BBC: ರಾಮ ಮಂದಿರ ಬಗ್ಗೆ ಬಿಬಿಸಿಯ ಅಸ್ಪಷ್ಟ ವರದಿ; ಬ್ರಿಟನ್‌ ಸಂಸತ್ತಿನಲ್ಲಿ ಛೀಮಾರಿ - Vistara News

ವಿದೇಶ

BBC: ರಾಮ ಮಂದಿರ ಬಗ್ಗೆ ಬಿಬಿಸಿಯ ಅಸ್ಪಷ್ಟ ವರದಿ; ಬ್ರಿಟನ್‌ ಸಂಸತ್ತಿನಲ್ಲಿ ಛೀಮಾರಿ

BBC: ಜನವರಿ 22ರಂದು ಅಯೋಧ್ಯೆಯಲ್ಲಿ ನಡೆದ ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನಾ ಸಮಾರಂಭದ ಬಗ್ಗೆ ಬ್ರಿಟನ್‌ನ ಮಾಧ್ಯಮ ಸಂಸ್ಥೆ ಬಿಬಿಸಿ ವರದಿ ಪ್ರಸಾರ ಮಾಡಿತ್ತು.‌ ಇದೀಗ ಈ ವರದಿ ಬಗ್ಗೆ ಅಲ್ಲಿನ ಸಂಸತ್ತಿನಲ್ಲಿ ಚರ್ಚೆ ನಡೆದಿದೆ. ಈ ಬಗ್ಗೆ ಸಂಸದ ಬಾಬ್ ಬ್ಲ್ಯಾಕ್‌ಮ್ಯಾನ್‌ ಧ್ವನಿ ಎತ್ತಿದ್ದಾರೆ.

VISTARANEWS.COM


on

bbc
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಂಡನ್‌: ಜನವರಿ 22ರಂದು ಅಯೋಧ್ಯೆಯಲ್ಲಿ ನಡೆದ ರಾಮ ಮಂದಿರದ (Ayodhya Ram Mandir) ಪ್ರಾಣ ಪ್ರತಿಷ್ಠಾಪನಾ ಸಮಾರಂಭದ ಬಗ್ಗೆ ಬ್ರಿಟನ್‌ನ ಮಾಧ್ಯಮ ಸಂಸ್ಥೆ ಬಿಬಿಸಿ (BBC) ವರದಿ ಪ್ರಸಾರ ಮಾಡಿತ್ತು.‌ ಇದೀಗ ಈ ವರದಿ ಬಗ್ಗೆ ಅಲ್ಲಿನ ಸಂಸತ್ತಿನಲ್ಲಿ ಚರ್ಚೆ ನಡೆದಿದೆ. ಬಿಬಿಸಿ ಸತ್ಯ ಮರೆಮಾಚಿ ಅಸ್ಪಷ್ಟ ವರದಿ ಪ್ರಸಾರ ಮಾಡಿದೆ. ಇದು ಬಿಬಿಸಿಯ ಪಕ್ಷಪಾತ ಧೋರಣೆಯನ್ನು ಪ್ರತಿಬಿಂಬಿಸುತ್ತದೆ. ಇದು ಖಂಡನೀಯ ಎಂದು ಸಂಸದ ಬಾಬ್ ಬ್ಲ್ಯಾಕ್‌ಮ್ಯಾನ್‌ (Bob Blackman) ಧ್ವನಿ ಎತ್ತಿದ್ದಾರೆ.

ಬಾಬ್ ಬ್ಲ್ಯಾಕ್‌ಮ್ಯಾನ್‌ ಹೇಳಿದ್ದೇನು?

ಬಿಬಿಸಿ ತನ್ನ ವರದಿಯಲ್ಲಿ ಅಯೋಧ್ಯೆಯ ಮಸೀದಿಯನ್ನು ಕೆಡವಿ ರಾಮ ಮಂದಿರ ನಿರ್ಮಿಸಲಾಗಿದೆ ಎಂದು ಉಲ್ಲೇಖಿಸಿದೆ. ಆದರೆ ಬಹಳ ಹಿಂದಿನಿಂದಲೂ ಅಲ್ಲಿ ರಾಮನ ದೇವಸ್ಥಾನವಿತ್ತು ಎನ್ನುವ ಸತ್ಯವನ್ನು ಮರೆಮಾಚಲಾಗಿದೆ ಎಂದು ಎಂಪಿ ಬ್ಲ್ಯಾಕ್‌ಮ್ಯಾನ್‌ ಹೇಳಿದ್ದಾರೆ.

ʼʼಕಳೆದ ವಾರ ಉತ್ತರ ಪ್ರದೇಶದ ಅಯೋಧ್ಯೆ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠೆ ನೆರವೇರಿದೆ. ಭಗವಾನ್ ರಾಮನ ಜನ್ಮಸ್ಥಳವಾದ ಇಲ್ಲಿ ನಡೆದ ಈ ಸಮಾರಂಭದಿಂದ ಭಾರತ ಮಾತ್ರವಲ್ಲ ವಿಶ್ವದಾದ್ಯಂತದ ಇರುವ ಹಿಂದೂಗಳು ಸಂತಸ ಹೊಂದಿದ್ದರು. ಆದರೆ ಅತ್ಯಂತ ದುಃಖಕರ ಸಂಗತಿಯೆಂದರೆ ಬಿಬಿಸಿ ತನ್ನ ವರದಿಯಲ್ಲಿ ಅಯೋಧ್ಯೆ ಮಸೀದಿಯನ್ನು ನಾಶಪಡಿಸಿದ ಸ್ಥಳ ಎಂದು ವರದಿ ಮಾಡಿದೆ. 2,000 ವರ್ಷಗಳಿಗಿಂತಲೂ ಹೆಚ್ಚು ಕಾಲ ಇಲ್ಲಿ ರಾಮನ ದೇವಾಲಯವಿತ್ತು ಮತ್ತು ಮುಸ್ಲಿಮರಿಗೆ ಪಟ್ಟಣದ ಪಕ್ಕದಲ್ಲಿ ಮಸೀದಿಯನ್ನು ನಿರ್ಮಿಸಲು ಐದು ಎಕರೆ ಸ್ಥಳವನ್ನು ನಿಗದಿಪಡಿಸಲಾಗಿದೆ ಎಂಬ ಅಂಶವನ್ನು ಬಿಬಿಸಿ ಮರೆತಿದೆʼʼ ಎಂದು ಅವರು ವಾಗ್ದಾಳಿ ನಡೆಸಿದರು.

