Site icon Vistara News

Bangladesh Unrest: ಬಾಂಗ್ಲಾದಲ್ಲಿ ಹಿಂದುಗಳ ಮೇಲಿನ ದಾಳಿಗೆ ಇಸ್ಲಾಮಿಕ್‌ ರಾಷ್ಟ್ರಗಳಿಂದ ಹಣ; ಇಲ್ಲಿದೆ ಸ್ಫೋಟಕ ಮಾಹಿತಿ

Bangladesh Unrest

ಢಾಕಾ: ಬಾಂಗ್ಲಾದೇಶದಲ್ಲಿ ಮಾಜಿ ಪ್ರಧಾನಿ ಶೇಖ್‌ ಹಸೀನಾ (Sheikh Hasina) ನೇತೃತ್ವದ ಸರ್ಕಾರದ ವಿರುದ್ಧ ವಿದ್ಯಾರ್ಥಿಗಳು ಸೇರಿ ಹಲವರು ಆರಂಭಿಸಿದ್ದ ಪ್ರತಿಭಟನೆ, ಹಿಂಸಾಚಾರ ಈಗ ಹಿಂದುಗಳ ಮೇಲೆ ತಿರುಗಿದೆ. ಮೀಸಲಾತಿ ವಿರುದ್ಧದ ಹೋರಾಟವೀಗ ಹಿಂದುಗಳ ಮೇಲಿನ ಸೇಡು, ದಾಳಿಯಾಗಿ (Bangladesh Unrest) ಪರಿವರ್ತನೆಗೊಂಡಿದೆ. ಹಿಂದುಗಳ ಮೇಲೆ ದಾಳಿ (Bangladesh Hindus) ನಡೆಸಲಾಗುತ್ತಿದೆ. ಹಿಂದುಗಳನ್ನು ಹತ್ಯೆ ಮಾಡಲಾಗುತ್ತಿದೆ. ಹಿಂದು ದೇವಾಲಯಗಳನ್ನು ಧ್ವಂಸ ಮಾಡಲಾಗಿದೆ. ಇದರ ಮಧ್ಯೆಯೇ, ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ದಾಳಿ ನಡೆಸುತ್ತಿರುವುದರ ಹಿಂದೆ ಇಸ್ಲಾಮಿಕ್‌ ರಾಷ್ಟ್ರಗಳ ಹಣ ಹಾಗೂ ಕುತಂತ್ರ ಇದೆ ಎಂದು ತಿಳಿದುಬಂದಿದೆ.

ಹೌದು, ಬಾಂಗ್ಲಾದೇಶದಲ್ಲಿ ಹಿಂಸಾಚಾರ ಆರಂಭವಾದ ಬಳಿಕ ದೇವಾಲಯಗಳು ಸೇರಿ 97ಕ್ಕೂ ಹಿಂದು ಸ್ಥಳಗಳ ಮೇಲೆ ದಾಳಿ ಇಸ್ಲಾಮಿಕ್‌ ಮೂಲಭೂತವಾದಿಗಳು ದಾಳಿ ನಡೆಸಿದ್ದಾರೆ. ಹಿಂದುಗಳನ್ನು ಒತ್ತೆಯಾಳುಗಳನ್ನಾಗಿ ಇಟ್ಟುಕೊಳ್ಳುವುದು, ಹಿಂದು ಮಹಿಳೆಯರ ಮೇಲೆ ದೌರ್ಜನ್ಯ ಎಸಗುವುದು ಸೇರಿ ಹಲವು ರೀತಿಯಲ್ಲಿ ದಾಳಿ ನಡೆಸಲಾಗಿದೆ. ಇದಕ್ಕೆಲ್ಲ ಗಲ್ಫ್‌ ದೇಶಗಳು ಬಾಂಗ್ಲಾದೇಶದ ಮೂಲಭೂತವಾದಿಗಳು ನೀಡುತ್ತಿರುವ ಹಣವೇ ಕಾರಣ ಎಂದು ಗುಪ್ತಚರ ಮೂಲಗಳು ತಿಳಿಸಿವೆ. ಆದರೆ, ಯಾವ ರಾಷ್ಟ್ರಗಳಿಂದ ಬಾಂಗ್ಲಾದೇಶದ ಮೂಲಭೂತವಾದಿಗಳಿಗೆ ಹಣ ಸಂದಾಯವಾಗುತ್ತಿದೆ ಎಂಬುದು ಗೊತ್ತಾಗಿಲ್ಲ.

