Fertility Fraud : ತನ್ನದೇ ವೀರ್ಯವನ್ನು ಕೃತಕ ಗರ್ಭಧಾರಣೆಗೆ ಬಳಸಿದ್ದ ವೈದ್ಯ 34 ವರ್ಷದ ಬಳಿಕ ಸಿಕ್ಕಿ ಬಿದ್ದ! - Vistara News

ಪ್ರಮುಖ ಸುದ್ದಿ

Fertility Fraud : ತನ್ನದೇ ವೀರ್ಯವನ್ನು ಕೃತಕ ಗರ್ಭಧಾರಣೆಗೆ ಬಳಸಿದ್ದ ವೈದ್ಯ 34 ವರ್ಷದ ಬಳಿಕ ಸಿಕ್ಕಿ ಬಿದ್ದ!

ಮೋಸಕ್ಕೆ ಒಳಗಾದ ಮಹಿಳೆ ತನ್ನ ಮಗಳ ಡಿಎನ್​ಎ ಟೆಸ್ಟ್​ ಮಾಡಿಸಿದಾಗ ಅದು ವೈದ್ಯನ ಡಿಎನ್​ಎ ಜತೆ (Fertility Fraud) ಹೊಂದಾಣಿಕೆಯಾಗಿತ್ತು.

VISTARANEWS.COM


on

Fertility Fraud
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಆರೋಗ್ಯ ಸಮಸ್ಯೆ ಹಾಗೂ ವೈದ್ಯಕೀಯ ಸೇವೆಯ ಲಭ್ಯತೆಯ ಕಾರಣಕ್ಕೆ ಕೃತಕ ಗರ್ಭಧಾರಣೆ ಸಾಮಾನ್ಯ ಸಂಗತಿಯಾಗಿದೆ. ಮುಂದುವರಿದ ಹಾಗೂ ಪಾಶ್ಚಾತ್ಯ ದೇಶಗಳಲ್ಲಿನ ಕೌಟುಂಬಿಕ ವ್ಯವಸ್ಥೆಯ ಅಸಮತೋಲನದಿಂದಾಗಿ ಮಕ್ಕಳನ್ನು ಪಡೆಯಲು ಇಚ್ಛಿಸುವವರು ಈ ವಿಧಾನವನ್ನು ಅನುಸರಿಸುತ್ತಾರೆ. ಭಾರತದಲ್ಲಿ ಈ ವ್ಯವಸ್ಥೆ ಈಗ ಜನಪ್ರಿಯತೆ ಪಡೆಯುತ್ತಿದೆ. ಆದರೆ, ಅಮೆರಿಕದಲ್ಲಿ ಮೂರು ದಶಕಗಳ ಹಿಂದೆಯೇ ಇದನ್ನು ಸಾಮಾನ್ಯವಾಗಿ ಅನುಸರಿಸಲಾಗುತ್ತಿತ್ತು. ಇದು ವೈದ್ಯಕೀಯ ಕ್ಷೇತ್ರದಲ್ಲಿನ ದೊಡ್ಡ ಮೋಸಕ್ಕೂ ಕಾರಣವಾಗಿತ್ತು ಎಂಬುದು ಬಯಲಾಗತೊಡಗಿದೆ. ವೈದ್ಯರು ಅನಾಮಧೇಯ ವ್ಯಕ್ತಿಗಳ ವೀರ್ಯ ಬಳಸುವ ಬದಲು ತಮ್ಮದೇ ವೀರ್ಯವನ್ನು (Fertility Fraud) ಕೊಟ್ಟಿರುವುದು ಗೊತ್ತಾಗಿ ಕೇಸುಗಳು ಬೀಳುತ್ತಿವೆ. ಇಂಥದ್ದೇ ಒಂದು ಪ್ರಕರಣ ಅಮೆರಿಕದಲ್ಲಿ ಪತ್ತೆಯಾಗಿದೆ. 30 ವರ್ಷದ ಹಿಂದೆ ಕೃತಕ ಗರ್ಭಧಾರಣೆ ಪ್ರಕ್ರಿಯೆ ವೇಳೆ ವೈದ್ಯರೊಬ್ಬರು ನನಗೆ ಮೋಸ ಮಾಡಿದ್ದಾರೆ ಎಂಬುದಾಗಿ ಅಮೆರಿಕದ ಮಹಿಳೆ ಇದೀಗ ದೂರು ದಾಖಲಿಸಿದ್ದಾರೆ. ಅನಾಮಿಕ ವ್ಯಕ್ತಿಯ ವೀರ್ಯವನ್ನು ಸಂತಾನೋತ್ಪತ್ತಿಗೆ ಬಳಸುವ ಬದಲು ತನ್ನ ವೀರ್ಯವನ್ನೇ ಕೊಟ್ಟಿದ್ದಾರೆ ಎಂಬುದಾಗಿ 67 ವರ್ಷದ ಮಹಿಳೆ ಕಾನೂನು ಸಮರಕ್ಕೆ ಮುಂದಾಗಿದ್ದಾರೆ.

ಶರೋನ್ ಹೇಯ್ಸ್ ಎಂಬ ಮಹಿಳೆ 34 ವರ್ಷಗಳ ಹಿಂದೆ ಫಲವತ್ತತೆ ವೈದ್ಯ ಡಾ.ಡೇವಿಡ್ ಆರ್ ಕ್ಲೇಪೂಲ್ ಅವರಿಂದ ವೈದ್ಯಕೀಯ ನೆರವು ಪಡೆದಿದ್ದರು. ಇದೀಗ ಅವರು ಮೋಸ ಮಾಡಿರುವುದು ತಮ್ಮ ಪುತ್ರಿಯ ಡಿಎನ್​ಎ ಪರೀಕ್ಷೆ ಬಳಿಕ ಗೊತ್ತಾಗಿದೆ. ಇದು ಮೋಸ ಎಂದು ಅವರು ಕಾನೂನು ಹೋರಾಟ ಆರಂಭಿಸಿದ್ದಾರೆ. ಅಂದ ಹಾಗೆ ನೆಟ್​ಫ್ಲಿಕ್ಸ್​ನಲ್ಲಿ ಅವರ್​ ಫಾದರ್ ಎಂಬ ಡಾಕ್ಯುಮೆಂಟರಿ ಇದೆ. ಅದರಲ್ಲಿ ವೈದ್ಯನೊಬ್ಬ 94 ಮಕ್ಕಳಿಗೆ ತಂದೆಯಾಗಿರುವ ಮಾಹಿತಿಯನ್ನು ವಿವರಿಸಲಾಗಿದೆ. ಇದು ಕೂಡ ಅದೇ ಮಾದರಿಯ ಪ್ರಕರಣವಾಗಿದೆ.

ವೈದ್ಯ ತನ್ನದೇ ವೀರ್ಯ ಬಳಸಿರುವ ಮಾಹಿತಿ ಬೆಳಕಿಗೆ ಬರಲು ಡಿಎನ್ಎ ಪರೀಕ್ಷಾ ಕಿಟ್​ಗಳ ಬಳಕೆ ಹೆಚ್ಚಾಗಿರುವುದೇ ಕಾರಣ. ಈ ಪರೀಕ್ಷೆಗಳು ಜನರಿಗೆ ತಮ್ಮ ಆನುವಂಶಿಕ ಪರಂಪರೆಯನ್ನು ಬಿಚ್ಚಿಡಲು ಅನುವು ಮಾಡಿಕೊಡುತ್ತದೆ ಎಂದು ಪರೀಕ್ಷೆಗಳನ್ನು ಮಾಡಿ ಮಾಹಿತಿ ದಾಖಲು ಮಾಡಲಾಗುತ್ತದೆ. ಆಗ ಮೋಸಗಳು ಬಹಿರಂಗೊಳ್ಳುತ್ತಿದೆ.

