ಗಾಜಾಪಟ್ಟಿಯಲ್ಲಿ 500 ಕಿ.ಮೀ. ರಹಸ್ಯ ಸುರಂಗ ಜಾಲ! ಇಸ್ರೇಲ್‌ಗೆ ಬಹುದೊಡ್ಡ ಸವಾಲು - Vistara News

ಪ್ರಮುಖ ಸುದ್ದಿ

ಗಾಜಾಪಟ್ಟಿಯಲ್ಲಿ 500 ಕಿ.ಮೀ. ರಹಸ್ಯ ಸುರಂಗ ಜಾಲ! ಇಸ್ರೇಲ್‌ಗೆ ಬಹುದೊಡ್ಡ ಸವಾಲು

Israel Palestine War: ಅಕ್ಟೋಬರ್ 7ರಂದು ಹಮಾಸ್ ಬಂಡುಕೋರರು ಇಸ್ರೇಲ್ ಮೇಲೆ ಬೃಹತ್ ದಾಳಿ ನಡೆಸಿದರು. ಇದಕ್ಕೆ ಪ್ರತಿಯಾಗಿ ಇಸ್ರೇಲ್, ಗಾಜಾ ಪಟ್ಟಿ ಮೇಲೆ ವೈಮಾನಿಕ ದಾಳಿಯನ್ನು ನಡೆಸುತ್ತಿದೆ.

VISTARANEWS.COM


on

Gaza has 500 km secret tunnels and this is tough condition for Israel
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ನವದೆಹಲಿ: ಹಮಾಸ್ ಬಂಡುಕೋರರ (Hamas Militants) ನಾಶಕ್ಕೆ ಪಣತೊಟ್ಟಿರುವ ಇಸ್ರೇಲ್ (Israel) ಗಾಜಾ ಪಟ್ಟಿಯ(Gaza Strip) ಮೇಲೆ ನಾಲ್ಕೂ ನಿಟ್ಟಿನಿಂದಲೂ ದಾಳಿ ನಡೆಸುತ್ತಿದೆ. ಆದರೆ, ಗಾಜಾ ಪಟ್ಟಿಯಲ್ಲಿ ಹಮಾಸ್ ಬಂಡುಕೋರರು ರಚಿಸಿಕೊಂಡಿರುವ ರಹಸ್ಯ ಸುರಂಗಗಳು (Secret Tunnels) ಸವಾಲೊಡ್ಡುತ್ತಿವೆ ಎನ್ನಲಾಗಿದೆ. ಸುರಂಗಗಳ ಜಾಲವನ್ನು ಹೊಂದಿರುವ ಜನನಿಬಿಡ ಪ್ರದೇಶವು ಇಸ್ರೇಲ್‌ನ ವಾಯು ದಾಳಿಗೆ ಸವಾಲಾಗಿದೆ. ಹಾಗಾಗಿ, ಹಮಾಸ್ ಬಂಡುಕೋರರ ರಹಸ್ಯ ಸುರಂಗಗಳನ್ನು ಧ್ವಂಸಗೊಳಿಸುವ ಕೆಲಸವನ್ನು ಮಾಡಲಾಗುತ್ತಿದೆ. ಆದರೆ, ಇದು ಅಷ್ಟು ಸುಲಭದ ಕೆಲಸವಲ್ಲ ಎಂದು ಇಸ್ರೇಲ್ ಪಡೆಗಳ ವಕ್ತಾರರು ನಿನ್ನೆಯಷ್ಟೇ ಹೇಳಿದ್ದರು.

