ಪ್ರತಿದಾಳಿಗೆ ಮಣಿದು ಒತ್ತೆಯಾಳುಗಳ ಬಿಡುಗಡೆಗೆ ಹಮಾಸ್‌ ಒಪ್ಪಿಗೆ? ಇಸ್ರೇಲ್‌ ಹೇಳುವುದಿಷ್ಟು... - Vistara News

ಪ್ರಮುಖ ಸುದ್ದಿ

ಪ್ರತಿದಾಳಿಗೆ ಮಣಿದು ಒತ್ತೆಯಾಳುಗಳ ಬಿಡುಗಡೆಗೆ ಹಮಾಸ್‌ ಒಪ್ಪಿಗೆ? ಇಸ್ರೇಲ್‌ ಹೇಳುವುದಿಷ್ಟು…

Israel Palestine War: ಇಸ್ರೇಲ್‌ ನಿರಂತರ ದಾಳಿಗೆ ನಿರುತ್ತರವಾಗಿರುವ ಹಮಾಸ್‌ ಉಗ್ರರು ಒಪ್ಪಂದಕ್ಕೆ ಬಂದಿದ್ದಾರೆ ಎಂಬ ವರದಿಗಳು ಕೇಳಿಬಂದಿವೆ. ಆದರೆ, ಇಸ್ರೇಲ್‌ ಹೇಳಿಕೆ ನೋಡಿದರೆ ಜಗ್ಗುವ ರೀತಿ ಕಾಣುತ್ತಿಲ್ಲ.

VISTARANEWS.COM


on

Benjamin Netanyhu
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಜೆರುಸಲೇಂ: ಇಸ್ರೇಲ್‌ ಹಾಗೂ ಹಮಾಸ್‌ ಉಗ್ರರ ನಡುವಿನ ಸಮರವು (Israel Palestine War) ದಿನೇದಿನೆ ಭೀಕರವಾಗುತ್ತಿದೆ. ಅದರಲ್ಲೂ, ಅಕ್ಟೋಬರ್‌ 7ರಂದು ಹಮಾಸ್‌ ಉಗ್ರರ ದಾಳಿ ಬಳಿಕ ಗಾಜಾ ನಗರದ (Gaza City) ಮೇಲೆ ಇಸ್ರೇಲ್‌ ಸಂಪೂರ್ಣ ಹಿಡಿತ ಸಾಧಿಸಿದೆ. ಬಾಂಬ್‌, ರಾಕೆಟ್‌ ದಾಳಿ ಮೂಲಕ ಗಾಜಾ ನಗರವನ್ನು ಮಸಣದಂತೆ ಮಾಡಿದೆ. ಹಮಾಸ್‌ ಉಗ್ರರನ್ನು ಹುಡುಕಿ ಹುಡುಕಿ ಕೊಲ್ಲುತ್ತಿದೆ. ಹೀಗೆ ಇಸ್ರೇಲ್‌ ನಿರಂತರ ದಾಳಿಗೆ ಕಂಗೆಟ್ಟಿರುವ ಹಮಾಸ್‌ ಉಗ್ರರು ಇಸ್ರೇಲ್‌ ಜತೆ ಒಪ್ಪಂದ ಮಾಡಿಕೊಳ್ಳಲು ಮುಂದಾಗಿದೆ ಎಂದು ತಿಳಿದುಬಂದಿದೆ. ಆದರೆ, ಇಸ್ರೇಲ್‌ ಇದನ್ನು ನಿರಾಕರಿಸಿದೆ.

ವರದಿ ಹೇಳುವುದೇನು?

ಇಸ್ರೇಲ್‌ ಹಾಗೂ ಹಮಾಸ್‌ ಉಗ್ರರ ನಡುವೆ ಸಂಧಾನ ಏರ್ಪಟ್ಟಿದೆ. ಇನ್ನೇನು ಒಪ್ಪಂದಕ್ಕೆ ಸಹಿ ಹಾಕುವುದಷ್ಟೇ ಬಾಕಿ ಎಂದು ವಾಷಿಂಗ್ಟನ್‌ ಪೋಸ್ಟ್‌ ವರದಿ ಮಾಡಿದೆ. “ಕತಾರ್‌ ಮಧ್ಯಸ್ಥಿಕೆಯಲ್ಲಿ ಇಸ್ರೇಲ್‌ ಹಾಗೂ ಹಮಾಸ್‌ ಉಗ್ರರ ನಡುವೆ ಸಂಧಾನ ಏರ್ಪಟ್ಟಿದೆ. ಹಮಾಸ್‌ ಉಗ್ರರು 50 ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದರೆ, ಇಸ್ರೇಲ್‌ ಗಾಜಾ ನಗರದಲ್ಲಿ ಐದು ದಿನ ಯುದ್ಧ ನಿಲ್ಲಿಸುವುದು ಒಪ್ಪಂದದ ಪ್ರಮುಖ ಅಂಶವಾಗಿದೆ. ಇನ್ನೇನು ಒಪ್ಪಂದಕ್ಕೆ ಸಹಿ ಬಿದ್ದರೆ ಕದನವಿರಾಮ ಘೋಷಣೆಯಾದಂತೆಯೇ” ಎಂಬುದಾಗಿ ವರದಿ ಮಾಡಲಾಗಿತ್ತು.

ವರದಿ ನಿರಾಕರಿಸಿದ ಇಸ್ರೇಲ್

ದಿ ವಾಷಿಂಗ್ಟನ್‌ ಪೋಸ್ಟ್‌ ವರದಿಯನ್ನು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ನಿರಾಕರಿಸಿದ್ದಾರೆ. “ಹಮಾಸ್‌ ಉಗ್ರರ ಜತೆಗೆ ಯಾವುದೇ ಒಪ್ಪಂದ ಮಾಡಿಕೊಂಡಿಲ್ಲ ಹಾಗೂ ಒಪ್ಪಂದದ ಪ್ರಸ್ತಾಪವೇ ನಮ್ಮ ಮುಂದಿಲ್ಲ. ಹಮಾಸ್‌ ಉಗ್ರರು ಮೊದಲು ಇಸ್ರೇಲ್‌ನ ಎಲ್ಲ ಒತ್ತೆಯಾಳುಗಳನ್ನು ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ನಾವೇ ನಮ್ಮ ನಾಗರಿಕರನ್ನು ಬಿಡುಗಡೆ ಮಾಡಿಕೊಂಡು ಬರುತ್ತೇವೆ. ಒತ್ತೆಯಾಳುಗಳನ್ನು ಬಿಡದ ಹೊರತು ಒಪ್ಪಂದದ ಮಾತೇ ಇಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ. ಒಪ್ಪಂದ ನಡೆದಿಲ್ಲ ಎಂದು ಅಮೆರಿಕ ಕೂಡ ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ಇಸ್ರೇಲ್‌ ಪ್ರಧಾನಿಯನ್ನು ಗುಂಡಿಟ್ಟು ಕೊಲ್ಲಬೇಕು ಎಂದ ಕಾಂಗ್ರೆಸ್‌ ಸಂಸದ; ಸಿಟ್ಟಿಗೆ ಕಾರಣ ಇಲ್ಲಿದೆ

12 ಸಾವಿರಕ್ಕೂ ಅಧಿಕ ಜನರ ಸಾವು

ಇಸ್ರೇಲ್‌ ಹಾಗೂ ಹಮಾಸ್‌ ಉಗ್ರರ ನಡುವಿನ ಸಮರದಲ್ಲಿ ಮೃತಪಟ್ಟವರ ಸಂಖ್ಯೆ 12 ಸಾವಿರ ದಾಟಿದೆ. ಅದರಲ್ಲೂ, ಹಮಾಸ್‌ ಉಗ್ರರ ತಾಣವಾದ ಗಾಜಾ ನಗರದ ಮೇಲೆ ಇಸ್ರೇಲ್‌ ನಿರಂತರವಾಗಿ ದಾಳಿ ನಡೆಸುತ್ತಿದ್ದು, ನಗರದಲ್ಲಿ ಇದುವರೆಗೆ 11 ಸಾವಿರಕ್ಕೂ ಜನ ಮೃತಪಟ್ಟಿದ್ದಾರೆ ಎಂದು ಗಾಜಾ ಆರೋಗ್ಯ ಸಚಿವಾಲಯವೇ ಮಾಹಿತಿ ನೀಡಿದೆ. ಇನ್ನೂ 3 ಸಾವಿರಕ್ಕೂ ಅಧಿಕ ಜನ ಕಟ್ಟಡದ ಅವಶೇಷಗಳಲ್ಲಿ ಸಿಲುಕಿದ್ದು, ಅವರ ರಕ್ಷಣೆಗೆ ಕಾರ್ಯಾಚರಣೆ ನಡೆಯುತ್ತಿದೆ ಎಂಬುದಾಗಿ ಮಾಹಿತಿ ನೀಡಿದೆ. ಇನ್ನು ಹಮಾಸ್‌ ಉಗ್ರರ ದಾಳಿಗೆ ಇಸ್ರೇಲ್‌ನಲ್ಲಿ 1,400 ಜನ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

‌BJP Karnataka: ಬಿಜೆಪಿ ಸೇರಿದ ಮಾಜಿ ಸಚಿವ ಮನೋಹರ್‌ ತಹಸೀಲ್ದಾರ್; ಹಾವೇರಿ ಮತ್ತಷ್ಟು ಸ್ಟ್ರಾಂಗ್?