ಅಮೆರಿಕದ ಇಡಾಹೋದಲ್ಲಿ ವಾಸಿಸುತ್ತಿರುವ 67 ವರ್ಷದ ಶರೋನ್ ಹೇಯ್ಸ್, 1989ರಲ್ಲಿ ವಾಷಿಂಗ್ಟನ್​ನ ಸ್ಪೋಕೇನ್​​ನಲ್ಲಿ ಪ್ರಸೂತಿ ಮತ್ತು ಸ್ತ್ರೀರೋಗತಜ್ಞರಾಗಿದ್ದ ಡಾ.ಕ್ಲೇಪೂಲ್ ಅವರಿಂದ ಫಲವತ್ತತೆ ಚಿಕಿತ್ಸೆಯನ್ನು ಪಡೆದಿದ್ದರು. ಆ ಸಮಯದಲ್ಲಿ, ಮಹಿಳೆ ಮತ್ತು ಅವರ ಅಂದಿನ ಪತಿ ಮಗು ಪಡೆಯಲು ವಿಫಲವಾಗಿದ್ದ ಕಾರಣ ವೈದ್ಯರ ಮೊರೆ ಹೋಗಿದ್ದರು. ಚಿಕಿತ್ಸೆ ವೇಳೆ ಅನಾಮಧೇಯ ವ್ಯಕ್ತಿಯ ವೀರ್ಯಾಣು ದಾನಿಯನ್ನು ಹುಡುಕಲು ಮಹಿಳೆ ವೈದ್ಯರನ್ನು ವಿನಂತಿಸಿದ್ದರು. ಹುಟ್ಟಬೇಕಾಗಿರುವ ಮಗುವಿನ ಕೂದಲು ಮತ್ತು ಕಣ್ಣಿನ ಬಣ್ಣವನ್ನೂ ಆಯ್ಕೆ ಮಾಡಿದ್ದರು. ಅದಕ್ಕೆ ವೈದ್ಯರು ಒಪ್ಪಿದ್ದರು. ನಿರ್ದಿಷ್ಟ ಗುಣಲಕ್ಷಣಗಳ ಆಧಾರದ ಮೇಲೆ ದಾನಿಯನ್ನು ಆಯ್ಕೆ ಮಾಡುತ್ತೇನೆ ಮತ್ತು ದಾನಿಯ ಸಮಗ್ರ ಆರೋಗ್ಯ ಮತ್ತು ಆನುವಂಶಿಕ ತಪಾಸಣೆ ಮಾಡುತ್ತೇನೆ ಎಂದು ಭರವಸೆ ನೀಡಿದ್ದರು. ವೈದ್ಯರು ಪ್ರತಿ ಚಿಕಿತ್ಸೆಗೆ 100 ಡಾಲರ್​ ನಗದು ಸ್ವೀಕರಿಸಿದ್ದರು. ಹಣವನ್ನು ಕಾಲೇಜು ಅಥವಾ ವೈದ್ಯಕೀಯ ವಿದ್ಯಾರ್ಥಿಗಳು ವೀರ್ಯ ದಾನ ಮಾಡಿದರೆ ಅವರಿ ನೀಡುತ್ತೇನೆ ಎಂದಿದ್ದರು. ಆದರೆ, ಆ ರೀತಿ ಮಾಡದೇ ತನ್ನದೇ ವೀರ್ಯವನ್ನು ಮಹಿಳೆಯ ಗರ್ಭಕೋಶಕ್ಕೆ ಹಾಕಿ ಮೋಸ ಮಾಡಲಾಗಿತ್ತು.

ಈ ಸುದ್ದಿಯನ್ನೂ ಓದಿ : Halloween party : ಪಾಕ್​​​ನಲ್ಲಿ ಮತಾಂಧತೆಯ ಬೋಧನೆ, ಮೋಜು-ಮಸ್ತಿಗಿಲ್ಲ ಕಡಿಮೆ!

ವಂಶಾವಳಿ ಪರೀಕ್ಷೆಯಿಂದ ಬಯಲು

ಕಳೆದ ವರ್ಷದವರೆಗೂ ಅವರ 33 ವರ್ಷದ ಮಗಳು ಬ್ರಿಯಾನ್ನಾ ಹೇಯ್ಸ್ ತನ್ನ ಜೈವಿಕ ತಂದೆಯ ಗುರುತು ಪತ್ತೆ ಮಾಡಲು ಸಾಧ್ಯವಾಗಿರಲಿಲ್ಲ. ಬಳಿಕ ಬ್ರಿಯಾನ್ನಾ ತನ್ನ ಡಿಎನ್ಎಯನ್ನು ಜೆನೆಟಿಕ್ ಟೆಸ್ಟಿಂಗ್ ವೆಬ್ಸೈಟ್​ಗೆ ಅಪ್​ಲೋಡ್​ ಮಾಡಿ ಜೈವಿಕ ತಂದೆಯ ಪತ್ತೆಗೆ ಮನವಿ ಮಾಡಿದ್ದರು. ಈ ವೇಳೆ ವೈದ್ಯನ ಡಿಎನ್​ಎಗೆ ಬ್ರಿಯಾನ್ಸಾ ಅವರ ಡಿಎನ್​ಎ ಮ್ಯಾಚ್ ಅಗಿತ್ತು. ಈ ಕುರಿತ ಮಾತನಾಡಿದ ಮಹಿಳೆ “ಇದು ಖಂಡಿತವಾಗಿಯೂ ಬಿಕ್ಕಟ್ಟಿನ ಸ್ಥಿತಿ. ಇದು ನನ್ನ ಜೀವನದುದ್ದಕ್ಕೂ ನನ್ನಿಂದ ಮರೆಮಾಚಲ್ಪಟ್ಟ ಸಂಗತಿ. ನನ್ನ ತಾಯಿಯ ಬಗ್ಗೆ ನನಗೆ ಆಘಾತವಾಯಿತು. ಇದೊಂದು ಸಮಂಜಸವಲ್ಲದ ವಿಚಾರ ಎಂದು ಬ್ರಿಯಾನ್ನಾ ಹೇಳಿಕೊಂಡಿದ್ದಾರೆ.

