Donald Trump: ನೀಲಿ ಚಿತ್ರ ತಾರೆಗೆ ಹಣ ನೀಡಿದ ಕೇಸ್​; ಬಂಧನವಾಗಿ ಕೆಲವೇ ಕ್ಷಣದಲ್ಲಿ ಬಿಡುಗಡೆಯಾದ ಡೊನಾಲ್ಡ್​ ಟ್ರಂಪ್​ - Vistara News

ವಿದೇಶ

Donald Trump: ನೀಲಿ ಚಿತ್ರ ತಾರೆಗೆ ಹಣ ನೀಡಿದ ಕೇಸ್​; ಬಂಧನವಾಗಿ ಕೆಲವೇ ಕ್ಷಣದಲ್ಲಿ ಬಿಡುಗಡೆಯಾದ ಡೊನಾಲ್ಡ್​ ಟ್ರಂಪ್​

ಡೊನಾಲ್ಡ್​ ಟ್ರಂಪ್​ ಅವರು 2006ರಲ್ಲಿ ಸ್ಟಾರ್ಮಿ ಡೇನಿಯಲ್ಸ್​ ಎಂಬ ನೀಲಿ ಚಿತ್ರತಾರೆಯನ್ನು ಮೊದಲ ಬಾರಿಗೆ ಭೇಟಿಯಾಗಿದ್ದರು. ನಂತರ ಆಕೆಯೊಂದಿಗೆ ಲೈಂಗಿಕ ಸಂಪರ್ಕ ಹೊಂದಿದ್ದರು. ಆದರೆ 2016ರ ಅಮೆರಿಕ ಅಧ್ಯಕ್ಷೀಯ ಚುನಾವಣೆ ವೇಳೆ, ತಮ್ಮ ಗುಟ್ಟು ರಟ್ಟಾಗದಿರಲಿ ಎಂದು ಹಣ ನೀಡಿದ್ದರು.

VISTARANEWS.COM


on

Donald Trump Arrested in Hush Money Case And Released
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

2016ರ ಅಮೆರಿಕ ಅಧ್ಯಕ್ಷೀಯ ಚುನಾವಣೆ ಹೊತ್ತಲ್ಲಿ, ನೀಲಿ ಚಿತ್ರತಾರೆಗೆ ಗುಟ್ಟಾಗಿ ಹಣ ಸಂದಾಯ ಮಾಡಿದ್ದ ಆರೋಪದಡಿ ಮಂಗಳವಾರ ಬಂಧನವಾಗಿದ್ದ ಯುಎಸ್​ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump)​ ಕೆಲವೇ ಹೊತ್ತಲ್ಲಿ ಬಿಡುಗಡೆಯಾದರು. ಲೋವರ್ ಮ್ಯಾನ್‌ಹ್ಯಾಟನ್‌ನಲ್ಲಿರುವ ನ್ಯೂಯಾರ್ಕ್ ನ್ಯಾಯಾಲಯದಲ್ಲಿ ಟ್ರಂಪ್​ ವಿಚಾರಣೆ ನಡೆದಿತ್ತು. ಅವರ ವಿಚಾರಣೆ ಸಂದರ್ಭದಲ್ಲಿ ಕೋರ್ಟ್​ ಸುತ್ತ, ಒಳಗೆ ಎಲ್ಲ ಕಡೆ ಬಿಗಿ ಭದ್ರತೆ ಕಲ್ಪಿಸಲಾಗಿತ್ತು. ಹೀಗೆ ಒಂದು ಕ್ರಿಮಿನಲ್ ಕೇಸ್​​ಗೆ ಗುರಿಯಾಗಿ, ವಿಚಾರಣೆ ಎದುರಿಸಿದ ಅಮೆರಿಕದ ಮೊದಲ ಮಾಜಿ ಅಧ್ಯಕ್ಷ ಎಂದಬ ಕುಖ್ಯಾತಿ ಟ್ರಂಪ್​​ರದ್ದರು.

ಡೊನಾಲ್ಡ್​ ಟ್ರಂಪ್​ ಅವರು 2006ರಲ್ಲಿ ಸ್ಟಾರ್ಮಿ ಡೇನಿಯಲ್ಸ್​ ಎಂಬ ನೀಲಿ ಚಿತ್ರತಾರೆಯನ್ನು ಮೊದಲ ಬಾರಿಗೆ ಭೇಟಿಯಾಗಿದ್ದರು. ನಂತರ ಆಕೆಯೊಂದಿಗೆ ಲೈಂಗಿಕ ಸಂಪರ್ಕ ಹೊಂದಿದ್ದರು. ಆದರೆ 2016ರ ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅವರು, ತಾವು ಸ್ಟಾರ್ಮಿ ಜತೆ ಹೊಂದಿದ್ದ ಸಂಬಂಧ ಬಹಿರಂಗವಾಗದೆ ಇರಲಿ ಎಂಬ ಕಾರಣಕ್ಕೆ ಅವರಿಗೆ ಹಣ ನೀಡಿದ್ದರು. ವಿವಿಧ ಆಯಾಮಗಳ ತನಿಖೆಯ ಬಳಿಕ, ನ್ಯೂಯಾರ್ಕ್ ಗ್ರ್ಯಾಂಡ್ ಜ್ಯೂರಿ ಟ್ರಂಪ್​ ವಿರುದ್ಧ ಕ್ರಿಮಿನಲ್ ದೋಷಾರೋಪ ಹೊರೆಸಿತ್ತು. ಇದೆಲ್ಲ ನನ್ನ ವಿರುದ್ಧದ ರಾಜಕೀಯ ಹುನ್ನಾರ ಎಂದು ಡೊನಾಲ್ಡ್ ಟ್ರಂಪ್​ ಹೇಳಿದ್ದರು. ತನ್ಮಧ್ಯೆ ಏಪ್ರಿಲ್​ 4ಕ್ಕೆ ವಿಚಾರಣೆಗೆ ಹಾಜರಾಗಿದ್ದರು.