ಕಳೆದ ವಾರಂತ್ಯದಲ್ಲಿ ಇಸ್ರೇಲ್ ಮೇಲೆ ಹಮಾಸ್ ಬಂಡುಕೋರು ಯಾರೂ ನಿರೀಕ್ಷಿಸದ ರೀತಿಯಲ್ಲಿ ದಾಳಿ ನಡೆಸಿದರು. ಆಕಾಶ, ಭೂಮಿ ಮತ್ತು ಸಮುದ್ರ ಮೂಲಕ ಏಕಕಾಲಕ್ಕೆ ದಾಳಿ ನಡೆಸಿ, ಸಾವಿರಾರು ಇಸ್ರೇಲಿಗಳನ್ನು ಕೊಂದು ಹಾಕಿದರು. ಆದರೆ, ಈ ದಾಳಿಯನ್ನು ಊಹಿಸಲು ಇಸ್ರೇಲ್‌ಗೆ ಸಾಧ್ಯವಾಗಲಿಲ್ಲ. ಗಾಜಾದೊಂದಿಗಿನ ಇಸ್ರೇಲ್‌ನ ಗಡಿಯು ಬೇಲಿಯಿಂದ ಸುತ್ತುವರಿದಿದೆ ಮತ್ತು ಚಲನೆಯನ್ನು ಪತ್ತೆಹಚ್ಚಲು ಸಂವೇದಕಗಳನ್ನು ಹೊಂದಿದೆ. ಆದರೆ ಹಮಾಸ್, ನಾಗರಿಕರ ಮೇಲೆ ಹಠಾತ್ ದಾಳಿ ನಡೆಸುವ ಮುನ್ನ ಯಾವುದೇ ಮುನ್ಸೂಚನೆ ಕೂಡ ಇಸ್ರೇಲ್‌ಗೆ ಸಿಗಲಿಲ್ಲ. ಬಹುಶಃ ಇಸ್ರೇಲ್‌ ಗೂಢಚರ ವ್ಯವಸ್ಥೆಗೆ ಹಮಾಸ್ ಬಂಡುಕೋರರು ಚಳ್ಳೆ ಹಣ್ಣು ತಿನ್ನಿಸುವಲ್ಲಿ ಈ ರಹಸ್ಯ ಸುರಂಗಗಳು ಪ್ರಮುಖ ಪಾತ್ರ ನಿರ್ವಹಿಸಿವೆ ಎಂದು ಹೇಳಲಾಗುತ್ತಿದೆ.

ಗಾಜಾ ಗಡಿಯಲ್ಲಿ ಇಸ್ರೇಲ್ ಸುಮಾರು 30 ಎತ್ತರದ ಬೇಲಿಯನ್ನು ಹಾಕಿದ್ದು, ನೆಲದಲ್ಲಿ ಕಾಂಕ್ರೀಟ್ ತಡೆ ಗೋಡೆ ಇದೆ. ಹಾಗಿದ್ದೂ, ಈ ಬೇಲಿಯನ್ನು ದಾಟದೇ ಮತ್ತು ಕಾಂಕ್ರೀಟ್ ಗೋಡೆಯನ್ನು ಒಡೆಯದೇ ಹಮಾಸ್ ಬಂಡುಕೋರರು ಹೇಗೆ ಇಸ್ರೇಲ್‌ನೊಳಗೇ ನುಗ್ಗಿದರು ಎಂಬುದೇ ಈಗ ದೊಡ್ಡ ಪ್ರಶ್ನೆಯಾಗಿದೆ. ಗಾಜಾ ನಗರದೊಳಗಿನ ಅತ್ಯಾಧುನಿಕ ಸುರಂಗಗಳಂತಲ್ಲದೆ, ಗಡಿಯಾಚೆಗಿನ ಸುರಂಗಗಳು ಕಚ್ಚಾ ಮಾದರಿಯಲ್ಲಿರುವ ಸಾಧ್ಯತೆ ಇದೆ ಎಂದು ರೀಚ್‌ಮನ್ ವಿಶ್ವವಿದ್ಯಾಲಯದ ಅಧ್ಯಾಪಕ ಸದಸ್ಯ ಡಾ.ಡಾಫ್ನೆ ರಿಚೆಮಂಡ್-ಬರಾಕ್ ಅಭಿಪ್ರಾಯಪಟ್ಟಿದ್ದಾರೆ. ಗಡಿ ಭೇದಿಸುವ ಸುರಂಗಗಳು ಪರಿಪೂರ್ಣವಾಗಿರುವುದಿಲ್ಲ. ಅವುಗಳನ್ನು ಒಂದು ಬಾರಿ ಉದ್ದೇಶಕ್ಕಾಗಿ ಅಗೆಯಲಾಗುತ್ತದೆ. ಇದೇ ತಂತ್ರವನ್ನು ಅನುಸರಿಸಿ ಹಮಾಸ್ ಬಂಡುಕೋರರು ಇಸ್ರೇಲಿ ಪ್ರದೇಶವನ್ನು ತಲುಪಿರುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದ್ದಾರೆ.