ಬ್ರಿಯಾನ್ನಾ ಇರುವ ಪರಿಸರದಲ್ಲಿಯೇ 16 ಸಹೋದರರು

ವೈದ್ಯ ಕ್ಲೇಪೋಲ್ ಕೇವಲ ಶೆರೋನ್ ಅವರಿಗೆ ಮಾತ್ರ ಮೋಸ ಮಾಡಿರಲಿಲ್ಲ. ತನ್ನ ಬಳಿಗೆ ಚಿಕಿತ್ಸೆಗೆ ಬಂದಿದ್ದ ಸಾಕಷ್ಟು ಮಹಿಳೆಯರ ಗರ್ಭಕೋಶಕ್ಕೆ ತನ್ನದೇ ವೀರ್ಯವನ್ನು ನೀಡಿದ್ದ. ಬ್ರಿಯಾನ್ನಾ ತನ್ನ ಡಿಎನ್​ಎ ಯಾರೊಂದಿಗೆಲ್ಲ ಹೊಂದಾಣಿಕೆಯಾಗುತ್ತದೆ ಎಂದು ಪತ್ತೆ ಮಾಡಿದಾಗ ತನ್ನ ಮನೆಯ ಸುತ್ತಮುತ್ತಲಿನ ಹಲವಾರು ಮಂದಿ ಪತ್ತೆಯಾಗಿದ್ದಾರೆ. ಅವರೆಲ್ಲರೂ ಬ್ರಿಯಾನ್ನಾಗೆ ಸಹೋದರ, ಸಹೋದರಿಯರು. ಎಲ್ಲ ಮಹಿಳೆಯರಿಗೆ ಇದೇ ರೀತಿ ಮಾಡಿದ್ದ ಕಾರಣ ಹಲವಾರು ಮಕ್ಕಳು ಹುಟ್ಟಿದ್ದರು.

ಆನ್ಲೈನ್ ಡಿಎನ್ಎ ಸೇವೆಗಳು ಹೆಚ್ಚಾಗಿರುವ ಕಾರಣ “ಫಲವತ್ತತೆ ವಂಚನೆ” ಯ ಹಲವಾರು ಪ್ರಕರಣಗಳನ್ನು ಬೆಳಕಿಗೆ ತಂದಿದೆ. ವೀರ್ಯ ಮೋಸದ ಬಳಕೆಗೆ ಸಂಬಂಧಿಸಿದ ಆರೋಪಗಳನ್ನು 50ಕ್ಕೂ ಹೆಚ್ಚು ಯುಎಸ್ ಫಲವತ್ತತೆ ವೈದ್ಯರು ಎದುರಿಸುತ್ತಿದ್ದಾರೆ. ನೆಟ್ಫ್ಲಿಕ್ಸ್ ಸಾಕ್ಷ್ಯಚಿತ್ರವು ಇಂಡಿಯಾನಾ ಫಲವತ್ತತೆ ತಜ್ಞರೊಬ್ಬರು ಗರ್ಭಧಾರಣೆ ಚಿಕಿತ್ಸೆಗಳನ್ನು ಒದಗಿಸುವಾಗ ರಹಸ್ಯವಾಗಿ 94 ಕ್ಕೂ ಹೆಚ್ಚು ಮಕ್ಕಳಿಗೆ ತಂದೆಯಾಗಿದ್ದಾರೆ.

ಮಹತ್ವದ ಪ್ರಕರಣವೊಂದರಲ್ಲಿ, ಫಲವತ್ತತೆ ವೈದ್ಯರೊಬ್ಬರು ತಾಯಂದಿರನ್ನು ಗರ್ಭಧರಿಸಲು ತಮ್ಮ ಸ್ವಂತ ವೀರ್ಯವನ್ನು ಬಳಸಿದ್ದಾರೆ ಎಂದು ಆರೋಪಿಸಿದ ಮೂರು ಕುಟುಂಬಗಳಿಗೆ ಕೊಲೊರಾಡೊ ತೀರ್ಪುಗಾರರು ಸುಮಾರು 9 ಮಿಲಿಯನ್ ಡಾಲರ್ ಬಹುಮಾನ ನೀಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Para Badminton Ranking: ಮೊದಲ ಬಾರಿಗೆ ವಿಶ್ವ ನಂ.1 ಸ್ಥಾನಕ್ಕೇರಿದ ಕನ್ನಡಿಗ ಸುಹಾಸ್‌ ಯತಿರಾಜ್

Para Badminton Ranking: ಹೊಸದಾಗಿ ಪ್ರಕಟಗೊಂಡ ರ್‍ಯಾಂಕಿಂಗ್‌ ಪಟ್ಟಿಯಲ್ಲಿ ಸುಹಾಸ್‌ ಒಂದು ಸ್ಥಾನ ಏರಿಕೆ ಕಾಣುವ ಮೂಲಕ ಈ ಹಿಂದೆ ಅಗ್ರಸ್ಥಾನದಲ್ಲಿದ್ದ ಫ್ರಾನ್ಸ್‌ನ ಲುಕಾಸ್‌ ಮಜುರ್‌ರನ್ನು ಹಿಂದಿಕ್ಕಿದರು

VISTARANEWS.COM


on

Para Badminton Ranking
Koo

ನವದೆಹಲಿ: ಟೋಕಿಯೊ ಪ್ಯಾರಾ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತ, ಕನ್ನಡಿಗ ಸುಹಾಸ್ ಯತಿರಾಜ್(Suhas Lalinakere Yathiraj) ಅವರು ಪ್ಯಾರಾ ಬ್ಯಾಡ್ಮಿಂಟನ್‌ ಪುರುಷರ ಸಿಂಗಲ್ಸ್‌ನ(Para Badminton Ranking) ಎಸ್‌ಎಲ್‌4 ವಿಭಾಗದಲ್ಲಿ ವಿಶ್ವ ನಂ.1 ಸ್ಥಾನಕ್ಕೇರಿದ್ದಾರೆ. ಈ ಸಂತಸ ವಿಚಾರವನ್ನು ಸುಹಾಸ್(Suhas L Yathiraj) ತಮ್ಮ ಅಧಿಕೃತ ಟ್ವಿಟರ್​ ಎಕ್ಸ್​ನಲ್ಲಿ ಪೋಸ್ಟ್​ ಮಾಡುವ ಮೂಲಕ ಹಂಚಿಕೊಂಡಿದ್ದಾರೆ.

ಹೊಸದಾಗಿ ಪ್ರಕಟಗೊಂಡ ರ್‍ಯಾಂಕಿಂಗ್‌ ಪಟ್ಟಿಯಲ್ಲಿ ಸುಹಾಸ್‌ ಒಂದು ಸ್ಥಾನ ಏರಿಕೆ ಕಾಣುವ ಮೂಲಕ ಈ ಹಿಂದೆ ಅಗ್ರಸ್ಥಾನದಲ್ಲಿದ್ದ ಫ್ರಾನ್ಸ್‌ನ ಲುಕಾಸ್‌ ಮಜುರ್‌ರನ್ನು ಹಿಂದಿಕ್ಕಿದರು. ಸುಹಾಸ್​ ಇದೇ ವರ್ಷ ಥಾಯ್ಲೆಂಡ್‌ನಲ್ಲಿ ನಡೆದಿದ್ದ ಪ್ಯಾರಾ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದ ಜಯಿಸಿದ್ದರು. ಪ್ಯಾರಾ ಏಷ್ಯನ್‌ ಗೇಮ್ಸ್‌ನಲ್ಲಿ 2 ಬಾರಿ ಸ್ವರ್ಣ ಪದಕ ಗೆದ್ದಿರುವ ಅವರು ಮುಂದಿನ ತಿಂಗಳು ನಡೆಯುವ ಪ್ಯಾರಿಸ್‌ ಪ್ಯಾರಾಲಿಂಪಿಕ್ಸ್‌ನಲ್ಲಿ ಸ್ಪರ್ಧಿಸಲು ಸಿದ್ಧತೆ ನಡೆಸುತ್ತಿದ್ದಾರೆ.