ʼʼಈ ವಿಷಯದ ಕುರಿತು ಚರ್ಚೆ ನಡೆಸಲು ಸಂಸತ್ತು ಅವಕಾಶ ನೀಡಬೇಕು. ಬಿಸಿಸಿಯ ಪಕ್ಷಪಾತ ಧೋರಣೆ ಮತ್ತು ವಸ್ತುನಿಷ್ಠ ವರದಿಯನ್ನು ಒದಗಿಸಲು ವಿಫಲವಾಗಿರುವ ಬಗ್ಗೆ ಮಾತುಕತೆಗೆ ಸಮಯ ನೀಡಬೇಕುʼʼ ಎಂದು ಆಗ್ರಹಿಸಿದರು. “ಪ್ರಪಂಚದಾದ್ಯಂತ ಏನು ನಡೆಯುತ್ತಿದೆ ಎಂಬುದರ ಬಗ್ಗೆ ಯೋಗ್ಯವಾದ ದಾಖಲೆಯನ್ನು ಒದಗಿಸಲು ಬಿಬಿಸಿ ಸಮರ್ಥವಾಗಿರಬೇಕು” ಎಂದು ಅವರು ಹೇಳಿದರು.

ಇದು ಮೊದಲ ಸಲವಲ್ಲ

ಈ ಹಿಂದೆಯೂ ಬಿಬಿಸಿ ಭಾರತ ವಿರೋಧಿ ನಿಲುವು ತಳೆದಿತ್ತು. ಕೆಲವು ತಿಂಗಳ ಹಿಂದೆ ಬಿಬಿಸಿಗೆ ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿತ್ತು. ಗುಜರಾತ್ ಗಲಭೆಗಳ ಕುರಿತು ಅದು ಇತ್ತೀಚೆಗೆ ಬಿಡುಗಡೆ ಮಾಡಿದ 2 ಭಾಗಗಳ ಸಾಕ್ಷ್ಯಚಿತ್ರವು ಭಾರತ, ಇಲ್ಲಿನ ನ್ಯಾಯಾಂಗ ಮತ್ತು ಪ್ರಧಾನಿಯ ಪ್ರತಿಷ್ಠೆಗೆ ಮಸಿ ಬಳಿದಿದೆ ಎಂದು ಹೂಡಲಾಗಿರುವ ಮಾನನಷ್ಟ ಮೊಕದ್ದಮೆಯ ಹಿನ್ನೆಲೆಯಲ್ಲಿ ಸಮನ್ಸ್‌ ಕಳುಹಿಸಲಾಗಿತ್ತು.

ಇದನ್ನೂ ಓದಿ: BBC documentary: ಮೋದಿ ಕುರಿತ ಸಾಕ್ಷ್ಯಚಿತ್ರಕ್ಕಾಗಿ ಬಿಬಿಸಿಗೆ ದಿಲ್ಲಿ ಹೈಕೋರ್ಟ್‌ ಮಾನನಷ್ಟ ಮೊಕದ್ದಮೆ ನೋಟಿಸ್‌

ಬಿಬಿಸಿ (ಯುಕೆ) ಸಾಕ್ಷ್ಯಚಿತ್ರ ʼಇಂಡಿಯಾ: ದಿ ಮೋದಿ ಕ್ವೆಶ್ಚನ್ʼ ಎಂಬ ಎರಡು ಭಾಗಗಳ ಸಾಕ್ಷ್ಯಚಿತ್ರವನ್ನು ಬಿಡುಗಡೆ ಮಾಡಿತ್ತು. ಇದರಲ್ಲಿ, 2002ರಲ್ಲಿ ಗುಜರಾತ್‌ನಲ್ಲಿ ನಡೆದ ಕೋಮು ಗಲಭೆಗಳಲ್ಲಿ ಮೋದಿ ಪಾತ್ರವಿದೆ ಎಂದು ಹೇಳಲಾಗಿತ್ತು. ಆಗ ನರೇಂದ್ರ ಮೋದಿ ಗುಜರಾತ್‌ನ ಮುಖ್ಯಮಂತ್ರಿಯಾಗಿದ್ದರು. ಇದಾದ ಬಳಿಕ ಇದೀಗ ಬಿಬಿಸಿ ಮತ್ತೊಮ್ಮೆ ವಿವಾದಕ್ಕೆ ಗುರಿಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Microsoft Global Outage: ವಿಶ್ವಾದ್ಯಂತ ನೆಲಕಚ್ಚಿದ ಮೈಕ್ರೋಸಾಫ್ಟ್‌; ವಿಂಡೋಸ್‌ನಲ್ಲಿ ತಾಂತ್ರಿಕ ದೋಷ

Microsoft Global Outage: ಮೈಕ್ರೋಸಾಫ್ಟ್‌ನ ವಿಂಡೋಸ್‌ನಲ್ಲಿ ಇಂದು ತಾಂತ್ರಿಕ ಸಮಸ್ಯೆಯಿಂದ ಕಂಡು ಬಂದಿದ್ದು, ವಿಶ್ವಾದ್ಯಂತದ ಬಳಕೆದಾರರು ಪರದಾಡಿದರು. ಇದ್ದಕ್ಕಿದ್ದಂತೆ ಕಂಪ್ಯೂಟರ್‌, ಲ್ಯಾಪ್‌ಟಾಪ್‌ ರಿಸ್ಟಾರ್ಟ್‌ ಆಗಿ ಹೈರಾಣಾದರು. ಓಪರೇಟಿಂಗ್‌ ಸಿಸ್ಟಮ್‌ (OS) ಸಮಸ್ಯೆಯಲ್ಲಿ ಸಿಲುಕಿದೆ ಎಂಬ ಸಂದೇಶ ನೀಲಿ ಬಣ್ಣದ ಸಂದೇಶ ಡಿಸ್‌ಪ್ಲೇಯಲ್ಲಿ ಮೂಡಿರುವುದಾಗಿ ಅನೇಕ ಬಳಕೆದಾರರು ತಿಳಿಸಿದ್ದಾರೆ. ಈ ಬಗ್ಗೆ ಸ್ಪಷ್ಟನೆ ನೀಡಿದ ಮೈಕ್ರೊಸಾಫ್ಟ್‌ ಕಂಪನಿ, “ಕ್ರೌಡ್‌ಸ್ಟ್ರೈಕ್‌ ಅಪ್‌ಡೇಟ್‌ ಪರಿಣಾಮವಾಗಿ ಈ ಸಮಸ್ಯೆ ಕಂಡು ಬಂದಿದೆ. ಆತಂಕಗೊಳ್ಳಬೇಡಿ, ಇದು ಸರಿಯಾಗಲಿದೆʼʼ ಎಂದಿದೆ.

