Cancer-Causing Chemicals: ಕಾರು ಪ್ರಿಯರೇ ಎಚ್ಚರ ...ಎಚ್ಚರ..‌ ಕಾರಿನಲ್ಲಿ ಉತ್ಪತ್ತಿ ಆಗ್ತಿದೆ ಕ್ಯಾನ್ಸರ್‌ ಕಾರಕ ಕೆಮಿಕಲ್ - Vistara News

ವಿದೇಶ

Cancer-Causing Chemicals: ಕಾರು ಪ್ರಿಯರೇ ಎಚ್ಚರ …ಎಚ್ಚರ..‌ ಕಾರಿನಲ್ಲಿ ಉತ್ಪತ್ತಿ ಆಗ್ತಿದೆ ಕ್ಯಾನ್ಸರ್‌ ಕಾರಕ ಕೆಮಿಕಲ್

Cancer-Causing Chemicals:ಕಾರಿನಲ್ಲಿ ಉತ್ಪತ್ತಿಯಾಗಿರುವ ರಾಸಾಯನಿಕವೊಂದನ್ನು ಶ್ವಾಸಿಸುವುದರಿಂದ ಜನ ಕ್ಯಾನ್ಸರ್‌ಗೆ ತುತ್ತಾಗುತ್ತಾರೆ ಎಂಬ ಆಘಾತಕಾರಿ ವಿಚಾರವೊಂದು ಬೆಳಕಿಗೆ ಬಂದಿದೆ. ಅಮೆರಿಕಾದ ಪರಿಸರ ವಿಜ್ಞಾನ ಮತ್ತು ತಂತ್ರಜ್ಞಾನ ಸಂಶೋಧಕರು( ಈ ಅಧ್ಯಯನ ನಡೆಸಿ ವರದಿ, ನೀಡಿದ್ದು, ಕಾರಿನೊಳಗೆ ಹೊರಬರುವ ಅಪಾಯಕಾರಿ ರಾಸಾಯನಿಕವನ್ನುಉಸಿರಾಡುವುದರಿಂದ ಜನ ಕ್ಯಾನ್ಸರ್‌ಗೆ ತುತ್ತಾಗುತ್ತಿದ್ದಾರೆ ಎಂದು ಹೇಳಿದ್ದಾರೆ.

VISTARANEWS.COM


on

Cancer Causing Chemicals
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಾಷಿಂಗ್ಟನ್‌: ಕಾರಿನಲ್ಲಿ ಲಾಂಗ್‌ ಡ್ರೈವ್‌ ಹೋಗೋದು ಬಹುತೇಕ ಎಲ್ಲರೂ ಇಷ್ಟ ಪಡುತ್ತಾರೆ. ತಣ್ಣನೇ ಎ ಸಿ ಹಾಕೊಂಡು ಕಿಲೋಮೀಟರ್‌ಗಟ್ಟಲೇ ಕಾರು ಚಲಾಯಿಸೋದೇ ಒಂದು ಕ್ರೇಜ್‌. ಕಾರು(Car) ಅಂದ್ರೆ ಯಾರಿಗೆ ಇಷ್ಟ ಇಲ್ಲ ಹೇಳಿ. ಕಾರು ಪ್ರಿಯರಿಗೊಂದು ಶಾಕಿಂಗ್‌ ವಿಚಾರವೊಂದು ಪತ್ತೆಯಾಗಿದೆ. ಕಾರಿನಲ್ಲಿ ಉತ್ಪತ್ತಿಯಾಗಿರುವ ರಾಸಾಯನಿಕವೊಂದನ್ನು ಶ್ವಾಸಿಸುವುದರಿಂದ ಜನ ಕ್ಯಾನ್ಸರ್‌ಗೆ(Cancer) ತುತ್ತಾಗುತ್ತಾರೆ ಎಂಬ ಆಘಾತಕಾರಿ ವಿಚಾರವೊಂದು ಬೆಳಕಿಗೆ ಬಂದಿದೆ. ಅಮೆರಿಕಾದ ಪರಿಸರ ವಿಜ್ಞಾನ ಮತ್ತು ತಂತ್ರಜ್ಞಾನ ಸಂಶೋಧಕರು(Environmental Science & Technology) ಈ ಅಧ್ಯಯನ ನಡೆಸಿ ವರದಿ, ನೀಡಿದ್ದು, ಕಾರಿನೊಳಗೆ ಹೊರಬರುವ ಅಪಾಯಕಾರಿ ರಾಸಾಯನಿಕವನ್ನು(Cancer-Causing Chemicals) ಉಸಿರಾಡುವುದರಿಂದ ಜನ ಕ್ಯಾನ್ಸರ್‌ಗೆ ತುತ್ತಾಗುತ್ತಿದ್ದಾರೆ ಎಂದು ಹೇಳಿದ್ದಾರೆ.

ಅಮೆರಿಕ ರಾಷ್ಟ್ರೀಯ ಟಾಕ್ಸೋಲಾಜಿ ಕಾರ್ಯಕ್ರಮದಡಿಯಲ್ಲಿ ಸಂಶೋಧಕರು ಈ ಅಧ್ಯಯನ ನಡೆಸಿದ್ದು, ಅದಕ್ಕಾಗಿ ಅವರು 2015 ಮತ್ತು 2019ರನಡುವೆ ತಯಾರಾಗಿರುವ 101 ಎಲ್ಲಾ ರೀತಿಯ ಅಂದರೆ ಎಲೆಕ್ಟ್ರಿಕ್‌, ಗ್ಯಾಸ್‌ ಮತ್ತು ಹೈಬ್ರಿಡ್‌ ಕಾರಗಳನ್ನು ಮಾದರಿಗಳನ್ನಾಗಿ ತೆಗೆದುಕೊಂಡಿದ್ದಾರೆ. ಈ ಕಾರುಗಳು ಶೇ.99ರಷ್ಟು ಕಾರುಗಳು TCIPP ಎಂಬ ಜ್ವಾಲೆ ನಿವಾರಕ ಸಾಧನವನ್ನು ಹೊಂದಿದೆ. ಇವುಗಳು ನೇರವಾಗಿ ಮನುಷ್ಯನ ನರಗಳು, ಸಂತಾನೋತ್ಪತ್ತಿ ಶಕ್ತಿ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಈ ಕಾರುಗಳಲ್ಲಿ ಪ್ರತಿನಿತ್ಯ ಒಂದು ಗಂಟೆಗಳ ಕಾಲ ಕಳೆದರೆ ಜನ ನಿಧಾನವಾಗಿ ಆರೋಗ್ಯ ಸಮಸ್ಯೆಗೆ ತುತ್ತಾಗುತ್ತಾರೆ ಎಂದು ಸಂಶೋಧಕರು ತಮ್ಮ ವರದಿಯಲ್ಲಿ ತಿಳಿಸಿದ್ದಾರೆ.