ಬಾಂಗ್ಲಾದೇಶದಲ್ಲಿರುವ ನಾಲ್ಕು ಇಸ್ಕಾನ್‌ ಹಾಗೂ ಕಾಳಿ ದೇವಾಲಯಗಳನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ. ಕಾಳಿ ದೇವಾಲಯಕ್ಕೆ ಬೆಂಕಿ ಹಚ್ಚಿದ ಇಸ್ಲಾಮಿಕ್‌ ಮೂಲಭೂತವಾದಿಗಳು ತಮ್ಮ ಮನಸ್ಥಿತಿ ಪ್ರದರ್ಶಿಸಿದ್ದಾರೆ. ರಂಗ್‌ಪುರ ಸಿಟಿ ಕಾರ್ಪೊರೇಷನ್‌ನ ಹಿಂದು ಕೌನ್ಸಿರ್‌ ಹರಧನ್‌ ರಾಯ್‌ ಹರ ಎಂಬುವರನ್ನು ಉದ್ರಿಕ್ತರು ಕೊಂದು ಹಾಕಿದ್ದಾರೆ. ಇದೇ ಪಟ್ಟಣದ ಮತ್ತೊಬ್ಬ ಹಿಂದು ಕೌನ್ಸಿಲರ್‌ ಕಾಜಲ್‌ ರಾಯ್‌ ಎಂಬವರನ್ನೂ ಕೊಲೆ ಮಾಡಿದ್ದಾರೆ. ಅಲ್ಲದೆ, ಭಾರತೀಯ ಕಲ್ಚರಲ್ ಸೆಂಟರ್‌ ಮೇಲೆಯೂ ದುಷ್ಕರ್ಮಿಗಳು ದಾಳಿ ನಡೆಸಿ, ಕಟ್ಟಡಕ್ಕೆ ಹಾನಿ ಮಾಡಿದ್ದಾರೆ.

‌2013ರಿಂದ 4 ಸಾವಿರ ದಾಳಿ

ಬಾಂಗ್ಲಾದೇಶದಲ್ಲಿರುವ ಅಲ್ಪಸಂಖ್ಯಾತರು, ಅದರಲ್ಲೂ ಹಿಂದುಗಳ ಮೇಲೆ ಹಲವು ವರ್ಷಗಳಿಂದ ದಾಳಿ ನಡೆಯುತ್ತಿದೆ. ವರದಿಗಳ ಪ್ರಕಾರ 2013ರಿಂದ ಇದುವರೆಗೆ ಹಿಂದುಗಳ ಮೇಲೆ ಸುಮಾರು 4 ಸಾವಿರ ದಾಳಿಗಳು ನಡೆದಿವೆ ಎಂದು ತಿಳಿದುಬಂದಿದೆ. ಹಿಂದುಗಳು, ಅದರಲ್ಲೂ ಶೇಖ್‌ ಹಸೀನಾ ಅವರ ಜತೆ ಆಪ್ತರಾಗಿದ್ದ ಸೆಲೆಬ್ರಿಟಿಗಳನ್ನು ಹತ್ಯೆ ಮಾಡುತ್ತಿರುವುದರ ಹಿಂದೆ ಗಲ್ಫ್‌ ರಾಷ್ಟ್ರಗಳ ಕೈವಾಡ ಇದೆ. ಹಿಂದು ಗಾಯಕ ರಾಹುಲ್‌ ಆನಂದ್‌, ಕೌನ್ಸಿಲರ್‌ಗಳನ್ನು ಇದೇ ಕಾರಣಕ್ಕಾಗಿ ಹತ್ಯೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Muhammad Yunus: ಬಾಂಗ್ಲಾ ಮಧ್ಯಂತರ ಸರ್ಕಾರಕ್ಕೆ ಮಹಮ್ಮದ್ ಯೂನಸ್‌ರನ್ನು ಮುಖ್ಯಸ್ಥರಾಗಿ ಮಾಡಿದ್ದೇಕೆ? ಏನಿವರ ಹಿನ್ನೆಲೆ?

Exit mobile version