VISTARANEWS.COM


on

Microsoft Global Outage
Koo

ನವದೆಹಲಿ: ಮೈಕ್ರೋಸಾಫ್ಟ್‌ನ ವಿಂಡೋಸ್‌ನಲ್ಲಿ ಇಂದು ತಾಂತ್ರಿಕ ಸಮಸ್ಯೆ ಕಂಡು ಬಂದಿದ್ದು, ವಿಶ್ವಾದ್ಯಂತದ ಬಳಕೆದಾರರು ಪರದಾಡಿದರು (Microsoft Global Outage). ಇದ್ದಕ್ಕಿದ್ದಂತೆ ಕಂಪ್ಯೂಟರ್‌, ಲ್ಯಾಪ್‌ಟಾಪ್‌ ರಿಸ್ಟಾರ್ಟ್‌ ಆಗಿ ಹೈರಾಣಾದರು. ಓಪರೇಟಿಂಗ್‌ ಸಿಸ್ಟಮ್‌ (OS) ಸಮಸ್ಯೆಯಲ್ಲಿ ಸಿಲುಕಿದೆ ಎಂಬ ಸಂದೇಶ ನೀಲಿ ಬಣ್ಣದ ಸಂದೇಶ ಡಿಸ್‌ಪ್ಲೇಯಲ್ಲಿ ಮೂಡಿರುವುದಾಗಿ ಅನೇಕ ಬಳಕೆದಾರರು ತಿಳಿಸಿದ್ದಾರೆ. ಈ ಚಿತ್ರಗಳನ್ನು ಸೋಷಿಯಲ್‌ ಮೀಡಿಯಾಗಳಲ್ಲಿ ಪೋಸ್ಟ್‌ ಮಾಡಿ ಮೈಕ್ರೋಸಾಫ್ಟ್ ಮತ್ತು ಸಿಇಒ ಸತ್ಯ ನಾದೆಲ್ಲಾ ಅವರನ್ನು ಟ್ಯಾಗ್ ಮಾಡಿದ್ದಾರೆ. ಈ ಬಗ್ಗೆ ಸ್ಪಷ್ಟನೆ ನೀಡಿದ ಮೈಕ್ರೊಸಾಫ್ಟ್‌ ಕಂಪನಿ, “ಕ್ರೌಡ್‌ಸ್ಟ್ರೈಕ್‌ ಅಪ್‌ಡೇಟ್‌ ಪರಿಣಾಮವಾಗಿ ಈ ಸಮಸ್ಯೆ ಕಂಡು ಬಂದಿದೆ. ಆತಂಕಗೊಳ್ಳಬೇಡಿ, ಇದು ಸರಿಯಾಗಲಿದೆʼʼ ಎಂದಿದೆ.

“ವಿಂಡೋಸ್ ಕಂಪ್ಯೂಟರ್‌ನ ಸ್ಕ್ರೀನ್‌ ಸಡನ್‌ ಆಫ್‌ ಆಯ್ತು”, “ಕಂಪ್ಯೂಟರ್‌ ಆಗಾಗ ರಿಸ್ಟ್ರಾರ್ಟ್‌ ಆಗುತ್ತಿದೆ” ಎಂದೆಲ್ಲ ಕೆಲವರು ಪೋಸ್ಟ್‌ ಮಾಡಿದ್ದಾರೆ. ʼʼನಿಮ್ಮ ಡಿವೈಸ್‌ನಲ್ಲಿ ಸಮಸ್ಯೆ ಇದೆ. ರಿಸ್ಟಾರ್ಟ್‌ ಮಾಡಬೇಕು. ಎರರ್‌ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದೇವೆʼʼ ಮುಂತಾದ ಸಂದೇಶ ಪರದೆ ಮೇಲೆ ಮೂಡಿದೆ ಎಂದು ಹಲವರು ತಿಳಿಸಿದ್ದಾರೆ.

ಮೈಕ್ರೋಸಾಫ್ಟ್‌ ಸೇವೆಗಳಲ್ಲಿನ ಈ ಎರರ್‌ ವಿಮಾನಯಾನ, ಬ್ಯಾಂಕುಗಳು ಸೇರಿ ವಿಶ್ವದಾದ್ಯಂತದ ಹಲವು ಉದ್ಯಮಗಳ ಮೇಲೆ ಪರಿಣಾಮ ಬೀರಿದೆ. ಭಾರತದಲ್ಲಿ ಸ್ಪೈಸ್ ಜೆಟ್, ಅಕಾಸಾ ಏರ್‌ಲೈನ್ಸ್‌ ಮತ್ತು ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ಸೇರಿದಂತೆ ಭಾರತೀಯ ವಿಮಾನಯಾನ ಸಂಸ್ಥೆಗಳೂ ತೊಂದರೆಗೆ ಒಳಗಾಗಿವೆ. ಇದು ವಿಮಾನ ರದ್ದತಿ ಮತ್ತು ವಿಳಂಬಕ್ಕೆ ಕಾರಣವಾಗಿದೆ. “ನಾವು ಪ್ರಸ್ತುತ ತಾಂತ್ರಿಕ ಸಮಸ್ಯೆಯನ್ನು ಎದುರಿಸುತ್ತಿದ್ದೇವೆ. ಈ ಸಮಸ್ಯೆಯನ್ನು ಪರಿಹರಿಸಲು ನಮ್ಮ ತಂಡವು ಸಕ್ರಿಯವಾಗಿ ಕೆಲಸ ಮಾಡುತ್ತಿದೆ. ಅನಾನುಕೂಲತೆಗೆ ನಾವು ವಿಷಾದಿಸುತ್ತೇವೆ ಮತ್ತು ಸಮಸ್ಯೆಯನ್ನು ಪರಿಹರಿಸಿದ ನಂತರ ನಿಮಗೆ ಮಾಹಿತಿ ನೀಡುತ್ತೇವೆ. ನಿಮ್ಮ ಸಹಕಾರಕ್ಕೆ ಧನ್ಯವಾದಗಳು” ಎಂದು ಸ್ಪೈಸ್ ಜೆಟ್ ಹೇಳಿದೆ.

2023ರಲ್ಲಿಯೂ ಇದೇ ರೀತಿಯ ಸಮಸ್ಯೆ ಕಾಣಿಸಿಕೊಂಡಿತ್ತು. ಇದೀಗ ಶೀಘ್ರ ಸರಿಪಡಿಸುವುದಾಗಿ ಕಂಪನಿ ಬಳಕೆದಾರರಿಗೆ ಭರವಸೆ ನೀಡಿದೆ.