‌BJP Karnataka: ಮನೋಹರ್‌ ತಹಸೀಲ್ದಾರ್‌ ಅವರು ರೈತರ ಪರವಾಗಿದ್ದರು. ಸಾಕಷ್ಟು ಜನಪ್ರಿಯತೆಯನ್ನು ಹೊಂದಿದ್ದರು. ಈ ಕಾರಣದಿಂದ ಅವರದ್ದೇ ಆದ ವೋಟ್‌ ಬ್ಯಾಂಕ್‌ ಇದೆ. ಬರುವ ಲೋಕಸಭಾ ಚುನಾವಣೆಯಲ್ಲಿ ಅವರ ಮತಗಳನ್ನು ಬಿಜೆಪಿಗೆ ತರಲು ಪ್ಲ್ಯಾನ್‌ ಮಾಡಿಕೊಳ್ಳಲಾಗಿದೆ.

VISTARANEWS.COM


on

Bjp Karnataka Former minister Manohar Tahsildar join BJP Is Haveri stronger
Koo

ಬೆಂಗಳೂರು: ಮಾಜಿ ಸಚಿವ, ಹಿರಿಯ ರಾಜಕಾರಣಿ ಮನೋಹರ್ ತಹಸೀಲ್ದಾರ್ (Manohar Tahsildars) ಅವರು ಶುಕ್ರವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಸಮ್ಮುಖದಲ್ಲಿ ಬಿಜೆಪಿ (BJP Karnataka) ಸೇರ್ಪಡೆಗೊಂಡರು. 50 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದಲ್ಲಿದ್ದ ಅವರು ಕಳೆದ ಚುನಾವಣೆಯಲ್ಲಿ ಟಿಕೆಟ್‌ ಕೈತಪ್ಪಿದ್ದರಿಂದ ಜೆಡಿಎಸ್‌ ಸೇರ್ಪಡೆಯಾಗಿದ್ದರು. ಈಗ ಅಲ್ಲಿಂದ ಬಿಜೆಪಿ ಸೇರಿದ್ದಾರೆ. ಈಗಾಗಲೇ ಲೋಕಸಭಾ ಚುನಾವಣೆಯ ತಯಾರಿಯಲ್ಲಿರುವ ಬಿಜೆಪಿ ಈ ಮೂಲಕ ಹಾವೇರಿ ಕ್ಷೇತ್ರವನ್ನು ಮತ್ತಷ್ಟು ಗಟ್ಟಿಗೊಳಿಸಲು ಮುಂದಾಗಿದೆ.

ಮಾಜಿ ಸಚಿವ ಮನೋಹರ್ ತಹಸೀಲ್ದಾರ್ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರ ಅವರು ಪಕ್ಷದ ಧ್ವಜ ನೀಡಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರತಿಪಕ್ಷದ ನಾಯಕ ಆರ್. ಅಶೋಕ್ ಹಾಜರಿದ್ದರು.

ಜೆಡಿಎಸ್‌ನಿಂದ ಬಿಜೆಪಿಯತ್ತ ಮನೋಹರ್‌ ತಹಶೀಲ್ದಾರ್‌

50 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದಲ್ಲಿದ್ದ ಮಾಜಿ ಸಚಿವ ಮನೋಹರ ತಹಶೀಲ್ದಾರ್‌ ಅವರಿಗೆ ಕಳೆದ ಚುನಾವಣೆಯಲ್ಲಿ ಹಾನಗಲ್ ಟಿಕೆಟ್ ನೀಡಲು ಕಾಂಗ್ರೆಸ್‌ ನಿರಾಕರಿಸಿತ್ತು. ಈ ಹಿನ್ನೆಲೆಯಲ್ಲಿ ಸಿಡಿದೆದ್ದಿದ್ದ ಮನೋಹರ್‌ ಅಲ್ಲಿಂದ ಜೆಡಿಎಸ್‌ ಸೇರ್ಪಡೆಯಾಗಿ ಸ್ಪರ್ಧೆ ಮಾಡಿದ್ದರು. ಅಲ್ಲದೆ, ಕಾಂಗ್ರೆಸ್‌ ತಮಗೆ ಅನ್ಯಾಯ ಮಾಡಿದೆ ಎಂದು ಬಹಿರಂಗ ಸಭೆಯಲ್ಲಿ ಕಣ್ಣೀರು ಹಾಕಿದ್ದರು. ಬಳಿಕ ನಡೆದ ಚುನಾವಣೆಯಲ್ಲಿ ಅವರು ಸೋಲು ಕಂಡಿದ್ದರು. ಆದರೆ, ಈಗ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ವರ್ಚಸ್ಸುಳ್ಳ ನಾಯಕರನ್ನು ಸೆಳೆಯಲು ಬಿಜೆಪಿ ಮುಂದಾಗಿದೆ. ಈ ಕಾರಣದಿಂದ ಮನೋಹರ್‌ ತಹಸೀಲ್ದಾರ್‌ ಸೇರ್ಪಡೆ ಹಾವೇರಿ ಬಿಜೆಪಿ ಪಾಲಿಗೆ ಮುಖ್ಯವಾಗಿದೆ.

ಮನೋಹರ್‌ ತಹಸೀಲ್ದಾರ್‌ ಅವರು ರೈತರ ಪರ ಹಾಗೂ ನಾಗರಿಕ ಸ್ನೇಹಿ ನಾಯಕರಾಗಿದ್ದಲ್ಲದೆ, ಸಾಕಷ್ಟು ಜನಪ್ರಿಯತೆಯನ್ನು ಹೊಂದಿದ್ದರು. ಈ ಕಾರಣದಿಂದ ಅವರದ್ದೇ ಆದ ವೋಟ್‌ ಬ್ಯಾಂಕ್‌ ಇದೆ. ಅದೀಗ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ತರಲು ಪ್ಲ್ಯಾನ್‌ ಮಾಡಿಕೊಳ್ಳಲಾಗಿದೆ.

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಮಾತುಕತೆಯ ಫಲವಾಗಿ ಮನೋಹರ್‌ ತಹಸೀಲ್ದಾರ್‌ ಅವರು ಜೆಡಿಎಸ್‌ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ ಎಂದು ಹೇಳಲಾಗಿದೆ.

ಮನೋಹರ್‌ಗೆ ಪಕ್ಷದಲ್ಲಿ ಗೌರವ ಸಿಗಲಿದೆ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಾತನಾಡಿ, ಹಾವೇರಿ ಜಿಲ್ಲೆಯ ನಾಯಕ ಮನೋಹರ್ ತಹಸೀಲ್ದಾರ್ ಪಕ್ಷಕ್ಕೆ ಆಗಮಿಸಿದ್ದಾರೆ. ಅವರಿಗೆ ಪಕ್ಷದಿಂದ ಏನೆಲ್ಲ ಗೌರವ ಕೊಡಬೇಕೋ ಅದನ್ನು ಖಂಡಿತವಾಗಿಯೂ ಕೊಡಲಾಗುವುದು ಎಂದು ಹೇಳಿದರು.

ಹಾವೇರಿ ಜಿಲ್ಲೆಯ ಹಾನಗಲ್ ವಿಧಾನಸಭಾ ಕ್ಷೇತ್ರದಿಂದ ನಿರಂತರವಾಗಿ ಶಾಸಕರಾಗಿ ಆಯ್ಕೆಯಾಗಿದ್ದ ಮನೋಹರ್‌ ತಹಸೀಲ್ದಾರ್‌ ಅವರು ಸಚಿವರಾಗಿಯೂ ಕೆಲಸ ಮಾಡಿದ್ದಾರೆ. ಅವರನ್ನ ಪಕ್ಷಕ್ಕೆ ಹೃತ್ಪೂರ್ವಕವಾಗಿ ಸ್ವಾಗತ ಮಾಡುತ್ತೇನೆ. ಹಿಂದುಳಿದ ವರ್ಗದ ಧುರೀಣರು ಸೇರಿರುವುದರಿಂದ ನಮ್ಮ ಪಕ್ಷಕ್ಕೆ ಬಲ ಬಂದಿದೆ. ಇಡೀ ದೇಶದಲ್ಲಿ ಇಂದು ಕೇಂದ್ರದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಬೇಕು. ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಬೇಕು ಎಂಬ ಇಚ್ಛೆ ಇದೆ. ಮೋದಿ ಅವರು ಕೊಟ್ಟಿರುವ ಯೋಜನೆಗಳು, ಹಿಂದುಳಿದ, ದಲಿತರ ಪರವಾಗಿ ಕೊಟ್ಟ ಯೋಜನೆಗಳು ಅನೇಕ ಇವೆ. ಈ ಬಾರಿ ಅವರನ್ನು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸಲು ಪಣ ತೊಡೋಣ ಎಂದು ಕರೆ ನೀಡಿದರು.