ಇದನ್ನೂ ಓದಿ: Donald Trump: ನೀಲಿ ಚಿತ್ರತಾರೆಗೆ ಹಣ ಪಾವತಿ; ಯುಎಸ್​ ಮಾಜಿ ಅಧ್ಯಕ್ಷ ಡೊ​ನಾಲ್ಡ್​ ಟ್ರಂಪ್​ ವಿರುದ್ಧ ಕ್ರಿಮಿನಲ್​ ಆರೋಪ​

ನ್ಯಾಯಾಲಯಕ್ಕೆ ಬರುತ್ತಿದ್ದಂತೆ ಅವರನ್ನು ಪೊಲೀಸರು ಬಂಧಿಸಿದರು. ಡೊನಾಲ್ಡ್ ಟ್ರಂಪ್​ ಬೆಂಬಲಿಗರು ದೊಡ್ಡಮಟ್ಟದ ಪ್ರತಿಭಟನಾ ಮೆರವಣಿಗೆಯನ್ನೂ ಹಮ್ಮಿಕೊಂಡಿದ್ದರು. ಸುಮಾರು 1 ತಾಸು ವಿಚಾರಣೆ ನಡೆಸಿದ ಬಳಿಕ ಡೊನಾಲ್ಡ್ ಟ್ರಂಪ್​​ರನ್ನು ಬಿಡುಗಡೆ ಮಾಡಲಾಗಿದೆ. ಅವರು ಕೋರ್ಟ್​​ನಿಂದ ನೇರವಾಗಿ ತಮ್ಮ ಕಾರು ಹತ್ತಿದರು. ಅಲ್ಲಿಂದ ಏರ್​ಪೋರ್ಟ್​ಗೆ ಹೋಗಿ, ಮತ್ತಲ್ಲಿಂದ ಲಾ ಗಾರ್ಡಿಯಾ ವಿಮಾನ ನಿಲ್ದಾಣಕ್ಕೆ ತೆರಳಿ, ಅಲ್ಲಿದ್ದ ತಮ್ಮ ಖಾಸಗಿ ಜೆಟ್​ ಹತ್ತಿ ಫ್ಲೋರಿಡಾದ ಪಾಮ್ ಬೀಚ್‌ನಲ್ಲಿರುವ ತಮ್ಮ ಮನೆ ಮಾರ್-ಎ-ಲಾಗೊಗೆ ತೆರಳಿದ್ದಾರೆ. ಮೊದಲ ಹಂತದ ವಿಚಾರಣೆಯಲ್ಲಿ ಅವರ ಮೇಲಿನ ಆರೋಪ ಸಾಬೀತಾಗದ ಹಿನ್ನೆಲೆಯಲ್ಲಿ ಟ್ರಂಪ್​ರನ್ನು ಬಿಟ್ಟುಕಳಿಸಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

Indian origin man: ಅಮೆರಿಕದಲ್ಲಿ ಮತ್ತೋರ್ವ ಭಾರತೀಯನ ಹತ್ಯೆ; ಪೊಲೀಸರ ಗುಂಡೇಟಿಗೆ ವ್ಯಕ್ತಿ ಬಲಿ

Indian origin man: ಪೊಲೀಸರ ಮೇಲೆ ಕಾರು ಹರಿಸಿದ ಉತ್ತರಪ್ರದೇಶ ಮೂಲದ ಸಚಿನ್‌ ಸಾಹೂ ಎಂಬಾತ ನ್ಯೂಯಾರ್ಕ್‌ನ ಪೊಲೀಸರು ಗುಂಡೇಟಿಗೆ ಬಲಿಯಾಗಿದ್ದಾನೆ. ಹಲ್ಲೆ ಪ್ರಕರಣದಲ್ಲಿ ಪೊಲೀಸರಿಗೆ ಬೇಕಾಗಿದ್ದ ಈತನನ್ನು ಬಂಧಿಸಲು ಮುಂದಾದಾಗ ಈ ಘಟನೆ ನಡೆದಿದೆ.

VISTARANEWS.COM


on

By

Koo

ನ್ಯೂಯಾರ್ಕ್‌: ಹಲ್ಲೆ ಪ್ರಕರಣದಲ್ಲಿ ಪೊಲೀಸರು ಹುಡುಕಾಟ ನಡೆಸುತ್ತಿದ್ದ ಭಾರತೀಯ ಮೂಲದ ವ್ಯಕ್ತಿ (Indian origin man) ನ್ಯೂಯಾರ್ಕ್‌ನ ಸ್ಯಾನ್‌ ಆಂಟೋನಿಯೋ (San Antonio)  ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ. 42 ವರ್ಷದ ಸಚಿನ್‌ ಸಾಹೂ (Sachin Sahoo) ಎಂಬಾತ ಏ.21ರಂದು ಪೊಲೀಸ್‌ ಅಧಿಕಾರಿಗಳ ಗುಂಡೇಟಿ (Shot Dead) ಗೆ ಬಲಿಯಾಗಿದ್ದಾನೆ. ಮೂಲತಃ ಉತ್ತರಪ್ರದೇಶದವನಾಗಿರುವ ಸಾಹೂ ಅಮೆರಿಕದ ಪೌರತ್ವ (US citizenship) ಪಡೆದು ಅಲ್ಲೇ ವಾಸವಾಗಿದ್ದ ಎನ್ನಲಾಗಿದೆ.