ಬಹುಶಃ ಗಾಜಾಪಟ್ಟಿಯೊಳಗಿನ ಸುರಂಗಗಳು ಉದ್ಧವಾಗಿರುತ್ತವೆ ಮತ್ತು ಸರ್ವ ರೀತಿಯಿಂದಲೂ ಸಜ್ಜಾಗಿರುತ್ತವೆ. ಈ ಸುರಂಗಗಳಲ್ಲಿ ನಾಯಕರು ಅಡಗಿಕೊಂಡಿರುತ್ತಾರೆ. ಇಲ್ಲಿಂದಲೇ ಇಡೀ ಕಾರ್ಯಾಚರಣೆಯನ್ನು ಅವರು ನಡೆಸುತ್ತಾರೆ. ಈ ಸುರಂಗಗಳನ್ನು ಅವರು ಸಾರಿಗೆ ಮತ್ತು ಸಂವಹನ ಮಾರ್ಗಗಳಾಗಿ ಬಳಸುತ್ತಾರೆ ಎಂದು ಅವರು ಹೇಳಿದ್ದಾರೆ.

ಈ ಸುದ್ದಿಯನ್ನೂ ಓದಿ: Israel Palestine War: ಅವಳಿ ಮಕ್ಕಳ ಪ್ರಾಣ ಉಳಿಸಲು ತಮ್ಮ ಜೀವವನ್ನೇ ಬಲಿ ಕೊಟ್ಟ ಇಸ್ರೇಲ್‌ ದಂಪತಿ!

2021ರಲ್ಲಿ ಹಮಾಸ್‌ನ 100 ಕಿ.ಮೀ. ಅಧಿಕ ಸುರಂಗವನ್ನು ನಾಶ ಮಾಡಿರುವುದಾಗಿ ಇಸ್ರೇಲ್ ಹೇಳಿಕೊಂಡಿತ್ತು. ಒಂದು ಅಂದಾಜಿನ ಪ್ರಕಾರ, ಗಾಜಾ ಪಟ್ಟಿಯಲ್ಲಿ 500 ಕಿ.ಮೀ.ನಷ್ಟು ಸುರಂಗ ಜಾಲವಿದೆ. ಕೇವಲ ಶೇ.5ರಷ್ಟು ಮಾತ್ರವೇ ನಾಶವಾಗಿದೆ ಎಂದು ಹಮಾಸ್ ನಾಯಕ ಯಾಹ್ಯಾ ಸಿನ್ವಾರ್ ಹೇಳಿಕೆ ನೀಡಿದ್ದರು.

ಗಾಜಾ ಪಟ್ಟಿ ಎಷ್ಟು ದೊಡ್ಡ ಸುರಂಗ ಜಾಲವನ್ನು ಹೊಂದಿದೆ ಎಂದರೆ ಸಿಂಪಲ್ ಆಗಿ ಹೇಳುವುದಾದಿರೆ, ದಿಲ್ಲಿಯ ಮೆಟ್ರೋ ಜಾಲಕ್ಕಿಂತ ಹೆಚ್ಚು. ದಿಲ್ಲಿ ಮೆಟ್ರೋ ಜಾಲ 392 ಕಿ.ಮೀ.ನಷ್ಟಿದೆ. ಅದೇ ದಿಲ್ಲಿ ಗಾಜಾ ಪಟ್ಟಿಗಿಂತಲೂ ನಾಲ್ಕು ಪಟ್ಟು ದೊಡ್ಡದಾಗಿದೆ! ಹಾಗಾಗಿ, ಗಾಜಾ ಪಟ್ಟಿಯಲ್ಲಿ ಸುರಂಗ ಜಾಲದ ವ್ಯಾಪಕತೆ ಮತ್ತು ದಾಳಿಯ ವೇಳೆ ಅದರ ಪ್ರಾಮುಖ್ಯತೆಯನ್ನು ಅರಿಯಬಹುದಾಗಿದೆ.

ವಿದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಎಕ್ಸಿಟ್‌ ಪೋಲ್‌: ಅಸ್ಸಾಂ, ಪುದುಚೇರಿ ಪ.ಬಂಗಾಳದಲ್ಲಿ ಬಿಜೆಪಿ, ತ.ನಾಡಲ್ಲಿ ಡಿಎಂಕೆ, ಕೇರಳಂನಲ್ಲಿ ಯುಡಿಎಫ್‌