ಬಳಿಕ ಮಾತನಾಡಿದ ಮನೋಹರ್ ತಹಸೀಲ್ದಾರ್, ಇಂದು ಬಹಳ ಸಂತೋಷದಿಂದ ಬಿಜೆಪಿ ಪಕ್ಷ ಸೇರ್ಪಡೆ ಆಗುತ್ತಿದ್ದೇನೆ. ಇದಕ್ಕೆ ಮುಖ್ಯ ಕಾರಣ ಬಸವರಾಜ ಬೊಮ್ಮಾಯಿ ಆಗಿದ್ದಾರೆ. ಅವರು ನನಗಾದ ಅನ್ಯಾಯ ಕಂಡು, ನೀವು ಅಲ್ಲಿರೋದು ಸರಿಯಲ್ಲ. ನಿಷ್ಠೆಯಿಂದ 45 ವರ್ಷ ಕಾಂಗ್ರೆಸ್‌ನಲ್ಲಿದ್ದರೂ ನಿಮ್ಮನ್ನು ಊಟ ಮಾಡಿ ಎಲೆಯನ್ನು ಬಿಸಾಡಿದ ಹಾಗೆ ಮಾಡಿದ್ದಾರೆ. ಹೀಗಾಗಿ ಬಿಜೆಪಿಗೆ ಬನ್ನಿ ಎಂದು ಆಹ್ವಾನ ನೀಡಿದರು ಎಂದು ತಿಳಿಸಿದರು.

ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ

ಕಾಂಗ್ರೆಸ್‌ನಲ್ಲಿ ನನ್ನ ಸೇವೆಯನ್ನು ಲೆಕ್ಕಕ್ಕೆ ಪರಿಗಣಿಸದೆ, ನಾನು ಸಿಟ್ಟಿಂಗ್ ಎಂಎಲ್‌ಎ ಇದ್ದರೂ ನನಗೆ ಟಿಕೆಟ್ ಕೊಡಲಿಲ್ಲ. ನಮ್ಮ‌ ತಾಲೂಕಿನವರಿಗೆ ಕೊಟ್ಟಿದ್ದರೂ ಬೇಸರ ಇರಲಿಲ್ಲ. ಆದರೆ, ಹೊರಗಿನಿಂದ ತಂದು ನಿಲ್ಲಿಸಿದರು. 2018ರಲ್ಲಿ ಶ್ರೀನಿವಾಸ್ ಮಾನೆ ಪರವಾಗಿ ಕೆಲಸ‌ ಮಾಡಿದೆ. ಅವರು ಸೋತರು. ನಾವೇ ಸೋಲಿಸಿದೆವು ಅಂತ ನಮ್ಮ ಮೇಲೆ ಗೂಬೆ ಕೂರಿಸಿದರು. ನನ್ನ ಮಗ ಜಿಲ್ಲಾ ಪಂಚಾಯಿತಿ ಸದಸ್ಯ ಇದ್ದ. ಅವರನ್ನು ಜಿಲ್ಲಾ ಪಂಚಾಯಿತಿ ಅಧ್ಯಕ್ಷರನ್ನಾಗಿ ಮಾಡಿ ಎಂಬ ಚರ್ಚೆ ಕೇಳಿಬಂತು. ಒಂದೇ ಮನೆತನಕ್ಕೆ ಎಲ್ಲ ಕೊಟ್ಟಂತೆ ಆಗಲಿದೆ, ಬೇಡ ಅಂತ ಹೇಳಿದರು. ಪಕ್ಷದ ವರಿಷ್ಠರು ನಿರ್ದೇಶನ ಕೊಟ್ಟರೂ ಬೇರೆಯವರನ್ನ ಅಭ್ಯರ್ಥಿ ಮಾಡಿದರು ಎಂದು ಕಾಂಗ್ರೆಸ್‌ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ‌

ಇದನ್ನೂ ಓದಿ: Blast in Bengaluru: ರಾಮೇಶ್ವರಂ ಕೆಫೆ – ಮಂಗಳೂರು ಬ್ಲಾಸ್ಟ್‌ಗೆ ಸಾಮ್ಯತೆ; ಇಲ್ಲ ಅಂದ್ರು ಸಿಎಂ, ಇದೆ ಅಂದ್ರು ಡಿಸಿಎಂ!

ನನಗೆ ಗೌರವ ಕೊಟ್ಟರೆ ಸಾಕು

ಬಸವರಾಜ ಬೊಮ್ಮಾಯಿ ಅವರು ಬಾ ಅಣ್ಣ ಅಂತ ಗೌರವ ಕೊಡ್ತಾರೆ. ಹಾಗಾಗಿ ಇರುವಷ್ಟು ಕಾಲ ಅವರ ಜತೆಯಲ್ಲಿ ಇರೋಣ ಅಂತ ಬಂದಿದ್ದೇನೆ. ನಾನು ಎಂಎಲ್‌ಎ, ಎಂಪಿ ಯಾವುದೇ ಟಿಕೆಟ್‌ಗೆ ಬೇಡಿಕೆ ಇಟ್ಟಿಲ್ಲ. ಪಕ್ಷದಲ್ಲಿ ಗೌರವ ಕೊಡಿ ಅಂತ ಅಷ್ಟೇ ಕೇಳಿದ್ದೇನೆ. ನಮ್ಮ ಪಕ್ಷಕ್ಕೆ ಬಂದರೆ ನಮ್ಮದೆಲ್ಲ ಕಿತ್ತುಕೊಳ್ತಾರೆ ಅನ್ನೋ ಭಾವನೆ ಬರೋದು ಬೇಡ ಎಂದು ಅವರನ್ನು ಕೇಳಿ ಅಂದೆ. ಎಲ್ಲರೂ ಒಪ್ಪಿದ್ದಕ್ಕೆ ಬಂದಿದ್ದೇನೆ. ಉದಾಸಿ ಅವರು ನನಗಿಂತ ಹಿರಿಯರು. ನಮ್ಮ‌ ನಡುವೆ ಅಭಿವೃದ್ಧಿಗೆ ಪೈಪೋಟಿ ಇತ್ತೇ ವಿನಃ ವೈಯಕ್ತಿಕ ಪೈಪೋಟಿ ಇರಲಿಲ್ಲ ಎಂದು ಮನೋಹರ್‌ ತಹಸೀಲ್ದಾರ್ ಹೇಳಿದರು.

Continue Reading

ರಾಜಕೀಯ

Blast in Bengaluru: ಸರಣಿ ಸ್ಫೋಟದ ಪ್ರಯೋಗಾರ್ಥ ರಾಮೇಶ್ವರಂ ಕೆಫೆ ಬ್ಲಾಸ್ಟ್? ಸರ್ಕಾರದ ವಿರುದ್ಧ ಗುಡುಗಿದ ಸಿ.ಟಿ.ರವಿ

Blast in Bengaluru: ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಆಗಿತ್ತು. ಈಗ ಬೆಂಗಳೂರಿನಲ್ಲಿ ಎಲ್‍ಇಡಿ ಬಾಂಬ್ ಸ್ಫೋಟ ಆಗಿದೆ. ಕಳೆದ 11 ವರ್ಷಗಳಲ್ಲಿ ಬೆಂಗಳೂರಿನಲ್ಲಿ ಸಣ್ಣ- ದೊಡ್ಡದು ಸೇರಿ ಆರು ಸ್ಫೋಟಗಳಾಗಿವೆ. ಇದು ಸರಣಿ ಸ್ಫೋಟದ ಪ್ರಯೋಗಾರ್ಥ ತಯಾರಿಯೇ ಎಂಬ ಅನುಮಾನ ಮೂಡುವಂತಿದೆ ಎಂದು ಸಿ.ಟಿ. ರವಿ ಕಳವಳ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Blast in Bengaluru Experimental preparation for serial blasts says CT Ravi
Koo

ಬೆಂಗಳೂರು: ವೈಟ್‌ಫೀಲ್ಡ್‌ನ (Whitefield) ರಾಮೇಶ್ವರಂ ಕೆಫೆಯಲ್ಲಿ (Rameshwaram Cafe) ನಡೆದ ಬಾಂಬ್‌ ಸ್ಫೋಟ ಪ್ರಕರಣ (Blast in Bengaluru) ಸಂಬಂಧ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಕೆಂಡಕಾರಿದ್ದಾರೆ. ಮತಾಂಧತೆಯ ಅತಿರೇಕದ ಪರಿಣಾಮವಾಗಿ ಪಾಕಿಸ್ತಾನದ ಪ್ರೀತಿಯನ್ನು ಬೆಳಗಾವಿ, ವಿಧಾನಸೌಧದಲ್ಲಿ ವ್ಯಕ್ತಪಡಿಸಲಾಗಿದೆ. ದು ಸರಣಿ ಸ್ಫೋಟದ ಪ್ರಯೋಗಾರ್ಥ ತಯಾರಿ ಎಂದು ಅನುಮಾನ ಮೂಡುವಂತಿದೆ ಎಂದು ಹೇಳಿದ್ದಾರೆ.

ನಗರದಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿ.ಟಿ. ರವಿ, ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಆಗಿತ್ತು. ಈಗ ಬೆಂಗಳೂರಿನಲ್ಲಿ ಎಲ್‍ಇಡಿ ಬಾಂಬ್ ಸ್ಫೋಟ ಆಗಿದೆ. ಕಳೆದ 11 ವರ್ಷಗಳಲ್ಲಿ ಬೆಂಗಳೂರಿನಲ್ಲಿ ಸಣ್ಣ- ದೊಡ್ಡದು ಸೇರಿ ಆರು ಸ್ಫೋಟಗಳಾಗಿವೆ. ಇದು ಸರಣಿ ಸ್ಫೋಟದ ಪ್ರಯೋಗಾರ್ಥ ತಯಾರಿಯೇ ಎಂಬ ಅನುಮಾನ ಮೂಡುವಂತಿದೆ ಎಂದು ಹೇಳಿದರು.