“ಅಂತಿಮವಾಗಿ ವಿಶ್ವ ನಂಬರ್ 1… ಈ ವಿಚಾರವನ್ನು ಹಂಚಿಕೊಳ್ಳಲು ಸಂತೋಷವಾಗಿದೆ. ಪುರುಷರ ಸಿಂಗಲ್ಸ್ ವಿಭಾಗಕ್ಕೆ ಘೋಷಿಸಲಾದ ಇತ್ತೀಚಿನ ಬ್ಯಾಡ್ಮಿಂಟನ್ ವರ್ಲ್ಡ್ ಫೆಡರೇಶನ್ ಪ್ಯಾರಾ ಬ್ಯಾಡ್ಮಿಂಟನ್ ಶ್ರೇಯಾಂಕದಲ್ಲಿ, ನಾನು ವಿಶ್ವದ ಅಗ್ರ ಶ್ರೇಯಾಂಕವನ್ನು ಪಡೆದುಕೊಂಡಿದ್ದೇನೆ. ಜೀವನದಲ್ಲಿ ಮೊದಲ ಬಾರಿಗೆ ಈ ಸಾಧನೆ ಮಾಡಿ ಫ್ರಾನ್ಸ್‌ನ ಲೂಕಾಸ್ ಮಜೂರ್ ಅವರ ಸ್ಥಾನವನ್ನು ವಶಪಡಿಸಿಕೊಂಡಿರುವೆ. ನಿಮ್ಮ ಆಶೀರ್ವಾದ ಮತ್ತು ಹಾರೈಕೆ ಹೀಗೆ ಇರಲಿ. ಜೈ ಹಿಂದ್” ಎಂದು ಸುಹಾಸ್ ಯತಿರಾಜ್ ಟ್ವಿಟರ್​ ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ Spanish Para-Badminton: ಕಂಚಿನ ಪದಕ ವಿಜೇತ ಕನ್ನಡಿಗ ಸುಹಾಸ್ ಸ್ವದೇಶಕ್ಕೆ ಆಗಮನ

ಉತ್ತರ ಪ್ರದೇಶದ ಗೌತಮ್‌ ಬುದ್ಧ ನಗರದ ಜಿಲ್ಲಾಧಿಕಾರಿಯಾಗಿರುವ ಸುಹಾಸ್‌ ಹಾಸನ ಮೂಲದ ಐಎಎಸ್ ಅಧಿಕಾರಿಯಾಗಿದ್ದಾರೆ. ಎಸ್‌ಎಲ್‌4 ಬ್ಯಾಡ್ಮಿಂಟನ್‌ ವಿಭಾಗದಲ್ಲಿ ಅವರು ಟೋಕಿಯೊ ಪ್ಯಾರಾ ಒಲಿಂಪಿಕ್ಸ್ ಫೈನಲ್‌ನಲ್ಲಿ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ್ದರು. ಈ ಮೂಲಕ ಪ್ಯಾರಾಲಿಂಪಿಕ್ಸ್‌ ಪದಕ ಗೆದ್ದ ಮೊದಲ ಐಎಎಸ್‌ ಅಧಿಕಾರಿ ಎಂಬ ಹಿರಿಮೆಗೆ ಪಾತ್ರರಾಗಿದ್ದರು.

2007ರ ಬ್ಯಾಚ್‌ನ ಐಎಎಸ್‌ ಅಧಿಕಾರಿಯಾಗಿರುವ ಸುಹಾಸ್‌, ದುರ್ಬಲ ಕಾಲನ್ನು ಹೊಂದಿದ್ದಾರೆ. ಕಾಲಿನಲ್ಲಿ ತೀವ್ರ ಬಲಹೀನತೆಯಿದ್ದರೆ ಅಂತಹವರನ್ನು ಎಸ್‌ಎಲ್‌4 ವಿಭಾಗಕ್ಕೆ ಸೇರಿಸಲಾಗುತ್ತದೆ. ಇಂತಹ ಸಮಸ್ಯೆಗಳ ಮಧ್ಯೆಯೂ ಸುಹಾಸ್‌ ಐಎಎಸ್‌ ಅಧಿಕಾರಿಯಾಗಿದ್ದಾರೆ.

ಸುಹಾಸ್‌ ಅವರು ಹಿಂದೆಮ್ಮೊ ಸಂದರ್ಶನದಲ್ಲಿ ಮಾತನಾಡುವ ವೇಳೆ “ದೇಶವನ್ನು ಪ್ರತಿನಿಧಿಸುವುದು ಗೌರವದ ವಿಷಯ. ಅದರಲ್ಲೂ ದೇಶಕ್ಕಾಗಿ ಪದಕ ಗೆಲ್ಲುವುದು ತುಂಬಾ ಹೆಮ್ಮೆ ಮತ್ತು ಸಂತೋಷದ ಕ್ಷಣವಾಗಿರುತ್ತದೆ. ಯಾವಾಗಲೂ ಅತ್ಯುತ್ತಮ ಪ್ರದರ್ಶನಕ್ಕೆ ಪ್ರಯತ್ನ ನಡೆಸುತ್ತಿರುತ್ತೇನೆ” ಎಂದು ಹೇಳಿದ್ದರು. ಈ ಬಾರಿಯ ಒಲಿಂಪಿಕ್ಸ್​ನಲ್ಲಿ ಚಿನ್ನದ ಪದಕ ಜಯಿಸಲಿ ಎನ್ನುವುದು ಎಲ್ಲ ಕನ್ನಡಿಗರ ಆಶಯವಾಗಿದೆ.

Continue Reading

Latest

Viral Video: ಪೇಪರ್ ನೋಡದೆ ಪ್ರಮಾಣ ವಚನ ಸ್ವೀಕರಿಸಿ ಬೆರಗುಗೊಳಿಸಿದ ಅತ್ಯಂತ ಕಿರಿಯ ಸಂಸದೆ!

Viral Video: ಪ್ರಮಾಣ ವಚನ ಸ್ವೀಕರಿಸುವ ಸಮಯದಲ್ಲಿ ಹೆಚ್ಚಾಗಿ ಎಲ್ಲಾ ಮಂತ್ರಿಗಳು, ಸಂಸದರು ತಮ್ಮ ಮುಂದೆ ಪೇಪರ್ ಇಟ್ಟುಕೊಂಡು ಅದನ್ನು ನೋಡಿಕೊಂಡೇ ಪ್ರಮಾಣ ವಚನ ಸ್ವೀಕರಿಸುತ್ತಾರೆ. ಆದರೆ ಇಲ್ಲೊಬ್ಬರು ಸಂಸದೆ ಪೇಪರ್ ನೋಡದೇ ಎದುರಿಗಿದ್ದ ಸಭೆಯನ್ನು ನೋಡುತ್ತಾ ಪ್ರಮಾಣ ವಚನ ಸ್ವೀಕರಿಸಿದ್ದು ಎಲ್ಲೆಡೆ ವೈರಲ್ ಆಗಿದೆ. ಅಂದಹಾಗೇ, ಆ ಸಂಸದೇ ಮತ್ಯಾರು ಅಲ್ಲ 26 ವರ್ಷದ ಶಾಂಭವಿ ಚೌಧರಿ. ಇವರ ಬಗ್ಗೆ ಇನ್ನಷ್ಟು ಕುತೂಹಲಕಾರಿ ಮಾಹಿತಿಗಳು ಇಲ್ಲಿವೆ.