ಈ ಕುರಿತು ಡ್ಯೂಕ್‌ ವಿಶ್ವವಿದ್ಯಾನಿಲಯದ ಪ್ರಮುಖ ಸಂಶೋಧಕರಾದ ರೆಬೆಕ್ಕಾ ಹೋಹೆನ್‌ ಮಾತನಾಡಿದ್ದು, ಪ್ರತಿನಿತ್ಯ ಕಾರಿನಲ್ಲೇ ಬಹುದೂರ ಪ್ರಯಾಣಿಸುವವರು ಮತ್ತು ಮಕ್ಕಳಲ್ಲಿ ಈ ಸಮಸ್ಯೆ ಅತಿ ಹೆಚ್ಚಾಗಿ ಕಂಡುಬರುತ್ತಿದೆ. ಬೇಸಿಗೆ ಕಾಲದಲ್ಲಿ ಕಾರಿನ ಸೀಟುಗಳಿಂದ ಈ ರಾಸಾಯನಿಕಗಳು ಅತಿ ಹೆಚ್ಚಾಗಿ ಹೊರಬರುತ್ತವೆ. ಇದು ಕ್ಯಾನ್ಸರ್‌ಗೆ ತುತ್ತು ಮಾಡುವಂತೆ ಅಪಾಯಕಾರಿ ರಾಸಾಯನಿಕಗಳಾಗಿವೆ. ಕಾರು ತಯಾರಕರು ಸೀಟಿನ ಒಳಗೆ ತುಂಬಿಸುವ ವಸ್ತುಗಳಿಗೆ(seat foam) ಮತ್ತು ಕಾರಿನ ಒಳಗಿರುವ ಇತರೇ ವಸ್ತುಗಳಿಗೆ ಬಹುಕಾಲ ಬಾಳಿಕೆ ಬರುವಂತೆ ಮಾಡುವ ಉದ್ದೇಶದಿಂದ ರಾಸಾಯನಿಕಗಳನ್ನು ಸೇರಿಸುತ್ತಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:Gurpatwant Singh Pannun: ಪನ್ನುನ್‌ ಹತ್ಯೆ ಸಂಚಿನಲ್ಲಿ ಭಾರತದ ಕೈವಾಡ; ಅಮೆರಿಕ ಆರೋಪಕ್ಕೆ ರಷ್ಯಾ ಟಾಂಗ್‌

ಇನ್ನು ಈ ಬಗ್ಗೆ ಆರೋಗ್ಯ ಸುರಕ್ಷತೆ ಮತ್ತು ಔಷಧಿ ವಿಭಾಗದ ನಿರ್ದೇಶಕ ಪ್ಯಾಟ್ರಿಕ್‌ ಮಾರಿಸನ್‌ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಕಾರಿನಲ್ಲಿ ಬಳಸುವ ಫಯರ್‌ ಫ್ಲೇಮ್‌ ನಿಯಂತ್ರಕ ರಾಸಾಯನಿಕಗಳು ಅತಿ ಹೆಚ್ಚಿನ ಪ್ರಮಾಣದಲ್ಲಿ ಮುನುಷ್ಯನನ್ನು ಕ್ಯಾನ್ಸರ್‌ಗೆ ದೂಡುತ್ತಿವೆ. ಈ ರಾಸಾಯನಿಕಗಳು ಬೆಂಕಿಯನ್ನು ಜ್ವಾಲೆಯನ್ನು ನಂದಿಸುವ ಬದಲು ಒಳಗಿದ್ದ ವ್ಯಕ್ತಿಗೆ ಉಸಿರು ಕಟ್ಟುವಂತೆ ಮಾಡುತ್ತದೆ. ಹೀಗಾಗಿ ಅಮೆರಿಕ ರಸ್ತೆ ಸುರಕ್ಷತಾ ಪ್ರಾಧಿಕಾರ ಈ ಬಗ್ಗೆ ಹೆಚ್ಚಿನ ಗಮನ ಹರಿಸಬೇಕಿದೆ ಎಂದು ಹೇಳಿದ್ದಾರೆ.


ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

Ebrahim Raisi: ಹೆಲಿಕಾಪ್ಟರ್‌ ದುರಂತಕ್ಕೂ ಮುಂಚಿನ ಇಬ್ರಾಹಿಂ ರೈಸಿ ವಿಡಿಯೋ ವೈರಲ್‌

Ebrahim Raisi:ಅಧ್ಯಕ್ಷ ಇಬ್ರಾಹಿಂ ರೈಸಿ ಅವರ ಹೆಲಿಕಾಪ್ಟರ್ ಅಪಘಾತದಲ್ಲಿ ಸಂಪೂರ್ಣವಾಗಿ ಸುಟ್ಟು ಹೋಗಿದೆ. ದುರದೃಷ್ಟವಶಾತ್ ಅದರಲ್ಲಿದ್ದ ಎಲ್ಲ ಪ್ರಯಾಣಿಕರು ಸಾವನ್ನಪ್ಪಿದ್ದಾರೆಂದು ಶಂಕಿಸಲಾಗಿದೆ” ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. “ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್‌ನ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಕರ್ತವ್ಯ ನಿರ್ವಹಿಸುವಾಗ ಅಪಘಾತಕ್ಕೀಡಾಗಿ ಹುತಾತ್ಮರಾದರು” ಎಂದು ಇರಾನ್‌ ಮೆಹರ್ ಏಜೆನ್ಸಿ ವರದಿ ಮಾಡಿದೆ.

