ವಾಷಿಂಗ್ಟನ್: ಅಮೆರಿಕ ಅಧ್ಯಕ್ಷೀಯ ಚುನಾವಣೆ(US Presidential Election) ಪ್ರಚಾರದಲ್ಲಿ ಭಾಗಿಯಾಗಿದ್ದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump Assassination Bid) ಮೇಲಿನ ಗುಂಡಿನ ದಾಳಿ(Shootout) ಬಗ್ಗೆ ಅಮೆರಿಕದ ಗುಪ್ತಚರ ಇಲಾಖೆ FBI ಕೂಲಂಕುಷ ತನಿಖೆ ಕೈಗೆತ್ತಿಕೊಂಡಿದೆ. ತನಿಖೆ ಮೊದ ಭಾಗವಾಗಿ ದಾಳಿಕೋರನ ಗುರುತು ಪತ್ತೆ ಮಾಡಿದೆ.
FBI ವರದಿ ಪ್ರಕಾರ ಒಬ್ಬ ದಾಳಿಕೋರನ ಗುರುತು ಪತ್ತೆಯಾಗಿದ್ದು, ಆತನ ಹೆಸರು ಥಾಮಸ್ ಮ್ಯಾಥ್ಯೂ ಕ್ರೂಕ್ಸ್. ಟ್ರಂಪ್ ಮೇಲೆ ದಾಳಿಯಾಗುತ್ತಿದ್ದಂತೆ ಭದ್ರತಾ ಸಿಬ್ಬಂದಿ ಸೀಕ್ರೆಟ್ ಸರ್ವಿಸ್ ಏಜೆಂಟ್ ಈತನನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದೆ. ಇನ್ನು ದಾಳಿಗೆ ನಿಜವಾದ ಕಾರಣ ಏನೆಂಬುದು ಇನ್ನೂ ಪತ್ತೆಯಾಗಿಲ್ಲ. ಆ ಬಗ್ಗೆ ತನಿಖೆ ಮುಂದುವರೆದಿದೆ ಎಂದು FBI ಹೇಳಿದೆ.
ಯಾರು ಈ ಥಾಮಸ್ ಮ್ಯಾಥ್ಯೂ ಕ್ರೂಕ್ಸ್?
ಯುಎಸ್ ಮಾಧ್ಯಮ ವರದಿಗಳು ಶೂಟರ್ ಅನ್ನು 20 ವರ್ಷದ ಥಾಮಸ್ ಮ್ಯಾಥ್ಯೂ ಕ್ರೂಕ್ಸ್ ಎಂದು ಗುರುತಿಸಿವೆ. ನ್ಯೂಯಾರ್ಕ್ ಪೋಸ್ಟ್ ಪ್ರಕಾರ, ಪೆನ್ಸಿಲ್ವೇನಿಯಾದ ಬೆಥೆಲ್ ಪಾರ್ಕ್‌ನಿಂದ ಕ್ರೂಕ್ಸ್, ಬಟ್ಲರ್‌ನಲ್ಲಿ ಹೊರಾಂಗಣ ರ್ಯಾಲಿಯಲ್ಲಿ ಟ್ರಂಪ್ ಮೇಲೆ ಗುಂಡು ಹಾರಿಸಿದ್ದಾನೆ. ಅದರಲ್ಲಿ ಒಂದು ಬುಲೆಟ್ ಟ್ರಂಪ್ ಕಿವಿಗೆ ತಾಗಿತು. ಬಟ್ಲರ್ ಫಾರ್ಮ್ ಶೋ ಮೈದಾನದಲ್ಲಿ ವೇದಿಕೆಯಿಂದ 130 ಗಜಗಳಷ್ಟು ದೂರದಲ್ಲಿರುವ ಉತ್ಪಾದನಾ ಘಟಕದ ಛಾವಣಿಯ ಮೇಲೆ ಕ್ರೂಕ್ಸ್ ಗನ್ ಸಮೇತ ಇದ್ದ ಎನ್ನಲಾಗಿದೆ.