VISTARANEWS.COM


on

ಎಕ್ಸಿಟ್‌ ಪೋಲ್‌: ಅಸ್ಸಾಂ, ಪುದುಚೇರಿ ಪ.ಬಂಗಾಳದಲ್ಲಿ ಬಿಜೆಪಿ, ತ.ನಾಡಲ್ಲಿ ಡಿಎಂಕೆ, ಕೇರಳಂನಲ್ಲಿ ಯುಡಿಎಫ್‌
ಐದು ರಾಜ್ಯಗಳ ಎಕ್ಸಿಟ್‌ ಪೋಲ್‌ ಫಲಿತಾಂಶ ಹೊರಬಿದ್ದಿದೆ. ಅಸ್ಸಾಂನಲ್ಲಿ ಬಿಜೆಪಿ, ಕೇರಳದಲ್ಲಿ ಯುಡಿಎಫ್‌, ಪುದುಚೇರಿಯಲ್ಲಿ ಎನ್‌ಡಿಎ ಜಯಭೇರಿ ಬಾರಿಸಲಿದೆ ಎಂದು ಎಲ್ಲಾ ಎಕ್ಸಿಟ್‌ ಪೋಲ್‌ಗಳು ಹೇಳಿವೆ. ಆದರೆ, ಪ.ಬಂಗಾಳ ಮತ್ತು ತಮಿಳುನಾಡು ಮತದಾನೋತ್ತರ ಸಮೀಕ್ಷೆಗಳು ಮಾತ್ರ ಭಿನ್ನ ಫಲಿತಾಂಶ ನೀಡಿವೆ.
ಅಸ್ಸಾಂನಲ್ಲಿ ಕಮಲ ಕಿಲಕಿಲ:
126 ಸದಸ್ಯ ಬಲದ ಅಸ್ಸಾಂ ವಿಧಾನಸಭೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸುವ ಸಾಧ್ಯತೆಯನ್ನು ಎಲ್ಲಾ ಎಕ್ಸಿಟ್‌ ಪೋಲ್‌ಗಳು ಹೇಳಿವೆ. ಹಿಮಂತ ಬಿಸ್ವ ಶರ್ಮಾ ಎರಡನೇ ಅವಧಿಗೆ ಸಿಎಂ ಆಗುವ ಸಾಧ್ಯತೆ ಹೆಚ್ಚಿವೆ. ಆಕ್ಸಿಸ್‌ ಮೈ ಇಂಡಿಯಾ, ಪಿ-ಮಾರ್ಕ್‌, ಮಾಟ್ರಿಜ್‌, ಜೆವಿಸಿ ಮತ್ತು ಚಾಣಕ್ಯ ಸ್ಟ್ರಾಟಜಿಸ್‌ ಬಿಜೆಪಿ ಭಾರೀ ಬಹುಮತ ದಾಖಲಿಸಲಿದೆ ಎಂದು ಭವಿಷ್ಯ ನುಡಿದಿವೆ. ಕಾಂಗ್ರೆಸ್‌ ಪ್ರತಿಪಕ್ಷಕ್ಕೆ ಸೀಮಿತಗೊಳ್ಳಲಿದೆ.
ಕೇರಳಂನಲ್ಲಿ ಯುಡಿಎಫ್‌ಗೆ ಅಧಿಕಾರ?:
ಕೇರಳಂ ವಿಧಾನಸಭೆಯ ಬಲ 140. ಬಹುಮತಕ್ಕೆ 71 ಸೀಟುಗಳು ಬೇಕು. ಕೇರಳಂನಲ್ಲಿ ಹ್ಯಾಟ್ರಿಕ್‌ ದಾಖಲಿಸುವ ಎಲ್‌ಡಿಎಫ್‌ ಕನಸು ನುಚ್ಚುನೂರಾಗುವ ಸಾಧ್ಯತೆಗಳಿವೆ. ಈ ಸಲ ಕಾಂಗ್ರೆಸ್‌ ನೇತೃತ್ವದ ಯುನೈಟೆಡ್‌ ಡೆಮಾಕ್ರಾಟಿಕ್‌ ಫ್ರಂಟ್‌ – ಯುಡಿಎಫ್‌, ಜಯಭೇರಿ ಬಾರಿಸಲಿದೆ ಎಂದು ಆಕ್ಸಿಸ್‌ ಮೈ ಇಂಡಿಯಾ, ಪಿ-ಮಾರ್ಕ್‌, ಮಾಟ್ರಿಜ್‌, ಮನೋರಮಾ ನ್ಯೂಸ್‌ ಸಿವೋಟರ್ಸ್‌ ಮತ್ತು ಜೆವಿಸಿ ಸಮೀಕ್ಷೆಗಳು ಹೇಳಿವೆ. ಬಿಜೆಪಿ ಕೇರಳಂನಲ್ಲಿ ಮೂರರಿಂದ ಏಳು ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಗಳಿವೆ.
ಪುದುಚೇರಿಯಲ್ಲಿ ಎನ್‌ಡಿಎ?:
ಪುದುಚೇರಿ ವಿಚಾರದಲ್ಲಿ ಎಕ್ಸಿಟ್‌ ಪೋಲ್‌ ಏಜೆನ್ಸಿಗಳಿಗೆ ಯಾವುದೇ ಅನುಮಾನ ಇಲ್ಲ. 30 ಸದಸ್ಯಬಲದ ಪುದುಚೇರಿ ಅಸೆಂಬ್ಲಿಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ದಿಗ್ವಿಜಯ ಬಾರಿಸಲಿದೆ ಎಂದು ಎಲ್ಲಾ ಚುನಾವಣೋತ್ತರ ಭವಿಷ್ಯ ನುಡಿದಿವೆ.
ಪ. ಬಂಗಾಳದಲ್ಲಿ ದೀದಿಯೋ, ಮೋದಿಯೋ?
ಪಶ್ಚಿಮ ಬಂಗಾಳದ ಎಕ್ಸಿಟ್‌ ಪೋಲ್‌ನಲ್ಲಿ ಏಕಮತ ಇಲ್ಲ. 6 ಚುನಾವಣೋತ್ತರ ಸಮೀಕ್ಷೆಗಳ ಪ್ರಕಾರ, 4 ಸಮೀಕ್ಷೆಗಳು ಬಿಜೆಪಿ ಗೆಲುವಿನ ಭವಿಷ್ಯ ನುಡಿದಿವೆ. 2 ಸಮೀಕ್ಷೆಗಳು ಟಿಎಂಸಿಯೇ ಅಧಿಕಾರದಲ್ಲಿ ಮುಂದುವರಿಯಲಿದೆ ಎಂದು ಮುನ್ಸೂಚನೆ ನೀಡಿವೆ. ಪಿ-ಮಾರ್ಕ್‌, ಮಾಟ್ರಿಜ್‌, ಜೆವಿಸಿ, ಚಾಣಕ್ಯ ಈ ನಾಲ್ಕು ಸಮೀಕ್ಷೆಗಳಲ್ಲಿ ಬಿಜೆಪಿ ಸರಿಸುಮಾರು 150ಕ್ಕೂ ಅಧಿಕ ಸೀಟು ಗಳಿಸುವ ಸಾಧ್ಯತೆಗಳಿವೆ ಎಂದು ಹೇಳಿವೆ. ಪೀಪಲ್ಸ್‌ ಪಲ್ಸ್‌, ಜನಮತ ಪೋಲ್ಸ್‌ ಈ ಎರಡೂ ಸಮೀಕ್ಷೆಗಳ ಪ್ರಕಾರ ಟಿಎಂಸಿ 170ರಿಂದ 200 ಸೀಟು ಗೆದ್ದು ಅಧಿಕಾರದಲ್ಲಿ ಮುಂದುವರಿಯಲಿದೆ. ಅಂದ ಹಾಗೆ, 294 ಸದಸ್ಯ ಬಲದ ಪ.ಬಂಗಾಳ ಅಸೆಂಬ್ಲಿಯಲ್ಲಿ ಅಧಿಕಾರಕ್ಕೇರಲು 147 ಸೀಟುಗಳನ್ನು ಗೆಲ್ಲಲೇ ಬೇಕು.
ದ್ರಾವಿಡ ದಂಗಲ್‌ನಲ್ಲಿ ಅಚ್ಚರಿ ಫಲಿತಾಂಶ?:
ತಮಿಳುನಾಡಿನಲ್ಲಿ ಬಹುತೇಕ ಎಲ್ಲಾ ಎಕ್ಸಿಟ್‌ ಪೋಲ್‌ಗಳು ಡಿಎಂಕೆ ಅಧಿಕಾರದಲ್ಲಿ ಮುಂದುವರಿಯಲಿದೆ ಎಂದು ಭವಿಷ್ಯ ನುಡಿದಿವೆ. ಎಐಎಡಿಎಂಕೆ ನೇತೃತ್ವದ ಎನ್‌ಡಿಎ 50 ರಿಂದ 80 ಸ್ಥಾನಗಳನ್ನು ಗಳಿಸುವ ಸಾಧ್ಯತೆಗಳಿವೆ. ಆದರೆ, ಇಲ್ಲೊಂದು ಟ್ವಿಸ್ಟ್‌ ಇದೆ. ಆಕ್ಸಿಸ್‌ ಮೈ ಇಂಡಿಯಾ ಮಾತ್ರ ವಿಜಯ್‌ ನೇತೃತ್ವದ ಟಿವಿಕೆಗೆ ಬಹುಮತ ಸಿಗಲಿದೆ ಎಂದು ಹೇಳಿದೆ. ದಳಪತಿ ವಿಜಯ್‌ ನೇತೃತ್ವದ ಟಿವಿಕೆ ತನ್ನ ಚೊಚ್ಚಲ ಯತ್ನದಲ್ಲೇ 98ರಿಂದ 120 ಸ್ಥಾನ ಗಳಿಸುವ ಸಾಧ್ಯತೆಗಳಿವೆ ಎಂದು ಆಕ್ಸಿಸ್‌ ಮೈ ಇಂಡಿಯಾ ಹೇಳಿವೆ. 234 ಸದಸ್ಯಬಲದ ತಮಿಳುನಾಡು ಅಸೆಂಬ್ಲಿಯಲ್ಲಿ ಅಧಿಕಾರಕ್ಕೇರಲು 117 ಸೀಟುಗಳು ಬೇಕು.