ಕರ್ನಾಟಕ ಸರ್ಕಾರವು ಬಾಂಬ್ ಸ್ಫೋಟದ ಕುರಿತ ಸಮಗ್ರ ತನಿಖೆಯನ್ನು ಎನ್.ಐ.ಎ.ಗೆ ಒಪ್ಪಿಸಬೇಕು.‌ ಬ್ರ್ಯಾಂಡ್ ಬೆಂಗಳೂರಿಗೆ ಬಾಂಬ್ ಭೀತಿ ಎದುರಾಗಿದೆ. ಶುಕ್ರವಾರ (ಮಾ. 1) ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟವು ಸರಣಿ ಸ್ಫೋಟದ ಪರೀಕ್ಷಾರ್ಥ ಸ್ಫೋಟ ಅಥವಾ ರಿಹರ್ಸಲ್ ಇರಬಹುದು. ಈ ಮೂಲಕ ಮುನ್ಸೂಚನೆ ಕೊಟ್ಟಿರಬಹುದು ಎಂದು ಶಂಕೆ ವ್ಯಕ್ತಪಡಿಸಿದರು.

ಕರ್ನಾಟಕವನ್ನು ಭಯೋತ್ಪಾದಕರು ಸ್ಲೀಪರ್ ಸೆಲ್ ಆಗಿ ಮಾಡಿಕೊಂಡದ್ದು ಹೊಸತಲ್ಲ. ತರಬೇತಿ ಕೇಂದ್ರವಾಗಿಯೂ ಕರ್ನಾಟಕವನ್ನು ಬಳಸಿಕೊಂಡಿದ್ದಾರೆ. ಕೊಪ್ಪದಲ್ಲಿ ಹಿಂದೆ ಬಂದೂಕು, ಬಾಂಬ್ ತಯಾರಿಸುವ ತರಬೇತಿಯನ್ನು ಕೊಡಲಾಗುತ್ತಿತ್ತು. ತೀರ್ಥಹಳ್ಳಿಯಲ್ಲಿ ಕುಕ್ಕರ್ ಬಾಂಬ್ ತಯಾರಿಸಲಾಗುತ್ತಿತ್ತು. ಕೊಡಗಿನಲ್ಲೂ ಭಯೋತ್ಪಾದಕರಿಗೆ ತರಬೇತಿ ಕೊಡಲಾಗುತ್ತಿತ್ತು. ಈ ಎಲ್ಲ ಮಾಹಿತಿ ಸರ್ಕಾರದ ಬಳಿ ಇದೆ ಎಂದು ‌ಸಿ.ಟಿ. ರವಿ ವಿವರಿಸಿದರು.

ದೇಶದ ಉತ್ತರ ಭಾಗದಲ್ಲಿ ಬಾಂಬ್ ಸ್ಫೋಟದ ಸದ್ದು ಕ್ಷೀಣವಾಗಿದೆ. ಬಹುತೇಕ ನಿಂತುಹೋಗಿದೆ. ಭಾರತದ ದಕ್ಷಿಣ ಭಾಗದಲ್ಲಿ ಕೇರಳ, ತೆಲಂಗಾಣ ಮತ್ತು ಕರ್ನಾಟಕದಲ್ಲಿ ಬಾಂಬ್ ಸದ್ದು ಕೇಳಿಸುತ್ತಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಬೇಕಿದೆ ಎಂದು ಸಿ.ಟಿ. ರವಿ ಆಗ್ರಹಿಸಿದರು.

ಮತಾಂಧತೆಯ ಅತಿರೇಕದಿಂದ ಭಯೋತ್ಪಾದನೆ ಆರಂಭ

ಭಯೋತ್ಪಾದನೆ ಆರಂಭವಾಗುವುದೇ ಮತಾಂಧತೆಯ ಅತಿರೇಕದಿಂದ ಎಂದು ಹೇಳಿದ ಸಿ.ಟಿ.ರವಿ, ಮತಾಂಧತೆಯ ಅತಿರೇಕವನ್ನು ಕೋವಿಡ್ ಸಂದರ್ಭದಲ್ಲಿ ಹಲವೆಡೆ ಗಮನಿಸಿದ್ದೇವೆ. ಪಾದರಾಯನಪುರದಲ್ಲಿ ಕೋವಿಡ್ ವಾರಿಯರ್ಸ್‍ಗಳ ಮೇಲೆ ದಾಳಿ ನಡೆದಿತ್ತು. ಡಿ.ಜೆ.ಹಳ್ಳಿ- ಕೆಜೆ.ಹಳ್ಳಿ ಗಲಭೆ ಸಂದರ್ಭದಲ್ಲಿ ದಲಿತ ಶಾಸಕ ಅಖಂಡ ಶ್ರೀನಿವಾಸಮೂರ್ತಿಯವರ ಮನೆ ಸುಟ್ಟಿದ್ದರು. 200ಕ್ಕೂ ಹೆಚ್ಚು ಮನೆಗಳ ವಾಹನಗಳನ್ನು ಸುಟ್ಟದ್ದಲ್ಲದೆ, ಪೊಲೀಸ್ ಠಾಣೆಗೆ ಬೆಂಕಿ ಹಾಕಿದ್ದರು ಎಂದು ಆಕ್ರೋಶವನ್ನು ಹೊರಹಾಕಿದರು.

ಹಿಂದೆ ಕೊಯಮತ್ತೂರಿನಲ್ಲಿ ಸರಣಿ ಸ್ಫೋಟ ನಡೆದಿತ್ತು. ಈಗ ಆ ಥರ ಸರಣಿ ಸ್ಫೋಟದ ತಯಾರಿ ಮಾಡುತ್ತಿದ್ದಾರೆ. ಮತಾಂಧ ಶಕ್ತಿಗಳು ಮತ್ತು ಭಯೋತ್ಪಾದಕರು ಕೈಜೋಡಿಸಿದ್ದಾರೆ ಎಂಬ ಸಂಶಯ ಇದೆ. ಈ ಸರ್ಕಾರ ಬಂದ ಬಳಿಕ ಎನ್‍ಐಎ ಬಂಧಿತ ಶಂಕಿತ ಭಯೋತ್ಪಾದಕರ ಸಂಖ್ಯೆ 21 ಎಂದು ಸಿ.ಟಿ. ರವಿ ತಿಳಿಸಿದರು.‌

ಜುಲೈನಲ್ಲಿ 5 ಜನರು, ಡಿಸೆಂಬರ್‌ನಲ್ಲಿ 8, ಜನವರಿಯಲ್ಲಿ ದಾಳಿ ಸಂಚಿನಲ್ಲಿ 8 ಜನ ಶಂಕಿತ ಭಯೋತ್ಪಾದಕರನ್ನು ಬಂಧಿಸಲಾಗಿತ್ತು. ಹಿಂದೆ ಭಟ್ಕಳವನ್ನು ಜೈನರ ಕಾಶಿ ಎಂದು ಕರೆಯಲಾಗುತ್ತಿತ್ತು. ಈಗ ಅದು ಭಯೋತ್ಪಾದಕರ ನೆಲೆಯಾಗಿದೆ. ಭಯೋತ್ಪಾದಕರ ಜತೆ ಭಟ್ಕಳದ ಹೆಸರು ತಳಕು ಹಾಕಿಕೊಂಡಿದೆ (ಉದಾ: ಯಾಸೀನ್ ಭಟ್ಕಳ್) ಎಂದು ಸಿ.ಟಿ. ರವಿ ಹೇಳಿದರು.

ಇದನ್ನೂ ಓದಿ: Blast in Bengaluru: ರಾಮೇಶ್ವರಂ ಕೆಫೆ – ಮಂಗಳೂರು ಬ್ಲಾಸ್ಟ್‌ಗೆ ಸಾಮ್ಯತೆ; ಇಲ್ಲ ಅಂದ್ರು ಸಿಎಂ, ಇದೆ ಅಂದ್ರು ಡಿಸಿಎಂ!

ಇದೆಲ್ಲವನ್ನೂ ಗಮನಿಸಿದಾಗ ಭಾರತವನ್ನು ಆಕ್ರಮಿಸಿ ಇಸ್ಲಾಮಿ ರಾಷ್ಟ್ರವಾಗಿ ಮಾಡುವ ಅರಬ್ ಯೋಜನೆಯ ಪ್ರಕಾರ ನಡೆಯುವಂತಿದೆ. ಆ ಯೋಜನೆಯಂತೆ ಗಾಂಧಾರ ಕಳಕೊಂಡಿದ್ದು, ಅದು ಅಪಘಾನಿಸ್ತಾನವಾಗಿದೆ. ಸಿಂಧ್ ಕಳಕೊಂಡಿದ್ದು, ಪಾಕಿಸ್ತಾನವಾಗಿದೆ. ಬಂಗಾಲ ತುಂಡರಿಸಿ ಬಾಂಗ್ಲಾದೇಶ ಮಾಡಲಾಗಿದೆ. ಕಾಶ್ಮೀರವನ್ನು ಭಾರತದಿಂದ ತುಂಡರಿಸುವ ಸಂಚು ಕೂಡ ಆ ಯೋಜನೆಯ ಮುಂದುವರಿದ ಭಾಗವಾಗಿತ್ತು. ಸಿಮಿ ಕಚೇರಿ ಮೇಲೆ ದಾಳಿ ನಡೆದಾಗ ನಕ್ಷೆ ಲಭಿಸಿತ್ತು. ಮೊಘಲರ ಆಳ್ವಿಕೆ ಇದ್ದ ಪ್ರದೇಶಗಳನ್ನು ಇಸ್ಲಾಮಿಕ್ ರಾಷ್ಟ್ರ ಮಾಡಬೇಕೆಂದು ಯೋಜನೆ ರೂಪಿಸಿ ಹಲವು ರೀತಿಯ ತಯಾರಿ ಮಾಡುತ್ತಿದ್ದ ಮಾಹಿತಿ ಅದರಲ್ಲಿತ್ತು. ಇದು ಅದರ ಮುಂದುವರಿದ ಭಾಗ ಇರಬಹುದು. ಇದರ ಸಮಗ್ರ ತನಿಖೆ ಮಾಡಲು ಇದನ್ನು ಎನ್‍ಐಎಗೆ ಒಪ್ಪಿಸಬೇಕು ಎಂದು ಸಿ.ಟಿ. ರವಿ ಆಗ್ರಹಿಸಿದರು.