ಇದನ್ನೂ ಓದಿ: Facebook Server: ಫೇಸ್‌ಬುಕ್‌, ಇನ್‌ಸ್ಟಾಗ್ರಾಂ ಸರ್ವರ್‌ ಡೌನ್;‌ ನಿಮ್ಮ ಖಾತೆ ಚೆಕ್‌ ಮಾಡಿಕೊಳ್ಳಿ

Continue Reading

ವಿದೇಶ

Donald Trump: ಅಮೆರಿಕವೂ ಐರನ್ ಡೋಮ್ ಕ್ಷಿಪಣಿ ತಯಾರಿಸಲಿದೆ; ಡೊನಾಲ್ಡ್‌ ಟ್ರಂಪ್‌ ಸೂಚನೆ

Donald Trump: ಮಿಲ್ವಾಕಿಯಲ್ಲಿ ಗುರುವಾರ ನಡೆದ ರಿಪಬ್ಲಿಕನ್ ನ್ಯಾಷನಲ್ ಕನ್ವೆನ್ಷನ್‌ನಲ್ಲಿ ಮಾತನಾಡಿದ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ಇಸ್ರೇಲ್‌ನಂತೆಯೇ ಅಮೆರಿಕ ಕೂಡ ಐರನ್ ಡೋಮ್ ಕ್ಷಿಪಣಿ ರಕ್ಷಣಾ ವ್ಯವಸ್ಥೆಯನ್ನು ನಿರ್ಮಿಸುವುದಾಗಿ ಮತ್ತೊಮ್ಮೆ ಪ್ರತಿಜ್ಞೆ ಕೈಗೊಂಡರು. ಒಂದು ಗಂಟೆಯ ಭಾಷಣದಲ್ಲಿ ತಮ್ಮ ನಾಮನಿರ್ದೇಶನವನ್ನು ಔಪಚಾರಿಕವಾಗಿ ಘೋಷಿಸಿದ ಟ್ರಂಪ್, ಅಧ್ಯಕ್ಷ ಜೋ ಬೈಡನ್ (Joe Biden) ವಿರುದ್ಧ ವಾಗ್ದಾಳಿ ನಡೆಸಿದರು.

VISTARANEWS.COM


on

Donald Trump
Koo

ವಾಷಿಂಗ್ಟನ್:‌ ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ (US Presidential Election 2024) ಕೆಲವೇ ತಿಂಗಳು ಬಾಕಿ ಉಳಿದಿವೆ. ರಿಪಬ್ಲಿಕನ್‌ ಪಕ್ಷದಿಂದ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಅವರು ಕಣಕ್ಕಿಳಿದಿದ್ದು ಭರ್ಜರಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಮಿಲ್ವಾಕಿ (Milwauke)ಯಲ್ಲಿ ಗುರುವಾರ ನಡೆದ ರಿಪಬ್ಲಿಕನ್ ನ್ಯಾಷನಲ್ ಕನ್ವೆನ್ಷನ್ (Republican National Convention) ಉದ್ದೇಶಿಸಿ ಮಾತನಾಡಿದ ಅವರು, ಇಸ್ರೇಲ್‌ನಂತೆಯೇ ಅಮೆರಿಕ ಕೂಡ ಐರನ್ ಡೋಮ್ ಕ್ಷಿಪಣಿ (Iron Dome missile) ರಕ್ಷಣಾ ವ್ಯವಸ್ಥೆಯನ್ನು ನಿರ್ಮಿಸುವುದಾಗಿ ಮತ್ತೊಮ್ಮೆ ಪ್ರತಿಜ್ಞೆ ಕೈಗೊಂಡರು.

ಒಂದು ಗಂಟೆಯ ಭಾಷಣದಲ್ಲಿ ತಮ್ಮ ನಾಮನಿರ್ದೇಶನವನ್ನು ಔಪಚಾರಿಕವಾಗಿ ಘೋಷಿಸಿದ ಟ್ರಂಪ್, ಅಧ್ಯಕ್ಷ ಜೋ ಬೈಡನ್ (Joe Biden) ವಿರುದ್ಧ ವಾಗ್ದಾಳಿ ನಡೆಸಿದರು. ʼʼಅವರು (ಜೋ ಬೈಡನ್) ಶಾಂತಿಯ ಜಗತ್ತಿನಲ್ಲಿ ಯುದ್ಧದ ಮೂಲಕ ಕೋಲಾಹಲ ಸೃಷ್ಟಿಸಿದ್ದಾರೆ” ಎಂದು ಹೇಳಿದರು. ಇಸ್ತೇಲ್‌ ಮತ್ತು ಪ್ಯಾಲೆಸ್ತೀನ್‌ ಯುದ್ಧದ ಕುರಿತು ಮಾತನಾಡಿದ ಮಾಜಿ ಅಧ್ಯಕ್ಷ, ಇಸ್ರೇಲ್ ಮೇಲೆ ಏಪ್ರಿಲ್‌ನಲ್ಲಿ ಇರಾನ್ ನಡೆಸಿದ ಕ್ಷಿಪಣಿ ದಾಳಿಯನ್ನು ಉಲ್ಲೇಖಿಸಿದರು. “ಇಸ್ರೇಲ್ ಕ್ಷಿಪಣಿ ರಕ್ಷಣಾ ವ್ಯವಸ್ಥೆಯನ್ನು ಹೊಂದಿದೆ. ಇಸ್ರೇಲ್‌ ಮೇಲೆ ಸುಮಾರು 342 ಕ್ಷಿಪಣಿಗಳನ್ನು ಹಾರಿಸಲಾಯಿತಾದರೂ ಒಂದು ಮಾತ್ರ ಸ್ವಲ್ಪಮಟ್ಟಿಗೆ ಹಾದು ಹೋಯಿತು. ಉಳಿದವುಗಳನ್ನು ಅರ್ಧಲ್ಲೇ ತಡೆಯಲಾಗಿದೆʼʼ ಎಂದು ತಿಳಿಸಿದರು.

ಎದುರಾಳಿಗಳಿಗೆ ಎಚ್ಚರಿಕೆ

ನವೆಂಬರ್‌ನಲ್ಲಿ ನಡೆಯುವ ಚುನಾವಣೆಯ ನಂತರ ತಾವು ಶ್ವೇತಭವನಕ್ಕೆ ಮರಳುವ ಮೊದಲು ಅಮೆರಿಕದ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ತೀವ್ರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು 78 ವರ್ಷದ ಟ್ರಂಪ್ ವಿರೋಧಿಗಳಿಗೆ ಕಠಿಣ ಎಚ್ಚರಿಕೆಯನ್ನೂ ನೀಡಿದರು.