VISTARANEWS.COM


on

Ebrahim Raisi
Koo

ಬಾಕು: ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ (Ebrahim Raisi) ಹಾಗೂ ಅವರ ಎಂಟು ಜನ ಅಧಿಕಾರಿಗಳನ್ನು ಬಲಿಪಡೆದ ಭೀಕರ ಹೆಲಿಕಾಪ್ಟರ್‌ ದುರಂತ (Helicopter Crash)ಕ್ಕೂ ಮುಂಚಿನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌(Video Viral) ಆಗಿದೆ. ಹೆಲಿಕಾಪ್ಟರ್‌ ಹಾರಾಟ ಶುರು ಮಾಡುತ್ತಿರುವ ವಿಡಿಯೋ ಸ್ಥಳೀಯ ವಾಹಿನಿಯಲ್ಲಿ ಬಿತ್ತರವಾಗಿತ್ತು. ಇದೀಗ ಈ ವಿಡಿಯೋ ನೋಡಿ ಇರಾನ್‌ ಜನತೆ ಕಣ್ಣೀರು ಮಿಡಿದಿದ್ದಾರೆ. ಅರಸ್‌ ನದಿಗೆ ಇರಾನ್‌ ಹಾಗೂ ಅಜರ್‌ಬೈಜಾನ್‌ ಸೇರಿ ಅಣೆಕಟ್ಟು ಕಟ್ಟಿದ್ದು, ಅದನ್ನು ಉದ್ಘಾಟಿಸಲು ಇಬ್ರಾಹಿಂ ರೈಸಿ ಅವರು ಅಜರ್‌ಬೈಜಾನ್‌ಗೆ ತೆರಳಿದ್ದರು. ಇದೇ ವೇಳೆ ಹೆಲಿಕಾಪ್ಟರ್‌ ಪತನಗೊಂಡಿತ್ತು.

ಅಧ್ಯಕ್ಷ ಇಬ್ರಾಹಿಂ ರೈಸಿ ಅವರ ಹೆಲಿಕಾಪ್ಟರ್ ಅಪಘಾತದಲ್ಲಿ ಸಂಪೂರ್ಣವಾಗಿ ಸುಟ್ಟು ಹೋಗಿದೆ. ದುರದೃಷ್ಟವಶಾತ್ ಅದರಲ್ಲಿದ್ದ ಎಲ್ಲ ಪ್ರಯಾಣಿಕರು ಸಾವನ್ನಪ್ಪಿದ್ದಾರೆಂದು ಶಂಕಿಸಲಾಗಿದೆ” ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. “ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್‌ನ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಕರ್ತವ್ಯ ನಿರ್ವಹಿಸುವಾಗ ಅಪಘಾತಕ್ಕೀಡಾಗಿ ಹುತಾತ್ಮರಾದರು” ಎಂದು ಇರಾನ್‌ ಮೆಹರ್ ಏಜೆನ್ಸಿ ವರದಿ ಮಾಡಿದೆ.

ಇದೀಗ ಈ ದುರ್ಘಟನೆಗೂ ಮುನ್ನ ಚಿತ್ರೀಕರಣಗೊಂಡಿದ್ದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವಿಡಿಯೋದಲ್ಲಿ ರೈಸಿ ತನ್ನ ಅಧಿಕಾರಿಗಳ ಜೊತೆ ಕುಳಿತು ಮಾತುಕತೆ ನಡೆಸುತ್ತಿರುವುದನ್ನು ಕಾನಬಹುದಾಗಿದೆ. ಇದಾದ ಕೇವಲ 30ನಿಮಿಷಗಳ ನಂತರ ವಿಮಾನ ಸಂಪರ್ಕ ಕಳೆದುಕೊಂಡಿತ್ತು. ಸುಮಾರು 16ಗಂಟೆಗಳ ಶೋಧ ಕಾರ್ಯಾಚರಣೆ ಬಳಿಕ ವಿಮಾನದ ಅವಶೇಷಗಳು ಪತ್ತೆಯಾಗಿತ್ತು. ಇದರ ಬೆನ್ನಲ್ಲೇ ರೈಸಿ ಮತ್ತು ಅವರ ಜೊತೆಗಿದ್ದವರು ಮೃತಪಟ್ಟಿರುವ ಬಗ್ಗೆ ಇರಾನ್‌ ದೃಢಪಡಿಸಿದೆ.

ಪ್ರಧಾನಿ ನರೇಂದ್ರ ಮೋದಿ ಸಂತಾಪ

ರೈಸಿ ಅವರ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. “ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್‌ ಅಧ್ಯಕ್ಷ ಡಾ ಸಯ್ಯದ್ ಇಬ್ರಾಹಿಂ ರೈಸಿ ಅವರ ದುರಂತಮಯ ನಿಧನದಿಂದ ತೀವ್ರ ದುಃಖ ಹಾಗೂ ಆಘಾತ ಉಂಟಾಗಿದೆ. ಭಾರತ- ಇರಾನ್ ದ್ವಿಪಕ್ಷೀಯ ಸಂಬಂಧವನ್ನು ಬಲಪಡಿಸುವ ನಿಟ್ಟಿನಲ್ಲಿ ಅವರ ಕೊಡುಗೆಯನ್ನು ಸದಾ ನೆನಪಿಸಿಕೊಳ್ಳಲಾಗುತ್ತದೆ. ಅವರ ಕುಟುಂಬ ಹಾಗೂ ಇರಾನ್‌ನ ಜನತೆಗೆ ನನ್ನ ಹೃದಯಪೂರ್ವಕ ಸಂತಾಪಗಳನ್ನು ಸಲ್ಲಿಸುತ್ತೇನೆ. ಈ ದುಃಖದ ಸಂದರ್ಭದಲ್ಲಿ ಭಾರತವು ಇರಾನ್ ಜತೆಗೆ ಇದೆ” ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ:Kangana Ranaut: ಚುನಾವಣೆಯಲ್ಲಿ ಗೆದ್ದರೆ ನಟನೆಗೆ ವಿದಾಯ; ನಟಿ ಕಂಗನಾ ರಣಾವತ್‌ ಘೋಷಣೆ

Continue Reading

ವಿದೇಶ

Ebrahim Raisi: ಹೆಲಿಕಾಫ್ಟರ್‌ ಪತನದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮೃತ್ಯು; ವಿಧ್ವಂಸಕ ಕೃತ್ಯವೇ?

