Site icon Vistara News

Bangladesh Unrest: ಬಾಂಗ್ಲಾ ಹಿಂದೂಗಳ ಪರ ಸೋಶಿಯಲ್‌ ಮೀಡಿಯಾ ಅಭಿಯಾನ; All eyes on hindus ಭಾರೀ ಟ್ರೆಂಡ್!

Bangladesh Unrest

ಢಾಕಾ: ಬಾಂಗ್ಲಾದೇಶ(Bangladesh Unrest)ದಲ್ಲಿ ತಲೆದೋರಿರುವ ಅರಾಜಕತೆ ಅಲ್ಲಿನ ಅಲ್ಪಸಂಖ್ಯಾತ ಹಿಂದೂಗಳ ಜೀವಕ್ಕೆ ಅಪಾಯವನ್ನು ತಂದೊಡ್ಡಿದೆ. ಅದಕ್ಕೆ ಪೂರಕ ಎನ್ನುವಂತೆ ಅಲ್ಲಿನ ಹಿಂದೂಗಳು ಸಹಾಯಕ್ಕಾಗಿ ಅಂಗಲಾಚುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಇನ್ನು ಶೇಕ್ ಹಸೀನಾ ಪ್ರಧಾನಿ ಹುದ್ದೆಯಿಂದ ನಿರ್ಗಮನದ ಬಳಿಕ ಮೊಹಮ್ಮದ್ ಯೂನಸ್ ಅಧಿಕಾರ ವಹಿಸಿಕೊಂಡರೂ ದಾಳಿ ಕಡಿಮೆಯಾಗಿಲ್ಲ. ಈ ನಡುವೆ ಆಲ್‌ ಐಸ್‌ ಆನ್‌ ಬಾಂಗ್ಲಾದೇಶ್‌ ಹಿಂದೂಸ್‌(All eyes on Bangladesh Hindus) ಎಂಬ ಪರಿಕಲ್ಪನೆ ಸಾಮಾಜಿಕ ಜಾಲತಾಣದಲ್ಲಿ ಬಹಳ ಟ್ರೆಂಡಿಂಗ್‌ ಆಗುತ್ತಿದೆ.

ಬಾಂಗ್ಲಾದೇಶದ ಹಿಂದೂಗಳು ಮತ್ತು ದೇವಾಲಯಗಳ ಮೇಲಿನ ದಾಳಿಯ ಬಗ್ಗೆ ಮೌನವಾಗಿರುವುದಕ್ಕೆ ಬಾಲಿವುಡ್ ಸೆಲೆಬ್ರಿಟಿಗಳನ್ನು ನೆಟ್ಟಿಗರು ಟೀಕಿಸುತ್ತಿರುವ ಪರಿಕಲ್ಪನೆ ‘ಎಲ್ಲಾ ಕಣ್ಣುಗಳು ಬಾಂಗ್ಲಾದೇಶ ಹಿಂದೂಗಳ ಮೇಲೆ’ ಸಾಮಾಜಿಕ ಮಾಧ್ಯಮದಲ್ಲಿ ಟ್ರೆಂಡಿಂಗ್ ಆಗಿವೆ. ಕೆಲವು ತಿಂಗಳುಗಳ ಹಿಂದೆ ಇಸ್ರೇಲ್ ದಾಳಿಯನ್ನು ಖಂಡಿಸಿ ಪ್ಯಾಲೆಸ್ಟೈನ್‌ ಗೆ ಬೆಂಬಲ ಸೂಚಿಸಿ ಅನೇಕರು ಇನ್ ಸ್ಟಾ ಗ್ರಾಮ್ ನಲ್ಲಿ ‘ಆಲ್ ಐಸ್ ಆನ್ ರಫಾ’ ಘೋಷಣೆಯೊಂದಿಗೆ ಹಂಚಿಕೊಂಡಿದ್ದಾರೆ. ಇದನ್ನು ಇನ್ ಸ್ಟಾ ಗ್ರಾಮ್ ನಲ್ಲಿ ಹಂಚಿಕೊಂಡಿರುವವರ ಸಂಖ್ಯೆ 30 ಮಿಲಿಯನ್ ದಾಟಿತ್ತು. ಈ ಪೋಸ್ಟನ್ನು ಬಾಲಿವುಡ್‌ ತಾರೆಯರು ತಮ್ಮ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಹಂಚಿಕೊಂಡಿದ್ದರು.