ತಮ್ಮ ಸುದೀರ್ಘ ಭಾಷಣದಲ್ಲಿ ಟ್ರಂಪ್ ಹಣದುಬ್ಬರ, ಅಕ್ರಮ ವಲಸೆ ಮತ್ತು ಹಲವು ಅಂತಾರಾಷ್ಟ್ರೀಯ ಬಿಕ್ಕಟ್ಟುಗಳಿಗೆ ಜೋ ಬೈಡನ್ ಆಡಳಿತವನ್ನು ದೂಷಿಸಿದರು. “ನಾವು ನಮ್ಮ ಸೈನ್ಯವನ್ನು ಇನ್ನಷ್ಟು ಬಲಪಡಿಸುತ್ತೇವೆ ಮತ್ತು ಯಾವುದೇ ಶತ್ರು ನಮ್ಮ ತಾಯ್ನಾಡಿನ ಮೇಲೆ ದಾಳಿ ಮಾಡುವುದಿಲ್ಲ ಎಂದು ಖಚಿತಪಡಿಸಿಕೊಳ್ಳಲು ಐರನ್ ಡೋಮ್ ಕ್ಷಿಪಣಿ ರಕ್ಷಣಾ ವ್ಯವಸ್ಥೆಯನ್ನು ನಿರ್ಮಿಸುತ್ತೇವೆ” ಎಂದು ಘೋಷಿಸಿದರು. ಅದಾಗ್ಯೂ ಟ್ರಂಪ್ ಪ್ರಸ್ತಾಪಿಸಿದ ಐರನ್ ಡೋಮ್ ವ್ಯವಸ್ಥೆಯ ಉದ್ದೇಶವು ಅಸ್ಪಷ್ಟವಾಗಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. ಯಾಕೆಂದರೆ ಇದನ್ನು ಅಲ್ಪ-ಶ್ರೇಣಿಯ ರಾಕೆಟ್‌ಗಳನ್ನು ತಡೆಹಿಡಿಯಲು ವಿನ್ಯಾಸಗೊಳಿಸಲಾಗುತ್ತದೆ. ಆದರೆ ಅಮೆರಿಕ ಗಡಿಗಳಲ್ಲಿ ಅಂತಹ ಯಾವುದೇ ಬೆದರಿಕೆಗಳಿಲ್ಲ.

ಟ್ರಂಪ್ ಅವರ ಪತ್ನಿ ಮೆಲಾನಿಯಾ ಅವರು ರಿಪಬ್ಲಿಕನ್ ಪಾರ್ಟಿಯ ಈ ರಾಷ್ಟ್ರೀಯ ಸಮಾವೇಶದಲ್ಲಿ ಪಾಲ್ಗೊಂಡು ತಮ್ಮ ಪತಿಗೆ ಬೆಂಬಲಿಸಲು ಸೂಚಿಸಿದರು. ಟ್ರಂಪ್‌ ಅವರ ಭಾಷಣ ಮುಗಿದ ಬಳಿಕ ಜನರತ್ತ ಕೈಬೀಸಿ, ಚುಂಬಿಸಿ ಪತಿಯ ಜತೆಗೆ ಕೈ ಜೋಡಿಸಿ ನಿಂತರು.

ಇದನ್ನೂ ಓದಿ: Donald Trump: ಜಗನ್ನಾಥನ ಕೃಪೆಯಿಂದ ಡೊನಾಲ್ಡ್‌ ಟ್ರಂಪ್‌ ಪಾರು; ಏನಿದು ದೈವಿಕ ಪವಾಡ? ವೈರಲ್‌ ಪೋಸ್ಟ್‌ ಇಲ್ಲಿದೆ

ಕೆಲವೇ ದಿನಗಳ ಹಿಂದೆ ನಡೆದ ತಮ್ಮ ಹತ್ಯೆಯ ಪ್ರಯತ್ನದ ನಂತರವೂ ಟ್ರಂಪ್‌ ಪ್ರಚಾರ ಕಾರ್ಯವನ್ನು ಮುಂದುವರಿಸಿದ್ದಾರೆ. ಪೆನ್ಸಿಲ್ವೇನಿಯಾದ ಬಟ್ಲರ್ನ್‌ನಲ್ಲಿ ಜುಲೈ 13ರ ಸಂಜೆ ಆಯೋಜಿಸಿದ್ದ ರ‍್ಯಾಲಿಯ ವೇಳೆ ನಡೆದ ಗುಂಡಿನ ದಾಳಿಯಿಂದ ಟ್ರಂಪ್‌ ಕೂದಲೆಳೆ ಅಂತರದಲ್ಲಿ ಪಾರಾಗಿದ್ದರು.

Continue Reading

ದೇಶ

Air India Flight: 225 ಪ್ರಯಾಣಿಕರನ್ನು ಹೊತ್ತು ಸ್ಯಾನ್ ಫ್ರಾನ್ಸಿಸ್ಕೋಗೆ ಹೊರಟಿದ್ದ ವಿಮಾನದಲ್ಲಿ ತಾಂತ್ರಿಕ ದೋಷ; ರಷ್ಯಾದಲ್ಲಿ ಲ್ಯಾಂಡಿಂಗ್‌

Air India Flight: ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ 225 ಪ್ರಯಾಣಿಕರನ್ನು ಹೊತ್ತು ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನವನ್ನು ರಷ್ಯಾದ ಕ್ರಾಸ್ನೋಯರ್ಸ್ಕ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಸಲಾಗಿದೆ. ಕಳೆದ ವರ್ಷ ಇದೇ ಮಾರ್ಗದಲ್ಲಿ ಸಂಚರಿಸುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಕಂಡು ಬಂದ ಹಿನ್ನೆಲೆಯಲ್ಲಿ ಅದನ್ನು ರಷ್ಯಾದ ಮಗದನ್‌ನಲ್ಲಿ ತುರ್ತು ಲ್ಯಾಂಡಿಂಗ್‌ ಮಾಡಲಾಗಿತ್ತು.

VISTARANEWS.COM


on

Air India Flight
Koo

ನವದೆಹಲಿ: ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ 225 ಪ್ರಯಾಣಿಕರನ್ನು ಹೊತ್ತು ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋ (Delhi-San Francisco)ಗೆ ತೆರಳುತ್ತಿದ್ದ ಏರ್ ಇಂಡಿಯಾ (Air India Flight) ವಿಮಾನವನ್ನು ರಷ್ಯಾದ ಕ್ರಾಸ್ನೋಯರ್ಸ್ಕ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (Krasnoyarsk international airport)ಕ್ಕೆ ಕಳುಹಿಸಲಾಗಿದೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.

ಕಾಕ್ ಪಿಟ್ ಸಿಬ್ಬಂದಿ ತಾಂತ್ರಿಕ ದೋಷವನ್ನು ಪತ್ತೆ ಹಚ್ಚಿದ ಹಿನ್ನಲೆಯಲ್ಲಿ ಎಐ 183 (AI 183) ವಿಮಾನವನ್ನು ರಷ್ಯಾದ ಕ್ರಾಸ್ನೋಯರ್ಸ್ಕ್ ಅಂತಾರಾಷ್ಟ್ರೀಯ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಸಲಾಯಿತು. ಈ ವಿಮಾನದಲ್ಲಿ 225 ಪ್ರಯಾಣಿಕರು ಮತ್ತು 19 ಸಿಬ್ಬಂದಿ ಸೇರಿ ಒಟ್ಟು 244 ಮಂದಿ ಇದ್ದರು. ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡಿಂಗ್‌ ಮಾಡಿದ ಬಳಿಕ ಅವರೆಲ್ಲರನ್ನೂ ಹೆಚ್ಚಿನ ಟರ್ಮಿನಲ್ ಕಟ್ಟಡಕ್ಕೆ ಕರೆದೊಯ್ಯಲಾಯಿತು ಎಂದು ಅಧಿಕೃತರು ಮಾಹಿತಿ ನೀಡಿದ್ದಾರೆ.