Continue Reading

Latest

ತಮಿಳುನಾಡಿನಲ್ಲಿ ದಳಪತಿಯೇ ಅಧಿಪತಿ? ಎಂಜಿಆರ್‌ ಆಗ್ತಾರಾ ವಿಜಯ್‌?

VISTARANEWS.COM


on

ದ್ರಾವಿಡ ದಂಗಲ್‌ನಲ್ಲಿ ಅಚ್ಚರಿಯ ಫಲಿತಾಂಶದ ಸಾಧ್ಯತೆಯೊಂದನ್ನು ಎಕ್ಸಿಸ್‌ ಮೈ ಇಂಡಿಯಾ ಸಮೀಕ್ಷೆ ಪ್ರಕಟಿಸಿದೆ. ಆಕ್ಸಿಸ್‌ ಮೈ ಇಂಡಿಯಾ ಸಮೀಕ್ಷೆ ಪ್ರಕಾರ ಟಿವಿಕೆ ನಾಯಕ ವಿಜಯ್‌ ಮೊದಲ ಪ್ರಯತ್ನದಲ್ಲೇ ಅಭೂತಪೂರ್ವ ಯಶಸ್ಸು ಗಳಿಸಿದ್ದಾರೆ. ತಮಿಳುನಾಡಿನ ಎಲ್ಲಾ ಸಮೀಕ್ಷೆಗಳು ಡಿಎಂಕೆ ಅಧಿಕಾರಕ್ಕೇರಲಿದೆ ಎಂದು ಹೇಳುತ್ತಿರುವಾಗಲೇ, ಆಕ್ಸಿಸ್‌ ಮೈ ಇಂಡಿಯಾ ಮಾತ್ರ ಈ ಸಲ ವಿಜಯ್‌ ನಿಜವಾದ ಜನನಾಯಗನ್‌ ಎಂದಿದೆ.
ತಮಿಳುನಾಡಿನ ಸಾರಥ್ಯ ವಿಜಯ್‌ಗೆ?
ಆಕ್ಸಿಸ್‌ ಮೈ ಇಂಡಿಯಾ ಸಮೀಕ್ಷೆ ಪ್ರಕಾರ ಟಿವಿಕೆಗೆ 98 ರಿಂದ 120 ಸೀಟುಗಳು ಸಿಗಲಿವೆ. ಡಿಎಂಕೆ-ಕಾಂಗ್ರೆಸ್‌ ಮೈತ್ರಿಕೂಟಕ್ಕೆ 92ರಿಂದ 110 ಹಾಗೂ 22ರಿಂದ 32 ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲ್ಲುವ ಸಾಧ್ಯತೆಗಳಿವೆ. 234 ಸದಸ್ಯಬಲದ ತಮಿಳುನಾಡು ಅಸೆಂಬ್ಲಿಯಲ್ಲಿ 117 ಸೀಟು ಗೆಲ್ಲುವ ಪಕ್ಷದ ನಾಯಕ ಮುಖ್ಯಮಂತ್ರಿ ಆಗ್ತಾರೆ. ಸಮೀಕ್ಷೆ ಪ್ರಕಾರ ಟಿವಿಕೆ ಗರಿಷ್ಠ 120 ಸೀಟು ಗೆಲ್ಲುವ ಸಾಧ್ಯತೆಗಳಿವೆ.̇̇̇
ವೋಟ್‌ ಶೇರ್‌ನಲ್ಲೂ ಟಿವಿಕೆ ದಿಗ್ವಿಜಯ?
ಆಕ್ಸಿಸ್‌ ಮೈ ಇಂಡಿಯಾ ವೋಟ್‌ ಶೇರ್‌ ಸಮೀಕ್ಷೆಯನ್ನೂ ಪ್ರಕಟಿಸಿದೆ. ಅದರ ಪ್ರಕಾರ ಟಿವಿಕೆಗೆ ಶೇಕಡಾ 35ರಷ್ಟು ಮತ ಸಿಗಲಿದೆ. ಸ್ಟಾಲಿನ್‌ ನೇತೃತ್ವದ ಡಿಎಂಕೆ-ಕಾಂಗ್ರೆಸ್‌ ಮೈತ್ರಿಕೂಟಕ್ಕೂ ಶೇ. 35ರಷ್ಟು ವೋಟ್‌ ಶೇರ್‌ ಸಿಗಲಿದೆ. ಎನ್‌ಡಿಎಗೆ 23 ಶೇಕಡಾ ಮತ ಸಿಗುವ ಸಾಧ್ಯತೆಗಳಿವೆ.
ಸಿಎಂ ಸ್ಥಾನಕ್ಕೆ ವಿಜಯ್‌ ಬೆಸ್ಟ್‌?
ಮುಖ್ಯಮಂತ್ರಿ ಸ್ಥಾನಕ್ಕೆ ಯಾರು ಉತ್ತಮ ಅಭ್ಯರ್ಥಿ ಎಂಬ ಪ್ರಶ್ನೆಯನ್ನೂ ಆಕ್ಸಿಸ್‌ ಮೈ ಇಂಡಿಯಾ ಜನರ ಮುಂದಿಟ್ಟಿದೆ. ಅದರ ಪ್ರಕಾರ ಶೇ. 37ರಷ್ಟು ಮತದಾರರು ವಿಜಯ್‌ ಪರ ಒಲವು ತೋರಿದ್ದಾರೆ. ಶೇ. 35ರಷ್ಟು ಮಂದಿ ಮಾತ್ರ ಸ್ಟಾಲಿನ್‌ ಬೆಸ್ಟ್‌ ಅಂದಿದ್ದಾರೆ.
ವಿಜಯ್‌ಗೆ ಯುವ ಸಮೂಹದ ಬೆಂಬಲ
ಸರ್ವೇ ಪ್ರಕಾರ ಶೇ. 68ರಷ್ಟು ಹೊಸ ವೋಟರ್ಸ್‌ ವಿಜಯ್‌ಗೆ ಬೆಂಬಲ ನೀಡಿದ್ದಾರೆ. 20ರಿಂದ 29 ವಯೋಮಾನದ ಶೇ. 59ರಷ್ಟು ಯುವಕರು ಟಿವಿಕೆಗೆ ಜೈ ಎಂದಿದ್ದಾರೆ. 30-39 ವಯೋಮಾನದ ಶೇ. 45 ಮಂದಿ ದಳಪತಿಯನ್ನು ದಡಮುಟ್ಟಿಸಿದ್ದಾರೆ ಎನ್ನುತ್ತಿದೆ ಸಮೀಕ್ಷೆ.