Ebrahim Raisi: ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ (Ebrahim Raisi) ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ (Helicopter Crash) ಅಜರ್‌ಬೈಜಾನ್‌ನಲ್ಲಿ (Azerbaijan) ಪತನಗೊಂಡಿದ್ದು, ಘಟನೆಯಲ್ಲಿ ಅವರು ಮೃತಪಟ್ಟಿದ್ದಾರೆ. ಅವರೊಂದಿಗೆ ಪ್ರಯಾಣಿಸುತ್ತಿದ್ದ ವಿದೇಶಾಂಗ ವ್ಯವಹಾರಗಳ ಸಚಿವ ಹುಸೇನ್‌ ಅಮೀರಬ್ದೊಲ್ಲೈ ಸೇರಿ ಇತರರೂ ನಿಧನ ಹೊಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.

VISTARANEWS.COM


on

Ebrahim Raisi
Koo

ಬಾಕು: ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ (Ebrahim Raisi) ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ (Helicopter Crash) ಅಜರ್‌ಬೈಜಾನ್‌ನಲ್ಲಿ (Azerbaijan) ಪತನಗೊಂಡಿದ್ದು, ಘಟನೆಯಲ್ಲಿ ಅವರು ಮೃತಪಟ್ಟಿದ್ದಾರೆ. ಅವರೊಂದಿಗೆ ಪ್ರಯಾಣಿಸುತ್ತಿದ್ದ ವಿದೇಶಾಂಗ ವ್ಯವಹಾರಗಳ ಸಚಿವ ಹುಸೇನ್‌ ಅಮೀರಬ್ದೊಲ್ಲೈ ಸೇರಿ ಇತರರೂ ನಿಧನ ಹೊಂದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸದ್ಯ ರಕ್ಷಣಾ ತಂಡ ಕಾರ್ಯಾಚರಣೆಯಲ್ಲಿ ನಿರತವಾಗಿದೆ.

“ಅಧ್ಯಕ್ಷ ಇಬ್ರಾಹಿಂ ರೈಸಿ ಅವರ ಹೆಲಿಕಾಪ್ಟರ್ ಅಪಘಾತದಲ್ಲಿ ಸಂಪೂರ್ಣವಾಗಿ ಸುಟ್ಟು ಹೋಗಿದೆ. ದುರದೃಷ್ಟವಶಾತ್ ಅದರಲ್ಲಿದ್ದ ಎಲ್ಲ ಪ್ರಯಾಣಿಕರು ಸಾವನ್ನಪ್ಪಿದ್ದಾರೆಂದು ಶಂಕಿಸಲಾಗಿದೆ” ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. “ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್‌ನ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಕರ್ತವ್ಯ ನಿರ್ವಹಿಸುವಾಗ ಅಪಘಾತಕ್ಕೀಡಾಗಿ ಹುತಾತ್ಮರಾದರು” ಎಂದು ಇರಾನ್‌ ಮೆಹರ್ ಏಜೆನ್ಸಿ ವರದಿ ಮಾಡಿದೆ.

ಹೆಲಿಕಾಪ್ಟರ್‌ನಲ್ಲಿ ಯಾರಿದ್ದರು?

ಹೆಲಿಕಾಪ್ಟರ್‌ನಲ್ಲಿ ಅಧ್ಯಕ್ಷ ಇಬ್ರಾಹಿಂ ರೈಸಿ ಜತೆಗೆ ವಿದೇಶಾಂಗ ವ್ಯವಹಾರಗಳ ಸಚಿವ ಹುಸೇನ್‌ ಅಮೀರಬ್ದೊಲ್ಲೈ, ಪೂರ್ವ ಅಜರ್‌ಬೈಜಾನ್‌ ಗವರ್ನರ್‌ ಮಲೇಕ್‌ ರಹಮತಿ ಹಾಗೂ ಪೂರ್ವ ಅಜರ್‌ಬೈಜಾನ್‌ನಲ್ಲಿರುವ ಇರಾನ್‌ ಸುಪ್ರೀಂ ಲೀಡರ್‌ನ ಪ್ರತಿನಿಧಿ ಅಯೊತೊಲ್ಲಾ ಮೊಹಮ್ಮದ್‌ ಅಲಿ ಅಲೆ-ಹಶೇಮ್‌ ಕೂಡ ಇದ್ದರು. ಮಂಜು ಕವಿದ ವಾತಾವರಣದ ಕಾರಣ ಪೈಲೆಟ್ ತುರ್ತು ಲ್ಯಾಂಡಿಂಗ್ ಮಾಡಲು ಮುಂದಾಗಿದ್ದರು. ಆದರೆ ಲ್ಯಾಂಡಿಂಗ್ ವೇಳೆಯೇ ಹೆಲಿಕಾಪ್ಟರ್ ಅಪಘಾತವಾಗಿದೆ ಎಂದು ಇರಾನ್ ಸುದ್ದಿ ಮಾಧ್ಯಮಗಳು ವರದಿ ಮಾಡಿದೆ. ಅರಸ್‌ ನದಿಗೆ ಇರಾನ್‌ ಹಾಗೂ ಅಜರ್‌ಬೈಜಾನ್‌ ಸೇರಿ ಅಣೆಕಟ್ಟು ಕಟ್ಟಿದ್ದು, ಅದನ್ನು ಉದ್ಘಾಟಿಸಲು ಇಬ್ರಾಹಿಂ ರೈಸಿ ಮತ್ತು ಇತರ ಗಣ್ಯರು ಅಜರ್‌ಬೈಜಾನ್‌ಗೆ ತೆರಳಿದ್ದರು. 

ಕವಿದ ದಟ್ಟ ಮಂಜು ಮತ್ತು ಹವಾಮಾನ ವೈಪರೀತ್ಯ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗಿತ್ತು. ಹೆಲಿಕಾಪ್ಟರ್‌ ಹುಡುಕಾಟ ಕಾರ್ಯಾಚರಣೆಯಲ್ಲಿ ತೊಡಗಿದ್ದ ಮಾನವ ರಹಿತ ವೈಮಾನಿಕ ವಾಹನ(UAV)ಹೆಲಿಕಾಪ್ಟರ್‌ ಪತನಗೊಂಡಿರುವ ಸ್ಥಳವನ್ನು ಪತ್ತೆ ಹಚ್ಚಿದ್ದು, ಸದ್ಯ ಅದರ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಈ ವಿಡಿಯೋವನ್ನು ಇರಾನಿಯನ್‌ ಸುದ್ದಿ ವಾಹಿನಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಶೇರ್‌ ಮಾಡಿದ್ದು, ರೆಡ್ ಕ್ರೆಸೆಂಟ್ ಶೋಧ ಮತ್ತು ಪಾರುಗಾಣಿಕಾ ತಂಡಗಳು ಅಧ್ಯಕ್ಷರನ್ನು ಹೊತ್ತ ಹೆಲಿಕಾಪ್ಟರ್ ಅಪಘಾತದ ಸ್ಥಳಕ್ಕೆ ತಲುಪಿವೆ. ರೆಡ್ ಕ್ರೆಸೆಂಟ್ ಸದ್ಯದಲ್ಲೇ ವಿವರವಾದ ಮಾಹಿತಿಯನ್ನು ನೀಡಲಿದೆ ಎಂದು ಹೇಳಿದೆ. ಸದ್ಯ ಇದು ಅಪಘಾತವೇ, ವಿಧ್ವಂಸಕ ಕೃತ್ಯವೇ ಎನ್ನುವ ಅನುಮಾನ ಮೂಡಿದೆ.

