Site icon Vistara News

Ebrahim Raisi: ಇರಾನ್‌ ಅಧ್ಯಕ್ಷರಿದ್ದ ಹೆಲಿಕಾಪ್ಟರ್‌ ಪತ್ತೆ; ದುರ್ಘಟನಾ ಸ್ಥಳದ ವಿಡಿಯೋ ಲಭ್ಯ

Ebrahim Raisi

Iran President Ebrahim Raisi's chopper crash: Iran says lives are at risk as search for helicopter continues

ಬಾಕು: ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ (Ebrahim Raisi) ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ (Helicopter Crash) ಅಜರ್‌ಬೈಜಾನ್‌ನಲ್ಲಿ (Azerbaijan) ಪತನಗೊಂಡಿದ್ದು, ಹಲವು ಗಂಟೆಗಳ ಕಾರ್ಯಾಚರಣೆ ಬಳಿಕ ಹೆಲಿಕಾಪ್ಟರ್‌ ಪತನಗೊಂಡ ಸ್ಥಳವನ್ನು ರಕ್ಷಣಾ ಕಾರ್ಯಾಚರಣೆ ಪಡೆ ಪತ್ತೆ ಹಚ್ಚಿದೆ. ಹೆಲಿಕಾಪ್ಟರ್‌ ಹುಡುಕಾಟ ಕಾರ್ಯಾಚರಣೆಯಲ್ಲಿ ತೊಡಗಿದ್ದ ಮಾನವ ರಹಿತ ವೈಮಾನಿಕ ವಾಹನ(UAV)ಹೆಲಿಕಾಪ್ಟರ್‌ ಪತನಗೊಂಡಿರುವ ಸ್ಥಳವನ್ನು ಪತ್ತೆ ಹಚ್ಚಿದ್ದು, ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಈ ವಿಡಿಯೋವನ್ನು ಇರಾನಿಯನ್‌ ಸುದ್ದಿ ವಾಹಿನಿ ಎಕ್ಸ್‌ನಲ್ಲಿ ಶೇರ್‌ ಮಾಡಿದ್ದು, ರೆಡ್ ಕ್ರೆಸೆಂಟ್ ಶೋಧ ಮತ್ತು ಪಾರುಗಾಣಿಕಾ ತಂಡಗಳು ಅಧ್ಯಕ್ಷರನ್ನು ಹೊತ್ತ ಹೆಲಿಕಾಪ್ಟರ್ ಅಪಘಾತದ ಸ್ಥಳಕ್ಕೆ ತಲುಪಿವೆ. ಅಧ್ಯಕ್ಷರು ಮತ್ತು ಅವರ ಸಹಚರರು ಬದುಕುಳಿದಿದ್ದಾರೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ರೆಡ್ ಕ್ರೆಸೆಂಟ್ ಮಾಹಿತಿಯನ್ನು ನೀಡಿಲ್ಲ ಎಂದು ಹೇಳಿದೆ.

ಹೆಲಿಕಾಪ್ಟರ್‌ನಲ್ಲಿ ಯಾರಿದ್ದರು?

ಹೆಲಿಕಾಪ್ಟರ್‌ನಲ್ಲಿ ಇಬ್ರಾಹಿಂ ರೈಸಿ ಜತೆಗೆ ವಿದೇಶಾಂಗ ವ್ಯವಹಾರಗಳ ಸಚಿವ ಹುಸೇನ್‌ ಅಮೀರಬ್ದೊಲ್ಲೈ, ಪೂರ್ವ ಅಜರ್‌ಬೈಜಾನ್‌ ಗವರ್ನರ್‌ ಮಲೇಕ್‌ ರಹಮತಿ ಹಾಗೂ ಪೂರ್ವ ಅಜರ್‌ಬೈಜಾನ್‌ನಲ್ಲಿರುವ ಇರಾನ್‌ ಸುಪ್ರೀಂ ಲೀಡರ್‌ನ ಪ್ರತಿನಿಧಿ ಅಯೊತೊಲ್ಲಾ ಮೊಹಮ್ಮದ್‌ ಅಲಿ ಅಲೆ-ಹಶೇಮ್‌ ಅವರು ಕೂಡ ಇದ್ದರು. ಇದುವರೆಗೆ ಹೆಲಿಕಾಪ್ಟರ್‌ ಎಲ್ಲಿದೆ ಎಂಬುದರ ಸುಳಿವೇ ಸಿಗದ ಕಾರಣ ಇವರೆಲ್ಲರ ಪ್ರಾಣಕ್ಕೆ ಕುತ್ತು ಎದುರಾಗಿರಬಹುದು ಎಂದು ಹೇಳಲಾಗುತ್ತಿದೆ.