“ಕ್ರಾಸ್ನೋಯರ್ಸ್ಕ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ತನ್ನದೇ ಆದ ಸಿಬ್ಬಂದಿಯನ್ನು ಹೊಂದಿಲ್ಲದ ಕಾರಣ, ಪ್ರಯಾಣಿಕರಿಗೆ ಅಗತ್ಯವಿರುವ ಎಲ್ಲ ಸಹಾಯವನ್ನು ಒದಗಿಸಲು ನಾವು ಬೇರೆ ವ್ಯವಸ್ಥೆ ಮಾಡುತ್ತಿದ್ದೇವೆ” ಎಂದು ಏರ್‌ ಇಂಡಿಯಾ ಹೇಳಿಕೆಯಲ್ಲಿ ತಿಳಿಸಿದೆ. “ಏರ್ ಇಂಡಿಯಾ ಸರ್ಕಾರಿ ಸಂಸ್ಥೆಗಳು ಮತ್ತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದೆ. ಪ್ರಯಾಣಿಕರನ್ನು ಸ್ಯಾನ್ ಫ್ರಾನ್ಸಿಸ್ಕೋಗೆ ತಲುಪಿಸಲು ಶೀಘ್ರ ಪರ್ಯಾಯ ವ್ಯವಸ್ಥೆ ಮಡುತ್ತೇವೆʼʼ ಎಂದು ಭರವಸೆ ನೀಡಿದೆ.

“ಏರ್ ಇಂಡಿಯಾ ವಿಮಾನದಲ್ಲಿರುವ ಪ್ರಯಾಣಿಕರು ಮತ್ತು ಸಿಬ್ಬಂದಿಯ ಬಗ್ಗೆ ಕಾಳಜಿ ವಹಿಸುತ್ತೇವೆ. ಆದಷ್ಟು ಶೀಘ್ರ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಮತ್ತು ಅಲ್ಲಿಯವರೆಗೆ ಎಲ್ಲರ ಆರೋಗ್ಯ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದೇವೆ” ಎಂದು ಅಧಿಕಾರಿಗಳು ಹೇಳಿದ್ದಾರೆ.

ಹಿಂದೆಯೂ ಆಗಿತ್ತು

ಇದೇ ರೀತಿಯ ಘಟನೆ ಈ ಹಿಂದೆಯೂ ನಡೆದಿತ್ತು. ಕಳೆದ ವರ್ಷ ಇದೇ ಮಾರ್ಗದಲ್ಲಿ ಸಂಚರಿಸುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಕಂಡು ಬಂದ ಹಿನ್ನೆಲೆಯಲ್ಲಿ ಅದನ್ನು ರಷ್ಯಾದ ಮಗದನ್‌ನಲ್ಲಿ ತುರ್ತು ಲ್ಯಾಂಡಿಂಗ್‌ ಮಾಡಲಾಗಿತ್ತು.

ಆ ಬೋಯಿಂಗ್ 777-200 ಎಲ್ಆರ್ (Boeing 777-200 LR) ವಿಮಾನದಲ್ಲಿ 216 ಪ್ರಯಾಣಿಕರು ಮತ್ತು 16 ಸಿಬ್ಬಂದಿ ಇದ್ದರು. ತುರ್ತು ಭೂ ಸ್ಪರ್ಶದ ಬಳಿಕ ಅವರಿಗೆಲ್ಲ ಸಮೀಪದ ಶಾಲೆಯಲ್ಲಿ ತಾತ್ಕಾಲಿಕ ವಸತಿ ಸೌಲಭ್ಯ ಕಲ್ಪಿಸಲಾಗಿತ್ತು. ಅಲ್ಲಿ ಅವರು ಎರಡು ದಿನಗಳ ಕಾಲ ತಂಗಿದ್ದರು. ನಂತರ ಆಹಾರ ಮತ್ತು ಇತರ ಅಗತ್ಯ ವಸ್ತುಗಳನ್ನು ಹೊತ್ತ ಬದಲಿ ವಿಮಾನವನ್ನು ಮುಂಬೈನಿಂದ ಕಳುಹಿಸಲಾಯಿತು. ಎರಡು ದಿನಗಳ ಬಳಿಕ ಪರ್ಯಾಯ ವಿಮಾನ ಮೂಲಕ ಪ್ರಯಾಣಿಕರನ್ನು ಸ್ಯಾನ್ ಫ್ರಾನ್ಸಿಸ್ಕೋಗೆ ತೆರಳಿದ್ದರು.

ಇದನ್ನೂ ಓದಿ: Bomb threat: ಏರ್‌ ಇಂಡಿಯಾ ವಿಮಾನಕ್ಕೆ ಬಾಂಬ್‌ ಬೆದರಿಕೆ; ಟಿಶ್ಯೂ ಪೇಪರ್‌ನಲ್ಲಿ ಬಂದಿತ್ತು ಸಂದೇಶ

ತುರ್ತು ಭೂ ಸ್ಪರ್ಶ

ಈ ವರ್ಷದ ಮೇಯಲ್ಲಿ ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಿಂದ ಕೊಚ್ಚಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತುರ್ತು ಭೂ ಸ್ಪರ್ಶ ಮಾಡಿತ್ತು. ಬೆಂಗಳೂರಿನಿಂದ ಕೇರಳದ ಕೊಚ್ಚಿಗೆ ಹೊರಟಿದ್ದ ವಿಮಾನದ ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿತ್ತು. ಹೀಗಾಗಿ ತುರ್ತು ಭೂ ಸ್ಪರ್ಶ ಮಾಡಲಾಗಿತ್ತು. ಆ ಮೂಲಕ ಭಾರೀ ಅವಘಡವೊಂದು ತಪ್ಪಿತ್ತು.