VISTARANEWS.COM


on

Viral Video
Koo

ನವದೆಹಲಿ : ಜನಪ್ರತಿನಿಧಿಗಳು ಸಾಮಾನ್ಯವಾಗಿ ಪೇಪರ್ ನೋಡಿಕೊಂಡೆ ಪ್ರಮಾಣ ವಚನ ಸ್ವೀಕರಿಸುತ್ತಾರೆ. ಆದರೆ ಅತ್ಯಂತ ಕಿರಿಯ ಸಂಸದೆ ಒಬ್ಬರು ಪೇಪರ್ ನೋಡದೆ ಪ್ರಮಾಣ ವಚನ ಸ್ವೀಕರಿಸಿದ್ದು, ಈ ಸುದ್ದಿ ವೈರಲ್ (Viral Video) ಆಗಿದೆ.

ಅತ್ಯಂತ ಕಿರಿಯ ಸಂಸದೆ ಎಂದು ಕರೆಸಿಕೊಂಡ ಶಾಂಭವಿ ಚೌಧರಿ ಅವರು ಪೇಪರ್ ನೋಡದೆ ತಮ್ಮ ಪ್ರಮಾಣ ವಚನವನ್ನು ಸ್ವೀಕರಿಸಿದ್ದಾರೆ. 26 ವರ್ಷ ವಯಸ್ಸಿನ ಇವರು ಸಂಸತ್ತಿನಲ್ಲಿ ಸಂಸದೆಯಾಗಿ ಹಿಂದಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಆಗಿದ್ದು, ಎಲ್ಲರೂ ಸಂಸದೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಿಡಿಯೊದಲ್ಲಿ ಶಾಂಭವಿಯವರು ಬಿಳಿ ಬಣ್ಣದ ಸೀರೆ ಧರಿಸಿ ಪೇಪರ್ ನೋಡದೆ ಸಭೆಯನ್ನು ನೋಡಿಕೊಂಡೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಲೋಕ ಸಭಾ ಚುನಾವಣೆಯಲ್ಲಿ ಚಿರಾಗ್ ಪಾಸ್ವಾನ್ ಅವರ ಲೋಕ ಜನಶಕ್ತಿ ಪಕ್ಷ(ಎಲ್ ಜೆಪಿ)ದ ಅಭ್ಯರ್ಥಿಯಾಗಿ ಬಿಹಾರದ ಸಮಸ್ತಿಪುರದಲ್ಲಿ ಸ್ಪರ್ಧಿಸಿ ಗೆದ್ದಿದ್ದಾರೆ. ಇವರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸನ್ನಿ ಹಜಾರಿ ಅವರನ್ನು 1,87,251 ಮತಗಳಿಂದ ಸೋಲಿಸಿದ್ದಾರೆ. ಆ ಮೂಲಕ ಇವರು ಸಮಸ್ತಿಪುರದ ಮೊದಲ ಮಹಿಳಾ ಸಂಸದೆ ಎನಿಸಿಕೊಂಡಿದ್ದಾರೆ.
ಶಾಂಭವಿ ಚೌಧರಿ ಅವರು ಜೆಡಿಯು ನಾಯಕರಾದ ಅಶೋಕ್ ಚೌಧರಿ ಅವರ ಪುತ್ರಿ. ಅಶೋಕ್ ಚೌಧರಿ ಅವರು ನಿತೀಶ್ ಕುಮಾರ್ ಅವರ ಕ್ಯಾಬಿನೆಟ್ ನಲ್ಲಿ ಅತ್ಯಂತ ಪ್ರಭಾವಶಾಲಿ ಮಂತ್ರಿಗಳಲ್ಲಿ ಒಬ್ಬರಾಗಿದ್ದರು. ಇವರು ಮೊದಲಿಗೆ ಕಾಂಗ್ರೆಸ್ ನಲ್ಲಿದ್ದು ನಂತರ ಜೆಡಿಯು ಪಕ್ಷಕ್ಕೆ ಸೇರಿಕೊಂಡರು. ಅಲ್ಲದೇ ಶಾಂಭವಿ ಚೌಧರಿ ಅವರ ಅಜ್ಜ ದಿ.ಮಹಾವೀರ್ ಚೌಧರಿ ಕೂಡ ಕಾಂಗ್ರೆಸ್ ಸದಸ್ಯರಾಗಿದ್ದರು. ಅವರು ರಾಜ್ಯ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು.

ಇದನ್ನೂ ಓದಿ: ಸಾನಿಯಾ ಮಿರ್ಜಾ ಗೊತ್ತು, ಆಕೆಯ ತಂಗಿ ಅನಮ್ ಮಿರ್ಜಾ ಗೊತ್ತಾ?

ಹಾಗಾಗಿ ಮೂರನೇ ತಲೆಮಾರಿನ ರಾಜಕಾರಣಿಯಾದ ಶಾಂಭವಿ ಅವರಿಗೆ ರಾಜಕೀಯ ವಿಚರದಲ್ಲಿ ಆಸಕ್ತಿ ಇತ್ತು ಎನ್ನಲಾಗಿದೆ. ಶಾಂಭವಿ ಅವರು ಪ್ರತಿಷ್ಠಿತ ದೆಹಲಿ ಸ್ಕೂಲ್ ಆಫ್ ಎಕನಾಮಿಕ್ಸ್ ನಿಂದ ‘ಮಾಸ್ಟರ್ಸ್ ಆಫ್ ಆರ್ಟ್ಸ್’ ಪದವಿ ಪಡೆದಿದ್ದಾರೆ. ಹಾಗೇ ಶಾಂಭವಿ ಅವರು ಮಾಜಿ ಐಪಿಎಸ್ ಅಧಿಕಾರಿ ಆಚಾರ್ಯ ಕಿಶೋರ್ ಕುನಾಲ್ ಅವರ ಮಗ ಸಾಯನ್ ಕುನಾಲ್ ಅವರನ್ನು ವಿವಾಹವಾಗಿದ್ದಾರೆ.

Continue Reading

Latest

Viral Video : ‘ಅಲ್ಲಾಹು ಅಕ್ಬರ್’ ಎನ್ನದ ಹಿಂದೂ ಬಾಲಕನಿಗೆ ಎಂಜಲು ನೆಕ್ಕಲು ಹೇಳಿದ ಮುಸ್ಲಿಂ ಯುವಕರು