Continue Reading

Latest

ರಾಜ್ಯದಲ್ಲಿ ನಾಯಕತ್ವ ಗೊಂದಲ: “ಸದ್ಯಕ್ಕೆ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ” – ಖರ್ಗೆ ಸ್ಪಷ್ಟನೆ

VISTARANEWS.COM


on

ಸದ್ಯಕ್ಕೆ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳುವ ಮೂಲಕ ನಾಯಕತ್ವ ಗೊಂದಲಕ್ಕೆ ತೆರೆ ಎಳೆದಿದ್ದಾರೆ. ಕಲಬುರಗಿಯಲ್ಲಿ ಇಂದು ಮಾತನಾಡಿದ ಅವರು ಈಗಾಗಲೇ ರಾಜ್ಯದಲ್ಲಿ ಸಿಎಂ ಇದ್ದಾರೆ. ಹೀಗಾಗಿ ಸದ್ಯಕ್ಕೆ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ. ಭವಿಷ್ಯದಲ್ಲಿ ಅಂಥ ಪರಿಸ್ಥಿತಿ ಬಂದರೆ ನಾವು ಎಲ್ಲರೂ ಕೂಡಿ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ. ಸಿಎಂ ಸ್ಥಾನಕ್ಕೆ ಸಂಬಂಧಿಸಿದಂತೆ ವಿವಿಧ ಅಭಿಪ್ರಾಯಗಳು ವ್ಯಕ್ತವಾಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಯಾರು ಏನು ಹೇಳುತ್ತಾರೆ ಎನ್ನುವುದಕ್ಕಿಂತ ಪಕ್ಷದ ಐಡಿಯಾಲಜಿ ಮತ್ತು ಹಲವು ವರ್ಷಗಳ ಪರಿಶ್ರಮ ಮುಖ್ಯ ಎಂದು ಹೇಳಿಕೆ ನೀಡಿದ್ದಾರೆ. ಪಕ್ಷದ ಮಹತ್ವದ ನಿರ್ಧಾರಗಳನ್ನು ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರೊಂದಿಗೆ ಚರ್ಚೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದರು.