ಪೊಲೀಸ್‌ ಪ್ರಾಥಮಿಕ ತನಿಖೆ ವರದಿ ಪ್ರಕಾರ, ಏ.21, ಸಂಜೆ 6.30ರ ವೇಳೆ ಸ್ಯಾನ್‌ ಆಂಟೋನಿಯೋದಲ್ಲಿ ಯಾವುದೋ ಒಂದು ಮನೆಯಲ್ಲಿ ಮಾರಣಾಂತಿಕ ಹಲ್ಲೆ ಪ್ರಕರಣದ ತನಿಖೆಗೆಂದು ಪೊಲೀಸರು ತೆರಳಿದ್ದಾಗ ವಾಹನ ಡಿಕ್ಕಿಯಾಗಿ 51 ಮಹಿಳೆ ಗಂಭೀರವಾಗಿ ಗಾಯಗೊಂಡಿರುವುದು ಕಂಡು ಬಂದಿತ್ತು. ಈ ಅಪಘಾತವನ್ನು ಸಾಹೂ ಉದ್ದೇಶಪೂರ್ವಕವಾಗಿ ಮಾಡಿದ್ದ ಹಾಗೂ ಪೊಲೀಸರನ್ನು ಕಂಡ ಕೂಡಲೇ ಸ್ಥಳದಿಂದ ಪರಾರಿಯಾಗಿದ್ದ. ತಕ್ಷಣ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ ಪೊಲೀಸರು ಸಾಹೂ ಹುಡುಕಾಟಕ್ಕೆ ಮುಂದಾದರು.

ಈ ಪ್ರಕರಣದಲ್ಲಿ ಸ್ಯಾನ್‌ ಆಂಟೋನಿಯೋ ಪೊಲೀಸರು ಸಾಹೂ ವಿರುದ್ಧ ಅರೆಸ್ಟ್‌ ವಾರೆಂಟ್‌ ಜಾರಿಗೊಳಿಸಿದ್ದರು. ಸುಮಾರು ಗಂಟೆಗಳ ಬಳಿಕ ಸಾಹೂ ತನ್ನ ಮನೆಗೆ ಮರಳಿರುವ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸ್‌ ಅಧಿಕಾರಿಗಳು ಸಾಹೂವನ್ನು ಹಿಡಿಯಲು ಬರುತ್ತಿದ್ದಂತೆ ಆತ ತನ್ನ ಕಾರಿನಲ್ಲಿ ಪರಾರಿಯಾಗಲು ಯತ್ನಿಸಿದ್ದ. ಆಗ ಕಾರನ್ನು ತಡೆಯಲು ಯತ್ನಿಸಿದ ಪೊಲೀಸರಿಗೆ ಡಿಕ್ಕಿ ಹೊಡೆದಿದ್ದಾನೆ. ತಮ್ಮ ಪ್ರಾಣ ರಕ್ಷಣೆಗೆ ಮುಂದಾದ ಪೊಲೀಸರು ಸಾಹೂ ಮೇಲೆ ಗುಂಡು ಹಾರಿಸಿದ್ದಾರೆ. ಗುಂಡು ತಗುಲುತ್ತಿದ್ದಂತೆ ಸಾಹೂ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಮತ್ತೊಂದೆಡೆ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪೊಲೀಸ್‌ ಅಧಿಕಾರಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್‌ ಹಿರಿಯ ಅಧಿಕಾರಿ ಬಿಲ್‌ ಮ್ಯಾಕ್‌ ಮ್ಯಾನಸ್‌ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: China Road: ಕಾಶ್ಮೀರ ಗಡಿಯಲ್ಲಿ ರಸ್ತೆ ನಿರ್ಮಿಸಿ ಚೀನಾ ಮತ್ತೆ ಉದ್ಧಟತನ; ಇಲ್ಲಿವೆ ಸ್ಯಾಟಲೈಟ್‌ ಚಿತ್ರಗಳು

ಇನ್ನು ಸಾಹೂ ಕಾರಿನಲ್ಲಿ ಡಿಕ್ಕಿ ಹೊಡೆದಿದ್ದ ಮಹಿಳೆ ಆತನ ರೂಮೇಟ್‌ ಆಗಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ. ಈಗಾಗಲೇ ಹಲವು ಆಪರೇಷನ್‌ಗಳನ್ನು ಮಾಡಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಮತ್ತೊಂದೆಡೆ ಘಟನೆ ಬಗ್ಗೆ ವರದಿಯಾಗುತ್ತಿದ್ದಂತೆ ಸಾಹೂ ಮಾಜಿ ಪತ್ನಿ ಲೀ ಗೋಲ್ಡ್‌ಸ್ಟೀನ್‌ ಪ್ರತಿಕ್ರಿಯಿಸಿದ್ದು, ಸಾಹೂ ಸುಮಾರು 10 ವರ್ಷಗಳಿಂದ ಮಾನಸಿಕ ಖಿನ್ನತೆಗೊಳಗಾಗಿದ್ದ. ಕೆಲವೊಮ್ಮೆ ತಾನು ಏನು ಮಾಡುತ್ತಿದ್ದೇನೆ ಎಂಬುದೇ ಆತನಿಗೆ ಅರಿವಿರಲಿಲ್ಲ. ಹೀಗಾಗಿಯೇ ನಾವು ಬೇರೆಯಾಗಿದ್ದೇವೆ ಎಂದು ಹೇಳಿದ್ದಾರೆ. ಇನ್ನು ಘಟನೆ ಬಗ್ಗೆ ಮತ್ತಷ್ಟು ಮಾಹಿತಿ ಸಂಗ್ರಹಿಸಲು ಪೊಲೀಸ್‌ ಬಾಡಿ ಕ್ಯಾಮ್‌ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ.