Viral Video: ಧರ್ಮ ಧರ್ಮದ ನಡುವೆ ಸಾಮರಸ್ಯ ಬೆಳೆದರೆ ದೇಶ ಕೂಡ ಸುಭಿಕ್ಷವಾಗಿರುತ್ತದೆ. ಆದರೆ ಪದೇ ಪದೇ ಒಂದು ಧರ್ಮದವರು ಇನ್ನೊಂದು ಧರ್ಮದ ಮೇಲೆ ಕಿಡಿಕಾರುತ್ತಲೇ ಇರುತ್ತಾರೆ. ಇಂತಹದ್ದೊಂದು ಅಮಾನವೀಯ ಘಟನೆಯೊಂದು ಬಿಹಾರದ ಮೋತಿಪುರ್ ಪಟ್ಟಣದ ಬಟ್ರಾಲ್ ಗ್ರಾಮದಲ್ಲಿ ನಡೆದಿದೆ. ಮುಸ್ಲಿಂ ಯುವಕರ ಗುಂಪೊಂಡು 15 ವರ್ಷದ ಹಿಂದೂ ಬಾಲಕನ್ನು ಕೋಣೆಯೊಂದರಲ್ಲಿ ಬಂಧಿಸಿ ಹಲ್ಲೆ ಮಾಡಿದ್ದು ಅಲ್ಲದೇ, ‘ಅಲ್ಲಾಹು ಅಕ್ಬರ್’ ಮತ್ತು ‘ಮಿಯಾನ್ ಸಾಹೇಬ್ ಜಿಂದಾಬಾದ್’ ಎಂದು ಇಸ್ಲಾಮಿಕ್ ಧರ್ಮದ ಘೋಷಣೆ ಕೂಗುವಂತೆ ಒತ್ತಾಯಿಸಿದ್ದಾರೆ ಹಾಗೇ ಪಾದಕ್ಕೆ ಎಂಜಲು ಉಗುಳಿ ಅದನ್ನು ನೆಕ್ಕುವಂತೆ ಬಾಲಕನಿಗೆ ಹಿಂಸೆ ನೀಡಿದ್ದಾರೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

VISTARANEWS.COM


on

Viral Video
Koo

ಬಿಹಾರ : ಬಿಹಾರದ ಮೋತಿಪುರ್ ಪಟ್ಟಣದ ಬಟ್ರಾಲ್ ಗ್ರಾಮದಲ್ಲಿ ಹಿಂದೂ ಅಪ್ರಾಪ್ತ ಬಾಲಕನ್ನು ವಶಕ್ಕೆ ಪಡೆದ ಮುಸ್ಲಿಂ ಯುವಕರು ಅಮಾನವೀಯವಾಗಿ ಥಳಿಸಿದ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video ) ಆಗಿದೆ.

ವಿಡಿಯೊದಲ್ಲಿ 15 ವರ್ಷದ ಬಾಲಕನ್ನು ಕೋಣೆಯೊಂದರಲ್ಲಿ ಬಂಧಿಸಿ ಗೋಣಿ ಚೀಲದ ಮೇಲೆ ಕೂರಿಸಿ ಅದರಲ್ಲಿ ಒಬ್ಬ ದುಷ್ಕರ್ಮಿ ಕೋಲು ಹಿಡಿದು ಆತನ ಮೇಲೆ ಪದೇ ಪದೇ ಹಲ್ಲೆ ಮಾಡುತ್ತಿದ್ದಾನೆ. ಮತ್ತೊಬ್ಬ ‘ಅಲ್ಲಾಹು ಅಕ್ಬರ್’ ಮತ್ತು ‘ಮಿಯಾನ್ ಸಾಹೇಬ್ ಜಿಂದಾಬಾದ್’ ಎಂದು ಘೋಷಣೆ ಕೂಗುವಂತೆ ಒತ್ತಾಯಿಸುತ್ತಿರುವುದು ಕಂಡುಬಂದಿದೆ. ಹಾಗೇ ಅದರ ಜೊತೆಗೆ ದುಷ್ಕರ್ಮಿಗಳು ಅವರ ಪಾದಕ್ಕೆ ಎಂಜಲು ಉಗುಳಿ ಅದನ್ನು ನೆಕ್ಕುವಂತೆ ಬಾಲಕನಿಗೆ ಹಿಂಸೆ ನೀಡಿದ್ದಾರೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಪೊಲೀಸರು ಈ ಘಟನೆಯ ಬಗ್ಗೆ ಮಾಹಿತಿ ಪಡೆದು ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಮೊಹಮ್ಮದ್ ಮುನ್ನಾ ಮತ್ತು ಸಾಹಿಲ್ ಹಾಗೂ ಮತ್ತೊಬ್ಬ ವ್ಯಕ್ತಿಯ ಹೆಸರು ತಿಳಿದುಬಂದಿಲ್ಲ ಎನ್ನಲಾಗಿದೆ. ಆದರೆ ಉಳಿದವರು ತಲೆಮರೆಸಿಕೊಂಡಿದ್ದು, ಅವರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಈ ವಿಡಿಯೊವನ್ನು ಆರೋಪಿಗಳೇ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ಉದ್ವಿಗ್ಧ ಪರಿಸ್ಥಿತಿಗೆ ಕಾರಣವಾಗಿದೆ ಎನ್ನಲಾಗಿದೆ. ಈ ಬಗ್ಗೆ ವೀಕ್ಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸೋನಾಕ್ಷಿ ಸಿನ್ಹಾ ಮದುವೆ ಲವ್ ಜಿಹಾದ್?; ಶತ್ರುಘ್ನ ಸಿನ್ಹಾ ಹೇಳಿದ್ದೇನು?

ಈ ಬಗ್ಗೆ ಸಂತ್ರಸ್ತ ಬಾಲಕನ ತಂದೆ ದೂರು ದಾಖಲಿಸಿದ್ದಾರೆ. ಈ ಘಟನೆಯಲ್ಲಿ ಬಾಲಕನ ಕೈಗೆ ಪೆಟ್ಟಾಗಿದೆ ಎಂಬುದಾಗಿ ತಿಳಿದುಬಂದಿದೆ. ಬಿಹಾರದಲ್ಲಿ ಇಂತಹ ಘಟನೆಗಳು ಹೆಚ್ಚಾಗುತ್ತಿದೆ. ಹಾಗಾಗಿ ಕಾನೂನು ಸುವ್ಯವಸ್ಥೆ ಕಾಪಾಲು ಮತ್ತು ಪರಿಸ್ಥಿತಿಯನ್ನು ಹತೋಟಿಗೆ ತರಲು ಸ್ಥಳೀಯ ಅಧಿಕಾರಿಗಳು, ಪೊಲೀಸರು ಹೆಣಗಾಡುತ್ತಿದ್ದಾರೆ.

Continue Reading

ದೇಶ

Lok Sabha Speaker: ಎರಡನೇ ಬಾರಿಗೆ ಲೋಕಸಭೆ ಸ್ಪೀಕರ್‌ ಆಗಿ ಓಂ ಬಿರ್ಲಾ ಆಯ್ಕೆ

Lok Sabha Speaker: 18ನೇ ಲೋಕಸಭೆಯ ಸ್ಪೀಕರ್‌ ಯಾರಾಗುತ್ತಾರೆ ಎನ್ನುವ ಕುತೂಹಲಕ್ಕೆ ತೆರೆ ಬಿದ್ದಿದೆ. ಬಿಜೆಪಿ ಸಂಸದ ಓಂ ಬಿರ್ಲಾ ಅವರು ಸ್ಪೀಕರ್‌ ಆಗಿ ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ. ಇಂಡಿ ಬಣದಿಂದ ಕಾಂಗ್ರೆಸ್‌ ಸಂಸದ ಕೊಂಡಿಕುನಾಲ್ ಸುರೇಶ್ ಭಾರೀ ಕುತೂಹಲ ಮೂಡಿಸಿದ್ದ ಚುನಾವಣೆಯಲ್ಲಿ ಓಂ ಬಿರ್ಲಾ ಗೆಲುವಿನ ನಗೆ ಬೀರಿದ್ದಾರೆ.

