ಕೊಲಂಬಿಯಾದಲ್ಲಿ ಸಣ್ಣ ವಿಮಾನವೊಂದು ವಸತಿ ಪ್ರದೇಶದಲ್ಲಿ ಪತನಗೊಂಡು (Colombia Plane Crash), ಎಂಟು ಮಂದಿ ಮೃತಪಟ್ಟಿದ್ದಾರೆ. ಕೊಲಂಬಿಯಾದ ಎರಡನೇ ದೊಡ್ಡ ನಗರವಾದ ಮೆಡೆಲಿನ್ನ ಒಲಯಾ ಹೆರೆರಾ ವಿಮಾನ ನಿಲ್ದಾಣದಿಂದ ಟೇಕ್ಆಫ್ ಆಗಿದ್ದ ಈ ವಿಮಾನದಲ್ಲಿ ಇಬ್ಬರು ಪೈಲೆಟ್ಗಳು ಮತ್ತು ಆರು ಮಂದಿ ಪ್ರಯಾಣಿಕರು ಇದ್ದರು. ಏರ್ಪೋರ್ಟ್ನಿಂದ ಹೊರಟ ಕೆಲವೇ ಹೊತ್ತಲ್ಲಿ, ಸಮೀಪದ ವಸತಿ ಪ್ರದೇಶದಲ್ಲಿದ್ದ ಮನೆಯೊಂದಕ್ಕೆ ಡಿಕ್ಕಿ ಹೊಡೆದು ಪತನಗೊಂಡಿದೆ. ಆ ಮನೆಯ ಕೊನೇ ಅಂತಸ್ತು ಧ್ವಂಸಗೊಂಡಿದೆ. ಅದೃಷ್ಟಕ್ಕೆ ಮನೆಯಲ್ಲಿ ಇದ್ದವರಿಗಾಗಲೀ, ಪತನಗೊಂಡ ಸ್ಥಳದಲ್ಲಿ ಇದ್ದ ಇನ್ನಿತರರಿಗಾಗಲೀ ಯಾವುದೇ ತೊಂದರೆಯಾಗಿಲ್ಲ ಎಂದು ವರದಿಯಾಗಿದೆ. ಘಟನೆ ಬಗ್ಗೆ ಮೆಡೆಲಿನ್ ಮೇಯರ್ ಡೇನಿಯಲ್ ಕ್ವಿಂಟೆರೊ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.
ವಿಮಾನ ಪತನಗೊಂಡು ಬಿದ್ದಾಗ ಬೆಂಕಿ ಹೊತ್ತಿಕೊಂಡಿತ್ತು. ಕಪ್ಪನೆಯ, ದಟ್ಟವಾದ ಹೊಗೆ ಆವರಿಸಿತ್ತು. ಅಲ್ಲಿಗೆ ಕೂಡಲೇ ಅಗ್ನಿಶಾಮಕದಳದ ಸಿಬ್ಬಂದಿ, ಪೊಲೀಸರು, ರಕ್ಷಣಾ ಪಡೆಗಳು ಆಗಮಿಸಿ ಪರಿಸ್ಥಿತಿ ನಿಭಾಯಿಸಿದ್ದಾರೆ ಎಂದೂ ಡೇನಿಯಲ್ ತಿಳಿಸಿದ್ದಾರೆ. ಇನ್ನು ಈ ವಿಮಾನ ಎರಡು ಇಂಜಿನ್ ಪೈಪರ್ ಹೊಂದಿದ್ದು, ಟೇಕ್ ಆಫ್ ಆಗುತ್ತಿದ್ದಂತೆ ಸಿಗ್ನಲ್ ಇಂಜಿನ್ ವಿಫಲವಾಗಿದೆ. ಹೀಗಾಗಿ ವಿಮಾನವನ್ನು ಅಪಾಯವಾಗದಂತೆ ಲ್ಯಾಂಡ್ ಮಾಡಿಸಲು ಸಾಧ್ಯವಾಗಲಿಲ್ಲ. ಇದು ಪತನಕ್ಕೆ ಕಾರಣವಾಯಿತು ಎಂದೂ ಮೇಯರ್ ತಿಳಿಸಿದ್ದಾರೆ.
ಇದನ್ನೂ ಓದಿ: IAF Mig 21 Crash | ಮಿಗ್-21 ಯುದ್ಧ ವಿಮಾನ ಪತನ; ಇಬ್ಬರು ಪೈಲಟ್‌ಗಳ ದುರಂತ ಸಾವು