Continue Reading

ದೇಶ

China Road: ಕಾಶ್ಮೀರ ಗಡಿಯಲ್ಲಿ ರಸ್ತೆ ನಿರ್ಮಿಸಿ ಚೀನಾ ಮತ್ತೆ ಉದ್ಧಟತನ; ಇಲ್ಲಿವೆ ಸ್ಯಾಟಲೈಟ್‌ ಚಿತ್ರಗಳು

China Road: ವಿಶ್ವದಲ್ಲೇ ಅತಿ ಎತ್ತರದ ಯುದ್ಧಭೂಮಿ ಎನಿಸಿರುವ ಸಿಯಾಚಿನ್‌ ಹಿಮಪ್ರದೇಶದ ಬಳಿಯೇ ಚೀನಾ ರಸ್ತೆ ನಿರ್ಮಿಸಿರುವ ಸ್ಯಾಟಲೈಟ್‌ ಫೋಟೊಗಳು ಲಭ್ಯವಾಗಿವೆ. ಕಳೆದ ವರ್ಷದ ಜೂನ್‌ ಹಾಗೂ ಆಗಸ್ಟ್‌ ಅವಧಿಯಲ್ಲಿ ಚೀನಾ ರಸ್ತೆ ನಿರ್ಮಾಣ ಆರಂಭಿಸಿದ್ದು, ಇದರ ಚಿತ್ರಗಳನ್ನು ಯುರೋಪಿಯನ್‌ ಸ್ಪೇಸ್‌ ಏಜೆನ್ಸಿ ಬಿಡುಗಡೆ ಮಾಡಿದೆ. ಚೀನಾ ರಸ್ತೆ ನಿರ್ಮಿಸಿದ ಚಿತ್ರಗಳು ಸ್ಪಷ್ಟವಾಗಿ ಕಾಣುತ್ತಿವೆ.

VISTARANEWS.COM


on

China Road
Koo

ನವದೆಹಲಿ: ಕಾಶ್ಮೀರದ ಲಡಾಕ್‌ ಬಳಿಯ ವಾಸ್ತವ ನಿಯಂತ್ರಣ ರೇಖೆ (LoC) ಬಳಿ ಹೆಚ್ಚುವರಿಯಾಗಿ ಸೈನಿಕರನ್ನು ನಿಯೋಜಿಸಿ ಬಿಕ್ಕಟ್ಟು ಸೃಷ್ಟಿಸಿದ್ದ ಚೀನಾ ಈಗ ಮತ್ತೊಂದು ಉದ್ಧಟತನ ತೋರಿದೆ. ಹೌದು, ಪಾಕ್‌ ಆಕ್ರಮಿತ ಕಾಶ್ಮೀರದ (Pak Occupied Kashmir) ಬಳಿ ನೂತನವಾಗಿ ರಸ್ತೆ ನಿರ್ಮಿಸುವ (China Road) ಮೂಲಕ ಚೀನಾ ಗಡಿ ನಿಯಮಗಳನ್ನು ಗಾಳಿಗೆ ತೂರಿದೆ. ಇದು ಭಾರತದ ಜತೆ ಮತ್ತೊಂದು ಬಿಕ್ಕಟ್ಟು ಸೃಷ್ಟಿಸುವ ಹುನ್ನಾರ ಎಂದು ಹೇಳಲಾಗುತ್ತಿದೆ. ಕಳೆದ ವರ್ಷದ ಜೂನ್‌ ಹಾಗೂ ಆಗಸ್ಟ್‌ ಅವಧಿಯಲ್ಲಿ ಚೀನಾ ರಸ್ತೆ ನಿರ್ಮಾಣ ಆರಂಭಿಸಿದ್ದು, ಇದರ ಚಿತ್ರಗಳನ್ನು ಯುರೋಪಿಯನ್‌ ಸ್ಪೇಸ್‌ ಏಜೆನ್ಸಿ ಬಿಡುಗಡೆ ಮಾಡಿದೆ. ಚೀನಾ ರಸ್ತೆ ನಿರ್ಮಿಸಿದ ಚಿತ್ರಗಳು ಸ್ಪಷ್ಟವಾಗಿ ಕಾಣುತ್ತಿವೆ.

ವಿಶ್ವದಲ್ಲೇ ಅತಿ ಎತ್ತರದ ಯುದ್ಧಭೂಮಿ ಎನಿಸಿರುವ ಸಿಯಾಚಿನ್‌ ಹಿಮಪ್ರದೇಶದ ಬಳಿಯೇ ಚೀನಾ ರಸ್ತೆ ನಿರ್ಮಿಸಿರುವ ಸ್ಯಾಟಲೈಟ್‌ ಫೋಟೊಗಳು ಲಭ್ಯವಾಗಿವೆ. 1963ರಲ್ಲಿ ಚೀನಾಗೆ ಬಿಟ್ಟುಕೊಟ್ಟಿರುವ, ಪಾಕ್‌ ಆಕ್ರಮಿತ ಕಾಶ್ಮೀರದ ಭಾಗವಾಗಿದ್ದ ಶಾಕ್ಸ್‌ಗಾಮ್‌ ಕಣಿವೆಯಲ್ಲಿ ಚೀನಾ ರಸ್ತೆ ನಿರ್ಮಿಸಿದೆ. ಇದು ಭಾರತದ ಇಂದಿರಾ ಕೋಲ್ ಪ್ರದೇಶದಿಂದ ಕೇವಲ 50 ಕಿಲೋ ಮೀಟರ್‌ ದೂರದಲ್ಲಿರುವುದರಿಂದ ಆತಂಕ ಹೆಚ್ಚಾಗಿದೆ.

ಇಂದಿರಾ ಕೋಲ್‌ ಪ್ರದೇಶಕ್ಕೆ ಕಳೆದ ಮಾರ್ಚ್‌ನಿಂದ ಇದುವರೆಗೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಎರಡು ಬಾರಿ ಭೇಟಿ ನೀಡಿದ್ದರು. ಇದರಿಂದ ಕೇವಲ 50 ಕಿಲೋಮೀಟರ್‌ ದೂರದಲ್ಲಿ ಚೀನಾ ರಸ್ತೆ ನಿರ್ಮಿಸಿದ ಕಾರಣ ಮುಂದಿನ ದಿನಗಳಲ್ಲಿ ಭಾರತದ ಜತೆಗಿನ ಬಿಕ್ಕಟ್ಟನ್ನು ಉಲ್ಬಣಿಸುವ ಸಾಧ್ಯತೆ ಇದೆ. ಇದೇ ಸಂಚಿನಿಂದಾಗಿಯೇ ಚೀನಾ ರಸ್ತೆ ನಿರ್ಮಾಣ ಮಾಡಿದೆ ಎಂದು ಹೇಳಲಾಗುತ್ತಿದೆ.