ಇಬ್ರಾಹಿಂ ರೈಸಿಗಾಗಿ ಮೋದಿ ಪ್ರಾರ್ಥನೆ

ಇರಾನ್‌ ಅಧ್ಯಕ್ಷರಿದ್ದ ಹೆಲಿಕಾಪ್ಟರ್‌ ಪತನಗೊಂಡಿರುವ ಕುರಿತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕಳವಳ ವ್ಯಕ್ತಪಡಿಸಿದ್ದರು. “ಇಬ್ರಾಹಿಂ ರೈಸಿ ಅವರ ಹೆಲಿಕಾಪ್ಟರ್‌ ಪತನದ ಸುದ್ದಿ ತಿಳಿದು ಆತಂಕವಾಗಿದೆ. ಇರಾನ್‌ ಜನರ ಭಾವನೆಗಳ ಜತೆ ನಾವಿದ್ದೇವೆ. ಇಬ್ರಾಹಿಂ ರೈಸಿ ಹಾಗೂ ಅವರ ಜತೆಗಿದ್ದ ಎಲ್ಲರೂ ಸುರಕ್ಷಿತವಾಗಿರಲಿ ಎಂಬುದಾಗಿ ಪ್ರಾರ್ಥಿಸುತ್ತೇನೆ” ಎಂದು ಮೋದಿ ಪೋಸ್ಟ್‌ ಮಾಡಿದ್ದರು. ಜತೆಗೆ ವಿಶ್ವದ ನಾನಾ ದೇಶಗಳ ನಾಯಕರೂ ರೈಸಿ ಅವರು ಸುರಕ್ಷಿರತಾಗಿ ಪತ್ತೆಯಾಗಲಿ ಎಂದು ಪ್ರಾರ್ಥಿಸಿದ್ದರು.

ಇದನ್ನೂ ಓದಿ: Ebrahim Raisi: ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ

Continue Reading

ವಿದೇಶ

Ebrahim Raisi: ಇರಾನ್‌ ಅಧ್ಯಕ್ಷರಿದ್ದ ಹೆಲಿಕಾಪ್ಟರ್‌ ಪತ್ತೆ; ದುರ್ಘಟನಾ ಸ್ಥಳದ ವಿಡಿಯೋ ಲಭ್ಯ

Ebrahim Raisi:ವಿಡಿಯೋವನ್ನು ಇರಾನಿಯನ್‌ ಸುದ್ದಿ ವಾಹಿನಿ ಎಕ್ಸ್‌ನಲ್ಲಿ ಶೇರ್‌ ಮಾಡಿದ್ದು, ರೆಡ್ ಕ್ರೆಸೆಂಟ್ ಶೋಧ ಮತ್ತು ಪಾರುಗಾಣಿಕಾ ತಂಡಗಳು ಅಧ್ಯಕ್ಷರನ್ನು ಹೊತ್ತ ಹೆಲಿಕಾಪ್ಟರ್ ಅಪಘಾತದ ಸ್ಥಳಕ್ಕೆ ತಲುಪಿವೆ. ಅಧ್ಯಕ್ಷರು ಮತ್ತು ಅವರ ಸಹಚರರು ಬದುಕುಳಿದಿದ್ದಾರೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ರೆಡ್ ಕ್ರೆಸೆಂಟ್ ಮಾಹಿತಿಯನ್ನು ನೀಡಿಲ್ಲ ಎಂದು ಹೇಳಿದೆ.

VISTARANEWS.COM


on

Ebrahim Raisi
Koo

ಬಾಕು: ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ (Ebrahim Raisi) ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ (Helicopter Crash) ಅಜರ್‌ಬೈಜಾನ್‌ನಲ್ಲಿ (Azerbaijan) ಪತನಗೊಂಡಿದ್ದು, ಹಲವು ಗಂಟೆಗಳ ಕಾರ್ಯಾಚರಣೆ ಬಳಿಕ ಹೆಲಿಕಾಪ್ಟರ್‌ ಪತನಗೊಂಡ ಸ್ಥಳವನ್ನು ರಕ್ಷಣಾ ಕಾರ್ಯಾಚರಣೆ ಪಡೆ ಪತ್ತೆ ಹಚ್ಚಿದೆ. ಹೆಲಿಕಾಪ್ಟರ್‌ ಹುಡುಕಾಟ ಕಾರ್ಯಾಚರಣೆಯಲ್ಲಿ ತೊಡಗಿದ್ದ ಮಾನವ ರಹಿತ ವೈಮಾನಿಕ ವಾಹನ(UAV)ಹೆಲಿಕಾಪ್ಟರ್‌ ಪತನಗೊಂಡಿರುವ ಸ್ಥಳವನ್ನು ಪತ್ತೆ ಹಚ್ಚಿದ್ದು, ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಈ ವಿಡಿಯೋವನ್ನು ಇರಾನಿಯನ್‌ ಸುದ್ದಿ ವಾಹಿನಿ ಎಕ್ಸ್‌ನಲ್ಲಿ ಶೇರ್‌ ಮಾಡಿದ್ದು, ರೆಡ್ ಕ್ರೆಸೆಂಟ್ ಶೋಧ ಮತ್ತು ಪಾರುಗಾಣಿಕಾ ತಂಡಗಳು ಅಧ್ಯಕ್ಷರನ್ನು ಹೊತ್ತ ಹೆಲಿಕಾಪ್ಟರ್ ಅಪಘಾತದ ಸ್ಥಳಕ್ಕೆ ತಲುಪಿವೆ. ಅಧ್ಯಕ್ಷರು ಮತ್ತು ಅವರ ಸಹಚರರು ಬದುಕುಳಿದಿದ್ದಾರೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ರೆಡ್ ಕ್ರೆಸೆಂಟ್ ಮಾಹಿತಿಯನ್ನು ನೀಡಿಲ್ಲ ಎಂದು ಹೇಳಿದೆ.