ಹಿಂಸಾಚಾರ ಪೀಡಿತ ಬಾಂಗ್ಲಾದೇಶದ ಅಲ್ಪಸಂಖ್ಯಾತ ಸಮುದಾಯಗಳ ಸದಸ್ಯರು ಆಗಸ್ಟ್ 5 ರಂದು Ms ಹಸೀನಾ ನೇತೃತ್ವದ ಸರ್ಕಾರ ಪತನದ ನಂತರ 52 ಜಿಲ್ಲೆಗಳಲ್ಲಿ 205 ಕ್ಕೂ ಹೆಚ್ಚು ದಾಳಿಯ ಘಟನೆಗಳನ್ನು ಎದುರಿಸಿದ್ದಾರೆ. ನೂರಾರು ಹಿಂದೂಗಳು ತಮ್ಮ ಮನೆಗಳು ಮತ್ತು ವ್ಯವಹಾರಗಳ ಮೇಲಿನ ದಾಳಿಯಲ್ಲಿ ಗಾಯಗೊಂಡಿದ್ದಾರೆ ಎಂದು ನಂಬಲಾಗಿದೆ. ಹಲವಾರು ಹಿಂದೂ ದೇವಾಲಯಗಳನ್ನು ಸಹ ಧ್ವಂಸಗೊಳಿಸಲಾಗಿದೆ ಮತ್ತು ಶೇಖ್‌ ಹಸೀನಾ ಅವರ ಅವಾಮಿ ಲೀಗ್ ಪಕ್ಷದೊಂದಿಗೆ ಸಂಬಂಧ ಹೊಂದಿರುವ ಕನಿಷ್ಠ ಇಬ್ಬರು ಹಿಂದೂ ನಾಯಕರು ಹಿಂಸಾಚಾರದಲ್ಲಿ ಬಲಿಯಾಗಿದ್ದಾರೆ.

ಅಲ್ಪಸಂಖ್ಯಾತರ ಮೇಲಿನ ದಾಳಿಯ ಕುರಿತು ಬಾಂಗ್ಲಾದೇಶದ ಹಂಗಾಮಿ ನಾಯಕ ಬಾಂಗ್ಲಾದೇಶದ ಹಂಗಾಮಿ ನಾಯಕ ಮುಹಮ್ಮದ್ ಯೂನಸ್ ಪ್ರತಿಕ್ರಿಯಿಸಿದ್ದಾರೆ. ಶನಿವಾರ ಹಿಂಸಾಚಾರ ಪೀಡಿತ ರಾಷ್ಟ್ರದಲ್ಲಿ ಅಲ್ಪಸಂಖ್ಯಾತ ಸಮುದಾಯಗಳ ಮೇಲಿನ ದಾಳಿಯನ್ನು ಖಂಡಿಸಿದ್ದಾರೆ, ಅವರನ್ನು “ಹೇಯ ಕೃತ್ಯ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಶೇಖ್‌ ಹಸೀನಾ ಭಾರತದಲ್ಲಿ ಆಶ್ರಯ ಪಡೆದಿರುವುದು ದ್ವಿಪಕ್ಷೀಯ ಸಂಬಂಧದ ಮೇಲೆ ಪರಿಣಾಮ ಬೀರುತ್ತಾ? ಬಾಂಗ್ಲಾದೇಶ ಹೇಳಿದ್ದೇನು?

Exit mobile version