Continue Reading

ಬೆಂಗಳೂರು

Water Crisis: ಬೆಂಗಳೂರಿನ ಕೊಳವೆಬಾವಿ ನೀರು ಪೂರೈಕೆ ಟ್ಯಾಂಕರ್‌ಗಳಿನ್ನು ಸರ್ಕಾರದ ಸುಪರ್ದಿಗೆ: ಡಿ.ಕೆ. ಶಿವಕುಮಾರ್

Water Crisis: ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಎದುರಾಗಿದೆ. ಪ್ರತಿನಿತ್ಯ ಬಿಡಬ್ಲ್ಯೂಎಸ್ಎಸ್‌ಬಿ ಹಾಗೂ ಪಾಲಿಕೆ ಅಧಿಕಾರಿಗಳು ಸಭೆ ಮಾಡುತ್ತಿದ್ದಾರೆ. ಕುಡಿಯುವ ನೀರಿನ ದಂಧೆ ತಡೆಯಲು ಕೊಳವೆಬಾವಿ ಹಾಗೂ ಅವುಗಳಿಂದ ನೀರು ಪೂರೈಕೆ ಮಾಡುವ ಟ್ಯಾಂಕರ್‌ಗಳು ಮಾ. 7ರ ಒಳಗಾಗಿ ನೋಂದಣಿ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

VISTARANEWS.COM


on

Water crisis Bengaluru borewell water supply tankers to be handed over to govt DK Shivakumar
Koo

ಬೆಂಗಳೂರು: ಬೆಂಗಳೂರಿನ ನೀರಿನ ಅಭಾವ (Water Crisis) ನೀಗಿಸಲು ಕೊಳವೆಬಾವಿ ನೀರು ಪೂರೈಸುವ (Borewell water supply) ಟ್ಯಾಂಕರ್‌ಗಳನ್ನು ಸರ್ಕಾರದ ಸುಪರ್ದಿಗೆ ತೆಗೆದುಕೊಳ್ಳಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಮಾಹಿತಿ ನೀಡಿದರು.

ಈ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್, ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಎದುರಾಗಿದೆ. ಪ್ರತಿನಿತ್ಯ ಬಿಡಬ್ಲ್ಯೂಎಸ್ಎಸ್‌ಬಿ ಹಾಗೂ ಪಾಲಿಕೆ ಅಧಿಕಾರಿಗಳು ಸಭೆ ಮಾಡುತ್ತಿದ್ದಾರೆ. ಕುಡಿಯುವ ನೀರಿನ ದಂಧೆ ತಡೆಯಲು ಕೊಳವೆಬಾವಿ ಹಾಗೂ ಅವುಗಳಿಂದ ನೀರು ಪೂರೈಕೆ ಮಾಡುವ ಟ್ಯಾಂಕರ್‌ಗಳು ಮಾ. 7ರ ಒಳಗಾಗಿ ನೋಂದಣಿ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದೇವೆ ಎಂದು ತಿಳಿಸಿದರು.

ಕೊಳವೆ ಬಾವಿಗಳ ಮೂಲಕ ಬೆಂಗಳೂರಿನ ಕುಡಿಯುವ ನೀರಿನ ಅಭಾವವನ್ನು ನೀಗಿಸುತ್ತೇವೆ. ಈ ವಿಚಾರವಾಗಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಭೆ ಕರೆಯಲಾಗಿದೆ. ಇನ್ನು ನನ್ನ ಇಲಾಖೆ ಅನುದಾನದಿಂದ ಬೆಂಗಳೂರಿನ ಎಲ್ಲ ಕ್ಷೇತ್ರಗಳ ಕುಡಿಯುವ ನೀರಿನ ಪೂರೈಕೆಗೆ ತಲಾ 10 ಕೋಟಿ ರೂ. ನೀಡಲಾಗಿದೆ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ರಾಜ್ಯಾದ್ಯಂತ 7108 ಬೋರ್‌ವೆಲ್‌ಗಳನ್ನು ಗುರುತಿಸಲಾಗಿದೆ: ಕೃಷ್ಣ ಬೈರೇಗೌಡ

ಪ್ರಸ್ತುತ ಬರ ಪರಿಸ್ಥಿತಿ ಹತೋಟಿಯಲ್ಲಿದ್ದು, ಮುಂದಿನ ಬೇಸಿಗೆಗೆ ರಾಜ್ಯದ ಯಾವ ಭಾಗದಲ್ಲೂ ಕುಡಿಯುವ ನೀರಿಗೆ ಸಮಸ್ಯೆ ಉದ್ಭವಿಸದಂತೆ ತಡೆಯುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ 7108 ಬಾಡಿಗೆ ಬೋರ್‌ವೆಲ್‌ಗಳನ್ನು ಗುರುತಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಶುಕ್ರವಾರ ವಿಕಾಸ ಸೌಧದಲ್ಲಿ ಮಾಹಿತಿಯನ್ನು ನೀಡಿದ್ದರು.

“ರಾಜ್ಯದಲ್ಲಿ ಪ್ರಸ್ತುತ ನೀರಿನ ಸಮಸ್ಯೆ ಕಂಡುಬಂದಿರುವ 116 ಗ್ರಾಮಗಳಿಗೆ 175 ಟ್ಯಾಂಕರ್ ಮೂಲಕ ಹಾಗೂ 382 ಗ್ರಾಮಗಳಿಗೆ 445 ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆ ಆಧಾರದ ಮೇಲೆ ಪಡೆದು ಪ್ರತಿ ದಿನ ನೀರು ಪೂರೈಸಲಾಗುತ್ತಿದೆ. 09 ನಗರ ಸ್ಥಳೀಯ ಸಂಸ್ಥೆಗಳಲ್ಲಿನ 57 ವಾರ್ಡ್‌ಗಳಿಗೆ 24 ಟ್ಯಾಂಕರ್‌ಗಳ ಮೂಲಕ ಹಾಗೂ 29 ವಾರ್ಡ್‌ಗಳಿಗೆ 17 ಖಾಸಗಿ ಬೋರ್‌ವೆಲ್‌ಗಳ ಮೂಲಕ ತುರ್ತು ಕುಡಿಯುವ ನೀರು ಪೂರೈಸಲಾಗುತ್ತಿದೆ.

ಅಲ್ಲದೆ, ಮುಂದಿನ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಬವಿಸಬಹುದಾದ 7377 ಗ್ರಾಮಗಳನ್ನು ಹಾಗೂ 1272 ವಾರ್ಡ್‌ಗಳನ್ನು ಗುರುತಿಸಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಒಟ್ಟು 7080 ಖಾಸಗಿ ಬೋರ್‌ವೆಲ್‌ಗಳನ್ನು ಗುರುತಿಸಲಾಗಿದೆ. ಬಹುತೇಕ ಬೋರ್‌ವೆಲ್ ಮಾಲೀಕರ ಜೊತೆಗೆ ಈಗಾಗಲೇ ಒಪ್ಪಂದ ಮಾಡಿಕೊಂಡಿಕೊಳ್ಳಲಾಗಿದೆ. ಗ್ರಾಮಪಂಚಾಯತ್ ಮಟ್ಟದಲ್ಲಿ ಟ್ಯಾಂಕರ್ ಗಳ ಟೆಂಡರ್ ಮಾಡಿ ಇಟ್ಟುಕೊಳ್ಳಲು ಸೂಚಿಸಲಾಗಿದೆ. ಸಮಸ್ಯೆ ಕಂಡುಬಂದ ಕೂಡಲೇ ಕುಡಿಯುವ ನೀರನ್ನು ಪೂರೈಸಲಾಗುವುದು.

ನೀರಿನ ಪೂರೈಕೆ ಸರ್ಕಾರದ ಆದ್ಯತೆ. ಹೀಗಾಗಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಬಾರದು ಎಂಬ ನಿಟ್ಟಿನಲ್ಲಿ ಬಾಡಿಗೆ ಟ್ಯಾಂಕರ್ ಹಾಗೂ ಖಾಸಗಿ ಬೋರ್‌ವೆಲ್, ಟ್ಯಾಂಕರ್‌ಗಳ ಮೂಲಕ ನೀರು ಪೂರೈಸುವವರಿಗೆ ಯಾವುದೇ ನೆಪ ಇಲ್ಲದೆ 15 ದಿನಗಳಲ್ಲಿ ಬಿಲ್ಲು ಪಾವತಿಗೆ ಕ್ರಮವಹಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಜೊತೆಗೆ ವಾಟರ್ ಟ್ಯಾಂಕರ್ ಗಳಿಗೆ ನ್ಯಾಯಯುತ ದರ ನಿಗದಿಗೊಳಿಸುವ ಬಗ್ಗೆಯೂ ಸಿದ್ದತೆ ಆಗುತ್ತಿದೆ.