ಹೆಲಿಕಾಪ್ಟರ್‌ನಲ್ಲಿ ಯಾರಿದ್ದರು?

ಹೆಲಿಕಾಪ್ಟರ್‌ನಲ್ಲಿ ಇಬ್ರಾಹಿಂ ರೈಸಿ ಜತೆಗೆ ವಿದೇಶಾಂಗ ವ್ಯವಹಾರಗಳ ಸಚಿವ ಹುಸೇನ್‌ ಅಮೀರಬ್ದೊಲ್ಲೈ, ಪೂರ್ವ ಅಜರ್‌ಬೈಜಾನ್‌ ಗವರ್ನರ್‌ ಮಲೇಕ್‌ ರಹಮತಿ ಹಾಗೂ ಪೂರ್ವ ಅಜರ್‌ಬೈಜಾನ್‌ನಲ್ಲಿರುವ ಇರಾನ್‌ ಸುಪ್ರೀಂ ಲೀಡರ್‌ನ ಪ್ರತಿನಿಧಿ ಅಯೊತೊಲ್ಲಾ ಮೊಹಮ್ಮದ್‌ ಅಲಿ ಅಲೆ-ಹಶೇಮ್‌ ಅವರು ಕೂಡ ಇದ್ದರು. ಇದುವರೆಗೆ ಹೆಲಿಕಾಪ್ಟರ್‌ ಎಲ್ಲಿದೆ ಎಂಬುದರ ಸುಳಿವೇ ಸಿಗದ ಕಾರಣ ಇವರೆಲ್ಲರ ಪ್ರಾಣಕ್ಕೆ ಕುತ್ತು ಎದುರಾಗಿರಬಹುದು ಎಂದು ಹೇಳಲಾಗುತ್ತಿದೆ.

ಇಬ್ರಾಹಿಂ ರೈಸಿಗಾಗಿ ಮೋದಿ ಪ್ರಾರ್ಥನೆ

ಇರಾನ್‌ ಅಧ್ಯಕ್ಷರಿದ್ದ ಹೆಲಿಕಾಪ್ಟರ್‌ ಪತನಗೊಂಡಿರುವ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಕಳವಳ ವ್ಯಕ್ತಪಡಿಸಿದ್ದಾರೆ. “ಇಬ್ರಾಹಿಂ ರೈಸಿ ಅವರ ಹೆಲಿಕಾಪ್ಟರ್‌ ಪತನದ ಸುದ್ದಿ ತಿಳಿದು ಆತಂಕವಾಗಿದೆ. ಇರಾನ್‌ ಜನರ ಭಾವನೆಗಳ ಜತೆ ನಾವಿದ್ದೇವೆ. ಇಬ್ರಾಹಿಂ ರೈಸಿ ಹಾಗೂ ಅವರ ಜತೆಗಿದ್ದ ಎಲ್ಲರೂ ಸುರಕ್ಷಿತವಾಗಿರಲಿ ಎಂಬುದಾಗಿ ಪ್ರಾರ್ಥಿಸುತ್ತೇನೆ” ಎಂದು ಮೋದಿ ಪೋಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ:Lok Sabha Election 2024: ಬಿಜೆಪಿ ಅಭ್ಯರ್ಥಿಗೆ ಒಬ್ಬನಿಂದಲೇ 8 ಬಾರಿ ವೋಟಿಂಗ್;‌ ವೈರಲಾಗ್ತಿದೆ ಶಾಕಿಂಗ್‌ ವಿಡಿಯೋ

ಅರಸ್‌ ನದಿಗೆ ಇರಾನ್‌ ಹಾಗೂ ಅಜರ್‌ಬೈಜಾನ್‌ ಸೇರಿ ಅಣೆಕಟ್ಟು ಕಟ್ಟಿದ್ದು, ಅದನ್ನು ಉದ್ಘಾಟಿಸಲು ಇಬ್ರಾಹಿಂ ರೈಸಿ ಅವರು ಅಜರ್‌ಬೈಜಾನ್‌ಗೆ ತೆರಳಿದ್ದರು. ಇದೇ ವೇಳೆ ಹೆಲಿಕಾಪ್ಟರ್‌ ಪತನಗೊಂಡಿದೆ ಎಂದು ತಿಳಿದುಬಂದಿದೆ. ಹವಾಮಾನ ವೈಪರೀತ್ಯದಿಂದಾಗಿ ಹೆಲಿಕಾಪ್ಟರ್‌ ಪತನಗೊಂಡಿರಬಹುದು ಎಂದು ಇರಾನ್‌ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹವಾಮಾನ ವೈಪರೀತ್ಯವು ಶೋಧ ಕಾರ್ಯಾಚರಣೆಗೂ ಅಡ್ಡಿಯಾಗಿದೆ ಎಂದು ತಿಳಿದುಬಂದಿದೆ. 2021ರಿಂದಲೂ ಇಬ್ರಾಹಿಂ ರೈಸಿ ಅವರು ಇರಾನ್‌ ಅಧ್ಯಕ್ಷರಾಗಿದ್ದಾರೆ.

Continue Reading

ವಿದೇಶ

Ebrahim Raisi: ಪತನದ ಬಳಿಕ ಹೆಲಿಕಾಪ್ಟರ್‌ ನಾಪತ್ತೆ; ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಸಾವು?

Ebrahim Raisi: ಅಜರ್‌ಬೈಜಾನ್‌ನಲ್ಲಿ ಇಬ್ರಾಹಿಂ ರೈಸಿ ಅವರಿದ್ದ ಹೆಲಿಕಾಪ್ಟರ್‌ ಪತನಗೊಂಡಿದೆ ಎಂಬುದಾಗಿ ಸ್ಥಳೀಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಇರಾನ್‌ ಮಾಧ್ಯಮ ಸಂಸ್ಥೆಯೊಂದು ವರದಿ ಮಾಡಿದೆ. ಆದರೆ, ಹೆಲಿಕಾಪ್ಟರ್ ಗುಡ್ಡಗಾಡು ಪ್ರದೇಶದಲ್ಲಿ ಪತನಗೊಂಡಿರುವ ಕಾರಣ ಹುಡುಕಾಟ ನಡೆಯುತ್ತಲೇ ಇದೆ. ಇದುವರೆಗೆ ಹೆಲಿಕಾಪ್ಟರ್‌ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.

