಡುವ ಕಾಯುವಿಕೆಯ ಹನ್ನೆರಡು ವರ್ಷಗಳನ್ನು ಕೇವಲ ಆರು ವರ್ಷಗಳಿಗೆ ಇಳಿಸಲಾಗಿದೆ. ಸಿಎಎ ಕುರಿತ ಗುಪ್ತಚರ ಬ್ಯೂರೋ ವರದಿಯ ಪ್ರಕಾರ, ಕಾಯ್ದೆಯ ನಿಯಮಗಳು ಪ್ರಕಟಗೊಂಡ ತಕ್ಷಣವೇ 30,000 ಕ್ಕೂ ಹೆಚ್ಚು ಫಲಾನುಭವಿಗಳು (ವಲಸಿಗರು) ಇದರ ಲಾಭವನ್ನು ಪಡೆಯುತ್ತಾರೆ. ಈಗಾಗಲೇ ಹಲವು ನಿರಾಶ್ರಿತರಿಗೆ ಕೇಂದ್ರ ಸರ್ಕಾರವು ಪೌರತ್ವ ನೀಡಿದೆ.

ಇದನ್ನೂ ಓದಿ: CAA: ಸಿಎಎ ಕಾಯ್ದೆಯಡಿ 14 ವಲಸಿಗರಿಗೆ ಭಾರತದ ಪೌರತ್ವ; ಏನಿದು ಕಾಯ್ದೆ? ಭಾರತದ ಮುಸ್ಲಿಮರಿಗೆ ತೊಂದರೆ ಇದೆಯೇ?

Continue Reading
Advertisement
Aman Sehrawa
ಕ್ರೀಡೆ13 mins ago

Aman Sehrawat: 10 ಗಂಟೆ ಅವಧಿಯಲ್ಲಿ 4.6 ಕೆಜಿ ತೂಕ ಇಳಿಸಿ ಕಂಚು ಗೆದ್ದ ಅಮನ್​ ಸೆಹ್ರಾವತ್; ಹೇಗಿತ್ತು ಅವರ ಪರಿಶ್ರಮ?

Duniya Vijay Starrer Bheema Movie Collects three and half crore
ಸ್ಯಾಂಡಲ್ ವುಡ್26 mins ago

Duniya Vijay: ಮೊದಲ ದಿನದ ಗಳಿಕೆಯಲ್ಲಿ ʻಬ್ಲಾಕ್‌ ಕೋಬ್ರಾʼ ಭರ್ಜರಿ ಅಬ್ಬರ; ʻಭೀಮʼಗೆ ಬಹುಪರಾಕ್ ಎಂದ ಪ್ರೇಕ್ಷಕರು!

Namma Metro ticket price hike
ಬೆಂಗಳೂರು45 mins ago

Namma Metro Ticket Price Hike: ಮೆಟ್ರೋ ಟಿಕೆಟ್‌ ದರದ ಮೇಲೆ ಕೈ ಇಟ್ರೋ! ಬೆಂಗಳೂರು ಜನರಿಗೆ ಮತ್ತೊಂದು ಬೆಲೆ ಏರಿಕೆ ಬಿಸಿ?

IPL 2025
ಕ್ರೀಡೆ1 hour ago

IPL 2025: ರಾಜಸ್ಥಾನ್​ ರಾಯಲ್ಸ್​ಗೆ ರಾಹುಲ್​ ದ್ರಾವಿಡ್​ ನೂತನ ಕೋಚ್​?

pm narendra modi wayanad landslide
ಪ್ರಮುಖ ಸುದ್ದಿ1 hour ago

PM Narendra Modi: ಭೂಕುಸಿತ ಪೀಡಿತ ವಯನಾಡಿಗೆ ಇಂದು ನರೇಂದ್ರ ಮೋದಿ ಭೇಟಿ

Nikkita Ghag Breaks Internet With Naked Photoshoot
ಬಾಲಿವುಡ್1 hour ago

Nikkita Ghag: ಬೆತ್ತಲೆ ಫೋಟೋಶೂಟ್‌ನೊಂದಿಗೆ ಇಂಟರ್‌ನೆಟ್‌ಗೆ ಬೆಂಕಿ ಹಚ್ಚಿದ ಖ್ಯಾತ ಬಾಲಿವುಡ್‌ ನಟಿ!

Aman Sehrawat
ಕ್ರೀಡೆ2 hours ago

Aman Sehrawat: ಬಾಲ್ಯದಲ್ಲೇ ತಂದೆ-ತಾಯಿಯನ್ನು ಕಳೆದುಕೊಂಡು ಅನಾಥರಾಗಿದ್ದ ಅಮನ್​ ಇಂದು ದೇಶಕ್ಕಾಗಿ ಕಂಚು ಗೆದ್ದ ಸಾಧಕ

Venu Swamy Prediction On Naga Chaitanya And Sobhita Dhulipala Engagement
ಟಾಲಿವುಡ್2 hours ago

Venu Swamy: ಚೈತು-ಶೋಭಿತಾದು ಜಾತಕ ಮಾತ್ರವಲ್ಲ ನಿಶ್ಚಿತಾರ್ಥ ಮುಹೂರ್ತವೇ ಸರಿಯಿಲ್ಲ ಎಂದ ಜ್ಯೋತಿಷಿ ವೇಣುಸ್ವಾಮಿ!

Bangladesh Unrest hindus protest
ವಿದೇಶ2 hours ago

Bangladesh Unrest: ಶೇಖ್‌ ಹಸೀನಾ ಓಡಿ ಬಂದ ಬಳಿಕ ಬಾಂಗ್ಲಾದೇಶದಲ್ಲಿ 232 ಜನರ ಕಗ್ಗೊಲೆ, ಹಿಂದೂಗಳೇ ಟಾರ್ಗೆಟ್

Tharun Sudhir And Sonal Montero Haldi Shastra Photos
ಸ್ಯಾಂಡಲ್ ವುಡ್2 hours ago

Tharun Sudhir: ತರುಣ್ ಸುಧೀರ್-ಸೋನಲ್ ಮದುವೆ ಸಂಭ್ರಮ; ಅದ್ಧೂರಿಯಾಗಿ ನಡೆದ ಅರಿಶಿಣ ಶಾಸ್ತ್ರ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು4 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ4 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ6 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ7 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