ಎಲ್ಲ ತಾಲೂಕುಗಳಲ್ಲೂ ಟಾಸ್ಕ್‌ಫೋರ್ಸ್ ಸಭೆ

ಬರ ಘೋಷಿತ ತಾಲ್ಲೂಕುಗಳಲ್ಲಿ ಕುಡಿಯುವ ನೀರು ಮತ್ತು ಮೇವು ಒದಗಿಸಲು ಶಾಸಕರ ಅಧ್ಯಕ್ಷತೆಯಲ್ಲಿ 15 ದಿನಗಳಿಗೊಮ್ಮೆ ಟಾಸ್ಕ್‌ಫೋರ್ಸ್ ಸಭೆ ನಡೆಸಲಾಗುತ್ತಿದ್ದು, ಡಿಸೆಂಬರ್‌ನಿಂದ ಈವರೆಗೆ ತಾಲೂಕು ಮಟ್ಟದ 600 ಸಭೆಗಳನ್ನು ನಡೆಸಲಾಗಿದೆ. ಫೆಬ್ರವರಿ ಒಂದೇ ತಿಂಗಳಲ್ಲಿ 154 ಟಾಸ್ಕ್ ಫೋರ್ಸ್‌ ಸಭೆ ನಡೆಸಲಾಗಿದೆ. ಬರ ನಿರ್ವಹಣೆಗೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.

ಬರ ನಿರ್ವಹಣೆಗಾಗಿ ಜಿಲ್ಲಾಧಿಕಾರಿಗಳ ಖಾತೆಯಲ್ಲಿ ರೂ. 725.92 ಕೋಟಿ ಹಾಗೂ ತಹಶೀಲ್ದಾರ್ ಖಾತೆಯಲ್ಲಿ ರೂ.135.40 ಕೋಟಿ ಸೇರಿದಂತೆ ಒಟ್ಟು ರೂ. 861.32 ಕೋಟಿ ಅನುದಾನವು ಬರ ಪರಿಹಾರ ಕಾರ್ಯ ಕೈಗೆತ್ತಿಕೊಳ್ಳಲು ಲಭ್ಯವಿದೆ.

ಮೇವು ಕೊರತೆ ಇಲ್ಲ

ಪ್ರಸ್ತುತ ರಾಜ್ಯದಲ್ಲಿ 144 ಲಕ್ಷ ಟನ್ ಮೇವು ಲಭ್ಯವಿದ್ದು, ಮುಂದಿನ 27 ವಾರಗಳ ಬಳಕೆಗೆ ಸಾಕಾಗುತ್ತದೆ. ಅಲ್ಲದೆ, 25 ಜಿಲ್ಲೆಗಳಲ್ಲಿ ಮೇವು ಖರೀದಿಗೆ ಟೆಂಡರ್ ಕರೆಯಲಾಗಿದೆ. ಅವಶ್ಯಕತೆ ಬಂದ ಕೂಡಲೇ ಮೇವಿನ ದಾಸ್ತಾನನ್ನು ಪೂರೈಸಲಾಗುವುದು.

ಮೇವಿನ ಕಿಟ್‌ ಖರೀದಿಗೆ ಎಸ್‌ಡಿಆರ್‌ಎಫ್‌ ಅಡಿ ಪಶುಸಂಗೋಪನೆ ಇಲಾಖೆಗೆ 20 ಕೋಟಿ ನೀಡಲಾಗಿದ್ದು, ಆ ಹಣದಲ್ಲಿ 7.62 ಲಕ್ಷ ಮಿನಿ ಕಿಟ್‌ಗಳನ್ನು ಖರೀದಿಸಲಾಗಿದೆ. ಈ ಕಿಟ್‌ಗಳನ್ನು 4.19 ಲಕ್ಷ ರೈತರಿಗೆ ಉಚಿತವಾಗಿ ನೀಡಲಾಗಿದೆ. ಈ ಮೂಲಕ ಅಲ್ಪ ನೀರಾವರಿ ಜಮೀನಿನ ಲಭ್ಯತೆ ಇರುವ ರೈತರ ಮೂಲಕ ಮೇವು ಬೆಳೆದು ದಾಸ್ತಾನು ಮಾಡಲಾಗಿದೆ. ಅಲ್ಲದೆ, ಅಂತರರಾಜ್ಯ ಮೇವು ಸಾಗಾಣಿಕೆಯನ್ನು ನಿರ್ಬಂಧಿಸಿ 22/11/2023 ರಂದು ಆದೇಶ ಹೊರಡಿಸಲಾಗಿದ್ದು, ಪ್ರಸ್ತುತ ರಾಜ್ಯದಲ್ಲಿ ಮೇವಿನ ಕೊರತೆ ಇಲ್ಲ.

ಇದನ್ನೂ ಓದಿ: Blast in Bengaluru: ರಾಮೇಶ್ವರಂ ಕೆಫೆ ಸ್ಫೋಟ; ಇವನೇ ನೋಡಿ ಬಾಂಬ್‌ ಇಟ್ಟವನು!

ಈಗಾಗಲೇ ಪ್ರತಿ ತಾಲೂಕಿನಲ್ಲೂ ಗೋಶಾಲೆ ಇವೆ. ಅಗತ್ಯವಿದ್ದರೆ ಎಸ್‌ಡಿಆರ್‌ಎಫ್ ಮಾರ್ಗಸೂಚಿಯ ಪ್ರಕಾರ ಅರ್ಹತೆಯಂತೆ ಹೋಬಳಿ ಮಟ್ಟದಲ್ಲೂ ಸಹ ಹೆಚ್ಚುವರಿ ಗೋಶಾಲೆ ತೆರೆಯಲು ಹಾಗೂ ಮೇವಿನ ಬ್ಯಾಂಕ್ ಸ್ಥಾಪಿಸಲು 4/12/2023 ರಂದು ಸುತ್ತೋಲೆ ಹೊರಡಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದರು.

Continue Reading

ರಾಜಕೀಯ

Sedition Case: ಪಾಕ್‌ ಜಿಂದಾಬಾದ್‌ ಘೋಷಣೆ; ಸರ್ಕಾರದಿಂದ ಬೋಗಸ್ FSL ವರದಿ: ವಿಜಯೇಂದ್ರ ಅನುಮಾನ

Sedition Case: ಎಫ್.ಎಸ್.ಎಲ್ ವರದಿ ಬಂದಿದೆ. ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದು ದೃಢಪಟ್ಟ ಮಾಹಿತಿ ನಮಗಿದೆ. ಆದರೆ, ರಾಜ್ಯ ಸರ್ಕಾರದ ವಿಳಂಬ ನೀತಿ, ನಡವಳಿಕೆಯನ್ನು ಗಮನಿಸಿದರೆ ಸರ್ಕಾರ ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ ಎಂಬಂತಿದೆ. ದೇಶದ್ರೋಹಿಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಬೋಗಸ್ ‌FSL (ಎಫ್.ಎಸ್.ಎಲ್) ವರದಿ ತಯಾರಿಸುವ ಅನುಮಾನ ಕಾಡುವಂತಾಗಿದೆ ಎಂದು ಬಿ.ವೈ. ವಿಜಯೇಂದ್ರ ಅನುಮಾನ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Sedition Case Pakistan Zindabad slogan Bogus FSL report from govt BY Vijayendra
Koo

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ (Rameshwaram Cafe Bomb Blast) ವಿಷಯದಲ್ಲಿ ಬಿಜೆಪಿ ರಾಜಕಾರಣ ಮಾಡುವುದಿಲ್ಲ. ಒಂದು ಜವಾಬ್ದಾರಿಯುತ ವಿಪಕ್ಷವಾಗಿ ರಾಜ್ಯ ಸರ್ಕಾರಕ್ಕೆ ಸಂಪೂರ್ಣ ಸಹಕಾರ ಕೊಡಲಿದ್ದೇವೆ ಎಂದು ನಿನ್ನೆಯೇ ಸ್ಪಷ್ಟಮಾತುಗಳಲ್ಲಿ ಹೇಳಿದ್ದೇವೆ. ಆದರೆ, ಸರ್ಕಾರವೇ ಸೂಕ್ತ ರೀತಿಯಲ್ಲಿ ತನಿಖೆ ಮಾಡುತ್ತಿಲ್ಲ. ಇನ್ನು ರಾಜ್ಯಸಭಾ ಫಲಿತಾಂಶ ವೇಳೆ ವಿಧಾನಸೌಧದೊಳಗೆ ಪಾಕಿಸ್ತಾನ್‌ ಜಿಂದಾಬಾದ್‌ (Pakistan Zindabad slogans) ಎಂದು ಕೂಗಲಾಗಿದೆ. ದೇಶದ್ರೋಹದ ಪ್ರಕರಣ (Sedition Case) ಇದಾಗಿದೆ. ಆದರೆ, ಆರೋಪಿ ರಕ್ಷಣೆಗೆ ರಾಜ್ಯ ಸರ್ಕಾರ ನಿಂತಿದೆ. ಇದಕ್ಕಾಗಿ ಎಫ್‌ಎಸ್‌ಎಲ್‌ ವರದಿಯನ್ನೇ ತಿರುಚಲು ಹೊರಟಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಅನುಮಾನವನ್ನು ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿ.ವೈ. ವಿಜಯೇಂದ್ರ, ಎಫ್.ಎಸ್.ಎಲ್ ವರದಿ ಬಂದಿದೆ. ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದು ದೃಢಪಟ್ಟ ಮಾಹಿತಿ ನಮಗಿದೆ. ಆದರೆ, ರಾಜ್ಯ ಸರ್ಕಾರದ ವಿಳಂಬ ನೀತಿ, ನಡವಳಿಕೆಯನ್ನು ಗಮನಿಸಿದರೆ ಸರ್ಕಾರ ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ ಎಂಬಂತಿದೆ. ದೇಶದ್ರೋಹಿಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಬೋಗಸ್ ‌FSL (ಎಫ್.ಎಸ್.ಎಲ್) ವರದಿ ತಯಾರಿಸುವ ಅನುಮಾನ ಕಾಡುವಂತಾಗಿದೆ ಎಂದು ಆರೋಪಿಸಿದರು.