ಇಬ್ರಾಹಿಂ ರೈಸಿಗಾಗಿ ಮೋದಿ ಪ್ರಾರ್ಥನೆ

ಇರಾನ್‌ ಅಧ್ಯಕ್ಷರಿದ್ದ ಹೆಲಿಕಾಪ್ಟರ್‌ ಪತನಗೊಂಡಿರುವ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಕಳವಳ ವ್ಯಕ್ತಪಡಿಸಿದ್ದಾರೆ. “ಇಬ್ರಾಹಿಂ ರೈಸಿ ಅವರ ಹೆಲಿಕಾಪ್ಟರ್‌ ಪತನದ ಸುದ್ದಿ ತಿಳಿದು ಆತಂಕವಾಗಿದೆ. ಇರಾನ್‌ ಜನರ ಭಾವನೆಗಳ ಜತೆ ನಾವಿದ್ದೇವೆ. ಇಬ್ರಾಹಿಂ ರೈಸಿ ಹಾಗೂ ಅವರ ಜತೆಗಿದ್ದ ಎಲ್ಲರೂ ಸುರಕ್ಷಿತವಾಗಿರಲಿ ಎಂಬುದಾಗಿ ಪ್ರಾರ್ಥಿಸುತ್ತೇನೆ” ಎಂದು ಮೋದಿ ಪೋಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ:Lok Sabha Election 2024: ಬಿಜೆಪಿ ಅಭ್ಯರ್ಥಿಗೆ ಒಬ್ಬನಿಂದಲೇ 8 ಬಾರಿ ವೋಟಿಂಗ್;‌ ವೈರಲಾಗ್ತಿದೆ ಶಾಕಿಂಗ್‌ ವಿಡಿಯೋ

ಅರಸ್‌ ನದಿಗೆ ಇರಾನ್‌ ಹಾಗೂ ಅಜರ್‌ಬೈಜಾನ್‌ ಸೇರಿ ಅಣೆಕಟ್ಟು ಕಟ್ಟಿದ್ದು, ಅದನ್ನು ಉದ್ಘಾಟಿಸಲು ಇಬ್ರಾಹಿಂ ರೈಸಿ ಅವರು ಅಜರ್‌ಬೈಜಾನ್‌ಗೆ ತೆರಳಿದ್ದರು. ಇದೇ ವೇಳೆ ಹೆಲಿಕಾಪ್ಟರ್‌ ಪತನಗೊಂಡಿದೆ ಎಂದು ತಿಳಿದುಬಂದಿದೆ. ಹವಾಮಾನ ವೈಪರೀತ್ಯದಿಂದಾಗಿ ಹೆಲಿಕಾಪ್ಟರ್‌ ಪತನಗೊಂಡಿರಬಹುದು ಎಂದು ಇರಾನ್‌ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹವಾಮಾನ ವೈಪರೀತ್ಯವು ಶೋಧ ಕಾರ್ಯಾಚರಣೆಗೂ ಅಡ್ಡಿಯಾಗಿದೆ ಎಂದು ತಿಳಿದುಬಂದಿದೆ. 2021ರಿಂದಲೂ ಇಬ್ರಾಹಿಂ ರೈಸಿ ಅವರು ಇರಾನ್‌ ಅಧ್ಯಕ್ಷರಾಗಿದ್ದಾರೆ.

Exit mobile version