ಭಾರತಕ್ಕೆ ಏಕೆ ಆತಂಕಕಾರಿ?

ಸಿಯಾಚಿನ್‌ ಹಿಮಪ್ರದೇಶದಲ್ಲಿ ಚೀನಾ ರಸ್ತೆ ನಿರ್ಮಿಸಿರುವುದು ಭಾರತಕ್ಕೆ ಹಲವು ರೀತಿಯಲ್ಲಿ ಆತಂಕ ಎನಿಸಿದೆ. ಗಡಿಯಲ್ಲಿ ರಸ್ತೆ ನಿರ್ಮಿಸಿದರೆ ಚೀನಾ ಸುಲಭವಾಗಿ ಮಿಲಿಟರಿ ಸಲಕರಣೆಗಳನ್ನು, ಸೈನಿಕರನ್ನು ಗಡಿಗೆ ನಿಯೋಜಿಸಬಹುದು. ಇದಾದ ಬಳಿಕ ಭಾರತದ ಜತೆ ತಗಾದೆ ತೆಗೆಯಲು ಚೀನಾಗೆ ಅನುಕೂಲವಾಗಲಿದೆ ಎಂದೇ ವಿಶ್ಲೇಷಿಸಲಾಗುತ್ತಿದೆ. ಆದರೆ, ಇದಕ್ಕೆ ಭಾರತ ಹೇಗೆ ಪ್ರತಿಕ್ರಿಯಿಸುತ್ತದೆ ಎಂಬುದು ಕುತೂಹಲ ಕೆರಳಿಸಿದೆ.

ಇದನ್ನೂ ಓದಿ: Indian Economy : ಭಾರತದ ಆರ್ಥಿಕತೆ ಚೀನಾಕ್ಕಿಂತ ವೇಗವಾಗಿ ಬೆಳೆಯುತ್ತಿದೆ ಎಂದ ಐಎಮ್​ಎಫ್​

Continue Reading

ದೇಶ

Narendra Modi: ಪ್ರಧಾನಿ ಮೋದಿಗೆ ಜಿ 7 ಶೃಂಗಸಭೆಯ ಆಹ್ವಾನ ನೀಡಿದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ

Narendra Modi: ಜೂನ್‌ನಲ್ಲಿ ಇಟಲಿಯ ಪುಗ್ಲಿಯಾದಲ್ಲಿ ನಡೆಯಲಿರುವ ಜಿ 7 ಶೃಂಗಸಭೆಯ ಔಟ್ರೀಚ್ ಅಧಿವೇಶನಗಳಲ್ಲಿ ಭಾಗವಹಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಗುರುವಾರ ಆಹ್ವಾನ ನೀಡಿದ್ದಾರೆ. ಇಟಲಿಯ ವಿಮೋಚನಾ ದಿನದ 79ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ನಡೆದ ದೂರವಾಣಿ ಸಂಭಾಷಣೆಯ ವೇಳೆ ಮೋದಿ ಈ ಆಹ್ವಾನ ಸ್ವೀಕರಿಸಿದ್ದಾರೆ. ಮಾತುಕತೆ ವೇಳೆ ಪ್ರಧಾನಮಂತ್ರಿ ಮೋದಿ ಅವರು ಮೆಲೋನಿ ಮತ್ತು ಇಟಲಿಯ ಜನತೆಗೆ ಶುಭಾಶಯಗಳನ್ನು ತಿಳಿಸಿದರು.

VISTARANEWS.COM


on

Narendra Modi
Koo

ನವದೆಹಲಿ: ಜೂನ್‌ನಲ್ಲಿ ಇಟಲಿಯ ಪುಗ್ಲಿಯಾದಲ್ಲಿ ನಡೆಯಲಿರುವ ಜಿ 7 ಶೃಂಗಸಭೆಯ ಔಟ್ರೀಚ್ ಅಧಿವೇಶನ (G7 Summit Outreach Sessions)ಗಳಲ್ಲಿ ಭಾಗವಹಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರಿಗೆ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ (Giorgia Meloni) ಗುರುವಾರ ಆಹ್ವಾನ ನೀಡಿದ್ದಾರೆ.

ಇಟಲಿಯ ವಿಮೋಚನಾ ದಿನದ 79ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ನಡೆದ ದೂರವಾಣಿ ಸಂಭಾಷಣೆಯ ವೇಳೆ ಮೋದಿ ಈ ಆಹ್ವಾನ ಸ್ವೀಕರಿಸಿದರು. ಮಾತುಕತೆ ವೇಳೆ ಪ್ರಧಾನಮಂತ್ರಿ ಮೋದಿ ಅವರು ಮೆಲೋನಿ ಮತ್ತು ಇಟಲಿಯ ಜನತೆಗೆ ಶುಭಾಶಯಗಳನ್ನು ತಿಳಿಸಿದರು. ಜತೆಗೆ ಜಿ 7 ಆಹ್ವಾನವನ್ನು ನೀಡಿದ್ದಕ್ಕಾಗಿ ಅವರು ಮೆಲೋನಿಗೆ ಕೃತಜ್ಞತೆ ಸಲ್ಲಿಸಿದರು.

“ಇಟಲಿ ಇಂದು ತನ್ನ ವಿಮೋಚನಾ ದಿನವನ್ನು ಆಚರಿಸುತ್ತಿರುವ ಸಂದರ್ಭದಲ್ಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರೊಂದಿಗೆ ಮಾತನಾಡಿದೆ. ಜತೆಗೆ ಶುಭಾಶಯಗಳನ್ನು ಕೋರಿದ್ದೇನೆ. ಜೂನ್‌ನಲ್ಲಿ ನಡೆಯಲಿರುವ ಜಿ 7 ಶೃಂಗಸಭೆಗೆ ಆಹ್ವಾನಿಸಿದ್ದಕ್ಕಾಗಿ ಅವರಿಗೆ ಧನ್ಯವಾದಗಳು. ಜಿ 7ನಲ್ಲಿ G20India ವಿಚಾರದ ಬಗ್ಗೆ ಚರ್ಚಿಸಲಾಯಿತು. ನಮ್ಮ ಕಾರ್ಯತಂತ್ರದ ಪಾಲುದಾರಿಕೆಯನ್ನು ಇನ್ನಷ್ಟು ವಿಸ್ತರಿಸುವ ಬದ್ಧತೆಯನ್ನು ಪುನರುಚ್ಚರಿಸಿದ್ದೇವೆ” ಎಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮೋದಿ ಬರೆದುಕೊಂಡಿದ್ದಾರೆ.