ಇಂಥ ಸಂದರ್ಭದಲ್ಲಿ ರಾಜ್ಯ ಸರ್ಕಾರ, ಸಚಿವರ ಹೇಳಿಕೆಗಳು ಕೇವಲ ಬಿಜೆಪಿ ಮಾತ್ರವಲ್ಲ. ಸಾಮಾನ್ಯ ಜನರಿಗೂ ವಿಶ್ವಾಸ ಹುಟ್ಟಿಸುವಂತಿಲ್ಲ. ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಕೂಗಿದ ದೇಶದ್ರೋಹಿಗಳ ಬಗ್ಗೆ ಸಚಿವರು ‘ಆ ರೀತಿ ಘೋಷಣೆ ಕೂಗಿಯೇ ಇಲ್ಲ’ ಎಂದಿದ್ದರು. ‘ಬಿಜೆಪಿಯವರಿಗೆ ಮಾಡುವುದಕ್ಕೆ ಕೆಲಸ ಇಲ್ಲ’ ಎಂದಿದ್ದರು. ವಿಧಾನಸೌಧಕ್ಕೆ ಧಾವಿಸಿದ ಪೊಲೀಸ್ ಅಧಿಕಾರಿಗಳು ಸಿ.ಸಿ.ಟಿ.ವಿ. ಫೂಟೇಜ್ ಗಮನಿಸಿ ಅರ್ಧ ಗಂಟೆಯಲ್ಲಿ ಅವರನ್ನೆಲ್ಲ ಹಿಡಿದು ಒಳಗೆ ಹಾಕಬೇಕಿತ್ತು. ಅದನ್ನೂ ಮಾಡಿಲ್ಲ ಎಂದು ಬಿ.ವೈ. ವಿಜಯೇಂದ್ರ ಆಕ್ಷೇಪಿಸಿದರು.

FSL ವರದಿ ಬಂದಿದ್ದರೂ ಇಲ್ಲವೆಂದಿರುವ ಸರ್ಕಾರ

ಎಫ್.ಎಸ್.ಎಲ್ ವರದಿ ಗಮನಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವರು ಹೇಳಿದ್ದಾರೆ. ಘಟನೆ ನಡೆದು ನಾಲ್ಕೈದು ದಿನ ಕಳೆದಿದೆ. ಇವತ್ತಿಗೂ ಎಫ್.ಎಸ್.ಎಲ್ ವರದಿ ಬಂದಿಲ್ಲ ಎಂದರೆ ಏನು ಅರ್ಥ? ಎಫ್.ಎಸ್.ಎಲ್ ವರದಿ ಬಂದಿದೆ. ಪಾಕ್ ಪರ ಘೋಷಣೆ ದೃಢವಾಗಿದೆ ಎಂದು ಪತ್ರಿಕೆಗಳು, ಮಾಧ್ಯಮಗಳು ವರದಿ ಮಾಡಿವೆ. ಇದರ ಮಧ್ಯೆ ಮುಖ್ಯಮಂತ್ರಿಗಳು ಎಫ್.ಎಸ್.ಎಲ್ ವರದಿ ಬಂದೇ ಇಲ್ಲ ಎಂದು ಮೈಸೂರಿನಲ್ಲಿ ಹೇಳಿದ್ದಾರೆ ಎಂದು ಬಿ.ವೈ. ವಿಜಯೇಂದ್ರ ಕಿಡಿಕಾರಿದರು.

ರಾಜ್ಯದ ಜನರಲ್ಲೂ ಆತಂಕ

ರಾಜ್ಯದ ಜನರಲ್ಲೂ ಆತಂಕ ಕಾಡುತ್ತಿದೆ. ಇಂಥ ಘಟನೆಗಳನ್ನು ಎಷ್ಟು ಗಂಭೀರವಾಗಿ ರಾಜ್ಯ ಸರ್ಕಾರ ತೆಗೆದುಕೊಳ್ಳಬೇಕೋ? ಇಂಥ ಘಟನೆ ನಡೆದಾಗ ಪೊಲೀಸ್ ಅಧಿಕಾರಿಗಳು ಎಷ್ಟು ಗಂಭೀರವಾಗಿ ವರ್ತಿಸಬೇಕೋ? ಅಂಥ ಗಂಭೀರತೆ ಮೇಲ್ನೋಟಕ್ಕೆ ಕಾಣುತ್ತಿಲ್ಲ.‌ ಇನ್ನು ಪಾಕಿಸ್ತಾನ ಜಿಂದಾಬಾದ್ ಘಟನೆ ಕುರಿತು ನಿರ್ಧರಿಸಲು 5 ದಿನ ಬೇಕೇ? ಇದು ನಾಚಿಕೆಗೇಡಿನ ಸಂಗತಿ ಅಲ್ಲವೇ ಎಂದು ಬಿ.ವೈ. ವಿಜಯೇಂದ್ರ ಆಕ್ರೋಶವನ್ನು ಹೊರಹಾಕಿದರು.

ನಿಮ್ಮ ಭಯವನ್ನು ಸ್ಪಷ್ಟಪಡಿಸಿ

ಹಾದಿಬೀದಿಯಲ್ಲಿ ಪಾಕಿಸ್ತಾನ ಜಿಂದಾಬಾದ್ ಕೂಗಿದ್ದಲ್ಲ. ವಿಧಾನಸೌಧದಲ್ಲಿ ಕೂಗಿರುವಾಗ ದೇಶದ್ರೋಹಿಗಳನ್ನು ಬಂಧಿಸಿಲ್ಲವೆಂದರೆ ನಿಮ್ಮ ಇಚ್ಛಾಶಕ್ತಿ ಕೊರತೆಯೇ? ಅಥವಾ ದೇಶದ್ರೋಹಿಗಳನ್ನು ರಕ್ಷಿಸುವ ಪ್ರಯತ್ನದ ಜತೆಗೆ, ಅಲ್ಪಸಂಖ್ಯಾತರ ಭಾವನೆಗೆ ಧಕ್ಕೆ ಆಗುವುದೆಂಬ ಭಯ ನಿಮ್ಮನ್ನು ಕಾಡುತ್ತಿದೆಯೇ? ಅದನ್ನು ಸ್ಪಷ್ಟವಾಗಿ ಹೇಳಿ ಎಂದು ಬಿ.ವೈ. ವಿಜಯೇಂದ್ರ ಆಗ್ರಹಿಸಿದರು.

ಡಿಕೆಶಿ ಹೇಳಿಕೆ ಅಂಶಾಂತಿ ಮೂಡಲು ಕಾರಣ

ಪಾಕಿಸ್ತಾನ್ ಜಿಂದಾಬಾದ್ ಘೋಷಣೆ, ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ ನಡವಳಿಕೆ ಮತ್ತು ಸಚಿವರ ಹೇಳಿಕೆಗಳು, ಶಿವಮೊಗ್ಗದ ಟಿಪ್ಪು ಜಯಂತಿ ಸಂದರ್ಭದಲ್ಲಿ ದೇಶದ್ರೋಹಿಗಳ ಅಟ್ಟಹಾಸ, ಕುಕ್ಕರ್ ಬ್ಲಾಸ್ಟ್‌ನಲ್ಲಿ ಅಪರಾಧಿಗಳನ್ನು ಅಮಾಯಕರೆಂದು ಬಿಂಬಿಸುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ಹೇಳಿಕೆಗಳು ರಾಜ್ಯದಲ್ಲಿ ಅಶಾಂತಿ ಮೂಡಲು ಕಾರಣವಾಗುತ್ತಿದೆ ಎಂದು ಬಿ.ವೈ. ವಿಜಯೇಂದ್ರ ತಿಳಿಸಿದರು.

ಇದನ್ನೂ ಓದಿ: Blast in Bengaluru: ರಾಮೇಶ್ವರಂ ಕೆಫೆ – ಮಂಗಳೂರು ಬ್ಲಾಸ್ಟ್‌ಗೆ ಸಾಮ್ಯತೆ; ಇಲ್ಲ ಅಂದ್ರು ಸಿಎಂ, ಇದೆ ಅಂದ್ರು ಡಿಸಿಎಂ!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಇಂಥ ಘಟನೆಗಳನ್ನು ಹೆಚ್ಚು ಜವಾಬ್ದಾರಿಯುತವಾಗಿ ನಿಭಾಯಿಸಬೇಕು. ಸಚಿವರು ಬೇಜವಾಬ್ದಾರಿ ಹೇಳಿಕೆ ಕೊಡದಂತೆ ನಿಲ್ಲಿಸಬೇಕು.‌ ಏನೂ ಆಗಿಯೇ ಇಲ್ಲ ಎಂಬಂತೆ ಸಚಿವರು ಮನಸೋ ಇಚ್ಛೆ ಹೇಳಿಕೆ ಕೊಡುತ್ತಿದ್ದಾರೆ ಎಂದು ಬಿ.ವೈ. ವಿಜಯೇಂದ್ರ ಟೀಕಿಸಿದರು.