VISTARANEWS.COM


on

Ebrahim Raisi
Koo

ಬಾಕು: ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ (Ebrahim Raisi) ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ (Helicopter Crash) ಅಜರ್‌ಬೈಜಾನ್‌ನಲ್ಲಿ (Azerbaijan) ಪತನಗೊಂಡಿದ್ದು, ಹಲವು ಗಂಟೆಗಳ ಕಾರ್ಯಾಚರಣೆ ಬಳಿಕವೂ ಹೆಲಿಕಾಪ್ಟರ್‌ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ಹೆಲಿಕಾಪ್ಟರ್‌ ಪತ್ತೆಗಾಗಿ ಸುಮಾರು 40 ತಂಡಗಳು ಶೋಧ ಕಾರ್ಯ ನಡೆಸುತ್ತಲೇ ಇವೆ. ಇಷ್ಟಾದರೂ ಹೆಲಿಕಾಪ್ಟರ್‌ ಪತ್ತೆಯಾಗಿರುವ ಕಾರಣ ಇಬ್ರಾಹಿಂ ರೈಸಿ ಸೇರಿ ಹಲವರ ಪ್ರಾಣಕ್ಕೆ ಕುತ್ತುಂಟಾಗಿರುವ ಸಾಧ್ಯತೆ ಇದೆ ಎಂದು ಇರಾನ್‌ ಅಧಿಕಾರಿಗಳು ತಿಳಿಸಿದ್ದಾರೆ.

ಅಜರ್‌ಬೈಜಾನ್‌ ಸಮೀಪದ ಜೋಲ್ಫಾ ಎಂಬ ಪ್ರದೇಶ ಬೆಟ್ಟಗಳ ಮಧ್ಯೆ ಹೆಲಿಕಾಪ್ಟರ್‌ ಪತನಗೊಂಡಿರುವ ಕಾರಣ ಶೋಧ ಕಾರ್ಯ ವಿಳಂಬವಾಗುತ್ತಿದೆ ಎಂದು ತಿಳಿದುಬಂದಿದೆ. ಹೆಲಿಕಾಪ್ಟರ್‌ ಪತ್ತೆಗಾಗಿ ಹಲವು ಸಿಬ್ಬಂದಿ ಇರುವ ಸುಮಾರು 40 ತಂಡಗಳನ್ನು ಇರಾನ್‌ ರಚಿಸಿದೆ. ಬೆಟ್ಟಗಳಲ್ಲಿ ಭದ್ರತಾ ಸಿಬ್ಬಂದಿಯು ಎಡೆಬಿಡದೆ ಶೋಧ ಕಾರ್ಯ ಕೈಗೊಂಡರೂ ಮುನ್ನಡೆ ಸಿಗುತ್ತಿಲ್ಲ. ಹೆಲಿಕಾಪ್ಟರ್‌ ಪತನದ ಬಳಿಕ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದ್ದು, ಬದುಕುಳಿಯುವ ಸಾಧ್ಯತೆ ತೀರಾ ಕ್ಷೀಣ ಎಂದು ಹೇಳಲಾಗುತ್ತಿದೆ.

ಹೆಲಿಕಾಪ್ಟರ್‌ನಲ್ಲಿ ಯಾರಿದ್ದರು?

ಹೆಲಿಕಾಪ್ಟರ್‌ನಲ್ಲಿ ಇಬ್ರಾಹಿಂ ರೈಸಿ ಜತೆಗೆ ವಿದೇಶಾಂಗ ವ್ಯವಹಾರಗಳ ಸಚಿವ ಹುಸೇನ್‌ ಅಮೀರಬ್ದೊಲ್ಲೈ, ಪೂರ್ವ ಅಜರ್‌ಬೈಜಾನ್‌ ಗವರ್ನರ್‌ ಮಲೇಕ್‌ ರಹಮತಿ ಹಾಗೂ ಪೂರ್ವ ಅಜರ್‌ಬೈಜಾನ್‌ನಲ್ಲಿರುವ ಇರಾನ್‌ ಸುಪ್ರೀಂ ಲೀಡರ್‌ನ ಪ್ರತಿನಿಧಿ ಅಯೊತೊಲ್ಲಾ ಮೊಹಮ್ಮದ್‌ ಅಲಿ ಅಲೆ-ಹಶೇಮ್‌ ಅವರು ಕೂಡ ಇದ್ದರು. ಇದುವರೆಗೆ ಹೆಲಿಕಾಪ್ಟರ್‌ ಎಲ್ಲಿದೆ ಎಂಬುದರ ಸುಳಿವೇ ಸಿಗದ ಕಾರಣ ಇವರೆಲ್ಲರ ಪ್ರಾಣಕ್ಕೆ ಕುತ್ತು ಎದುರಾಗಿರಬಹುದು ಎಂದು ಹೇಳಲಾಗುತ್ತಿದೆ.

ಇಬ್ರಾಹಿಂ ರೈಸಿಗಾಗಿ ಮೋದಿ ಪ್ರಾರ್ಥನೆ

ಇರಾನ್‌ ಅಧ್ಯಕ್ಷರಿದ್ದ ಹೆಲಿಕಾಪ್ಟರ್‌ ಪತನಗೊಂಡಿರುವ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಕಳವಳ ವ್ಯಕ್ತಪಡಿಸಿದ್ದಾರೆ. “ಇಬ್ರಾಹಿಂ ರೈಸಿ ಅವರ ಹೆಲಿಕಾಪ್ಟರ್‌ ಪತನದ ಸುದ್ದಿ ತಿಳಿದು ಆತಂಕವಾಗಿದೆ. ಇರಾನ್‌ ಜನರ ಭಾವನೆಗಳ ಜತೆ ನಾವಿದ್ದೇವೆ. ಇಬ್ರಾಹಿಂ ರೈಸಿ ಹಾಗೂ ಅವರ ಜತೆಗಿದ್ದ ಎಲ್ಲರೂ ಸುರಕ್ಷಿತವಾಗಿರಲಿ ಎಂಬುದಾಗಿ ಪ್ರಾರ್ಥಿಸುತ್ತೇನೆ” ಎಂದು ಮೋದಿ ಪೋಸ್ಟ್‌ ಮಾಡಿದ್ದಾರೆ.