ಪೆನ್ಸಿಲ್ವೇನಿಯಾದ ಬಟ್ಲರ್ನ್‌ನಲ್ಲಿ ಶನಿವಾರ ಸಂಜೆ ನಡೆದ ರ್ಯಾಲಿ ಆಯೋಜಿಸಲಾಗಿತ್ತು. ಈ ವೇಳೆ ಈ ಗುಂಡಿನ ದಾಳಿ ನಡೆದಿದ್ದು, ಟ್ರಂಪ್ ಅವರ ಕಿವಿ ಮತ್ತು ಮುಖದ ಮೇಲೆ ರಕ್ತ ಬಂದಿದ್ದು, ಕೂಡಲೇ ಅವರನ್ನು ವೇದಿಕೆಯಿಂದ ಸ್ಥಳಾಂತರಿಸಲಾಯಿತು. ಇನ್ನು ಘಟನೆಯಲ್ಲಿ ಒಬ್ಬ ಶೂಟರ್ ಮತ್ತು ರ್ಯಾಲಿಯಲ್ಲಿ ಭಾಗವಹಿಸಿದ್ದವರಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (ಎಫ್‌ಬಿಐ), ಯುಎಸ್ ಸೀಕ್ರೆಟ್ ಸರ್ವಿಸ್ ಮತ್ತು ಇತರ ಏಜೆನ್ಸಿಗಳೊಂದಿಗೆ ಈ ಘಟನೆಯನ್ನು ಹತ್ಯೆಯ ಯತ್ನ ಎಂಬ ಆಯಾಮದಲ್ಲಿ ತನಿಖೆ ನಡೆಸುತ್ತಿದೆ.
ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಖಂಡನೆ ವ್ಯಕ್ತಪಡಿಸಿದ್ದು, ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ, ನನ್ನ ಸ್ನೇಹಿತ ಡೊನಾಲ್ಡ್ ಟ್ರಂಪ್ ಮೇಲೆ ನಡೆದಿರುವ ದಾಳಿ ನಿಜಕ್ಕೂ ಆಘಾತಕಾರಿ ವಿಚಾರ. ಈ ಘಟನೆಯನ್ನು ನಾನು ಖಂಡಿಸುತ್ತೇನೆ. ರಾಜಕೀಯ ಮತ್ತು ಪ್ರಜಾಪ್ರಭುತ್ವದಲ್ಲಿ ಹಿಂಸಾಚಾರಕ್ಕೆ ಅವಕಾಶ ಇಲ್ಲ. ಅವರು ಶೀಘ್ರವೇ ಚೇತರಿಸಿಕೊಳ್ಳಲಿ. ಇನ್ನು ಘಟನೆಯಲ್ಲಿ ಗಾಯಗೊಂಡವರು ಕೂಡ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಯುಎಸ್ ಅಧ್ಯಕ್ಷ ಜೋ ಬಿಡೆನ್ ಅವರು ತಮ್ಮ ರಿಪಬ್ಲಿಕನ್ ಪ್ರತಿಸ್ಪರ್ಧಿ ಮತ್ತು ಹಿಂದಿನವರ ಮೇಲೆ ಮಾರಣಾಂತಿಕ ದಾಳಿಯನ್ನು ಖಂಡಿಸಿದರು. “ಅಮೆರಿಕದಲ್ಲಿ ಈ ರೀತಿಯ ಹಿಂಸಾಚಾರಕ್ಕೆ ಸ್ಥಳವಿಲ್ಲ. ಇದು ಸರಿಯಲ್ಲ” ಎಂದು ಬೈಡೆನ್ ಹೇಳಿದರು, ಈ ವಿಷಯದ ಬಗ್ಗೆ ತನಗೆ ಸಂಪೂರ್ಣವಾಗಿ ವಿವರಿಸಲಾಗಿದೆ ಮತ್ತು ಟ್ರಂಪ್ ಅವರೊಂದಿಗೆ ಮಾತನಾಡಲಿದ್ದೇನೆ. ಇದನ್ನು ಎಲ್ಲರೂ ಖಂಡಿಸಬೇಕು’ ಎಂದರು.
ಇದನ್ನೂ ಓದಿ: Donald Trump: “ಬುಲೆಟ್ ನನ್ನ ಕಿವಿಯನ್ನು ಸೀಳಿತ್ತು..” ಗುಂಡಿನ ದಾಳಿ ಬಗ್ಗೆ ಟ್ರಂಪ್ ಮೊದಲ ರಿಯಾಕ್ಷನ್