Continue Reading
Advertisement
Minister MB Patil important meeting with senior officers of Lulu Group
ಕರ್ನಾಟಕ8 mins ago

Bengaluru News: ವಿಜಯಪುರದಲ್ಲಿ ರಫ್ತು ಆಧಾರಿತ ಆಹಾರ ಸಂಸ್ಕರಣ ಘಟಕ, ಸಚಿವ ಎಂ.ಬಿ.ಪಾಟೀಲ್ ಮಹತ್ವದ ಸಭೆ

Rameswaram Cafe blast sketched for 3 months without using a mobile phone
ಬೆಂಗಳೂರು26 mins ago

Blast In Bengaluru: ರಾಮೇಶ್ವರಂ ಕೆಫೆ ಬ್ಲಾಸ್ಟ್‌ಗೆ 3 ತಿಂಗಳಿಂದಲೇ ಸ್ಕೆಚ್‌? ಮೊಬೈಲ್‌ ಬಳಸದೇ ಕೃತ್ಯ!

Bjp Karnataka Former minister Manohar Tahsildar join BJP Is Haveri stronger
ರಾಜಕೀಯ28 mins ago

‌BJP Karnataka: ಬಿಜೆಪಿ ಸೇರಿದ ಮಾಜಿ ಸಚಿವ ಮನೋಹರ್‌ ತಹಸೀಲ್ದಾರ್; ಹಾವೇರಿ ಮತ್ತಷ್ಟು ಸ್ಟ್ರಾಂಗ್?

Unleashing the rage of Yuva The First Single
ಸ್ಯಾಂಡಲ್ ವುಡ್53 mins ago

Yuva Rajkumar: ಇಂದು ಚಾಮರಾಜನಗರದಲ್ಲಿ ‘ಯುವ’ ಪರ್ವ; ಅತಿಥಿಯಾಗಿ ಬರುವ ನಟ ಯಾರು?

Blast in Bengaluru Experimental preparation for serial blasts says CT Ravi
ರಾಜಕೀಯ1 hour ago

Blast in Bengaluru: ಸರಣಿ ಸ್ಫೋಟದ ಪ್ರಯೋಗಾರ್ಥ ರಾಮೇಶ್ವರಂ ಕೆಫೆ ಬ್ಲಾಸ್ಟ್? ಸರ್ಕಾರದ ವಿರುದ್ಧ ಗುಡುಗಿದ ಸಿ.ಟಿ.ರವಿ

mumbai attack
ವಿದೇಶ1 hour ago

Azam Cheema: 2008ರ ಮುಂಬೈ ಭಯೋತ್ಪಾದಕ ದಾಳಿಯ ಮಾಸ್ಟರ್‌ ಮೈಂಡ್‌ ಅಜಮ್‌ ಚೀಮಾ ಸಾವು

Rameswaram Cafe Blast Suspected travels in BMTC Volvo bus
ಬೆಂಗಳೂರು1 hour ago

Blast In Bengaluru: ರಾಮೇಶ್ವರಂ ಕೆಫೆ ಬ್ಲಾಸ್ಟ್‌; ವೋಲ್ವೋ ಬಸ್‌ನಲ್ಲಿ ಬಾಂಬರ್ ಸಂಚಾರ, ಸಿಸಿಟಿವಿಯಲ್ಲಿ ಸೆರೆ

physical abuse
ದೇಶ1 hour ago

Jharkhand shocker: ಪ್ರವಾಸಕ್ಕೆ ಬಂದ ಸ್ಪೇನ್‌ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ 10 ಕಿರಾತಕರು

Water crisis Bengaluru borewell water supply tankers to be handed over to govt DK Shivakumar
ಬೆಂಗಳೂರು1 hour ago

Water Crisis: ಬೆಂಗಳೂರಿನ ಕೊಳವೆಬಾವಿ ನೀರು ಪೂರೈಕೆ ಟ್ಯಾಂಕರ್‌ಗಳಿನ್ನು ಸರ್ಕಾರದ ಸುಪರ್ದಿಗೆ: ಡಿ.ಕೆ. ಶಿವಕುಮಾರ್

Sedition Case Pakistan Zindabad slogan Bogus FSL report from govt BY Vijayendra
ರಾಜಕೀಯ2 hours ago

Sedition Case: ಪಾಕ್‌ ಜಿಂದಾಬಾದ್‌ ಘೋಷಣೆ; ಸರ್ಕಾರದಿಂದ ಬೋಗಸ್ FSL ವರದಿ: ವಿಜಯೇಂದ್ರ ಅನುಮಾನ

Sharmitha Gowda in bikini
ಕಿರುತೆರೆ5 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ5 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ4 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ3 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ5 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ4 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ3 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Rameswaram Cafe Blast Suspected travels in BMTC Volvo bus
ಬೆಂಗಳೂರು1 hour ago

Blast In Bengaluru: ರಾಮೇಶ್ವರಂ ಕೆಫೆ ಬ್ಲಾಸ್ಟ್‌; ವೋಲ್ವೋ ಬಸ್‌ನಲ್ಲಿ ಬಾಂಬರ್ ಸಂಚಾರ, ಸಿಸಿಟಿವಿಯಲ್ಲಿ ಸೆರೆ

Blast in Bengaluru Time bomb planted in rameshwaram cafe Important evidence found
ಬೆಂಗಳೂರು20 hours ago

Blast in Bengaluru: ರಾಮೇಶ್ವರಂ ಕೆಫೆ ಬ್ಲಾಸ್ಟ್‌; ಹೋಟೆಲ್‌ನಲ್ಲಿಟ್ಟಿದ್ದು ಟೈಂ ಬಾಂಬ್‌? ಸಿಕ್ಕಿದೆ ಮಹತ್ವದ ಸಾಕ್ಷ್ಯ

rameshwaram cafe bengaluru incident
ಬೆಂಗಳೂರು23 hours ago

Blast in Bengaluru : ರಾಮೇಶ್ವರಂ ಕೆಫೆ ಸ್ಫೋಟದ ಸ್ಥಳದಲ್ಲಿ ಬ್ಯಾಟರಿ ಪತ್ತೆ!

Elephants spotted in many places
ಹಾಸನ23 hours ago

Elephant Attack: ಹಾಸನ, ರಾಮನಗರ, ಮೈಸೂರಲ್ಲಿ ಆನೆ ಬೇನೆ; ಬೆಳಗಾವಿಯಲ್ಲಿ ಬಿಂದಾಸ್‌ ಓಡಾಟ

read your daily horoscope predictions for march 1st 2024
ಭವಿಷ್ಯ1 day ago

Dina Bhavishya : ಈ ರಾಶಿಯವರು ಪ್ರಮುಖ ಜನರೊಡನೆ ವ್ಯವಹರಿಸುವಾಗ ಎಚ್ಚರಿಕೆಯಿಂದ ಮಾತನಾಡಿ

dina bhavishya read your daily horoscope predictions for February 28 2024
ಭವಿಷ್ಯ2 days ago

Dina Bhavishya: ಇಂದು 12 ರಾಶಿಯವರ ಲಕ್ಕಿ ನಂಬರ್‌ ಏನು? ಯಾರಿಗೆ ಧನ ಲಾಭ?

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರು ಇಂದು ದೊಡ್ಡದೊಂದು ಸಮಸ್ಯೆಯಿಂದ ಮುಕ್ತಿ ಪಡೆಯುವಿರಿ

Rajya Sabha election Pakistan Zindabad slogans raised inside Vidhana Soudha by Nasir Hussain supporters
ರಾಜಕೀಯ4 days ago

ವಿಧಾನಸೌಧದೊಳಗೇ ಪಾಕಿಸ್ತಾನ ಜಿಂದಾಬಾದ್‌ ಘೋಷಣೆ; ನಾಸಿರ್‌ ಹುಸೇನ್‌ ಬೆಂಬಲಿಗ ದೇಶದ್ರೋಹಿಗಳ ಉದ್ಧಟತನ

Ghar Wapsi ST Somashekhar and Shivaram Hebbar to quit BJP
ರಾಜಕೀಯ4 days ago

Ghar Wapsi: ಎಸ್‌.ಟಿ. ಸೋಮಶೇಖರ್‌, ಶಿವರಾಂ ಹೆಬ್ಬಾರ್‌ ಬಿಜೆಪಿಗೆ ಗುಡ್‌ ಬೈ? ಇಂದೇ ರಾಜೀನಾಮೆ?

Rajyasabha Elections 42 Congress MLAs contacted by JDS candidate says DK Shivakumar
ರಾಜಕೀಯ4 days ago

Rajya sabha Election: ಕಾಂಗ್ರೆಸ್‌ನ 42 ಶಾಸಕರನ್ನು ಸಂಪರ್ಕ ಮಾಡಿದ್ದಾರೆ: ಡಿ.ಕೆ. ಶಿವಕುಮಾರ್

ಟ್ರೆಂಡಿಂಗ್‌