ಭಾರತದ ಜಿ 20 ಅಧ್ಯಕ್ಷತೆಯ ಅವಧಿಯಲ್ಲಿ ಸಾಧಿಸಿದ ಗಮನಾರ್ಹ ಫಲಿತಾಂಶಗಳನ್ನು, ವಿಶೇಷವಾಗಿ ಇಟಲಿಯ ಅಧ್ಯಕ್ಷತೆಯಲ್ಲಿ ಜರಗಲಿರುವ ಮುಂಬರುವ ಜಿ 7 ಶೃಂಗಸಭೆಯ ಬಗ್ಗೆ ಇಬ್ಬರು ನಾಯಕರು ಚರ್ಚಿಸಿದರು. ಇಬ್ಬರೂ ದ್ವಿಪಕ್ಷೀಯ ಕಾರ್ಯತಂತ್ರದ ಪಾಲುದಾರಿಕೆಯನ್ನು ಹೆಚ್ಚಿಸುವ ಬದ್ಧತೆಯನ್ನು ಪುನರುಚ್ಚರಿಸಿದರು ಮತ್ತು ಪರಸ್ಪರ ಹಿತಾಸಕ್ತಿಯ ವಿವಿಧ ಪ್ರಾದೇಶಿಕ ಮತ್ತು ಜಾಗತಿಕ ಬೆಳವಣಿಗೆಗಳ ಬಗ್ಗೆ ದೃಷ್ಟಿಕೋನಗಳನ್ನು ಪರಸ್ಪರ ವಿನಿಮಯ ಮಾಡಿಕೊಂಡರು ಎಂದು ಮೂಲಗಳು ತಿಳಿಸಿವೆ.

ಗ್ರೂಪ್ ಆಫ್ ಸೆವೆನ್ (ಜಿ 7) ಏಳು ಪ್ರಮುಖ ದೇಶಗಳನ್ನು ಒಳಗೊಂಡಿರುವ ಅಂತರ್ ಸರ್ಕಾರಿ ಸಂಸ್ಥೆಯಾಗಿದೆ. ಆರ್ಥಿಕ ನೀತಿ, ಜಾಗತಿಕ ಭದ್ರತೆ ಮತ್ತು ಇತರ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲು ಮತ್ತು ಸಮನ್ವಯಗೊಳಿಸಲು ಈ ದೇಶಗಳು ವಾರ್ಷಿಕವಾಗಿ ಸಭೆ ಸೇರುತ್ತವೆ. ಕಳೆದ ವರ್ಷ ಪ್ರಧಾನಿ ಫ್ಯೂಮಿಯೊ ಕಿಶಿಡಾ ಅವರ ಆಹ್ವಾನದ ಮೇರೆಗೆ ಜಪಾನ್ ಅಧ್ಯಕ್ಷತರಯಲ್ಲಿ ನಡೆದ ಜಿ 7 ಶೃಂಗಸಭೆಯಲ್ಲಿ ಭಾಗವಹಿಸಲು ಪಿಎಂ ಮೋದಿ ಜಪಾನ್‌ನ ಹಿರೋಷಿಮಾಗೆ ಭೇಟಿ ನೀಡಿದ್ದರು. ಭೇಟಿಯ ಸಮಯದಲ್ಲಿ ಕೆಲವು ನಾಯಕರೊಂದಿಗೆ ಮೋದಿ ದ್ವಿಪಕ್ಷೀಯ ಸಭೆಗಳನ್ನು ನಡೆಸಿದ್ದರು.

ಇದನ್ನೂ ಓದಿ: Giorgia Meloni: ಯುರೋಪ್‌ನಲ್ಲಿ ಇಸ್ಲಾಮ್‌ಗೆ ಜಾಗವಿಲ್ಲ: ಇಟಲಿ ಪ್ರಧಾನಿ ಬೋಲ್ಡ್‌ ಮಾತು

ಮೋದಿಯನ್ನು ಹಾಡಿ ಹೊಗಳಿದ್ದ ಮೆಲೋನಿ

ರೈಸಿನಾ ಶೃಂಗಸಭೆಯ ಹಿನ್ನೆಲೆಯಲ್ಲಿ ಭಾರತಕ್ಕೆ ಆಗಮಿಸಿದ್ದ ಜಾರ್ಜಿಯಾ ಮೆಲೋನಿ, “ನರೇಂದ್ರ ಮೋದಿ ಅವರು ವಿಶ್ವದ ನಾಯಕರಲ್ಲಿಯೇ ಹೆಚ್ಚು ಪ್ರೀತಿಗೆ ಪಾತ್ರರಾಗಿದ್ದಾರೆ. ಅವರು ಧೀಮಂತ ನಾಯಕರು ಎಂಬುದು ಸಾಬೀತಾಗಿದೆ. ಇದಕ್ಕಾಗಿ ಮೋದಿ ಅವರಿಗೆ ಅಭಿನಂದನೆಗಳು” ಎಂದಿದ್ದರು. “ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತ ಹಾಗೂ ಇಟಲಿ ಸಂಬಂಧ ಮತ್ತಷ್ಟು ವೃದ್ಧಿಯಾಗುತ್ತಿದೆ. ಉಭಯ ದೇಶಗಳ ಸಂಬಂಧವನ್ನು ವ್ಯೂಹಾತ್ಮಕ ಸಂಬಂಧವಾಗಿ ಮಾರ್ಪಡಿಸಲು ನಾವು ಉತ್ಸುಕರಾಗಿದ್ದೇವೆ. ಇದರಿಂದ ಎರಡೂ ದೇಶಗಳ ಸಂಬಂಧ ಇನ್ನಷ್ಟು ವೃದ್ಧಿಯಾಗಲಿದೆ” ಎಂದು ತಿಳಿಸಿದ್ದರು.