ಅರಸ್‌ ನದಿಗೆ ಇರಾನ್‌ ಹಾಗೂ ಅಜರ್‌ಬೈಜಾನ್‌ ಸೇರಿ ಅಣೆಕಟ್ಟು ಕಟ್ಟಿದ್ದು, ಅದನ್ನು ಉದ್ಘಾಟಿಸಲು ಇಬ್ರಾಹಿಂ ರೈಸಿ ಅವರು ಅಜರ್‌ಬೈಜಾನ್‌ಗೆ ತೆರಳಿದ್ದರು. ಇದೇ ವೇಳೆ ಹೆಲಿಕಾಪ್ಟರ್‌ ಪತನಗೊಂಡಿದೆ ಎಂದು ತಿಳಿದುಬಂದಿದೆ. ಹವಾಮಾನ ವೈಪರೀತ್ಯದಿಂದಾಗಿ ಹೆಲಿಕಾಪ್ಟರ್‌ ಪತನಗೊಂಡಿರಬಹುದು ಎಂದು ಇರಾನ್‌ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹವಾಮಾನ ವೈಪರೀತ್ಯವು ಶೋಧ ಕಾರ್ಯಾಚರಣೆಗೂ ಅಡ್ಡಿಯಾಗಿದೆ ಎಂದು ತಿಳಿದುಬಂದಿದೆ. 2021ರಿಂದಲೂ ಇಬ್ರಾಹಿಂ ರೈಸಿ ಅವರು ಇರಾನ್‌ ಅಧ್ಯಕ್ಷರಾಗಿದ್ದಾರೆ.

ಇದನ್ನೂ ಓದಿ: Helicopter Crash: ಶಿವಸೇನೆ ನಾಯಕಿ ಪ್ರಯಾಣಿಸಬೇಕಿದ್ದ ಹೆಲಿಕಾಪ್ಟರ್‌ ಪತನ;ವಿಡಿಯೋ ವೈರಲ್‌

Continue Reading
Advertisement
ಲಕ್ಕೂರು ಆನಂದ lakkuru Anand
ಶ್ರದ್ಧಾಂಜಲಿ22 mins ago

ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತ ಕವಿ ಲಕ್ಕೂರು ಆನಂದ ನಿಧನ, ಅನುಮಾನಾಸ್ಪದ ಸಾವು ಕೇಸು

Prajwal Revanna Case Shivarame Gowdas Deve Gowda suicide statement says Nikhil Kumaraswamy
ರಾಜಕೀಯ26 mins ago

Prajwal Revanna Case: ಶಿವರಾಮೇಗೌಡರ ದೇವೇಗೌಡ ಆತ್ಮಹತ್ಯೆ ಹೇಳಿಕೆ; ನಿಖಿಲ್‌ ಕುಮಾರಸ್ವಾಮಿ ಕೆಂಡ

murder case in Belgavi
ಬೆಳಗಾವಿ38 mins ago

Baby Death : ಮಲತಾಯಿಯ ಕ್ರೌರ್ಯಕ್ಕೆ ಬಲಿಯಾಯ್ತಾ 3 ವರ್ಷದ ಕಂದಮ್ಮ?

rave party telugu actress hema
ಕ್ರೈಂ40 mins ago

‌Rave Party: ʼರೇವ್‌ ಪಾರ್ಟಿಯಲ್ಲಿ ನಾನಿಲ್ಲʼ ಎಂದು ವಿಡಿಯೋ ಮಾಡಿದ ತೆಲುಗು ನಟಿ; ಐವರ ಬಂಧನ

Payal Rajput Accuses Rakshana Producers Of Not Clearing Her Dues
ಟಾಲಿವುಡ್51 mins ago

Payal Rajput: ನಿರ್ಮಾಪಕನ ವಿರುದ್ಧ ‘ಹೆಡ್‌ಬುಷ್’ ನಟಿಯ ಗಂಭೀರ ಆರೋಪ!

Salman Khan Ultimate Sex Symbol Says Malaika Arora
ಬಾಲಿವುಡ್55 mins ago

Salman Khan: ʻಅಲ್ಟಿಮೇಟ್ ಸೆಕ್ಸ್ ಸಿಂಬಲ್ʼ ನನ್ನ ಗಂಡ ಅಲ್ಲ, ಅದು ಸಲ್ಮಾನ್‌ ಖಾನ್‌ ಎಂದಳು ಖ್ಯಾತ ನಟಿ!

Ebrahim Raisi
ವಿದೇಶ57 mins ago

Ebrahim Raisi: ಹೆಲಿಕಾಪ್ಟರ್‌ ದುರಂತಕ್ಕೂ ಮುಂಚಿನ ಇಬ್ರಾಹಿಂ ರೈಸಿ ವಿಡಿಯೋ ವೈರಲ್‌

One year for the government Cm Siddaramaiah reveals many dreams and media interaction live
ರಾಜಕೀಯ1 hour ago

CM Siddaramaiah: ಸರ್ಕಾರಕ್ಕೆ ಒಂದು ವರ್ಷ; ಹಲವು ಕನಸು ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ! ಮಾಧ್ಯಮ ಸಂವಾದದ ಲೈವ್‌ ಇಲ್ಲಿದೆ

Drowned in water
ಬೆಂಗಳೂರು1 hour ago

Drowned In water : ಕೆರೆಯಲ್ಲಿ ಈಜಲು ಹೋದ ಬಾಲಕರು ನೀರುಪಾಲು

gold rate today sai pallavi
ಚಿನ್ನದ ದರ2 hours ago

Gold Rate Today: 22 ಕ್ಯಾರಟ್‌ ಚಿನ್ನದ ಬೆಲೆ 500 ರೂ. ಏರಿಕೆ; ಇಂದಿನ ಬಂಗಾರದ ಧಾರಣೆ ಹೀಗಿದೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ22 hours ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ22 hours ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ24 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ3 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ5 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

ಟ್ರೆಂಡಿಂಗ್‌