Continue Reading

ವಿದೇಶ

Bangladesh Violence: ಬಾಂಗ್ಲಾ ಧಗ ಧಗ; ಭುಗಿಲೆದ್ದ ಹಿಂಸಾಚಾರಕ್ಕೆ 35 ಮಂದಿ ಬಲಿ

Bangladesh Violence: ಅನೇಕ ದಿನಗಳಿಂದ ಪ್ರತಿಭಟನಾಕಾರರು ರಾಷ್ಟ್ರವ್ಯಾಪಿ ಬಂದ್ ಗೆ ಕರೆ ನೀಡಿದರು. ಪ್ರತಿಭಟನೆಯ ಹಿನ್ನೆಲೆಯಲ್ಲಿ ದೇಶದಲ್ಲಿ ಮೊಬೈಲ್ ಇಂಟರ್ನೆಟ್ ಅನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಅವರ ಆಡಳಿತ ಪಕ್ಷವಾದ ಅವಾಮಿ ಲೀಗ್ನ ವಿದ್ಯಾರ್ಥಿ ಘಟಕದ ಸದಸ್ಯರೊಂದಿಗೆ ವಿದ್ಯಾರ್ಥಿಗಳು ಘರ್ಷಣೆ ನಡೆಸಿದ್ದರಿಂದ 35ಮಂದಿ ಸಾವನ್ನಪ್ಪಿದ್ದಾರೆ.

VISTARANEWS.COM


on

Bangladesh Violence
Koo

ಢಾಕಾ: ಉದ್ಯೋಗ ಮೀಸಲಾತಿ(Job Reservation) ವಿಚಾರವಾಗಿ ಬಾಂಗ್ಲಾದೇಶದಲ್ಲಿ ಭುಗಿಲೆದ್ದಿರುವ ಹಿಂಸಾಚಾರ(Bangladesh Violence) ಬರೋಬ್ಬರಿ 35 ಮಂದಿಯನ್ನು ಬಲಿ ತೆಗೆದುಕೊಂಡಿದೆ. ಮೀಸಲಾತಿ ವಿಚಾರವಾಗಿ ವಿದ್ಯಾರ್ಥಿಗಳು ರಾಷ್ಟ್ರವ್ಯಾಪಿ ಕರೆ ನೀಡಿದ್ದ ಪ್ರತಿಭಟನೆ ಹಿಂಸಾರೂಪ ಪಡೆದುಕೊಂಡಿತ್ತು. ಇನ್ನು ಉದ್ರಿಕ್ತ ಪ್ರತಿಭಟನಾಕಾರರು ಢಾಕಾದಲ್ಲಿರುವ ಟಿವಿ ಪ್ರಧಾನ ಕಚೇರಿಗಳಿಗೆ ಬೆಂಕಿ ಹಚ್ಚಿದ್ದಾರೆ. ನೂರಾರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನು ಪ್ರತಿಭಟನಾ ನಿರತ ವಿದ್ಯಾರ್ಥಿಗಳೊಂದಿಗೆ ಸರ್ಕಾರ ಮಾತುಕತೆ ನಡೆಸಲಿದೆ ಎಂದು ಕಾನೂನು ಸಚಿವ ಅನಿಸುಲ್ ಹಕ್ ಹೇಳಿದ್ದಾರೆ

ಅನೇಕ ದಿನಗಳಿಂದ ಪ್ರತಿಭಟನಾಕಾರರು ರಾಷ್ಟ್ರವ್ಯಾಪಿ ಬಂದ್ ಗೆ ಕರೆ ನೀಡಿದರು. ಪ್ರತಿಭಟನೆಯ ಹಿನ್ನೆಲೆಯಲ್ಲಿ ದೇಶದಲ್ಲಿ ಮೊಬೈಲ್ ಇಂಟರ್ನೆಟ್ ಅನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಅವರ ಆಡಳಿತ ಪಕ್ಷವಾದ ಅವಾಮಿ ಲೀಗ್ನ ವಿದ್ಯಾರ್ಥಿ ಘಟಕದ ಸದಸ್ಯರೊಂದಿಗೆ ವಿದ್ಯಾರ್ಥಿಗಳು ಘರ್ಷಣೆ ನಡೆಸಿದ್ದರಿಂದ 35ಮಂದಿ ಸಾವನ್ನಪ್ಪಿದ್ದಾರೆ. ಬ್ರಾಕ್ ವಿಶ್ವವಿದ್ಯಾನಿಲಯದ ಬಳಿಯ ಮೆರುಲ್ ಬಡ್ಡಾದಲ್ಲಿ ವಿದ್ಯಾರ್ಥಿಗಳ ನಡುವೆ ಘರ್ಷಣೆಗಳು ನಡೆದಿವೆ ಎಂದು ಢಾಕಾ ಟ್ರಿಬ್ಯೂನ್ ವರದಿ ಮಾಡಿದೆ. ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದರು.

ಪ್ರತಿಭಟನೆ ಏಕೆ?

ಜೂನ್ 5 ರಂದು, ಬಾಂಗ್ಲಾದೇಶ ಹೈಕೋರ್ಟ್ 1971 ರ ಪಾಕಿಸ್ತಾನದಿಂದ ಸ್ವಾತಂತ್ರ್ಯದ ಯುದ್ಧದಲ್ಲಿ ಹೋರಾಡಿದವರ ಕುಟುಂಬಗಳಿಗೆ ಶೇ. 30 ಮೀಸಲಾತಿಯನ್ನು ಘೋಷಿಸಿತ್ತು. ಇದನ್ನು ವಿದ್ಯಾರ್ಥಿಗಳು ಮತ್ತು ಶಿಕ್ಷಕರ ನೇತೃತ್ವದ ಬೃಹತ್ ಆಂದೋಲನದ ನಂತರ 2018 ರಲ್ಲಿ ರದ್ದುಗೊಳಿಸಲಾಗಿತ್ತು. ತಾರತಮ್ಯದ ಮೀಸಲಾತಿಯನ್ನು ಕೊನೆಗೊಳಿಸಬೇಕೆಂದು ಒತ್ತಾಯಿಸಿದ ವಿದ್ಯಾರ್ಥಿಗಳ ಪ್ರತಿಭಟನೆ ನಡೆಸುತ್ತಿದ್ದಾರೆ. ಖಾಸಗಿ ವಲಯದ ಉದ್ಯೋಗಗಳ ಕೊರತೆಯು ಬಾಂಗ್ಲಾದೇಶದಲ್ಲಿ ಸರ್ಕಾರಿ ಉದ್ಯೋಗಗಳನ್ನು ಹೆಚ್ಚು ಲಾಭದಾಯಕವಾಗಿಸುತ್ತದೆ ಎಂದು ತಜ್ಞರು ಹೇಳಿದ್ದಾರೆ.