Continue Reading

Latest

ಬೌರಿಂಗ್‌ ಆಸ್ಪತ್ರೆ ಕಾಂಪೌಂಡ್‌ ಕುಸಿದು 7 ಮಂದಿ ಬಲಿ

VISTARANEWS.COM


on

ಬೆಂಗಳೂರು: ಇಂದು ಸಂಜೆ ನಗರದಲ್ಲಿ ಸುರಿದ ಭಾರಿ ಮಳೆಗೆ ಶಿವಾಜಿನಗರ ಬಸ್‌ ನಿಲ್ದಾಣದ ಸಮೀಪವಿರುವ ಬೌರಿಂಗ್‌ ಆಸ್ಪತ್ರೆಯ ಕಾಂಪೌಂಡ್‌ ಗೋಡೆ ಕುಸಿದು 7 ಜನ ಸಾವನ್ನಪ್ಪಿದ್ದಾರೆ. ಮೃತರು ಬೀದಿಬದಿ ವ್ಯಾಪಾರಿಗಳು ಎಂದು ತಿಳಿದುಬಂದಿದೆ. 11 ಜನ ಗಾಯಾಳುಗಳನ್ನು ಆಸ್ಪತ್ರೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ. ಅವಶೇಷಗಳಡಿ ಮತ್ತಷ್ಟು ಜನ ಸಿಲುಕಿರುವ ಶಂಕೆಯಿದ್ದು, ರಕ್ಷಣಾಕಾರ್ಯ ಮುಂದುವರೆಸಲಾಗಿದೆ. ಘಟನಾ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Continue Reading
Advertisement
Latest4 hours ago

ಜನಪ್ರಿಯತೆಯಲ್ಲಿ ಪ್ರಧಾನಿ ಮೋದಿ ಈಗಲೂ ನಂ.1

Latest5 hours ago

ಕುರ್ಚಿ ಕದನಕ್ಕೆ ಹೊಸ ಟ್ವಿಸ್ಟ್ : ದಲಿತ ಸಿಎಂ ಕೂಗು ಜೋರು

Latest5 hours ago

ಟಿವಿಕೆ-ಎನ್‌ಡಿಎ ಮೈತ್ರಿ?, ತಮಿಳುನಾಡಿನಲ್ಲಿ ಸಂಚಲನ, ಸ್ಟಾಲಿನ್‌ ಸಭೆ

Latest7 hours ago

ಎಕ್ಸಿಟ್‌ ಪೋಲ್‌: ಅಸ್ಸಾಂ, ಪುದುಚೇರಿ ಪ.ಬಂಗಾಳದಲ್ಲಿ ಬಿಜೆಪಿ, ತ.ನಾಡಲ್ಲಿ ಡಿಎಂಕೆ, ಕೇರಳಂನಲ್ಲಿ ಯುಡಿಎಫ್‌

Latest8 hours ago

ತಮಿಳುನಾಡಿನಲ್ಲಿ ದಳಪತಿಯೇ ಅಧಿಪತಿ? ಎಂಜಿಆರ್‌ ಆಗ್ತಾರಾ ವಿಜಯ್‌?

Latest10 hours ago

ಪಂಚರಾಜ್ಯ ಚುನಾವಣಾ ಫಲಿತಾಂಶ: “ಎಕ್ಸಿಟ್ ಪೋಲ್‌ಗಿಂತ ಉತ್ತಮ ಪ್ರದರ್ಶನ ನಿರೀಕ್ಷೆ” – ಖರ್ಗೆ

Latest10 hours ago

ರಾಜ್ಯದಲ್ಲಿ ನಾಯಕತ್ವ ಗೊಂದಲ: “ಸದ್ಯಕ್ಕೆ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ” – ಖರ್ಗೆ ಸ್ಪಷ್ಟನೆ

Latest11 hours ago

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಇಂದು ಮತ್ತು ನಾಳೆ ಆಲಿಕಲ್ಲು ಮಳೆ ಸಾಧ್ಯತೆ

Latest1 day ago

ಬೌರಿಂಗ್‌ ಆಸ್ಪತ್ರೆ ಕಾಂಪೌಂಡ್‌ ಕುಸಿದು 7 ಮಂದಿ ಬಲಿ

Latest1 day ago

ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