Continue Reading

ಪ್ರಮುಖ ಸುದ್ದಿ

khalistan Movement : ಲಂಡನ್​ ಭಾರತ ಹೈಕಮಿಷನ್​ ಮೇಲೆ ದಾಳಿ ಮಾಡಿದ್ದ ಖಲಿಸ್ತಾನಿ ಉಗ್ರ ಎನ್​ಐಎ ವಶಕ್ಕೆ

khalistan movement: ಕಳೆದ ವರ್ಷ ಮಾರ್ಚ್ 19 ಮತ್ತು ಮಾರ್ಚ್ 22 ರಂದು ಲಂಡನ್​ನಲ್ಲಿ ನಡೆದ ಘಟನೆಗಳು ಭಾರತೀಯ ಹೈ ಕಮಿಷನ್​​ ಮತ್ತು ಅದರ ಅಧಿಕಾರಿಗಳ ಮೇಲೆ ದಾಳಿಗಳನ್ನು ನಡೆಸುವ ದೊಡ್ಡ ಪಿತೂರಿಯ ಭಾಗವಾಗಿದೆ ಎಂದು ಈ ಪ್ರಕರಣದಲ್ಲಿ ಇಲ್ಲಿಯವರೆಗಿನ ತನಿಖೆಯಿಂದ ತಿಳಿದುಬಂದಿದೆ” ಎಂದು ಎನ್ಐಎ ಹೇಳಿಕೆಯಲ್ಲಿ ತಿಳಿಸಿದೆ.

VISTARANEWS.COM


on

khalistan movement
Koo

ನವದೆಹಲಿ: ಕಳೆದ ವರ್ಷ ಲಂಡನ್​ನಲ್ಲಿರುವ ಭಾರತೀಯ ಹೈಕಮಿಷನ್ ಮೇಲೆ ನಡೆದ ದಾಳಿ ಮತ್ತು ಅದರ ನಂತರದ ಪ್ರತಿಭಟನೆಗಳ ರೂವಾರಿಯಾಗರುವ ಖಲಿಸ್ತಾನ್​ ಉಗ್ರನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಗುರುವಾರ ಬಂಧಿಸಿದೆ. ಯುನೈಟೆಡ್ ಕಿಂಗ್​ಡಮ್​​ನ ಹೆನ್ಸ್ಲೋ ನಿವಾಸಿ ಇಂದರ್ಪಾಲ್ ಸಿಂಗ್ ಗಾಬಾ ಬಂಧಿತ ಖಲಿಸ್ತಾನಿ. ಆತ ಮಾರ್ಚ್ 22, 2023 ರ ಪ್ರತಿಭಟನೆಯ ಸಮಯದಲ್ಲಿ ಕಾನೂನುಬಾಹಿರ ಚಟುವಟಿಕೆ ನಡೆಸಿದ್ದ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ.

ಆ ವರ್ಷದ ಮಾರ್ಚ್ 18 ರಂದು ಖಲಿಸ್ತಾನಿ ಪರ ಪ್ರತ್ಯೇಕತಾವಾದಿ ಅಮೃರ್​ಪಾಲ್​ ಸಿಂಗ್ ವಿರುದ್ಧ ಪಂಜಾಬ್ ಪೊಲೀಸರು ಕೈಗೊಂಡ ಕ್ರಮಕ್ಕೆ ಪ್ರತೀಕಾರವಾಗಿ ಹೈಕಮಿಷನ್ ಮೇಲಿನ ದಾಳಿ ನಡೆಸಿತ್ತು ಎಂದು ಎನ್​ಐಎ ಹೇಳಿದೆ.

ಕಳೆದ ವರ್ಷ ಮಾರ್ಚ್ 19 ಮತ್ತು ಮಾರ್ಚ್ 22 ರಂದು ಲಂಡನ್​ನಲ್ಲಿ ನಡೆದ ಘಟನೆಗಳು ಭಾರತೀಯ ಹೈ ಕಮಿಷನ್​​ ಮತ್ತು ಅದರ ಅಧಿಕಾರಿಗಳ ಮೇಲೆ ದಾಳಿಗಳನ್ನು ನಡೆಸುವ ದೊಡ್ಡ ಪಿತೂರಿಯ ಭಾಗವಾಗಿದೆ ಎಂದು ಈ ಪ್ರಕರಣದಲ್ಲಿ ಇಲ್ಲಿಯವರೆಗಿನ ತನಿಖೆಯಿಂದ ತಿಳಿದುಬಂದಿದೆ” ಎಂದು ಎನ್ಐಎ ಹೇಳಿಕೆಯಲ್ಲಿ ತಿಳಿಸಿದೆ.

ಅಮೃತ್​ಪಾಲ್​ ಸಿಂಗ್ ಮೇಲಿನ ದಬ್ಬಾಳಿಕೆಯನ್ನು ವಿರೋಧಿಸಿ ಖಲಿಸ್ತಾನ್ ಬೆಂಬಲಿಗರು ಲಂಡನ್​​ನಲ್ಲಿರುವ ಭಾರತೀಯ ಹೈಕಮಿಷನ್ ಮುಂದೆ ಪ್ರತಿಭಟನೆ ನಡೆಸಿದ್ದರು. ಅವರು ಕಟ್ಟಡದ ಮೊದಲ ಮಹಡಿಯ ಬಾಲ್ಕನಿಯಿಂದ ಭಾರತೀಯ ಧ್ವಜವನ್ನು ಕೆಳಗಿಳಿಸಿದ್ದರು. ಹೀಗಾಗಿ ಭಾರತೀಯ ಅಧಿಕಾರಿಗಳು ಇನ್ನೂ ದೊಡ್ಡ ಧ್ವಜವನ್ನು ಹಾಕಿದ್ದರು.