ಪ್ರಸ್ತುತ, ಬಾಂಗ್ಲಾದೇಶದಲ್ಲಿ 170 ಮಿಲಿಯನ್ ಜನಸಂಖ್ಯೆಯಲ್ಲಿ ಸುಮಾರು 32 ಮಿಲಿಯನ್ ಯುವಜನರು ಉದ್ಯೋಗದಲ್ಲಿ ಇಲ್ಲ. ಆರ್ಥಿಕ ಸವಾಲುಗಳು ನಿಶ್ಚಲತೆ, ಸುಮಾರು 10% ಹಣದುಬ್ಬರ ಮತ್ತು ಕುಗ್ಗುತ್ತಿರುವ ಹಣದ ಮೌಲ್ಯ ಯುವಜನತೆಯನ್ನು ನಿರಾಶರನ್ನಾಗಿಸಿದೆ. ಕಳೆದ ತಿಂಗಳು ಆರಂಭವಾದ ಪ್ರತಿಭಟನೆಗಳು, ಪ್ರತಿಭಟನಾಕಾರರ ಬೇಡಿಕೆಗಳನ್ನು ಈಡೇರಿಸಲು ಪ್ರಧಾನಿ ಶೇಖ್ ಹಸೀನಾ ನಿರಾಕರಿಸಿದ ನಂತರ ತೀವ್ರಗೊಂಡವು.

ಭಾರತೀಯ ಪ್ರಜೆಗಳಿಗೆ ಸೂಚನೆ

ಬಾಂಗ್ಲಾದೇಶದಲ್ಲಿ ಉದ್ಯೋಗ ಮೀಸಲಾತಿಗಾಗಿ ಹಿಂಸಾಚಾರ ಭುಗಿಲೆದ್ದಿರುವ ಹಿನ್ನೆಲೆಯಲ್ಲಿ ಬಾಂಗ್ಲಾದೇಶದಲ್ಲಿರುವ ಭಾರತೀಯ ಪ್ರಜೆಗಳು ಹಾಗೂ ವಿದ್ಯಾರ್ಥಿಗಳಿಗೆ ಭಾರತೀಯ ರಾಜಭಾರ ಕಚೇರಿ ಸಲಹಾ ಸೂಚಿ ಬಿಡುಗಡೆ ಮಾಡಿದೆ. ಮನೆಯಿಂದ ಹೊರಬಾರದಂತೆ ಮತ್ತು ದೂರ ಪ್ರಯಾಣವನ್ನು ತಪ್ಪಿಸುವಂತೆ ಸಲಹೆ ನೀಡಿದೆ.

ಇದನ್ನೂ ಓದಿ: Trump Assassination Bid: ಟ್ರಂಪ್‌ ಮೇಲೆ ಗುಂಡಿನ ದಾಳಿ; ಶೂಟರ್‌ ಫೋಟೋ ರಿಲೀಸ್‌- ಆತನ ಸ್ನೇಹಿತರು ಹೇಳಿದ್ದೇನು?

Continue Reading
Advertisement
What is Food Poisoning?
ಆರೋಗ್ಯ2 mins ago

Food Poisoning: ಫುಡ್‌ ಪಾಯ್ಸನ್‌ ಆದಾಗ ಏನು ಮಾಡಬೇಕು?

Viral Video
ವೈರಲ್ ನ್ಯೂಸ್7 mins ago

Viral Video: ಜಿಮ್‌ ಸಾಧನದಲ್ಲೇ ಯುವಕನ ತಲೆಗೆ ಹೊಡೆದ ಟ್ರೈನರ್‌; ಭೀಕರ ದೃಶ್ಯ ಫುಲ್‌ ವೈರಲ್‌

Sexual Abuse
Latest24 mins ago

Sexual Abuse: ಬಾಲಕಿ ಮೇಲೆ ಕಾರಿನಲ್ಲೇ ಸಾಮೂಹಿಕ ಅತ್ಯಾಚಾರ; ವಿಡಿಯೊ ಮನೆಗೇ ಕಳಿಸಿದ ದುಷ್ಟರು

Actor Darshan
ಕರ್ನಾಟಕ1 hour ago

Actor Darshan: ದರ್ಶನ್‌ಗಿಲ್ಲ ಮನೆಯೂಟ ತಿನ್ನೋ ಭಾಗ್ಯ; ಅರ್ಜಿ ವಿಚಾರಣೆ ಜು.29ಕ್ಕೆ ಮುಂದೂಡಿಕೆ

Keshav Prasad Maurya
ದೇಶ1 hour ago

Keshav Prasad Maurya: ʼಮಾನ್ಸೂನ್‌ ಆಫರ್‌ʼ ಕೊಟ್ಟ ಅಖಿಲೇಶ್‌ ಯಾದವ್‌ಗೆ ಬಿಜೆಪಿ ಟಾಂಗ್‌

karnataka Weather Forecast
ಮಳೆ1 hour ago

Karnataka Weather : ವಾಯುಭಾರ ಕುಸಿತ ಎಫೆಕ್ಟ್‌; ವಾರಾಂತ್ಯದಲ್ಲಿ ಭಾರಿ ಮಳೆ ಎಚ್ಚರಿಕೆ, ಶಾಲೆಗಳಿಗೆ ರಜೆ ಘೋಷಣೆ

Salman Khan-Akshay Kumar
Latest1 hour ago

Salman Khan-Akshay Kumar: ಸಲ್ಮಾನ್ ಖಾನ್ – ಅಕ್ಷಯ್ ಕುಮಾರ್ ಜೋಡಿಯಾಗಿ ನಟಿಸಿದ 4 ಅತ್ಯುತ್ತಮ ಚಿತ್ರಗಳಿವು!

Bengaluru power cut July 20th power outage in many parts of Bengaluru
ಬೆಂಗಳೂರು1 hour ago

Bengaluru Power Cut: ಬೆಂಗಳೂರಿನ ಹಲವೆಡೆ ನಾಳೆ ಕರೆಂಟ್‌ ಇರಲ್ಲ!

Congress creates colorful stories only during elections Minister Pralhad Joshi alleges
ಕರ್ನಾಟಕ1 hour ago

Pralhad Joshi: ಚುನಾವಣೆ ವೇಳೆ ಮಾತ್ರ ಕಾಂಗ್ರೆಸ್ ಬಣ್ಣ ಬಣ್ಣದ ಕಥೆ ಕಟ್ಟುತ್ತದೆ: ಪ್ರಲ್ಹಾದ್‌ ಜೋಶಿ

Natasha ponawala jeweled kurta
ಫ್ಯಾಷನ್2 hours ago

Natasha ponawala jewelled kurta: ರಿಯಲ್‌ ಜ್ಯುವೆಲ್ಡ್ ಕುರ್ತಾ ಧರಿಸಿದ್ದ ಏಕೈಕ ಫ್ಯಾಷನ್‌ ಐಕಾನ್‌ ನತಾಶಾರ ‘ಮೊಗಲ್‌ ರಾಣಿ’ ಲುಕ್‌!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ7 hours ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ7 hours ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ1 day ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ1 day ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ3 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ4 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ4 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ5 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ5 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

ಟ್ರೆಂಡಿಂಗ್‌