VISTARANEWS.COM


on

Lok Sabha Speaker
Koo

ನವದೆಹಲಿ: 18ನೇ ಲೋಕಸಭೆಯ ಸ್ಪೀಕರ್‌ ಯಾರಾಗುತ್ತಾರೆ ಎನ್ನುವ ಕುತೂಹಲಕ್ಕೆ ತೆರೆ ಬಿದ್ದಿದೆ. ಎನ್‌ಡಿಎಯಿಂದ ಕಣಕ್ಕಿಳಿದ ಬಿಜೆಪಿ ಸಂಸದ ಓಂ ಬಿರ್ಲಾ (Om Birla) ಅವರು ಸ್ಪೀಕರ್‌ ಆಗಿ ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ (Lok Sabha Speaker). ಸಾಮಾನ್ಯವಾಗಿ ಅವಿರೋಧವಾಗಿ ಸ್ಪೀಕರ್‌ ಹುದ್ದೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆದರೆ ಈ ಬಾರಿ ಆಡಳಿತ ರೂಢ ಎನ್‌ಡಿಎ ಮತ್ತು ಪ್ರತಿಪಕ್ಷಗಳ ಇಂಡಿ ಬಣದ ನಡುವೆ ಒಮ್ಮತ ಮೂಡದ ಹಿನ್ನೆಲೆಯಲ್ಲಿ ಹಲವು ದಶಕಗಳ ಬಳಿಕ ಚುನಾವಣೆ ನಡೆಸಲಾಯಿತು. ಇಂಡಿ ಬಣದಿಂದ ಕಾಂಗ್ರೆಸ್‌ ಸಂಸದ ಕೊಂಡಿಕುನಾಲ್ ಸುರೇಶ್ (Kondikunal Suresh) ಕಣಕ್ಕಿಳಿದಿದ್ದರು. ಭಾರೀ ಕುತೂಹಲ ಮೂಡಿಸಿದ್ದ ಈ ಐತಿಹಾಸಿಕ ಚುನಾವಣೆಯಲ್ಲಿ ಇದೀಗ ಓಂ ಬಿರ್ಲಾ ಗೆಲುವಿನ ನಗೆ ಬೀರಿದ್ದಾರೆ.

ಬೆಳಿಗ್ಗೆ 11 ಗಂಟೆಗೆ ಸುಮಾರಿಗೆ ಆರಂಭವಾದ ಚುನಾವಣಾ ಪ್ರಕ್ರಿಯೆಯಲ್ಲಿ ಓಂ ಬಿರ್ಲಾ ಅವರು ಬಹುಮತಗಳನ್ನು ಪಡೆದುಕೊಂಡರು. ಓಂ ಬಿರ್ಲಾ ಅವರನ್ನು ಸ್ಪೀಕರ್‌ ಆಗಿ ಆಯ್ಕೆ ಮಾಡುವ ಪ್ರಸ್ತಾಪವನ್ನು ಪ್ರಧಾನಿ ನರೇಂದ್ರ ಮೋದಿ ಮಂಡಿಸಿದರು. ಬಳಿಕ ಹಲವು ನಾಯಕರು ಅನುಮೋದಿಸಿದರು. ಧ್ವನಿ ಮತದ ಮೂಲಕ ಸದಸ್ಯರು ಮತ ಚಲಾಯಿಸಿದರು. ಈ ಮೂಲಕ ಓಂ ಬಿರ್ಲಾ ಅವರು ಬಲರಾಮ್ ಜಖರ್ (1980-89) ನಂತರ ಎರಡು ಪೂರ್ಣ ಅವಧಿಗೆ ಆಯ್ಕೆಯಾದ ಎರಡನೇ ಸ್ಪೀಕರ್ ಎನ್ನುವ ಹೆಗ್ಗಳಿಕೆಗೆ ಪಾತ್ರರಾದರು. ಲೋಕಸಭೆಯ ಎರಡನೇ ಸ್ಪೀಕರ್ ಎಂ.ಎ.ಅಯ್ಯಂಗಾರ್ ಮತ್ತು ಗುರ್ದಿಯಾಲ್ ಸಿಂಗ್ ಧಿಲ್ಲಾನ್ ಈ ಹಿಂದೆ ಎರಡು ಬಾರಿ ಈ ಹುದ್ದೆಯನ್ನು ಆಯ್ಕೆಯಾಗಿದ್ದರೂ ಅವರ ಎರಡನೇ ಅವಧಿ ಒಂದೂವರೆ ವರ್ಷಕ್ಕಿಂತ ಹೆಚ್ಚು ಕಾಲ ಉಳಿದಿರಲಿಲ್ಲ. ಹಂಗಾಮಿ ಸ್ಪೀಕರ್‌ ಭಾರ್ತೃಹರಿ ಮಹತಾಬ್‌ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು.

ವಿಪ್‌ ಜಾರಿ

ಆರಂಭದಲ್ಲಿ ಎನ್‌ಡಿಎ ಪ್ರತಿಪಕ್ಷಗಳ ಮನವೊಲಿಸಲು ಯತ್ನಿಸಿತ್ತು. ಓಂ ಬಿರ್ಲಾ ಅವರನ್ನು ಬೆಂಬಲಿಸಲು ಒಪ್ಪಿಗೆ ಸೂಚಿಸಿದ್ದ ಇಂಡಿ ಬಣ ಡೆಪ್ಯುಟಿ ಸ್ಪೀಕರ್ ತಮಗೆ ಸಿಗಬೇಕೆಂಬ ಷರತ್ತು ವಿಧಿಸಿತ್ತು. ಆದರೆ ಇದಕ್ಕೆ ಎನ್‌ಡಿಎ ಒಪ್ಪಿಗೆ ಸೂಚಿಸದ ಹಿನ್ನೆಲೆಯಲ್ಲಿ ಮಾತುಕತೆ ಮುರಿದು ಬಿದ್ದು ಕೊನೆಯ ಕ್ಷಣದಲ್ಲಿ ಕೊಂಡಿಕುನಾಲ್ ಸುರೇಶ್ ಮಂಗಳವಾರ ನಾಮಪತ್ರ ಸಲ್ಲಿಸಿದ್ದರು. ಬಿಜೆಪಿ ಮತ್ತು ಕಾಂಗ್ರೆಸ್‌ ಎಲ್ಲ ಸದಸ್ಯರಿಗೆ ಹಾಜರಾಗುವಂತೆ ಮಂಗಳವಾರ ವಿಪ್‌ ಜಾರಿ ಮಾಡಿದ್ದವು.