ಇದನ್ನೂ ಓದಿ: Salman Khan : ಸಲ್ಮಾನ್​ ಮನೆ ಬಳಿ ಗುಂಡಿನ ದಾಳಿ; ಪಂಜಾಬ್​​ನಲ್ಲಿ ಗನ್​ ಕೊಟ್ಟವರಿಬ್ಬರ ಬಂಧನ

ಭಾರತೀಯ ಧ್ವಜವನ್ನು ಅಪವಿತ್ರಗೊಳಿಸುವುದರ ವಿರುದ್ಧ ಯುಕೆಯಲ್ಲಿರುವ ಭಾರತೀಯ ಸಮುದಾಯವು ಭಾರತೀಯ ಹೈಕಮಿಷನ್ ಮುಂದೆ ದೊಡ್ಡ ಸಭೆ ಆಯೋಜಿಸಿತ್ತು. ಈ ಘಟನೆಗೆ ಕಾರಣರಾದವರ ವಿರುದ್ಧ ಲಂಡನ್ ಮೇಯರ್ ಮತ್ತು ಬ್ರಿಟಿಷ್ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿತ್ತು.

ವಿದೇಶಾಂಗ ವ್ಯವಹಾರಗಳ ಸಚಿವಾಲಯವು ದೆಹಲಿಯಲ್ಲಿರುವ ಯುಕೆಯ ಹಿರಿಯ ರಾಜತಾಂತ್ರಿಕರನ್ನು ಕರೆಸಿತ್ತು. ಹೈಕಮಿಷನ್​ನಲ್ಲಿರುವ “ಭದ್ರತೆಯ ಕಾಳಜಿ ಬಗ್ಗೆ ವಿವರಣೆ ಕೋರಿತ್ತು. ಭಾರತೀಯ ರಾಜತಾಂತ್ರಿಕರು ಮತ್ತು ಸಿಬ್ಬಂದಿಯ ಬಗ್ಗೆ ಯುಕೆ ಸರ್ಕಾರದ “ಉದಾಸೀನತೆ” ಸ್ವೀಕಾರಾರ್ಹವಲ್ಲ ಎಂದು ಅದು ಹೇಳಿತ್ತು.

Continue Reading
Advertisement
Lok Sabha Election 2024 Woman casts her vote with the help of oxygen elderly woman dies after casting her vote
Lok Sabha Election 20242 mins ago

Lok Sabha Election 2024: ಆಕ್ಸಿಜನ್‌ ಸಹಾಯದಿಂದ ಮತ ಚಲಾಯಿಸಿದ ಮಹಿಳೆ; ವೋಟು ಹಾಕಿ ಕುಸಿದು ಮೃತಪಟ್ಟ ವೃದ್ಧೆ!

Whatsapp
ದೇಶ19 mins ago

WhatsApp: ಭಾರತ ತೊರೆಯುವುದಾಗಿ ವಾಟ್ಸ್‌ಆ್ಯಪ್‌ ಎಚ್ಚರಿಕೆ; ಶೀಘ್ರದಲ್ಲೇ ಆ್ಯಪ್‌ ಅಲಭ್ಯ?

Lok sabha election 2024
Lok Sabha Election 202419 mins ago

Lok Sabha Election 2024: ಆಪರೇಷನ್‌ಗೂ ಮುನ್ನ ಆಂಬ್ಯುಲೆನ್ಸ್‌ನಲ್ಲಿ ಬಂದು ವೋಟ್‌ ಮಾಡಿದ ಉತ್ಸಾಹಿ ಮತದಾರ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ25 mins ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Shruti Haasan and boyfriend santanu hazarika break up
ಕಾಲಿವುಡ್28 mins ago

Shruti Haasan: ಎರಡನೇ ಬಾಯ್‌ಫ್ರೆಂಡ್‌ ನಿಂದಲೂ ಕಮಲ್‌ ಹಾಸನ್‌ ಪುತ್ರಿ ಬ್ರೇಕಪ್?

Kiran Rao Laapataa Ladies to release on OTT
ಬಾಲಿವುಡ್30 mins ago

Kiran Rao: ಆಮೀರ್ ಖಾನ್ ಮಾಜಿ ಪತ್ನಿ ಸಿನಿಮಾ ಒಟಿಟಿಗೆ ಬಂದೇ ಬಿಡ್ತು! ಎಲ್ಲಿ ಸ್ಟ್ರೀಮಿಂಗ್?

gold rate today tapasi pannu
ಚಿನ್ನದ ದರ51 mins ago

Gold Rate Today: ಮತದಾನದ ದಿನ ಬಂಗಾರದ ದರ ತೇಜಿ, ಬೆಂಗಳೂರಿನಲ್ಲಿ 24K ಚಿನ್ನಕ್ಕೆ ₹440 ಏರಿಕೆ

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20241 hour ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

lok sabha election 2024
Lok Sabha Election 20241 hour ago

Lok Sabha Election 2024: ಮತದಾರರು ಜಸ್ಟ್‌ ಮಿಸ್‌; ಮತಗಟ್ಟೆ ಸಮೀಪವೇ ನೆಲಕ್ಕುರುಳಿದ ಬೃಹತ್ ಮರ, ಕಾರು ಜಖಂ

ವಿದೇಶ1 hour ago

Indian origin man: ಅಮೆರಿಕದಲ್ಲಿ ಮತ್ತೋರ್ವ ಭಾರತೀಯನ ಹತ್ಯೆ; ಪೊಲೀಸರ ಗುಂಡೇಟಿಗೆ ವ್ಯಕ್ತಿ ಬಲಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ25 mins ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20241 hour ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20242 hours ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ8 hours ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ20 hours ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ21 hours ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ24 hours ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20241 day ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ2 days ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

ಟ್ರೆಂಡಿಂಗ್‌