ವಾಷಿಂಗ್ಟನ್: ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ (US Presidential Election 2024) ಕೆಲವೇ ತಿಂಗಳು ಬಾಕಿ ಉಳಿದಿವೆ. ರಿಪಬ್ಲಿಕನ್ ಪಕ್ಷದಿಂದ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರು ಕಣಕ್ಕಿಳಿದಿದ್ದಾರೆ. ಇನ್ನು ಜುಲೈ 23ರಂದು ಡೊನಾಲ್ಡ್ ಟ್ರಂಪ್ ಅವರ ಮೇಲೆ ಗುಂಡಿನ ದಾಳಿ ಮೂಲಕ ಹತ್ಯೆಗೆ ಯತ್ನಿಸಿದ ಬಳಿಕ ಮಾಜಿ ಅಧ್ಯಕ್ಷರು ಇದೇ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಗುಂಡು ತಗುಲಿದ ಕಿವಿಗೆ ಬ್ಯಾಂಡೇಜ್ ಕಟ್ಟಿಕೊಂಡಿರುವ ಡೊನಾಲ್ಡ್ ಟ್ರಂಪ್, ಸಾರ್ವಜನಿಕವಾಗಿ ಪ್ರತ್ಯಕ್ಷರಾಗಿದ್ದಾರೆ.
ಜುಲೈ 15ರಂದು ಪಿಸರ್ವ್ ಫೋರಂ ಮಿಲ್ವೌಕಿಯಲ್ಲಿನಡೆದ ರಿಪಬ್ಲಿಕನ್ ನ್ಯಾಷನಲ್ ಕನ್ವೆನ್ಶನ್‌ನಲ್ಲಿ ಡೊನಾಲ್ಡ್ ಟ್ರಂಪ್ ಅವರು ಕಾಣಿಸಿಕೊಂಡಿದ್ದು, ಸಾವಿರಾರು ಜನ ಟ್ರಂಪ್ ಅವರಿಗೆ ಬೆಂಬಲ ಸೂಚಿಸಿದ್ದಾರೆ. ಸಮಾವೇಶದಲ್ಲಿ ನೆರೆದಿದ್ದ ಜನರನ್ನು ಕಂಡು, ಅವರು ಕೂಗುತ್ತಿದ್ದ ಘೋಷಣೆ ಕೇಳಿ ಡೊನಾಲ್ಡ್ ಟ್ರಂಪ್ ಅವರು ಭಾವುಕರಾಗಿದ್ದಾರೆ. ಬೆಂಬಲ ನೀಡಿದ ಪ್ರತಿಯೊಬ್ಬರಿಗೂ ಟ್ರಂಪ್ ಅವರು ಧನ್ಯವಾದ ತಿಳಿಸಿದ್ದಾರೆ. ಇದರೊಂದಿಗೆ, ಗುಂಡಿನ ದಾಳಿ ಬಳಿಕ ಡೊನಾಲ್ಡ್ ಟ್ರಂಪ್ ಅವರ ಮೇಲೆ ಅನುಕಂಪ ಸೃಷ್ಟಿಯಾಗಿದೆ ಎಂದು ಹೇಳಲಾಗುತ್ತಿದೆ.
Donald Trump walks in, with a bandaged ear from a failed assassination attempt, to Lee Greenwood singing “God Bless the USA” in the most American moment possible. pic.twitter.com/EvAZz4yPeI
— Clay Travis (@ClayTravis) July 16, 2024
ಅಮೆರಿಕದ ಮಾಧ್ಯಮ ವರದಿಗಳು ಶೂಟರ್‌ನನ್ನು 20 ವರ್ಷದ ಥಾಮಸ್ ಮ್ಯಾಥ್ಯೂ ಕ್ರೂಕ್ಸ್ ಎಂದು ಗುರುತಿಸಿವೆ. ನ್ಯೂಯಾರ್ಕ್ ಪೋಸ್ಟ್ ಪ್ರಕಾರ, ಪೆನ್ಸಿಲ್ವೇನಿಯಾದ ಬೆಥೆಲ್ ಪಾರ್ಕ್‌ನಿಂದ ಕ್ರೂಕ್ಸ್, ಬಟ್ಲರ್‌ನಲ್ಲಿ ಹೊರಾಂಗಣ ರ‍್ಯಾಲಿಯಲ್ಲಿ ಟ್ರಂಪ್ ಮೇಲೆ ಗುಂಡು ಹಾರಿಸಿದ್ದಾನೆ. ಅದರಲ್ಲಿ ಒಂದು ಬುಲೆಟ್ ಟ್ರಂಪ್ ಕಿವಿಗೆ ತಾಗಿತು. ಬಟ್ಲರ್ ಫಾರ್ಮ್ ಶೋ ಮೈದಾನದಲ್ಲಿ ವೇದಿಕೆಯಿಂದ 130 ಗಜಗಳಷ್ಟು ದೂರದಲ್ಲಿರುವ ಉತ್ಪಾದನಾ ಘಟಕದ ಚಾವಣಿಯ ಮೇಲೆ ಕ್ರೂಕ್ಸ್ ಗನ್ ಸಮೇತ ಇದ್ದ ಎನ್ನಲಾಗಿದೆ. ಇದಾದ ಕೆಲವೇ ಕ್ಷಣಗಳಲ್ಲಿ ಅಮೆರಿಕದ ಭದ್ರತಾ ಸಿಬ್ಬಂದಿಯು ಥಾಮಸ್ ಮ್ಯಾಥ್ಯೂ ಕ್ರೂಕ್ಸ್‌ನನ್ನು ಹೊಡೆದುರುಳಿಸಿದರು.
ಡೊನಾಲ್ಡ್ ಟ್ರಂಪ್ ಅವರು ಗುಂಡಿನ ದಾಳಿ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದರು. ಟ್ರಂಪ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಘಟನೆ ಬಗ್ಗೆ ಪೋಸ್ಟ್‌ವೊಂದನ್ನು ಮಾಡಿದ್ದು, ನಾನು ಗುಸುಗುಸು ಶಬ್ದ, ಗುಂಡೇಟಿನ ಶಬ್ದ ಕೇಳಿದಾಗ ಏನೋ ತಪ್ಪಾಗಿದೆ ಎಂದು ನನಗೆ ತಕ್ಷಣ ತಿಳಿದಿತ್ತು ಮತ್ತು ಗುಂಡು ಚರ್ಮವನ್ನು ಸೀಳುತ್ತಿರುವುದನ್ನು ತಕ್ಷಣವೇ ಅನುಭವಿಸಿದೆ, ನಮ್ಮ ದೇಶದಲ್ಲಿ ಇಂತಹ ಕೃತ್ಯ ನಡೆಯುವುದು ನಂಬಲಸಾಧ್ಯ ಎಂದು ಟ್ರಂಪ್ ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡಿದ್ದರು.
ಇದನ್ನೂ ಓದಿ: Trump Assassination Bid: ಟ್ರಂಪ್ ಮೇಲೆ ಗುಂಡಿನ ದಾಳಿ; ಶೂಟರ್ ಫೋಟೋ ರಿಲೀಸ್- ಆತನ ಸ್ನೇಹಿತರು ಹೇಳಿದ್ದೇನು?