ಕೊನೆ ಕ್ಷಣದಲ್ಲಿ ಸುರೇಶ್‌ಗೆ ಬೆಂಬಲ ಸೂಚಿಸಿದ ಟಿಎಂಸಿ

ಇಂಡಿ ಬಣ ಅಭ್ಯರ್ಥಿಯಾಗಿ ಕೆ.ಸುರೇಶ್ ಅವರನ್ನು ಆಯ್ಕೆ ಮಾಡುವ ಮುನ್ನ ತಮ್ಮ ಬಳಿ ಸಮಾಲೋಚನೆಯನ್ನೇ ನಡೆಸಿಲ್ಲ ಎಂದು ಟಿಎಂಸಿ ಮಂಗಳವಾರ ಆರೋಪಿಸಿತ್ತು. ಕೆ. ಸುರೇಶ್ ಅವರನ್ನು ಇಂಡಿ ಬಣ ಜಂಟಿ ನಾಮನಿರ್ದೇಶಿತ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಪ್ರತಿಪಕ್ಷಗಳ ನಿರ್ಧಾರದ ಬಗ್ಗೆ ನಮ್ಮ ಪಕ್ಷದ ನಾಯಕರ ಬಳಿ ಸಮಾಲೋಚನೆ ನಡೆಸಿಲ್ಲ. ದುರದೃಷ್ಟವಶಾತ್ ಇದು ಏಕಪಕ್ಷೀಯ ನಿರ್ಧಾರ ಎಂದು ಟಿಎಂಸಿ ಹೇಳಿ ಇಂಡಿ ಬಣವನ್ನು ಆತಂಕಕ್ಕೆ ದೂಡಿತ್ತು. ಆದರೆ ಕೊನೆಕ್ಷಣದಲ್ಲಿ ಟಿಎಂಸಿ ಸದಸ್ಯರು ಸುರೇಶ್‌ ಅವರಿಗೆ ಬೆಂಬಲ ಸೂಚಿಸಿದರು.

ಇದನ್ನೂ ಓದಿ: Lok Sabha Speaker Election: ಲೋಕಸಭೆ ಇತಿಹಾಸದಲ್ಲೇ ಮೊದಲ ಬಾರಿ ಸ್ಪೀಕರ್‌ ಹುದ್ದೆಗೆ ನಡೆಯಲಿದೆ ಚುನಾವಣೆ

ಏಳು ಸಂಸದರು ಇನ್ನೂ ಪ್ರಮಾಣ ವಚನ ಸ್ವೀಕರಿಸಿಲ್ಲ ಮತ್ತು ಕೇರಳದ ವಯನಾಡು ಸ್ಥಾನಕ್ಕೆ ರಾಹುಲ್‌ ಗಾಂಧಿ ರಾಜೀನಾಮೆ ನೀಡಿದ ಕಾರಣ 535 ಸಂಸದರು ಇಂದು ಮತ ಚಲಾಯಿಸಿದ್ದರು. ಹೀಗಾಗಿ ಬಹುಮತಕ್ಕೆ 268 ಸದಸ್ಯರ ಬೆಂಬಲ ಅಗತ್ಯವಿತ್ತು. ಓಂ ಬಿರ್ಲಾ ಅವರಿಗೆ ಎನ್‌ಡಿಎ ಜತೆಗೆ ವೈಎಸ್ಆರ್ ಕಾಂಗ್ರೆಸ್ ಪಕ್ಷ, ಇತರರು ಬೆಂಬಲ ಸೂಚಿಸಿದ್ದರಿಂದ ಸುಲಭವಾಗಿ 300ಕ್ಕೆಂತ ಹೆಚ್ಚು ಮತ ಪಡೆದುಕೊಂಡರು.

Continue Reading
Advertisement
Para Badminton Ranking
ಕ್ರೀಡೆ4 mins ago

Para Badminton Ranking: ಮೊದಲ ಬಾರಿಗೆ ವಿಶ್ವ ನಂ.1 ಸ್ಥಾನಕ್ಕೇರಿದ ಕನ್ನಡಿಗ ಸುಹಾಸ್‌ ಯತಿರಾಜ್

Actor Darshan Renukaswamy assault police lathi found How did D Gang get
ಕ್ರೈಂ11 mins ago

Actor Darshan: ರೇಣುಕಾಸ್ವಾಮಿ ಹಲ್ಲೆಗೆ ಬಳಸಿದ್ದ ʻಪೊಲೀಸ್ ಲಾಠಿʼ ಪತ್ತೆ! ʻಡಿ ಗ್ಯಾಂಗ್‌ʼಗೆ ಸಿಕ್ಕಿದ್ದು ಹೇಗೆ?

IRCTC
ದೇಶ33 mins ago

IRCTC: ಆನ್‌ಲೈನ್‌ನಲ್ಲಿ ರೈಲ್ವೇ ಟಿಕೆಟ್‌ ಬುಕ್ಕಿಂಗ್‌ ಮಾಡೋ ಮುನ್ನ ಹೊಸ ನಿಯಮದ ಬಗ್ಗೆ ಇರಲಿ ಗಮನ!

1983 World Cup
ಕ್ರೀಡೆ37 mins ago

1983 WC Win Anniversary: ಚೊಚ್ಚಲ ಏಕದಿನ ವಿಶ್ವಕಪ್ ಗೆಲುವಿನ​ ಸವಿ ನೆನಪನ್ನು ವಿಂಡೀಸ್​ನಲ್ಲಿ ಕೇಕ್​ ಕತ್ತರಿಸಿ ಸಂಭ್ರಮಿಸಿದ ರವಿಶಾಸ್ತ್ರಿ, ಗವಾಸ್ಕರ್, ​ಬಿನ್ನಿ

Viral Video
Latest38 mins ago

Viral Video: ಪೇಪರ್ ನೋಡದೆ ಪ್ರಮಾಣ ವಚನ ಸ್ವೀಕರಿಸಿ ಬೆರಗುಗೊಳಿಸಿದ ಅತ್ಯಂತ ಕಿರಿಯ ಸಂಸದೆ!

cm siddaramaiah water price hike
ಕರ್ನಾಟಕ43 mins ago

CM Siddaramaiah: ತೈಲ, ಹಾಲು ಆಯ್ತು; ಮುಂದಿನ ಸರದಿಯಲ್ಲಿ ನೀರು, ಆಟೋ, ಬಸ್‌ ಟಿಕೆಟ್‌ ದರ ಏರಿಕೆ ಗ್ಯಾರಂಟಿ

Neha Gowda in saree with baby bump
ಸ್ಯಾಂಡಲ್ ವುಡ್44 mins ago

Neha Gowda: ಸೀರೆಯುಟ್ಟು ಸಿಂಪಲ್‌ ಆಗಿ ಗಂಡನ ಜತೆ ಪೋಸ್‌ ಕೊಟ್ಟ ಗರ್ಭಿಣಿ ನೇಹಾ ಗೌಡ!

Viral Video
Latest45 mins ago

Viral Video : ‘ಅಲ್ಲಾಹು ಅಕ್ಬರ್’ ಎನ್ನದ ಹಿಂದೂ ಬಾಲಕನಿಗೆ ಎಂಜಲು ನೆಕ್ಕಲು ಹೇಳಿದ ಮುಸ್ಲಿಂ ಯುವಕರು

Lok Sabha Speaker
ದೇಶ46 mins ago

Lok Sabha Speaker: ಎರಡನೇ ಬಾರಿಗೆ ಲೋಕಸಭೆ ಸ್ಪೀಕರ್‌ ಆಗಿ ಓಂ ಬಿರ್ಲಾ ಆಯ್ಕೆ

Kaagada movie released on 5th July
ಕರ್ನಾಟಕ50 mins ago

Kannada New Movie: ಟ್ರೇಲರ್ ಮೂಲಕ ಸದ್ದು ಮಾಡುತ್ತಿರುವ “ಕಾಗದ” ಜುಲೈ 5ರಂದು ತೆರೆಗೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